Subscribe to Updates
Get the latest creative news from FooBar about art, design and business.
- ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’
- ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ
- ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!
- ಕೊರಟಗೆರೆ: ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ
- ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
- ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ ಚಿರತೆ ಸೆರೆ
- ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
- ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Author: admin
ಕೊರಟಗೆರೆ: ಅಗ್ರಹಾರದ ಕೆರೆ ಏರಿ ಬಿರುಕು ಬಂದಿದ್ದು ಜನರಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಅಗ್ರಹಾರ ಜಂಪೇನಹಳ್ಳಿ ಸೇರಿದಂತೆ ಕೊರಟಗೆರೆ ಪಟ್ಟಣದ ಜನತೆಗೆ ಭಾರೀ ಗಂಡಾತರ ಕಾದಿದೆ. ಅಗ್ರಹಾರ ಜಂಪೇನಹಳ್ಳಿ ಭಾಗದ ರೈತರಿಗೆ ಸೇರಿದ ತೋಟಗಳೆಲ್ಲ ಸಂಪೂರ್ಣ ನಾಶವಾಗುವ ಭೀತಿಯಲ್ಲಿ ಜನರು ಗಾಬರಿಗೊಂಡಿದ್ದಾರೆ. ಕೊರಟಗೆರೆ ಪಟ್ಟಣದ ಶೇ.90 ಭಾಗದಷ್ಟು ಜನರಿಗೆ ಕುಡಿಯುವ ನೀರಿನ ಮೂಲ ಮಾರ್ಗ ಅಗ್ರಹಾರದ ಕೆರೆ ಆಗಿದೆ. ಆದರೆ ಈ ಕೆರೆ ಏರಿ ಬಿರುಕು ಮೂಡಿರುವುದು ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. ಕೆರೆಗಳ ಜವಾಬ್ದಾರಿ ಹೊತ್ತಿರುವ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಗಳ ನಿರ್ಲಕ್ಷತನ ಇದಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೆರೆ ಏರಿ ಬಿರುಕು ಸುತ್ತಲೂ ಬೆಳೆದಿರುವ ದಟ್ಟ ಅರಣ್ಯದಿಂದಾಗಿ, ಗಿಡ ಮರಗಳಿಂದ ತುಂಬಿರುವ ಕೆರೆ ಏರಿ ಗಿಡ ಮರಗಳ ಬೇರಿನಿಂದ ಕೆರೆಯ ಏರಿ ಬಿರುಕು ಬಿಟ್ಟಿದೆ. ಇದನ್ನು ಕಂಡೂ ಕಾಣದಂತೆ ಇರುವ ಎಂಜಿನಿಯರ್ಗಳ ನಿರ್ಲಕ್ಷತನ ಎಷ್ಟರ ಮಟ್ಟಿಗೆ ಸರಿ ಎಂದು ಸ್ಥಳೀಯ ಜನರು ಹಾಗೂ ರೈತರು ಆಕ್ರೋಶ ಭರಿತರಾಗಿದ್ದಾರೆ.…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮನೇಕಾ ಗಾಂಧಿ ಕಿಡಿಕಾರಿದ್ದಾರೆ. ವಿದ್ಯುತ್ ಹರಿಸಿ ಆನೆಯೊಂದನ್ನು ಕೊಂದಿದ್ದಲ್ಲದೇ, ಅದರ ದಂತವನ್ನು ಮಾರಾಟ ಮಾಡಿದ ಆರೋಪಿಗಳ ರಕ್ಷಣೆಗೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಂಸದೆ ಮನೇಕಾ ಗಾಂಧಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಇತ್ತೀಚೆಗೆ ಹಾಸನ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಆನೆಯೊಂದನ್ನು ಕೊಲ್ಲಲಾಗಿತ್ತು. ಅಲ್ಲದೇ ಸತ್ತ ಆನೆ ದಂತವನ್ನು ಬೆಂಗಳೂರಿಗೆ ತಂದು ಮಾರಾಟ ಮಾಡಲು ಆರೋಪಿಗಳು ಪ್ರಯತ್ನಿಸಿದ್ದರು. ಈ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಗಳು, ಆನೆಯನ್ನು ವಿದ್ಯುತ್ ಹರಿಸಿ ಕೊಂದಿರುವುದನ್ನು ಒಪ್ಪಿಕೊಂಡಿದ್ದರು. ಅರಣ್ಯ ಇಲಾಖೆಯ ಗಂಭೀರ ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಒತ್ತಡ ಹೇರಿದ್ದಾರೆ ಎಂದು ಪತ್ರ ಬರೆದಿದ್ದಾರೆ. ಆರೋಪಿಗಳ ರಕ್ಷಣೆಗೆ ಸ್ಥಳೀಯ ವಲಯ ಅರಣ್ಯ ಅಧಿಕಾರಿ ಬಾರಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಅಮೆರಿಕನ್ ಡಾಲರ್ ಎದುರು ಸದ್ಯ ವಿಶ್ವದ ಹಲವು ಕರೆನ್ಸಿಗಳು ಪಾತಾಳಕ್ಕೆ ಕುಸಿಯಲು ಆರಂಭವಾಗಿದ್ದು, ಇದಕ್ಕೆ ಭಾರತದ ರೂಪಾಯಿ ಕೂಡ ಹೊರತಾಗಿಲ್ಲ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಮೆರಿಕನ್ ಡಾಲರ್ ಎದುರು ಇಂದು ಭಾರತದ ರೂಪಾಯಿ ೮೦ರ ಗಡಿ ತಲುಪಿದ್ದು, ಸಹಜವಾಗಿಯೇ ಇದು ದೇಶದ ಆಮದಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ರೂಪಾಯಿ ಕುಸಿತದಿಂದ ಕೆಲವು ವಲಯಗಳಿಗೆ ಲಾಭ ಉಂಟಾಗಲಿದೆ. ವಿದೇಶಿ ಹೂಡಿಕೆದಾರರು ಭಾರತೀಯ ಶೇರುಗಳು ಮತ್ತು ಇತರ ಸ್ವತ್ತುಗಳ ಮಾರಾಟದಲ್ಲಿ ತೊಡಗಿರುವುದು ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಡಾಲರ್‌ಗಳಲ್ಲಿ ವೌಲ್ಯ ಹೊಂದಿರುವ ಸ್ವತ್ತುಗಳತ್ತ ಸಾಗುತ್ತಿರುವುದು ಭಾರತೀಯ ರೂಪಾಯಿಗೆ ಹಾನಿಯನ್ನುಂಟು ಮಾಡಿದೆ. ಇದರ ಪರಿಣಾಮ ಸದ್ಯ ಡಾಲರ್ ಎದುರು ಭಾರತದ ರೂಪಾಯಿ ಕುಸಿದಿದೆ. ಆದರೆ ರಫ್ತು ಮಾಡುವ ವಲಯಗಳಿಗೆ ಡಾಲರ್‌ಗಳಲ್ಲಿ ಪಾವತಿಸಲಾಗುತ್ತದೆ ಆದ್ದರಿಂದ ಆ ಕಂಪೆನಿಗಳಿಗೆ ಲಾಭವಾಗಲಿದೆ. ಅಲ್ಲದೆ ವಿದೇಶಗಳಿಂದ ಹಣ ಕಳುಹಿಸುವ ಭಾರತೀಯರಿಗೆ ಇದರಿಂದ ಲಾಭವಾಗಲಿದೆ. ರಶ್ಯಾ-ಉಕ್ರೇನ್ ನಡುವಿನ ಯುದ್ದ, ಆಹಾರ ಕೊರತೆ ಭೀತಿ, ತೈಲ ಬೆಲೆ ಹೆಚ್ಚಳ ಸೇರಿದಂತೆ ಹಲವು ಕಾರಣಗಳಿಂದಾಗಿ…
