Subscribe to Updates
Get the latest creative news from FooBar about art, design and business.
- ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
- ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
- ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
- ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
- ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
- ಹುಯಿಲ್ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
- ತುಮಕೂರು: ಗಾಜಿನ ಮನೆಯಲ್ಲಿ ‘ಸಿರಿಧಾನ್ಯ ಖಾದ್ಯಗಳ’ ಘಮಲು!
- 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್ ಗೆ ಪದೋನ್ನತಿ
Author: admin
ಬೆಂಗಳೂರು: ಕುಮಾರಣ್ಣ ಅರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಸೋಮೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ನಿಂತು ಒಂದು ಮಾತನ್ನು ತಿಳಿಸುತ್ತೇನೆ. ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ಜೊತೆಯಲ್ಲಿ ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಸನ್ಮಾನ್ಯ ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ. ಯಾವುದೇ ಆರೋಗ್ಯದ ಸಮಸ್ಯೆ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಕುಮಾರಸ್ವಾಮಿ ಅವರ ಆರೋಗ್ಯ ಸಮಸ್ಯೆ ಕುರಿತು ವದಂತಿಗಳು ಹರಡಿದ್ದು, ಈ ಬಗ್ಗೆ ಮಂಡ್ಯ ಜಿಲ್ಲೆಯ ಬೆಟ್ಟಹಳ್ಳಿ ಗ್ರಾಮದಲ್ಲಿ ಸೋಮೇಶ್ವರಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಮತ್ತು ಶಿಖರ ಕಳಸ ಪ್ರತಿಷ್ಠಾಪನಾ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಅವರು ಸ್ಪಷ್ಟನೆ ನೀಡಿದರು. ಕುಮಾರಣ್ಣ ಅವರು 2ನೇ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮೂರು ವಿದ್ಯುತ್ ಉತ್ಪಾದಕ ಘಟಕಗಳನ್ನು ಮತ್ತು ನೀರಾವರಿಗೆ 200 ಕೋಟಿಗೂ ಹೆಚ್ಚು ಅನುದಾನವನ್ನು ನೀಡಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಕುಮಾರಣ್ಣ ಅವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆಂದು ತಿಳಿಸಿದರು. ಈ ಹಿಂದೆ ಮೂರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿಯವರು,…
ಬೆಂಗಳೂರು: ಮೊಬೈಲ್ ಫೋನ್ ಲೌಡ್ ಸ್ಪೀಕರ್ ಹಾಕಿದ ವಿಚಾರಕ್ಕೆ ಪತ್ನಿಯನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಪತಿಯನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾಗಣಪತಿನಗರ ನಿವಾಸಿ ಲೋಕೇಶ್ ಕುಮಾರ್ ಗೆಹಲೋಟ್ (43) ಬಂಧಿತ. ಈತ ಏ.24ರಂದು ಸಂಜೆ ಸುಮಾರು 6 ಗಂಟೆಗೆ ಪತ್ನಿ ನಮಿತಾ ಸಾಹು (43) ಜತೆಗೆ ಜಗಳ ತೆಗೆದು ಕೊಲೆ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ರಾಜಸ್ಥಾನ ಮೂಲದ ಲೋಕೇಶ್ ಕಬ್ಬನ್ಪೇಟೆಯಲ್ಲಿ ಫೋಟೋ ಸ್ಟುಡಿಯೋ ನಡೆಸುತ್ತಿದ್ದ. ಐದು ವರ್ಷಗಳ ಹಿಂದೆ ನಮಿತಾ ಸಾಹುರನ್ನು ಮದುವೆ ಆಗಿದ್ದ. ದಂಪತಿಗೆ 3 ವರ್ಷದ ಹೆಣ್ಣು ಮಗುವಿದ್ದು, ಬಸವೇಶ್ವರನಗರದ ಮಹಾಗಣಪತಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಆರೋಪಿ ಲೋಕೇಶ್ ಏ.24ರಂದು ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ. ಈ ವೇಳೆ ಪತ್ನಿಯ ಅಣ್ಣ ಸತ್ಯಂ, ಲೋಕೇಶ್ ಮೊಬೈಲ್ ಗೆ ಕರೆ ಮಾಡಿದ್ದರಿಂದ ಆತನೊಂದಿಗೆ ಮಾತನಾಡುತ್ತಿದ್ದ. ಆಗ…
ಹುಬ್ಬಳ್ಳಿ: ಲಾರಿ ಕಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ. ಮೃತರನ್ನು ಶ್ವೇತ(29), ಅಂಜಲಿ(26), ಸಂದೀಪ್(26), ವಿಠಲ್(55) ಶಶಿಕಲಾ(40) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ತಿಳಿದು ಬಂದಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ತುಮಕೂರು: ದೇಶದ ಪಹಲ್ಗಾಮ್ ಸೇರಿದಂತೆ ವಿವಿಧಡೆ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಪ್ರಧಾನಿ ಮೋದಿಯವರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ, ಅದರಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಭಾರತದಿಂದ ಹೊರ ಹೋಗುವಂತೆ ಸೂಚನೆ ನೀಡಿದ್ದರೂ ಕೂಡ ದೇಶದಲ್ಲಿ ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳಿಂದ ಪಾಕಿಸ್ತಾನಿ ಪ್ರಜೆಗಳನ್ನು ಪಾಕಿಸ್ತಾನಕ್ಕೆ ವಾಪಸ್ ಕಳುಹಿಸುತ್ತಿಲ್ಲ ಎಂದು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಆರೋಪಿಸಿದರು. ತುಮಕೂರು ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಪ್ರತಿಭಟನ ಮೆರವಣಿಗೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನಿ ಪ್ರಜೆಗಳನ್ನು ಕಿಕ್ ಔಟ್ ಮಾಡುವಂತೆ ಕರ್ನಾಟಕ ರಾಜ್ಯದಲ್ಲಿಯೂ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರುವ ದೃಷ್ಟಿಯಿಂದ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದರು. ತುಮಕೂರು ನಗರದಲ್ಲಿಯೂ ಮೂವರು ಪಾಕಿಸ್ತಾನಿ ಪ್ರಜೆಗಳಿದ್ದು ರಾಷ್ಟ್ರ ವಿರೋಧಿಗಳನ್ನು ಪಾಕಿಸ್ತಾನಕ್ಕೆ ದೇಶದಿಂದ ಕಿಕ್ ಔಟ್ ಮಾಡಲು ರಾಜ್ಯಪಾಲರ ಗಮನಕ್ಕೂ ತರುವುದಾಗಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ದಾವಣಗೆರೆ: ರೌಡಿಶೀಟರ್ ಸಂತೋಷ್ ಕುಮಾರ್ ನನ್ನು ಹಾಡಹಗಲೇ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಾವಣಗೆರೆಯ ಖಾಸಗಿ ಆಸ್ಪತ್ರೆಯೊಂದರ ಮುಂಭಾಗ ನಡೆದಿದೆ. ಸಂತೋಷ್ ಕುಮಾರ್ ಅಲಿಯಾಸ್ ಕಣುಮಾನನ್ನು ಕಣ್ಣಿಗೆ ಪೆಪ್ಪರ್ ಸ್ರ್ರೈ ಮಾಡಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಮಾಹಿತಿಗಳ ಪ್ರಕಾರ ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳ ತಂಡ ಈ ದುಷ್ಕೃತ್ಯ ನಡೆಸಿ ಸ್ಥಳದಿಂದ ಪರಾರಿಯಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ದಾವಣಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿದ್ದು ಹತ್ಯೆಯ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ತುಮಕೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದ ಹೊರತಾಗಿಯೂ ಪಾಕಿಸ್ತಾನಿ ಪ್ರಜೆಗಳು ಭಾರತವನ್ನು ಬಿಟ್ಟು ಹೋಗದಿರುವುದನ್ನು ಖಂಡಿಸಿ ಇಂದು ತುಮಕೂರು ನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪಾಕಿಸ್ತಾನಿರೇ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು. ತುಮಕೂರು ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ಬೀದರ್: ಒಳ ಮೀಸಲಾತಿ ಜಾರಿ ಸಂಬಂಧ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಮನೆಮನೆಗೆ ಬಂದು ಜಾತಿ ಸಮೀಕ್ಷೆ ಮಾಡಲಿದ್ದು. ಮಾದಿಗ ಸಮುದಾಯದವರು ಜಾತಿ ಕಾಲಂನಲ್ಲಿ ಸಂಖ್ಯೆ 61 ರಲ್ಲಿ ಮಾದಿಗ ಎಂದು ಬರಿಸಬೇಕು ಎಂದು ದಾವಿದ ಕೆಂಪೆ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೀದರ್ ಹಾಗೂ ಮಾದಿಗ ಸಮಾಜದ ಯುವ ಮುಖಂಡರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮುದಾಯ ಅತ್ಯಂತ ಹಿಂದುಳಿದ ಸಮಾಜವಾಗಿದೆ. ಸರ್ಕಾರಿ ಸೌಲಭ್ಯ ಪಡೆಯುವಲ್ಲಿ ವಿಫಲರಾಗಿದ್ದಾರೆ. ಒಳ ಮೀಸಲಾತಿ ಜಾರಿಗೆ ಸಮೀಕ್ಷೆ ನಡೆಸಲಾಗುತ್ತಿದೆ. ಈ ಸಮೀಕ್ಷೆ ನಂತರ ಸಿಗುವ ಅಂಕಿ ಅಂಶ ಆಧರಿಸಿ ಮೀಸಲು ಪ್ರಮಾಣ ಸಿಗುತ್ತದೆ ಎಂದು ತಿಳಿಸಿದ್ದಾರೆ. ಹೀಗಾಗಿ ಮಾದಿಗ ಸಮುದಾಯದವರು ಜಾತಿ ಕಾಲಂನಲ್ಲಿ ಮಾದಿಗ ಎಂದು ಮಾತ್ರ ಬರೆಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲೀಗೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW…
ಕೊರಟಗೆರೆ: ತುಮಕೂರು ನಗರದಲ್ಲಿ ಮೇ 13ರಂದು ನಡೆಯುವ ರಾಜ್ಯದ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ನವರ 75ನೇ ಜನ್ಮದಿನದ ಅಮೃತೋತ್ಸವದ ಸಮಾರಂಭದಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಿದ್ದು, ಸಹಕಾರ ರತ್ನ ಕೆ.ಎನ್.ರಾಜಣ್ಣನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಧನ್ಯಕುಮಾರ್ ಕರೆ ನೀಡಿದರು.. ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗಗಳ ಜನಾಂಗದವರು ತೀರ್ಮಾನದಂತೆ ಮೇ 13 ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ತುಮಕೂರು ನಗರದ ಬಿ.ಹೆಚ್.ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ನಡೆಸಲು ತೀರ್ಮಾನಿಸಲಾಗಿದ್ದು, ಕಲ್ಪತರು ನಾಡು ತುಮಕೂರು ಜಿಲ್ಲೆಯ ರೈತರು ಸೇರಿದಂತೆ, ಸಾಮಾಜಿಕ, ಸಹಕಾರ ವಲಯದ ಸಮಗ್ರ ಅಭಿವೃದ್ದಿಗೆ ಬದ್ದತೆಯಿಂದ ತೊಡಗಿಸಿಕೊಂಡಿರುವ ಜನಪ್ರಿಯ ನಾಯಕ ಸಹಕಾರ ರಂಗದ ಪ್ರತಿಷ್ಠಿತ ಸಹಕಾರ ರತ್ನ ಪುರಸ್ಕೃತರು, ಕರ್ನಾಟಕ ಸರ್ಕಾರದ ಸಹಕರ ಸಚಿವರಾದ ಕೆ.ಎನ್.ರಾಜಣ್ಣ ನವರು…
ಕೊರಟಗೆರೆ : ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕೊರಟಗೆರೆ ತಾಲೂಕು ಶೇ. 64.79ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಕಳೆದ ಬಾರಿಗಿಂತ ಈ ಬಾರಿ ಶೇ. 2ರಷ್ಟು ಚೇತರಿಕೆ ಕಂಡಿದೆ. ಕೊರಟಗೆರೆ ಪಟ್ಟಣದ ಚಾಣಕ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಅದಿಲ್ ಲಾಲ್ ಸಾಬ್ ರಾಮ್ ದುರ್ಗ್ 625 ಕ್ಕೆ 621 (ಶೇ. 99.36) ಅಂಕ ಪಡೆಯುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ರವೀಂದ್ರ ಭಾರತಿ ರವೀಂದ್ರಭಾರತಿ ಪ್ರೌಢ ಶಾಲೆಯ ಸೃಜನ್. ಎಂ.ಎನ್– 618,(ಶೇ. 98.88) ಸುಹಾಸ್.ಪಿ– 618, (ಶೇ. 98.88) ಅಮೂಲ್ಯ.ಜಿ.ಹೆಚ್- 617 (ಶೇ. 97.72) ಸರ್ಕಾರಿ ಪ್ರೌಡಶಾಲೆಯ ವೇಣು 617 (ಶೇ. 97.72) ಅಂಕ ಪಡೆಯುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಈ ಬಾರಿ ಕೊರಟಗೆರೆ ತಾಲೂಕಿನಲ್ಲಿ 2093 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದರು, ಈ ಪೈಕಿ 1037 ಗಂಡು ಮಕ್ಕಳು ಹಾಗೂ 1056 ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದು, ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಶೇ.…
ತುಮಕೂರು: ಕಾರ್ಮಿಕರ ದಿನ ಹಾಗೂ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಹುಟ್ಟು ಹಬ್ಬ ಹಿನ್ನೆಲೆ ಸೈನಿಕರ ಕಲ್ಯಾಣ ನಿಧಿಗೆ ಶಾಸಕ ಜ್ಯೋತಿಗಣೇಶ್ ಅಭಿಮಾನಿಗಳ ಬಳಗ 1 ಲಕ್ಷ ದೇಣಿಗೆ ನೀಡಿತು. ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮೂಲಕ ಕೇಂದ್ರ ಸರ್ಕಾರಕ್ಕೆ ಚೆಕ್ ಹಸ್ತಾಂತರ ಮಾಡಲಾಯಿತು. ತುಮಕೂರು ನಗರದ ಟೌನ್ ಹಾಲ್ ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಚೆಕ್ ಹಸ್ತಾಂತರ ಮಾಡಲಾಯಿತು. ಮಾಜಿ ಸೈನಿಕರು ಹಾಗೂ ನಗರ ಶಾಸಕ ಜ್ಯೋತಿಗಣೇಶ್ ಸಮ್ಮುಖದಲ್ಲಿ ಕೇಂದ್ರ ಸಚಿವರಿಗೆ ಅಭಿಮಾನಿಗಳು ಚೆಕ್ ನೀಡಿದರು. ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರದ ಸೈನಿಕರ ಅಕೌಂಟ್ ಗೆ ಹಾಕಿಸುವಂತೆ ಸೋಮಣ್ಣ ಸಲಹೆ ನೀಡಿದರು. ಜ್ಯೋತಿಗಣೇಶ್ ಅಭಿಮಾನಿಗಳು ದೇಣಿಗೆ ಮೂಲಕ ಸಂಗ್ರಹಿಸಿದ ಒಂದು ಲಕ್ಷ ರೂ ಹಣವನ್ನು ದೇಶದ ಭದ್ರತೆಗಾಗಿ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುವ ಸೈನಿಕರಿಗೆ ಅಳಿಲು ಸೇವೆ ಮಾಡಲಾಯಿತು. ಈ ಮಹತ್ವದ ಕಾರ್ಯಕ್ಕೆ ಜ್ಯೋತಿಗಣೇಶ್ ಅಭಿಮಾನಿ ಬಳಗಕ್ಕೆ ಸೋಮಣ್ಣ ಧನ್ಯವಾದ ತಿಳಿಸಿದರು. ಕಾರ್ಯ ಕ್ರಮದಲ್ಲಿ…