Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ಪ್ರಭಾವಿ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಟ್ವಿಟರ್ ಬಳಕೆದಾರರು ಬ್ಲೂ ಟಿಕ್ ಗಳಿಸಬೇಕಾದರೆ ಮಾಸಿಕ 8 ಡಾಲರ್ ಅಂದರೆ 660 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಸುಮಾರು ಒಂದು ತಿಂಗಳ ಗೊಂದಲದ ನಂತರ ವಿಶ್ವದ ಶ್ರೀಮಂತರಲ್ಲಿ ಒಬ್ಬರಾಗಿರುವ ಉದ್ಯಮಿ ಎಲಾನ್ ಮಸ್ಕ್, ಟ್ವಿಟರ್ ನಿಯಮಗಳಲ್ಲಿ ಬದಲಾವಣೆ ರೂಪಿಸುತ್ತಿದ್ದು, ಇದುವರೆಗೆ ಟ್ವಿಟರ್ ಗ್ರಾಹಕರಿಗೆ ಯಾವುದೇ ಶುಲ್ಕ ವಿಧಿಸಲಾಗುತ್ತಿರಲಿಲ್ಲ. ಎಲಾನ್ ಮಸ್ಕ್ ಎರಡು ದಿನಗಳ ಹಿಂದೆಯಷ್ಟೇ ಟ್ವಿಟರ್ ಬ್ಲೂ ಟಿಕ್ ಗ್ರಾಹಕರು 20 ಡಾಲರ್ ಅಂದರೆ ಮಾಸಿಕ ಸುಮಾರು 1500 ರೂ. ಮಾಸಿಕ ಶುಲ್ಕ ಪಾವತಿಸಬೇಕು ಎಂದು ಹೇಳಿಕೆ ನೀಡಿದ್ದರು. ಆದರೆ ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ 8 ಡಾಲರ್ ಅಂದರೆ 660 ರೂ. ಶುಲ್ಕ ವಿಧಿಸುವುದಾಗಿ ಹೇಳಿದ್ದಾರೆ. ಬ್ಲೂ ಟಿಕ್ ಗ್ರಾಹಕರು ಮಾಸಿಕ 660 ರೂ. ಪಾವತಿಸಿದರೆ ನಕಲಿ ಖಾತೆಗಳ ಹಾವಳಿ ತಡೆಗಟ್ಟಬಹುದು. ಟ್ವಿಟರ್ ಗೆ ನಿಜವಾದ ಸಮಸ್ಯೆ ಇರುವುದು ನಕಲಿ ಖಾತೆಗಳ ಹಾವಳಿ ಎಂದು ಎಲಾನ್ ಮಸ್ಕ್ ಅಭಿಪ್ರಾಯಪಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ನವದೆಹಲಿ: ಬಹುನಿರೀಕ್ಷಿತ ಗುಜರಾತ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ, ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಗುಜರಾತದಲ್ಲಿ ಡಿಸೆಂಬರ್ 1 ಮತ್ತು 5ಕ್ಕೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8ಕ್ಕೆ ಫಲಿತಾಂಶ ಹೊರ ಬೀಳಲಿದೆ ಎಂದು ಹೇಳಿದರು. ಗುಜರಾತ್ ಅಸೆಂಬ್ಲಿಯ ಅವಧಿಯು ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಗೊಳ್ಳುತ್ತದೆ. ಹಿಮಾಚಲ ಪ್ರದೇಶ ಸದನದ ಅವಧಿಯು 2023ರ ಜನವರಿ 8ಕ್ಕೆ ಮುಗಿಯಲಿದೆ. ಹಾಗಾಗಿ ಈ ಎರಡೂ ರಾಜ್ಯಗಳಿಗೆ ಒಂದೇ ಸಮಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಕೇಂದ್ರ ಚುನಾವಣಾ ಆಯೋಗವು ಅಕ್ಟೋಬರ್ 14ರಂದು ಹಿಮಾಚಲ ಪ್ರದೇಶಕ್ಕೆ ಮಾತ್ರ ಚುನಾವಣೆ ದಿನಾಂಕ ಘೋಷಿಸಿತು. ಇದೀಗ ಗುಜರಾತ್ ಚುನಾವಣೆ ದಿನಾಂಕವೂ ಘೋಷಣೆಯಾಗಲಿದೆ. ಕಳೆದ ಅಕ್ಟೋಬರ್ 14ರಂದು ಚುನಾವಣಾ ಆಯೋಗ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಹಿಮಾಚಲ ಪ್ರದೇಶದ 68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನ.12ರಂದು ಮತದಾನ ನಡೆಯಲಿದೆ…
ತೆಲಂಗಾಣ ಸೇರಿದಂತೆ ಇಂದು 6 ರಾಜ್ಯಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಎಲ್ಲರ ಕಣ್ಣು ತೆಲಂಗಾಣ ಹಾಗೂ ಬಿಹಾರದ ಮೇಲಿದೆ. ತೆಲಂಗಾಣ ಮತ್ತು ಬಿಹಾರದಲ್ಲಿ ತಲಾ 2 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪಾರ್ಟಿ ಸದಸ್ಯರನ್ನು ಬಿಜೆಪಿ ಆಪರೇಷನ್ ಕಮಲ ಮಾಡಲು ಹೋಗಿ ಸಿಕ್ಕಿಬಿದ್ದಿದ್ದರಿಂದ ಇಲ್ಲಿನ ಚುನಾವಣೆ ಪ್ರಮುಖ ಆಕರ್ಷಣೆಯಾಗಿದೆ. ತೆಲಂಗಾಣದ ಮನುಗೊಡೆ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆ ಆಗಿದ್ದರಿಂದ ಈ ಕ್ಷೇತ್ರದ ಮೇಲೆ ಬಿಜೆಪಿ ಹಾಗೂ ಟಿಆರ್ ಎಸ್ ಪಕ್ಷ ದೃಷ್ಟಿ ನೆಟ್ಟಿದೆ.ಟಿಆರ್ ಎಸ್ ನ ಕುಶುಕುಂಟ್ಲಾ ಪ್ರಭಾಕರ ರೆಡ್ಡಿ, ಬಿಜೆಪಿಯ ರಾಜಗೋಪಾಲ ರೆಡ್ಡಿ ಹಾಗೂ ಕಾಂಗ್ರೆಸ್ ನ ಪಳವಿ ಶ‍್ರಾವಂತಿ ಸ್ಪರ್ಧಿಸುತ್ತಿದ್ದಾರೆ. ಮತ್ತೊಂದೆಡೆ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡ ನಂತರ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಬಿಜೆಪಿ ಹಾಗೂ ಬಿಜೆಡಿ ನಡುವಿನ ಸಂಘರ್ಷದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬ ಕುತೂಹಲ ಮೂಡಿದೆ. ಮೊಕಾಮ ಮತ್ತು…
ಉತ್ತರ ಕೊರಿಯಾ ದೂರಗಾಮಿ ಮತ್ತು ಸಮೀಪದ ಮೂರು ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದ್ದರಿಂದ ದಕ್ಷಿಣ ಕೊರಿಯಾ ಹಾಗೂ ಜಪಾನ್ ನಾಗರಿಕರಿಗೆ ಅಲರ್ಟ್ ಘೋಷಿಸಿದೆ. ದಕ್ಷಿಣ ಕೊರಿಯಾದ ದ್ವೀಪಗಳಲ್ಲಿ ಆಸರೆ ಪಡೆದಿರುವ ನಾಗರಿಕರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಜಪಾನ್ ಸೂಚಿಸಿದೆ. ಪಿಯೊಗಾಂಗ್ ಬಳಿಯ ಸುನಾನ್ ದ್ವೀಪದ ಮೂಲಕ ದಕ್ಷಿಣ ಏಷ್ಯಾ ರಾಷ್ಟ್ರಗಳನ್ನು ತಲುಪುವ ಸಾಮರ್ಥ್ಯದ ದೂರಗಾವಿ ಕ್ಷಿಪಣಿ ಬುಧವಾರ ಬೆಳಿಗ್ಗೆ 7.30ಕ್ಕೆ ಉಡಾಯಿಸಲಾಗಿದೆ ಎಂದು ಉತ್ತರ ಕೊರಿಯಾದ ಸೇನೆ ಹೇಳಿಕೆ ನೀಡಿದೆ. ಇದೇ ವೇಳೆ ಎರಡು ಕಡಿಮೆ ದೂರ ಗುರಿ ಮುಟ್ಟುವ ಕ್ಷಿಪಣಿಗಳನ್ನು ಬುಧವಾರ ಬೆಳಿಗ್ಗೆ 8.49ಕ್ಕೆ ಪರೀಕ್ಷಿಸಲಾಯಿತು ಎಂದು ಸೇನೆ ಹೇಳಿಕೊಂಡಿದೆ. ಹಿಂದಿನ ದಿನವಷ್ಟೇ ಒಂದೇ ದಿನ 20 ಕ್ಷಿಪಣಿಗಳನ್ನು ಉತ್ತರ ಕೊರಿಯಾ ಪರೀಕ್ಷೆಗೊಳಪಡಿಸಿದ್ದು, ಇದರಲ್ಲಿ ಒಂದು ಕ್ಷಿಪಣಿ ದಕ್ಷಿಣ ಕೊರಿಯಾ ವ್ಯಾಪ್ತಿಯ ಸಮುದ್ರದಲ್ಲಿ ಬಿದ್ದಿದೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಕ್ ಬ್ಯಾಕ್ ಆರೋಪ ಮಾಡಿ ಲೋಕಾಯುಕ್ತಕ್ಕೆ ದೂರು ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ದೂರು ದಾಖಲಾಗಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರುತ್ತದೆ ಎಂದು ಹೇಳಿದರು. ಶಿವಮೊಗ್ಗದಲ್ಲಿ ಇಂದು ಮಾತಾನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಅನಗತ್ಯವಾಗಿ ಆರೋಪ ಮಾಡುವುದು ಸಾಮಾನ್ಯವಾಗಿದೆ. ಕಿಕ್ ಬ್ಯಾಕ್ ಪಡೆದ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ತನಿಖೆ ನಂತರ ಸತ್ಯಾಸತ್ಯತೆ ಗೊತ್ತಾಗಲಿದೆ. ತನಿಖೆ ನಂತರ ಅವರದಾಗಲಿ ನಮ್ಮದಾಗಲಿ ಗೊತ್ತಾಗಲಿದೆ ಎಂದರು. ಭಾರತ ಜೋಡೊ ಯಾತ್ರೆ ಜನರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ಕಳೆದ ಐದು ವರ್ಷಗಳಲ್ಲಿ ಕಾಲೇಜಿನಲ್ಲಿ ನಡೆದ ಚಟುವಟಿಕೆಗಳನ್ನಾಧರಿಸಿ ನ್ಯಾಕ್ ಮಾನ್ಯತೆಯನ್ನು ನವೀಕರಿಸಲು ನ್ಯಾಕ್ ಮಾನ್ಯತಾ ತಂಡ ಕಾಲೇಜಿಗೆ ಭೇಟಿ ನೀಡಿ, ಶಿಕ್ಷಣಕ್ಕೆ ಪೂರಕವಾದ ಎಲ್ಲ ಅಂಶಗಳು, ಸೌಲಭ್ಯಗಳನ್ನು ಪರಿಶೀಲಿಸಿದ್ದು, ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2.94 ಅಂಕಗಳಿಸಿ “ಬಿ ಪ್ಲಸ್ ಪ್ಲಸ್” (++) ಶ್ರೇಣಿಯನ್ನು ನೀಡಿದ್ದು, ಈ ಶ್ರೇಣಿ ಪಡೆದ ಜಿಲ್ಲೆಯ ಮತ್ತು ತುಮಕೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಏಕೈಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಾಗಿದೆ ಎಂದು ಪ್ರಾಂಶುಪಾಲರಾದ ಪ್ರೊ.ಡಿ.ಎಸ್.ಮುನೀಂದ್ರಕುಮಾರ್ ತಿಳಿಸಿದ್ದಾರೆ. ನ್ಯಾಕ್ ಮಾನ್ಯತೆಯ ಪ್ರಮಾಣ ಪತ್ರ ಮತ್ತು ಗ್ರೇಡ್ ಪ್ರಮಾಣಪತ್ರವನ್ನು ಸ್ವೀಕರಿಸಿದ ಪ್ರಯುಕ್ತ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಧ್ಯಾಪಕರನ್ನುದ್ದೇಶಿಸಿ ಮಾತನಾಡಿ, ನ್ಯಾಕ್ ಪೀರ್ ಟೀಮ್ ಅಕ್ಟೋಬರ್ 28 ಮತ್ತು 29 ರಂದು ಭೇಟಿ ನೀಡಿತ್ತು. ಆನ್ಲೈನ್ ಮೂಲಕ ಸಲ್ಲಿಕೆಯಾದ ದಾಖಲೆಗಳನ್ನು ಪರಿಶೀಲಿಸಿ, ಶಾಸಕರು ಮತ್ತು ಕಾಲೇಜು ಅಭಿವೃದ್ದಿ ಸಮಿತಿ ಸಭೆ ನಡೆಸಿ, ವಿದ್ಯಾರ್ಥಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು, ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಕಛೇರಿಯ ಎಲ್ಲ ವಿವರಗಳನ್ನು ಪರಿಶೀಲಿಸಿ ಪ್ರಗತಿಯನ್ನು…
ಬೆಂಗಳೂರು/ತುಮಕೂರು: ಮಾಜಿ ಸಂಸದ ಎಸ್.ಪಿ.ಮುದ್ದ ಹನುಮಗೌಡ,ಹಿರಿಯ ನಟ ಶಶಿಕುಮಾರ್,ಮಾಜಿ ಐಎಎಸ್ ಅಧಿಕಾರಿ ಬಿ.ಹೆಚ್.ಅನಿಲ್ ಕುಮಾರ್ ಸೇರಿದಂತೆ ಹಲವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಬೈರತಿ ಬಸವರಾಜ್, ಎಸ್ ಟಿ ಸೋಮಶೇಖರ್, ಅಶ್ವಥ್ ನಾರಾಯಣ್, ರಾಜ್ಯಸಭಾ ಸದಸ್ಯ ಜಗ್ಗೇಶ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಿ.ಪಿ.ಯೋಗೇಶ್ವರ್, ಲಕ್ಷ್ಮಣ್ ಸವದಿ, ಗೋವಿಂದ ಕಾರಜೋಳ, ಶಾಸಕ ಮಸಾಲೆ ಜಯರಾಂ ಇನ್ನು ಮುಂತಾದ ರಾಜ್ಯಮಟ್ಟದ ಮುಖಂಡರುಗಳ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ತುಮಕೂರು ಜಿಲ್ಲೆಯ ಬಲಿಷ್ಟ ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಹಾಗೂ ನಿವೃತ್ತ ನ್ಯಾಯಮೂರ್ತಿಗಳಾದ ಎಸ್ ಪಿ ಮುದ್ದಹನುಮೇಗೌಡ, ಲೋಕೋಪಯೋಗಿ ಇಲಾಖೆಯ ನಿವೃತ್ತ ಐ ಎ ಎಸ್ ಅಧಿಕಾರಿ ಬಿ.ಹೆಚ್.ಅನಿಲ್ ಕುಮಾರ್, ಚಲನ ಚಿತ್ರ ನಟ ಹಾಗೂ ಮಾಜಿ ಸಂಸದರಾದ ಶಶಿಕುಮಾರ್, ಮೈಸೂರಿನ ರಮೇಶ್ ಮುನಿಯಪ್ಪ, ತೆಂಗು ಮತ್ತು ನಾರು ಮಂಡಳಿಯ ಮಾಜಿ ಅಧ್ಯಕ್ಷ ವೆಂಕಟಾಚಲಯ್ಯ, ರೈತ ಮುಖಂಡ ಸಂಜೀವ ರೆಡ್ಡಿ, ದಲಿತ ಮುಖಂಡರಾದ ದಾಡಿ ವೆಂಕಟೇಶ್ ಮೂರ್ತಿ, ಕಲ್ಬುರ್ಗಿ ಜಿಲ್ಲೆಯ ಹನುಮಂತ ರಾವ್ ಬಿಜೆಪಿಗೆ…
ಬೆಂಗಳೂರು: ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ತಯಾರಿ ಜೋರಾಗಿದೆ. ಚುನಾವಣೆಗೆ ಸ್ಪರ್ಧಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಈ ಸಂಬಂಧ ಮಾತನಾಡಿದ ಡಿ.ಕೆ .ಶಿವಕುಮಾರ್ , ಮುಂದಿನ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ, ಚುನಾವಣೆಗೆ ಸ್ಪರ್ಧಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ 5 ಸಾವಿರ ಕೊಟ್ಟು ಅರ್ಜಿ ಪಡೆಯಬಹುದು, ಅರ್ಜಿ ಜೊತೆ 2 ಲಕ್ಷ ಡಿಡಿ ಶುಲ್ಕ ನೀಡಬೇಕು. ಎಸ್ ಸಿ ಹಾಗೂ ಎಸ್ ಟಿ ಗೆ 1 ಲಕ್ಷ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಯಾರಿಗೆ ಟಿಕೆಟ್ ಬೇಕು ಅವರು ಅರ್ಜಿ ಸಲ್ಲಿಸಬಹುದು, ವಲಸೆ ಹೋದವರಿಗೆ ಮುಕ್ತ ಆಹ್ವಾನವಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಯಾರು ಕಾಂಗ್ರೆಸ್ ಟಿಕೆಟ್ ಬಯಸುತ್ತಾರೋ ಅವರು ಅರ್ಜಿ ಹಾಕಬಹುದು. ನಾನು ಸ್ಪರ್ಧಿಸಬೇಕಾದರೂ ಕಾಂಗ್ರೆಸ್ ಪಕ್ಷಕ್ಕೆ ಅರ್ಜಿ ಹಾಕಬೇಕು. ಕಾಂಗ್ರೆಸ್ ಟಿಕೆಟ್ ಗೆಯಾರು ಬೇಕಾದರೂ ಅರ್ಜಿ ಹಾಕಬಹುದು. ವಲಸೆ ಹೋದವರಿಗೂ ಮುಕ್ತ ಆಹ್ವಾನ ಎಂದು…
ಹುಬ್ಬಳ್ಳಿ : ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಮೂವರು ಆರೋಪಿಗಳನ್ನು ಹುಬ್ಬಳ್ಳಿಯ ಕಸಬಾಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಮ್, ಮಲಿಕ್, ಮುಬಾರಕ್ ಬಂಧಿತ ಆರೋಪಿಗಳು. ಬುಕ್ ಫ್ಯಾಕ್ಟರಿ ಕೆಲಸ ಮಾಡ್ತಿದ್ದ 36 ವರ್ಷದ ಮಹಿಳೆ ಮಧ್ಯಾಹ್ನ ಊಟಕ್ಕೆ ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಆರೋಪಿಗಳು ಮಹಿಳೆಗೆ ಚಾಕು ತೋರಿಸಿ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆ ಕಿರುಚಾಡಿದಾಗ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದವರು ಓಡಿ ಬರುತ್ತಲೇ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ. ಸದ್ಯ ಪೊಲೀಸರು ಪರಾರಿಯಾದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವಿಜಯನಗರ: ಮುಳುಗುತ್ತಿದ್ದ ಸಹೋದರ ರಕ್ಷಣೆ ಮಾಡಲು ಹೋಗಿ ತಮ್ಮ ಸೇರಿ ಮೂವರು ಅಕ್ಕಂದಿರು ಕೂಡ ಸಾವನ್ನಪ್ಪಿರುವ ಘಟನೆ ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡಾದಲ್ಲಿ ನಡೆದಿದೆ. ಒಂದೇ ಕುಟುಂಬದ ಅಭಿ (13), ಅಶ್ವಿನಿ(14), ಕಾವೇರಿ(18), ಅಪೂರ್ವ(18) ಮೃತಪಟ್ಟಿದ್ದಾರೆ. ತಾಂಡಾದ ಅಭಿ ಹೊಂಡದಲ್ಲಿ ಮುಳುಗುತ್ತಿದ್ದನು, ಇದನ್ನು ಕಂಡ ಅಕ್ಕಂದಿರು ಒಬ್ಬರಾದಂತೆ ಒಬ್ಬರು ಹೋಗಿ ರಕ್ಷಣೆಗೆ ತೆರಳಿ ನೀರುಪಾಲಾಗಿದ್ದಾರೆ. ಮೂವರ ಶವ ಪತ್ತೆಯಾಗಿದ್ದು ಅಪೂರ್ವಾ ಶವಕ್ಕಾಗಿ ಹುಡುಕಾಟ ನಡೆದಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz