Author: admin

ನವದೆಹಲಿ: ಗಡಿ ನಿಯಂತ್ರಣ ರೇಖೆ ಮತ್ತು ಜಮ್ಮು–ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಗಳಲ್ಲಿ ಫಿರಂಗಿ ದಾಳಿ ಹಾಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಕ್ಕಳು ಮತ್ತು ಒಬ್ಬರು ಯೋಧರು ಸೇರಿದಂತೆ ಕನಿಷ್ಠ 15 ಜನರು ಮೃತಪಟ್ಟು 43 ಜನರು ಗಾಯಗೊಂಡಿದ್ದಾರೆ. ಮೃತರನ್ನು ಬಲ್ವಿಂದರ್ ಕೌರ್ ಅಲಿಯಾಸ್ ರುಬಿ (33), ಮೊಹಮ್ಮದ್ ಜೈನ್ ಖಾನ್ (10), ಅವರ ಅಕ್ಕ ಜೋಯಾ ಖಾನ್ (12), ಮೊಹಮ್ಮದ್ ಅಕ್ರಮ್ (40), ಅಮ್ರಿಕ್ ಸಿಂಗ್ (55), ಮೊಹಮ್ಮದ್ ಇಕ್ಬಾಲ್ (45), ರಂಜೀತ್ ಸಿಂಗ್ (48), ಶಕೀಲಾ ಬಿ (40), ಅಮರ್ಜೀತ್ ಸಿಂಗ್ (47), ಮರಿಯಮ್ ಖಾಟೂನ್ (7), ವಿಹಾನ್ ಭಾರ್ಗವ್ (13) ಮತ್ತು ಮೊಹಮ್ಮದ್ ರಫಿ (40) ಮತ್ತು ಸೇನೆಯ ಲ್ಯಾನ್ಸ್ ನಾಯಕ್ ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸುತ್ತಿರುವ ಬಗ್ಗೆ ಭಾರತೀಯ ಸೇನೆಯು ಸಮಾನ ಪ್ರಮಾಣದಲ್ಲಿ…

Read More

ಬೀದರ್: ಔರಾದ್ ತಾಲ್ಲೂಕಿನ ಕುಡಿಯುವ ನೀರು ಪೂರೈಸಲು ಆಗ್ರಹಿಸಿ ತಾಲ್ಲೂಕಿನ ಸಂತಪೂರ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು ಗ್ರಾಮದ ಮಹಿಳೆಯರು ಸೇರಿದಂತೆ ಅನೇಕರು ಸಮಸ್ಯೆ ಹೇಳಿಕೊಳ್ಳಲು ಪಂಚಾಯಿತಿ ಕಚೇರಿಗೆ ಹೋದರೂ ಕೂಡ, ಸರಿಯಾದ ಸ್ಪಂದನೆ ದೊರಕಲಿಲ್ಲ, ಹೀಗಾಗಿ  ಸ್ಥಳದಲ್ಲೇ ಕೆಲ ಹೊತ್ತು ಧರಣಿ ನಡೆಸಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು. ವಿಷಯ ತಿಳಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರನ್ನು ಸಮಾಧಾನ ಮಾಡಿ ಆದಷ್ಟು ಬೇಗ ನೀರಿನ ವ್ಯವಸ್ಥೆ ಮಾಡಲು ಭರವಸೆ ನೀಡಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 07—05—2025 ಪ್ರಾದೇಶಿಕ ಹಂತದ ಒಂದು ದಿನದ ಕಾರ್ಯಾಗಾರ ನಡೆಯಿತು. IPR–Intellectual Property “ಬೌಧ್ಧಿಕ ಆಸ್ತಿಗಳ ಹಕ್ಕು”ಗಳು ಎಂಬ ವಿಷಯದ ಕುರಿತು ವಿವಿಧ ಪದವಿ ಕಾಲೇಜುಗಳ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೆ ತರಬೇತಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಪ್ರೇಮ್‌ ಸುಧಾ ಬಿ.ಜಿ., ಶ್ರೀ ಸಿದ್ಧಗಂಗಾ ಕಾಲೇಜು ಪ್ರಾಧ್ಯಾಪಕರು ಭಾಗವಹಿಸಿ ಮಾತನಾಡಿ, ಇಂದು ನಮ್ಮ ಚರಾಸ್ತಿ–ಸ್ಥಿರಾಸ್ತಿಗಳ ಇ ಸ್ವತ್ತು ಮಾಡಿಸಿಕೊಳ್ಳಲು ಎಲ್ಲರೂ ಶ್ರಮಿಸುತ್ತಿದ್ದೇವೆ. ಇತ್ತೀಚೆಗೆ ಜನಪ್ರೀಯತೆ ಪಡೆಯುತ್ತಿರುವ IPR ಎಂಬ ಬೌದ್ಧಿಕ ಆಸ್ತಿಗಳ ಹಕ್ಕುಗಳನ್ನು ಪಡೆಯುವುದು ಪ್ರಸ್ತುತ ಅನಿವಾರ್ಯ ಮತ್ತು ಅಗತ್ಯವಿದೆ. ಎಂಬುದರ ಬಗ್ಗೆ ಉದಾಹರಣೆ ಸಹಿತ, ಚಿತ್ರಸಹಿತ ವಿವರಣೆಗಳೊಂದಿಗೆ ತರಬೇತಿ ನೀಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನೀಡಿದ  ನಾಗಾರ್ಜುನ್ ಎಂ.ಜಿ IPR ಅನಾಲಿಸ್ಟ್ ಮತ್ತು ಬ್ರಾಂಡ್‌ ಗಳು ವ್ಯಾಪಾರಿ ಚಿನ್ಹೆಗಳನ್ನು ಹೊಂದಿದ ದಿನಬಳಕೆ ವಸ್ತುಗಳ ಪೇಟೆಂಟ್ ಪಡೆಯುವ ವಿಧಿ–ವಿಧಾನ ಮತ್ತು ಪ್ರಯೋಜನಗಳ ಬಗ್ಗೆ ತರಬೇತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ವಸಂತಾ ಟಿ.ಡಿ. ವಹಿಸಿಕೊಂಡು ಮಾತನಾಡಿ,…

Read More

ತುಮಕೂರು: ದಕ್ಷಿಣ ಕರ್ನಾಟಕದ ಏಕೈಕ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ 2025–26ನೇ ಸಾಲಿನ ಬಿ.ವಿ.ಎ–ಚಿತ್ರಕಲಾ ಪದವಿ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭವಾಗಿವೆ. ತುಮಕೂರು ನಗರದ ರೈಲ್ವೇ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದಲ್ಲಿ ನಡೆಯುತ್ತಿದೆ” ಈ ಕಾಲೇಜಿನಲ್ಲಿ ಕಳೆದ 30 ವರ್ಷಗಳಿಂದ ಬಿ.ವಿ.ಎ.–ಪೇಟಿಂಗ್ ಪದವಿ ಶಿಕ್ಷಣವನ್ನು ನೀಡಲಾಗುತ್ತಿದೆ. ಇದರೊಂದಿಗೆ 2024—25 ನೇ ಸಾಲಿನಿಂದ ಬಡ–ವಿದ್ಯಾರ್ಥಿಗಳಿಗಾಗಿ ಸರ್ಕಾರದ ಅನುಮತಿ ಮೇರೆಗೆ ಹೊಸದಾಗಿ ಬಿ.ವಿಎ–ಅನಿಮೇಶನ್ ಪದವಿ ಮತ್ತು ಬಿ.ವಿ.ಎ–ಗ್ರಾಫಿಕ್ಸ್ ಡಿಸೈನ್ ಪದವಿ ಕೋರ್ಸ್ ಗಳನ್ನು ಪ್ರಾರಂಭಿಸಲಾಗಿದೆ. ಪ್ರತಿವರ್ಷವೂ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಈ ಕಾಲೇಜಿಗೆ ಚಿತ್ರಕಲಾ ಪದವಿ ಶಿಕ್ಷಣ ಬಯಸಿ ಅನೇಕ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಈ ಕಾಲೇಜಿನಲ್ಲಿ ಎಲ್ಲ ಮೂಲಭೂತ ಸೌಕರ್ಯಗಳ ಜೊತೆಗೆ ನುರಿತ ಅಧ್ಯಾಪಕರಿದ್ದು, ಗುಣಮಟ್ಟದ ಕಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಪದವಿಗಳು ವಿವಿಧ ವೃತ್ತಿ ಕೌಶಲ್ಯಗಳನ್ನು ಒಳಗೊಂಡಿದ್ದು, ವಿವಿಧ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ. ಹಾಗೂ ಪದವಿ ಪಡೆದ ವಿದ್ಯಾರ್ಥಿಗಳು ಸ್ವಯಂ ಉದ್ಯೋಗ ಕೈಗೊಳ್ಳಬಹುದಾಗಿದೆ.…

Read More

ಶಿವಮೊಗ್ಗದಲ್ಲಿ ‘ಉದಯ ಸೂರ್ಯ’ ಚಲನಚಿತ್ರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.  ಕಾರ್ಯಕ್ರಮವನ್ನು ಶಿವಮೊಗ್ಗದ ಎಸ್ ಪಿ ಅನಿಲ್ ಕುಮಾರ್ ಬೊಮ್ಮಾರೆಡ್ಡಿ ಅವರು ನಡೆಸಿಕೊಟ್ಟರು. ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ  ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಈ ವಿಶೇಷ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಬೊಮ್ಮಾರೆಡ್ಡಿ ಪ್ರಮುಖ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಇವರ ಸಾನಿಧ್ಯದಲ್ಲಿ ಚಿತ್ರದ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಳ್ಳಲಾಯಿತು ಮತ್ತು ಸಾರ್ವಜನಿಕತೆಗೆ ಚಲನಚಿತ್ರದ ಸಂದೇಶವನ್ನು ತಲುಪಿಸುವ ನಿಟ್ಟಿನಲ್ಲಿ ಈ ಘಟನೆ ಗಮನಸೆಳೆಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಪಾವಗಡ: ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯ  9 ನೇ ತರಗತಿಯ ವಿದ್ಯಾರ್ಥಿಯಾದ ಹೃತಿಕ್ ಹೆಚ್. (ತಂದೆ ಹನುಮಂತರಾಯಪ್ಪ) ಇವರು DSERT ವತಿಯಿಂದ  ನಡೆದ  ಬಾಲ  ವೈಜ್ಞಾನಿಕ್ ಪ್ರದರ್ಶಿನಿ ಅಡಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯ ವಿಜ್ಞಾನ ಮಾದರಿಯನ್ನು  ಪ್ರದರ್ಶಿಸಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಶಾಲೆಯ ಮುಖ್ಯಶಿಕ್ಷಕರು, ಸಹಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ವರದಿ: ನಂದೀಶ್ ನಾಯ್ಕ ಪಿ. ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಕಾಂತಾರ ಚಾಪ್ಟರ್ 1 ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಸಿನಿಮಾ ಸೆಟ್ ನಲ್ಲಿದ್ದ ಜೂನಿಯರ್ ಆರ್ಟಿಸ್ಟ್  ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಮೃತಪಟ್ಟವರಾಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಇದರಿಂದ ಸಿನಿಮಾ ತಂಡಕ್ಕೆ ಶೂಟಿಂಗ್ ನಡೆಸಲು ಹಿನ್ನಡೆಯಾಗಿದೆ. ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದಿದ್ದು, ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಚಿಕ್ಕಮಗಳೂರು:  ಮೂಡಿಗೆರೆ ಪಟ್ಟಣದ ಸಮೀಪವೇ ಹಸುವೊಂದನ್ನು ಹುಲಿ ಕೊಂದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮೂಡಿಗೆರೆ ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಕುನ್ನಹಳ್ಳಿ ಗ್ರಾಮದಲ್ಲಿ ಹುಲಿದಾಳಿಗೆ ಹಸು ಬಲಿಯಾಗಿದೆ. ಕುನ್ನಹಳ್ಳಿ ಗ್ರಾಮದ ಕೃಷಿಕ ಹಳೇಮೂಡಿಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೆ.ಆರ್.ಶಿವಾನಂದ ಅವರ ಭತ್ತದ ಗದ್ದೆಯಲ್ಲಿ ಭಾನುವಾರ ಹಸುವೊಂದರ ಕಳೆಬರ ಪತ್ತೆಯಾಗಿತ್ತು. ಪರಿಶೀಲಿಸಲಾಗಿ ಅದು ಗ್ರಾಮದ ಕೆ.ಸಿ.ಪ್ರದೀಪ್ ಎಂಬುವವರ ಸಿಂಧಿ ಹಸುವಾಗಿತ್ತು. ಸ್ಥಳದಲ್ಲಿ ಹುಲಿ ಹೆಜ್ಜೆ ಹೋಲುವ ಗುರುತುಗಳು ಕಂಡಬಂದಿದ್ದರಿಂದ ಅನುಮಾನಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಮೂಡಿಗೆರೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪಶುಸಂಗೋಪನಾ ಇಲಾಖೆ ವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದಾಗ ಇದು ಹುಲಿ ಹೆಜ್ಜೆ ಎಂಬುದು ಖಚಿತವಾಗಿದ್ದು, ಹುಲಿದಾಳಿಯಿಂದ ಹಸು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಹಸುವಿನ ಕುತ್ತಿಗೆ ಭಾಗದಲ್ಲಿ ಹುಲಿದಾಳಿ ಮಾಡಿರುವ ಗುರುತು ಪತ್ತೆಯಾಗಿದೆ. ಪಶುಸಂಗೋಪನಾ ಇಲಾಖೆ ವೈದ್ಯರು ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಬೆಂಗಳೂರು: ನಗರದ ಕೆಂಪೇಗೌಡ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ ಪೆಕ್ಟರ್ ಶಿವಾಜಿ ರಾವ್ ಮತ್ತು ಪೊಲೀಸ್ ಸಬ್ ಇನ್ಸ್‌ ಪೆಕ್ಟರ್ ಶಿವಾನಂದ್ ಅವರು 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆವಲಹಳ್ಳಿ ನಿವಾಸಿ ಕೇಶವಮೂರ್ತಿ ಎಂಬುವವರು ಫೆಬ್ರವರಿ 2025ರಲ್ಲಿ ಕೆಂಪೇಗೌಡ ನಗರ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕೈಬಿಡಲು ಆರೋಪಿ ಪೊಲೀಸ್ ಅಧಿಕಾರಿಗಳು ಬೇಡಿಕೆ ಇಟ್ಟಿದ್ದ 6 ಲಕ್ಷ ರೂ. ಲಂಚವನ್ನು ಕೊಡಲು ಸಾಧ್ಯವಾಗದೆ ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿದ್ದರು. ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅಪರಾಧವನ್ನು ದಾಖಲಿಸಿದ ನಂತರ ಲೋಕಾಯುಕ್ತ ಪೊಲೀಸರು ಬಲೆ ಬೀಸಿದರು. ಅದರಂತೆ ಇನ್ಸ್‌ಪೆಕ್ಟರ್ ಶಿವಾಜಿ ರಾವ್ ಮತ್ತು ಸಬ್ ಇನ್ಸ್‌ಪೆಕ್ಟರ್ ಶಿವಾನಂದ್ ಇಬ್ಬರನ್ನೂ 1 ಲಕ್ಷ ರೂ. ಲಂಚದೊಂದಿಗೆ ಬಂಧಿಸಿದ್ದಾರೆ. ಕೆಂಪೇಗೌಡ ನಗರದ ಉದ್ಯಮಿ ಉತ್ತಮ್ ಚಂದ್ ಮಾರು ಎಂಬುವರು ಕೇಶವಮೂರ್ತಿ ವಿರುದ್ಧ 2025ರ ಫೆಬ್ರವರಿ 20ರಂದು ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಾರ್…

Read More

ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಆರೋಪದ ಮೇಲೆ ಮೈಸೂರು ಕೇಂದ್ರ ಕಾರಾಗೃಹದ ವಾರ್ಡನ್ ವೊಬ್ಬರನ್ನು ಅಮಾನತುಗೊಳಿಸಲಾಗಿದೆ. ಮಾಜಿ ಸೇನಾಧಿಕಾರಿ 45 ವರ್ಷದ ಎಚ್.ಎನ್ ಮಧುಕುಮಾರ್ ಅಮಾನತುಗೊಂಡವರಾಗಿದ್ದಾರೆ.  ಕಳೆದ ನಾಲ್ಕು ವರ್ಷಗಳಿಂದ ಕಾರಾಗೃಹ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮಧುಕುಮಾರ್ ನಿವಾಸದಲ್ಲಿ ರೆಕಾರ್ಡ್ ಮಾಡಲಾದ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಏಪ್ರಿಲ್ 28ರಂದು ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದ ಸಂದರ್ಭದಲ್ಲಿ ವೇದಿಕೆಯಲ್ಲಿ ಪೊಲೀಸ್ ಅಧಿಕಾರಿಯ ಮೇಲೆ ಕೈ ಎತ್ತಿದ್ದನ್ನು ಕುಮಾರ್ ಖಂಡಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ವಿಷಯ ಬೆಳಕಿಗೆ ಬಂದ ತಕ್ಷಣ ನಿನ್ನ ಸಂಜೆ ವಾರ್ಡನ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಮೈಸೂರು ಕೇಂದ್ರ ಕಾರಾಗೃಹದ ಅಧೀಕ್ಷಕ ಬಿ.ಎಸ್. ರಮೇಶ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More