Subscribe to Updates
Get the latest creative news from FooBar about art, design and business.
- ದೊಡ್ಡ ಮಳಲವಾಡಿ ಗೊಲ್ಲರಹಟ್ಟಿ ಗ್ರಾಮದಲ್ಲಿ ನೀರಿನ ಸಮಸ್ಯೆ: ಪರಿಹಾರಕ್ಕೆ ಜಿಲ್ಲಾಧಿಕಾರಿ ಸೂಚನೆ
- ರಾಗಿ ಖರೀದಿ : ಮಾರ್ಗಸೂಚಿ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ
- ಮೋದಿ ಅವರು ನನ್ನ ತಬ್ಬಿ ಡಬಲ್ ಕಂಗ್ರಾಜುಲೆಷನ್ ಅಂದರು: ಸಚಿವ ವಿ.ಸೋಮಣ್ಣ
- ಬೆಸ್ಕಾಂ ಇಂದು ವಿವಿಧ ಉಪ ವಿಭಾಗಗಳಲ್ಲಿ ಗ್ರಾಹಕರ ಸಂವಾದ ಸಭೆ
- ಧರ್ಮಸ್ಥಳ ಸಂಸ್ಥೆಯಿಂದ ಶಿರಡಿ ಸಾಯಿಬಾಬಾ ಅನಾಥಾಶ್ರಮ ಕಟ್ಟಡ ಕಾಮಗಾರಿಗೆ 2 ಲಕ್ಷ ರೂ. ದೇಣಿಗೆ
- ಹೆಣ್ಣಿನ ಮೇಲೆ ಆಗುತ್ತಿರುವ ದೌರ್ಜನ್ಯದ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ: ಮಲ್ಲಿಕಾ ಬಸವರಾಜು
- ಬೀದರ್: ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಹೋಳಿ ಹಬ್ಬದ ಸಂಭ್ರಮ
- ನೌಬಾದ್ ಪಿಎಚ್ ಸಿಯಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿ: ಸೂರ್ಯಕಾಂತ ಸಾಧುರೆ ಆಗ್ರಹ
Author: admin
ತುಮಕೂರು: ಮಕ್ಕಳ ಶಿಕ್ಷಣದ ಜೊತೆಗೆ ಅವರ ಆರೋಗ್ಯದ ಕಡೆಗೂ ಆದ್ಯತೆ ನೀಡುತ್ತಿದ್ದೇವೆ. ಪೂರ್ಣ ಜವಾಬ್ದಾರಿಯಿಂದ ಎಲ್ಲವನ್ನು ಗಮನಿಸುತ್ತಿದೆ. ಹಾಗಾಗಿ ಪೋಷಕಕರು ಆತಂಕಕ್ಕೊಳಗಾಗುವುದು ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ ರೂಪಾಂತರಿ ಒಮಿಕ್ರೋನ್ ವೈರಾಣು ಪತ್ತೆಯಾಗಿದ್ದು, ಸಿಎಂ ತುರ್ತು ಸಭೆ ನಡೆಸಿ ರಾಜ್ಯದಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು. ಶಾಲೆಗೆ ಬರುವ ಮಕ್ಕಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಶಿಕ್ಷಕರಿಗೆ ಸೂಚನೆ ನೀಡಿದ್ದೇವೆ. ಶಾಲೆಗಳಲ್ಲಿ ಪ್ರತಿದಿನ ಸ್ಯಾನಿಟೈಸ್ ಮಾಡಬೇಕೆಂದು ಹೇಳಿದ್ದೇವೆ. ಯಾವುದಾದರೂ ವಿದ್ಯಾರ್ಥಿಗಳಿಗೆ ಕೋವಿಡ್ ಬಂದರೆ ತಕ್ಷಣ ಕ್ರಮ ಕೈಗೊಳ್ಳುತ್ತೇವೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಳಗಾವಿ: ರಮೇಶ್, ಲಖನ್ ಗಾಡಿ ಕಳಿಸಿದ ಅಂದ ತಕ್ಷಣ ಹೋಗಬೇಡಿ. ನಮ್ಮ ಪಕ್ಷದ ಮುಖಂಡರು ಈ ಸಂಸ್ಕೃತಿಯನ್ನು ಬಿಟ್ಟುಬಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅರಭಾವಿ ಕ್ಷೇತ್ರದಲ್ಲಿ ಮತದಾರರಿಗೆ 10,000 ಮುಂಗಡ ಪಾವತಿ ಮಾಡಿದ್ದಾರೆ ಎಂಬ ಮಾತುಗಳಿವೆ. ಮೂರ್ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಹಾಕುವುದಿಲ್ಲವೆಂಬ ಮಾಹಿತಿ ಬಂದಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಮತದಾರರ ಚೀಟಿ ಪಡೆದು ನಾವೇ ಮತ ಹಾಕುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಮತಗಟ್ಟೆಗಳಿಗೆ ಹೆಚ್ಚಿನ ಭದ್ರತೆ ನೀಡಲು ವಿಡಿಯೊ ಚಿತ್ರೀಕರಣ ನಡೆಸಲು ಚುನಾವಣಾ ಆಯೋಗ, ಚುನಾವಣಾಧಿಕಾರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದರು. ಸತೀಶ್ ಜಾರಕಿಹೊಳಿ ಸ್ವತಃ ಏಜೆಂಟ್ ಆಗುತ್ತಿದ್ದಾರೆಂದು ಕೇಳಿದೆ. ಅವರ ಉತ್ಸಾಹವನ್ನು ಇಡೀ ರಾಜ್ಯವೇ ಸ್ವಾಗತಿಸುತ್ತಿದೆ. ನಮ್ಮ ಎದುರಾಳಿಗಳು ಯಾರ ಜತೆ ಮಾತನಾಡುತ್ತಿದ್ದಾರೆಂದು ಮಾಹಿತಿ ಪಡೆಯುತ್ತೇವೆ. ನಮ್ಮದೇ ಸರ್ವೆ ತಂಡವಿದೆ. ಅವರಿಂದ ಕ್ಷೇತ್ರದ…
ಗುಬ್ಬಿ: ಗುಬ್ಬಿ ತಾಲೂಕಿನ ಕಡಬಾ ಮಜರೆ ಹೊಸಪಾಳ್ಯ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ 6 ಜನರನ್ನ ಗುಬ್ಬಿ ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಸೋಮವಾರ ಬಂಧಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ನಡೆದ ಕಾರ್ಯಾಚರಣೆಯ ವೇಳೆ ಜೂಜಿನಲ್ಲಿ ತೊಡಗಿದ್ದವರಿಂದ 6 ಮೊಬೈಲ್ ಪೋನ್ ಮತ್ತು 4 ದ್ವಿಚಕ್ರ ವಾಹನ ಜೂಜಾಟದಲ್ಲಿ ಪಣಕ್ಕಿಟ್ಟಿದ್ದ 6,200 ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಸಿಪಿಐ ಎಫ್ ಕೆ ನದಾಫ್ ಹಾಗೂ ಸಿಬ್ಬಂದಿಗಳಾದ ಪೃಥ್ವಿರಾಜ್, ಪಾತರಾಜು, ಧನಂಜಯ ಮೊದಲಾದವರು ದಾಳಿ ನಡೆಸಿದ ತಂಡದಲ್ಲಿದ್ದರು. ಘಟನೆ ಸಂಬಂಧ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುರುವೇಕೆರೆ: ತಾಲೂಕು ಕಸಬಾ ಹೋಬಳಿ ಅತ್ತಿಕುಳ್ಳೆ ಗ್ರಾಮದ ಶನೇಶ್ವರ ದೇವಾಲಯದ ವಾರ್ಷಿಕೋತ್ಸವ ಮತ್ತು ಕಾರ್ತಿಕ ದೀಪೋತ್ಸವವು ಸೋಮವಾರ ಕಾರ್ಯಕ್ರಮ ಜರಗಿತು. ಬೆಳಿಗ್ಗೆ 6:30ರಿಂದ ನವಗ್ರಹ ದೇವಾಲಯದ ಮಂಟಪದಲ್ಲಿ ಅಕ್ಕ ಪಕ್ಕದ ಗ್ರಾಮದ ದೇವರುಗಳನ್ನು ಕರೆಸಿ ಪೂಜೆ ನೆರೆವೇರಿಸಿ, ಪ್ರಸಾದ ವಿನಿಯೋಗ ಮಾಡಲಾಯಿತು. ಬಳಿಕ ಸಂಜೆ ಮುನಿಯೂರು ಗ್ರಾಮದ ಮುಖ್ಯ ರಸ್ತೆಯಿಂದ ವಿವಿಧ ಮಠಾಧೀಶರನ್ನು ಮೆರೆ ದೇವರು ಸಮೇತ ಮೆರವಣಿಗೆ ಮೂಲಕ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಮುಖಂಡರು ಹಾಲಿ ಮತ್ತು ಮಾಜಿ ಶಾಸಕರು ಅಕ್ಕ ಪಕ್ಕದ ಗ್ರಾಮಸ್ಥರು ಭಾಗಿಯಾಗಿದ್ದಾರೆ. ವರದಿ:ಸುರೇಶ್ ಬಾಬು ಎಂ., ತುರುವೇಕೆರೆ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುರುವೇಕೆರೆ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ 73ನೇ ಜನ್ಮ ದಿನಾಚರಣೆಯ ಪ್ರಯುಕ್ತ ತುರುವೇಕೆರೆಯ ಕಲ್ಪತರು ಗೆಳೆಯರ ಬಳಗದ ವತಿಯಿಂದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಖ್ಯಾತ ಹರಿಕಥೆ ವಿದ್ವಾಂಸರಾದ ಶ್ರೀನಿವಾಸ ನಡುವನಹಳ್ಳಿ, ತಬಲಾ ವಾದಕರಾದ ಸಣ್ಣಪ್ಪ ಗೋಣಿ ತುಮಕೂರು, ಕ್ಯಾಷಿಯೂ ವಾದಕರಾದ ಕೆ.ಹೆಚ್.ಕುಮಾರಸ್ವಾಮಿ, ದ್ರಾಮ ಮಾಸ್ಟರ್ ನಟರಾಜ್, ಭಜನೆ ತಾಯಮ್ಮ ಇವರನ್ನು ಸನ್ಮಾನಿಲಾಯಿತು. ಈ ಸಂದರ್ಭ ಮಾತನಾಡಿದ ಡಿ.ಪಿ.ವೇಣುಗೋಪಾಲ ಅವರು, ವೀರೇಂದ್ರ ಹೆಗ್ಗಡೆಯವರು 25 ನವೆಂಬರ್ 1948ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜನಿಸಿದರು. 20ನೇ ವಯಸ್ಸಿಗೆ ಬಂದಾಗಲೇ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾಗಿ, ಅಂದಿನಿಂದಲೂ ಆರೋಗ್ಯ, ಶಿಕ್ಷಣ, ಉದ್ಯೋಗ, ಮಹಿಳಾ ಸಬಲೀಕರಣ, ಕೃಷಿ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರ ಕಾರ್ಯಕ್ಕೆ ಹಲವಾರು ಪ್ರಶಸ್ತಿಗಳು ದೊರೆತಿವೆ ಎಂದರು. ಸಮಾರಂಭದಲ್ಲಿ ಕಲ್ಪತರು ಗೆಳೆಯರು ಬಳಗದ ವಸಂತಯ್ಯ ಗೋವಿಂದಾಗಟ್ಟ, ಮನು ಜಕ್ಕನಹಳ್ಳಿ, ರೇಣುಕಾರಾದ್ಯ, ರವಿದ್ವಾರನಹಳ್ಳಿ, ಕಡೆಹಳ್ಳಿ ಸಿದ್ದೇಗೌಡ, ರಾಜಕುಮಾರ್, ಹನುಮಂತಯ್ಯ, ಅರವಿಂದ, ಲೋಕೇಶ್ ಗೋವಿಂದಘಟ್ಟ, ಪುಟ್ಟರಾಜು ದುಮ್ಮನಹಳ್ಳಿ, ಶಿವರಾಜು ಮಹೇಶ್…
ತುಮಕೂರು: ತುಮಕೂರಿನ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ವತಿಯಿಂದ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿ, ವಿದ್ಯಾರ್ಥಿನಿಯರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಕೋಟೆಗೆ ಸ್ಥಳೀಯ ಶೈಕ್ಷಣಿಕ ಪ್ರವಾಸವನ್ನು ನವೆಂಬರ್ 28ರಂದು ಹಮ್ಮಿಕೊಂಡಿದ್ದರು. ಇದೇ ವೇಳೆ ಪ್ರವಾಸಿಗ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಡಿ.ಹೆಚ್. ಅವರು, ಚನ್ನರಾಯನದುರ್ಗ ಕೋಟೆಯ ಇತಿಹಾಸವನ್ನ ವಿವರಿಸುತ್ತಾ, 1613 ರಲ್ಲಿ ಚಿಕ್ಕಪ್ಪ ಗೌಡನ ಕಿರಿಯ ಮಗನ ಆಕಾಲಿಕ ಮರಣದ ನೆನಪಿಗಾಗಿ ಕೋಟೆಯನ್ನ ನಿರ್ಮಿಸಿದ್ದರು. ಕೋಟೆಯಲ್ಲಿ ಕಂಡುಬರುವ ಸ್ಮಾರಕಗಳಾದ ಅರಮನೆ, ಕಾವಲುಮಂಟಪ, ದೇವಾಲಯ, ಕಣಜಗಳು ಹಾಗೂ ಶಾಸನಗಳನ್ನು ಪುರಾತತ್ವದ ಹಿನ್ನೆಲೆಯಲ್ಲಿ ವಿವರಿಸಿದರು. ಇದಲ್ಲದೇ ಮುಂದಿನ ಪೀಳಿಗೆಗೆ ಇದನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಂಗಸ್ವಾಮಿ ಎಂ.ಆರ್. ಅವರು ಮಾತನಾಡಿ, ಕೌಟಿಲ್ಯನ ಸಪ್ತಂಗಗಳಲ್ಲಿ ಕೋಟೆಗಳು ಮಹತ್ವದ ಸ್ಥಾನ ಪಡೆದಿದ್ದು, ಇಂತಹ ಬೃಹತ್ ಕೋಟೆ ಜಿಲ್ಲೆಯಲ್ಲಿರುವುದು ನಮ್ಮೆಲ್ಲರ ಹೆಮ್ಮೆ ಎಂದು…
ಗುಬ್ಬಿ: ತಾಲ್ಲೂಕಿನ ಸುಮಾರು 30ಕ್ಕೂ ಅಧಿಕ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ಹೋಗಿದ್ದು, ಪರಿಣಾಮವಾಗಿ ಇಲ್ಲಿನ ಜನರು ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎನ್ನವ ಆಕ್ರೋಶಗಳು ಇದೀಗ ಕೇಳಿ ಬಂದಿದೆ. ತಾಲ್ಲೂಕಿನಲ್ಲಿ ಸುಮಾರು 138 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಈ ಪೈಕಿ ತಾಲೂಕಿನಾದ್ಯಂತ 30ಕ್ಕೂ ಅಧಿಕ ಘಟಕಗಳಲ್ಲಿ ಸರಿಯಾದ ನಿರ್ವಹಣೆಯಾಗದೇ ಕೆಟ್ಟು ಹೋಗಿದ್ದು, ಇದರ ದುರಸ್ತಿ ಮಾಡಬೇಕಾದ ಏಜೆನ್ಸಿಗಳು ಸುಮ್ಮನೆ ಕುಳಿತಿವೆ. ಇನ್ನೊಂದೆಡೆ ಪಂಚಾಯತ್ ಅಧಿಕಾರಿಗಳು ಕೂಡ ಇದನ್ನು ಪ್ರಶ್ನಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಇನ್ನೂ ನೀರಿನ ಘಟಕಗಳನ್ನು ಸರಿಪಡಿಸುವಂತೆ ಅಧಿಕಾರಿಗಳು ಏಜೆನ್ಸಿಗಳಿಗೆ ಹೇಳಿದರೂ ಅವರು ಸ್ಪಂದಿಸುತ್ತಿಲ್ಲ ಎನ್ನವ ಆರೋಪ ಕೂಡ ಕೇಳಿ ಬಂದಿದೆ. ಈ ಬಗ್ಗೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸೇರಿದಂತೆ ಹಲವೆಡೆಗಳಲ್ಲಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಲಾಗಿದೆ. ಈ ವಿಚಾರ ಹಲವಾರು ಬಾರಿ ಕೆಡಿಪಿ ಸಭೆಯಲ್ಲಿ ಪ್ರಸ್ತಾಪವಾಗಿ ಚರ್ಚೆಯಾಗಿದೆ. ಆದರೆ, ಏಜೆನ್ಸಿಯವರ ವಿರುದ್ಧ ಕ್ರಮಕೈಗೊಳ್ಳಿ ಎಂದು…
ತುಮಕೂರು: ಸಿದ್ದಗಂಗಾ ಮಠದ ಶ್ರೀಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವನ್ನು ದಾಸೋಹ ದಿನವನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಎರಡನೇ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ತಿಳಿಸಿದರು. ನಾನು ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ಅವರು ಮಾಡಿರುವ ಸೇವೆಗಳು ಅನನ್ಯ. ಆಧುನಿಕ ಭಾರತದಲ್ಲಿ ಅವರು ಮಾಡಿದ ಸೇವೆಯ ವೇಳೆಯಲ್ಲಿ ನಾವಿರುವುದು ಧನ್ಯತಾ ಭಾವ ಎಂದು ಕೊಂಡಾಡಿದರು. ಇನ್ನೂ ದಾಸೋಹ ದಿನದ ಆಚರಣೆಯ ರೂಪುರೇಷೆಗಳನ್ನು ಶ್ರೀಗಳ ಜೊತೆಗೆ ಚರ್ಚಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಮಾಧ್ಯಮಗಳಿಗೆ ತಿಳಿಸಿದರು. ಈ ವೇಳೆ ಸಿಎಂ ಜೊತೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಇದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಮಕೂರು: ಇಂದು ಕಡೆಯ ಕಾರ್ತಿಕ ಸೋಮವಾರದ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆಯ ಲಕ್ಷ ಬಿಲ್ವಾರ್ಚನೆ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಆಗಮಿಸಿ ಆಶೀರ್ವಾದ ಪಡೆದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಮಕೂರು: ಅಕಾಲಿಕ ಮಳೆಯಿಂದಾಗಿ ಮನೆ, ಬೆಳೆ ಹಾನಿಯಾಗಿದ್ದು, ಸಂತ್ರಸ್ತರಿಗೆ ಒಂದು ವಾರದಲ್ಲಿ ಪರಿಹಾರ ನೀಡಲು ಸರ್ಕಾರ ಕ್ರಮಕೈಗೊಂಡಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು. ನಗರದ ಅರಳೇಪೇಟೆ ಬಸವೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಮತ್ತು ಕುಂಭಾಭೀಷೇಕ ಮಹೋತ್ಸವದ ಅಂಗವಾಗಿ ನಡೆದ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ, ಬ್ರಮರಾಂಭ ಅಮ್ಮನವರ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತಿದ್ದರು. ದೇಶದಲ್ಲಿ ಕೋವಿಡ್ 3ನೇ ಅಲೆಯ ಸೂಚನೆ ಕಂಡು ಬರುತ್ತಿದ್ದು, ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರಧಾನಿ ಕೆಲವು ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇದೇ ವೇಳೆ ಅವರು ತಿಳಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700