Subscribe to Updates
Get the latest creative news from FooBar about art, design and business.
- ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’
- ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ
- ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!
- ಕೊರಟಗೆರೆ: ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ
- ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
- ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ ಚಿರತೆ ಸೆರೆ
- ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
- ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Author: admin
ಬೆಂಗಳೂರು: ಹುಟ್ಟು ಹಬ್ಬದ ದಿನವೇ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪರಿಚಿತರೇ ಯುವಕನನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾರೆನ್ನಲಾಗಿದೆ. ಗೊಲ್ಲಹಳ್ಳಿ ನಿವಾಸಿ ಹೇಮಂತ್ ಕುಮಾರ್ (25) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಹುಟ್ಟು ಹಬ್ಬದ ಸಲುವಾಗಿ ಹೇಮಂತ್ ನನ್ನು ಸ್ನೇಹಿತರು ಫೋನ್ ಮಾಡಿ ಮನೆಯ ಹೊರಗಡೆ ಬರಲು ಹೇಳಿದ್ದಾರೆ. ಸ್ನೇಹಿತರೊಂದಿಗೆ ರಾತ್ರಿ ಹೊರಗಡೆ ಹೋಗಿದ್ದ ಯುವಕ ಇಂದು ಬೆಳಗ್ಗೆ ಕೋನಸಂದ್ರ ಬಳಿ ಬರ್ಬರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಹೇಮಂತ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತ ಯುವಕನ ಕೈ ಮೇಲೆ ತ್ರಿಶೂಲ, ಢಮರು ಟ್ಯಾಟು ಇದ್ದು, ಇದರ ಮೂಲಕ ಪೋಷಕರು ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಯುವಕನ ಮುಖದ ಗುರುತು ಸಿಗದಂತಾಗಿತ್ತು. ಸದ್ಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಹಾಲಿನ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಲ್ಲ. ಆದರೆ ಹಾಲಿನ ಉತ್ಪನ್ನಗಳು ದರ ಏರಿಕೆಯಾಗಲಿದೆ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳ ಕೆಎಂಎಫ್ ತಿಳಿಸಿದೆ. ಕೇಂದ್ರ ಸರ್ಕಾರ ಶೇ.5ರ ಸರಕು ಸೇವಾ ಸುಂಕ (ಹಾಲಿನ ಪ್ಯಾಕೇಟ್ ಉತ್ಪನ್ನ) ವಿಧಿಸಿರುವ ಹಿನ್ನೆಲೆಯಲ್ಲಿ (ಲೇಬಲ್ಡ್ ಅಕ್ಕಿ ಇತರೆ) ನಾಳೆಯಿಂದ ಬೆಲೆ ಹೆಚ್ಚಳವಾಗಲಿದೆ. ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಪ್ರತಿ ಉತ್ಪನ್ನದ ಮೇಲೆ ಸರಾಸರಿ 1ರಂದ 3ರವರೆಗೆ ಬೆಲೆ ಹೆಚ್ಚಾಗಲಿದೆ. ಈ ಮೊದಲು ಲೀಟರ್ ಮೊಸರಿಗೆ 43 ಇತ್ತು. ಜುಲೈ 18ರಿಂದ ಅದು 46 ಆಗಲಿದೆ. ಅರ್ಧ ಲೀಟರ್ ಮೊಸರಿನ ಬೆಲೆ 22 ಇತ್ತು. ನಾಳೆಯಿಂದ 24 ಆಗಲಿದೆ. ಮಜ್ಜಿಗೆ 200 ಎಂಎಲ್ ಮಜ್ಜಿಗೆ ಹಾಗೂ ಲಸ್ಸಿ ಮೇಲೆ 1ರೂ. ಹೆಚ್ಚಿಸಲಾಗಿದೆ. ಪಾಕೆಟ್ ನಲ್ಲಿ ಸದ್ಯ ಹಳೆಯ ದರಗಳೇ ನಮೂದಾಗಿರುತ್ತವೆ. ಆದರೆ, ಗ್ರಾಹಕರು ಹೊಸದಾಗಿ ನಿಗದಿಪಡಿಸಿರುವಷ್ಟು ದರ ನೀಡಿ ಖರೀದಿಸಬೇಕು ಎಂದು ಕೆಎಂಎಫ್ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರಸಭೆಯ ನೂತನ ಅಧ್ಯಕ್ಷೆಯಾಗಿ ಮೂರನೇ ವಾರ್ಡಿನ ಎಸ್. ಶಿವರಂಜಿನಿ ಯಾದವ್ ಶನಿವಾರದಂದು ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಿ ಸುಧಾಕರ್ ರವರ ನೇತೃತ್ವದಲ್ಲಿ ಹಿರಿಯೂರು ನಗರಸಭೆಯ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದರು . ಹಿರಿಯೂರು ತಾಲ್ಲೂಕಿನ ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಪದಗ್ರಹಣ ಸಮಾರಂಭ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ. ಸುಧಾಕರ್ ಭಾಗವಹಿಸಿ, ಅವಿರೋಧವಾಗಿ ಆಯ್ಕೆಯಾದ ಹಿರಿಯೂರು ನಗರಸಭೆ ನೂತನ ಅಧ್ಯಕ್ಷೆ ಶಿವರಂಜನಿ ಯಾದವ್ ಅವರಿಗೆ ಶುಭ ಹಾರೈಸಿ ಆಶೀರ್ವಾದಿಸಿದರು. ಈ ಸಂದರ್ಭದಲ್ಲಿ ಪತ್ರಿಕೆ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರಾದಂತಹ ಡಿ. ಸುಧಾಕರ್, ನಾನು ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ರಾಜಕಾರಣ ಮಾಡಿದವನು. ನಾನು ಯಾವ ಜಾತಿಯ ವಿರೋಧಿಯೂ ಅಲ್ಲ. ಮೊದಲಿನಿಂದಲೂ ತೀರಾ ಹಿಂದುಳಿದವರ, ಅಶಕ್ತರ ಧ್ವನಿಯಾಗುತ್ತಾ ಬಂದಿದ್ದೇನೆ. ಸರ್ವ ಜನಾಂಗವನ್ನು ಸಮಾನವಾಗಿ ಕಾಣುತ್ತಾ ಸಾಮಾಜಿಕ ನ್ಯಾಯ ಸರ್ವರಿಗೂ ಸಿಗಬೇಕು ಎಂಬ ಧ್ಯೇಯವನ್ನು ಪರಿಪಾಲನೆ ಮಾಡುತ್ತಾ ಬರಲಾಗಿದೆ…
ತುಮಕೂರು: ಮಳೆ ನೀರಿನಲ್ಲಿ ಆಟೋ ಚಾಲಕ ಕೊಚ್ಚಿ ಹೋದ ಘಟನೆ ಹಿನ್ನೆಲೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ, ಗೃಹ ಸಚಿವ ಅರಗ ಜ್ಞಾನೇಂದ್ರ ತುಮಕೂರಿಗೆ ಭೇಟಿ ನೀಡಿ ಘಟನಾ ಸ್ಥಳ ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಆಟೋ ಚಾಲಕ ಇನ್ನೂ ಪತ್ತೆಯಾಗಿಲ್ಲ. ಆಟೋ ಚಾಲಕ ಪತ್ತೆಯಾದ ಬಳಿಕ ಮುಂದಿನ ಕ್ರಮಕೈಗೊಳ್ಳೋಣ. ವ್ಯಕ್ತಿ ಮೊದಲು ಬದುಕಿದ್ದಾನೆ ಅಂದುಕೊಳ್ಳೋಣ. ವ್ಯಕ್ತಿ ಪತ್ತೆಯಾಗುವವರೆಗೂ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ತಿಳಿಸಿದರು. ಸ್ಮಾರ್ಟ್ ಸಿಟಿ ಹಿನ್ನೆಲೆಯಲ್ಲಿ ತುಮಕೂರಿನ ವಿವಿಧೆಡೆಗಳಲ್ಲಿ ಅವೈಜ್ಞಾನಿಕ ಕಾಮಕಾರಿಗಳು ನಡೆಯುತ್ತಿದ್ದು, ಇದೀಗ ಇದರ ಫಲವಾಗಿ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. ಈ ಬಗ್ಗೆ ಯಾವ ಕ್ರಮಕೈಗೊಳ್ಳುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಲಿ ಮಳೆ ನೀರು ತುಂಬಿತ್ತು ಎಂದು ಮಾಹಿತಿ ಇದೆ. ಅದನ್ನು ಸರಿಪಡಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೇವೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು. ತುಮಕೂರಿನ ವಿವಿಧ ಪ್ರದೇಶಗಳಲ್ಲಿರುವ ಅಂಡರ್ ಪಾಸ್ ಗಳಲ್ಲಿ ಇದೇ ರೀತಿಯ ಸಮಸ್ಯೆಗಳಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,…
ಕನ್ನಡ ಭಾಷೆಯ ಮೂಲ ತತ್ವಗಳನ್ನು ಮಕ್ಕಳಿಗೆ ಅರ್ಥಪೂರ್ಣ ಮತ್ತು ಕ್ರಮಬದ್ಧವಾಗಿ ಶಿಕ್ಷಕರು ಕಲಿಸಿಕೊಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕೆ.ಪದ್ಮನಾಭ ಅಭಿಪ್ರಾಯಪಟ್ಟರು. ತುರುವೇಕೆರೆ ಪಟ್ಟಣದ ಬಿಆರ್ ಸಿ ಕಚೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತುಮಕೂರು, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ತುರುವೇಕೆರೆ ಹಾಗೂ ತಾಲ್ಲೂಕು ಕನ್ನಡ ಭಾಷಾ ಬೋಧಕರ ಸಂಘದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕಲಿಕಾ ಚೇತರಿಕೆ ಉಪಕ್ರಮ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಪಠ್ಯದಲ್ಲಿರುವ ಮೌಲ್ವಿಕ ಅಂಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವ ಮೂಲಕ ಗುಣಾತ್ಮಕ ಕಲಿಕೆಗೆ ಹೆಚ್ಚು ಒತ್ತು ಕೊಡಬೇಕು. ತಾಲ್ಲೂಕಿನ ಪ್ರೌಢ ಶಾಲೆಗಳಲ್ಲಿ ವಿಷಯ ಶಿಕ್ಷಕರ ಕೊರತೆಯ ನಡುವೆಯೂ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಎಂದರು. ಜಿಲ್ಲಾ ಕನ್ನಡ ವಿಷಯ ಪರಿವೀಕ್ಷಕ ಎಚ್.ಜಿ.ಗಿರೀಶ್ 8 ಮತ್ತು 9ನೇ ತರಗತಿಯ ಮಕ್ಕಳಿಗೆ ಕಲಿಕಾ ಚೇತರಿಕೆ ಉಪಕ್ರಮಗಳ ಕುರಿತು ಮಾತನಾಡಿ, ಕೋವಿಡ್ 19ರ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಸಮರ್ಪಕ ಕಲಿಕೆ ಉಂಟಾಗಿಲ್ಲ. ಹಾಗಾಗಿ ಔಪಚಾರಿಕ ಶಿಕ್ಷಣದ ಒಂದು ಉಪಕ್ರಮವಾಗಿ ಕಲಿಕಾಚೇತರಿಕೆಯನ್ನು…
ತುಮಕೂರು: ಮಳೆ ನೀರಿನಲ್ಲಿ ಕೊಚ್ಚಿ ಹೋದ ಆಟೋ ಚಾಲಕನ ಪತ್ತೆಗೆ ಭಾನುವಾರ ಎನ್.ಡಿ.ಆರ್.ಎಫ್ ತಂಡ ಆಗಮಿಸಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ. ಶನಿವಾರ ಸಂಜೆ ನಗರದ ಗುಬ್ಬಿ ಗೇಟ್ ರಿಂಗ್ ರಸ್ತೆಯಲ್ಲಿ ಮಳೆ ನೀರಿನ ಫೋಟೋ ತೆಗೆಯುತ್ತಿದ್ದ ಆಟೋ ಚಾಲಕ ಅಮ್ಜದ್ ರಾಜಕಾಲುವೆಗೆ ಬಿದ್ದು ಕೊಚ್ಚಿ ಹೋಗಿದ್ದನು. ಬಳಿಕ ಆತನ ಪತ್ತೆಗೆ ಸ್ಥಳೀಯ ಅಗ್ನಿಶಾಮಕ ದಳ ಹಾಗೂ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿದ್ದರಾದರೂ ಆತನ ಸುಳಿವು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಪತ್ತೆ ಕಾರ್ಯಾಚರಣೆಗೆ ಎನ್.ಡಿ.ಆರ್.ಎಫ್ ತಂಡದ ಮೊರೆ ಹೋಗಲಾಗಿದೆ. 6 ಗಂಟೆಗೆ ಆರಂಭ; ಭಾನುವಾರ ಬೆಳಗ್ಗೆ 6 ಗಂಟೆಗೆ ಅಮ್ಜದ್ ಪತ್ತೆ ಕಾರ್ಯಾಚರಣೆಯನ್ನು ಎನ್.ಡಿ.ಆರ್.ಎಫ್ ತಂಡ ಆರಂಭಿಸಿದೆ. ಬೆಂಗಳೂರಿನಿಂದ ಬಂದಿರುವ ತಂಡದಿಂದ ರಿಂಗ್ ರಸ್ತೆಯ ರಾಜಕಾಲುವೆಯಲ್ಲಿ ಹುಡುಕಾಟ ನಡೆದಿದೆ. ಆದರೆ ಈವರೆಗೆ ಅಮ್ಜದ್ ಪತ್ತೆಯಾಗಿಲ್ಲ. ಸ್ಥಳದಲ್ಲೇ ಮೊಕ್ಕಾಂ; ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಕಾರ್ಯಾಚರಣೆ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಅಮ್ಜದ್ ಪತ್ನಿ ಹಾಗೂ ಕುಟುಂಬ ಸದಸ್ಯರು ಕೂಡ ಕಾರ್ಯಾಚರಣೆ ಸ್ಥಳದಲ್ಲಿ ಹಾಜರಿದ್ದಾರೆ. ವರದಿ…
ತುಮಕೂರು: ಶಿಕ್ಷಕಿಯರ ಮನಸ್ತಾಪದಿಂದ ಬೇಸತ್ತ ಗ್ರಾಮಸ್ಥರು ಶಾಲೆಗೆ ಬೀಗ ಜಡಿದ ಘಟನೆ ತುಮಕೂರು ತಾಲೂಕಿನ ಚಿಕ್ಕಸಾರಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಪ್ರತಿದಿನವೂ ಶಾಲೆಗೆ ತಡವಾಗಿ ಬರುವ ಗಂಗಲಕ್ಷ್ಮಮ್ಮ ಹಾಗೂ ಭಾಗ್ಯಮ್ಮ ಅವರಿಗೆ ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗುವುದಿಲ್ಲ, ಮಕ್ಕಳಿಗೆ ಪಾಠ ಮಾಡದೇ ಸದಾ ಪರಸ್ಪರ ಜಗಳವಾಡುತ್ತಿರುತ್ತಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವೈಯಕ್ತಿಕ ವಿಚಾರಗಳು ಸೇರಿದಂತೆ ಶಾಲೆಗೆ ತಡವಾಗಿ ಬರುವ ವಿಚಾರಕ್ಕೆ ಜಗಳವಾಡುತ್ತಾರೆ ಎನ್ನಲಾಗಿದೆ. ಸಹಶಿಕ್ಷಕಿಯರ ಜಗಳ ನೋಡಲಾರದೇ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಘಟನೆ ಸಂಬಂಧ ಶಾಲೆಗೆ ತುಮಕೂರು ಬಿಇಒ ಹನುಮನಾಯಕ್ ಭೇಟಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸರಗೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಶುಕ್ರವಾರ ರಾತ್ರಿ ಕಬ್ಬೇಪುರ ಹಾಡಿಯ ಆಶ್ರಾಮ ಶಾಲೆಯಲ್ಲಿ ವ್ಯಾಸ್ತವ್ಯ ಹೂಡಿದರು. ಬಿ ಮಟಕೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ ನೀಡಿ ನಂತರ ಶಾಸಕರ ಜೊತೆಗೂಡಿ ಮೊಳೆಯೂರು ಗ್ರಾಮದ ಶಾಲೆಯಲ್ಲಿ ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಮತ್ತು ಶಾಸಕರು ಅನೀಲ್ ಚಿಕ್ಕಮಾದು ಗಣ್ಯರು ಜೊತೆಯಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಗ್ರಾಪಂ ಅಧ್ಯಕ್ಷ ರು ರೂಪಾಬಾಯಿ ಉಪಾಧ್ಯಕ್ಷ ದೇವದಾಸ್ ಬೆಟ್ಟಸ್ವಾಮಿ ಸದಸ್ಯರು ಸಾಥ್ ನೀಡಿದರು. ಆ ಗ್ರಾಮದಲ್ಲಿ ಮಳೆಯಿಂದ ಮನೆಗಳು ಕುಸಿದು ಬಿದ್ದಿರುವ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ರಸ್ತೆಗಳು ಅಳಗುಂಡಿ ಇರುವುದನ್ನು ಗಮನಿಸಿ ಪಂಚಾಯಿತಿ ಅಧಿಕಾರಿಗಳಿಗೆ ನರೇಗಾಯಡಿ ಕಾಮಗಾರಿ ಮಾಡಲು ಸೂಚನೆ ನೀಡಿದರು. ಸರಗೂರು ತಾಲ್ಲೂಕಿನ ಬಿ ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊಳೆಯೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಂದ ಹಲವು ಅರ್ಜಿಗಳನ್ನು ಸ್ವೀಕರಿಸಿದರು. ಮತ್ತು ಸಮಸ್ಯೆಗಳಿಗೆ…
ನವದೆಹಲಿ: ಹಬ್ಬದ ಸಂದರ್ಭದಲ್ಲಿ ಮತ್ತು ತೀವ್ರ ಮಳೆಯಾಗಿ ಬೆಳೆ ಹಾನಿಗೊಳಗಾಗುವ ಕಾರಣ ಈರುಳ್ಳಿ ಬೆಲೆ ಗಗನಕ್ಕೇರುತ್ತಿತ್ತು. ಇದೀಗ ಈ ವರ್ಷ ಗ್ರಾಹಕರನ್ನು ಇಂತಹ ಸಂಕಷ್ಟದಿಂದ ಪಾರು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 2.5 ಲಕ್ಷ ಟನ್ ಈರುಳ್ಳಿ ಸಂಗ್ರಹಿಸಲಾಗಿದ್ದು, ಈರುಳ್ಳಿಯ ಸಮರ್ಪಕ ಪೂರೈಕೆ ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ 2022 -23ನೇ ಆರ್ಥಿಕ ವರ್ಷದಲ್ಲಿ 2.5 ಲಕ್ಷ ಪ್ರಮಾಣದ ಈರುಳ್ಳಿ ಸಂಗ್ರಹಿಸಿದೆ. ಇದುವರೆಗೆ ಸರ್ಕಾರ ಸಂಗ್ರಹಿಸಿದ ದಾಖಲೆಯ ಗರಿಷ್ಠ ಪ್ರಮಾಣ ಇದಾಗಿದೆ. ಆಗಸ್ಟ್ ನಿಂದ ಡಿಸೆಂಬರ್ ವರೆಗೆ ಮಾರುಕಟ್ಟೆಯಲ್ಲಿ ಈರುಳ್ಳಿ ಅಭಾವ ಸೃಷ್ಟಿಯಾಗಿ ದರ ಏರಿಕೆಯಾಗುತ್ತದೆ. ಈ ಬಾರಿ ಸರ್ಕಾರ ಬೆಲೆ ಏರಿಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹಾಸನ: ತೆಪ್ಪ ಮಗುಚಿ ಇಬ್ಬರು ಜಲಸಮಾಧಿಯಾಗಿರುವ ಘಟನೆ ಹಾಸನ ತಾಲೂಕು, ದುದ್ದ ಹೋಬಳಿ ತಿಮ್ಲಾಪುರದಲ್ಲಿ ಶನಿವಾರ ಸಂಭವಿಸಿದೆ. ಮೀನು ಹಿಡಿಯಲು ಹೋದ ವೇಳೆ ತೆಪ್ಪ ಮಗುಚಿ ಬಿದ್ದಿದ್ದು, ಭಾರಿ ಮಳೆ ನಡುವೆ ಕೆರೆಯಲ್ಲಿ ಮೀನು ಹಿಡಿಯಲು ಮೂವರು ಹೋಗಿದ್ದರು ಎನ್ನಲಾಗಿದೆ. ಕಿಶೋರ್ ಎಂಬವರು ಕೆರೆಯಲ್ಲಿ ಮೀನು ಸಾಕಿದ್ದು, ಸ್ನೇಹಿತರೊಂದಿಗೆ ಕೆರೆಗೆ ತೆಪ್ಪದಲ್ಲಿ ತೆರಳಿದ್ದರು. ಭಾರೀ ಮಳೆಯ ನಡುವೆಯೂ ಮೀನು ಹಿಡಿಯಲು ತೆರಳಿದ ವೇಳೆ ಈ ದುರಂತ ಸಂಭವಿಸಿದೆ. ಕಿಶೋರ್ ಅವರ ಮೃತದೇಹ ಪತ್ತೆಯಾಗಿದ್ದು, ರಾಜಣ್ಣ ಎಂಬವರ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ. ಘಟನೆ ಸಂಬಂಧ ದುದ್ದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz