Subscribe to Updates
Get the latest creative news from FooBar about art, design and business.
- ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
- ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
- ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
- ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
- ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
- ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
- ತುರುವೇಕೆರೆ: ಚಿರತೆ ಸಿಕ್ಕರೂ ಗ್ರಾಮಸ್ಥರಲ್ಲಿ ದೂರವಾಗದ ಆತಂಕ
- ಶಿರಾ: ಮರಕ್ಕೆ ಡಿಕ್ಕಿ ಹೊಡೆದ ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ
Author: admin
ತುಮಕೂರು: ಆರೋಪಗಳು ಶಿವ, ಬ್ರಹ್ಮ ಕೃಷ್ಣನನ್ನೇ ಬಿಟ್ಟಿಲ್ಲ, ಸಮಂತಕ ಮಣಿ ವಿಚಾರದಲ್ಲಿ ಕೃಷ್ಣನನ್ನೇ ಕಳ್ಳ ಅಂದರು ಅಂತರದಲ್ಲಿ ಮೋದಿಯನ್ನು ಬಿಡ್ತಾರಾ? ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಪ್ರಶ್ನಿಸಿದರು. ರಾಷ್ಟ್ರೀಯ ಲಾಂಛನ ತಿರುಚಿದ್ದಾರೆ ಎಂಬ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದಗಂಗಾ ಭೇಟಿಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗುರುಪೂರ್ಣಿಮೆಯಂದು ಗುರುಗಳ ದರ್ಶನ ಪಡೆದಿದ್ದೇನೆ. ಮನಸ್ಸಿಗೆ ಖುಷಿ ಅನಿಸಿದೆ ಶ್ರೀಗಳ ಆಶೀರ್ವಾದ ನನ್ನ ಮೇಲೆ ಸದಾ ಇದೆ ಎಂದರು. ಈ ರಾಷ್ಟ್ರದ ಜನ ಎದ್ದೆಯುಬ್ಬಿಸಿ ಹೇಳಬೇಕಾದದ್ದುದಂತಹ ಒಳ್ಳೇ ಧೀಮಂತ ನಾಯಕ ಸಿಕ್ಕಿದ್ದಾನೆ. ಘರ್ಜಿಸುತ್ತಿರುವ ಆ ಸಿಂಹ ಆಯಪ್ಪನೇ ಮೋದಿ, ಅಶೋಕ ಲಾಂಛನದ ಮೂಲ ಇವರುಗಳು ಮ್ಯೂಸಿಯಂನಲ್ಲಿ ನೋಡಲಿ, ಮ್ಯೂಸಿಯಂನಲ್ಲಿ ಇರುವ ಹಾಗೆ ಯಥಾವತ್ ಸಿಂಹ ಲಾಂಛನವನ್ನು ಸೆಂಟ್ರಲ್ ವಿಸ್ತಾದಲ್ಲಿ ಮಾಡಲಾಗಿದೆ. ಇಷ್ಟು ವರ್ಷ ಲಾಂಛನದ ಬಾಯಿ ಮುಚ್ಚಿತ್ತು. ಈಗ ಬಹಳ ಸ್ವಾಭಿಮಾನದಿಂದ ಬಾಯಿ ತೆರೆದಿದೆ. ಮತ್ತೆ ಘರ್ಜನೆ ಮಾಡುತ್ತಿದೆ ಎಂದರು. ಸುಖಾಸುಮ್ಮನೆ ಮೋದಿ ವಿರುದ್ದ ಮಾತಾಡುತ್ತಾರೆ. ಅವರನ್ನು ಆರಾಧಿಸುವವರ ಸಂಖ್ಯೆ 98% ಇದೆ.…
ಬೆಂಗಳೂರು: ಶಿಥಿಲಾವಸ್ಥೆಯಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೀಪಾಂಜಲಿನಗರದ ಜಂಕ್ಷನ್ ಬಳಿ ನಡೆದಿದೆ. ಶಿಥಿಲಾವಸ್ಥೆಯಲ್ಲಿದ್ದ ತಡೆಗೋಡೆ ಇದಾಗಿದ್ದು, ಭಾರಿ ಮಳೆಯಿಂದಾಗಿ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೃತರನ್ನು ರಾಜಾಮಣಿ ಹಾಗೂ ಬಾಲು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹೆಸರು ಪ್ರವೀಣ್ ಕುಮಾರ್ ಇಮೇಜ್ ಒರಿಜಿನಲ್, ಫೋಟೋ ಫಿನಿಷ್ ವೈಟ್ ಶೀಟ್ ಹಿಸ್ಟರಿ ಇನ್ ಜೆಡಿಎಸ್ ಬ್ಯುಟಿಫುಲ್ ಲಾಂಗ್ವೇಜ್ ಸ್ಕಿಲ್ ಟಾಕ್ ವಂಡರ್ ಫುಲ್ ಮೋರ್ ಹಾನೆಸ್ಟ್ ಮೋರ್ ಹಂಬಲ್ ಮೋರ್ ಸಿಂಪಲ್… ಹೌದು. ಪ್ರವೀಣ್ ಕುಮಾರ್ ಅಂದರೆ ವ್ಯಕ್ತಿ ಅಪ್ಪಟ ಬಂಗಾರ ಅಂತ ಇಲ್ಲಿನ ಜನ ಹೇಳ್ತಾರೆ. ಪ್ರವೀಣ್ ಮೈಕ್ ಮುಂದೆ ನಿಂತಾಗ ಅವರನ್ನು ಯಾವ ಪರಿ ಸಂಘಟನಾ ಕೌಶಲ್ಯ ಆವರಿಸುತ್ತದೆ ಎಂದರೆ, ಕೇಳುಗರು ಬೆಕ್ಕಸ ಬೆರಗಾಗುವಂತೆ ಸುಲಿಲಿತವಾಗಿ ಸ್ಪಷ್ಟವಾಗಿ ಸಹಜ ಕನ್ನಡದಲ್ಲಿ ಅರಳು ಹುರಿದಂತೆ ಎಲ್ಲರಿಗೂ ಅರ್ಥವಾಗುವಂತೆ ಅಚ್ಚುಕಟ್ಟಾಗಿ ಏನೇನು ವಿಚಾರ ಮುಟ್ಟಿಸಬೇಕು ಅದನ್ನು ಅಚ್ಚಳಿಯದಂತೆ ಪ್ರಸ್ತುತಪಡಿಸುವ ಜಾಣ್ಮೆಯ ಕಲೆ ಇವರಿಗೆ ಸಿದ್ಧಿಸಿದೆ. ಪ್ರವೀಣ್ ಅದ್ಭುತ ಭಾಷಣಕಾರ ಮಾತ್ರ ಅಲ್ಲ, ಒಬ್ಬ ಅತ್ಯುತ್ತಮ ಸಂಘಟನಾಕಾರನೂ ಹೌದು. ಅಪ್ಪಟ ಹೋರಾಟಗಾರನೂ ಕೂಡ ಹೌದು. ಹೇಗೆಂದರೆ ಕೇವಲ ಭಾಷಣಕ್ಕೆ ಸೀಮೀತವಾಗದೆ ಅವರೊಂದಿಗೆ ಮಾತಿಗೆ ಕುಳಿತರೆ ಎಂತಹವರನ್ನೂ ಪ್ರಾದೇಶಿಕ ಪಕ್ಷದತ್ತ ಒಲವು ಮೂಡುವಂತಹ ಸೆಳೆಯುವಂತಹ ದಿವ್ಯಶಕ್ತಿ ಅವರಲ್ಲಿ ಅಡಗಿದೆ. ಇನ್ನೊಬ್ಬರನ್ನು ಉತ್ತೇಜಿಸುವ ಬೆಳೆಸುವ…
ತುಮಕೂರು: ಗುಬ್ಬಿ ತಾಲ್ಲೂಕಿನಲ್ಲಿ ನಡೆದಿರುವ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಎಸ್.ಡಿ ದಿಲೀಪ್ ಕುಮಾರ್ ಮಾಡಿರುವ ಆರೋಪಕ್ಕೆ ಶಾಸಕ ಎಸ್.ಆರ್ ಶ್ರೀನಿವಾಸ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಕಲಿ ದಾಖಲೆ ಸೃಷ್ಟಿಸಿ 450 ಎಕರೆ ಸರ್ಕಾರಿ ಜಮೀನು ಕಬಳಿಕೆ ಪ್ರಕರಣದಲ್ಲಿ ಶಾಸಕ ಶ್ರೀನಿವಾಸ್ ಎ1 ಆರೋಪಿ ಎಂದು ಬಿಜೆಪಿಯ ದಿಲೀಪ್ ಹೇಳಿದ್ದಾರೆ. ಅವರಿಗೆ ಸರಿಯಾದ ಮಾಹಿತಿ ಇಲ್ಲ ಎಂದರು. 2004 ರಲ್ಲಿ ಕದ್ದು ಮೈನ್ಸ್ ಹೊಡೆದು ಅವರ 12 ಲಾರಿ ಹಾಗೂ ಹಿಟಾಚಿಯನ್ನು ಪೊಲೀಸರು ಸೀಜ್ ಮಾಡಿದ್ದರು. ಅವರನ್ನು ಬರೀ ಚಡ್ಡಿಯಲ್ಲಿ ಸ್ಟೇಷನ್ ನಲ್ಲಿ ಕೂರಿಸಿದ್ದರು. ಅವಾಗ ಸ್ಟೇಷನ್ ಗೆ ಹೋಗಿ ಬಿಡಿಸಿದ್ದು ನಾನು. ಆ ಮನುಷ್ಯ ಇವತ್ತು ಮಾತನಾಡ್ತಾನೆ ಎಂದು ಹಳೆಯದನ್ನು ಕೆದಕಿ ಕಿಡಿಕಾರಿದರು. ಇವಾಗ ಅರೆಸ್ಟ್ ಆಗಿರುವ ಆರೋಪಿ ಕರಿಯಣ್ಣ ಯಾರು? ನನ್ನ ಹಿಂದೆ ಇರುವವನಾ? ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಅಕ್ರಮ ಮಾಡಿರುವ ವಿಚಾರ…
ತುಮಕೂರು: ಆಂಜನೇಯಸ್ವಾಮಿ ಜಾತ್ರಾ ರಥೋತ್ಸವದಲ್ಲಿ ಹಿಂದೂ ಮುಸಲ್ಮಾನರ ಸಾಮರಸ್ಯ ಸಾರಿದರು.ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ನಡೆದ ಆಂಜನೇಯಸ್ವಾಮಿ ಜಾತ್ರಾ ರಥೋತ್ಸವದಲ್ಲಿ ಈ ಘಟನೆ ನಡೆಯಿತು. ಆಂಜನೇಯ ಸ್ವಾಮಿ ರಥೋತ್ಸವದ ವೇಳೆ ಮಾರ್ಗಮಧ್ಯೆ ಸಿಕ್ಕ ಮಸೀದಿ ಬಳಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮುಸ್ಲಿಂ ಬಾಂಧವರು ಆಂಜನೇಯ ಸ್ವಾಮಿ ಗೆ ವಿಶೇಷ ಅರ್ಚನೆ ಮಾಡಿಸುವ ಮೂಲಕ ಸಾಮರಸ್ಯ ಸಂದೇಶ ಸಾರಿದರು. ಮಸೀದಿ ಮುಂಭಾಗ ಆಂಜನೇಯ ಸ್ವಾಮಿ ರಥವನ್ನು ಹಿಂದೂ ಮುಸಲ್ಮಾನರು ಜೊತೆಯಾಗಿ ಎಳೆಯುವ ಮೂಲಕ ಸಾಮರಸ್ಯದ ಸಂದೇಶ ಸಾರಿದರು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕಬಳ್ಳಾಪುರ: ಅಂಗನವಾಡಿ ಕಾರ್ಯಕರ್ತೆಯೊಬ್ಬರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ದುರ್ದೈವಿಯನ್ನು ಎಸ್.ವೆಂಕಟಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ. ಮದುವೆಯಾಗಿದ್ದು, ಹಲವು ವರ್ಷಗಳ ಹಿಂದೆಯೇ ಇವರನ್ನು ಬಿಟ್ಟು ಗಂಡ ಹೋಗಿದ್ದು, ಒಂಟಿಯಾಗಿ ನಾಯನಹಳ್ಳಿ ಗ್ರಾಮದಲ್ಲಿ ವಾಸವಿದ್ದರು. ದುಷ್ಕರ್ಮಿಗಳು ನಿನ್ನೆ ಮನೆಗೆ ನುಗ್ಗಿ ಆಕೆಯನ್ನ ಕೊಂದು ಮನೆಯಲ್ಲಿ ಚಿನ್ನ-ನಗದು ದರೋಡೆ ಮಾಡಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ 2019ರಲ್ಲಿ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಿಜ್ವಾನ್ ಅರ್ಷದ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ. 2019ರ ಏಪ್ರಿಲ್ 13ರಂದು ‘ದೊಡ್ಡನೆಕ್ಕುಂದಿ ಗ್ರಾಮದ ಕೋದಂಡರಾಮ ಸರ್ಕಲ್ ದೇವಾಲಯದಲ್ಲಿ ನಡೆಯುತ್ತಿದ್ದ ಶ್ರೀರಾಮನವಮಿ ಪಲ್ಲಕ್ಕಿ ಉತ್ಸವದ ವೇಳೆ ಅನುಮತಿ ಪಡೆಯದೆ ರಿಜ್ವಾನ್ ಅರ್ಷದ್ ಚುನಾವಣಾ ಪ್ರಚಾರದ ಅಂಗವಾಗಿ ರೋಡ್ ಶೋ ನಡೆಸಿದರು’ ಎಂದು ಆರೋಪಿಸಿ ಚುನಾವಣಾ ಅಧಿಕಾರಿಗಳು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಈ ಕುರಿತು ಮೆಯೊಹಾಲ್ ಕೋರ್ಟ್ ಸಂಖ್ಯೆ 43ರಲ್ಲಿ ದಾಖಲಾಗಿರುವ ಎಫ್‌ಐಆರ್ ಮಮತ್ತು ವಿಚಾರಣೆ ರದ್ದುಗೊಳಿಸಬೇಕು ಎಂದು ಕೋರಿ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ವಕೀಲ ಎಸ್.ಎ. ಅಹಮದ್ ಅವರು, ‘ಕಾನೂನುಬಾಹಿರವಾಗಿ ದಾಖಲಾಗಿರುವ ಈ ಪ್ರಕರಣವನ್ನು ರದ್ದುಗೊಳಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ…
ಮದ್ಯವ್ಯಸನಿಯಾಗಿದ್ದ ಯುವಕನೊಬ್ಬ ಹೆತ್ತತಾಯಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ದಾಂಡೇಲಿಯಲ್ಲಿ ನಡೆದಿದೆ.ಆರೋಪಿಯನ್ನು ರೋಕಿ ಜಾನ್ ಪುಡ್ತೋಳ(24) ಎಂದು ಗುರುತಿಸಲಾಗಿದೆ. ಈತ ತನ್ನ ತಾಯಿ ಜತೆ ದಾಂಡೇಲಿ ಪಟ್ಟಣದ ಅರಣ್ಯ ಇಲಾಖೆ ಡಿಪೋ ಆವರಣದಲ್ಲಿ ವಾಸವಾಗಿದ್ದ. ಎಂದಿನಂತೆ ಶನಿವಾರ ರಾತ್ರಿಯೂ ಮದ್ಯ ಸೇವಿಸಿ ಮನೆಗೆ ಬಂದಿದ್ದ ಮಗ ನಿದ್ದೆ ಮಾಡುತಿದ್ದ ತಾಯಿಯನ್ನು ಎಬ್ಬಿಸಿ ಏನೋ ಮಾತಾಡಬೇಕು ಎಂದು ಸೋಫಾ ಬಳಿ ಕರೆದು ಅತ್ಯಾಚಾರವೆಸಗಿದ್ದಾನೆ. ಈ ಘಟನೆಯಿಂದ ಕಂಗಾಲಗಿದ್ದ ತಾಯಿಯು ಮಗನಿಂದ ತಪ್ಪಿಸಿಕೊಂಡು ತನ್ನ ಕೋಣೆ ಸೇರಿಕೊಂಡಿದ್ದರು.ಮರುದಿನ ಬೆಳಗ್ಗೆ 6ರ ಸುಮಾರಿಗೆ ಆರೋಪಿ ‘ತಾನು ಎಲ್ಲಿಯೋ ಹೋಗಬೇಕು’ ಎಂದು ತಾಯಿಯನ್ನು ಕರೆದು ಪುನಃ ಅತ್ಯಾಚಾರವೆಸಗಿದ್ದಾನೆ. ಮಾತ್ರವಲ್ಲದೆ ಬೆದರಿಕೆಯನ್ನು ಹಾಕಿದ್ದಾನೆ.ಎಂದು ನಗರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಶಿರಾಡಿಘಾಟ್ ದುರಸ್ತಿಯ ನಿಮಿತ್ತವಾಗಿ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ ಮಾಡುವುದಿಲ್ಲ. ಆದರೆ ರಸ್ತೆ ದುರಸ್ತಿ ಕಾಮಗಾರಿ ಮುಂದುವರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರು ಮತ್ತು ಶಿರಾಡಿ ಘಾಟ್ ನಡುವಿನ ಹೆದ್ದಾರಿ ಇತರ ಸೇತುವೆಗಳ ಕಾಮಗಾರಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಸಕಲೇಶಪುರ ಹಾಗೂ ಶಿರಾಡಿ ಘಾಟ್‌ನನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಿರಾಡಿಘಾಟ್ ಮೂಲಕ ಪ್ರತಿನಿತ್ಯ ಸರಾಸರಿ 30 ಸಾವಿರ ವಾಹನಗಳು ಸಂಚರಿಸುತ್ತವೆ. ಒಂದು ವೇಳೆ ರಸ್ತೆ ಬಂದ್ ಮಾಡಿದರೆ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತದೆ. ಆದ್ದರಿಂದ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟು, ಮತ್ತೊಂದು ಭಾಗದಲ್ಲಿ ದುರಸ್ತಿ ಕಾಮಗಾರಿಗಳಿಗೆ ಅವಕಾಶ ಮಾಡಿಕೊಡಲಾಗುವುದು, ತೀರಾ ಅನಿವಾರ್ಯವಾದರೆ ಮಾತ್ರ ಏಕಮುಖ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಸದ್ಯಕ್ಕಂತೂ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ” ಎಂದು ಸ್ಪಷ್ಟಪಡಿಸಿದರು. “ಮಳೆ ಮತ್ತಿತರ ನೈಸರ್ಗಿಕ ಪ್ರಕೋಪಗಳಿಂದ ರಸ್ತೆಗಳು ಅಥವಾ…
ಕಳೆದ ಕೆಲವು ದಿನಗಳಿಂದ ಕರಾವಳಿ, ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ವರುಣ ಅಬ್ಬರ ತೀವ್ರಗೊಂಡಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ನಾಲ್ಕು ದಿನಗಳ ಭಾರಿ ಮಳೆಯಾಗಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಮುಂದುವರೆದಿದ್ದು, ಉತ್ತರ ಕರ್ನಾಟಕ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ನಾಲ್ಕು ದಿನ ಮಳೆ ಸುರಿಯಲಿದೆ. ಕೆಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದು, ರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದೆ. ಇಂದು ಕೂಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದ್ದು, ಕಾಲೇಜುಗಳು ಎಂದಿನಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದಿದೆ. ಅಪಾಯದ ಸ್ಥಿತಿಯಲ್ಲಿದ್ದು ಗುಡ್ಡದ ಮತ್ತೊಂದು ಭಾಗ ಕುಸಿದಿರುವ ಘಟನೆ…