Subscribe to Updates
Get the latest creative news from FooBar about art, design and business.
- ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
- ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
- ಔರಾದ್ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
- ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
- ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
- ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
- ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ
- ಸೆ.30ರೊಳಗೆ ಔರಾದ್ ಬರಪೀಡಿತ ತಾಲೂಕು ಘೋಷಣೆ: ಡಾ.ಭೀಮಸೇನರಾವ ಶಿಂಧೆ ವಿಶ್ವಾಸ
Author: admin
ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಕರ್ನಾಟಕ –ಮಹಾರಾಷ್ಟ್ರ ನಡುವೆ ಉದ್ಭವಿಸಿರುವ ಗಡಿ ವಿವಾದವನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಗಡಿ ವಿವಾದವನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿ ಪಕ್ಷದ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ ಎಂದು ಟೀಕಿಸಿದ್ದಾರೆ. ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.…
ಮದ್ಯ ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಗಂಡನೊಬ್ಬ ಹೆಂಡತಿಯನ್ನೇ ಕೊಂದಿದ್ದು, ಇದಕ್ಕೆ ತಂದೆಯ ಮಗನೂ ಕೈಜೋಡಿಸಿರುವ ದುರಂತ ಕುಮಟಾ ತಾಲೂಕಿನ ಕೂಜಳ್ಳಿ ಗ್ರಾಮದಲ್ಲಿ ನಡೆದಿದೆ. ವಿಶ್ವೇಶ್ವರ ಭಟ್(69) ಮತ್ತು ಮಗ ಮಧುಕರ ಭಟ್(33) ಕುಡಿಯಲು ಹಣ ನೀಡಲಿಲ್ಲವೆಂದು ಗೀತಾ ಭಟ್ ಅವರನ್ನು (64) ಕೊಲೆ ಮಾಡಿದ್ದಾರೆ. ಆರೋಪಿ ಮಧುಕರ್ ಭಟ್ನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿತಕ್ಕೆ ಹಣ ನೀಡುವಂತೆ ಗೀತಾ ಭಟ್ಗೆ ಮಗ ಮತ್ತು ಗಂಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಅವರ ಮನೆಯಲ್ಲಿ ದಿನವೂ ಜಗಳ ನಡೆಯುತ್ತಲೇ ಇತ್ತು. ಹಣ ನೀಡದ ಕಾರಣ ತಂದೆ-ಮಗ ಸೇರಿಕೊಂಡು ಗೀತಾ ಭಟ್ಅವರನ್ನು ಕಟ್ಟಿಗೆಯಿಂದ ಹೊಡೆದು ಕೊಂದ್ದಿದ್ದಾರೆ. ಕುಮಟಾ ಪಿಎಸ್‌ಐ ನವೀನಕುಮಾರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಳೆದ ಕೆಲವು ವರ್ಷಗಳಿಂದ ಉತ್ತರ ಭಾರತದಲ್ಲಿ ಸಾವಿರಾರು ಜನರನ್ನು ಬಲಿ ಪಡೆದಿರುವ ಬಿಸಿಗಾಳಿ ಈ ಬಾರಿ ಮನುಷ್ಯರ ತಡೆಯುವ ಮಿತಿಗಿಂತ ಅಧಿಕ ಪ್ರಮಾಣದ ಬಿಸಿಗಾಳಿ ಬೀಸಲಿದೆ ಎಂದು ವಿಶ್ವಬ್ಯಾಂಕ್ ಭಾರತಕ್ಕೆ ಎಚ್ಚರಿಕೆ ನೀಡಿದೆ. ಮನುಷ್ಯರು ಬಿಸಿಲು ತಡೆದುಕೊಳ್ಳುವ ಮಿತಿಗಿಂತ ಹೆಚ್ಚಿನ ಪ್ರಮಾಣದ ಬಿಸಿಗಾಳಿ ಮೊದಲ ಬಾರಿ ಬೀಸಲಿದ್ದು, ಜಗತ್ತಿನ ಕೆಲವು ದೇಶಗಳ ಪೈಕಿ ಭಾರತವೂ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ. ಕೂಲಿಂಗ್ ಕ್ಷೇತ್ರದಲ್ಲಿ ಹವಾಮಾನ ವೈಪರಿತ್ಯದ ಮೇಲೆ ಬಂಡವಾಳ ಹೂಡಿಕೆಯ ಅವಕಾಶಗಳು ಭಾರತದಲ್ಲಿ ಹೆಚ್ಚಾಗಲಿವೆ. ಏಕೆಂದರೆ ಭಾರತದಲ್ಲಿ ಸುಡುಬಿಸಿಲು ಹೆಚ್ಚಾಗಲಿದ್ದು, ಇದು ಅತ್ಯಂತ ಬೇಗ ಕಾಲಿಡಲಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ. 2022 ಏಪ್ರಿಲ್ ನಲ್ಲಿ ಭಾರತದಲ್ಲಿ ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಸಿಗಾಳಿಯ ಆರಂಭ ಆಗಲಿದೆ. ಆರಂಭದಲ್ಲೆ 46 ಡಿಗ್ರಿ ಸೆಲ್ಸಿಯಸ್ ಇರುವ ಈ ಬಿಸಿಗಾಳಿ ಇದು ನಂತರ ಹೆಚ್ಚಾಗಲಿದೆ. 2035-65ರ ವೇಳೆಗೆ ಶೇ.25ರಷ್ಟು ಹೆಚ್ಚಾಗಲಿದ್ದು, ಕಾರ್ಬನ್ ಪ್ರಮಾಣ ಅತ್ಯಧಿಕವಾಗಲಿದೆ ಎಂದು ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಬೆಳಗಾವಿ : ಗಡಿ ವಿವಾದ ದಿನೇ ದಿನೆ ತಾರಕಕ್ಕೇರುತ್ತಿದ್ದು, ಪ್ರತಿಭಟನೆಗಳು, ಆಕ್ರೋಶಗಳು ಹೆಚ್ಚತೊಡಗಿವೆ. ಅಲ್ಲದೆ, ಮಹಾರಾಷ್ಟ್ರದಲ್ಲಿ ಶಿವಸೇನೆಯ ಎರಡು ಬಣಗಳು ಸಹ ಅತಿರೇಕದಿಂದ ವರ್ತನೆ ಮಾಡುತ್ತಿವೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಬಣದ ಶಿವಸೇನೆಯ ಕಾರ್ಯಕರ್ತರು ಮೀರಜ್‌ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕುವ ಮೂಲಕ ಉದ್ದಟತನವನ್ನು ಪ್ರದರ್ಶನ ಮಾಡಿವೆ. ಜತ್ತ ತಾಲೂಕಿನ ಹಳ್ಳಿಗರು ಕರ್ನಾಟಕಕ್ಕೆ ಸೇರ್ಪಡೆಯಾಗಬೇಕು ಎಂದು ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅವರಿಗೆ ಇಷ್ಟವಿದ್ದರೆ ಕರ್ನಾಟಕಕ್ಕೆ ಸೇರ್ಪಡೆಯಾಗಲಿ ಎಂದು ಹೇಳಿದ್ದರು. ಈ ಹೇಳಿಕೆಯನ್ನು ವಿರೋಧಿಸಿ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೊಮ್ಮಾಯಿ ವಿರುದ್ಧ ಆಕ್ರೋಶ ಹೊರಹಾಕಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಗಡಿ ವಿವಾದದಿಂದ ರಾಜ್ಯಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಹಾಪುಂಡರು ಕರ್ನಾಟಕದ ಬಸ್ ಗಳ ಮೇಲೆ ಮಸಿ ಬಳಿಯುತ್ತಿದ್ದಾರೆ. ಇತ್ತ ಕರ್ನಾಟಕದಲ್ಲಿ ಮಹಾರಾಷ್ಟ್ರ ಭಕ್ತರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹರಡಿದೆ. ಈ ಕುರಿತು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ಸ್ಪಷ್ಟನೆ ನೀಡಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ಭಕ್ತರ ಮೇಲೆ ಹಲ್ಲೆ ಆಗಿಲ್ಲ. ಈ ರೀತಿಯ ಯಾವುದೇ ಪ್ರಕರಣ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಹಾರಾಷ್ಟ್ರದವರ ಮೇಲೆ ಹಲ್ಲೆ ಆಗಿದೆ ಎಂದು ಸುಳ್ಳು ಸುದ್ದಿ ಹರಡಲಾಗುತ್ತಿದೆ. ಈ ರೀತಿಯ ಯಾವುದೇ ಪ್ರಕರಣ ಆಗಿಲ್ಲ. ಎರಡೂ ಕಡೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಕಂದಾಯ ಇಲಾಖೆಯ ಎಲ್ಲಾ ವರ್ಗಾವಣೆಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಆರೋಗ್ಯ ಇಲಾಖೆಯ ವರ್ಗಾವಣೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದ್ದ ಸರ್ಕಾರ, ಇದೀಗ ಕಂದಾಯ ಇಲಾಖೆಯ ಎಲ್ಲಾ ವರ್ಗಾವಣೆಗಳಿಗೆ ತಡೆ ನೀಡಿದೆ. ಚುನಾವಣಾ ಆಯೋಗ ಮತದಾರರ ಪಟ್ಟಿಯ ನೋಂದಣಿ, ಪರಿಷ್ಕರಣಾ ಕಾರ್ಯ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸಿಬ್ಬಂದಿಗಳ ವರ್ಗಾವಣೆ ಮಾಡದಂತೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಜನವರಿ-2023ರ ಎರಡನೇ ವಾರದವರೆಗೆ ವಿಲೇ ಇಡಲು ಸೂಚನೆ ನೀಡಿದ್ದಾರೆ. ಸರ್ಕಾರದ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ಕೆ. ಲತಾ ಆದೇಶದಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಅದೇ ರೀತಿ 5 ರಾಜ್ಯಗಳಲ್ಲಿ ತೆರವಾದ ಸ್ಥಾನಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಕೂಡ ಇಂದು ಪ್ರಕಟವಾಗಲಿದೆ. ಗುಜರಾತ್ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿದ್ದರೂ, ಈ ಬಾರಿ ಆಮ್ ಆದ್ಮಿ ಪಕ್ಷ ಚುನಾವಣಾ ಅಖಾಡಕ್ಕೆ ಪ್ರವೇಶಿಸುವುದರೊಂದಿಗೆ ಇಲ್ಲಿ ತ್ರಿಕೋನ ಸ್ಪರ್ಧೆ ನಡೆದಿದೆ. ಗುಜರಾತ್ ನಲ್ಲಿ ಸತತ 7ನೇ ಬಾರಿಗೆ ಅಧಿಕಾರಕ್ಕೆ ಇರುವ ನಿರೀಕ್ಷೆಯಲ್ಲಿ ಬಿಜೆಪಿ ಇದ್ದು, ಕಾಂಗ್ರೆಸ್ ಮತ್ತು ಆಪ್ ಕೂಡ ಪೈಪೋಟಿ ನೀಡುವ ಸಾಧ್ಯತೆ ಇದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವುದಾಗಿ ಹೇಳಲಾಗಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು 68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. 1985ರಿಂದ ಪ್ರತಿ ಐದು ವರ್ಷಕ್ಕೊಮ್ಮೆ ಇಲ್ಲಿ ಸರ್ಕಾರ ಬದಲಾಗುತ್ತೆ. ಒಮ್ಮೆ ಬಿಜೆಪಿ, ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೇರುತ್ತಿವೆ. ಈ ಬಾರಿ ಆಡಳಿತಾರೂಢ ಬಿಜೆಪಿಯೇ ಅಧಿಕಾರಕ್ಕೆರಲಿದೆ ಎಂದು ಸಮೀಕ್ಷೆಗಳು ಹೇಳಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು : ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮೆಟ್ರಿಕ್ ಟನ್ ಗೆ 50 ರೂ.ಹೆಚ್ಚುವರಿ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಬಾಗಲಕೋಟೆ ಸೇರಿ ಹಲವು ಕಡೆ ಕಬ್ಬು ಬೆಳೆಗಾರರು ಭಾರೀ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ರೈತರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ನಿರ್ಧಾರ ಕೈಗೊಂಡಿದೆ. ಡಿಸೆಂಬರ್ 5 ರಂದು ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್ ಗೆ 50 ರೂ ಹೆಚ್ಚುವರಿಯಾಗಿ ಪಾವತಿಸಬೇಕು ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಘೋಷಣೆ ಮಾಡಿದ್ದರು. ಇತ್ತೀಚೆಗೆ ವಿಕಾಸಸೌಧದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಕಬ್ಬು ನಿಯಂತ್ರಣ ಮಂಡಳಿ ಸಭೆ ನಡೆದಿದ್ದು, ಎಫ್‌ಆರ್ ಪಿ ದರ ಪಾವತಿ ಬಳಿಕ ಪ್ರತಿ ಟನ್ ಗೆ ಹೆಚ್ಚುವರಿಯಾಗಿ 50 ರೂ ನಂತೆ ಒಟ್ಟು 204.47 ಕೋಟಿ ಬಿಡುಗಡೆ ಮಾಡಿದೆ. ಈ ಬಗ್ಗೆ ಆದೇಶ ಹೊರಡಿಸುವಂತೆ ಕಬ್ಬು ಅಭಿವೃದ್ದಿ ಆಯುಕ್ತರಿಗೆ ಸಚಿವರು ಸೂಚನೆ…
ಖಾನಾಪೂರ ತಾಲೂಕಿನ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವ್ಹಿ. ಆರ್. ಡಬ್ಲ್ಯೂ.) ಹುದ್ದೆಗಳನ್ನು ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಾಸಿಕ ರೂ.9,000 ಗಳ ಗೌರವ ಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಯಾ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಷರತ್ತುಗಳು : ಅರ್ಜಿದಾರರು ವಿಕಲಚೇತನರಿದ್ದು, ಕನಿಷ್ಟ 40% ಅಥವಾ 40% ಕ್ಕಿಂತ ಹೆಚ್ಚಿನ ವಿಕಲತೆ ಪ್ರಮಾಣ ಹೊಂದಿರತಕ್ಕದ್ದು, ಅರ್ಜಿದಾರರು ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೊಳಪಟ್ಟಿರಬೇಕು. ಎಸ್.ಎಸ್.ಎಲ್.ಸಿ. ಉತ್ತೀರ್ಣ/ಅನುತ್ತೀರ್ಣರಾಗಿದ್ದು, ಕಂಪ್ಯೂಟರ ಜ್ಞಾನ ಹೊಂದಿರಬೇಕು. ಅದೇ ರೀತಿಯಲ್ಲಿ ಅರ್ಜಿದಾರರು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-01-2023 ಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯಲ್ಲಿರಬೇಕು. ವಿಕಲಚೇತನ ಮಹಿಳಾ, ಪ.ಜಾತಿ ಮತ್ತು ಪ. ಪಂಗಡದ ಅಭ್ಯರ್ಥಿಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಜ್ಞಾನ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು… ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಬೀದರ್: ಗಡಿ ವಿವಾದದ ನಡುವೆಯೇ ಮಹಾರಾಷ್ಟ್ರದ ಗ್ರಾಮವನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಲಾತುರ್ ಜಿಲ್ಲೆಯ ದೇವಣಿ ತಾಲೂಕಿನ ಬೊಂಬಳಿಯ ಜನರು ಆಗ್ರಹಿಸಿದ್ದಾರೆ. ಬೊಂಬಳಿ ಗ್ರಾಮದ ನಿವಾಸಿಗಳು ಗ್ರಾಮದಲ್ಲಿ ಸಭೆ ನಡೆಸಿ, ಮಹಾರಾಷ್ಟ್ರ ಸರ್ಕಾರ ಗ್ರಾಮಗಳ ಅಭಿವೃದ್ಧಿ ಮಾಡದೇ ತಾರತಮ್ಯ ಎಸಗುತ್ತಿದೆ. ಕರ್ನಾಟಕ ಸರ್ಕಾರ ಒಳ್ಳೆಯ ಸವಲತ್ತುಗಳನ್ನು ಮತ್ತು ಯೋಜನೆಗಳನ್ನು ತಂದಿದೆ. ಹಾಗಾಗಿ ನಮ್ಮ ಗ್ರಾಮ ಕರ್ನಾಟಕಕ್ಕೆ ಸೇರಬೇಕು ಎಂದು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಲ್ಲದೇ ಗ್ರಾಮ ಪಂಚಾಯತಿ ಚುನಾವಣೆಯನ್ನೂ ಬಹಿಷ್ಕಾರ ಮಾಡಿರುವುದಾಗಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy