Subscribe to Updates
Get the latest creative news from FooBar about art, design and business.
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
- ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
Author: admin
ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕ್ಷಮೆಯಾಚಿಸುವಂತೆ ಆಗ್ರಹಿಸಿ ರಾಜ್ಯದೆಲ್ಲೆಡೆ ಬಿಜೆಪಿ ಪ್ರತಿಭಟನೆ ನಡೆಸಿದೆ. ಬೆಂಗಳೂರು, ಮೈಸೂರು, ಉಡುಪಿ ಸೇರಿದಂತೆ ರಾಜ್ಯಾದ್ಯಂತೆ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ಭುಗಿಲೆದಿದ್ದು ತಮ್ಮ ಹೇಳಿಕೆಯನ್ನ ಹಿಂಪಡೆದು ಕ್ಷಮೆಯಾಚಿಸುವಂತೆ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಸತೀಶ್ ಜಾರಕಿಹೊಳಿ ಪ್ರತಿಕೃತಿ ದಹಿಸಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಸಾಹಿತ್ಯಭವನದ ಮುಂದೆ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ ಸತೀಶ್ ಜಾರಕಿಹೊಳಿ ಕ್ಷಮೆಯಾಚಿಸುವಂತೆ ಆಗ್ರಹಿಸಿದರು. ಹಾಗೆಯೇ ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ, ಉಡುಪಿ ಕಾರವಾರದಲ್ಲೂ ಸತೀಶ್ ಜಾರಕಿಹೊಳಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಪ್ರತಿಭಟನೆ ನಡೆಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಂದಿನಿ ಬ್ರಾಂಡ್ನ ಹಲವು ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಂದಿನಿ ತುಪ್ಪದ ದರವನ್ನು ಹೆಚ್ಚಿಸಿದೆ. ಎರಡೂವರೆ ತಿಂಗಳಲ್ಲಿ ಒಂದು ಲೀಟರ್ ತುಪ್ಪದ ಬೆಲೆ ಬರೋಬ್ಬರಿ 180 ರೂ. ಹೆಚ್ಚಳವಾಗಿದ್ದು, ಹಣದುಬ್ಬರದಿಂದ ತತ್ತರಿಸಿರುವ ಜನರಿಗೆ ನಂದಿನಿ ತುಪ್ಪ ಈಗ ಬಿಸಿ ತುಪ್ಪವಾಗಿ ಪರಿಣಮಿಸಿದೆ. 2022ರ ಆಗಸ್ಟ್ 22 ರಂದು 450 ರೂ.ಗೆ ಮಾರಾಟವಾಗಿದ್ದ ಒಂದು ಲೀಟರ್ ನಂದಿನಿ ತುಪ್ಪ ಈಗ ಲೀಟರ್ಗೆ 630 ರೂ.ಗೆ ಮಾರಾಟವಾಗುತ್ತಿದೆ. ಹಬ್ಬದ ಋತು ಆರಂಭವಾಗುವ ಪೂರ್ವದಲ್ಲಿ ಒಂದು ಲೀಟರ್ ತುಪ್ಪ 450 ರೂ.ಗೆ ಮಾರಾಟ ಮಾಡಲಾಗಿತ್ತು. ಹಬ್ಬದ ಋತುವಿನಲ್ಲಿ ಕೆಎಂಎಫ್ ನಿಯಮಿತವಾಗಿ ತುಪ್ಪದ ಬೆಲೆ ಏರಿಕೆಯನ್ನು ಪ್ರಾರಂಭಿಸಿತು. ನಂದಿನಿ ತುಪ್ಪ ಸೆಪ್ಟೆಂಬರ್ ಮೊದಲ ವಾರ ಲೀಟರ್ಗೆ 470 ರೂ.ಗೆ ಮಾರಾಟವಾಗುತ್ತಿತ್ತು. ಅಕ್ಟೋಬರ್ನಲ್ಲಿ ಒಂದು ಲೀಟರ್ ತುಪ್ಪವನ್ನು 518 ರೂ.ಗೆ ಮಾರಾಟ ಮಾಡಲಾಗಿತ್ತು. ಈಗ ಕಳೆದ ಒಂದು ವಾರದಿಂದ 620 ರೂ.ನಿಂದ 630 ರೂ.ಗೆ ಮಾರಾಟವಾಗುತ್ತಿದೆ ಎಂದು ಕೆಎಂಎಫ್ ರೀಟೇಲ್ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ. ಒಂದು…
ಕರ್ನಾಟಕ ರಾಜ್ಯ ಸರಕಾರ ನಡೆಸಿದ ರಾಜ್ಯ ಶಿಕ್ಷಕರ ನೇಮಕಾತಿ ಪರೀಕ್ಷೆ ಹಾಲ್ ಟಿಕೆಟ್ ನಲ್ಲಿ ಮಾಜಿ ನೀಲಿಚಿತ್ರ ತಾರೆ ಸನ್ನಿ ಲಿಯೊನ್ ಅವರ ಅರೆಬೆತ್ತಲೆ ಭಾವಚಿತ್ರ ಪ್ರಕಟವಾಗಿದೆ. ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯಲು ಹೋದ ಮಹಿಳೆ ತಮಗೆ ನೀಡಿದ ಹಾಲ್ ಟಿಕೆಟ್ ನೋಡಿ ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಅಲ್ಲಿ ತಮ್ಮ ಫೋಟೊ ಬದಲು ಸನ್ನಿ ಲಿಯೋನ್ ಅವರ ಅರೆಬೆತ್ತಲೆ ಫೋಟೊ ಮುದ್ರಣಗೊಂಡಿತ್ತು. ಸನ್ನಿ ಲಿಯೊನ್ ಇರುವ ಹಾಲ್ ಟಿಕೆಟ್ ಫೋಟೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ. ಅಲ್ಲದೇ ಘಟನೆ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದೆ. ಕರ್ನಾಟಕ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಬಿಆರ್ ನಾಯ್ಡು ಮಂಗಳವಾರ ಈ ಗಂಭೀರ ಆರೋಪ ಮಾಡಿದ್ದು, ಶಿಕ್ಷಕರ ಪರೀಕ್ಷೆಗೆ ನೀಡಲಾದ ಅಭ್ಯರ್ಥಿಯ ಹಾಲ್ ಟಿಕೆಟ್ ನಲ್ಲಿ ಸನ್ನಿ ಲಿಯೊನ್ ಫೋಟೊ ಪ್ರಕಟವಾಗಿದೆ. ಇದು ಶಿಕ್ಷಣ ಇಲಾಖೆಯ ಬೇಜವಾಬ್ದಾರಿ ಕಾರಣ ಎಂದು ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ದೇಶದಲ್ಲಿ ಆರ್ಥಿಕ ಬದಲಾವಣೆ ತಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶ ಋಣಿ ಆಗಿರಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಟಿಐಒಎಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆರ್ಥಿಕ ನೀತಿಗಳನ್ನು ರೂಪಿಸುವ ಮೂಲಕ ಮನಮೋಹನ್ ಸಿಂಗ್ ಬಡವರಿಗೂ ಸರಕಾರದ ಯೋಜನೆಗಳು ತಲುಪುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 1991ರಲ್ಲಿ ಮನಮೋಹನ್ ಸಿಂಗ್ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಆರ್ಥಿಕ ಪುನಶ್ಚೇತನ ನೀತಿ ಜಾರಿಗೆ ಬಂದಿತು. ಈ ಮೂಲಕ ದೇಶದಲ್ಲಿ ಆರ್ಥಿಕ ಉದಾರೀಕರಣದ ಹೊಸ ಅಧ್ಯಾಯ ಆರಂಭವಾಯಿತು ಎಂದು ಅವರು ಹೇಳಿದರು. ಮನಮೋಹನ್ ಸಿಂಗ್ ಹೊಸ ಆರ್ಥಿಕ ಉದಾರೀಕರಣ ಜಾರಿಗೆ ತಂದಿದ್ದರಿಂದ ನಾನು ಮಹಾರಾಷ್ಟ್ರದಲ್ಲಿ ಸಚಿವನಾಗಿದ್ದಾಗ ರಸ್ತೆಗಳನ್ನು ರೂಪಿಸಲು ಸಾಧ್ಯವಾಯಿತು. ಅಲ್ಲದೇ ಆರ್ಥಿಕ ಉದಾರೀಕರಣದಿಂದ ಹೆಚ್ಚು ಪ್ರಯೋಜನವಾಗಿದ್ದು ಬಡವರಿಗೆ ಮತ್ತು ರೈತರಿಗೆ ಎಂದು ಗಡ್ಕರಿ ವಿವರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ರಾಜಧಾನಿ ದೆಹಲಿಯಲ್ಲಿ ಮಂಗಳವಾರ ತಡರಾತ್ರಿ 2 ಗಂಟೆ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದೆ.ದೆಹಲಿಯಲ್ಲಿ ಭೂಮಿ ನಡುಗಿದರೆ ನೆರೆಯ ನೇಪಾಳ ದೇಶದಲ್ಲಿ ಭೂಕಂಪನ ಕೇಂದ್ರ ಬಿಂದು ಕಂಡು ಬಂದಿದ್ದು, ರಿಕ್ಡರ್ ಮಾಪಕದಲ್ಲಿ 6.3ರಷ್ಡು ತೀವ್ರತೆ ದಾಖಲಾಗಿದೆ. ದೆಹಲಿಯಲ್ಲಿ ನಡುರಾತ್ರಿ ಭೂಕಂಪನ ಸಂಭವಿಸಿದ್ದರಿಂದ ಮನೆಯಿಂದ ಜನರು ಹೊರಗೆ ಓಡಿ ಬಂದಿದ್ದಾರೆ. ಇನ್ನೂ ಕೆಲವರು ನಿದ್ದೆಯಲ್ಲಿ ಇದ್ದಿದ್ದರಿಂದ ಅರಿವಿಗೆ ಬಂದಿಲ್ಲ. ದೆಹಲಿ, ನೋಯ್ಡಾ ಹಾಗೂ ಗುರ್ ಗಾಂವ್ ನಲ್ಲಿ ಸುಮಾರು 10 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದೆ. ನೇಪಾಳದ ಸೈಸಿಮೊಗ್ಲಿ ಎಂಬ ಪಟ್ಟಣದಲ್ಲಿ 10 ಕಿ.ಮೀ. ಆಳದಲ್ಲಿ ಭೂಕಂಪನ ಕೇಂದ್ರಬಿಂದು ಪತ್ತೆಯಾಗಿದ್ದು, ಯಾವುದೇ ಸಾವು ನೋವು ವರದಿಯಾಗಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೂದಲು ಉದುರುವ (hair loss) ಸಮಸ್ಯೆಯಿಂದ ನೊಂದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ. ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಅಥೋಲಿ ಗ್ರಾಮದ ನಿವಾಸಿ ಪ್ರಶಾಂತ್ (29) ಆತ್ಮಹತ್ಯೆಗೆ ಶರಣಾದ ಯುವಕ. ವೆಹಿಕಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ಗೆ ಹುಬ್ಬು ಸೇರಿದಂತೆ ತಲೆಕೂದಲು ಉದುರುತ್ತಿತ್ತು. ಇದರಿಂದಾಗಿ 2014ರಿಂದ ಕೂದಲು ಉದುರುವಿಕೆಗೆ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಿದರೂ ತಲೆ ಕೂದಲು ಉದುರುವುದು ನಿಂತಿರಲಿಲ್ಲ. ಕೂದಲು ಇಲ್ಲ ಎಂದು ಅನೇಕರು ಆತನನ್ನು ಮದುವೆಯಾಗಲು ಯುವತಿಯರು ನಿರಾಕರಿಸುತ್ತಿದ್ದರು. ಇದರಿಂದ ನೊಂದ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿದ್ದು, ಕೂದಲು ಉದುರುವ ಸಮಸ್ಯೆಯಿಂದ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಕೂದಲು ಉದುರುವ ಸಮಸ್ಯೆ ಹಾಗೂ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ. ಘಟನೆಗೆ ಸಂಬಂಧಿಸಿ ಪ್ರಶಾಂತ್ ಕುಟುಂಬಸ್ಥರು ವೈದ್ಯರ ವಿರುದ್ಧ…
2022-23ನೇ ಸಾಲಿಗೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ https://ssp.karnataka.gov.in ಹಾಗೂ ತಮ್ಮ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಉಡುಪಿ: ಹಿಂದೂಗಳ ಬಗ್ಗೆ ಹಗುರವಾಗಿ ಮಾತನಾಡಿದರೆ ದೊಡ್ಡವರಾಗುತ್ತಾರೆ ಎಂದು ಅಂದುಕೊಂಡರೆ ಅದು ಅವರ ಭ್ರಮೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸತೀಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರು ಹಿಂದೂಗಳಿಗೆ ಅಪಮಾನ ಮಾಡುವ ರೀತಿ ಮಾತನಾಡಿರುವುದು ಖಂಡನೀಯ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗುವುದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರಿಗೆ ಕ್ಷಮಾಪಣೆ ಕೇಳಬೇಕು ಎಂದರು. ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು. ಹಿಂದೂಗಳಿಗೆ ಅಪಮಾನವಾಗುವ ಹಾಗೆ ವರ್ತನೆ ಮಾಡಬಾರದು ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೋರಿ, ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್ ಅವರು, , ಲೆಫ್ಟಿನೆಂಟ್ ಗರ್ವನರ್ ಗೆ ಪತ್ರ ಬರೆದಿದ್ದಾರೆ. ಈ ಕುರಿತು ಸುಕೇಶ್ ಚಂದ್ರಶೇಖರ್ ಪರ ವಕೀಲರು ಮಾಹಿತಿ ನೀಡಿದ್ದು, ವಂಚನೆ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿ ತನಿಖೆ ನಡೆಸಲು ಸುಕೇಶ್ ಒತ್ತಾಯಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೊದಲು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಬರೆದಿದ್ದ ಪತ್ರ ಮಾಧ್ಯಮಗಳಲ್ಲಿ ಸೋರಿಕೆಯಾದ ಬಳಿಕ ದೆಹಲಿಯ ಮಾಂಡೊಲಿ ಜೈಲಿನಲ್ಲಿರುವ ತಮಗೆ ಬಹಳಷ್ಟು ಬೆದರಿಕೆ ಬಂದಿದೆ. ಎಎಪಿ ನಾಯಕ ಸತ್ಯೇಂದರ್ ಜೈನ್ ಅವರು ಜೈಲು ಅಧಿಕಾರಿಗಳ ಮೂಲಕ ಬೆದರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುರುವೇಕೆರೆ: ತಾಲೂಕಿನ ದಂಡಿನ ಶಿವರ ಶಿವರ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಯ್ಯನ ಪಾಳ್ಯದ ಬಳಿಯ ಕಾಲುವೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎಂದು ಮೃತ ಮಹಿಳೆಯ ಪತಿ ಆರೋಪಿಸಿದ್ದಾರೆ. ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಅವರ ಪತ್ನಿ ಆಶಾ(29) ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ಈಕೆಗೆ ಇಬ್ಬರು ಮಕ್ಕಳಿದ್ದಾರೆ. ತೋಟದಲ್ಲಿ ಮಹಿಳೆಯನ್ನು ಹತ್ಯೆ ಮಾಡಿ ಶವವನ್ನು ಸಣ್ಣಯ್ಯನ ಪಾಳ್ಯದ ಬಳಿ ಇರುವ ಕಾಲುವೆಗೆ ಎಸೆದು ಹೋಗಲಾಗಿದೆ ಎಂದು ಶಂಕಿಸಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹತ್ಯೆಗೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ ಆದರೆ, ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಈ ಹತ್ಯೆ ನಡೆಸಿದೆ ಎಂದು ಮೃತ ಮಹಿಳೆಯ ಪತಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕುಣಿಗಲ್ ಡಿ ವೈ ಎಸ್ ಪಿ ರಮೇಶ್, ತುರುವೇಕೆರೆ ಸರ್ಕಲ್ ಇನ್ಸ್ ಪೆಕ್ಟರ್ ಗೋಪಾಲ ನಾಯಕ್ , ದಂಡಿನಶಿವರ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ರಾಮಚಂದ್ರಪ್ಪ, ಎಎಸ್ ಐ ಗಂಗಣ್ಣ …