Author: admin

ಜನತಾ ಜಲಧಾರೆ ಕಾರ್ಯಕ್ರಮದ ನಂತರ ಜೆಡಿಎಸ್ ಬೆಂಗಳೂರಿನಲ್ಲಿ ಜನತಾ ಮಿತ್ರ ಎಂಬ ಕಾರ್ಯಕ್ರಮವನ್ನು ಒಂದು ತಿಂಗಳ ಕಾಲ ನಡೆಸಲು ನಿರ್ಧರಿಸಿದೆ. ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜೂ.22ರಂದು ಜನತಾ ಮಿತ್ರ ವಾಹನಗಳಿಗೆ ಚಾಲನೆ ನೀಡಲಾಗುತ್ತದೆ. 15 ವಾಹನಗಳು ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದು, ಜನರಿಗೆ ಯಾವ ರೀತಿಯ ಆಡಳಿತ ಬೇಕು ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಿವೆ. ಅಲ್ಲದೆ, ಜೆಡಿಎಸ್ನ ಉದ್ದೇಶಿತ ಪಂಚರತ್ನ ಕಾರ್ಯಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತದೆ. ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಏಕೆ ಮುಖ್ಯಮಂತ್ರಿಯಾಗಬೇಕು ಎಂಬ ಬಗ್ಗೆ ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಅತ್ಯಾಧುನಿಕವಾಗಿ ವಿನ್ಯಾಸಗೊಳಿಸಲಾಗಿರುವ ವಾಹನ ಪ್ರತಿ ವಿಧಾನಸಭಾ ಕ್ಷೇತ್ರದ ವಾರ್ಡ್ ನಲ್ಲೂ ಸಂಚರಿಸಲಿವೆ. ಸಾರ್ವಜನಿಕರು ಮುಂದಿನ ಸರ್ಕಾರ ಹೀಗಿರಬೇಕು ಎಂಬ ಬಗ್ಗೆ ತಮ್ಮ ಸಲಹೆಯನ್ನು ಬರೆದು ಡ್ರಾಪ್ ಬಾಕ್ಸ್ನಲ್ಲಿ ಹಾಕಬಹುದು. ಅಲ್ಲದೆ,ಮೊಬೈಲ್ ನಲ್ಲಿ ಬಾರ್ಕೋಡ್ ಸ್ಕ್ಯಾನ್ ಮಾಡಿ ವೆಬ್ ಸೈಟ್ ಮೂಲಕವೂ ಅಭಿಪ್ರಾಯ ತಿಳಿಸಬಹುದು. ಪೋಡಿಯಂನಲ್ಲಿ ಟ್ಯಾಬ್ ಲಭ್ಯವಿದ್ದು, ಅದರಲ್ಲೂ ಕೂಡ ತಮ್ಮ ಸಲಹೆಗಳನ್ನು ಬರೆಯಬಹುದಾಗಿದೆ. ಒಂದು…

Read More

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ಇಂದು ಮಧ್ಯಾಹ್ನ ತುರ್ತುಸಭೆ ಕರೆಯಲಾಗಿದೆ. ಸಭೆಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಕಾರಿಗಳು, ಕೋವಿಡ್ ಸಲಹಾ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ವಾರದ ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಳವಾದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೊರೊನಾ ತಡೆಗಟ್ಟುವ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್ ಬಗ್ಗೆ ಹೆಚ್ಚು ಒತ್ತು ನೀಡಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ, ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು, ಕೇರಳ, ಮಹಾರಾಷ್ಟ್ರ, ತಮಿಳುನಾಡು ಗಡಿ ಭಾಗಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಿಸಿ ಪ್ರಯಾಣಿಕರ ಮೇಲೆ ನಿಗಾ ಇಡುವುದರ ಬಗ್ಗೆಯೂ ಕೂಡ ಸಭೆಯಲ್ಲಿ ಚರ್ಚೆ ನಡೆಯಲಿದೆ. ಎರಡನೆ ಡೋಸ್ ವ್ಯಾಕ್ಸಿನ್ ಹಾಗೂ ಬೂಸ್ಟರ್ ಡೋಸ್ ಪಡೆಯಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಶಾಲಾ-ಕಾಲೇಜು ಮಟ್ಟದಲ್ಲಿ ಮೊದಲನೆ ಡೋಸ್ ಕಂಪ್ಲೀಟ್ ಮಾಡಲು ಆರೋಗ್ಯ ಇಲಾಖೆ ಅಕಾರಿಗಳಿಗೆ ಸೂಚನೆ ನೀಡುವುದು ಈ ಎಲ್ಲ…

Read More

ಒಡಿಶಾ ಮೂಲದ ಮಹಿಳೆಯನ್ನು ಲಾಡ್ಜ್‌ ಗೆ ಕರೆದುಕೊಂಡು ಬಂದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೀಪ ಪದನ್(37) ಕೊಲೆಯಾಗಿರುವ ಒಡಿಶಾ ಮೂಲದ ಮಹಿಳೆ. ಕೊಲೆ ಮಾಡಿ ಪರಾರಿಯಾಗಿರುವ ಆಕೆಯ ಸ್ನೇಹಿತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ದೀಪ ಪದನ್ಳನ್ನು ಸ್ನೇಹಿತ ರೈಲ್ವೆ ನಿಲ್ದಾಣ ಸಮೀಪದ ಲಾಡ್ಜ್‌ ಗೆ ಕರೆದು ಕೊಂಡು ಬಂದಿದ್ದಾನೆ. ಜೂ.9ರಂದು ರಾತ್ರಿ ದಿಂಬಿನಿಂದ ಉಸಿರುಗಟ್ಟಿಸಿ ದೀಪ ಅವರನ್ನು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ. ಜೂ.10ರಂದು ಈ ಪ್ರಕರಣ ಬೆಳಕಿಗೆ ಬಂದಿದೆ. ಸುದ್ದಿ ತಿಳಿದ ಯಶವಂತಪುರ ಠಾಣೆ ಪೊಲೀಸರು ಲಾಡ್ಜ್‌ ಗೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಈ ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ವ್ಯಕ್ತಿಗಾಗಿ ಪೊಲೀಸರು ಶೋಧ ಕೈಗೊಂಡಿದ್ದಾರೆ. ಲಾಡ್ಜ್ ಹಾಗೂ ಸುತ್ತಮುತ್ತಲಿನ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ನಡೆಸಿ ಆರೋಪಿಗಾಗಿ ಬಲೆ ಬೀಸಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಸರಣಿ ಅಪಘಾತದಲ್ಲಿ ಆಟೋ ಚಾಲಕರೊಬ್ಬರು ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶ್ರೀಗಂಧಕಾವಲು ನಿವಾಸಿ ಗಿರಿಸಾಗರ್(43) ಮೃತಪಟ್ಟ ಆಟೋ ಚಾಲಕ. ಇಂದು ಬೆಳಗ್ಗೆ 6.30ರ ಸುಮಾರಿನಲ್ಲಿ ಮೈಸೂರು ರಸ್ತೆಯ ಸ್ಯಾಟ್ಲೈಟ್ ಬಸ್ ನಿಲ್ದಾಣದ ಹೊರದ್ವಾರದ ಬಳಿ ಹೊಸಗುಡ್ಡದಹಳ್ಳಿ ಜಂಕ್ಷನ್ನಿಂದ ಬಾಪೂಜಿನಗರದ ಕಡೆಗೆ ಈಚರ್ ವಾಹನ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದಿದೆ. ಈ ಕ್ಯಾಂಟರ್ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋ ಬಿಎಂಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿ ಕ್ಯಾಂಟರ್ ಹಾಗೂ ಬಿಎಂಟಿಸಿ ಬಸ್ ಮಧ್ಯೆ ಆಟೋ ಸಿಕ್ಕಿಕೊಂಡಿದೆ. ಡಿಕ್ಕಿಯ ರಭಸಕ್ಕೆ ಆಟೋ ಚಾಲಕ ಆಟೋದಲ್ಲಿ ಸಿಲುಕಿಕೊಂಡು ಗಂಭೀರ ಗಾಯಗೊಂಡರು. ತಕ್ಷಣ ಸ್ಥಳೀಯರು ಅರ್ಧ ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟು ಚಾಲಕನನ್ನು ರಕ್ಷಿಸಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ…

Read More

ಎಐಸಿಸಿ ಪ್ರಮುಖ ನಾಯಕ ರಾಹುಲ್‍ಗಾಂಧಿ ಎರಡನೇ ದಿನವಾದ ಇಂದು ಜಾರಿ ನಿರ್ದೇಶನಾಲಯದ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ನಿನ್ನೆ ಸುದೀರ್ಘ 10 ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ ತನಿಖಾ ಸಂಸ್ಥೆಗೆ ಸಮಾಧಾನಕರ ಉತ್ತರ ಸಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಹಿವಾಟಿಗೆ ಸಂಬಂಸಿದಂತೆ ಅಕ್ರಮ ಹಣ ವರ್ಗಾವಣೆಯಾಗಿದೆ ಎಂಬ ಆರೋಪಕ್ಕಾಗಿ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿದೆ. ಮೂರು ಬಾರಿ ನೋಟಿಸ್ ನೀಡಲಾಗಿತ್ತು. ಅಂತಿಮವಾಗಿ ನಿನ್ನೆ ರಾಹುಲ್‍ಗಾಂಧಿ ತನಿಖಾ ಸಂಸ್ಥೆ ಮುಂದೆ ಹಾಜರಾದರು. ಅದಕ್ಕೂ ಮುನ್ನಾ ಎರಡು ಕಿಲೋ ಮೀಟರ್ ವರೆಗೂ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಆಗಮಿಸಿದ್ದರು. ರಾಹುಲ್‍ ಗಾಂಧಿಗೆ ಬೆಂಬಲ ವ್ಯಕ್ತ ಪಡಿಸಿ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದರು. ಇದರಿಂದ ಅಸ್ತವಸ್ತ ವಾತಾವರಣ ನಿರ್ಮಾಣವಾಗಿತ್ತು.ಮುಂಜಾಗೃತೆಯಾಗಿ ಪೊಲೀಸರು ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ಬಂಧಿಸಿದ್ದರು. ಭಾರೀ ಮೆರವಣಿಗೆಯೊಂದಿಗೆ ವಿಚಾರಣೆಗೆ ಹಾಜರಾದ ರಾಹುಲ್‍ಗಾಂಧಿಯನ್ನು ಜಾರಿ ನಿರ್ದೇಶನಾಲಯ 10 ಗಂಟೆಗಳ ಕಾಲ ಪ್ರಶ್ನಿಸಿತ್ತು. ರಾತ್ರಿ 9:30ರ ವೇಳೆಗೆ ರಾಹುಲ್ ಗಾಂಧಿ ಅವರ…

Read More

ತುಮಕೂರು: ತೋಟವೊಂದರಲ್ಲಿ ಮರ ಕಡಿಯಲು ಹೋಗಿದ್ದ ವ್ಯಕ್ತಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬಗ್ಗನಹಳ್ಳಿ ಗೊಲ್ಲರಹಟ್ಟಿಯಲ್ಲಿ ಸಂಭವಿಸಿದೆ. ಹೊಸಪಾಳ್ಯ ಗ್ರಾಮದ 45 ವರ್ಷ ವಯಸ್ಸಿನ ಲೋಕೇಶ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಗೊಲ್ಲರಹಟ್ಟಿಯ ತೋಟಕ್ಕೆ ಕೆಲಸಕ್ಕೆ ತೆರಳಿದ್ದ ಅವರು, ಮರಗಳ ಕೊಂಬೆ ಕತ್ತರಿಸುತ್ತಿದ್ದು, ಬಹುತೇಕ ಕೊಂಬೆಗಳನ್ನು ಕತ್ತರಿಸಿದ್ದರು. ಆದರೆ ಏಕಾಏಕಿ ಕಾಲು ಜಾರಿ ಅವರು ಮರದಿಂದ ಕೆಳಗೆ ಬಿದ್ದಿದ್ದು,  ನೆಲಕ್ಕೆ ಬಿದ್ದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ರಾಯಚೂರು: ಕಲುಷಿತ ನೀರು‌ ಸೇವನೆಯಿಂದ ಮೃತಪಟ್ಟ ಮೂರು ಜನ ಅವಲಂಬಿತರ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ‌ ಶಂಕರ ಪಾಟೀಲ ಮುನೇನಕೊಪ್ಪ‌ ಅವರು ನಗರಸಭೆಯ 10 ಲಕ್ಷ ರೂಪಾಯಿಯ ಪರಿಹಾರ ಚೆಕ್ ಅನ್ನು ಮಂಗಳವಾರ ಹಸ್ತಾಂತರಿಸಿದರು. ರಾಜ್ಯ ಸರ್ಕಾರದಿಂದಲೂ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದ್ದು,ಶೀಘ್ರದಲ್ಲೇ ಇದನ್ನು ಒದಗಿಸಲಾಗುವುದು. ಏನೇ ಪರಿಹಾರ ಒದಗಿಸಿದರೂ ಮೃತಪಟ್ಟವರ ಪ್ರಾಣ ತಂದುಕೊಡಲಾಗುವುದಿಲ್ಲ. ಈ ಮೂಲಕ ಅವಲಂಬಿತರಿಗೆ ಧೈರ್ಯ ತುಂಬುವ ಕೆಲಸವನ್ನು ನಗರಸಭೆ ಮಾಡಿರುವುದು ಅಭಿನಂದನೀಯ ಎಂದರು. ಮೃತ ಮಲ್ಲಮ್ಮ ಪತಿ ಮುದುಕಪ್ಪ ಅವರಿಗೆ, ಮೃತ ಅಬ್ದುಲ್ ಗಫೂರ್ ತಾಯಿ ಅಮಿನಾ‌ಬೀ‌ ಅವರಿಗೆ ಹಾಗೂ ಮೃತ ನೂರ‌ ಮಹ್ಮದ್ ಸಹೋದರಿ ಕೈಕಶಾ ಅವರಿಗೆ ಪರಿಹಾರದ ಚೆಕ್ ನೀಡಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು:  ಜಿಲ್ಲೆಯ ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿ, ಹುಲ್ಲೇಕೆರೆ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪ ಕೇಳಿ ಬಂದಿದೆ. ಎಂದಿನಂತೆ ಪಂಚಾಯಿತಿಯ ,ಧ್ವಜಸ್ತಂಬದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಗಿತ್ತು. ಆದರೆ ರಾಷ್ಟ್ರಧ್ವಜವನ್ನು ತಳಕೆಳಕಾಗಿ ಹಾರಿಸಲಾಗಿತ್ತು. ಇದನ್ನು ಪಂಚಾಯತಿಯ ಸಿಬ್ಬಂದಿ ಯಾರೂ, ಗಮನಿಸಿರಲಿಲ್ಲ ಇದರಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿ ಮತ್ತು ಸಿಬ್ಬಂದಿಯವರ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ಈ ದೃಶ್ಯವನ್ನು ಮಧ್ಯಾಹ್ನ ರಾಷ್ಟ್ರೀಯ ಮಾನವ ಹಕ್ಕು ಆಯೋಗ  ಹಾಗೂ  ಮಾಹಿತಿ ಹಕ್ಕು ಕಾರ್ಯಕರ್ತರು ಮತ್ತು ಗ್ರಾಮಸ್ಥರು ಗಮನಿಸಿದ್ದರಿಂದಾಗಿ  ಅಚಾತುರ್ಯ ಬೆಳಕಿಗೆ ಬಂದಿದೆ. ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ ರವನ ವಿಚಾರಿಸಿದಾಗ, ಸಾಮಾಜಿಕ ಕಾರ್ಯಕರ್ತರಿಗೆ ಉಡಾಫೆಯ ಉತ್ತರವನ್ನು ನೀಡಿದ್ದಾರೆ. ಇಂತಹ ಅಧಿಕಾರಿಯನ್ನು ಅಮಾನತ್ತು ಮಾಡಬೇಕೆಂದು ಸಾರ್ವಜನಿಕರು ಮಾಹಿತಿ ಹಕ್ಕು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವನ್ನು ತುರುವೇಕೆರೆಯ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ಕುಮಾರ್ ಗಮನಕ್ಕೆ ತಂದು ಇಂತಹ ಬೇಜವಾಬ್ದಾರಿ ,ಅಧಿಕಾರಿಯನ್ನ ಈ ತಕ್ಷಣವೇ ಅಮಾನತ್ತು ಮಾಡಬೇಕೆಂದು  ಮನವಿಮಾಡಿದ್ದಾರೆ. ತಾಲೂಕು…

