Author: admin

ಪಾವಗಡ: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಆಟೋ ರಿಕ್ಷಾ ಪಲ್ಟಿಯಾಗಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯ ನಲಿಗಾನಹಳ್ಳಿ ಗ್ರಾಮದ ಬಳಿ ಸೋಮವಾರ ನಡೆದಿದೆ. ಕೋಣನ ಕುರಿಕೆ ಬಂಡಪ್ಪ (55) ಹಾಗೂ ಸಣ್ಣ ಸಿದ್ದಪ್ಪನವರ ಬಂಡಪ್ಪ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಆಟೋದಲ್ಲಿ ಬಿ ದೊಡ್ಡ ಹಟ್ಟಿ ಗ್ರಾಮದಿಂದ ಪಾವಗಡ ಪಟ್ಟಣಕ್ಕೆ ಏಳು ಜನ ಪ್ರಯಾಣಿಕರು ತೆರಳುತ್ತಿದ್ದರು, ನಲಿ ಗಾನ ಹಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಾಗಮ್ಮ ಎಂಬ ಮಹಿಳೆಗೆ ತೀವ್ರ ತರಹದ ಗಾಯಗಳಾಗಿದ್ದು, ಗಾಯಾಳುಗಳನ್ನು ಪಾವಗಡ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ತಿಳಿದು ಸ್ಥಳೀಯ ಶಾಸಕ ವೆಂಕಟರಮಣಪ್ಪ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ತುಮಕೂರು: ತುಮಕೂರಿನ ಸಿದ್ದಗಂಗಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜಿನ ಹಾಸ್ಟೆಲ್  ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಶಾಸ್ತ್ರಿನಗರ ಮೂಲದ  ಸೋಹಮನ್ ನಾಥ್ ಬಾಲಂಕರ್(24) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯಾಗಿದ್ದು, 6th ಸೆಮಿಸ್ಟರ್ ನಲ್ಲಿ  ಈತ ವ್ಯಾಸಂಗ ಮಾಡುತ್ತಿದ್ದ. ಸೋಮವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣಗಳೇನು ಎನ್ನುವುದು ತಿಳಿದು ಬಂದಿಲ್ಲ. ವಿದ್ಯಾರ್ಥಿಯ ರೂಮಿನಲ್ಲಿ ಹಲವು ಔಷಧಿಗಳು, ಮಾತ್ರೆ ಲೇಬಲ್ ಗಳು ಪತ್ತೆಯಾಗಿವೆ. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಎನ್ ಇಪಿಎಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಚಿತ್ರದುರ್ಗ:  ತಾಲೂಕಿನ ಗುಡ್ಡದ ರಂಗವ್ವನಹಳ್ಳಿಯ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ, ಕೊರೋನಾ ಲಸಿಕೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ  ಆರೋಗ್ಯ ಸುರಕ್ಷಾಧಿಕಾರಿ ವೀಣಾ,  ವಿಶ್ವಾದ್ಯಂತ ಕೊರೋನ ಒಂದನೇ, ಎರಡನೇ, ಮೂರನೇ ಅಲೆ, ನಾಲ್ಕನೇ ಅಲೆ ಮಾರಕವಾಗಿ ನಿಧಾನಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರೋಗನಿರೋಧಕ ಹೆಚ್ಚಿಸಲು ಲಸಿಕೆ ತುಂಬಾ ಅಗತ್ಯ ಎಂದರು. ಈ  ಸಂದರ್ಭದಲ್ಲಿ ನಿರೀಕ್ಷಣ ಅಧಿಕಾರಿಯಾದ ಜ್ಯೋತಿ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದು , ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ಒಳಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಇದೇ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಎಂ.ತಿಪ್ಪೇಸ್ವಾಮಿ., ಕೆ. ಸುಫಿಯಾ , ಗಿರಿಜಮ್ಮ, ಜಿ.ವಿ. ನಿರ್ಮಲ,  ಎ. ತಸ್ಮಿಯ ಬಿ,  ಸೈಲಜ ಕೆ.ಟಿ., ನೇತ್ರಾವತಿ ವಿ, ಚೆನ್ನಕೇಶವ ವಿ.ಹೆಚ್. , ನೇತ್ರಮ್ಮ  ಮತ್ತು ಶಾಲಾ ಮಕ್ಕಳು ಗ್ರಾಮಸ್ಥರು ಹಾಜರಿದ್ದರು. ವರದಿ:  ಮುರುಳಿಧರನ್  ಆರ್.  ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಪಿಎಸ್ ಐ ನೇಮಕಾತಿ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಪೊಲೀಸರು ಆರೋಪಿ ದರ್ಶನ್ ಗೌಡ ಅವರನ್ನು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಂಬಂಧಿ ಎಂದು ಆರೋಪಿ ದರ್ಶನ್ ಗೌಡ ಹೇಳಿಕೊಂಡಿದ್ದು ಆತನ ಬಂಧನದ ಮೂಲಕ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ. ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಈಗಾಗಲೇ ಹಲವರನ್ನು ಸಿಐಡಿ ತನಿಖೆಯ ಬಳಿಕ ಬಂಧಿಸಿದೆ. ಈಗ ಮತ್ತೆ ಬೇಟೆ ಮುಂದುವರೆಸಿದೆ. ಇಂದು ವಿಚಾರಣೆಯ ವೇಳೆ ಸಚಿವ ಅಶ್ವತ್ಥನಾರಾಯಣ ಹೆಸರು ಹೇಳಿ, ಆ ಬಳಿಕ ನಾಪತ್ತೆಯಾಗಿದ್ದ ಅಭ್ಯರ್ಥಿ ದರ್ಶನ್ ಗೌಡನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಕೆಲ ದಿನಗಳ ಹಿಂದೆ ವಿಚಾರಣೆ ವೇಳೆಯಲ್ಲಿ ದರ್ಶನ್ ಗೌಡ, ಸಚಿವರ ಹೆಸರು ಹೇಳಿದ್ದರು. ಇದೇ ಕಾರಣಕ್ಕೆ ಅವರನ್ನು ಪ್ರಕರಣದಲ್ಲಿ ಬಿಟ್ಟು ಕಳುಹಿಸಲಾಗಿದೆ ಎಂಬುದಾಗಿ ಕಾಂಗ್ರೆಸ್, ಜೆಡಿಎಸ್ ನಾಯಕರು ಆರೋಪಿಸಿದ್ದರು. ಇದು ರಾಜ್ಯಾಧ್ಯಂತ ವಿವಾದಕ್ಕೂ ಕಾರಣವಾಗಿತ್ತು. ಈ ಬಳಿಕ ಅವರು ನಾಪತ್ತೆಯಾಗಿದ್ದರು. ರಾಮನಗರ ಜಿಲ್ಲೆಯ ಮಾಗಡಿ ಮೂಲಕ ದರ್ಶನ್ ಗೌಡ ಬಂಧನಕ್ಕೆ ಸಿಐಡಿ…

Read More

ಲಿಂಗಾಯತ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗೆ ಆಗ್ರಹಿಸಿ ಇದೇ ತಿಂಗಳ 27 ರಂದು ಹಾವೇರಿಯ ಶಿಗ್ಗಾವ್‌ ನಲ್ಲಿರುವ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಬೇಕೆಂಬ ಬೇಡಿಕೆ ಇತ್ತು. ಹಲವು ದಿನಗಳಿಂದ ಪ್ರತಿಭಟನೆ, ಹೋರಾಟಗಳು ನಡೆದರೂ ಸರ್ಕಾರ ಆ ಬಗ್ಗೆ ಸ್ಪಂದನೆ ತೋರುತ್ತಿಲ್ಲ. ಹಾಗಾಗಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಈ ತಿಂಗಳ 27 ರಂದು ಶಿಗ್ಗಾವ್‌ ನಲ್ಲಿರುವ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಮನೆಗೆ ಬೀಗ ಹಾಕಲಾಗುವುದು ಎಂದರು. ಸರ್ಕಾರಕ್ಕೆ ಲಿಂಗಾಯತ ಪಂಚಮಸಾಲಿ ಸಮುದಾಯದ ತಮ್ಮ ಬೇಡಿಕೆ ಈಡೇರಿಕೆಗೆ ಗಡುವು ನೀಡಿತ್ತು. ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಅವರು ಕೊಟ್ಟ ಮಾತು ತಪ್ಪಿದ್ದಾರೆ. ಹಾಗಾಗಿ ಜೂ.27ರಂದು ಕನಿಷ್ಠ 35–30 ಸಾವಿರ ಜನ ಶಿಗ್ಗಾವಿಯಲ್ಲಿ ಮುಖ್ಯಮಂತ್ರಿಗಳ ಮನೆ ಮುತ್ತಿಗೆ ಹೋರಾಟದಲ್ಲಿ…

Read More

ಬೆಂಗಳೂರು:  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ನಾಲ್ಕನೇ ಅಲೆಯ ಭೀತಿಯ ನಡುವೆ ಸಾರ್ವಜನಿಕ ಪ್ರದೇಶಗಳಲ್ಲಿ “ಮಾಸ್ಕ್” ಧರಿಸುವಿಕೆಯನ್ನು ಬಿಬಿಎಂಪಿ ಕಡ್ಡಾಯಗೊಳಿಸಿದೆ. ಹೊರಾಂಗಣ ಚಟುವಟಿಕೆ, ಶಾಪಿಂಗ್ ಮಾಲ್,ವಾಣಿಜ್ಯ ಸಂಕೀರ್ಣ, ಬಸ್, ರೈಲ್ವೆ ನಿಲ್ದಾಣಗಳು, ಆಸ್ಪತ್ರೆ, ಶಾಲಾ ಕಾಲೇಜು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದರ ಮೇಲೆ ನಿಗಾ ಇರಿಸಲು ಬಿಬಿಎಂಪಿ ಮಾರ್ಷಲ್‌ಗಳು ಇಂದಿನಿಂದ ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ. ಈ ಕುರಿತು ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ವಿಶೇಷ ಆಯುಕ್ತ ಹರೀಶ್‌ಕುಮಾರ್, ನಾಲ್ಕನೇ ಅಲೆ ಬರುವ ಮುನ್ಸೂಚನೆ ಹಿನ್ನೆಲೆ ಬಿಬಿಎಂಪಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಇಂದಿನಿಂದ ಮಾರ್ಷಲ್‌ಗಳು ಮಾಸ್ಕ್ ಧರಿಸುವ ಕುರಿತು ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ ಎಂದರು. ಸದ್ಯ ಸರ್ಕಾರದ ನಿರ್ದೇಶನ ಅನ್ವಯ ಮಾಸ್ಕ್ ಸಂಬಂಧ ಯಾವುದೇ ದಂಡವನ್ನು ಪಾಲಿಕೆ ಹಾಕುತ್ತಿಲ್ಲ.ಆದರೆ, ಸಾರ್ವಜನಿಕರು ನಿರ್ಲಕ್ಷ್ಯ ತೋರದೆ, ಮಾಸ್ಕ್ ಧರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು. ಇನ್ನೂ, ನಗರದಲ್ಲಿ ಜನಸಂಖ್ಯೆ ಪ್ರಮಾಣ ಹೆಚ್ಚು ಕಡೆಗಳಲ್ಲಿ ಕೋವಿಡ್…

Read More

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆಯಾಗಿದ್ದ ಕೊರೊನಾ ಸೋಂಕು ಸಂಖ್ಯೆ ಮತ್ತೆ ಏರಿಕೆಯಾಗಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆತಂಕಕ್ಕೆ ಗುರಿಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 4,518 ಸೋಂಕು ಪ್ರಕರಣಗಳು  ಕಾಣಿಸಿಕೊಂಡಿದೆ. 9 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 25,782 ಕ್ಕೆ ಏರಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಒಟ್ಟು ಶೇಕಡವಾರು ಪ್ರಕರಣ ಶೇ. 0.06 ಪ್ರತಿಶತಕ್ಕೆ ಇಳಿದಿದೆ. ಅಲ್ಲದೇ ಚೇತರಿಕೆ ಒಟ್ಟು ದರ ಶೇ.98.73ಕ್ಕೆ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟು ಸೋಂಕಿತರ ಸಂಖ್ಯೆ 4,31,81,335ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ ಇದುವರೆಗೆ 4,26,30,852  ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ, ಸಾವನ್ನಪ್ಪಿದವರ ಸಂಖ್ಯೆ 5,24,701ಕ್ಕೆ ಹೆಚ್ಚಳವಾಗಿದೆ ಎಂದು ಅಧಿಕೃತ ಮಾಹಿತಿಯಲ್ಲಿ ತಿಳಿಸಲಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಗಳ ಸಂಖ್ಯೆ  25,782 ಮಂದಿಯಲ್ಲಿ ಇದೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಕೇಂದ್ರ ಸರ್ಕಾರ ಮತ್ತು…

Read More

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ ಸಂಬಂಧ ಮತ್ತೊಬ್ಬ ಶಂಕಿತನನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇವೇಂದ್ರ ಅಲಿಯಾಸ್ ಕಾಲಾ ಎಂದು ಗುರುತಿಸಲಾಗಿದ್ದು, ಮೇ ೨೯ ರಂದು ಮಾನ್ಸಾ ಜಿಲ್ಲೆಯ ಜವಾಹರ್ಕೆ ಗ್ರಾಮದಲ್ಲಿ ಪಂಜಾಬಿ ಗಾಯಕನನ್ನು ಕೊಂದ ಶೂಟರ್‌ಗಳಿಗೆ ವಾಹನವನ್ನು ಒದಗಿಸಿದ ಶಂಕೆ ಇದೆ. ಮೂಸೆವಾಲಾ ಹತ್ಯೆಗೂ ಮುನ್ನ ದೇವೇಂದ್ರ ಎರಡು ಶಂಕಿತ ಕೊಲೆಗಾರರಾದ ಕೇಶವ್ ಮತ್ತು ಚರಂಜೀತ್ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಸದ್ಯ ದೇವೇಂದ್ರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಫತೇಪುರ್ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರೆದಿದೆ. ಮತ್ತೊಂದೆಡೆ, ಪಂಜಾಬ್ ಪೊಲೀಸ್ ಮತ್ತು ಫತೇಹಾಬಾದ್ ಪೊಲೀಸರ ಜಂಟಿ ತಂಡವು ದಾಳಿಯ ಸಂದರ್ಭದಲ್ಲಿ ಪವನ್ ಬಿಷ್ಣೋಯ್ ಮತ್ತು ನಸೀಬ್ ಖಾನ್ ಎಂಬ ಯವಕರರನ್ನು ಭಿರ್ದಾನದಿಂದ ಜೂನ್ ೨ ರಂದು ಬಂಧಿಸಿತ್ತು. ಇನ್ನೂ, ಪಂಜಾಬ್ ಪೊಲೀಸ್ ಮತ್ತು ದೆಹಲಿ ಪೊಲೀಸರ ಜಂಟಿ ತಂಡವು ಲಾರೆನ್ಸ್ ಗ್ಯಾಂಗ್‌ನ ೮ ಶೂಟರ್‌ಗಳಿಗಾಗಿ ಲುಕ್‌ಔಟ್ ಹೊರಡಿಸಿದೆ.…

Read More

ಮಾದಕ ವಸ್ತು ಗಾಂಜಾ ಹಾಗೂ ಚಿರತೆ ಚರ್ಮ ಮಾರಾಟ ದಂಧೆಯಲ್ಲಿ ತೊಡಗಿದ್ದ ಕುಖ್ಯಾತ ರೌಡಿ ಧನ್ ರಾಜ್ ನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಭಾರತೀನಗರ ಪೊಲೀಸ್ ಠಾಣೆಯ ರೌಡಿಶೀಟರ್ ಧನ್ ರಾಜ್ (30)ನಿಂದ 10 ಲಕ್ಷ ಮೌಲ್ಯದ ಚಿರತೆ ಚರ್ಮ ಹಾಗೂ 8  ಸಾವಿರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಅವರು ತಿಳಿಸಿದ್ದಾರೆ. ಭಾರತೀನಗರ ಪ್ರದೇಶವೊಂದರಲ್ಲಿ ಆರೋಪಿಯು ಚಿರತೆಯ ಚರ್ಮದ ಜೊತೆಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ಕೈಗೊಂಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯ ವಿರುದ್ಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಅಲ್ಲದೇ ವೈಲ್ಡ್ ಲೈಫ್ ಪ್ರೊಟೆಕ್ಷನ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.  ವರದಿ:  ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಹಿರಿಯೂರು: ಭಾನುವಾರ ಸುರಿದ ಮಳೆಯಿಂದಾಗಿ ನಗರದಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಮಳೆಗೆ ಕೆಲವರು ಸೂರು ಕಳೆದುಕೊಂಡಿದ್ದು, ರೈತರ ದವಸ ಧಾನ್ಯ  ಹಾಗೂ ಅಂಗಡಿಗಳ ಒಳಗಡೆ ಸಹ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಇಲ್ಲಿನ ಸಾರ್ವಜನಿಕರು ತಿಳಿಸಿದ್ದಾರೆ. ಹಿರಿಯೂರು ತಾಲ್ಲೂಕಿನಾದ್ಯಾಂತ ಭಾನುವಾರ ಮಧ್ಯರಾತ್ರಿ   ಸುರಿದ ಮಳೆ ಜನರ ನಿದ್ರೆಗೆಡಿಸಿದೆ.  ಮಳೆ ನೀರು ಆಯಕಟ್ಟಿನ ಪ್ರದೇಶಗಳಲ್ಲಿ ಮನೆ ಒಳಗೆ ನುಗ್ಗಿದ ಪರಿಣಾಮ ರಾತ್ರಿ ಪೂರ್ತಿ ನಿದ್ದೆ ಮಾಡದೆ ನೀರನ್ನು ಹೊರ ಹಾಕುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ಕೆಲವೆಡೆ ಎಲ್ಲಿ ಮನೆಗಳು ಬೀಳಲಿವೆ ಎಂಬ ಆತಂಕ ಜನರಲ್ಲಿ ಮನೆಮಾಡಿತ್ತು. ಅದೇ ರೀತಿ ನಗರದ ಕೆ.ಎಮ್.ಕೊಟ್ಟಿಗೆ, ನಂಜಯ್ಯನ ಕೊಟ್ಟಿಗೆಗಳಲ್ಲಿ  ಹಾಗೂ ವಿವಿಧೆಡೆ ಚರಂಡಿ ಒಡೆದು ಮನೆಗಳ ಒಳಗಡೆ ನೀರು ನುಗ್ಗಿದೆ. ಮಳೆಯ ನೀರು ತಗ್ಗು ಪ್ರದೇಶಕ್ಕೆ ನುಗ್ಗಿದ್ದರಿಂದ ವಾಹನಗಳು ನೀರಿನಲ್ಲಿ ಮುಳುಗಿದ್ದು,  ಸಿ.ಎಮ್.ಲೇಔಟ್ ನಲ್ಲಿರುವ ಅಂಗನವಾಡಿ ಕೇಂದ್ರ ನೀರಿನಲ್ಲಿ ಮುಳುಗಿದೆ. ಘಟನೆ ಸಂಬಂಧ ನಮ್ಮತುಮಕೂರು ಜೊತೆಗೆ ಮಾತನಾಡಿದ ಸಾರ್ವಜನಿಕರು, ರಾತ್ರಿಯಿಡೀ ಮಳೆ…

Read More