Author: admin

ಕೊರಟಗೆರೆ:  ಶಿಕ್ಷಣ, ಆರೋಗ್ಯ,ಕೃಷಿ, ಕೈಗಾರಿಕಾ ಕ್ಷೇತ್ರಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರ ಹೆಚ್ಚಿನ ಆದ್ಯತೆಯ ಅನುದಾನ ಮೀಸಲಿಡಬೇಕಿದೆ ಎಂದು ಶಾಸಕ ಡಾ.ಜಿ.ಪರಮೇಶ್ವರ್ ಆಗ್ರಹಿಸಿದರು. ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ  ಬೈರೇನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ಮತ್ತು ತಾಲ್ಲೂಕು ಪಂಚಾಯತ್ ಯಿಂದ ಸೋಮವಾರ ಏರ್ಪಡಿಸಲಾಗಿದ್ದ ಗಂಗಾಕಲ್ಯಾಣ ಯೋಜನೆಯಡಿ  ಮೋಟಾರುಪಂಪು ವಿತರಣೆ ಮತ್ತು  ಸಮಗ್ರ ಕೃಷಿ ಅಭಿಯಾನ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಭಾರತ ದೇಶದ ರೈತಾಪಿವರ್ಗ  ಮಳೆಯನ್ನೇ ಆಧರಿಸಿ ವ್ಯವಸಾಯ ಮಾಡ್ತಾರೇ. ನೀರಾವರಿ ಯೋಜನೆಗೆ  ಈಗಾಗಲೇ ಹತ್ತಾರು ಕಾಮಗಾರಿ ನಡೆಯುತ್ತಿದೆ. ಎತ್ತಿನಹೊಳೆ ಯೋಜನೆಯಿಂದ ಕೊರಟಗೆರೆ ತಾಲೂಕಿನ 109ಕೆರೆಗಳಿಗೆ ನೀರು ಹರಿಯಲಿದೆ. ಇದರಿಂದ ರೈತಾಪಿವರ್ಗ ಕೃಷಿ ಚಟುವಟಿಕೆ ಮಾಡಲು ಅನುಕೂಲ ಆಗಲಿದೆ ಎಂದು ತಿಳಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ 15,  ವಾಲ್ಮೀಕಿ ಅಭಿವೃದ್ದಿ ನಿಗಮದಿಂದ 16, ಆದಿಜಾಂಭವ  ಅಭಿವೃದ್ದಿ ನಿಗಮದಿಂದ 10, ತಾಂಡ ಅಭಿವೃದ್ದಿ ನಿಗಮದಿಂದ 2 ಸೇರಿ ಒಟ್ಟು 2018-19ನೇ ಸಾಲಿನ  ಗಂಗಾಕಲ್ಯಾಣ ಯೋಜನೆಯಡಿ  43ಫಲಾನುಭವಿಗಳಿಗೆ ಮೋಟಾರ್ ಪೈಪ್ ಮತ್ತು ಪರಿಕರ ಹಾಗೂ…

Read More

ಮೈಸೂರು: ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿ ಶುಲ್ಕ ಹಾಗೂ ಪರೀಕ್ಷಾ ಶುಲ್ಕವನ್ನು ರದ್ದುಪಡಿಸಬೇಕೇಂದು ಒತ್ತಾಯಿಸಿ ವಿಶ್ವವಿದ್ಯಾನಿಲಯದ ಆಡಳಿತ ವ್ಯವಸ್ಥೆಯ ವಿರುದ್ಧ ವಿದ್ಯಾರ್ಥಿಗಳು ವಿವಿಧ ಘೋಷಣೆಗಳನ್ನು ಕೂಗುತ್ತಾ ಮಾನಸಗಂಗೋತ್ರಿಯ ಕ್ಲಾಕ್ ಟವರ್ ಮುಂಭಾಗ ಪ್ರತಿಭಟನೆ ಮಾಡಲಾಯಿತು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇದ್ದಕ್ಕಿದ್ದ ಹಾಗೆ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕವನ್ನು ಕೂಡಲೇ ಪಾವತಿ ಮಾಡಬೇಕೆಂದು ಆದೇಶ ಹೊರಡಿಸಿರುವ ಆಡಳಿತ ವ್ಯವಸ್ಥೆಗೆ ಧೋರಣೆಯನ್ನು ತೀವ್ರವಾಗಿ ಖಂಡಿಸಿ, ಕರ್ನಾಟಕ ರಾಜ್ಯ ಸಂಶೋಧಕ ಸಂಘದ ಅಧ್ಯಕ್ಷರಾದ ಮರಿದೇವಯ್ಯ.ಎಸ್  ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು, 2021/22ನೇ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿ ಸಂದರ್ಭದಲ್ಲಿ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ಸರ್ಕಾರದ ಆದೇಶದ ಅನುಸಾರ ಉಚಿತವಾಗಿ ಪ್ರವೇಶಾತಿಯನ್ನು ನೀಡಿದ್ದು, ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಗೆ  ಬಂದಾಗ ಪ್ರವೇಶ ಶುಲ್ಕವನ್ನು ಕಡಿತ ಮಾಡಿಕೊಳ್ಳಬೇಕಿತ್ತು. ಆದರೆ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಬರುವ ಮುಂಚೆಯೇ ಎಲ್ಲರೂ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕವನ್ನು 31/05/2022ರಂದು ಕಡೆಯ ದಿನದ ಒಳಗೆ ಕಟ್ಟಬೇಕೆಂದು…

Read More

ತಿಪಟೂರು:  ತಾಲ್ಲೂಕಿನ ಗುರುಗದಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶ್ರೀಮತಿ ಶೈಲಾ ಮತ್ತು ಉಪಾಧ್ಯಕ್ಷರಾಗಿ ಎಚ್.ಎಂ.ನಾಗರಾಜ್ ಅವಿರೋಧ ಆಯ್ಕೆಯಾಗಿದ್ದಾರೆ. ಸದಸ್ಯರಾದ ಶಶಿಧರ್, ನರಸಿಂಹಮೂರ್ತಿ ಮಾಜಿ ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಶಶಿಧರ್, ಚಂದ್ರಶೇಖರ್, ಮಾಜಿ ಸದಸ್ಯ ದರ್ಶನ್ ಪಟೇಲ್, ಕಾಂಗ್ರೆಸ್ ಮುಖಂಡರಾದ ನಾಗರಾಜ್ (ಎಲ್ಐಸಿ), ರಾಜು, ಪ್ರಸನ್ನ ಕುಮಾರ್, ಸೋಮಶೇಖರ್, ಜೀವನ್ ಕುಮಾರ್, ಮಂಜುನಾಥ್, ಶಿವರ ಹಾಲಿನ ಡೈರಿಯ ಅಧ್ಯಕ್ಷ ಗುರುಸಿದ್ದಯ್ಯ, ಉಪಾಧ್ಯಕ್ಷ ಕರಿಯಪ್ಪ,ಶೇಖರಯ್ಯ,ಶಂಕ್ರಪ್ಪ, ದೇವೇಗೌಡ,ಮಂಜುನಾಥ್ ಮತ್ತು ಬಸವರಾಜ್ ಸೇರಿದಂತೆ ಹಲವು ಮುಖಂಡರುಗಳು ಹಾಜರಿದ್ದು,ಅಭಿನಂದನೆ ಸಲ್ಲಿಸಿದ್ದಾರೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋವಳಿಯ  ನೀಲಮ್ಮನಹಳ್ಳಿ ಗ್ರಾಮದ ಆಕರ್ಷಣೆ ವಿದ್ಯಾ ಸಂಸ್ಥೆ ಬಲ್ಲೇನಹಳ್ಳಿ ಪ್ರೌಢ ಶಾಲೆಯ  ಮುಖ್ಯ ಶಿಕ್ಷಕರಾದ ಎಸ್. ತಮ್ಮಪ್ಪನವರು ನಿವೃತ್ತರಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಯ  ಸಿಬ್ಬಂದಿ  ಬೀಳ್ಕೊಡುಗೆ ಸಮಾರಂಭ ಆಯೋಜಿಸುವ ಮೂಲಕ ಎಸ್. ತಮ್ಮಪ್ಪನವರ ಸೇವೆಗೆ ಗೌರವ ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ತಮ್ಮಪ್ಪನವರು,  ಆಕರ್ಷಣೆ ಸಂಸ್ಥೆಯ ಕುರಿತು ಮಾತನಾಡಿ, ಸುಮಾರು 30ವರ್ಷಗಳಿಂದ ಶಾಲೆ ಮೇಲ್ಛಾವಣಿ ಇಲ್ಲದೇ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಕಷ್ಟಪಡುವಂತಾಗಿತ್ತು. ಈ ಸಮಸ್ಯೆಗಳನ್ನು ಕಂಡ  ನೀಲಮ್ಮನಹಳ್ಳಿ ಆಧಿಶೇಷ ಮತ್ತು ಛಲಪತಿ ಹಾಗೂ ಭೂಶಪ್ಪ ಇವರು  ಹೆಂಚಿನ ಮನೆ ಕೊಟ್ಟು ಮಕ್ಕಳಿಗೆ ಶಿಕ್ಷಣ ನೀಡಲು ವ್ಯವಸ್ಥೆ ಮಾಡಿಕೊಟ್ಟರು.  ಈ ಸಂಸ್ಥೆಯ ಕಾರ್ಯದರ್ಶಿಗಳಾದ ಬಲರಾಮಯ್ಯ ಇವರು ಶಾಲೆಗೆ 3 ಎಕರೆ ಜಮೀನು ನೀಡಿದರು.  ಈ ಶಾಲೆಗೆ  ಹೆಚ್.ಡಿ.ಕುಮಾರಸ್ವಾಮಿ ಅವರು  ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾನ್ಯತೆ ನೀಡಿದರು ಎಂದು ನೆನಪಿಸಿಕೊಂಡರು. ಕಾರ್ಯಕ್ರಮದಲ್ಲಿ ಹೆಚ್ಚಿನ ಅಂಕ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯಾದವ…

Read More

ಬೆಂಗಳೂರು: ಇದೀಗ 9ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರ ಕುರಿತು ಪಾಠದಲ್ಲಿ ಕೆಲವು ಬದಲಾವಣೆ ಮಾಡಿರುವುದಕ್ಕೆ ಲಿಂಗಾಯಿತ ಸಮುದಾಯದ ಮಠಾಧೀಶರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರು ಉಪನಯನದ ನಂತರ ಕೂಡಲಸಂಗಮಕ್ಕೆ ಹೋದರು ಎಂದು ಬರೆಯಲಾಗಿದೆ. ಆದರೆ ತನ್ನ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ತನಗ್ಯಾಕೆ ಎಂದು ಧಿಕ್ಕರಿಸಿ ಬಸವಣ್ಣನವರು ಕೂಡಲ ಸಂಗಮಕ್ಕೆ ಹೋದರು ಎಂಬುದು ಇತಿಹಾಸ. ಶೈವ ಗುರುಗಳ ಸಾನ್ನಿಧ್ಯದಲ್ಲಿ ಲಿಂಗದೀಕ್ಷೆ ಪಡೆದರು ಎಂದು ಬರೆದಿರುವುದು ತಪ್ಪು. ಶೈವ ಗುರುಗಳು ಗುಡಿ ಸ್ಥಾವರ ಲಿಂಗಾರಾಧಕರು ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು? ಇಷ್ಟಲಿಂಗ ಬಸವಣ್ಣನವರ ಪರಿಕಲ್ಪನೆಯಲ್ಲಿ ಮೂಡಿಬಂದಿರುವುದು.. ಹೀಗೆ ಬಸವಣ್ಣನವರ ಬಗ್ಗೆ ಹಲವು ತಪ್ಪು ವಿಚಾರಗಳನ್ನು ಪಠ್ಯದಲ್ಲಿ ಸೇರಿಸಿರುವುದು ಖಂಡನೀಯ ಎಂದು ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಠ್ಯ ಪುಸ್ತಕದಲ್ಲಿನ ಈ ಅನೈತಿಹಾಸಿಕ ತಪ್ಪುಗಳನ್ನು ಸರಿಪಡಿಸಿ ಇಲ್ಲವಾದರೆ ಲಿಂಗಾಯತ ಸಮುದಾಯದ ಮಠಾಧೀಶರು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಪಾವಗಡ: ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಹೊರಗುತ್ತಿಗೆ ಕರವಸೂಲಿ ನೌಕರ ಜಿ.ಮಂಜುನಾಥ್ ಅವರನ್ನು ಅಮಾನತುಗೊಳಿಸಬೇಕು ಎಂದು ತಾಲೂಕಿನ ವೈ .ಎನ್. ಹೊಸಕೋಟೆ ಹೋಬಳಿ ಪೋತಗಾನಹಳ್ಳಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷರಾದ ಮಾಧವ ರಾಜ್ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,   ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಹೊರಗುತ್ತಿಗೆ ಕರವಸೂಲಿ ನೌಕರ ಜಿ.ಮಂಜುನಾಥ್ ರವರು ಈ ಹಿಂದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಅವ್ಯವಹಾರದಲ್ಲಿ ಭಾಗಿಯಾಗಿ ತಮ್ಮ ಸ್ವಂತ ಖಾತೆಗೆ ಹಣ ಹಾಕಿಕೊಂಡು  ಲೋಕಾಯುಕ್ತ ತನಿಖೆ ವೇಳೆ ಸಿಕ್ಕಿಬಿದ್ದಿದ್ದರು.  ಈ ಪ್ರಕರಣ ನ್ಯಾಯಾಲಯದಲ್ಲಿ 2015ರಲ್ಲಿ ಕೇಸ್ ದಾಖಲಾಗಿದ್ದು , ಕೇಸ್ ದಾಖಲಾದ ನಂತರ ದಿನಾಂಕ 7:10 2015ರಂದು ಅವರನ್ನು ಗ್ರಾಮ ಪಂಚಾಯಿತಿಯಿಂದ ಬಿಡುಗಡೆಗೊಳಿಸಿದ್ದರು. ಆದರೆ ಆನಂತರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಮಂಜುನಾಥ್ ಅವರನ್ನು ಕೊಡಮಡಗು ಗ್ರಾಮ ಪಂಚಾಯಿತಿಯ ಕರವಸೂಲಿಗಾರ ರಾಗಿ ನೇಮಿಸಿದ್ದರು ಎಂದರು. 2021ರಲ್ಲಿ ಮತ್ತೆ ರಾಜಕೀಯ ಪ್ರಭಾವ ಬೆಳೆಸಿ, ಪೋತಗಾನಹಳ್ಳಿ ಹಳ್ಳಿ ಗ್ರಾಮ ಪಂಚಾಯಿತಿಗೆ ಅವರು ಮರು ಆದೇಶದೊಂದಿಗೆ ವಾಪಸ್ ಆಗಿದ್ದು,  ಲೋಕಾಯುಕ್ತ ನ್ಯಾಯಾಲಯದಲ್ಲಿ…

Read More

ಮೈಸೂರು:  ಸಿದ್ದರಾಮಯ್ಯ ಅವರಿಗೆ ಆರೆಸ್ಸೆಸ್ ಭಯ ಕಾಡುತ್ತಿದೆ. ಹೀಗಾಗಿ ಪದೇ ಪದೇ ಅನಗತ್ಯ ಆರೋಪಗಳನ್ನು ಮಾಡುತ್ತಿರುತ್ತಾರೆ  ಎಂದು ಸಂಸದ ಡಿ.ವಿ. ಸದಾನಂದಗೌಡ ಟೀಕಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕಾಂಗ್ರೆಸ್ ಅಧಃಪತನದಲ್ಲಿದೆ. ಆದ್ದರಿಂದ ಸಿದ್ದರಾಮಯ್ಯ ಕೆಲಸಕ್ಕೆ ಬಾರದ ಟ್ವೀಟ್‌ ಗಳನ್ನು ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್‍ ‌ನ್ನು ದೊಡ್ಡ ದನಿಯಲ್ಲಿ ಸಮರ್ಥನೆ ಮಾಡಿಕೊಳ್ಳುತ್ತಿದ್ದ, ವಕ್ತಾರರಾಗಿದ್ದ ಬ್ರಿಜೇಶ್ ಕಾಳಪ್ಪ ಆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನು ನೋಡಿದರೆ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಅವರು ತಿರುಗೇಟು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿರುವ ಸಮಾಜಕಲ್ಯಾಣ ಇಲಾಖೆಯ ಬಾಲಕಿಯರ ಪ್ರೀ ಮೆಟ್ರಿಕ್ ವಸತಿ ನಿಲಯದಲ್ಲಿ, ಕಳೆದ  ನಾಲ್ಕೂವರೆ ವರ್ಷಗಳಿಂದ ,ಅಡುಗೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ  ಸಾಕಲಕ್ಷ್ಮಮ್ಮ ಅವರನ್ನು ಸಮಾಜ ಕಲ್ಯಾಣ ಇಲಾಖೆಯು,  ಅಡುಗೆ ಸಹಾಯಕಿ ,ಹುದ್ದೆಯನ್ನು ಪದೋನ್ನತಿಗೊಳಿಸಿ ,ವರ್ಗಾವಣೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ  ತುರುವೇಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ,ಸಹಾಯಕ ನಿರ್ದೇಶಕರಾದ ಕುಮಾರಿ ತ್ರಿವೇಣಿ ಹಾಗೂ ಇಲಾಖೆಯ ಸಿಬ್ಬಂದಿ , ಸಹಾಯಕ, ನಿರ್ದೇಶಕರ ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು  ಏರ್ಪಡಿಸಿದ್ದರು. ಪದೋನ್ನತಿ ಹೊಂದಿದ ಸಾಕ ಲಕ್ಷ್ಮಮ್ಮ ರವರಿಗೆ ಸಕಲ ಗೌರವ, ಅಭಿನಂದನೆಯೊಂದಿಗೆ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಿ ತ್ರಿವೇಣಿ, ಸಾಕ ಲಕ್ಷ್ಮಮ್ಮ ನವರು ಪದೋನ್ನತಿ ಹೊಂದಿ, ಬೇರೆಡೆಗೆ ವರ್ಗಾವಣೆಗೊಂಡು ಹೋಗುತ್ತಿದ್ದಾರೆ. ಅವರು ಇನ್ನೂ ಉನ್ನತ ಹುದ್ದೆಗೆ ಹೋಗಲಿ, ಸರ್ಕಾರಿ ಸೇವೆಯನ್ನು ಉತ್ತಮವಾಗಿ ನಿರ್ವಹಿಸಲಿ ,. ಅವರಿಗೆ ಆರೋಗ್ಯ , ಆಯಸ್ಸು ವೃದ್ಧಿಯಾಗಲಿ ಎಂದು ಹಾರೈಸಿದರು. ಈ ಕಾರ್ಯಕ್ರಮದಲ್ಲಿ ವಾರ್ಡನ್ , ದೇವರಾಜ್, ದ್ವಿತೀಯ ದರ್ಜೆ ಸಹಾಯಕರದ ಮಧುಸೂದನ್, ಕಚೇರಿ, ಸಹಾಯಕ ,ಕಿರಣ್…

Read More

ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ರಾಜ್ಯ ರೈತ ಸಂಘ , ಸಿ.ಐ.ಟಿ.ಯು , ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ  ಬೆಂಗಳೂರಿನ ಗಾಂಧಿಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ , ರಾಷ್ಟ್ರೀಯ ರೈತ ಮುಖಂಡ  ರಾಕೇಶ್ ಟಿಕಾಯತ್ ,  ಯುದ್ಧ್ ವೀರಸಿಂಗ್  ಮತ್ತು ರೈತರ ಮೇಲೆ ಬಿ.ಜೆ.ಪಿ .ಗೂಂಡಾಗಳು ಹಲ್ಲೆಯನ್ನು ಖಂಡಿಸಿ , ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಜಮಾವಣೆಗೊಂಡು, ರಾಷ್ಟ್ರೀಯ ಹೆದ್ದಾರಿ 151 ಎ ಮೂಲಕ ಕಾಲ್ನಡಿಗೆ ಜಾಥಾ ಮೂಲಕ ಸಾಗಿದ ಪ್ರತಿಭಟನಾಕಾರರು ಬಿ.ಜೆ.ಪಿ.  ಗೂಂಡಾಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಘೋಷಣೆಗಳನ್ನು ಕೂಗುತ್ತಾ, ಆಕ್ರೋಶವನ್ನು ಹೊರಹಾಕಿದರು . ಬಳಿಕ ತಾಲೂಕು ತಹಸಿಲ್ದಾರ್ ರವರ ಕಚೇರಿ  ಬಳಿ ಬಂದು ತಹಶೀಲ್ದಾರ್ ನಯೀಮ್ ಉನ್ನಿಸಾ ಅವರಿಗೆ ಮನವಿ ಪತ್ರ ನೀಡಿದರು. ಈ ವೇಳೆ ಮಾತನಾಡಿದ ರೈತ ಸಂಘಟನೆಯ ತಾಲೂಕು ಅಧ್ಯಕ್ಷರಾದ ಶ್ರೀನಿವಾಸಗೌಡ , ಇದು ಕೇವಲ ರಾಷ್ಟ್ರೀಯ ರೈತ ಮುಖಂಡ  ಟಿಕಾಯತ್  ರವರಿಗೆ ಮಸಿ ಬಳಿದುದ್ದಲ್ಲ, ದೇಶದ ರೈತರ ಹೋರಾಟದ ಮೇಲೆಯೇ…

Read More

ಕೋಲ್ಕತ್ತಾ: ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡಿದ ಬಳಿಕ ಅಸ್ವಸ್ಥಗೊಂಡಿದ್ದ ಗಾಯಕ ಕೃಷ್ಣಕುಮಾರ್ ಕುನ್ನಾಥ್  ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೃಷ್ಣಕುಮಾರ್  ಕುನ್ನತ್ ಬಳಿಕ ಅಸ್ವಸ್ಥರಾಗಿದ್ದರು. ಅವರುನ್ನು ನಗರದ ಸಿಎಂಆರ್  ಐ ಆಸ್ಪತ್ರೆಗೆ ಕರೆತರುತ್ತಿದ್ದಾಗಲೇ ಸಾವನ್ನಪ್ಪಿದರು. ಕೆಕೆ ಎಂದು ಹೆಚ್ಚು ಪರಿಚಿತರಾಗಿದ್ದ ಕೃಷ್ಣಕುಮಾರ್ ಕುನ್ನಾಥ್ ಅವರು ತಮ್ಮ 53 ನೇ ವಯಸ್ಸಿನಲ್ಲಿ ನಿಧನರಾದರು. ಮೂರು ದಶಕಗಳ ಕಾಲ ತಮ್ಮ ಸಂಗೀತ ವೃತ್ತಿಜೀವನದಲ್ಲಿ, ಕೆಕೆ ಭಾರತೀಯ ಸಂಗೀತ ಪ್ರೇಮಿಗಳಿಗೆ ಯಾರೂನ್ ದೋಸ್ತಿಯಂತಹ ಅನೇಕ ಹಿಟ್ ಗಳನ್ನು ನೀಡಿದರು. ವರದಿ:  ಮುರುಳಿಧರನ್ ಆರ್.  ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More