Subscribe to Updates
Get the latest creative news from FooBar about art, design and business.
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
- ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
- ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
- ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
- ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್ ಕ್ಯಾಮೆರಾದಲ್ಲಿ ಹುಲಿ ಪತ್ತೆ!
- ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
- ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ ಶಿವಕುಮಾರ್
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
Author: admin
ತುಮಕೂರು: ಮಳೆಗಾಲದಲ್ಲಿ ಸಾಮಾನ್ಯವಾಗಿ ಹಾವುಗಳು ಸಿಕ್ಕಿದ ಸ್ಥಳಗಳಲ್ಲೆಲ್ಲ ನುಗ್ಗಿ ಕುಳಿತುಕೊಳ್ಳಲು ಆರಂಭಿಸುತ್ತವೆ. ಈ ಪೈಕಿ ಹೆಚ್ಚಾಗಿ ನಾವು ಧರಿಸುವ ಶೂಗಳ ಒಳಗೆ ಹಾವುಗಳು ಬೆಚ್ಚಗೆ ಕುಳಿತುಕೊಳ್ಳುವುದೇ ಹೆಚ್ಚು. ಇಂತಹ ಘಟನೆಯೊಂದು ತುಮಕೂರು ನಗರದ ಹೊರವಲಯದ ರಂಗಾಪುರದಲ್ಲಿ ನಡೆದಿದೆ. ವರದಿಗಳ ಪ್ರಕಾರ ರಂಗನಾಥ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ಮನೆ ಮುಂದೆ ಬಿಚ್ಚಿಟ್ಟಿದ್ದ ಶೂ ಒಳಗಡೆ ಹಾವು ನುಗ್ಗಿದ್ದು, ಬೆಳಿಗ್ಗೆ ಶೂ ಹಾಕಲು ಮುಂದಾದ ವೇಳೆ ಹಾವು ಬುಸುಗುಟ್ಟುವ ಶಬ್ಧ ಕೇಳಿ ಬಂದಿದ್ದು, ಶೂ ಒಳಗೆ ನೋಡಿದಾಗ ಹಾವು ಕಂಡು ಬಂದಿದೆ. ರಂಗನಾಥ್ ಅವರು ಹಾವಿನಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಶೂವನ್ನು ಸರಿಯಾಗಿ ನೋಡದೇ ಧರಿಸಿದ್ದರೆ, ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆಗಳಿತ್ತು. ಇನ್ನೂ ಹಾವನ್ನು ತಕ್ಷಣವೇ ಉರಗ ರಕ್ಷಕ ದಿಲೀಪ್ ಅವರನ್ನು ಕರೆಸಿ, ರಕ್ಷಣೆ ಮಾಡಲಾಗಿದ್ದು, ಅವರು ಹಾವನ್ನು ಹಿಡಿದು ದೇವರಾಯನದುರ್ಗ ಕಾಡಿಗೆ ಸುರಕ್ಷಿತವಾಗಿ ಬಿಟ್ಟಿದ್ದಾರೆ. ಶೂ ಒಳಗೆ ಹಾವು ಕುಳಿತಿರುವ ದೃಶ್ಯ ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಮನೆಯ ಹೊರಗಡೆ ಶೂಗಳನ್ನು…
ಗುಬ್ಬಿ: ವೈಯಕ್ತಿಕ ದ್ವೇಷದಿಂದ ಕಿಡಿಗೇಡಿಗಳು 100ಕ್ಕೂ ಅಧಿಕ ಅಡಿಕೆ ಮರಗಳನ್ನು ಕತ್ತರಿಸಿ ಹಾಕಿರುವ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಸೋಮಲಾಪುರ ಗ್ರಾಮದಲ್ಲಿ ನಡೆದಿದೆ. ನಟರಾಜು ಎಂಬುವರ ತೋಟದಲ್ಲಿ ಕಿಡಿಗೇಡಿಗಳು ಸುಮಾರು 100ಕ್ಕೂ ಅಧಿಕ ಅಡಿಕೆ ಮರಗಳನ್ನು ಕಡಿದು ಹಾಕಲಾಗಿದೆ. ಶನಿವಾರ ತಡರಾತ್ರಿ ನಡೆದಿದ್ದು, ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗಿದೆ. ಭಾನುವಾರ ಬೆಳಗ್ಗೆ ನಟರಾಜು ಅವರು ತೋಟಕ್ಕೆ ತೆರಳಿ ನೋಡಿದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಶನಿವಾರ ತಡರಾತ್ರಿ ವೇಳೆ ಕಿಡಿಗೇಡಿಗಳು ಅಡಿಕೆ ಮರವನ್ನು ಕತ್ತರಿಸಿ ಹಾಕಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಬೆಂಗಳೂರು: ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು BJP ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಅವರೇ ಉತ್ತರಿಸಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್ ನಾಯಕರು ಬೆಂಬಲಿಸುತ್ತಿರುವುದು ಮಾತ್ರ BJP ಎಂಬ ರಾಜಕೀಯ ಪಕ್ಷವನ್ನು ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೆಂದು ಯಾವ ಆಧಾರದಲ್ಲಿ ಆರ್.ಎಸ್.ಎಸ್ ತೀರ್ಮಾನಿಸಿದೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು ಹೊಂದಿರಬೇಕಾದ ಅರ್ಹತೆಗಳೇನು? ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳಲ್ಲವೇ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40% ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್ ನಲ್ಲಿ ದುಡ್ಡು ಪಡೆದು…
ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಶುಕ್ರವಾರ ನೇಮಕವಾಗಿದ್ದಾರೆ. ರಾಜ್ಯದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಕಮಿಷನರ್ ಆಗಿದ್ದ ವಂದಿತಾ ಶರ್ಮಾ ಅವರಿಗೆ ಪದೋನ್ನತಿ ನೀಡಲಾಗಿದೆ. ಮೇ 31 ಕ್ಕೆ ಪಿ.ರವಿಕುಮಾರ್ ನಿವೃತ್ತರಾಗಲಿದ್ದಾರೆ. 1986-ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಥೆರೇಸಾ ಭಟ್ಟಾಚಾರ್ಯ, ಮಾಲತಿ ದಾಸ್ ಮತ್ತು ರತ್ನ ಪ್ರಭಾ ಅವರ ನಂತರ ಈ ಸ್ಥಾನವನ್ನು ಅಲಂಕರಿಸಿದ ನಾಲ್ಕನೇ ಮಹಿಳೆಯಾಗಿದ್ದಾರೆ. ವಂದಿತಾ ಶರ್ಮಾ ಅವರ ಪತಿ ಹಣಕಾಸು ಇಲಾಖೆಯ ಅಪಾರ ಮುಖ್ಯ ಕಾರ್ಯದರ್ಶಿಯಾಗಿದ್ದು, ಅವರ ಹೆಸರೂ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಕೇಳಿ ಬಂದಿದೆ. ವರದಿ: ಮುರುಳಿಧರನ್ ಆರ್ ಹಿರಿಯೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಬೆಂಗಳೂರು: ಎಸ್ ಡಿ ಪಿ ಐ ಸಂಘಟನೆಯ ಹಿಂದೆ ಕಾಂಗ್ರೆಸ್ ನಾಯಕರ ಬೆಂಬಲವಿದೆ. ಈ ಸಂಘಟನೆ ಕಾಂಗ್ರೆಸ್, ಕಮ್ಯೂನಿಸ್ಟರು ಬೆಳೆಸಿದ ಕೂಸು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಈ ಸಂಘಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಸಂಘಟನೆಗಳ ಮೇಲಿನ ಕೇಸ್ ಗಳನ್ನು ವಜಾ ಮಾಡಿದ್ದರು ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ. ಆರ್.ಎಸ್.ಎಸ್ ಮೂಲ ಪ್ರಶ್ನಿಸಿರುವ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ತಿರುಗೇಟು ನೀಡಿರುವ ಪ್ರಹ್ಲಾದ್ ಜೋಶಿ, ಆರ್.ಎಸ್.ಎಸ್ ಮೂಲ, ಬಿಜೆಪಿ ಮೂಲವನ್ನು ಕೇಳುವ ಸಿದ್ದರಾಮಯ್ಯನವರ ಮೂಲವನ್ನೇ ಜನ ಕಿತ್ತುಕೊಂಡಿದ್ದಾರೆ ಎಂದು ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಕೊಪ್ಪಳ: ಯಾವುದೇ ಕಾರಣಕ್ಕೆ ಹಿಜಾಬ್ ಹಾಕಿಕೊಂಡು ಶಾಲೆಗೆ ಬರುವಂತಿಲ್ಲ, ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಕೊಪ್ಪಳದಲ್ಲಿ ಈ ಸಂಬಂಧ ಮಾತನಾಡಿದ ಅವರು, ನ್ಯಾಯಾಲಯದ ಆದೇಶ ಪಾಲನೆ ಮಾಡದವರಿಗೆ ಶಾಲೆಗೆ ಪ್ರವೇಶವಿಲ್ಲ. ಹಠ ಮಾಡಲು ಅವರಿಗೆ ಹೇಗೆ ಹಕ್ಕಿದೆಯೋ ಹಾಗೆಯೇ ಒಳಗೆ ಬಿಡದೇ ಇರಲು ಕಾನೂನೂ ಸಹ ಇದೆ ಎಂದು ಹೇಳಿದ್ದಾರೆ. ಒಂದಷ್ಟು ಜನರು ಈ ರೀತಿ ಮತ್ತೆ ಪ್ರಚಾರಕ್ಕೆ ತಂದು ದೇಶದ ಅಶಾಂತಿ ಹಾಳುಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣ ಮಾಡುವ ಪ್ರಯತ್ನ ಇದರಲ್ಲೂ ನಡೆದಿದೆ ಎಂದು ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಊಟ ಮತ್ತು ಮದ್ಯ ತರಲು ಬೈಕ್ ನಲ್ಲಿ ತೆರಳಿದ್ದ ಸಾಫ್ಟ್‍ವೇರ್ ಎಂಜಿನಿಯರ್ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀಕಾಂತ್(23) ಮೃತ ಸಾಫ್ಟ್‍ವೇರ್ ಎಂಜಿನಿಯರ್ ಎಂದು ತಿಳಿದು ಬಂದಿದೆ. ಐದು ಮಂದಿ ಸ್ನೇಹಿತರೊಂದಿಗೆ ಪಾರ್ಟಿ ಮಾಡುವ ಸಲುವಾಗಿ ಶ್ರೀಕಾಂತ್ ಬೈಕ್ ತೆಗೆದುಕೊಂಡು ಊಟ ಮತ್ತು ಮದ್ಯ ತರಲು ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಹೋಗುತ್ತಿದ್ದಾಗ ರಾತ್ರಿ 12:30ರ ಸುಮಾರಿನಲ್ಲಿ ಕಾಮಾಕ್ಯ ಬಸ್ ನಿಲ್ದಾಣ ಸಮೀಪ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಶ್ರೀಕಾಂತ್ ತಲೆಗೆ ತೀವ್ರ ಪೆಟ್ಟಾಗಿದೆ. ಹಿಂದೆ ಬೈಕ್ ನಲ್ಲಿ ಬರುತ್ತಿದ್ದ ಸ್ನೇಹಿತರು ತಕ್ಷಣ ಶ್ರೀಕಾಂತ್‍ನನ್ನು ಡಿಜಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಘಟನೆ ಸಂಬಂಧ ಬನಶಂಕರಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಸರಗೂರು: ಕಾಡಾನೆಗಳು ದಾಳಿ ನಡೆಸಿ ಹತ್ತಿ ಬೆಳೆ ನಾಶ ಮಾಡಿರುವ ಘಟನೆ ತಾಲ್ಲೂಕಿನ ಹಳೆಯೂರು ಗ್ರಾಮದ ಜಮೀನುವೊಂದರಲ್ಲಿ ನಡೆದಿದೆ. ಗ್ರಾಮದ ಗಣೇಶ್ ಎಂಬ ರೈತರು ತಮ್ಮ ಸುಮಾರು 6 ಎಕೆರೆ ಜಮೀನಿನಲ್ಲಿ ಹತ್ತಿ ಬೆಳೆ ಬೆಳೆದಿದ್ದರು. ಆದರೆ ಕಾಡಾನೆಗಳು ಜಮೀನಿಗೆ ದಾಳಿ ಮಾಡಿದ್ದು, ಸುಮಾರು 2 ಎಕರೆ ಹತ್ತಿ ಬೆಳೆ ನಾಶವಾಗಿದೆ. ಇದರಿಂದಾಗಿ ತಮಗೆ ಸುಮಾರು 1.50 ಲಕ್ಷದಷ್ಟು ನಷ್ಟ ಉಂಟಾಗಿದೆ ಎಂದು ರೈತ ಗಣೇಶ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಮೊಳೆಯೂರು ವ್ಯಾಪ್ತಿಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: ನಮ್ಮ ಸಂಘಟನೆಯ ಮೂಲವನ್ನು ಪ್ರಶ್ನಿಸುವ ಮಾನ್ಯ ಸಿದ್ದರಾಮಯ್ಯನವರೇ ಕಾಂಗ್ರೆಸ್ ಪಕ್ಷದ ಮೂಲ ಯಾವುದು ಎಂದು ಸ್ವಲ್ಪ ಬಿಡಿಸಿ ಹೇಳಿದರೆ ಅಸಲಿ ಕಥೆ ದೇಶದ ಜನತೆಗೆ ಗೊತ್ತಾಗುತ್ತೆ ಎಂದು ಸಿದ್ದರಾಮಯ್ಯ ವಿರುದ್ಧ ರೇಣುಕಾಚಾರ್ಯ ಹರಿಹಾಯ್ದಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು, ನಮ್ಮ ಸಂಘಟನೆಯ ಮೂಲವನ್ನು ಪ್ರಶ್ನಿಸುವ ಮಾನ್ಯ ಸಿದ್ದರಾಮಯ್ಯನವರೇ ಕಾಂಗ್ರೆಸ್ ಪಕ್ಷದ ಮೂಲ ಯಾವುದು ಎಂದು ಸ್ವಲ್ಪ ಬಿಡಿಸಿ ಹೇಳಿದರೆ ಅಸಲಿ ಕಥೆ ದೇಶದ ಜನತೆಗೆ ಗೊತ್ತಾಗುತ್ತೆ. ಇಲ್ಲದಿದ್ದರೆ ನಾವು ಬಿಚ್ಚಿಡಬೇಕಾಗುತ್ತದೆ ಎಂದರು. ಆರ್.ಎಸ್.ಎಸ್ ಈ ನೆಲದ ಮೂಲ ಅಲ್ಲ ಎಂದು ನಮಗೆ ನಿಮ್ಮಿಂದಾಗಲೀ ಇಲ್ಲವೇ ನಕಲಿ ಕಾಂಗ್ರೆಸ್ ಪಕ್ಷದಿಂದ ಪ್ರಮಾಣಪತ್ರ ಬೇಕಾಗಿಲ್ಲ. ನಮ್ಮ ಸಂಘಟನೆಯ ಹಿನ್ನಲೆ ಏನೆಂಬುದು ಶತಕೋಟಿ ಭಾರತೀಯರಿಗೆ ಗೊತ್ತಿರವಾಗ ನಿಮ್ಮಿಂದ ಇಂತಹ ಟೀಕೆ ಅನಿರೀಕ್ಷಿತವಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಆರೆಸ್ಸೆಸ್ ಈ ನೆಲದ ಮೂಲದಿಂದಲೇ ಬೆಳೆದು ಇಂದು ವಿಶ್ವದಲ್ಲೇ ಅತ್ಯಂತ ದೊಡ್ಡ ಸಂಘಟನೆಯಾಗಿ ಬೆಳೆದು ನಿಂತಿದೆ. ನೀವು ಟೀಕೆ ಮಾಡಿದಷ್ಟು ಎತ್ತರಕ್ಕೆ ಬೆಳೆಯುತ್ತದೆ . ನಮ್ಮ…
ತುಮಕೂರು: ಆರೆಸ್ಸೆಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಕಾಂಗ್ರೆಸ್ ನಲ್ಲಿ ಸಕ್ರಿಯ ಕಾರ್ಯಕರ್ತ, ಸ್ವಯಂ ಸೇವಕರಾಗಿ ಕೆಲಸ ಮಾಡಿದ್ದರು ಎಂದು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೇಳಿದ್ದಾರೆ. ನಗರದಲ್ಲಿ ಶನಿವಾರ ಜಿಲ್ಲಾ ಆಡಳಿತದಿಂದ ಹಮ್ಮಿಕೊಂಡಿದ್ದ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು , 1921ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೆಸ್ ಅಧಿವೇಶನವನ್ನು ಸಂಪೂರ್ಣವಾಗಿ ಆಯೋಜನೆ ಮಾಡಿದವರು ಹೆಡಗೇವಾರ್ ಎಂದರು. ಹೆಡಗೇವಾರ್ ತೀರಿಕೊಳ್ಳುವವರಿಗೂ ಯಾವುದೇ ರಾಜಕೀಯ ಸೂಚನೆ ಕೊಟ್ಟಿರಲಲ್ಲ. ಆರ್ ಎಸ್ ಎಸ್ ಸಂಘಟನೆ ಕಟ್ಟಿದ್ದರು ಎಂದರು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕೇಶವ ಬಲಿರಾಮ್ ಹೆಡಗೇವಾರ್ ಅವರು ಅನುಶೀಲನಾ ಸಮಿತಿಯ ಸದಸ್ಯರಾಗಿದ್ದರು. ಇಂದಿನ ಕೆಲವರಿಗೆ ಅನುಶೀಲನಾ ಸಮಿತಿ ಎಂದರೆ ಏನು ಅಂತ ಗೊತ್ತಿರಲಿಕ್ಕಿಲ್ಲ ಎಂದೂ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB