Author: admin

ಕೊಲೊಂಬೋ: ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ರಾಜೀನಾಮೆಗೆ ಒತ್ತಾಯಿಸಿ ಸಾವಿರಾರು ಪ್ರತಿಭಟನಾಕಾರರು ಅವರ ನಿವಾಸಕ್ಕೆ ನುಗ್ಗಿದ ಬೆನ್ನಲ್ಲೇ ಈಗ ಅವರು ತಮ್ಮ ಅಧಿಕೃತ ನಿವಾಸದಿಂದ ಪರಾರಿಯಾಗಿದ್ದಾರೆ. ಗೋತಬಯ ರಾಜಪಕ್ಸೆ ಈಗಾಗಲೇ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಘೋಷಿಸುವುದಾಗಿ ಹೇಳಿರುವ ಬೆನ್ನಲ್ಲೇ ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿ ಸೂಟ್‌ಕೇಸ್‌ಗಳನ್ನು ಲೋಡ್ ಮಾಡುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ,ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ ಈ ಸೂಟ್ ಕೇಸ್ ಗಳೆಲ್ಲವೂ ಕೂಡ ಅಧ್ಯಕ್ಷ ರಾಜಪಕ್ಸೆ ಅವರಿಗೆ ಸೇರಿದ್ದು ಎನ್ನಲಾಗಿದೆ. ವೈರಲ್ ಆಗಿರುವ ವಿಡಿಯೋಗಳಲ್ಲಿ ಎಸ್‌ಎಲ್‌ಎನ್‌ಎಸ್ ಗಜಬಾಹು ಹಡಗಿನಲ್ಲಿ ಮೂವರು ವ್ಯಕ್ತಿಗಳು ಬೃಹದಾಕಾರದ ಸೂಟ್‌ಕೇಸ್‌ಗಳನ್ನು ಹೊತ್ತೊಯ್ಯುತ್ತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದಾಗಿದೆ.ಈ ಮೂವರು ವ್ಯಕ್ತಿಗಳು ಅವಸರದಲ್ಲಿ ಸೂಟ್ ಕೇಸ್ ಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ನ್ಯೂಸ್ 1 ಚಾನೆಲ್ ವರದಿ ಮಾಡಿದೆ. ಅಷ್ಟೇ ಅಲ್ಲದೆ ಈ ಹಡಗುಗಳನ್ನು ಹತ್ತಿದವರ ಬಗ್ಗೆ ವಿವರ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ ಎಂದು ಈ ಚಾನೆಲ್ ವರದಿ ಮಾಡಿದೆ. ಕಳೆದ ರಾತ್ರಿ ಅಧ್ಯಕ್ಷ ರಾಜಪಕ್ಷೆ…

Read More

ಹಿರಿಯೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಮರು ಬಹಳ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಬೆಳಗಿನಿಂದಲೇ ಮುಸ್ಲಿಂ ಬಾಂಧವರು ಮತ್ತು ಮಕ್ಕಳು ವಿಶೇಷ ಪೋಷಾಕು ಧರಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಬಿಲಾಲ್ ಮಸೀದಿ, ಜಾಮೀಯ ಮಸೀದಿಗಳು ಸೇರಿದಂತೆ ಹಿರಿಯೂರು ನಗರದ ಸುತ್ತಮುತ್ತಲಿನ ಎಲ್ಲಾ ಮಸೀದಿಗಳಲ್ಲಿ ಸಹ ಮುಸ್ಲಿಂ ಭಾಂಧವರು ಪ್ರಾರ್ಥನೆ ಮುಗಿಸಿ ಅಲ್ಲಾನ ನಾಮಗಳನ್ನು ಪಟಿಸುತ್ತಾ ಹಿರಿಯೂರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ನಂತರ ಹಿರಿಯೂರು ನಗರದ ಸಾವಿರಾರು ಮುಸ್ಲಿಂ ಬಾಂಧವರು ಮತ್ತು ಮಕ್ಕಳು ಸಹ ಹಿರಿಯೂರು ತಾಲ್ಲೂಕಿನ ತಾಲ್ಲೂಕು ಕಛೇರಿಯ ಹಿಂಭಾಗದ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಅನಂತರ ಜಾಮೀಯ ಮಸೀದಿಯ ಗುರುಗಳಾದ ಮುಸೇಬ್ ಉಲ್ಲಾ ಮೌಲಾನ , ಹಾಗೂ ಸಿಗ ಉಲ್ಲಾ ಮೌಲಾನ ಅವರು ಬಕ್ರೀದ್ ಹಬ್ಬದ ಮಹತ್ವ ಮತ್ತು ಮುಸ್ಲಿಂ ಬಾಂಧವರ ಕಾರ್ಯ ವೈಖರಿಯ ಬಗ್ಗೆ ಸುದೀರ್ಘವಾಗಿ ತಿಳಿಸಿದರು. ಹಿರಿಯೂರು ನಗರದ ಜಾಮಿಯಾ ಮಸೀದಿಯ ಅಧ್ಯಕ್ಷರಾದ ನವಾಬ್ ಸಾಬ್ ಅವರು…

Read More

ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ತುರುವೇಕೆರೆ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಯುವ ಜನಾಕ್ರೋಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಆಗಮಿಸಿದ್ದರು. ಪ್ರವಾಸಿ ಮಂದಿರದ ಬಳಿ ಸಾವಿರಾರು ಸಂಖ್ಯೆಯ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲಿಗರು ನಲಪಾಡ್ ಅವರನ್ನು ಸ್ವಾಗತಿಸಿದರು. ಬಳಿಕ ನೂರಾರು ಸಂಖ್ಯೆಯ ಬೈಕ್ ರ್ಯಾಲಿಯ ಮೂಲಕ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಂಚರಿಸಿ ಕಾಂಗ್ರೆಸ್ ರಾಷ್ಟ್ರ ನಾಯಕರ ಹಾಗೂ ರಾಜ್ಯ ನಾಯಕರುಗಳ ಪರ ಘೋಷಣೆ ಕೂಗಿದರು. ಬಳಿಕ ಚೌದ್ರಿ ಕನ್ವೆನ್ಷನ್ ಹಾಲ್ ನಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಮ್ಮದ್ ಹ್ಯಾರಿಸ್ ನಲಪಾಡ್, ಮುಂಬರುವ 2023ನೇ ಚುನಾವಣೆಯಲ್ಲಿ ಮತದಾರ ಪ್ರಭುಗಳು, ಬಿಜೆಪಿಯನ್ನು ಕಡೆಗಣಿಸುತ್ತಾರೆ. ಕಳೆದ 8 ವರ್ಷಗಳಿಂದ ಕೇಂದ್ರ ಸರ್ಕಾರ ದೇಶದ ಜನರಿಗೆ ಮೋಸ ಮಾಡುತ್ತಿದೆ. ಬಡವರು ಬಡವರಾಗಿ ಉಳಿದಿದ್ದಾರೆ, ನಿರುದ್ಯೋಗ ಸಮಸ್ಯೆ ಇನ್ನೂ ಹೆಚ್ಚಾಗುತ್ತಾ ಹೋಗುತ್ತಿದೆ. ರೈತರ ಕಷ್ಟ ಹೇಳತೀರದಾಗಿದೆ. ಸಾಮಾನ್ಯರು ಜನಜೀವನ ನಡೆಸಲು ಕಷ್ಟಕರವಾಗಿದೆ. ಅಗತ್ಯ ವಸ್ತುಗಳ ಬೆಲೆಗಳನ್ನು…

Read More

ಪಾವಗಡ : ತಾಲ್ಲೂಕಿನ ತಪಾಗನದೊಡ್ಡಿ ಹಾಗೂ ಶ್ರೀರಂಗಾಪುರ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿದ ಸಮಾಜ ಸೇವಕ ಹಾಗೂ ಬಿಜೆಪಿ ಮುಖಂಡರಾದ ಕೃಷ್ಣ ನಾಯ್ಕ ಅವರು ಗ್ರಾಮದಲ್ಲಿ ಇರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರೊಡನೆ ಚರ್ಚಿಸಿದರು. ಗ್ರಾಮದ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಸರ್ಕಾರದ ಗಮನಕ್ಕೆ ತಂದು ಸಮಸ್ಯೆಗಳನ್ನು ಬಗೆಹರಿಸುವ ಕೆಲಸವನ್ನು ಮಾಡುತ್ತೇನೆ ಎಂದು ಗ್ರಾಮಸ್ಥರಿಗೆ ಇದೇ ವೇಳೆ ಅವರು ಭರವಸೆ ನೀಡಿದ್ದರು. ಇದೇ ವೇಳೆ ಹಿರಿಯ ಮುಖಂಡ ಮಾಧವರೆಡ್ಡಿ, ಮಂಡಲ ಉಪಾಧ್ಯಕ್ಷ ನಾರಾಯಣಪ್ಪ, ಬಿಜೆಪಿ ಪದಾಧಿಕಾರಿಗಳಾದ ರೈತ ಮೋರ್ಚಾ ಮಂಡಲ ಅಧ್ಯಕ್ಷರು ಕೋಟೇಶ್ವರರೆಡ್ಡಿ, ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರವಿ ನಾಯ್ಕ, ಯುವ ಮುಖಂಡರಾದ ಮಣಿ ಮತ್ತು ವಸಂತ ನಾಯ್ಕ, ಕೃಷ್ಣಮೂರ್ತಿ, ಸೇರಿದಂತೆ ಗ್ರಾಮದ ಯುವಕರು, ಹಿರಿಯರು, ಕಿರಿಯರು ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುರುವೇಕೆರೆ: ತಾಲೂಕು ಕಾಂಗ್ರೆಸ್ ಪಕ್ಷದ ಎಐಸಿಸಿ ಸದಸ್ಯರಾದ ಸುಬ್ರಹ್ಮಣ್ಯ ಶ್ರೀಕಂಠೇಗೌಡ ರವರ ಅಪಾರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ತುರುವೇಕೆರೆ ಪಟ್ಟಣದ ಚೌಧರಿ ಕನ್ವೆನ್ಷನಲ್ ಹಾಲ್ ನಲ್ಲಿ ತಮ್ಮ 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹುಟ್ಟು ಹಬ್ಬದ ಸಂಭ್ರಮಾಚರಣೆಗೆ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಿಂದ ಸುಬ್ರಹ್ಮಣ್ಯ ಶ್ರೀಕಂಠೇಗೌಡರ ಬೆಂಬಲಿಗರು ಸೇರಿಕೊಂಡು ನಾಸಿಕ್ ಡೋಲ್ ಹಾಗೂ ಬೈಕ್ ರಾಲಿಯ ಮೂಲಕ ತಮ್ಮ ನಾಯಕರನ್ನು ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ನಾಯಕರ ಪರ ಘೋಷಣೆ ಕೂಗುತ್ತಾ ಪಟಾಕಿ ಸಿಡಿಸಿ ಸಂಭ್ರಮಿಸಿಕೊಂಡು ಚೌದರಿ ಸಮುದಾಯ ಭವನಕ್ಕೆ ಆಗಮಿಸಿದ್ದರು. ಇದೇ ವೇಳೆ ಪರಸ್ಪರ ಶುಭಾಶಯಗಳು ಹೇಳಿ ಕೇಕ್ ಕತ್ತರಿಸಿ ಸಂಭ್ರಮ ಹಂಚಿಕೊಂಡರು ತಮ್ಮ ಅಭಿಮಾನಿಗಳು ಸುಬ್ರಹ್ಮಣ್ಯ ಶ್ರೀಕಂಠೇಗೌಡರಿಗೆ ಬೃಹತ್ ಗಾತ್ರದ ಹಾರ ಮೂಲಕ ಶುಭಾಶಯ ಕೋರಿದರು ಈ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತಾಲೂಕು ಘಟಕದ ಅಧ್ಯಕ್ಷ ಚೌಧರಿ ಟಿ. ರಂಗಪ್ಪ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎನ್.ಶಿವರಾಜ್,  ಬೆಸ್ಕಾಂ ಮಾಜಿ ನಿರ್ದೇಶಕ ಬಿ.ಎಸ್.ವಸಂತ್ ಕುಮಾರ್, ಗೀತಾ ರಾಜಣ್ಣ, ಪಕ್ಷದ ಮುಖಂಡರಾದ ರಾಜಣ್ಣ,…

Read More

ಕೊರಟಗೆರೆ : ರಾಜ್ಯ ಹೆದ್ದಾರಿ ಸಮೀಪದ ಎಲೈಟ್ ಫ್ಯಾಮಿಲಿ ರೇಸಾರ್ಟ್ ನಲ್ಲಿ ನಡೆಯುತ್ತಿದ್ದ ಹೈಟೆಕ್ ಜೂಜು ಅಡ್ಡೆಯ ಮೇಲೆ ಮಧುಗಿರಿ ಡಿವೈಎಸ್ಪಿ ರಾಮಕೃಷ್ಣಯ್ಯ ಮತ್ತು ಕೊರಟಗೆರೆ ಸಿಪಿಐ ಸಿದ್ದರಾಮೇಶ್ವರ ನೇತೃತ್ವದ ಪೊಲೀಸರ ತಂಡದದಿಂದ ದಾಳಿ ನಡೆದಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಹಂಚಿಹಳ್ಳಿ ಗ್ರಾ.ಪಂ. ವ್ಯಾಪ್ತಿಯ ರಾಜ್ಯ ಹೆದ್ದಾರಿಗೆ ಹೊಂದಿಕೊಡಿರುವ ಎಲೈಟ್  ಫ್ಯಾಮಿಲಿ ರೆಸಾರ್ಟ್ ನಲ್ಲಿ ಅಕ್ರಮವಾಗಿ ಜೂಜು ಆಟ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊರಟಗೆರೆ ಪೊಲೀಸರ ತಂಡ ದಾಳಿ ನಡೆಸಿ 15 ಜನ ಹೈಟೆಕ್ ಜೂಜು ಆಟಗಾರರನ್ನು ಬಂಧಿಸಿದ್ದಾರೆ. ಎಲೈಟ್ ಫ್ಯಾಮಿಲಿ ರೆಸಾರ್ಟ್ ನಲ್ಲಿ ಇಸ್ಪಿಟ್ ಆಟ ಆಡುತ್ತಿದ್ದ ಬೆಂಗಳೂರು, ತುಮಕೂರು, ಮಧುಗಿರಿ ಮತ್ತು ಕೋಳಾಲದ ಹೈಟೇಕ್ ಜೂಜು ಕೋರರಿಂದ 7 ಲಕ್ಷದ 650 ರೂ. ನಗದು, 15 ಮೊಬೈಲ್ ಮತ್ತು 4 ಕಾರುಗಳನ್ನು ಕೊರಟಗೆರೆ ಪೊಲೀಸರ ತಂಡ ವಶಕ್ಕೆ ಪಡೆದು 15 ಜನ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಎಲೈಟ್ ಫ್ಯಾಮಿಲಿ ರೇಸಾರ್ಟ್ ಮೇಲೆ ನಡೆದ ದಾಳಿಯಲ್ಲಿ…

Read More

ಕುಣಿಗಲ್: ದೇವರ ದರ್ಶನ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾರು ಮಗುಚಿ ಬಿದ್ದು ಎರಡೂವರೆ ವರ್ಷ ವಯಸ್ಸಿನ ಮಗು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ನ ರಾಷ್ಟ್ರೀಯ ಹೆದ್ದಾರಿ 75ರ ನಾಗೇಗೌಡನ ಪಾಳ್ಯ ಗೇಟ್ ಬಳಿ ನಡೆದಿದೆ. ಸಮರ್ಥ(2) ಮೃತಪಟ್ಟ ಮಗುವಾಗಿದ್ದು, ಕಾರಿನಲ್ಲಿದ್ದ ಮಗುವಿನ ತಂದೆ –ತಾಯಿ  ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮಾಗಡಿ ತಾಲೂಕಿನ ಕುದೂರು ಹೋಬಳಿಯ ನಾರಸಂದ್ರ ಗ್ರಾಮದ ಪರಮೇಶ್ ಹಾಗೂ ರಮ್ಯ ದಂಪತಿ ಇಂದು ಬೆಳಗ್ಗೆ ಎಡೆಯೂರು ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ಹೋಗಿ ದರ್ಶನ ಮುಗಿಸಿ ಕಾರಿನಲ್ಲಿ ವಾಪಸ್ ಆಗುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರಿನಲ್ಲಿದ್ದ ಎರಡುವರೆ ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಅಮೃತೂರು ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಕೊರಟಗೆರೆ : ತಾಲ್ಲೂಕ್ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಕಳವು ಮಾಡಲಾಗಿದ್ದ 10 ಜಾನುವಾರುಗಳ ಜಾಡು ಹಿಡಿದ ಕೊರಟಗೆರೆ ಪೊಲೀಸ್ ತಂಡ 3 ಜನ ಅಂತರ್ ಜಿಲ್ಲಾ ಕಳ್ಳರನ್ನು ಎಡಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕೋಳಾಲ ಸರಹದ್ದಿನ ಗೋಕುಲ ಗ್ರಾಮದ ದಿನೇಶ್ ಎಂಬ ರೈತನ 2 ಸೀಮೆ ಹಸುಗಳು, ಮಧ್ಯ ವೆಂಕಟಾಪುರ ರಾಜು ಎಂಬುವರ 2 ಸೀಮೆ ಹಸುಗಳು, ಲಕ್ಕೈನ್ ಪಾಳ್ಯದ ಲಕ್ಷ್ಮಯ್ಯನ 1 ಹಸು, ಮೂಡ್ಲುಪಾಳ್ಯ ಸುಬ್ರಾಯನ 1 ಹಸು, ತಿಮ್ಮಸಂದ್ರ ಹರ್ಷವರ್ಧನನ 2 ಹಸುಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ರೈತರ ಜಾನುವಾರುಗಳು ಇತ್ತೀಚೆಗೆ ಸರಣಿ ಕಳ್ಳತನ ಕೊರಟಗೆರೆ ಪೊಲೀಸ್ ನವರಿಗೆ ತಲೆ ನೋವಾಗಿ ಪರಿಣಮಿಸಿ ಅದರ ಜಾಡು ಹಿಡಿದು ಹೊರಟ ತಂಡ 2.5 ಲಕ್ಷರು ನಗದು ಹಾಗೂ ಅದಕ್ಕೆ ಬಳಸುತ್ತಿದ್ದ ಇನ್ನಿತರ ವಸ್ತುಗಳನ್ನು ಮಾಲು ಸಹಿತ ಸೆರೆಹಿಡಿದಿದ್ದಾರೆ. ಕೊರಟಗೆರೆ ತಾಲೂಕ್ ಕೋಳಾಲ ಸರಹದ್ದಿನಲ್ಲಿ ಇತ್ತೀಚಿಗೆ ರೈತರ ರಾಸುಗಳು ರಾತ್ರಿ ವೇಳೆ ಸರಣಿ ಕಳ್ಳತನ ನಡೆಯುತಿದ್ದದ್ದು ಪೊಲೀಸ್ ನವರಿಗೆ…

Read More

ಪ್ರೇಯಸಿಯೇ ಪ್ರಿಯಕರನ ಬರ್ಬರ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಅಷ್ಟೇ ಅಲ್ಲ, ಕೊಲೆಯ ನೇರ ದೃಶ್ಯಾವಳಿಯನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ಪ್ರೇಯಸಿ ತನ್ನ ಮತ್ತೊಬ್ಬ ಪ್ರಿಯಕರನಿಗೆ ಕಳುಹಿಸಿದ್ದಾಳೆ. ಜೂನ್ ೨೪ರಂದು ನಗರದ ಹೊರವಲಯದ ವಾಜಪೇಯಿ ಬಡಾವಣೆಯ ಬಳಿ ಆಳಂದ ತಾಲೂಕಿನ ಶುಕ್ರವಾಡಿ ಗ್ರಾಮದ ದಯಾನಂದ ಲಾಡವಂತಿ(೨೪) ಎಂಬ ಯುವಕನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಬೆನ್ನಟ್ಟಿದ ಪೊಲೀಸರು ಆರೋಪಿಗಳನ್ನು ಬಂಧಿಸಿದರು. ಆದರೆ, ತನಿಖೆಯ ಸಂದರ್ಭದಲ್ಲಿ ಕೊಲೆಯ ಹಿನ್ನೆಲೆ ಕೇಳಿ ಪೊಲೀಸರೇ ಅರೆಕ್ಷಣ ದಂಗಾದರು. ದಯಾನಂದ ದುಬೈನಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ತನ್ನೂರಿಗೆ ಬಂದು ಮತ್ತೆ ಮರಳಿ ದುಬೈ ಹೋಗಲು ಸಿದ್ಧತೆ ನಡೆಸಿದ್ದ. ಈ ನಡುವೆ ಕಲಬುರಗಿಯ ಬಸವೇಶ್ವರ ಕಾಲೋನಿ ನಿವಾಸಿ ಅಂಬಿಕಾ ಎಂಬ ವಿವಾಹಿತ ಮಹಿಳೆಯಿಂದ ದಯಾನಂದರ ಮೊಬೈಲ್‌ಗೆ ಕರೆಬಂದಿದೆ. ಮಿಸ್ ಆಗಿ ಬಂದಿದ್ದ ಮೊಬೈಲ್ ಕರೆ ದಯಾನಂದನಿಗೆ ಅಂಬಿಕಾಳ ಮೇಲೆ ಪ್ರೀತಿ ಹುಟ್ಟುವಂತೆ ಮಾಡಿತ್ತು. ಇನ್ನೂ ಮದುವೆಯಾಗದ ಆತ ಮೂರೇ ದಿನಗಳಲ್ಲಿ ಸಂಪೂರ್ಣವಾಗಿ ಆಕೆಯ…

Read More

ಜಪಾನ್ ನ ಮಾಜಿ ಪ್ರಧಾನಿ ಶಿಂಜೋ ಅಬೇ ಅವರ ಮೇಲೆ ಆಗುಂತಕನೊಬ್ಬ ಗುಂಡು ಹಾರಿಸಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಮಾಜಿ ಪ್ರಧಾನಿ ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಸಾರ್ವಜನಿಕ ಕಾರ್ಯಕ್ರಮಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಆಗುಂತಕನೊಬ್ಬ ಶಿಂಜೆ ಅಬೆ ಅವರ ಮೇಲೆ ಗುಂಡು ಹಾರಿಸಿದ ಪರಿಣಾಮ ಕುತ್ತಿಗೆ ಮತ್ತು ಎದೆ ಭಾಗದಲ್ಲಿ ತೀವ್ರ ರಕ್ತಸ್ತ್ರಾವವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ೬೭ ವರ್ಷದ ಅಬೆ ಮೃತಪಟ್ಟಿದ್ದಾರೆ ಎಂದು ಮತ್ತೊಂದು ಮೂಲಗಳು ತಿಳಿಸಿವೆ. ಘಟನೆ ಸಂಬಂಧ ೪೧ ವರ್ಷದ ಯಮಗಮಿ ಹುವಾ ಎನ್ನುವ ಆಗುಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಳಿ ಇದ್ದ ಬಂದೂಕು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಂಜೊ ಅಬೆ ಭಾಷಣದ ಸಮಯದಲ್ಲಿ ಗುಂಡು ಹಾರಿಸಿದ್ದು ಗುಂಡೇಟಿಗೆ ತಕ್ಷಣ ಕುಸಿದುಬಿದ್ದರು.ಅವರ ಕುತ್ತಿಗೆಯಿಂದ ರಕ್ತಸ್ರಾವವಾಗಿತ್ತು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಈ ಮೂಲಗಳು ತಿಳಿಸಿವೆ. ಜಪಾನ್ ನಾರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ…

Read More