Read More

ತುಮಕೂರು: ಜಿಲ್ಲೆಯ, ತುರುವೇಕೆರೆ ಪಟ್ಟಣದಲ್ಲಿರುವ ಬೆಮೆಲ್, ಕಚೇರಿಯಲ್ಲಿ ಮಾಜಿ ವಿಧಾನ ಪರಿಷತ್ತಿನ ,ಮಾಜಿ ಸದಸ್ಯ ಬೆಮೆಲ್ ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ತಾಲೂಕಿನ  ಕೊಂಡಜ್ಜಿ ಗ್ರಾಮ ಪಂಚಾಯ್ತಿ, ಮಾಡಿಹಳ್ಳಿ ಗ್ರಾಮ ಪಂಚಾಯ್ತಿ ,ಆನೆಕೆರೆ ಗ್ರಾಮ ಪಂಚಾಯಿತಿಗೆ ಸೇರಿದ ಹಲವು ಮಹಿಳೆಯರು ಕಚೇರಿಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.  ಈ ವೇಳೆ ಮಾತನಾಡಿದ ಬೆಮೆಲ್ ಕಾಂತರಾಜು, ಕಳೆದ ನಾಲ್ಕು ವರ್ಷಗಳಿಂದ ಬೇರೆ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರಿಯವಾಗಿ ಜನರ ಸೇವೆಗಾಗಿ ತೊಡಗಿದ್ದೇನೆ.,ಮುಂದಿನ ದಿನಗಳಲ್ಲಿ ತಮ್ಮನ್ನು ನನ್ನೊಂದಿಗೆ ನಮ್ಮೆಲ್ಲರನ್ನು ಕೊಂಡೊಯ್ಯುತ್ತೇನೆ, ಪಕ್ಷವನ್ನು ಉತ್ತಮ ರೀತಿಯಲ್ಲಿ ಬೆಳೆಸೋಣ, ಕಳೆದ ಬಾರಿ ಆದ ಸಣ್ಣ ಎಡವಟ್ಟಿನಿಂದ ಕಾಂಗ್ರೆಸ್ ಪಕ್ಷದ ಮತಗಳು ಬಿಜೆಪಿ ಪಕ್ಷದ ಪಾಲಾಗಿ ಹೋದವು. ಆದರೆ ಈಗ ನಾನು ಪ್ರವಾಸ ಮಾಡಿದ ಪ್ರತಿ ಹಳ್ಳಿಗಳಲ್ಲೂ 40ರಿಂದ 50 ಜನ ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ನಮ್ಮ ಪಕ್ಷವು ಬಹಳ ಸದೃಢವಾಗಿದೆ ಎಂದರು. ತಮ್ಮ ಗ್ರಾಮಗಳಲ್ಲಿ ಸಣ್ಣ ಪುಟ್ಟ ಗ್ರಾಮ ಕಾರ್ಯಕ್ರಮಗಳು ಆದಾಗ ನಮಗೆ ತಿಳಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇವೆ. ನಿಮ್ಮ ಸಹಕಾರ ಸದಾ…

Read More

ಭಾರತ ಕಮ್ಯುನಿಸ್ಟ್ ಪಕ್ಷ ಜಿಲ್ಲಾ ಮಂಡಳಿ ಮತ್ತು ಎಐಟಿಯುಸಿ ಜಿಲ್ಲಾ ಸಮಿತಿ ವತಿಯಿಂದ ಇತ್ತೀಚೆಗೆ ನಿಧನರಾದ ಸಿಪಿಐ ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಎಐಟಿಯುಸಿ ಜಿಲ್ಲಾಧ್ಯಕ್ಷರಾಗಿದ್ದ  ಎನ್.ಶಿವಣ್ಣನವರಿಗೆ ನುಡಿನಮನ ಸಲ್ಲಿಸಲಾಯಿತು. ನುಡಿನ ನಮನ ಕಾರ್ಯಕ್ರಮದಲ್ಲಿ ಅಗಲಿದ ಎನ್.ಶಿವಣ್ಣನವರಿಗೆ ಮೌನಾಚರಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ  ಹಾಡುಗಳ ಮೂಲಕ ಶಿವಣ್ಣ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಹಲವು ಗಣ್ಯರು, ಶಿವಣ್ಣ ಅವರಿಗೆ ನುಡಿನಮನ ಸಲ್ಲಿಸಿ ಗೌರವಿಸಿದರು. ಕಾರ್ಯಕ್ರಮಕ್ಕೂ ಮೊದಲು ಶಿವಣ್ಣನವರ ಭಾವ ಚಿತ್ರಕ್ಕೆ ಪುಷ್ಪಾರ್ಷಚನೆ ಮಾಡುವ ಮೂಲಕ ಗೌರವಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More