Subscribe to Updates
Get the latest creative news from FooBar about art, design and business.
- ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
- ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ
- ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ
- ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
- ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
- ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !
- ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
- ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್
Author: admin
ಗುಬ್ಬಿ: ತಾಲೂಕಿನ ಮಂಚಲದೊರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಗಿಡಗಳನ್ನು ನೀಡುವುದರ ಮೂಲಕ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ಬಗ್ಗೆ ಕಾಲೇಜು ಮತ್ತು ಪ್ರೌಢಶಾಲಾ ಮಕ್ಕಳಿಗೆ ಯೋಜನೆಯ ಕೃಷಿ ಮೇಲ್ವಿಚಾರಕರಾದ ರಘುರಾಜು ಮಾತನಾಡಿ, ಪರಿಸರ ಸಂರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸಲು ಪ್ರತಿಯೊಬ್ಬರೂ ಒಂದೊಂದು ಗಿಡ-ಮರಗಳನ್ನು ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದ್ದು, ಪರಿಸರ ಉಳಿವಿಗಾಗಿ ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಇಂತಹ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಅವರ ಸಲಹೆ ಸೂಚನೆ ಮೇರೆಗೆ ಪ್ರತಿಯೊಂದು ತಾಲೂಕನ ವಿವಿಧ ಕಡೆ 2,000 ಗಿಡಗಳನ್ನು ನೆಡಲಾಗಿದೆ. ಶಾಲಾ ಮಕ್ಕಳಿಗೆ ದತ್ತು ನೀಡಿ ಪಾಲನೆ-ಪೋಷಣೆ ಮಾಡಿ ಬೆಳೆಸುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಮಂಚಲದೊರೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಿದ್ದಗಂಗಮ್ಮ , ಉಪಾಧ್ಯಕ್ಷರಾದ ಕವಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪ್ರಸಾದ್, ಬಸವರಾಜು, ಮುಖ್ಯ ಶಿಕ್ಷಕರಾದ ಚೇತನ್, ಗ್ರಾಮ ಪಂಚಾಯತಿ…
ತುರುವೇಕೆರೆ: ಮಾಯಸಂದ್ರದವರಾದ ಚಿತ್ರನಟ ಜಗ್ಗೇಶ್ ಅವರನ್ನು ಬಿಜೆಪಿ ಪಕ್ಷ ರಾಜ್ಯಸಭೆಗೆ ಆಯ್ಕೆ ಮಾಡಿರೋದು ನನಗೆ ತುಂಬಾ ಸಂತೋಷವಾಗಿದೆ.ಅವರಿಗೆ ನಮ್ಮ ತಾಲ್ಲೂಕಿನ ಜನರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮಾತನಾಡಿದ ಶಾಸಕ ಮಸಾಲೆ ಜಯರಾಮ್ ತಿಳಿಸಿದರು. ತಾಲ್ಲೂಕಿನ ಮಾಯಸಂದ್ರದಲ್ಲಿ ಕಲ್ಪತರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಕಛೇರಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಮಸಾಲೆ ಜಯರಾಮ್, ಕುರಿ ಸಾಕಾಣೆಯಲ್ಲಿ ನಮ್ಮ ದೇಶ ಎರಡನೇಯ ಸ್ಥಾನದಲ್ಲಿದೆ. ಕುರಿ ಸಾಗಾಣಿಕೆಗೆ ಹೆಚ್ಚಿನ ಉತ್ತೇಜನ ನೀಡಬೇಕಿದೆ ಎಂದು ಹೇಳಿದರು. ರೈತರ ಒಳಿತಿಗಾಗಿ ಈ ಸಂಘ ತೆಗೆದುಕೊಳ್ಳುವ ಕಾರ್ಯಕ್ರಮಗಳಿಗೆ ನನ್ನ ಸಹಕಾರ ಇರಲಿದೆ. ಸದಾ ನಿಮ್ಮ ಜೊತೆ ನಾನು ಇರುತ್ತೇನೆ ಎಂದು ಹೇಳಿದರು. ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಕುರಿ ಸಾಗಾಣಿಕೆಯಿಂದ ಪ್ರತಿ ಹಂತದಲ್ಲೂ ಲಾಭ ಕಾಣಬಹುದು. ಕುರಿಯ ಮಾಂಸಕ್ಕೆ ಉತ್ತಮ ಬೇಡಿಕೆ ಇದೆ. ಅದರ ಉಣ್ಣೆಯಲ್ಲೂ ಹಣ ಗಳಿಸಬಹುದು ಜೊತೆಗೆ ಅದರ ಗೊಬ್ಬರದಲ್ಲೂ ರೈತನಿಗೆ ಲಾಭವಿದೆ ಎಂದರು. ರೈತರು ಸರ್ಕಾರದ ಸವಲತ್ತುಗಳನ್ನು ಪಡೆಯುವ…
ನಿರ್ಮಾಣ ಹಂತದಲ್ಲಿರುವ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್)ನ 7ನೇ ಮಹಡಿಯಿಂದ ಬಿದ್ದು ವೈದ್ಯರೊಬ್ಬರು ಮೃತಟ್ಟಿರುವ ಘಟನೆ ಅಸ್ಸಾಂನ ಮ್ರೂಪ್ ಜಿಲ್ಲೆಯಲ್ಲಿ ನಡೆದಿದೆ. ಫಲ್ಗು ಪ್ರತಿಮ್ ದಾಸ್ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ವೈದ್ಯ. ಕಟ್ಟಡ ಕಾಮಗಾರಿಯಲ್ಲಿ ನಿರತರಾಗಿದ್ದ ಕಾರ್ಮಿಕರಿ ಭಾರೀ ಸದ್ದು ಕೇಳಿ ಬಂದಿದೆ. ಕೂಡಲೇ ಸ್ಥಳಕ್ಕೆ ಹೋಗಿ ನೊಡಲಾಗಿ ವೈದ್ಯರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ವೈದ್ಯರು ಕಟ್ಟಡದ ಏಳನೇ ಮಹಡಿಯಿಂದ ಸ್ವತಃ ಬಿದ್ದಿದ್ದಾರೆಯೇ, ಆತ್ಮಹತ್ಯೆಯೇ ಅಥವಾ ಅಪಘಾತವೋ ಸದ್ಯಕ್ಕೆ ತಿಳಿದುಬಂದಿಲ್ಲ. ತನಿಖೆಯ ಸ್ಪಷ್ಟವಾಗಲಿದೆ ಎಂದು ಪೊಲೀಸ್ ತಿಳಿಸಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ರಾಜ್ಯದಲ್ಲಿ ವಿವಾದ ಎಬ್ಬಿಸಿರುವ ಜಿಲ್ಲಾಯ ಶ್ರೀರಂಗಪಟ್ಟಣದಲ್ಲಿರುವ ಟಿಪ್ಪು ಸುಲ್ತಾನ್ ಕಾಲದಲ್ಲಿ ನಿರ್ಮಾಣವಾಗಿರುವ ಜಾಮಿಯಾ ಮಸೀದಿ ವಿವಾದಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದು ಮಸೀದಿಯಲ್ಲ, ಮಂದಿರ ಅನ್ನುವ ಹಿಂದೂ ಸಂಘಟನೆಗಳ ವಾದಕ್ಕೆ ಇದೀಗ ಆರ್ಕಿಯಾಲಜಿ ಸರ್ವೇ ಆಫ್ ಮೈಸೂರು ಪುಸ್ತಕದಲ್ಲಿ ಮಂದಿರವೆಂದು ಉಲ್ಲೇಖ ಮಾಡಿರುವುದು ಬೆಳಕಿಗೆ ಬಂದಿದೆ. ಈ ದಾಖಲೆಯೊಂದಿಗೆ ಇದೀಗ ಹಿಂದೂ ಸಂಘಟನೆಗಳು ಕಾನೂನು ಹೋರಾಟಕ್ಕೆ ಮುಂದಾಗಿವೆ. ಕಳೆದ ಒಂದು ವಾರದಿಂದ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ವಿವಾದ, ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ವಿವಾದದ ಸಂಬಂಧ ದಶಕಗಳ ಹಿಂದಿನ ಪುಸ್ತಕವೊಂದು ಪತ್ತೆಯಾಗಿದ್ದು, ಈ ಮೂಲಕ ಪುರಾತತ್ವ ಇಲಾಖೆಗೆ ಸಂಬಂಧಿಸಿದ ದಾಖಲೆ ಸಿಕ್ಕಿದಂತಾಗಿದೆ. ಕೆಲ ದಿನಗಳ ಹಿಂದಷ್ಟೇ ಬಾಲಗಣಪತಿ ಭಟ್ಟ ಎಂಬುವರು ಬರೆದಿದ್ದ ಮೂಡಲ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಸುಪ್ರಭಾತ ಎಂಬ ಪುಸ್ತಕ ದೊರೆತಿತ್ತು. ದಶಕಗಳ ಹಿಂದೆಯೇ ಬರೆಯಲಾಗಿದ್ದ ಈ ಪುಸ್ತಕದಲ್ಲಿ, ಟಿಪ್ಪು ಸುಲ್ತಾನ್ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನವನ್ನು ಕೆಡವಿ ಅಲ್ಲಿನ ಅರ್ಚಕರ ಕೈ ಕತ್ತರಿಸಿದ್ದಲ್ಲದೆ, ಅಲ್ಲಿದ್ದ…
ಹೃದಯಾಘಾತ ಎನ್ನುವುದು ಪ್ರಸ್ತುತ ಯುವ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಯಾಗಿದೆ. ನಮ್ಮಲ್ಲಿ ಸಾಮಾನ್ಯ ರೀತಿಯಲ್ಲಿ ಕಾಣಿಸಿಕೊಳ್ಳುವ ಸಮಸ್ಯೆ ಏಕಾಏಕಿ ಪ್ರಾಣವನ್ನೇ ತೆಗೆದು ಭಾರೀ ನಷ್ಟವನ್ನುಂಟು ಮಾಡುವ ಹೃದಯಾಘಾತದ ಬಗ್ಗೆ ನಾವು ತಿಳಿದುಕೊಳ್ಳಬೇಕಿರುವುದು ಅವಶ್ಯಕವಾಗಿದೆ. ಹೃದಯಾಘಾತವಾಗುವುದಕ್ಕೂ ಮೊದಲು ಎದೆ ಸ್ವಲ್ಪ ನೋವಾಗುತ್ತದೆ. ಇದು ಮೊದಲ ಲಕ್ಷಣವಾಗಿದೆ. ಆ ಬಳಿಕ ಎದೆ ಭಾರವಾದಂತೆ ಭಾಸವಾಗುತ್ತದೆ. ಎದೆಯಲ್ಲಿ ಏನೋ ಸಂಕಟ ಎಂಬಂತೆ ಅನ್ನಿಸುತ್ತದೆ. ಇದು ಕೆಲವು ನಿಮಿಷಗಳವರೆಗೆ ಇರುತ್ತದೆ. ಆ ಬಳಿಕ ಬೆನ್ನು, ಕುತ್ತಿಗೆ, ದವಡೆ ಹೊಟ್ಟೆಯಲ್ಲಿ ಕೂಡ ನೋವು ಆರಂಭವಾಗಿ ಮತ್ತೆ ಸಹಜ ಸ್ಥಿತಿಗೆ ಬರುತ್ತದೆ. ಮೇಲೆ ಹೇಳಲಾದ ಎಲ್ಲ ಲಕ್ಷಣಗಳ ಬಳಿಕ ಏಕಾಏಕಿ ಹೃದಯಾಘಾತವಾಗುತ್ತದೆ. ಈ ವೇಳೆ ಎದೆಯಲ್ಲಿ ಭಾರೀ ನೋವು, ಬೆವರು, ಹೆದರಿಕೆಯಾಗುತ್ತದೆ. ಇನ್ನು ಕೆಲವರು ಈ ಸಂದರ್ಭದಲ್ಲಿ ವಾಂತಿ ಮಾಡಿಕೊಳ್ಳುವ ಸಾಧ್ಯತೆಗಳು ಕೂಡ ಇವೆ. ಈ ಎಲ್ಲ ಲಕ್ಷಣಗಳ ಬಳಿಕ 10ರಿಂದ 15 ನಿಮಿಷದಲ್ಲಿ ಇದು ಸುಧಾರಿಸದೇ ಹೋದರೆ, ಅದು ದೊಡ್ಡ ಹೃದಯಾಘಾತದ ಲಕ್ಷಣವಾಗಿದೆ. ಈ ವೇಳೆ ಕೂಡಲೇ ಆಸ್ಪತ್ರೆಗೆ…
ತುರುವೇಕೆರೆ: ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೊವೊಂದು ಮಗುಚಿ ಬಿದ್ದಿದ್ದು, ಪರಿಣಾಮವಾಗಿ ವಾಹನ ನಜ್ಜುಗುಜ್ಜಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬದರಿಕಾಶ್ರಮ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಗ್ಗೇಜ್ ಟೆಂಪೋ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತುರುವೇಕೆರೆಯಿಂದ ಮಾಯಸಂದ್ರಕ್ಕೆ ಕೊಬ್ಬರಿ ಚೀಲ ತುಂಬಿಕೊಂಡು ವಾಹನ ಹೋಗುತ್ತಿತ್ತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ತುರುವೇಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ರಾಷ್ಟ್ರೀಯ ತನಿಖಾ ದಳ ಎನ್ಐಎ ಇಂದು ತಮಿಳುನಾಡು ಹಾಗೂ ಪುದುಚೇರಿಯ ಕೆಲವು ಭಾಗಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಉಗ್ರ ಜಾಲಗಳ ಬೆನ್ನತ್ತಿದೆ. ತಮಿಳುನಾಡಿನ ಚೆನ್ನೈ ನೆರೆಯ ಪುದುಚೇರಿ ಕರೆಕಲ್ಲ್ ಮತ್ತು ಮೈಲ್ನಾಡು ತುರೈ ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ. ಎನ್ಐಎನ ಭಯೋತ್ಪಾದನಾ ಘಟಕದ ಅಧಿಕಾರಿಗಳು ದಿಡೀರ್ ಕಾರ್ಯಾಚರಣೆ ನಡೆಸಿದ್ದು, ಕೆಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇತ್ತೀಚೆಗೆ ಜಮ್ಮು ಕಾಶ್ಮೀರದ ಪೊಲೀಸರು ಬೆಂಗಳೂರಿನಲ್ಲಿ ಹಿಜ್ಬುಲ್ ಮುಜಾಯಿದ್ದೀನ್ ಉಗ್ರ ಸಂಘಟನೆಗೆ ಸೇರಿದ್ದ ಶಂಕಿತನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಕರ್ನಾಟಕದ ಮಂಗಳೂರು, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸ್ಯಾಟ್ಲೈಟ್ ಬಳಕೆಯ ಸಿಗ್ನಲ್ಗಳು ಪತ್ತೆಯಾಗಿದ್ದವು. ಹೀಗಾಗಿ ಕೇಂದ್ರ ತನಿಖಾ ಸಂಸ್ಥೆ ತನ್ನ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ. ಕಳೆದೆರಡು ವರ್ಷಗಳ ಹಿಂದೆ ಸರಣಿ ಕಾರ್ಯಾಚರಣೆ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿ ಮತ್ತು ಕರ್ನಾಟಕದಲ್ಲಿ ಅಡಗಿದ್ದ ಕೆಲವು ಉಗ್ರರನ್ನು ಎಡೆಮುರಿ ಕಟ್ಟಿತ್ತು. ಹೀಗಾಗಿ ಒಂದಷ್ಟು ದಿನ ಉಗ್ರ ಚಟುವಟಿಕೆಗಳು ಹತೋಟಿಯಲ್ಲಿದ್ದವು. ಆದರೆ ಈಗ ಮತ್ತೆ…
ತುಮಕೂರು: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ನೀಡಿರುವ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತುಮಕೂರು ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಮೈಕ್ ಬಳಕೆ ವಿಚಾರದಲ್ಲಿ, ಬಿಜೆಪಿಗೆ ಸಾಧ್ಯವಾಗದಿದ್ದರೆ, ಅಧಿಕಾರದಿಂದ ಕೆಳಗಿಳಿಯಲಿ, ನನಗೆ 24 ಗಂಟೆಗಳ ಸಮಯ ನೀಡಲಿ, ನ್ಯಾಯ ಪಾಲಿಸದವರಿಗೆ ಗುಂಡು ಹೊಡೆದು ಆದೇಶ ಜಾರಿಗೊಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಮುತಾಲಿಕ್ ಅವರನ್ನು ತಕ್ಷಣವೇ ಬಂಧಿಸಿ ಕ್ರಮಕೈಗೊಳ್ಳಬೇಕು ಎಂದು ವೆಲ್ಫೆರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಕೊರಟಗೆರೆ : ಬೆಟ್ಟ ಶಂಭೋನಹಳ್ಳಿ ಗ್ರಾಮದ ಜಮೀನಿನ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೇ, ಹಳ್ಳಗಳನ್ನು ಹಾದು ಹೋಗುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಇದರ ವಿರುದ್ಧ ಇಲ್ಲಿನ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಟ್ಟ ಶಂಭೋನಹಳ್ಳಿ ಗ್ರಾಮದ ಸರ್ವೇ ನಂಬರ್ 52,10,11,14 ,15ರಲ್ಲಿ ಗ್ರಾಮದ ಮುಖ್ಯ ರಸ್ತೆಯಿಂದ ನಕಾಶೆ ರಸ್ತೆ ಇರುವ ಕಾರಣ ಗ್ರಾಮದ ರೈತರು ಮತ್ತು ಸಾರ್ವಜನಿಕರು ತಹಶೀಲ್ದಾರ್ ರವರಿಗೆ ದಿನಾಂಕ 17/06/2020ರ ಹಿಂದಿನಿಂದಲೂ ಮನವಿ ಸಲ್ಲಿಸಿದ್ದರು. ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಸಮಸ್ಯೆಯನ್ನ ಕಾನೂನು ಬದ್ಧವಾಗಿ ಪರಿಹರಿಸಲು ವಿಫಲರಾಗಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಪಕ್ಕ ಜಾಮೀನಿನ ಮಾಲೀಕರು ನಕಾಶೆ ರಸ್ತೆಯನ್ನ ಒತ್ತುವರಿ ಮಾಡಿ ರೈತರಿಗೆ ನಿರಾಕರಣ ಸಮಸ್ಯೆಯನ್ನು ಮಾಡುತ್ತಿರುವುದು ಕಂಡು ಬಂದಿದೆ. ಮೂಲ ನಕಾಶೆ ರಸ್ತೆ ಪಕ್ಕದಲ್ಲಿಯೇ ಹಳ್ಳ ಒಂದು ಹಾದು ಹೋಗುತ್ತಿದ್ದು ಈ ಹಳ್ಳದಲ್ಲಿಯೆ ಓಡಡಾಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗ್ರಾಮಸ್ಥರಾದ ಪಾರ್ವತಮ್ಮ ಮಾತನಾಡಿ, ನಾವು…
ಕೊಲ್ಕೋತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಬಹುದಿತ್ತು. ಆದರೆ, ಕೋವಿಡ್ ಎರಡನೇ ಅಲೆ ಬಂದಿದ್ದರಿಂದ ಸಮಸ್ಯೆಯಾಯಿತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ಆದರೆ, ಕೋವಿಡ್ ಎರಡನೇ ಅಲೆಯ ಕಾರಣ ಬಿಜೆಪಿಗೆ ಪ್ರಚಾರ ನಡೆಸಲು ತೊಂದರೆಯಾಯಿತು ಎಂದು ಹೇಳಿಕೊಂಡಿದ್ದಾರೆ. ದೇಶದಲ್ಲಿ ಎರಡನೇ ಅಲೆ ಕಾರಣ ಲಾಕ್ಡೌನ್ ಹಾಗೂ ಕೋವಿಡ್ ಮಾರ್ಗಸೂಚಿ ಹೇರಿಕೆ ಮಾಡಲಾಗಿತ್ತು. ಹೀಗಾಗಿ, ನಮ್ಮ ಚುನಾವಣಾ ಪ್ರಚಾರದ ಕಾರ್ಯ ಸರಿಯಾಗಿ ನಡೆಸಲು ಆಗಲಿಲ್ಲ ಎಂದು ನಡ್ಡಾ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು ಎಂಟು ಹಂತಗಳಲ್ಲಿ ಚುನಾವಣೆ ನಡೆದಿತ್ತು. ನಾಲ್ಕನೇ ಹಂತದ ಕ್ಷೇತ್ರಗಳಿಗೆ ಮತದಾನ ನಡೆಯುವ ಹೊತ್ತಿಗೆ ಕೋವಿಡ್ ಅಲೆ ಹೆಚ್ಚಾಗಿದ್ದರಿಂದ ಕೆಲವೊಂದು ಪ್ರದೇಶಗಳಲ್ಲಿ ಸರಿಯಾಗಿ ಪ್ರಚಾರ ನಡೆಸಲು ಸಾಧ್ಯವಾಗಲಿಲ್ಲ ಎಂದರು. ಪಶ್ಚಿಮ ಬಂಗಾಳದಲ್ಲಿ ನಮ್ಮ ಪ್ರಯತ್ನ ಯಾವುದೇ ಕಾರಣಕ್ಕೂ ನಿಲ್ಲಲ್ಲ ಎಂದಿರುವ ಅವರು, ಬರುವ ದಿನಗಳಲ್ಲಿ ಖಂಡಿತವಾಗಿ ತೃಣಮೂಲ ಕಾಂಗ್ರೆಸ್ ಸೋಲಿಸಿ, ನಮ್ಮ ಪಕ್ಷವನ್ನ ಅಧಿಕಾರಕ್ಕೆ ತರುತ್ತೇವೆ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…