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಯ ವೇಳೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಿದ ಯುವತಿಯರಿಗೆ ಬ್ರಾ ಗಳನ್ನು ತೆಗೆಯುವಂತೆ ಸೂಚಿಸಿದ ಪ್ರಕರಣ ಕುರಿತು ತನಿಖೆಗೆ ಆದೇಶಿಸಲಾಗಿದೆ. ಮಾನವ ಹಕ್ಕುಗಳ ಆಯೋಗ ಈ ಬಗ್ಗೆ ತನಿಖೆ ನಡೆಸಿ ೧೫ ದಿನಗಳಲ್ಲಿ ಕೊಲ್ಲಂ ಗ್ರಾಮಾಂತರ ಎಸ್ಪಿಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಬ್ರಾ ಗಳನ್ನು ತೆಗೆಯುವಂತೆ ಸಿಬ್ಬಂದಿ ಒತ್ತಾಯಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಪೋಷಕರೂ ಕೂಡ ಸಿಡಿಮಿಡಿಗೊಂಡಿದ್ದಾರೆ. ಈ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನೀಟ್ ಪರೀಕ್ಷೆ ಬರೆದ ಮಹಿಳೆಯ ತಂದೆ ಕೊಟ್ಟಾರಕರ ಪೊಲೀಸರಿಗೆ ದೂರು ನೀಡಿದ್ದರು. ಚಾತಮಂಗಲಂನಲ್ಲಿರುವ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು ನನ್ನ ಪುತ್ರಿ ಸೇರಿದಂತೆ ಮಹಿಳಾ ನೀಟ್ ಆಕಾಂಕ್ಷಿಗಳು ತಮ್ಮ ಒಳ ಉಡುಪನ್ನು ತೆಗೆಯುವಂತೆ ಸಿಬ್ಬಂದಿ ಸೂಚಿಸಿದ್ದಾರೆ. ಇದರಿಂದಾಗಿ ಪರೀಕ್ಷೆ ಬರೆಯಲು ಮಹಿಳಾ ಆಕಾಂಕ್ಷಿಗಳಿಗೆ ಮಾನಸಿಕ ಹಿಂಸೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಾಥಮಿಕ ತಪಾಸಣೆಯ ಬಳಿಕ…
ವಿಜಯಪುರದಲ್ಲಿ 10 ವರ್ಷಗಳ ಹಿಂದೆ ನಡೆದಿದ್ದ ಮರ್ಯಾದಾ ಹತ್ಯೆ ಪ್ರಕರಣ ಇದೀಗ ಬಹಿರಂಗಗೊಂಡಿದೆ. ಈ ಪ್ರಕರಣ ಇಡೀ ಜಿಲ್ಲೆಯನ್ನೇ ಬೆಚ್ಚಿ ಬಿಳಿಸುವಂತೆ ಮಾಡಿದೆ. ವಿಜಯಪುರ ನಗರದ ಬಸವರಾಜ ಮಮದಾ ಪುರ ಇವರ ಪುತ್ರಿ ಪ್ರಿಯಾಂಕಾ ಇವಳನ್ನು, ತಮ್ಮ ಸಂಬಂಧಿಕ ರಲ್ಲಿಯೇ ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ಹುಚ್ಚಪ್ಪಗೌಡ ಪಾಟೀಲ ಎನ್ನುವ ನೊಂದಿಗೆ 2008 ರಲ್ಲಿ ಮದುವೆ ಮಾಡಿ ಕೊಡಲಾಗಿತ್ತು. ಮದುವೆ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ನಂತರದ ದಿನಗಳಲ್ಲಿ ಇಬ್ಬರಲ್ಲಿಯೂ ಮನಸ್ತಾಪ ಉಂಟಾಗಿ ಪದೇಪದೇ ತವರು ಮನೆಗೆ ಬರುತ್ತಿ ದ್ದಳು, ಇತ್ತ ಕಡೆಪೋಷಕರೂ ಅವಳ ಮನವೊಲಿಸಿ ಗಂಡನ ಮನೆಗೆ ಬಿಟ್ಟು ಬರುತ್ತಿ ದ್ದರು. 2011ರ ವರೆಗೂ ಹೀಗೆಯೇ ಮುಂದು ವರೆದಿತ್ತು. ಒಂದು ದಿನ ಪ್ರಿಯಾಂಕ ನನಗೆ ಗಂಡನ ಜೊತೆಗೆ ಸಂಸಾರ ಮಾಡಲು ಇಷ್ಟವಿಲ್ಲ, ನಾನು ಇನ್ನೊಬ್ಬನನ್ನು ಪ್ರೀತಿಸುತ್ತಿದ್ದೇನೆ ಎಂದು ಪೋಷಕರ ಬಳಿ ಹೇಳಿದ್ದಾಳೆ. ಆಗ ನಿನಗೆ ಮದುವೆಯಾಗಿದ್ದು, ಈ ರೀತಿಯಾಗಿ ಮಾಡು ವುದು ಸರಿಯಲ್ಲ ಎಂದು ಸಂಬಂಧಿಕರು ಎಲ್ಲ ರೀತಿಯ ಬುದ್ಧಿವಾದ…
ದೇಶದಲ್ಲಿ ೨ನೇ ಮಂಕಿಪಾಕ್ಸ್ ರೋಗ ದೃಢಪಟ್ಟಿದ್ದು, ಕೇರಳದ ಕಣ್ಣೂರಿನ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಕಂಡು ಬಂದ ಹಿನ್ನೆಲೆಯಲ್ಲಿ ಕೇರಳ ಮತ್ತು ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ರಾಜ್ಯ ಪ್ರವೇಶಿಸುವವರ ಮೇಲೆ ಕಣ್ಗಾವಲು ಇಡಲಾಗಿದ್ದು, ಪ್ರತಿಯೊಬ್ಬರನ್ನು ತಪಾಸಣೆ ಮಾಡಲಾಗುತ್ತಿದೆ. ಕಳೆದ ಜುಲೈ ೧೩ ರಂದು ದುಬೈನಿಂದ ಮಂಗಳೂರು ಮೂಲಕ ಕಣ್ಣೂರಿಗೆ ಆಗಮಿಸಿದ ೩೧ ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಖಚಿತ ಪಟ್ಟಿತ್ತು. ಈತ ಮಂಗಳೂರಿಗೆ ವಿಮಾನದಲ್ಲಿ ಬಂದು ನಂತರ ಕಣ್ಣೂರಿಗೆ ತೆರಳಿದ್ದು, ಈತನ ಜತೆ ಮಂಗಳೂರಿಗೆ ಆಗಮಿಸಿದ್ದ ವಿಮಾನದಲ್ಲಿದ್ದ ೩೦ ಸಹ ಪ್ರಯಾಣಿಕರನ್ನು ಹೋಂ ಐಸೋಲೇಷನ್‌ನಲ್ಲಿಡಲಾಗಿದೆ.ಈತನ ಜತೆ ವಿಮಾನದಲ್ಲಿ ಒಟ್ಟು ೧೯೧ ಪ್ರಯಾಣಿಕರಿದ್ದು, ಅವರಲ್ಲಿ ಶಿಷ್ಟಾಚಾರದ ಪ್ರಕಾರ ಮುಂದಿನ ಮೂರು ಸೀಟು ಮತ್ತು ಹಿಂದಿನ ಸೀಟುಗಳ ೩೪ ಪ್ರಯಾಣಿಕರನ್ನು ತಪಾಸಣೆ ಮಾಡಬೇಕಿದ್ದು, ಇವರಲ್ಲಿ ೧೦ ಮಂದಿ ಮಂಗಳೂರು, ೧೫ ಮಂದಿ ಕಣ್ಣೂರು ಮತ್ತು ೯ ಮಂದಿ ಉಡುಪಿಯವರಾಗಿದ್ದು, ಇವರಲ್ಲಿ ೩೦ ಮಂದಿಯನ್ನು ಪತ್ತೆಹಚ್ಚಿ, ೨೧ ದಿನಗಳವರೆಗೆ ಹೋಂಐಸೋಲೇಷನ್‌ನಲ್ಲಿಡಲಾಗಿದೆ. ಉಳಿದ ೪ ಮಂದಿಯ ಪತ್ತೆಕಾರ್ಯ ನಡೆದಿದೆ.…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಮಧ್ಯಭಾಗದಲ್ಲಿ ಸಭೆ, ಸಮಾರಂಭಗಳು, ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದ ಪುರಭವನವನ್ನು ಕೆಡವಿ, ಸುಮಾರು 5 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ನಗರಸಭೆ ಕಟ್ಟಡ ನಿರ್ಮಿಸಲಾಗಿದ್ದು, ಈ ಕೆಲಸ ಪೂರ್ಣಗೊಂಡಿದ್ದರೂ, ಈ ಕಟ್ಟಡ ಉದ್ಘಾಟನಾ ಭಾಗ್ಯ ಕಂಡಿರುವುದಿಲ್ಲ, ಇದನ್ನು ಆದಷ್ಟು ಬೇಗ ಉದ್ಘಾಟಿಸಬೇಕು ಎಂಬುದಾಗಿ ರೈತಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಮನವಿ ಮಾಡಿದರು. ಹಿರಿಯೂರು ನಗರದ ನಗರಸಭೆ ಆವರಣದಲ್ಲಿ ರಾಜ್ಯ ರೈತಸಂಘದ ನೇತೃತ್ವದಲ್ಲಿ ನೂತನ ನಗರಸಭಾ ಕಾರ್ಯಾಲಯವನ್ನು ಉದ್ಘಾಟನೆ ಮಾಡುವಂತೆ ಒತ್ತಾಯಿಸಿ, ನಗರಸಭೆ ಅಧ್ಯಕ್ಷರು ಹಾಗೂ ಪೌರಾಯುಕ್ತರ ಮೂಲಕ ಪೌರಾಡಳಿತ ಸಚಿವರಾದ ಎಂ.ಟಿ.ಬಿ.ನಾಗರಾಜ್ ರವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ನಮ್ಮ ತುಮಕೂರು ಮಾಧ್ಯಮದ ಮೂಲಕ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ ಸಿ ಹೊರಕೇರಪ್ಪ, ಈ ನೂತನ ಕಟ್ಟಡ ಉದ್ಘಾಟನೆಗೆ ಪೀಠೋಪಕರಣಗಳು ಹಾಗೂ ಲಿಫ್ಟ್ ಅಳವಡಿಸುವ ಸಬೂಬು ಹೇಳುತ್ತಾ, ಕಾಲಹರಣ ಮಾಡುತ್ತಿರುವ ಅಧಿಕಾರಿಗಳ ನಡೆ ನಾಗರಿಕರಲ್ಲಿ ಅನುಮಾನ ಮೂಡಿಸುತ್ತಿದ್ದು,…
ಮಧುಗಿರಿ: ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ದೊಡ್ಡೇರಿ ಗ್ರಾಮದ ಜಮೀನಿನಲ್ಲಿ ಮೇಯುತಿದ್ದ ಎರಡು ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಎರಡು ಮೇಕೆ ಸ್ಥಳದಲ್ಲೇ ಮೃತಪಟ್ಟಿವೆ. ತಾಲೂಕಿನ ದೊಡ್ಡೇರಿ ಗ್ರಾಮದ ರಂಗನಾಥಪ್ಪನವರಿಗೆ ಸೇರಿದ ಮೇಕೆಗಳಾಗಿದ್ದು, ಸುಮಾರು ಮೂವತ್ತು ಸಾವಿರ ನಷ್ಟವಾಗಿದೆ ಎಂದು ಮಾಲೀಕ ಊರಿನ ಗ್ರಾಮಸ್ಥರು ತಿಳಿಸಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿದ್ದರು. ಈ ವೇಳೆ ನಮಗೆ ಪರಿಹಾರ ನೀಡಬೇಕು ಎಂದು ಮಾಲೀಕರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಊರಿನ ಗ್ರಾಮಸ್ಥರಾದ ರಂಗನಾಥಪ್ಪ ಜಯಕುಮಾರ್ ರವೀಶ್ ಅಪ್ಪು ಕಾಂತು ಕಾಟ್ಮೆ ಲಿಂಗಯ್ಯ ಮೊದಲಾದವರು ಪರಿಹಾರ ಕೋರಿ ಮನವಿ ಸಲ್ಲಿಸಿದ್ದಾರೆ. ವರದಿ: ದೊಡ್ಡೇರಿ ಮಹಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
‘ನಾನು ಮುಖ್ಯಮಂತ್ರಿ ಆಗುವುದಕ್ಕಿಂತ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಮುಖ್ಯ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ. ಪಕ್ಷದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಎಸ್.ಎಂ. ಕೃಷ್ಣ ಅವರ ನಂತರ ನಾನು ಪಕ್ಷದ ಅಧ್ಯಕ್ಷನಾಗಿದ್ದು, ಒಕ್ಕಲಿಗ ಸಮಾಜ ನನ್ನ ಬೆನ್ನ ಹಿಂದೆ ನಿಲ್ಲಬೇಕು ಎಂದು ಮನವಿ ಮಾಡಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಪತ್ರಕರ್ತರು, ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿಯಾಗುವ ಅವಕಾಶವಿದೆ ಎಂದು ಹೇಳುವ ಮೂಲಕ ತಾವು ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದೀರಾ ಎಂದು ಪ್ರಶ್ನಿಸಿದಾಗ ಅವರು ಉತ್ತರಿಸಿದರು. ‘ನಾನೇನು ಸನ್ಯಾಸಿನಾ? ನಾನು ಖಾದಿ ಬಟ್ಟೆ ಹಾಕಿಕೊಂಡು ಬಂದಿದ್ದೇನೆ ಹೊರತು, ಕಾವಿ ಬಟ್ಟೆ ಹಾಕಿ ಬಂದಿಲ್ಲ. ಆದರೆ ಅಂತಿಮವಾಗಿ ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಚಾರವನ್ನು ಪಕ್ಷ ತೀರ್ಮಾನ ಮಾಡಲಿದೆ. ನಾನು ಮುಖ್ಯಮಂತ್ರಿ ಆಗುವುದಕ್ಕಿಂತ ಮುಖ್ಯವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ…
ಉಡುಪಿ: ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡಿರುವ ಕರ್ನಾಟಕದ ಕರಾವಳಿಯ ಕುವರಿ ಸಿನಿ ಶೆಟ್ಟಿಗೆ ಹುಟ್ಟೂರು ಉಡುಪಿಯಲ್ಲಿ ಮಂಗಳವಾರ ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಅದ್ಧೂರಿಯ ಸ್ವಾಗತ ಕೋರಲಾಯಿತು. ಈ ಸಂದರ್ಭ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹುಟ್ಟೂರು ಕರಾವಳಿಯಲ್ಲಿ ಸಿಕ್ಕ ಅದ್ಧೂರಿ ಸ್ವಾಗತದಿಂದ ಖುಷಿಯಾಗಿದೆ. ತವರಿನಲ್ಲಿ ಅಜ್ಜಿಯನ್ನು ಭೇಟಿಯಾಗಿದ್ದು ಸಂತಸವನ್ನು ಹೆಚ್ಚಿಸಿದೆ. ನನ್ನ ಸಾಧನೆಯ ಹಿಂದೆ ಅಜ್ಜಿಯ ಸ್ಪೂರ್ತಿ ತುಂಬಿದ ಮಾತುಗಳು ಹಾಗೂ ಪ್ರೇರಣೆ ಇದೆ ಎಂದರು. ಇದೇ ವೇಳೆ ಮಿಸ್ ವರ್ಲ್ಡ್ ಸ್ಪರ್ಧೆಗೆ ತಯಾರಾಗುತ್ತಿದ್ದು, ಕರಾವಳಿಯ ಜನರ ಪ್ರೀತಿ ಹಾಗೂ ಇಲ್ಲಿನ ದೈವ ದೇವರ ಆಶೀರ್ವಾದ ಬೇಕು ಎಂದರು. ಸಿನಿ ಶೆಟ್ಟಿ ಜೊತೆಗೆ ತಂದೆ ಸದಾನಂದ ಶೆಟ್ಟಿ ಹಾಗೂ ತಾಯಿ ಹೇಮಾ ಶೆಟ್ಟಿ ಜತೆಗಿದ್ದರು. ಸಾರೋಟು ಸಮಾರಂಭದ ಅಂಗಳ ತಲುಪುತ್ತಿದ್ದಂತೆ ಅಭಿಮಾನಿಗಳು ಫೋಟೊ ಕ್ಲಿಕ್ಕಿಸಿ, ಸೆಲ್ಫಿ ತೆಗೆದುಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…