Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ಮಧುಗಿರಿ: 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಾಸಕರಾದ ಎಂ.ವಿ.ವೀರಭದ್ರಯ್ಯ, ಉಪ ವಿಭಾಗ ಅಧಿಕಾರಿಗಳಾದ ಸೋಮಪ್ಪ ಕಡಕೋಳ, ತಾಲೂಕು ದಂಡಾಧಿಕಾರಿ ಸುರೇಶ್ ಆಚಾರ್ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಹಲವು ಗಣ್ಯರು ಪಟ್ಟಣದ ಪಾವಗಡ ಸರ್ಕಲ್ ಬಳಿ ಇರುವ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ನಂತರ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕಾಲ್ನಡಿಗೆ ಮೆರೆವಣಿಗೆ ಮುಖಾಂತರ ಸಾಗಿದರು. ಕ್ರೀಡಾಂಗಣದಲ್ಲಿ ಮೊದಲಿಗೆ ರಾಷ್ಟ್ರಗೀತೆ ಹಾಡುವ ಮೂಲಕ ಉಪವಿಭಾಗಾಧಿಕಾರಿಗಳು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ನಾಡಗೀತೆ ಹಾಡುವ ಮೂಲಕ ಶಾಸಕರು ನಾಡ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಉಪವಿಭಾಗ ಅಧಿಕಾರಿ ಸೋಮಪ್ಪ ಕಡಕೋಳ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಆರಂಕುಸಮಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಮಂ, ಮರಿದುಂಬಿಯಾಗಿ ಮೇಣ್ ಕೋಗಿಲೆಯಾಗಿ ಪುಟ್ಟುವುದು ನಂದನದೊಳ್ ವನವಾಸಿ ದೇಶದೊಳ್ ಎಂದು ತನ್ನ ತಾಯಿನಾಡಿನ ಬಗ್ಗೆ ಇರುವ ಪ್ರೀತಿಯನ್ನು ಮಹಾಕವಿ ಪಂಪ ವ್ಯಕ್ತಪಡಿಸಿರುತ್ತಾರೆ ಎಂದರು. ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಬದುಕು…
ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಸಾಧನೆ ಪ್ರಗತಿಯನ್ನ ಕೊಂಡಾಡಿದರು. ಸಮಾವೇಶವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಕನ್ನಡಿಗರು ಕನ್ನಡ ಭಾಷೆಯನ್ನೇ ಜೀವಾಳವಾಗಿಸಿಕೊಂಡಿದ್ದಾರೆ. ಇದು ಶ್ರೀಮಂತ ಸಂಸ್ಕೃತಿ ಹೊಂದಿರುವ ನಾಡು. ಕರ್ನಾಟಕದ ಮಣ್ಣು ಎಲ್ಲದಕ್ಕಿಂತ ಸುಂದರ. ಪ್ರತಿಭೆ ತಂತ್ರಜ್ಞಾನದ ಬ್ರಾಂಡ್ ಹೊಂದಿರುವ ಬೆಂಗಳೂರು. ಮೃದು ಭಾಷೆ ಕನ್ನಡ. ಕರ್ನಾಟಕ ಅಪಾರ ಪ್ರಾಕೃತಿಕ ಸಂಪತ್ತು ಹೊಂದಿರುವ ರಾಜ್ಯ. ಕರ್ನಾಟಕದಲ್ಲಿ ತಂತ್ರಜ್ಞಾನದ ಜೊತೆ ಸಂಸ್ಕೃತಿಯೂ ಇದೆ. ಕರ್ನಾಟಕದಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗುತ್ತಿದೆ. ತಂತ್ರಜ್ಞಾನ ಬಳಕೆಯಲ್ಲಿ ಕರ್ನಾಟಕ ಸಾಕಷ್ಟು ಮುಂಚೂಣಿಯಲ್ಲಿದೆ ಎಂದು ನುಡಿದರು. ಭಾರತದ ಅಭಿವೃದ್ಧಿಗೆ ಕರ್ನಾಟಕದ ಕೊಡುಗೆ ಅಪಾರ. ಕರ್ನಾಟಕ ಇಡೀ ಜಗತ್ತನ್ನೇ ಸೆಳೆದ ರಾಜ್ಯ. ಕರ್ನಾಟಕ ಎಲ್ಲದರಲ್ಲೂ ಮುನ್ನಡೆಯುತ್ತಿದೆ. ಹೂಡಿಕೆಯಿಂದಾಗಿ ಉದ್ಯೋಗ ಸೃಷ್ಠಿಯಾಗುತ್ತದೆ. ಕರ್ನಾಟಕದಲ್ಲಿ ಡಬಲ್ ಇಂಜಿನ್ ಶಕ್ತಿ ಇದೆ. ಕೇಂದ್ರ ರಾಜ್ಯದಲ್ಲಿ ಒಂದೇ ಪಕ್ಷ ಇರುವುದರಿಂದ ಅಭಿವೃದ್ಧಿಯತ್ತ ಕೊಂಡೊಯ್ಯಲಾಗುತ್ತಿದೆ ಎಂದು ಹೇಳಿದರು. ಹಾಗೆಯೇ ಭಾರತದ ಅರ್ಥ ವ್ಯವಸ್ಥೆ…
ಬೆಂಗಳೂರಿನಲ್ಲಿ ಸುಮಾರು 2 ಸಾವಿರ ಮೆಟ್ರೊ ಪ್ರಯಾಣಿಕರು ನವೆಂಬರ್ 1 ರಂದು ನಮ್ಮ ಮೆಟ್ರೊ ಪರಿಚಯಿಸಿರುವ ನಮ್ಮ ಮೆಟ್ರೊ ಆ್ಯಪ್ ಹಾಗೂ ವಾಟ್ಸ್ ಆ್ಯಪ್ ಆ್ಯಪ್ ಆಧಾರಿತ ಟಿಕೆಟ್ ವ್ಯವಸ್ಥೆ ಮೂಲಕ ಕ್ಯೂಆರ್ ಟಿಕೆಟ್ ಗಳನ್ನು ಖರೀದಿಸಿದ್ದಾರೆ. ಈಗ ನಮ್ಮ ಮೆಟ್ರೊ ಪ್ರಯಾಣಿಕರು ನಮ್ಮ ಮೆಟ್ರೊ ಆ್ಯಪ್‌ಗೆ ಲಾಗ್ ಆನ್ ಆಗಿ, ಅಥವಾ ವಾಟ್ಸಪ್ ನ ಚಾಟ್‌ಬಾಟ್ ಸಂಖ್ಯೆ (೮೧೦ ೫೫೫ ೬೬ ೭೭) ಮೂಲಕ ಟಿಕೆಟ್ ಗಳನ್ನು ಖರೀದಿಸಬಹುದು. ಈ ಆ್ಯಪ್ ಗಳ ಮೂಲಕವೇ ಹಣ ಪಾವತಿಸಿ, ಜೊತೆಗೆ ಟಿಕೆಟ್ ದರದ ಮೇಲೆ ಶೇ.5ರಷ್ಟು ರಿಯಾಯಿತಿಯನ್ನೂ ಪಡೆದುಕೊಳ್ಳಬಹುದಾಗಿದೆ. ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್)ನ ಪ್ರಕಾರ, ಮಂಗಳವಾರದಂದು ರಾತ್ರಿ ೮.೪೫ರವರೆಗೆ ನಮ್ಮ ಮೆಟ್ರೊ ಆ್ಯಪ್ ಹಾಗೂ ವಾಟ್ಸ್ ಆ್ಯಪ್ ಮೂಲಕ ಸುಮಾರು ೧,೬೬೯ ಪ್ರಯಾಣಿಕರು ಕ್ಯೂಆರ್ ಟಿಕೆಟ್ ಗಳನ್ನು ಖರೀದಿಸಿದ್ದರು ಎಂದು ಮಾಹಿತಿ ನೀಡಿದೆ. ಬೆಳಗಿನ ಸಮಯದಲ್ಲಿ ಸುಮಾರು ೧೪,೪೦೦ ಜನರು ವಾಟ್ಸ್ ಆ್ಯಪ್ ಚಾಟ್ ಬಾಟ್ ಅನ್ನು…
ವಿದ್ಯುತ್ ತಂತಿ ಮೇಲಿದ್ದ ವಸ್ತು ತೆಗೆಯಲು ಹೋದಾಗ ಶಾಕ್ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಉದಯಗಿರಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮಲ್ಲಪ್ಪ ಮೃತಪಟ್ಟ ವ್ಯಕ್ತಿ. ಮನೆ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿ ಮೇಲೆ ಬಿದ್ದು ವಸ್ತು ತೆಗೆಯಲು ಮಲ್ಲಪ್ಪ ಮುಂದಾಗಿದ್ದಾರೆ. ನೆಲ ಒರೆಸುವ ಮಾಪ್ ಬಳಸಿ ತಂತಿ ಮೇಲಿದ್ದ ವಸ್ತು ತೆಗೆಯಲು ಮುಂದಾಗಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮಲ್ಲಪ್ಪ ಸಾವನ್ನಪ್ಪಿದ್ದಾರೆ. ಈ ದೃಶ್ಯ ಸಿಸಿ ಟಿವಿಯಲ್ಲಿ ರೆಕಾರ್ಡ್ ಆಗಿದೆ. ಈ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ನಾಪತ್ತೆಯಾಗಿದ್ದು, ಪತ್ತೆಗೆ ಶೋಧ ತೀವ್ರಗೊಂಡಿದೆ.ರೇಣುಕಾಚಾರ್ಯ ಅವರ ಸಹೋದರ ಪುತ್ರ ಚಂದ್ರ ಶೇಖರ್ ಭಾನುವಾರದಿಂದ ನಾಪತ್ತೆ ಆಗಿದ್ದು, ಇದುವರೆಗೆ ಮನೆಗೆ ಹಿಂದಿರುಗಿ ಬಂದಿಲ್ಲ. ಚಂದ್ರಶೇಖರ್ ಕಳೆದ ಭಾನುವಾರ ಶಿವಮೊಗ್ಗಕ್ಕೆ ವಿನಯ್ ಗುರೂಜಿ ಭೇಟಿಯಾಗಲು ತೆರಳಿದ್ದರು. ವಿನಯ್ ಗುರೂಜಿ ಭೇಟಿಯಾದ ನಂತರ ಶಿವಮೊಗ್ಗದಿಂದ ಹೊನ್ನಾಳಿಗೆ ಚಂದ್ರಶೇಖರ್ ಹೊರಟಿದ್ದು ಈ ವೇಳೆ ಕಾರು ಸಮೇತ ಕಾಣೆಯಾಗಿದ್ದಾರೆ. ಚಂದ್ರಶೇಖರ್ ಫೋನ್ ಸ್ವಿಚ್ ಆಫ್ ಆಗಿರುವುದು ತಿಳಿದುಬಂದಿದೆ. ಇನ್ನು ಸಹೋದರನ ಪುತ್ರನನ್ನ ನೆನೆದು ಶಾಸಕ ಎಂ.ಪಿ ರೇಣುಕಾಚಾರ್ಯ ಕಣ್ಣೀರಿಟ್ಟಿದ್ದಾರೆ. ಕಳೆದವಾರ ನನ್ನ ಮಕ್ಕಳ ಜೊತೆ ಟ್ರಿಪ್ ಗೆ ಪ್ಲಾನ್ ಮಾಡಿದ್ದ. ಜನತೆಗೆ ಕಷ್ಟ ಎಂದಾಗ ಸಹಾಯಕ್ಕೆ ನಿಲ್ಲುತ್ತಿದ್ದ. ಎಲ್ಲರೂ ಕರೆ ಮಾಡಿ ಧೈರ್ಯ ತುಂಬುತ್ತಿದ್ದಾರೆ. ನಾಯಕರು ಜನತೆ ನಮ್ಮ ಜತೆಗಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ಪೊಲೀಸರು ಶೋಧಕಾರ್ಯವನ್ನು ತೀವ್ರಗೊಳಿಸಿದ್ದು ದಾವಣಗೆರೆ ಶಿವಮೊಗ್ಗ, ಚಿತ್ರದುರ್ಗದಲ್ಲಿ ಶೋಧಕಾರ್ಯ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಕ್ ಬ್ಯಾಕ್ ಆರೋಪ ಕೇಳಿಬಂದಿದ್ದು, ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿದೆ. ಸಾಲದ ರೂಪದಲ್ಲಿ 1.3 ಕೋಟಿ ಹಣ ಪಡೆದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಅದು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಇದೀಗ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ದೂರು ನೀಡಿದ್ದಾರೆ. ಇನ್ನು ಕಿಂಗ್ಸ್ ಕೋರ್ಟ್ ಎಲ್ ವಿವೇಕಾನಂದರಿಂದ 1.3 ಕೋಟಿ ರೂ. ಚೆಕ್ ಮೂಲಕ ಹಣ ಪಡೆದಿರುವುದನ್ನ ಎನ್ ಆರ್ ರಮೇಶ್ ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ಟರ್ಫ್ ಕ್ಲಬ್ ಉತ್ಸುವಾರಿ ಹುದ್ದೆಗೆ 2014 ರಲ್ಲಿ ವಿವೇಕಾನಂದ ನೇಮಕವಾಗಿದರು. 3 ವರ್ಷದ ಅವಧಿಗೆ ನೇಮಕಮಾಡಿ ಆದೇಶವನ್ನ ಸಿದ್ದರಾಮಯ್ಯ ಮಾಡಿದರು. ಲೋಕಾಯುಕ್ತ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ವಿವೇಕ್ ರಿಂದ ಸಾಲ ಪಡೆದಿದ್ದಾಗಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಕೊರಟಗೆರೆ: ಕರ್ನಾಟಕದ ಕನ್ನಡಿಗರಿಗೆ ನವಂಬರ್-1 ಹೆಮ್ಮೆಯ ದಿನವಾಗಿದೆ. ಕರ್ನಾಟಕದ ಪ್ರತಿ ಮನೆಯಲ್ಲಿ ಇಂದು ಹಬ್ಬದ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಣೆ ಮಾಡಿದ್ದಾರೆ. ರಾಜ್ಯ ಸರಕಾರದ ಕೋಟಿಕಂಠ ಗಾಯನ ಎನ್ನುವ ವಿಶಿಷ್ಟ ಕಾರ್ಯಕ್ರಮವು ಕನ್ನಡಿಗರ ಗಮನ ಸೆಳೆದಿದೆ ಎಂದು ಕೊರಟಗೆರೆ ತಹಶೀಲ್ದಾರ್ ನಾಹೀದಾ ಜಮ್ ಜಮ್ ಹೇಳಿದರು. ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕೊರಟಗೆರೆ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ 67ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ರಾಜ್ಯವು ಹತ್ತಾರು ವಿಸ್ಮಯ ಪ್ರಕೃತಿಯನ್ನು ಒಳಗೊಂಡಿದೆ. ನಮ್ಮ ನಾಡು ಶ್ರೀಗಂಧದ ಬೀಡು. ಹಚ್ಚಹಸುರಿನ ಸುಂದರ ಬೆಟ್ಟಗುಡ್ಡಗಳ ಗೂಡು, ಪವಿತ್ರ ಕಾವೇರಿ, ತುಂಗಾಭದ್ರೆ ನದಿಗಳು ಹರಿಯುವ, ಸಾಧುಸಂತರು, ದಾಸರು, ಶಿವಶರಣರು, ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ ಈ ನಾಡಿಗೆ ಎಂದು ಹೇಳಿದರು. ಕೊರಟಗೆರೆ ಪಪಂ ಅಧ್ಯಕ್ಷೆ ಕಾವ್ಯ ರಮೇಶ್ ಮಾತನಾಡಿ, ಆಲೂರು ವೆಂಕಟರಾವ್ 1905ರಲ್ಲಿ…
ಕಲಬುರಗಿ: ಬಹಿರ್ದೆಸೆಗೆ ತೆರಳಿದ್ದ ವೇಳೆ ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸೆಗಿ ಕೊಲೆ ಮಾಡಲಾಗಿದೆ. ಆಳಂದ ತಾಲ್ಲೂಕಿನ ಗ್ರಾಮದವೊಂದರ ಕಬ್ಬಿನ ಗದ್ದೆಯಲ್ಲಿ ನಡೆದಿದೆ. 9ನೇ ತರಗತಿ ಓದುತ್ತಿದ್ದ ಬಾಲಕಿ ಸಂಬಂಧಿಕರ ಮನೆಯಲ್ಲಿ ನೆಲೆಸಿದ್ದಳು. ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಬುರ್ಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ದೀಪ ಬೆಳಗುವ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು. ಈ ವೇಳೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ನಿರ್ಮಲಾ ಸೀತಾರಾಮನ್ ಪೀಯೂಷ್ ಗೋಯಲ್, ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಉಪಸ್ಥಿತರಿದ್ದರು. ಸರ್ಕಾರವು 5 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ನಿರೀಕ್ಷೆಯಲ್ಲಿದ್ದು, ದೇಶ ವಿದೇಶಗಳ ಖ್ಯಾತ ಉದ್ಯಮಿಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶ ಉದ್ಧೇಶಿಸಿ ವರ್ಚೂವಲ್ ಮೂಲಕ ಪ್ರಧಾನಿ ಮೋದಿ ಮಾತನಾಡುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಧುಗಿರಿ: ತಾಲೂಕಿನ ಜೆ ಸಿ ಬಿ ಬಾಯ್ಸ್ ವತಿಯಿಂದ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆ ನಡೆಯಿತು. 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕಿನ ಜೆಸಿಬಿ ಬಾಯ್ಸ್ ಜೆಸಿಬಿಗಳಿಗೆ ಕನ್ನಡ ಬಾವುಟಗಳನ್ನು ಕಟ್ಟಿಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಿದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz