Author: admin

ಕುಣಿಗಲ್: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಆರ್.ರಾಜೇಂದ್ರ ಪರವಾಗಿ ಮತಯಾಚನೆ ಕಾರ್ಯಕ್ರಮ ಇಂದು ಕುಣಿಗಲ್ ನಗರದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಸಂಸದ ಡಿ.ಕೆ.ಸುರೇಶ್, ಶಾಸಕ ಡಾ.ರಂಗನಾಥ್, ತಿಪಟೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರು ನಮ್ಮ ನಾಯಕರಾದ  ಕೆ.ಷಡಕ್ಷರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ, ಹಿರಿಯ ಉಪಾಧ್ಯಕ್ಷ ಹನುಮಂತಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಪುರಸಭೆ ಸದಸ್ಯರು, ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತಿಪಟೂರು: ಹೋನವಳ್ಳಿ ಹೋಬಳಿಯ ಮತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರೆಗುಡಿ ಗ್ರಾಮ ದೇವತೆ ಶ್ರೀ ಬಿದಿರಮ್ಮ ಶ್ರೀ ಚಿಕ್ಕಮ್ಮ ದೇವಿಯವರ ಕಾರ್ತಿಕ ಮಾಸದ ಜಾತ್ರಾ ಮಹೋತ್ಸವವು ಇಂದು ನಡೆಯಿತು. ಇಂದು ಬೆಳಗ್ಗೆ ದೇವತೆಗಳ ಮೆರವಣಿಗೆ ನಡೆಸಿ, ಉಯ್ಯಾಲೆ ಆಡಿಸಿ, ಚಿಕ್ಕಮ್ಮ ದೇವರ ಪುಟ್ಟ ಬಾಲಕನಿಗೆ ಕರಗ ವರಿಸಿ ದೇವಸ್ಥಾನದ ಸುತ್ತ ಕರಗವನ್ನು ಸುತ್ತರಿಸಿ ನಂತರ ಭಕ್ತರಿಗೆ ಎಲ್ಲರಿಗೂ ದೇವರ ದರ್ಶನ ಪಡೆಯಲು ಅವಕಾಶ ನೀಡಿದ್ದು ನಿಯಮಾನುಸಾರ ಜಾತ್ರಾ ಮಹೋತ್ಸವ ನೆರವೇರಿತು ದೇವಸ್ಥಾನ ಅರ್ಚಕರು ಮಾತನಾಡಿ, ದೇವರ ದರ್ಶನಕ್ಕೆ ಬರುವ ಸಮಸ್ತ ಭಕ್ತಾದಿಗಳಿಗೆ ನಿಯಮಾನುಸಾರ ಕೋವಿಡ್ ನಿಯಮ ಪಾಲಿಸಬೇಕೆಂದು ದೇವಸ್ಥಾನಕ್ಕೆ ತಿಳಿಸಿದ್ದಾರೆ ಎಂದರು. ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಚಾಮರಾಜನಗರ: ಹೆಣ್ಣು ಮಕ್ಕಳನ್ನು ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸುವಾಗ ತನ್ನ ಮಗಳು ಸುಖವಾಗಿರಬೇಕೆಂದು ಕೆಲವು ಷರತ್ತುಗಳನ್ನು ಹಾಕುವುದು ಸರ್ವೇಸಾಮಾನ್ಯ. ಆದರೆ ಇಲ್ಲೊಬ್ಬ ಭಾವಿ ಮಾವ ಹಾಕಿದ  ಷರತ್ತಿನಿಂದ ಬೇಸತ್ತು ಇಬ್ಬರು ಪ್ರೇಮಿಗಳು ಜೀವವನ್ನು ಕಳೆದುಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ 21 ವರ್ಷದ ಸತೀಶ್ ಹಾಗೂ 20 ವರ್ಷದ ವರಲಕ್ಷ್ಮಿ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ವರಲಕ್ಷ್ಮಿ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಕೋರ್ಸ್ ಮಾಡುತ್ತಿದ್ದಳು. ಸತೀಶ್ ಬಿ.ಕಾಂ. ಮುಗಿಸಿ ಪೊಲೀಸ್ ಕೆಲಸಕ್ಕೆ ಅರ್ಜಿ ಹಾಕಿದ್ದು, ಇವರಿಬ್ಬರು ಮದುವೆಯಾಗಲು ನಿರ್ಧರಿಸಿದ್ದರು. ಇನ್ನೂ ತಾವು ಮದುವೆಗೆ ನಿರ್ಧರಿಸಿರುವ ವಿಚಾರವನ್ನು ತಿಳಿಸಿದಾಗ ವರಲಕ್ಷ್ಮಿಯ ತಂದೆ, ತನ್ನ ಮಗಳನ್ನು ಮದುವೆಯಾಗಬೇಕಾದರೆ, ಸರ್ಕಾರಿ ನೌಕರಿ ಪಡೆದುಕೊಂಡು ಬಾ ಎಂದು ಷರತ್ತು ವಿಧಿಸಿದ್ದಾರೆ. ಮದುವೆಯ ಕನಸು ಹೊತ್ತು ಬಂದಿದ್ದ ಜೋಡಿ ಇದರಿಂದಾಗಿ ತೀವ್ರವಾಗಿ ನೊಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಇಬ್ಬರು ಕೂಡ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದು, ಮೈಸೂರಿನ ಲಾಡ್ಜ್ ರೂಮ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ನಿಮ್ಮ…

Read More

ತುರುವೇಕೆರೆ: ಮಾಯಸಂದ್ರ ಹೋಬಳಿ ಕೋಡಿ ನಾಗಸಂದ್ರದಲ್ಲಿ ಕಾರ್ತಿಕ ಮಾಸದ ಅಮಾವಾಸ್ಯೆ ಪೂಜೆಯ ಪ್ರಯುಕ್ತ.ಶ್ರೀ ಕೋಡಿ ಬಾಯ್ಸ್ ಸೇವಾ ಸಮಿತಿ ಇವರಿಂದ ಶ್ರೀ ಕರಿಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ರುದ್ರಾಭಿಷೇಕ ನಡೆಯಿತು. ಅಭಿಷೇಕವನ್ನು ಶಾಸ್ತ್ರಿಗಳಾದ  ಕೆಂಪ ನಂಜಯ್ಯ, ಕೆರೆ ವರಗರ ಹಳ್ಳಿ ಜನಾರ್ದನಸ್ವಾಮಿ ಹಾಗೂ ಮಾದಿಹಳ್ಳಿ ಸದಾಶಿವಯ್ಯ.ಇವರುಗಳ ಸಮಕ್ಷಮದಲ್ಲಿ ನೆರವೇರಿಸಲಾಯಿತು. ಇದೇ ಕಾರ್ಯಕ್ರಮದದಲ್ಲಿ ಇಂದು ಶ್ರೀ ಕೋಡಿ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಜೆ ದೀಪೋತ್ಸವ ಜೊತೆಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅಕ್ಕಪಕ್ಕದ ಗ್ರಾಮಸ್ಥರುಗಳು ಕೂಡ ಭಾಗಿಯಾಗಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಮ್ ಅವರು ಇಂದು ನಿಧನರಾಗಿದ್ದು, ತಮ್ಮ ಮನೆಯಲ್ಲಿ ಬಿದ್ದು, ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದ ಹಿನ್ನೆಲೆಯಲ್ಲಿ  ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಸದೇ ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಶಿವರಾಮ್ ಅವರು ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರಗಳು ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದರು.  1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ ಜನಿಸಿದ್ದ ಶಿವರಾಮ್ ಅವರು, ಶಿವರಾಮಣ್ಣ ಎಂದೇ ಚಿತ್ರರಂಗದಲ್ಲಿ ಪರಿಚಿತರಾಗಿದ್ದರು. ಪೋಷಕ ನಟನಾಗಿ, ಹಾಸ್ಯನಟನಾಗಿ ನಟಿಸಿದ್ದ ಇವರು ನಿರ್ದೇಶಕರಾಗಿ, ನಿರ್ಮಾಪಕರೂ ಆಗಿ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದವರಾಗಿದ್ದಾರೆ.  ತಮ್ಮ ಸಹೋದರ ರಾಮನಾಥನ್ ಅವರ ಜೊತೆಗೆ ಸೇರಿ ‘ರಾಶಿ ಬ್ರದರ್ಸ್’ ಸಿನಿಮಾ ಸಂಸ್ಥೆಯನ್ನು ಆರಂಭಿಸಿ ಹಲವು ಚಿತ್ರಗಳನ್ನು ನಿರ್ಮಿಸಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತಿಪಟೂರು: ತಾಲ್ಲೂಕಿನ ಪವಿತ್ರ ಕ್ಷೇತ್ರ ದಸರೀಘಟ್ಟದಲ್ಲಿ ಚೌಡೇಶ್ವರಿ ಅಮ್ಮನವರ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರಿ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ತೆಪ್ಪೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಮತ್ತು ತಿಪಟೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ.ಷಡಕ್ಷರಿ, ಮಾಜಿ ಲೋಕಸಭಾ ಸದಸ್ಯ ಮುದ್ದಹನುಮೇಗೌಡ,  ಶ್ರೀ ಆದಿಚುಂಚನಗಿರಿ  ಶಾಖಾ ಮಠಗಳ  ಪೂಜ್ಯರು  ದಸರೀಘಟ್ಟ ಶಾಖಾ ಮಠದ ಪೂಜ್ಯ ಸ್ವಾಮೀಜಿ,  ಮಂಗಳೂರು ಶಾಖಾ ಮಠದ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಹಾಸನ ಶಾಖಾ ಮಠದ  ಪೂಜ್ಯ ಶ್ರೀ ಶ್ರೀ ಶಂಭುನಾಥ  ಸ್ವಾಮೀಜಿಯವರು ಶೃಂಗೇರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ಗುಣನಾಥ ಸ್ವಾಮೀಜಿ, ಕಬ್ಬಳಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ  ಶಿವಪುತ್ರನಾಥ ಸ್ವಾಮೀಜಿ, ಹುಳಿಮಾವು ಶಾಖಾ ಮಠದ ಪೂಜ್ಯ ಶ್ರೀ ಶ್ರೀ  ಶ್ರೀಶೈಲನಾಥ  ಸ್ವಾಮೀಜಿ ಮತ್ತು ಸಹಸ್ತ್ರಾರು ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ…

