Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ಪ್ರಧಾನಿಯಾಗಿ ನರೇಂದ್ರ ಮೋದಿ ತಮ್ಮ ಕರ್ತವ್ಯ ಮರೆತಿದ್ದಾರೆ. ಹಾಗಾಗಿ ಅವರು ಎಲ್ಲಾ ಚುನಾವಣೆಯಲ್ಲೂ ಭಾಷಣ ಮಾಡಲು ಬರುತ್ತಾರೆ. ಅವರೇನು 100 ತಲೆಯ ರಾವಣನಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಈಗ ವಿವಾದಕ್ಕೆ ತಿರುಗಿದೆ. ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ತಮ್ಮ ಕರ್ತವ್ಯ ಮರೆತಿದ್ದಾರೆ. ಹಾಗಾಗಿ ಅವರು ಸ್ಥಳೀಯ, ಕಾರ್ಪೊರೇಷನ್, ಎಂಎಲ್ ಎ ಸೇರಿದಂತೆ ಯಾವುದೇ ಚುನಾವಣೆ ಇದ್ದರೂ ಹೋಗಿ ನನ್ನ ಮುಖ ನೋಡಿ ಮತ ಹಾಕಿ ಅಂತಾರೆ. ಎಷ್ಟು ದಿನ ಅಂತ ಅವರ ಮುಖ ನೋಡೋದು? ಅವರೇನು 100 ತಲೆಯ ರಾವಣನಾ ಎಂದು ಪ್ರಶ್ನಿಸಿದ್ಧಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದ್ದು, ಗುಜರಾತ್ ಪುತ್ರನಿಗೆ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದೆ. ಆದರೆ ಕಾಂಗ್ರೆಸ್ ಗುಜರಾತ್ ಚುನಾವಣೆಯಲ್ಲೂ ಅಭಿವೃದ್ಧಿ ವಿಷಯ ಮಾತನಾಡದೇ ಮೋದಿ ಹೆಸರು ಹೇಳಿಕೊಂಡು ಮತ ಕೇಳುವುದು ಎಷ್ಟು ಸರಿ…
ರಾಜ್ಯ ರಾಜಕೀಯದಲ್ಲಿ ತನ್ನದೇ ಛಾಪು ಹೊಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧಾರಿತ ಸಿನಿಮಾ ನಿರ್ಮಾಣದ ಸಿದ್ಧತೆ ನಡೆದಿದ್ದು, ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಸಿದ್ದರಾಮಯ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದ ಹಯಾತ್ ಪೀರ್ ಸಾಬ್, ಎಂ.ಎಸ್. ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನು ತೆರೆಮೇಲೆ ತರಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ವಿಚಾರ ಸದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಬಯೋಪಿಕ್ ಮಾಡುವಾಗ ಮಾಹಿತಿಗಳು ಸ್ಪಷ್ಟವಾಗಿರಬೇಕು. ಹೆಚ್ಚು ಮಸಾಲೆ ಸೇರಿಸುವ ಪ್ರಯತ್ನ ನಡೆದರೆ ವಿವಾದ ಸೃಷ್ಟಿ ಆಗುತ್ತದೆ. ಈ ಕಾರಣಕ್ಕೆ ನಿರ್ಮಾಪಕರು ಸಿದ್ದರಾಮಯ್ಯ ಅವರಿಂದ ಒಪ್ಪಿಗೆ ಪಡೆದು ಅವರಿಂದಲೇ ಮಾಹಿತಿ ಪಡೆಯಲು ಮುಂದಾಗಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರ ಜೊತೆ ಮೊದಲ ಹಂತದ ಮಾತುಕತೆ ನಡೆದಿದೆ. ಮಾಜಿ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕ ಜಮೀರ್ ಆಹ್ಮಮದ್ ನೇತೃತ್ವದಲ್ಲಿ ಈ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ವಿಷಯವನ್ನು ಕಾಂಗ್ರೆಸ್ ಮುಖಂಡ ಶಿವರಾಜ್…
ಹೆಚ್.ಡಿ.ಕೋಟೆ: ಆರೋಗ್ಯಾಧಿಕಾರಿ ಡಾ. ಟಿ.ರವಿಕುಮಾರ್ ಮತ್ತು ತಂಡದವರು ಹೆಚ್.ಡಿ.ಕೋಟೆ ವ್ಯಾಪ್ತಿಗೆ ಬರುವ ಯರಹಳ್ಳಿ ಗ್ರಾಮದಲ್ಲಿ ಲಾರ್ವ ಸಮೀಕ್ಷೆಯನ್ನು ಅಡ್ದ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ರವಿಕುಮಾರ್ ಮಾತನಾಡಿ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಿಂದ ಪ್ರತಿ ಶುಕ್ರವಾರ ಮತ್ತು ಪ್ರತಿ ಮಂಗಳವಾರ ಹೆಚ್.ಡಿ.ಕೋಟೆ ಮತ್ತು ಹ್ಯಾಂಡ್ ಪೋಸ್ಟ್ ಟೌನ್ ನಲ್ಲಿ ಲಾರ್ವ ಸಮೀಕ್ಷೆಯನ್ನು ಮಾಡುತ್ತಾರೆ. ಇದರಿಂದ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಬಹುದು ಮತ್ತು ಸೊಳ್ಳೆಯಿಂದ ಹರಡುವ ಜ್ವರಗಳ ಬಗ್ಗೆ ಜನರಿಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತದೆ ಎಂದು ತಿಳಿಸಿದರು. ಡೆಂಗ್ಯೂ ಮತ್ತು ಚಿಕುಂಗುನ್ಯಾ ಕಾಯಿಲೆ, ಈ ಜ್ವರ ಸೋಂಕು ಹೊಂದಿದ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆಯು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ. ಈ ರೋಗದ ಮುಖ್ಯಲಕ್ಷಣಗಳು ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗುಡ್ಡೆ ಹಿಂಭಾಗದಲ್ಲಿ ವಿಪರೀತ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು, ಮತ್ತು ವಸಡುಗಳಲ್ಲಿ ರಕ್ತ…
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಅಂತಿಮ ವಿಚಾರಣೆ ನವೆಂಬರ್ 30ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಇದೀಗ ವಿವಾದದ ಉರಿಯುವ ಬೆಂಕಿಗೆ ಎಂಇಎ ತುಪ್ಪ ಸುರಿಯುವ ಕೃತ್ಯಕ್ಕೆ ಮುಂದಾಗಿದೆ. ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವರಾದ ಚಂದ್ರಕಾಂತ ಪಾಟೀಲ್, ಶಂಭುರಾಜ ದೇಸಾಯಿಗೆ ಪತ್ರ ಬರೆದು, ಬೆಳಗಾವಿಗೆ ಬರುವಂತೆ ಆಹ್ವಾನಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಉಭಯ ರಾಜ್ಯಗಳ ಗಡಿವಿವಾದ ವಿಚಾರಣೆಯ ನಡುವೆ ಇಬ್ಬರನ್ನು ಮಹಾರಾಷ್ಟ್ರ ಸರ್ಕಾರ ಸಮನ್ವಯ ಸಚಿವರನ್ನಾಗಿ ನೇಮಿಸಿದೆ. ಗಡಿವಿವಾದ ಅಲ್ಲದೇ ಇತರ ಸಮಸ್ಯೆಗಳ ಬಗ್ಗೆ ಎಂಇಎಸ್ ಕಾರ್ಯಕರ್ತರ ಜೊತೆ ಚರ್ಚಿಸುವುದು ಅಗತ್ಯವಿದೆ. ಹೀಗಾಗಿ ಬೆಳಗಾವಿಗೆ ಇಬ್ಬರು ಸಚಿವರು ಆಗಮಿಸಿ ಚರ್ಚಿಸಬೇಕಿದೆ ಎಂದು ಪತ್ರದಲ್ಲಿ ಎಂಇಎಸ್ ಮುಖಂಡರು ಮನವಿ ಮಾಡಿದ್ದಾರೆ. ಎಂಇಎಸ್ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮಹಾ ಗಡಿ ಸಚಿವರು ಡಿಸೆಂಬರ್ 3ಕ್ಕೆ ಬೆಳಗಾವಿಗೆ ಬರುವುದಾಗಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಾಳೇ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಹಿರಿಯ ವಕೀಲ ಮುಕುಲ್ ರೊಹ್ಟಗಿ ಅವರನ್ನ ಭೇಟಿ ಮಾಡಿ ಚರ್ಚಿಸಿದರು. ಮುಕುಲ್ ರೋಹ್ಟಗಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಗಡಿ ವಿವಾದ ಬಗ್ಗೆ ನಾಳೇ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಇದೆ. ಗಡಿ ವಿವಾದದ ಬಗ್ಗೆ ಮುಕುಲ್ ರೋಹ್ಟಗಿಗೆ ವಿವರಣೆ ನೀಡಿದ್ದೇನೆ. ಮಹಾರಾಷ್ಟ್ರ ಸರ್ಕಾರ ಹಾಕಿದ ಅರ್ಜಿ ಬಗ್ಗೆ ವಿಚಾರಣೆ ನಡೆಯಲಿದೆ. ವಾದಮಂಡನೆಯ ಸಿದ್ಧತೆ ಬಗ್ಗೆ ಮುಕುಲ್ ರೋಹ್ಟಗಿ ತಿಳಿಸಿದ್ದಾರೆ. ಕರ್ನಾಟಕ ಪರ ಸಮರ್ಥವಾಗಿ ವಾದ ಮಂಡಿಸುವ ವಿಶ್ವಾಸವಿದೆ ಎಂದರು. ಮಹಾರಾಷ್ಟ್ರದಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ಸಂಬಂಧ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಮಹರಾಷ್ಟ್ರ ಗೃಹ ಇಲಾಖೆ ಜೊತೆ ನಮ್ಮ ಅಧಿಕಾರಿಗಳು ಮಾತನಾಡಿದ್ದಾರೆ ಜತ್ ತಾಲ್ಲೂಕು 42 ಗ್ರಾಮಗಳು ಕರ್ನಾಟಕಕ್ಕೆ ಸೇರುವ ಇಂಗಿತ ವಿಚಾರ ಸಂಬಂಧ, ಒಂದು ರಾಜ್ಯದಿಂದ…
ಬೆಂಗಳೂರು: ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಸವಾರ ಹಾಗೂ ಆತನ ಸ್ನೇಹಿತರು ಸೇರಿಕೊಂಡು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ನಿನ್ನೆ ರಾತ್ರಿ ಯುವತಿ ರ‍್ಯಾಪಿಡೋ ಬೈಕ್ ಬುಕ್ ಮಾಡಿದ್ದಳು. ಈ ವೇಳೆ ರ‍್ಯಾಪಿಡೋ ಬೈಕ್ ಸವಾರ ಯುವತಿಯನ್ನು ಬಿಟಿಎಂ ಲೇಔಟ್ನಿಂದ ಪಿಕ್ ಮಾಡಿ ಎಲೆಕ್ಟ್ರಾನಿಕ್ಸಿಟಿಯಲ್ಲಿರುವ ಆಕೆಯ ಮನೆಗೆ ಡ್ರಾಪ್ ಮಾಡಬೇಕಿತ್ತು. ಆದ್ರೆ ಯುವತಿ ಕುಡಿದ ನಶೆಯಲ್ಲಿರುವುದನ್ನು ಗಮನಿಸಿ ಆಕೆಯನ್ನು ಮನೆಗೆ ಬಿಡುವ ಬದಲು ರೂಮ್ಗೆ ಕರೆದೊಯ್ದಿದ್ದಿದ್ದಾನೆ. ಯುವತಿಯನ್ನು ತನ್ನ ರೂಮ್ಗೆ ಕರೆದೊಯ್ದು ರ‍್ಯಾಪಿಡೋ ಬೈಕ್ ಸವಾರ ಮತ್ತು ಆತನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ. ಘಟನೆ ಬಗ್ಗೆ ಎಲೆಕ್ಟ್ರಾನಿಕ್ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ರ‍್ಯಾಪಿಡೋ ಬೈಕ್ ಸವಾರ ಶಹಾಬುದ್ದೀನ್ ಮತ್ತು ಆತನ ಸ್ನೇಹಿತ ಅಖ್ತರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಹಾರಾಷ್ಟ್ರ ಗಡಿಯಲ್ಲಿರುವ ಕರ್ನಾಟಕದ ಪ್ರಮುಖ ಪಟ್ಟಣ ನಿಪ್ಪಾಣಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ಮಂಗಳವಾರ (ನ 29) ನಡೆಯಿತು. ಪಟ್ಟಣದ ಸರ್ಕೀಟ್ ಹೌಸ್ನಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಅಲೋಕ್ ಕುಮಾರ್, ಕಳೆದ ವಾರ ಕರ್ನಾಟಕ ಸಾರಿಗೆ ನಿಗಮದ ಬಸ್ಗಳ ಮೇಲೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಿ ಮಸಿ ಬಳಿಯಲಾಗಿತ್ತು. ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ನಡೆಯಬಾರದು ಎಂದು ತಾಕೀತು ಮಾಡಿದರು. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನಾಳೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ. ಅಶಾಂತಿಗೆ ಇದು ಕಾರಣವಾಗಬಾರದು ಎನ್ನುವ ಕಾರಣಕ್ಕೆ ಮುನ್ನೆಚ್ಚರಿಕೆ ದೃಷ್ಟಿಯಿಂದ ಸಭೆ ನಡೆಸಲಾಯಿತು ಎಂದು ಅವರು ಹೇಳಿದರು. ಸುಪ್ರೀಂಕೋರ್ಟ್ ಒಂದು ವೇಳೆ ನಾಳೆಯೇ ತೀರ್ಪು ಪ್ರಕಟಿಸಿದರೂ ಏನೂ ಗಲಾಟೆ ಆಗಬಾರದು. ಇದಕ್ಕಾಗಿ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕ ಪೊಲೀಸರು ಮೂರು ಕಡೆ ಜಂಟಿ ಚೆಕ್ಪೋಸ್ಟ್ ಮಾಡಿದ್ದಾರೆ. ಪ್ರತಿದಿನ…
ರೌಡಿ ಶೀಟರ್ ಸೈಲೆಂಟ್ ಸುನೀಲ್ ಗೆ ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಘೋಷಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ. ಸೋಮವಾರ ಪ್ರಕಟಣೆ ಹೊರಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸೈಲಂಟ್ ಸುನೀಲ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಅಥವಾ ಯಾವುದೇ ಸ್ಥಾನ ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಪಿಸಿ ಮೋಹನ್ ಮುಂತಾದ ಮುಖಂಡರ ಸಮ್ಮುಖದಲ್ಲಿ ಸೈಲೆಂಟ್ ಸುನೀಲ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಪಕ್ಷದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ವರದಿ ಆಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರೌಡಿಶೀಟರ್ ಆಗಿದ್ದ ಸೈಲೆಂಟ್ ಸುನೀಲನ ಜೊತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಕೆ.ಆರ್ ಪೇಟೆಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಸೈಲೆಂಟ್ ಸುನೀಲನ ಕಾರ್ಯಕ್ರಮದಲ್ಲಿ ಇಬ್ಬರು ಸಂಸದರು ಓರ್ವ ಶಾಸಕರು ಭಾಗಿಯಾಗಿದ್ದಾರೆ. ಸೈಲೆಂಟ್ ಸುನೀಲ ಸರ್ಚ್ ವಾರೆಂಟ್ ನಲ್ಲಿದ್ದಾನೆ . ಏನು ಹೇಳಿದ್ರು ಹಿಂದಿನ ಸರ್ಕಾರದಲ್ಲಿ ಆಗಿಲ್ವಾ ಅಂತಾರೆ. ಅದೊಂದು ರೀತಿ ಬಿಜೆಪಿಗೆ ಅಂಟುರೋಗವಾಗಿದೆ ಎಂದು ವಾಗ್ದಾಳಿ ನಡೆಸಿದರು. ಜನ ನಿಮಗೆ ಅಧಿಕಾರ ಕೊಟ್ಟಿಲ್ಲ. ನೀವು ಅನೈತಿಕವಾಗಿ ಬಂದಿದ್ದೀರಿ. ನಮ್ಮನ್ನು ಬಿಡಿ ಮೊದಲು ನೀವು ಏನು ಮಾಡಿದ್ದಿರಿ ಹೇಳಿ ರೌಡಿಶೀಟರ್ ಜೊತೆ ಸಂಸದರು ವೇದಿಕೆ ಹಂಚಿಕೊಳ್ಳುವುದು ಸರಿನಾ…? ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು. ಹೆಸರು ನೋಡು ಫೈಟರ್ ರವಿ ಅಂತೆ. ಆರ್ ಎಸ್ ಎಸ್, ಬಿಜೆಪಿಯವರು ಬರೀ ಇಂತಹದ್ದೆ ಕೆಲಸ ಮಾಡೋದು. ಸಿಸಿಬಿ ಪೊಲೀಸರು ಸುನೀಲನನ್ನ ಹುಡುಕುತ್ತಿದ್ದಾರೆ. ಆತನನ್ನ ಬಿಜೆಪಿಗೆ ಸೇರ್ಪಡೆ ಮಾಡಿದ್ರೆ ಅತನನ್ನ ಹಿಡಿಯಲು ಸಾಧ್ಯವೇ..? ಎಂದು…
ಇತಿಹಾಸದ ಪ್ರಸಿದ್ದ ದೇವಸ್ಥಾನ ಎಂದೇ ಖ್ಯಾತಿ ಪಡೆದ ಕೊಪ್ಪಳದಲ್ಲಿರುವ ಅಂಜನಾದ್ರಿ ಹುನುಮನ ದೇವಸ್ಥಾನಕ್ಕೆ ಕಳೆದೆರಡು ತಿಂಗಳಲ್ಲಿ ದಾಖಲೆ ಸಂಖ್ಯೆಯಲ್ಲಿ ವಿದೇಶೀ ಹಣ ಹರಿದು ಬಂದಿದೆ. ಅಮೇರಿಕಾ, ಆಸ್ಟ್ರೇಲಿಯಾ ಸೇರಿದಂತೆ ಹಲವು ವಿದೇಶಿ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ. ವಿದೇಶಿ ಪ್ರಜೆಗಳಿಂದಲು ಹನುಮನ ಹುಂಡಿಗೆ ದೇಣಿಗೆ ಬರುತ್ತಿದೆ. ಗಂಗಾವತಿ ಗ್ರೇಡ್ 2 ತಹಶಿಲ್ದಾರ ವಿ.ಹೆಚ್ ಹೊರಪೇಟೆ ನೇತೃತ್ವದಲ್ಲಿ ಹುನುಮನ ಹುಂಡಿ ಏಣಿಕೆ ಆರಂಭವಾಗಿದೆ. ಕೇವಲ ಒಂದೂವರೆ ತಿಂಗಳಲ್ಲಿ 22,7508 ಲಕ್ಷ ಹಣ ಜಮೆಯಾಗಿದ್ದು, ಅಮೇರಿಕಾ ಡಾಲರ್,ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳ ನಾಣ್ಯ,ನೋಟುಗಳು ಪತ್ತೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy