Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ಹೆಚ್.ಡಿ.ಕೋಟೆ: ಪೈಪ್ ಒಡೆದು ರಸ್ತೆಯಲ್ಲಿ ನೀರು ಹರಿಯುತ್ತಿದ್ದರೂ ಪಂಚಾಯಿತಿ ಅಧಿಕಾರಿಗಳು ಕ್ಯಾರೇ ಅನ್ನುತ್ತಿಲ್ಲ, ಹೆಚ್.ಡಿ.ಕೋಟೆ ತಾಲ್ಲೂಕಿನ ಎಂ.ಕನ್ನೇನಹಳ್ಳಿ ಗ್ರಾಮದ ಜನರು ಕಲುಸಿತ ನೀರನ್ನೆ ಕುಡಿಯುವ ಪರಿಸ್ಥಿತಿ ಎದುರಾಗಿದ್ದರೂ ಪಿ ಡಿ ಒ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎನ್ನುವ ಆಕ್ರೋಶ ಕೇಳಿ ಬಂದಿದೆ. ಪೈಪ್ ಒಡೆದು ಸರಿ ಸುಮಾರು ಆರು ತಿಂಗಳಾದರು ಪಿಡಿಒ ಈ ಬಗ್ಗೆ ಗಮನ ಹರಿಸಿಲ್ಲ. ಬಚಿಕ್ಕಕೆರೆಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಎಂ ಕನ್ನೇನಹಳ್ಳಿ ಗ್ರಾಮದ ಸದಸ್ಯ ಮಲ್ಲೇಶ ಹಲವು ಬಾರಿ ಈ ಸಮಸ್ಯೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಅಧಿಕಾರಿಗಳು ಕ್ರಮಕೈಗೊಳ್ಳದೇ ಮೀನಾ ಮೇಷ ಎಸಗುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆ ಮತ್ತು ಅಂಗನವಾಡಿ ಹಾಗೂ ಗ್ರಾಮಸ್ಥರಿಗೆ ಕುಡಿಯಲು ನೀರಿಲ್ಲದೆ ಬವಣಿಸುತ್ತಿದ್ದಾರೆ. ನೀರು ಹರಿದು ಗುಂಡಿಗಳಲ್ಲಿ ನಿಂತು ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡುತ್ತಿದೆ. ಪಂಚಾಯಿತಿ ಅಧಿಕಾರಿಗಳು ಇತ್ತ ಗಮನಹರಿಸಿ ಎಂ ಕನ್ನೇನಹಳ್ಳಿ ಜನರ ಗೋಳು ನಿವಾರಿಸುತ್ತಾರಾ ಎಂದು ಕಾದು ನೋಡಬೇಕಿದೆ. ಕ್ಷೇತ್ರದ…
ಹಣಕಾಸಿನ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ತೇಜೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರು (35) ಆನಂದ್ (30). ಹಣಕಾಸು ವ್ಯವಹಾರದ ವಿಚಾರವಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿದ್ದು, ಕಳೆದ ರಾತ್ರಿ ಗಂಗೆ ಮೇಲೆ ಆಣೆ ಮಾಡಲು ಕೆರೆ ಬಳಿಗೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಬಿದ್ದು ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶವವನ್ನ ಹೊರೆತೆಗೆಯಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವಿದ್ಯುತ್ ಬಿಲ್ ಪಾವತಿಸದೇ ಬಾಕಿ ಇರಿಸಿಕೊಂಡ ಹಿನ್ನೆಲೆಯಲ್ಲಿ ಸೆಸ್ಕ್ ಸಂಪರ್ಕ ಕಡಿತಗೊಳಿಸಿದ್ದರಿಂದ ಚಾಮರಾಜನಗರದ ಐತಿಹಾಸಿಕ ದೇವಸ್ಥಾನದ ಚಾಮರಾಜೇಶ್ವರ ದೇವರಿಗೆ ಕತ್ತಲಲ್ಲಿ ಪೂಜೆ ನೆರವೇರಿಸಿದ ಘಟನೆ ಗುರುವಾರ ನಡೆದಿದೆ. ಚಾಮಗರಾಜನಗರದ ಹೃದಯಭಾಗದಲ್ಲಿರುವ ಚಾಮರಾಜೇಶ್ವರ ದೇಗುಲದ 60ರಿಂದ 70 ಸಾವಿರ ರೂಪಾಯಿ ವಿದ್ಯುತ್ ಬಿಲ್ ಅನ್ನು ಮುಜರಾಯಿ ಇಲಾಖೆ ಬಾಕಿ ಉಳಿಸಿಕೊಂಡಿದೆ. ಪದೇಪದೆ ಗಡುವು ವಿಸ್ತರಿಸಿದರೂ ಬಿಲ್ ಪಾವತಿಸದ ಕಾರಣ ಸೆಸ್ಕ್ ಗುರುವಾರ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ. ಸೆಸ್ಕ್ ಸಿಬ್ಬಂದಿ ದೇಗುಲದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ ಗುರುವಾರ ಸಂಜೆ ದೇವಸ್ಥಾನದಲ್ಲಿ ಕತ್ತಲಲ್ಲೇ ಪೂಜೆ ಮಾಡಲಾಗಿದ್ದು, ನೆರೆದಿದ್ದ ಭಕ್ತರು ಮೊಬೈಲ್ ಬ್ಯಾಟರಿ ಚೆಲ್ಲಿದರು. ಕಾರ್ತಿಕ ಮಾಸವಾಗಿರುವುದರಿಂದ ಶಿವನ ಭಕ್ತರು ಅದರಲ್ಲೂ ಮಹಿಳೆಯರು ಚಾಮರಾಜೇಶ್ವರನ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲ ಭೇಟಿ ನೀಡುತ್ತಿದ್ದಾರೆ. ವಿದ್ಯುತ್ ಇಲ್ಲದಿರುವುದರಿಂದ ಬಂದಿದ್ದ ಭಕ್ತರು ಕತ್ತಲಲ್ಲೇ ದರ್ಶನ ಪಡೆದು ಮರಳುವಂತಾಗಿದೆ. ವಿದ್ಯುತ್ ಕಡಿತಗೊಳಿಸಲು ಮುಂದಾದ ವೇಳೆ 15 ದಿನ ಕಾಲಾವಕಾಶ ಪಡೆದು ವಿದ್ಯುತ್ ಪಾವತಿ ಮಾಡಲಾಗಿತ್ತು. ಆದರೆ, ಈ ಬಾರಿ ಗಡುವು ನೀಡ ಸೆಸ್ಕ್…
ಸಾಂಸ್ಕೃತಿಕ ನಗರಿ ಮೈಸೂರಿನ ಕೆ.ಆರ್. ನಗರ ಪಟ್ಟಣದ ಜನವಸತಿ ಪ್ರದೇಶಕ್ಕೆ ಚಿರತೆ ಪ್ರತ್ಯಕ್ಷವಾಗಿದ್ದು, ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮೂವರ ಮೇಲೆ ದಾಳಿ ನಡೆಸಿದ ಆಘಾತಕಾರಿ ಘಟನೆ ಶುಕ್ರವಾರ ನಡೆದಿದೆ. ಕೆ.ಆರ್.ನಗರ ಪಟ್ಟಣದ ಕನಕಗಿರಿ ಲೇಔಟ್ಗೆ ಚಿರತೆ ನುಗ್ಗಿದ್ದು, ರಸ್ತೆಯಲ್ಲಿ ಹೋಗ್ತಿದ್ದ ಬೈಕ್, ಸೈಕಲ್ ಸವಾರನ ಮೇಲೂ ದಾಳಿ ಮಾಡಿದೆ. ಅರಣ್ಯ ಸಿಬ್ಬಂದಿ ಮೇಲೂ ಚಿರತೆ ಎರಗಿ ಗಾಯಗೊಳಿಸಿದೆ. ಮೊನ್ನೆಯಷ್ಟೆ ಟಿ.ನರಸೀಪುರದಲ್ಲಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಹಿಡಿಯಲು ಅರಣ್ಯಾಧಿಕಾರಿ ಸೀಮಾ, ರಶ್ಮಿ ಟೀಂ ಹರಸಾಹಸ ಪಟ್ಟಿದ್ದು, ಮನೆಯಿಂದ ಹೊರ ಬರದಂತೆ ಜನರಿಗೆ ಮೈಕ್ ಮೂಲಕ ಸಂದೇಶ ನೀಡಿದ್ದಾರೆ. ಶುಕ್ರವಾರ ಕೆಆರ್ ನಗರದಲ್ಲಿ ಭೀತಿ ಸೃಷ್ಟಿಸಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಾಯಿ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಇಲ್ಲದ ಕಾರಣ ಆಸ್ಪತ್ರೆಗೆ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ತಾಯಿ ಹಾಗೂ ಅವಳಿ ಶಿಶುಗಳು ಮೃತಪಟ್ಟ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ. ಭಾರತೀನಗರದ ಅಭಯ ಆಂಜನೇಯ ದೇವಸ್ಥಾನದ ಬಳಿ ಕಳೆದ ಒಂದು ತಿಂಗಳಿನಿಂದ ವಾಸವಿದ್ದ ತಮಿಳುನಾಡು ಮೂಲದ ಗರ್ಭಿಣಿ ಕಸ್ತೂರಿ (30) ಹಾಗೂ ಅವಳಿ ಮಕ್ಕಳು ಮನೆಯಲ್ಲೇ ಹೆರಿಗೆ ವೇಳೆ ಮೃತಪಟ್ಟ ದುರ್ದೈವಿಗಳು. ಕಸ್ತೂರಿ ಗಂಡ ಇತ್ತೀಚೆಗಷ್ಟೇ ಮೃತಪಟ್ಟಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಬುಧವಾರ ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ಕಸ್ತೂರಿ ತೆರಳಿದ್ದರು. ಆದರೆ ತಾಯಿಗೆ ಆಧಾರ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಿಕೊಳ್ಳದೇ, ವಾಪಸ್ ಕಳುಹಿಸಲಾಗಿದೆ. ಚಿಕಿತ್ಸೆ ದೊರೆಯದ ಕಾರಣ ಕಸ್ತೂರಿ ಮನೆಗೆ ಮರಳಿದ್ದು, ಗುರುವಾರ ರತ್ರಿ ಕಸ್ತೂರಿಗೆ ಮನೆಯಲ್ಲಿಯೇ ಹೆರಿಗೆ ಆಗಿದೆ. ಮನೆಯಲ್ಲೇ ಒಂದು ಮಗುವಿಗೆ ಜನ್ಮ ನೀಡಿದ್ದು, ಅದು ಸೂಕ್ತ ಚಿಕಿತ್ಸೆ ಇಲ್ಲದೇ ಮೃತಪಟ್ಟಿದೆ. ಕೆಲವೇ ಸಮಯದಲ್ಲಿ ಅತೀವ ರಕ್ತಸ್ರಾವ ಹಾಗೂ ಚಿಕಿತ್ಸೆ ಕೊರತೆಯಿಂದ…
ಕೋಹಳ್ಳಿ: ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಮತ್ತು ದ್ವಿಥಿಯ ಸ್ಥಾನ ಪಡೆದು ರಾಜ್ಯ ಮಟ್ಟಕೆ ಆಯ್ಕೆಯಾಗಿದ್ದಾರೆ. ಓಟದ ಸ್ಪರ್ಧೆಯಲ್ಲಿ ಮೊದಲನೇ ಸ್ಥಾನ ಪಡೆದ ವಿದ್ಯಾರ್ಥಿನಿ ಮೀನಾಕ್ಷಿ ಕದಮ 1500 ಮತ್ತು3000 ಮೀಟರ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಹಾಗೂ ನಡೆಯುವ ಸ್ಪರ್ಧೆಯಲ್ಲಿ 3000 ಮೀಟರದಲ್ಲಿ ಕಾವೇರಿ ಸಾವಂತ ಎಂಬ ವಿದ್ಯಾರ್ಥಿಥಿನಿ 2 ನೇ ಸ್ಥಾನ ಪಡೆದು ಕೊಕಟನೂರಿನ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕೆ ಆಯ್ಕೆ ಆಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಎಂದು ಪ್ರಮೋದ್ ಮುತಾಲಿಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನಗೆ ಬೇರೆ ಬೇರೆ ನಂಬರ್‌ಗಳಿಂದ ಕರೆ ಮಾಡಿ, ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇನೆ ಬೋ. ಮಗನೇ ಎಂದು ಹೀನಾಯ ಶಬ್ದಗಳಿಂದ ನಿಂದಿಸಿದ ಸುಮಾರು 4-5 ಸಲ ಬೆದರಿಕೆ ಕರೆಗಳು ಬಂದಿವೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಉರ್ದು ಮಿಶ್ರಿತ ಮಂಗಳೂರು ಕನ್ನಡ ಭಾಷೆಯಲ್ಲಿ ಅತ್ಯಂತ ಕೆಟ್ಟದಾಗಿ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ನಂಬರ್ ಗಳನ್ನು ಹುಕ್ಕೇರಿ ಪೊಲೀಸ್ ಠಾಣೆಗೆ ನೀಡಿ ದೂರು ದಾಖಲಿಸಿದ್ದೇನೆ. ಸೂಕ್ತ ರೀತಿಯಲ್ಲಿ ತನಿಖೆ ಮಾಡಿ, ಕ್ರಮ ಕೈಗೊಳ್ಳಬೇಕೆಂದು ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಂಡ್ಯದಲ್ಲಿ ಮಗುವಿನೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಪೊಲೀಸರು ಕಿರುಕುಳ ನೀಡಿದ್ದು ಖಂಡನೀಯ. ಮಾನವೀಯತೆಯನ್ನೇ ಅಣಕಿಸುವ ಇಂಥ ಘಟನೆಗಳು ರಾಜ್ಯದಲ್ಲಿ ಪದೇಪದೆ ಘಟಿಸುತ್ತಿರುವುದು ಆಘಾತಕಾರಿ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಬಿಜೆಪಿ ಸರಕಾರ ಹಾಳು ಮಾಡಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೊಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಆಸ್ಪತ್ರೆಗೆ ಬೈಕ್ ನಲ್ಲಿ ಮಗುವನ್ನು ಕರೆದುಕೊಂಡು ಹೋಗುತ್ತಿದ್ದ ತಂದೆ-ತಾಯಿಯನ್ನು ಅಡ್ಡಗಟ್ಟಿ ಹೆಲ್ಮೆಟ್ ಇಲ್ಲ ಎನ್ನುವ ಕಾರಣಕ್ಕೆ ಬೈಕಿನ ಕೀ ಕಿತ್ತುಕೊಂಡು ಪೊಲೀಸರು ಕಿರುಕುಳ ನೀಡಿದ ಘಟನೆಯ ಘಟನೆಯ ವಿಡಿಯೋ ತುಣುಕುಗಳನ್ನು ನೋಡಿ ನನಗೆ ಬಹಳ ಸಂಕಟವಾಯಿತು. ಮಗುವಿನ ಅನಾರೋಗ್ಯದಿಂದ ಆತಂಕಗೊಂಡಿದ್ದ ದಂಪತಿಯೊಂದಿಗೆ ಪೊಲೀಸರು ಹೀಗೆ ನಡೆದುಕೊಂಡಿದ್ದು ಅಕ್ಷಮ್ಯ ಮತ್ತು ಹೇಯ. “ದಮ್ಮಯ್ಯ, ನಮ್ಮಲ್ಲಿ ಹಣವಿಲ್ಲ, ದಯವಿಟ್ಟು ಬಿಟ್ಟುಬಿಡಿ” ಎಂದು ಬೇಡಿಕೊಂಡರೂ ಪೊಲೀಸರು ದಯೆ ತೋರಿಸಿಲ್ಲ. ದಂಡದ ಮಾತು ಹೇಳುತ್ತಲೇ ಪೊಲೀಸರು ಹಣಕ್ಕಾಗಿ ಪೀಡಿಸಿರುವುದು ಪೈಶಾಚಿಕ ನಡವಳಿಕೆ, ಇಲಾಖೆಯೇ ತಲೆ ತಗ್ಗಿಸುವಂತದ್ದು ಎಂದು ಅಸಮಾಧಾನ…
ಸುಳ್ಯ: ಹೃದಯಾಘಾತದಿಂದ 2ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ.(7) ಮೃತ ಬಾಲಕ. ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು. ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿದ್ದು, ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತ ಪಟ್ಟಿರುವುದಾಗಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಂಡ್ಯ: ಅರ್ಚಕ ಹಾಗೂ ಆತನ ಮಕ್ಕಳು ಹಾಗೂ ದೇವಾಲಯದ ಕಾವಲುಗಾರ ದೇವಾಲಯಕ್ಕೆ ಸೇರಿದ ಲಕ್ಷಾಂತರ ರೂಪಾಯಿಗಳನ್ನು ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಬಯಲು ಸೀಮೇಯ ಸುಬ್ರಹ್ಮಣ್ಯ ಎಂದೇ ಪ್ರಸಿದ್ದವಾಗಿರುವ ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಶ್ರೀ ಕ್ಷೇತ್ರ ಸಾಸಲು ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿರುವ ಶ್ರೀ ಸೋಮೇಶ್ವರ ಮತ್ತು ಶ್ರೀ ಶಂಭುಲಿಂಗೇಶ್ವರ ದೇವಾಯಲ್ಲಿ ಪ್ರತಿ ವರ್ಷವು ಕೋಟ್ಯಾಂತರ ರೂಪಾಯಿಗಳು ಆದಾಯ ಬರುವ ದೇವಾಯವಾಗಿದೆ. ಇದನ್ನು ದುರುಪಯೋಗ ಮಾಡಿಕೊಂಡು ರಾತ್ರಿ ವೇಳೆಯಲ್ಲಿ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ದೋಚುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ದೇವಾಯದ ಕಾವಲುಗಾರ ವೀರಪ್ಪ, ಅರ್ಚಕರಾದ ಸೋಮೇಶ ಮತ್ತು ಆತನ ಮಕ್ಕಳಾದ ಸಂತೋಷ್ ಆರಾದ್ಯ, ಉಮಾಶಂಕರ್ ಆರಾದ್ಯ, ಮತ್ತು ಸಚ್ಚಿನ್ ಜಂಗಮ್, ಪುಟ್ಟರಾಜು ಇವರುಗಳು ದೇವಾಯದ ಹುಂಡಿಯಲ್ಲಿ ಸಂಗ್ರಹವಾಗುವ ಕಾಣಿಕೆ ಹಣವನ್ನು ಯಾರಿಗೂ ತಿಳಿಯದಂತೆ ಹುಂಡಿಯ ಬಾಯಿಯನ್ನು ಅಗಲಿಸಿ ದಿನನಿತ್ಯ ಲಕ್ಷಾಂತರ ರೂಪಾಯಿಗಳನ್ನು ದೋಚಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ದೇವಾಲಯದ ಅರ್ಚಕರಾದ ಸೋಮೇಶ ಆರಾದ್ಯ, ಆತನ…