Subscribe to Updates
Get the latest creative news from FooBar about art, design and business.
- 2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ
- ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ
- ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
- 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
- ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
- ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
- ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
Author: admin
ಬೆಂಗಳೂರು : ಗ್ರಾಮೀಣ ಪ್ರದೇಶಗಳಲ್ಲಿ ಮನೆಬಾಗಿಲಿಗೆ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವ ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆಗೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ನೆಗಡಿ, ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಂದ ಹಿಡಿದು ಮಧುಮೇಹ, ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಗಂಭೀರ ಕಾಯಿಲೆಗಳಿಗೂ ವೈದ್ಯಕೀಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಜನವರಿ 1 ರಿಂದ ರಾಜ್ಯದಲ್ಲಿ ಮೊದಲ ಹಂತವಾಗಿ ಬೀದರ್, ಚಾಮರಾಜನಗರ, ಚಿಕ್ಕಮಗಳೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆ ಜಾರಿಗೆ ತರಲಿದೆ. ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆಗಾಗಿ ಬಜೆಟ್ ನಲ್ಲಿ 11 ಕೋಟಿ ರೂ. ಅನುದಾನ ಮೀಸಲಿಡಲಾಗಿತ್ತು. ಯೋಜನೆಯಡಿ ಅಗತ್ಯ ವೈದ್ಯಕೀಯ ಉಪಕರಣಗಳೊಂದಿಗೆ ವೈದ್ಯರು, ಶುಶ್ರೂಷಕರು ಹಾಗೂ ವೈದ್ಯಕೀಯ ಸಿಬ್ಬಂದಿ ಸಂಚಾರಿ ಕ್ಲಿನಿಕ್ ಗಳ ಮೂಲಕ ಜನರ ಮನೆ ಬಾಗಿಲಿಗೆ ತೆರಳಿ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಚಳಿಗಾಲದಲ್ಲಿ ದೇಹದಲ್ಲಿ ಶಾಖವನ್ನು ಉತ್ಪಾದಿಸುವ ಮಸಾಲೆಗಳನ್ನು ಸೇವಿಸುವ ಅಗತ್ಯವಿದೆ, ಅಂಥ ಮಸಾಲೆ ಪದಾರ್ಥಗಳಲ್ಲಿ ಬೆಳ್ಳುಳ್ಳಿಯೂ ಒಂದು. ಚಳಿಗಾಲದಲ್ಲಿ ನೆಗಡಿ, ಜ್ವರ ಮತ್ತು ಸೋಂಖುಗಳು ಕಾಡುವುದು ಸಾಮಾನ್ಯ. ಇವನ್ನೆಲ್ಲ ಎದುರಿಸಲು ರೋಗನಿರೋಧಕ ಶಕ್ತಿ ಅವಶ್ಯ. ಋತುಮಾನಕ್ಕೆ ಅನುಸಾರ ಆಹಾರ ತೆಗೆದುಕೊಳ್ಳಬೇಕು. ಚಳಿಗಾಲದಲ್ಲಿ ಊಟದಲ್ಲಿ ಕಾಳು ಸೊಪ್ಪು-ತರಕಾರಿಗಳು ಮತ್ತು ಆರೋಗ್ಯಕರ ಮಸಾಲೆ ಇರಬೇಕು. ಬೆಳ್ಳುಳ್ಳಿ ವ್ಯಾಪಕವಾಗಿ ಬಳಕೆಯಾಗುವ ಮಸಾಲೆ ಪದಾರ್ಥ. ಇದರಲ್ಲಿ ವಿಟಮಿನ್‌ಗಳು, ಖನಿಜಗಳು, ಕ್ಯಾಲ್ಸಿಯಂ ಮತ್ತು ಕಬ್ಬಿಣದಲ್ಲಿ ಹೇರಳವಾಗಿವೆ. ಬೆಳ್ಳುಳ್ಳಿ ಶೀತ ಮತ್ತು ಕೆಮ್ಮನ್ನು ತಡೆಯುತ್ತದೆ. ಸೈನಸೈಟಿಸ್, ಶೀತ ಮತ್ತು ಜ್ವರದ ವಿರುದ್ಧ ಹೋರಾಡಲು ಬಿಸಿ ಸಾರು ಮತ್ತು ಸೂಪ್‌ಗಳಿಗೆ ಬೆಳ್ಳುಳ್ಳಿ ಸೇರಿಸಿದರೆ ಶಮನ ಕಾಣುವುದು. ಬೆಳ್ಳುಳ್ಳಿ ಸೇವನೆ ತೂಕ ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ದೇಹವನ್ನು ನಿರ್ವಿಷಗೊಳಿಸಲು ಮತ್ತು ಚಯಾಪಚಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಉಸಿರಾಟ ಮತ್ತು ಶ್ವಾಸಕೋಶದ ಆರೋಗ್ಯಕ್ಕೆ ಬೆಳ್ಳುಳ್ಲೀ ಉತ್ತಮ. ಇದು ಚಳಿಗಾಲದಲ್ಲಿ ಜ್ವರ ಮತ್ತು ನೋಯುತ್ತಿರುವ ಗಂಟಲಿನ ಸಮಸ್ಯೆಯನ್ನು ಬಗೆಹರಿಸುತ್ತದೆ. ಚಳಿಗಾಲದಲ್ಲಿ ಹೃದಯಾಘಾತದ ಸಾಧ್ಯತೆ ಹೆಚ್ಚಾಗಿರುತ್ತದೆ. ಹೃದಯ ಸಂಬಂಧಿ…
ಬಳ್ಳಾರಿ : ಹುಚ್ಚುನಾಯಿ ಕಡಿತದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ನಡೆದಿದೆ. 3 ವರ್ಷದ ಸುರಕ್ಷಿತಾ ಹಾಗೂ 7 ವರ್ಷದ ಶಾಂತಕುಮಾರ್ ಮೃತಪಟ್ಟಿದ್ದಾರೆ. ಮಕ್ಕಳು ಆಟವಾಡುತ್ತಿದ್ದಾಗ ದಾಳಿ ಮಾಡಿದ್ದ ಹುಚ್ಚುನಾಯಿ, ಸುರಕ್ಷಿತಾಳ ಮುಖಕ್ಕೆ ಹಾಗೂ ಶಾಂತಕುಮಾರ್ ಕೈಗೆ ಕಚ್ಚಿತ್ತು. ಇದರಿಂದ ತೀವ್ರ ಗಾಯಗೊಂಡಿದ್ದ ಸುರಕ್ಷಿತಾ ನವೆಂಬರ್ 21ರಂದು ಮೃತಪಟ್ಟಿದ್ದಳು. ಶಾಂತಕುಮಾರ್ ನವಂಬರ್ 22ರಂದು ಮೃತಪಟ್ಟಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಿಡದಿಯ ಮಂಜುನಾಥ್ ಎಂಬವರ ಮೊಬೈಲ್‌ಗೆ 15 ರೂಪಾಯಿ ವಿದ್ಯುತ್ ಬಿಲ್ ಬಾಕಿ ಇದೆ ಪಾವತಿ ಮಾಡಿ ಎಂದು ಲಿಂಕ್ ಕಳಿಸಿ 7 ಲಕ್ಷ ಹಣವನ್ನು ವಂಚಿಸಿದ್ದಾರೆ. ಬಿಡದಿ ಪಟ್ಟಣದ ರಾಘವೇಂದ್ರ ಲೇಔಟ್ ನಿವಾಸಿ ಮಂಜುನಾಥ್ ಮೊಬೈಲ್‌ಗೆ ಒಂದು ಎಸ್ಎಂಎಸ್ ಬಂದಿತ್ತು. ವಿದ್ಯುತ್ ಬಿಲ್ ಪಾವತಿ ಮಾಡದ ಕಾರಣ ನಿಮ್ಮ ವಿದ್ಯುತ್ ಸಂಪರ್ಕ ಕಡಿತವಾಗುತ್ತದೆ. ಆದ್ದರಿಂದ 15 ರೂ.ಗಳನ್ನ ಪಾವತಿ ಮಾಡಿ ಎಂದು ಒಂದು ಲಿಂಕ್ ಬಂದಿತ್ತು. ಮಂಜುನಾಥ್ ಲಿಂಕ್ ಓಪನ್ ಮಾಡಿ ತಮ್ಮ ಐಸಿಐಸಿಐ ಬ್ಯಾಂಕ್‌ನ ಡೆಬಿಟ್ ಕಾರ್ಡ್ ನಂಬರ್, ಪಾನ್ ನಂಬರ್ ನಮೂದಿಸಿ ಸಬ್‌ಮಿಟ್ ಮಾಡಿದ್ದಾರೆ. ತಕ್ಷಣ ಅವರ ಖಾತೆಯ 15 ರೂಪಾಯಿ ಕಡಿತವಾಗಿತ್ತು. ಇದಾದ ನಂತರ ಅವರ ಇ- ಮೇಲ್ ಗೆ ನಿಮ್ಮ ಖಾತೆಗೆ 24 ಲಕ್ಷ ಜಮೆಯಾಗಿರುವುದಾಗಿ ಮೇಲ್ ಬಂದಿದೆ. ಇದ್ದಕ್ಕಿದ್ದಂತೆ ಖಾತೆಗೆ ಹಣ ಜಮೆಯಾಗಿದ್ದನ್ನು ಕಂಡು ಮಂಜುನಾಥ್ ಗಾಬರಿಗೊಂಡಿದ್ದಾರೆ. ಇದಾದ ಕೆಲ ಸಮಯದಲ್ಲೆ. ಮೇಲ್‌ಗೆ ಬಂದ ಮೆಸೇಜ್ ಓಪನ್ ಮಾಡಿದಾಗ 7 ಲಕ್ಷ ಖಾತೆಯಿಂದ ವರ್ಗಾವಣೆ…
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಾಚಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕಲ್ಲು ಎತ್ತಿ ಹಾಕಿ ಕೊಂದಿದ್ದಾನೆ. ಬಸಮ್ಮ ಹಾಗೂ ಪ್ರಿಯಕರ ನಾಡಗೌಡ ಕೊಲೆಯಾದವರು. ಮಲ್ಲಣ್ಣ ಕೊಲೆ ಆರೋಪಿ.ಬಸಮ್ಮ ಮತ್ತು ಪ್ರಿಯಕರ ನಾಡಗೌಡ ಹಳ್ಳದ ಮನೆ ನಡುವೆ ಅನೈತಿಕ ಸಂಬಂಧ ಇತ್ತು. ಅವರಿಬ್ಬರೂಹತ್ತಿ ಹೊಲದಲ್ಲಿ ಏಕಾಂತದಲ್ಲಿದ್ದಾಗ ಮಲ್ಲಣ್ಣನ ಕಣ್ಣಿಗೆ ಬಿದ್ದಿದ್ದಾರೆ. ಇಬ್ಬರನ್ನು ಕಂಡ ಮಲ್ಲಣ್ಣ ಕಲ್ಲು ಎತ್ತಿ ಹಾಕಿದ್ದಾನೆ. ಬಳಿಕ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಾಡಗೌಡನ ಜಮೀನಿನಲ್ಲೇ ಕೃತ್ಯ ನಡೆದಿದ್ದು, ಸ್ಥಳಕ್ಕೆ ಕೆಂಭಾವಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಕೊಲೆ ಆರೋಪಿ ಮಲ್ಲಣ್ಣನನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಆಂಟೋನಿ ಬೇಗೂರು ಗುಲಾಮಗಿರಿ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನವು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಿಂದ ಘೋಷಿಸಲ್ಪಟ್ಟ ದಿನವಾಗಿದೆ ಮತ್ತು ಪ್ರತಿ ವರ್ಷ ಡಿಸೆಂಬರ್ 2 ರಂದು ಆಚರಿಸಲಾಗುತ್ತದೆ[1]. ಈ ದಿನವನ್ನು ಮೊದಲ ಬಾರಿಗೆ 1986 ರಲ್ಲಿ ಆಚರಿಸಲಾಯಿತು. ಗುಲಾಮಗಿರಿ ನಿಂತಿಲ್ಲ. ಇದು ನಡೆಯುತ್ತಲೇ ಇದೆ ಮತ್ತು ಸಮಾಜದಲ್ಲಿ ದುರ್ಬಲರಾಗಿರುವವರಿಗೆ ಬೆದರಿಕೆ ಹಾಕತ್ತಲೇ ಇದೆ. ಮನುಷ್ಯರನ್ನು ಪ್ರಾಣಿಗಳಂತೆ ಮಾರುವುದು ಮತ್ತು ವೇಶ್ಯಾವಾಟಿಕೆಯಲ್ಲಿ ತೊಡಗಿರುವವರ ಮೇಲೆ ಶೋಷಣೆ ಮಾಡುವುದನ್ನು ನಿಗ್ರಹಿಸುವ ದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಯಿತು. ಗುಲಾಮಗಿರಿಯ ರೂಪಗಳು: ಮನುಷ್ಯರ ಸಾಗಾಣಿಕೆ :ಬಲವಂತವಾಗಿ ವೇಶ್ಯಾವಾಟಿಕೆ, ಕಾರ್ಮಿಕ, ಅಪರಾಧ, ಮದುವೆ ಅಥವಾ ಅಂಗಾಂಗ ತೆಗೆಯುವಿಕೆ ಮುಂತಾದ ಉದ್ದೇಶಗಳಿಗಾಗಿ ಜನರನ್ನು ಶೋಷಿಸಿ ಹಿಂಸಾಚಾರ, ಬೆದರಿಕೆ ಅಥವಾ ದಬ್ಬಾಳಿಕೆ ನಡೆಸುವುದು. ಮಕ್ಕಳ ಗುಲಾಮಗಿರಿ :ಮಗುವನ್ನು ಬೇರೊಬ್ಬರ ಲಾಭಕ್ಕಾಗಿ ಬಳಸಿಕೊಳ್ಳುವುದು. ಇದರಲ್ಲಿ ಮಕ್ಕಳ ಕಳ್ಳಸಾಗಣೆ, ಬಾಲ ಸೈನಿಕರು, ಬಾಲ್ಯವಿವಾಹ ಮತ್ತು ಮಕ್ಕಳ ದೇಶೀಯ ಗುಲಾಮಗಿರಿ ಸೇರಿವೆ. ನಾನು ಗುಲಾಮನಾಗುವುದಿಲ್ಲ, ಆದ್ದರಿಂದ ನಾನು ಯಜಮಾನನಾಗುವುದಿಲ್ಲ. ಇದು ನನ್ನ ಪ್ರಜಾಪ್ರಭುತ್ವದ ಕಲ್ಪನೆಯನ್ನು ವ್ಯಕ್ತಪಡಿಸುತ್ತದೆ. ಈ…
ಯಾದಗಿರಿ ತಾಲೂಕಿನ ಬದ್ದೇಪಲ್ಲಿ ಗ್ರಾಮದಲ್ಲಿ ತಂದೆಯೊಬ್ಬ ಕುಡಿದ ಮತ್ತಿನಲ್ಲಿ ತನ್ನ 9 ತಿಂಗಳ ಮಗುವನ್ನು ಕೊಂದಿದ್ದಾನೆ. ಮದ್ಯ ಕುಡಿಯುತ್ತಿದ್ದಾಗ ಮಗಳು ಅಳುತ್ತಿದ್ದಕ್ಕೆ ಸಿಟ್ಟಿಗೆದ್ದು ಮಗಳ ಕುತ್ತಿಗೆಯಲ್ಲಿದ್ದ ದಾರ ಹಿಡಿದು ಮೇಲೆತ್ತಿದ್ದಾನೆ. ಹೀಗಾಗಿ ಉಸಿರುಗಟ್ಟಿ ಮಗು ಅಸು ನೀಗಿದೆ. ಮಗುವಿನ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ಈ ಕೃತ್ಯ ಎಸಗಿದ್ದಾನೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪ ರಾಮುವನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮುಂಬೈ ಮತ್ತು ಅಹಮದಾಬಾದ್ ನಡುವೆ ಸಂಚರಿಸುತ್ತಿರುವ ಸೆಮಿ ಸ್ಪೀಡ್ ವಂದೇ ಭಾರತ್ ರೈಲು ಮತ್ತೆ ಜಾನುವಾರುಗಳಿಗೆ ಡಿಕ್ಕಿ ಹೊಡೆದ ಘಟನೆ ಗುರುವಾರ ಸಂಭವಿಸಿದೆ. ಉದ್ಘಾಟನೆಗೊಂಡ ನಂತರ ವರದಿಯಾಗುತ್ತಿರುವ ನಾಲ್ಕನೇ ಪ್ರಕರಣ ಇದಾಗಿದೆ. ವಂದೇ ಭಾರತ್ ರೈಲು ಸಂಚಾರ ಆರಂಭಿಸಿದ ಎರಡು ತಿಂಗಳಲ್ಲಿ ಇದು ನಾಲ್ಕನೇ ಪ್ರಕರಣವಾಗಿದ್ದು, ಅಪಘಾತದಲ್ಲಿ ರೈಲಿನ ಮುಂಭಾಗದಲ್ಲಿ ಸ್ವಲ್ಪಭಾಗ ಹಾನಿಯಾಗಿದೆ. ಅಪಘಾತ ಸಂಭವಿಸಿದ ಕೆಲವು ನಿಮಿಷಗಳ ನಂತರ ರೈಲು ಮತ್ತೆ ಸಂಚಾರ ಆರಂಭಿಸಿದೆ. ಉದ್ವಾಡಾ ಮತ್ತು ವಾಪಿ ನಡುವಿನ ಕ್ರಾಸಿಂಗ್ ಗೇಟ್ 87ರ ಬಳಿ ಗುರುವಾರ ಸಂಜೆ 6.23ರ ವೇಳೆಗೆ ಈ ದುರ್ಘಟನೆ ಸಂಭವಿಸಿದ್ದು, ರೈಲಿನ ಮುಂಭಾಗ ಸ್ವಲ್ಪ ನಜ್ಜುಗುಜ್ಜಾಗಿದ್ದು, ರಾತ್ರಿ ಸರಿಪಡಿಸಲಾಗುವುದು. 635ರ ಸುಮಾರಿಗೆ ಮತ್ತೆ ರೈಲು ಸಂಚಾರ ಆರಂಭಿಸಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಫೇಸ್ ಬುಕ್ ಗೆಳತಿಯ ಒಡನಾಟದಿಂದ ವಿಜಯಪುರ ಜಿಲ್ಲೆಯ ಯುವಕ 40 ಲಕ್ಷ ರೂ. ಪಂಗನಾಮ ಹಾಕಿಸಿಕೊಂಡಿದ್ದ ಪ್ರಕರಣದಲ್ಲಿ ಹಾಸನದ ಮಹಿಳೆಯನ್ನು ವಿಜಯಪುರ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಹಾಸನದ ಮಂಜುಳಾ ಬಂಧಿತ ಆರೋಪಿ. ಈ ವಂಚನೆಯ ಹಿಂದೆ ಆಕೆಯ ಗಂಡನ ಕೈವಾಡವಿದೆ ಎಂಬುದು ಬಯಲಾಗಿದೆ. ವಿಜಯಪುರ ಸಿಂದಗಿ ಪಟ್ಟಣದ ಪರಮೇಶ್ವರ್ ಹಿಪ್ಪರಗಿ ಹೈದ್ರಾಬಾದ್‌ನಲ್ಲಿ ಕಟ್ಟಡ ಕಾರ್ಮಿಕರ ಸೂಪರ್ ವೈಸರ್ ಆಗಿದ್ದು, 30 ಸಾವಿರ ಸಂಬಳ ಬರುತ್ತಿತ್ತು. ಫೇಸ್‌ಬುಕ್ ಮೂಲಕ ಫ್ರೆಂಡ್‌ಶಿಪ್ ರಿಕ್ವೆಸ್ಟ್ ಕಳುಹಿಸಿ ಪರಿಚಯ ಮಾಡಿಕೊಂಡ ಹಾಸನ ಮೂಲದ ಮಂಜುಳಾ ಪ್ರೀತಿಯ ನಾಟಕವಾಡಿದ್ದಳು. ಐಎಎಸ್ ಓದುತ್ತಿರುವುದಾಗಿ ಹೇಳಿದ್ದಳು. ಅವಳ ಓದಿಗಾಗಿ ತಾನು ಕೂಡಿಟ್ಟಿದ್ದ 5 ಲಕ್ಷ ರೂ., ಒಂದು ಪ್ಲಾಟ್ ಸೇರಿ ಎಲ್ಲವನ್ನು ಮಾರಿ ಹಣ ಕಳುಹಿಸಿದ್ದನು. ಹಣಕ್ಕಾಗಿ ಪೀಡಿಸುವುದು ಹೆಚ್ಚಾದಾಗ ಆನ್ಲೈನ್ ವಂಚನೆಗೆ ಒಳಗಾಗಿದ್ದೇನೆ ಎಂದು ವಿಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಸಾಮಾಜಿಕ ಜಾಲತಾಣದ ಜಾಡು ಹಾಗೂ ಪೋಲನ್ ನಂಬರ್ ಟ್ರೇಸ್ ಮಾಡಿಕೊಂಡು ಹೋದ ಪೊಲೀಸರು ಎರಡು ವಾರದಲ್ಲಿ ಹಾಸನದ…
ಬನ್ನೇರುಘಟ್ಟ ಬಳಿಯ ತುರಹಳ್ಳಿ ಅರಣ್ಯದಿಂದ ನಾಲ್ಕು ಚಿರತೆಗಳು ರಾಜಧಾನಿ ಬೆಂಗಳೂರಿನ ಹಲವೆಡೆ ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ತುರಹಳ್ಳಿ ಅರಣ್ಯದಿಂದ ನಾಲ್ಕು ಚಿರತೆಗಳು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಓಡಾಡುತ್ತಿದ್ದು, ಅರಣ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದು, ಬೋನ್ ಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿ, ಕುಂಬಳಗೂಡು, ಉತ್ತರಹಳ್ಳಿ ಹಾಗೂ ದೇವನಹಳ್ಳಿ ಬಳಿ ಚಿರತೆಗಳು ಪ್ರತ್ಯಕ್ಷವಾಗಿದ್ದು, ಸಿಸಿಟಿವಿಗಳಲ್ಲಿ ಚಿರತೆ ಓಡಾಡುತ್ತಿರುವುದು ಕಂಡು ಬಂದಿದೆ. ಕೆಂಗೇರಿ ಬಳಿಯ ಜಿಂಕೆಯನ್ನು ಚಿರತೆ ಬೇಟೆಯಾಡಿದ್ದು, ಸ್ಥಳೀಯರು ಸತ್ತಿರುವ ಜಿಂಕೆಯನ್ನು ಪ್ರದರ್ಶಿಸಿದ್ದಾರೆ. ಕೆಂಗೇರಿಯ ಬಿಡಿಎ ಬಡಾವಣೆಗಳ ಬಳಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಕಂಡುಬಂದಿದೆ. ಇದೇ ವೇಳೆ ದೇವನಹಳ್ಳಿಯ ಕಾರ್ಖಾನೆಯೊಂದರ ಬಳಿ ಪತ್ತೆಯಾಗಿದ್ದರೆ, ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು 5 ಸಿಬ್ಬಂದಿಯ ತಂಡವನ್ನು ರಚಿಸಿದ್ದು, ನಾಯಿ ಮರಿಯನ್ನು ಕಟ್ಟಿಹಾಕಿ ಚಿರತೆಗಳನ್ನು ಬೋನಿಗೆ ಕೆಡವಲು ಕಾರ್ಯಾಚರಣೆ ಆರಂಭವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy