Author: admin

ತುರುವೇಕೆರೆ: ಪಟ್ಟಣದ ಬಾಣಸಂದ್ರ ರಸ್ತೆಯಲ್ಲಿನ ಕೋಳಿ ಅಂಗಡಿಯ ಹಿಂಭಾಗ ಸರಿಸುಮಾರು 85ರ ಆಸುಪಾಸಿನ ವಯೋವೃದ್ದ ಅರೆ ಪ್ರಜ್ಞಾಸ್ಥಿತಿಯಲ್ಲಿ ಬಿದ್ದಿದ್ದು, ಈ ವೃದ್ಧನನ್ನು ತುರುವೇಕೆರೆ ಠಾಣೆಯ ಪೊಲೀಸರು ಚಿಕಿತ್ಸೆ ಕೊಡಿಸಿ ಮಗನ ಜೊತೆಗೆ ಕಳುಹಿಸುವ ಮೂಲಕ  ಮಾನವೀಯತೆ ಮೆರೆದಿದ್ದಾರೆ. ವೃದ್ಧ ಅರೆ ಪ್ರಜ್ಞಾಸ್ಥಿತಿಯಲ್ಲಿ ಬಿದ್ದಿದ್ದು, ಕೋಳಿ ಅಂಗಡಿಯ ಕೆಲಸಗಾರರು ತುರುವೇಕೆರೆ ಠಾಣೆಯ ಪೊಲೀಸರಿಗೆ ಕರೆಮಾಡಿ ಸುದ್ದಿ ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ವೃತ್ತ ನಿರೀಕ್ಷಕರಾದ ಗೋಪಾಲ್ ನಾಯಕ್ ಹಾಗೂ ಠಾಣೆಯ ಪೊಲೀಸ್  ಪಿ.ಎಸ್ ಐ ಕೇಶವಮೂರ್ತಿ ಅವರ ಮಾರ್ಗದರ್ಶನದಲ್ಲಿ ಅಸ್ವಸ್ಥಗೊಂಡಿದ್ದ ವೃದ್ಧನನ್ನು ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಬಳಿಕ ವೃದ್ಧನ ವಿಳಾಸ ಪತ್ತೆ ಹಚ್ಚಿ ಮಗನ ಜೊತೆ ಕಳುಹಿಸಿಕೊಟ್ಟಿದ್ದಾರೆ. ವೃದ್ದನು ತಿಪಟೂರಿನಲ್ಲಿರುವ ಮಗಳ  ಮನೆಗೆಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹೊಸಳ್ಳಿ ಅಗ್ರಹಾರದಿಂದ ಪ್ರಯಾಣ ಬೆಳೆಸಿ ಬಂದು ತಿಪಟೂರು ಎಂದು ತುರುವೇಕೆರೆಯಲ್ಲಿಯೇ ಇಳಿದು ದಿಕ್ಕು ತೋಚದೆ ಬಾಣಸಂದ್ರ ರಸ್ತೆಯ ಕೋಳಿ ಅಂಗಡಿಯ ಬಳಿ ಅಸ್ವಸ್ಥಗೊಂಡು ಬಿದ್ದಿರುವುದಾಗಿ ವೃದ್ದನು ಹೇಳಿಕೆ ನೀಡಿದ್ದಾನೆ. ತಂದೆ…

Read More

ಹಾಸನ:  ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದ್ದು, ವಿದ್ಯಾರ್ಥಿಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಿನ್ನೆ ರಾತ್ರಿ ಊಟ ಸೇವಿಸಿದ ನಂತರ ವಿದ್ಯಾರ್ಥಿನಿಯರಲ್ಲಿ ವಾಂತಿ, ಭೇದಿ ಶುರುವಾಗಿದ್ದು,  ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣವೇ ವಿದ್ಯಾರ್ಥಿನಿಯರನ್ನು ಆಲೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಧುಗಿರಿ: ಬಹುಭಾಷಾ ನಟ ಅರ್ಜುನ್ ಸರ್ಜಾ ರವರ ತಾಯಿ ವಿಧಿವಶರಾಗಿದ್ದು,  ಅವರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿಯ ಜಕ್ಕೇನಳ್ಳಿಯ ಸ್ವಗ್ರಾಮದಲ್ಲಿ ಶಕ್ತಿಪ್ರಸಾದ್ ರವರ ಸಮಾಧಿಯ ಪಕ್ಕದಲ್ಲಿ ನೆರವೇರಿಸಿದರು. ಕಳೆದ 22 ದಿನಗಳಿಂದ ಆಸ್ಪತ್ರೆಯಲ್ಲಿದ್ದ ಲಕ್ಷ್ಮಿ ದೇವಿ ಅಮ್ಮನವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಲಕ್ಷ್ಮೀದೇವಮ್ಮನವರಿಗೆ  85 ವರ್ಷ ವರ್ಷ ವಯಸ್ಸಾಗಿತ್ತು. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರು ಹಾಗೂ ಮಧುಗಿರಿ ಶಾಸಕರಾದ ವೀರಭದ್ರಯ್ಯ,  ಮುರಳಿಧರ ಹಾಲಪ್ಪ,  ಮಾಜಿ ಶಾಸಕರಾದ ಕೆ.ಎನ್. ರಾಜಣ್ಣ,  ಎಲ್.ಸಿ.ನಾಗರಾಜ್ , ಮಧು ಗೌಡ ಮೊದಲಾದವರು ಇದ್ದರು.  ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ದೇಶದ ಅತ್ಯುನ್ನತ ಹುದ್ದೆಯ್ದಾ ರಾಷ್ಟ್ರಧ್ಯಕ್ಷರಾಗಿ ದ್ರೌಪದಿ ಮುರ್ಮ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಸೋಮವಾರ ಬೆಳಗ್ಗೆ 10.15ಕ್ಕೆ ಸಮಾರಂಭ ನಡೆಯಲಿದ್ದು, ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೂತನ ರಾಷ್ಟ್ರಾಧ್ಯಕ್ಷರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ರಾಷ್ಟ್ರಪತಿಯವರು 21 ಗನ್ ಸೆಲ್ಯೂಟ್ ಸ್ವೀಕರಿಸಿದ ಬಳಿಕ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಂತರ ಭಾಷಣ ಮಾಡಲಿದ್ದಾರೆ. ಸಮಾರಂಭಕ್ಕೂ ಮೊದಲು ನಿರ್ಗಮಿತ ಅಧ್ಯಕ್ಷರು ಮತ್ತು ನೂತನ ಅಧ್ಯಕ್ಷರು ವಿಧ್ಯುಕ್ತ ಮೆರವಣಿಗೆಯಲ್ಲಿ ಸಂಸತ್ತಿಗೆ ಆಗಮಿಸಲಿದ್ದಾರೆ. ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸತ್ತಿನ ಸದಸ್ಯರು ಮತ್ತು ಪ್ರಧಾನ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಬೆಂಗಳೂರು: ಈಗಾಗಲೇ ಬೆಂಗಳೂರು, ರಾಜ್ಯಾದ್ಯಂತತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ಕಿರುಕುಳ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿತ್ತು. ಈ ಬಳಿಕ ಮತ್ತೆ ಜುಲೈ.26ರಂದು ಬೆಂಗಳೂರಿನ ಕಾಂಗ್ರೆಸ್ ಭನದ ಗಾಂಧಿ ಪ್ರತಿಮೆ ಬಳಿಯಲ್ಲಿ ರಾಜ್ಯದ ಎಲ್ಲಾ ನಾಯಕರು ಮೌನ ಸತ್ಯಾಗ್ರಾಹ ನಡೆಸೋದಕ್ಕೆ ನಿರ್ಧರಿಸಲಾಗಿದೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮಾಹಿತಿ ನೀಡಿದಂತ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ‘ಇದೇ 26 ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿ ಮಾಡಿದ್ದಾರೆ. ನನ್ನ ಪ್ರಕರಣದಲ್ಲಿ ನನ್ನ ತಾಯಿಗೂ ಇದೇ ರೀತಿ ಕಿರುಕುಳ ನೀಡಿದ್ದರು. ಆ ಸಂದರ್ಭದಲ್ಲಿ ಮನೆಯಲ್ಲೇ ವಿಚಾರಣೆ ಮಾಡಲು ನ್ಯಾಯಾಲಯದ ಮೊರೆ ಹೋಗಿದ್ದೆ ಎಂದರು. ಆದರೆ, ಸೋನಿಯಾ ಗಾಂಧಿ ಅವರು ನ್ಯಾಯಾಲಯದ ಮೊರೆ ಹೋಗದೆ ಧೈರ್ಯವಾಗಿ ವಿಚಾರಣೆ ಎದುರಿಸಿ ಬಂದಿದ್ದಾರೆ. ಆದರೂ ಕಿರುಕುಳ ನಿಲ್ಲುತ್ತಿಲ್ಲ. ಹೀಗಾಗಿ ಬೆಂಗಳೂರಿನ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ…

Read More

ಕೊಡಗು: ಜಿಲ್ಲಾ ಉಸ್ತುವಾರಿ ‌ಸಚಿವ ಬಿ.ಸಿ.ನಾಗೇಶ್ ಅವರು ಭಾನುವಾರ ಜಿಲ್ಲೆಯಲ್ಲಿ‌ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದಿನ ತಡೆಗೋಡೆ ಕುಸಿತ ನೋಡಲು ತೆರಳಿದ್ದ ಅವರಲ್ಲಿ ಸ್ಥಳೀಯರು ವಾಹನ ಸಂಚಾರ ನಿಷೇಧಿಸದೆ ದುರಸ್ತಿ ಕಾರ್ಯ ನಡೆಸುವಂತೆ ಮನವಿ ಮಾಡಿದರು. ಮಡಿಕೇರಿ ಒಂದು ಕಿ.ಮೀ ದೂರವಷ್ಟೆ ಇದೆ. ಆದರೆ ವಾಹನ ಸಂಚಾರ ನಿಷೇಧಿಸಿರುವುದರಿಂದ 10 ಕಿ.ಮೀ ದೂರ ಪ್ರಯಾಣ ಮಾಡಬೇಕಿದೆ ಎಂದು ಅಳಲು ತೋಡಿಕೊಂಡರು. ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಸಚಿವರು‌ ಅಧಿಕಾರಿಗಳಿಗೆ ಸೂಚಿಸಿದರು. ಮಳೆಯಿಂದ ಗುಡ್ಡದ ಒಂದು ಪಾರ್ಶ್ವ ಕುಸಿದಿದ್ದ ಮದೆನಾಡಿಗೂ ಭೇಟಿ‌ ನೀಡಿದ ಅವರು ಪರಿಶೀಲನೆ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಬಾಲ ತಪಸ್ವಿ, ಸುವರ್ಣ ಶ್ರೀ, ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ರವರ 41 ನೇ ಜನ್ಮದಿನದ ಅಂಗವಾಗಿ ಶ್ರೀ ಮಠಕ್ಕೆ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀಗಳನ್ನು ಸನ್ಮಾನಿಸಿ ಶುಭ ಹಾರೈಸಿದರು. ನಂತರ ಶ್ರೀಗಳು ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ರವರನ್ನು ಶ್ರೀಗಳು ಸನ್ಮಾನಿಸಿ ಸಂಘಟನೆಯ ಬಗ್ಗೆ ಕೆಲವೊಂದು ಮಾರ್ಗದರ್ಶನವನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎನ್.ದೇವರಾಜ್, ತಾಲ್ಲೂಕು ಅಧ್ಯಕ್ಷ ಮಂಜುಸ್ವಾಮಿ ಎಂ.ಎನ್., ರಾಕೇಶ್ ಗಂಗಾಧರ್, ಪುಟ್ಟರಾಜು, ಮಹದೇವ್ ಇತರರು ಹಾಜರಿದ್ದರು. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುರುವೇಕೆರೆ: ತಾಲ್ಲೂಕಿನ ಕಸಬಾ ಮತ್ತು ಮಾಯಸಂದ್ರ ಹೋಬಳಿಯ ಗ್ರಾಮಗಳಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯವತಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಸಾಲಾ ಜಯರಾಮ್ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಶಾಸಕರು ಮಾತನಾಡಿ , ಗ್ರಾಮಗಳ ಜನರಿಗೆ ನೀಡಿದಂತಹ ಭರವಸೆಯನ್ನು ನಾನು ಈಡೇರಿಸಿದ್ದೇನೆ. ಹಾಗೆಯೇ ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕೆಂದು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ. ಗ್ರಾಮಗಳಲ್ಲಿ ಮಣ್ಣು ರಹಿತ ರಸ್ತೆ ಗಳನ್ನಾಗಿ ಹಂತ ಹಂತವಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು. ನಿಮ್ಮ ಮನೆಯ ಮಗನಾಗಿ ನಿಮ್ಮ ಸೇವೆಗೆ ಯಾವಾಗಲೂ ಸಿದ್ದನಿದ್ದೇನೆ. ಗ್ರಾಮಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿಗೆ ಶ್ರಮಿಸಲಾಗುವುದು. ವಿವಿಧ ಗ್ರಾಮಗಳಲ್ಲಿ ಸುಮಾರು 95 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಚಿಕ್ಕೋನಹಳ್ಳಿ ಗ್ರಾಮದಲ್ಲಿ ಸಿ.ಸಿ. ರಸ್ತೆ ಕಾಮಗಾರಿ ಅಂದಾಜು ವೆಚ್ಚ 10 ಲಕ್ಷ, ಕಳ್ಳನಕೆರೆ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿ ಅಂದಾಜು ವೆಚ್ಚ 20 ಲಕ್ಷ, ದೊಡ್ಡ ಮಲ್ಲಿಗೆರೆಯಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ಕಾಮಗಾರಿ ಅಂದಾಜು ಮೊತ್ತ 25 ಲಕ್ಷ, ಚಿಕ್ಕ…

Read More

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ ನೀಡಿದ್ದು, ದೇಶಕ್ಕೆ ಬೆಳ್ಳಿ ಪದಕಕ್ಕೆ ನೀಡಿದ್ದಾರೆ. ಈ ಸಾಧನೆ ಭಾರತದ ಪಾಲಿಗೆ ಹೆಮ್ಮೆ ಎಂದೆನ್ನಬಹುದು. ಏಕೆಂದರೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಚೋಪ್ರಾ ಭಾಜನರಾಗಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ನಲ್ಲಿ ನೀರಜ್ ಚೋಪ್ರಾ ಅವರ ಚೊಚ್ಚಲ ಪಂದ್ಯ ಉತ್ತಮವಾಗಿರಲಿಲ್ಲ. ನೀರಜ್ ಚೋಪ್ರಾ ಅವರ ಮೊದಲ ಎಸೆತವು ಫೌಲ್ ಎಂದು ಸಾಬೀತಾಯಿತು. ಮೊದಲ ಪ್ರಯತ್ನದಲ್ಲಿಯೇ ವಿಫಲರಾದ ಚೋಪ್ರಾ, ಎರಡನೇ ಸುತ್ತಿನಲ್ಲಿ ಜಾವೆಲಿನ್ ಅನ್ನು 82.39 ಮೀಟರ್ ದೂರಕ್ಕೆ ಎಸೆದರು. ಇನ್ನು ಮೂರನೇ ಸುತ್ತಿನಲ್ಲಿ ತಮ್ಮ ಪ್ರದರ್ಶನವನ್ನು ಸುಧಾರಿಸಿದ್ದರು. ಈ ಸುತ್ತಿನಲ್ಲಿ 86.37 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ಪದಕ ಗೆಲ್ಲುವ ಭರವಸೆ ಮೂಡಿಸಿದರು. ಇನ್ನು ನಾಲ್ಕನೇ ಪ್ರಯತ್ನದಲ್ಲಿ, ನೀರಜ್ ಶ್ರಮವನ್ನೆಲ್ಲಾ ಒಗ್ಗೂಡಿಸಿ ಬರೋಬ್ಬರಿ 88.13 ಮೀ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಪದಕ ಗೆಲ್ಲುವ ರೇಸ್ ಗೆ ಪ್ರವೇಶಿಸಿದರು.…

Read More

ಚಳ್ಳಕೆರೆ : ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಚಳ್ಳಕೆರೆ ತಾಲೂಕು ಸಮಿತಿ ವತಿಯಿಂದ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಚಂದ್ರಪ್ಪ ಮಾತನಾಡಿ,  ಮೂಢನಂಬಿಕೆಗಳನ್ನು ತೊಡೆದುಹಾಕಿ ಬಾಬಾಸಾಹೇಬರ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ನಿಮ್ಮ ಬದುಕಿನಲ್ಲಿ ಸ್ವಾವಲಂಬಿಗಳಾಗಿ  ಬದುಕಬೇಕು  ಎಂದು ಕರೆ ನೀಡಿದರು. ದಲಿತರಿಗೆ, ಅಸ್ಪೃಶ್ಯರಿಗೆ , ಶೋಷಿತರಿಗೆ ದೌರ್ಜನ್ಯ , ಅತ್ಯಾಚಾರಗಳು ನಡೆದರೆ, ಅಂತಹ ಸಂದರ್ಭದಲ್ಲಿ ಸಮುದಾದ ಪರವಾಗಿ ನಿಂತು ಪ್ರತಿಯೊಬ್ಬರೂ ನ್ಯಾಯಕೊಡಿಸುವ ಕೆಲಸ ಮಾಡಬೇಕು ಎಂದು  ನೂತನ ಪದಾಧಿಕಾರಿಗಳಿಗೆ ತಿಳಿಸಿದರು. ಹಿರಿಯ ದಲಿತ ಮುಖಂಡರಾದ ವಿಜಯಕುಮಾರ್ ಅವರು ನೂತನ ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಿ,  ಸಂಘಟನೆಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಬಾರದಂತೆ, ತಾಯಿ ಹೃದಯದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಚಳ್ಳಕೆರೆ ತಾಲೂಕು ಅಧ್ಯಕ್ಷರು ಮಾತನಾಡಿ,  ನಮ್ಮ ಸಂಘಟನೆಯ  ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಆರ್ ಕೋದಂಡರಾಮ್  ಅವರು ಬಹಳ ಒಳ್ಳೆಯ ಹೋರಾಟಗಾರರು ಇಂತಹ ರಾಜ್ಯ ಅಧ್ಯಕ್ಷರು ಸಿಕ್ಕಿರುವುದು  ನಮ್ಮ…

Read More