Read More

ಅಮೆರಿಕಾದಲ್ಲಿ ಕೆಲವು ವರ್ಷಗಳು ವಾಸವಾಗಿದ್ದು ಹಿಂತಿರುಗಿದ ಹಿರಿಯ ಪರಿಚಿತರೊಬ್ಬರು ಭೇಟಿಯಾಗಿದ್ದರು….. ಹೀಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ಅನೇಕ ವಿಷಯಗಳನ್ನು ಚರ್ಚಿಸಿದೆವು. ಭಾರತದ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಅಪಾರ ಕಾಳಜಿ ಮತ್ತು ವಿದೇಶಿ ಸಂಸ್ಕೃತಿಯ ಬಗ್ಗೆ ಒಂದಷ್ಟು ತಿರಸ್ಕಾರ ಮನೋಭಾವದ ವ್ಯಕ್ತಿ ಅವರು. ಆ ಹೊತ್ತಿನಲ್ಲಿ ನಮ್ಮ ಮುಂದೆ ಇದ್ದ ಪತ್ರಿಕೆಯೊಂದರಲ್ಲಿ ಕೊರೋನಾ ಕಾರಣದಿಂದ ಅನಾಥರಾದ ಮಕ್ಕಳನ್ನು ಮಾರಾಟ ಮಾಡುವ ಜಾಲದ ಬಗ್ಗೆ ಒಂದು ವರದಿ ಇತ್ತು. ಅದರ ಬಗ್ಗೆ ತುಂಬಾ ವಿಷಾದನೀಯ ವ್ಯಕ್ತಪಡಿಸಿ ಮಾತು ಆರಂಭವಾಗುತ್ತಿದ್ದಂತೆ ಅವರು ಒಂದು ಮಾತು ಹೇಳಿದರು…. ಅಮೆರಿಕಾದಲ್ಲಿ ಮಗುವೊಂದು ಅನಾಥವಾಗುವುದು ವೈಯಕ್ತಿಕವಾಗಿ ತುಂಬಾ ನೋವಿನ ವಿಷಯವಾದರು ಸಾಮಾಜಿಕವಾಗಿ ಆ ಮಗುವನ್ನು ಅದೃಷ್ಟಶಾಲಿ ಎಂದು ಪರಿಗಣಿಸಬಹುದು ಎಂದರು. ಕುತೂಹಲದಿಂದ ಅದು ಹೇಗೆ ಎಂದು ಕೇಳಿದೆ……. ಅವರ ವಿವರಣೆ…… ಒಂದು ವೇಳೆ ಒಂದು ಮಗು ಯಾವುದೇ ಕಾರಣದಿಂದ ತಂದೆ ತಾಯಿ ಅಥವಾ ಪೋಷಕರನ್ನು ಕಳೆದುಕೊಂಡು ಅನಾಥವಾದರೆ ಇಡೀ ಅಮೆರಿಕಾದ ಸಮಾಜ ಮತ್ತು ಸರ್ಕಾರದ ಆಡಳಿತಾತ್ಮಕ ವ್ಯವಸ್ಥೆ ಆ ಮಗುವಿಗೆ ಅನಾಥ…

Read More

ತಿಪಟೂರು: ಜೆಡಿಎಸ್ ಪಕ್ಷವು ರೈತರ ಪರವಾಗಿ, ದಲಿತರ ಪರವಾಗಿ ಹಿಂದುಳಿದವರ ಪರವಾಗಿ, ಅಲ್ಪ ಸಂಖ್ಯಾತರ ಪರವಾಗಿ ಎಂದೆಂದಿಗೂ ಇರುತ್ತದೆ ಎಂದು  ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ಆರ್.ಅನಿಲ್ ಕುಮಾರ್ ರವರಿಗೆ ನಿಮ್ಮ ಮತವನ್ನು ನೀಡಿ ಅವರನ್ನು ಜಯಗಳಿಸಿ ಎಂದು ಮನವಿ ಮಾಡಿಕೊಂಡರು. ಜೆಡಿಎಸ್ ಗೆಲುವಿಗೆ ಕಾರ್ಯಕರ್ತರು ಮುಖಂಡರು ಶ್ರಮಿಸಬೇಕು. ಕಳೆದ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸೋಲಿಗೆ ಕಾರಣರಾದವರ ಸಮುದಾಯದವರನ್ನೇ ಅಭ್ಯರ್ಥಿ ಮಾಡಿದ್ದೇನೆ. ನನ್ನ ಸೋಲಿನ ನೋವು ಮರೆಯಬೇಕಾದರೆ, ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಿ ಎಂದು ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುರೇಶ್ ಬಾಬು, ಶಾಸಕ ಗೌರಿಶಂಕರ್ ಜಕ್ನಲ್ಲಿ ಲಿಂಗರಾಜ್,  ತಿಮ್ಮರಾಯಪ್ಪ ಗುರುಪ್ರಸನ್ನ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ:…

Read More

ಶಿವಮೊಗ್ಗ: ಬಿಜೆಪಿ ದೇಶದಲ್ಲೇ ಭ್ರಷ್ಟಾಚಾರದ ದೊಡ್ಡ ಪಕ್ಷ. ಇದನ್ನು ಬಿಜೆಪಿಯವರೇ ಹೇಳುತ್ತಿದ್ದಾರೆ. ಈ ಹಿಂದೆ ಬಿಜೆಪಿ ಭ್ರಷ್ಟ ಆಡಳಿತದ ಬಗ್ಗೆ ಖುದ್ದು ಈಶ್ವರಪ್ಪ ಅವರೇ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅವತ್ತು ಈಶ್ವರಪ್ಪ ಜಾಗದಲ್ಲಿ ನಾನು ಇದ್ದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,  ಈಶ್ವರಪ್ಪ ಅವರು ಸ್ವಾಭಿಮಾನ ಇಲ್ಲದೇ ಬದುಕುತ್ತಿದ್ದಾರೆ. ಬೊಮ್ಮಾಯಿ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡು ಮುರುಗೇಶ್ ನಿರಾಣಿ ಮುಂದಿನ ಮುಖ್ಯಮಂತ್ರಿ ಎನ್ನುತ್ತಾರೆ. ಆದರೆ, ಅಮಿತ್ ಷಾ ಅವರು ಬೊಮ್ಮಾಯಿ ನಾಯಕತ್ವದಲ್ಲಿ ಮುಂದಿನ ಚುನಾವಣೆ ನಡೆಯುತ್ತದೆ ಎಂದಿದ್ದಾರೆ. ಅಧಿಕಾರಕ್ಕಾಗಿ ಬಿಜೆಪಿ ಏನೆಲ್ಲ ಆಟವಾಡುತ್ತಿದೆ  ಎಂದು ಡಿಕೆಶಿ ಕುಟುಕಿದರು. ಸಚಿವ ಈಶ್ವರಪ್ಪ ಅವರು ತಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದೇನೆ ಎಂಬುದನ್ನೇ ಮರೆತಿದ್ದಾರೆ. ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಇರಬೇಕು ಎಂದರೆ ಬೊಮ್ಮಾಯಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲ ಈಶ್ವರಪ್ಪ ಅವರನ್ನು…

Read More

ಶಿವಮೊಗ್ಗ: ನನ್ನ ಅವಧಿಯಲ್ಲಿ ಹಣ ಪಡೆದು ಇಲಾಖೆಗಳ ಎನ್ ಒಸಿ ಕೊಟ್ಟಿದ್ದೇನೆ ಎಂದು ಸಾಬೀತಾದರೆ ರಾಜಕೀಯ ನಿವೃತ್ತಿ ಘೊಷಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲೆಸೆದರು. ಇಲ್ಲಿನ ಸವಳಂಗ ರಸ್ತೆಯಲ್ಲಿರುವ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಅಮಾತನಾಡಿದ ಅವರು,  ಶೇ.40ರಷ್ಟು ಪರ್ಸೆಂಟೇಜ್ ನೀಡಿದರೆ ಮಾತ್ರ ಹಣ ಬಿಡುಗಡೆ ಆಗಲಿದೆ ಎಂದು ನಾನು ಆರೋಪಿಸಿಲ್ಲ. ಇದನ್ನು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಸಣ್ಣ ನೀರಾವರಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ದಿ ಪಿಡಬ್ಲೂಡಿ, ಎಲ್ಲಾ ಇಲಾಖೆಯಲ್ಲಿ ಪರ್ಸೆಂಟೇಜ್ ನೀಡಿದರೆ ಮಾತ್ರ ಕೆಲಸ ಆಗಲಿದೆ. ಬಿಜೆಪಿ ಸರ್ಕಾರದಲ್ಲಿ ಶೇ. 40ರಷ್ಟು ಹಣ ನೀಡಿದರೆ ಇನ್ನೆಲ್ಲಿ ಗುಣಮಟ್ಟದ ಕಾಮಗಾರಿ ನಿರೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಅವರು ಪ್ರಶ್ನಿಸಿದರು. ಈ ತರಹ ಯಾವ ಕಾಲದಲ್ಲಿಯೂ ನಡೆದಿರಲಿಲ್ಲ. 12 ವರ್ಷ ಹಣಕಾಸು ಮಂತ್ರಿ ಆಗಿ ಕೆಲಸ ಮಾಡಿದ್ದೇನೆ. ಎಲ್ಲಾ ಇಲಾಖೆಯಲ್ಲಿ ಎನ್ ಒಸಿ ನೀಡಿದ್ದೀನಿ.…

Read More