Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ತುಮಕೂರು: ರಾಜ್ಯದ ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಸಹಾಯವಾಣಿ ಆರಂಭಿಸಲಾಗುವುದು. ನಿತ್ಯ 4 ಸಿಬ್ಬಂದಿ ಹಗಲು-ರಾತ್ರಿ ಎರಡು ಪಾಳಿಯಲ್ಲಿ ಕೆಲಸ ಮಾಡಲಿದ್ದಾರೆ. ರೋಗಿಗಳ ಕುಟುಂಬದವರು ಬಂದಾಗ ಅವರಿಗೆ ನೆರವು ನೀಡಲಾಗುತ್ತದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ತುಮಕೂರಿನ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಸಿ ಸೆಕ್ಷನ್ ಹೆರಿಗೆ ಕುರಿತು ನಿಗಾ ವಹಿಸಲು ಸಮಿತಿ ರಚಿಸಲಾಗುವುದು. ಸಿ ಸೆಕ್ಷನ್ ಪ್ರಮಾಣ 20-40% ಒಳಗೆ ಇರಬೇಕಾಗುತ್ತದೆ. ಇದರಲ್ಲಿ ಉದ್ದೇಶಪೂರ್ವಕ ಅಥವಾ ಭ್ರಷ್ಟಾಚಾರ ಇರಬಾರದು. ಇದಕ್ಕೆ ಕಡಿವಾಣ ಹಾಕಲಾಗುವುದು. ಜಿಲ್ಲಾ ಸರ್ಜನ್, ಎಲ್ಲಾ ವಿಭಾಗದ ಮುಖ್ಯಸ್ಥರೊಂದಿಗೆ ಪ್ರತಿ ಶುಕ್ರವಾರ ಸಭೆ ನಡೆಸಿ ಚರ್ಚಿಸಬೇಕು. ಲೋಪಗಳು ಕಂಡುಬಂದರೆ ಕೂಡಲೇ ಕ್ರಮ ವಹಿಸಬೇಕು. ಜಿಲ್ಲಾಧಿಕಾರಿಗಳು ಜಿಲ್ಲಾಸ್ಪತ್ರೆಯನ್ನು ಪರಿಶೀಲಿಸಬೇಕೆಂದು ಸೂಚಿಸಲಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಧಾರವಾಡ: ಇತ್ತೀಚೆಗೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ತಾಲಿಬಾನ್ ಕೃತ್ಯಕ್ಕಿಂತಲೂ ಕೆಟ್ಟದಾಗಿದೆ. ಆದ್ದರಿಂದ ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಇರಬೇಕು. ಪ್ರೀತಿ ಮಾಡುವಾಗ, ಡೇಟಿಂಗ್ ಮಾಡುವಾಗ ವಿಚಾರ ಮಾಡಿ ಮಾಡಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಲಹೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ದೆಹಲಿಯಲ್ಲಿ ಗೆಳತಿಯನ್ನು 35 ಪೀಸ್‌ಗಳಾಗಿ ಮಾಡಿ ಹತ್ಯೆಮಾಡಿರುವ ಘಟನೆ ತಾಲಿಬಾನಿಗಳ ಕೃತ್ಯಕ್ಕಿಂತೂ ಕೆಟ್ಟದಾದದ್ದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲವ್ ಜಿಹಾದ್‌ಗೆ ಬಲಿಯಾಗುವ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೆ ನಾನು ಕಳೆದ 15 ವರ್ಷಗಳಿಂದಲೂ ಎಚ್ಚರಿಕೆ ಕೊಡುತ್ತಲೇ ಬಂದಿದ್ದೇನೆ. ಇಷ್ಟೆಲ್ಲಾ ಎಚ್ಚರಿಕೆ ಕೊಟ್ಟರೂ ದೆಹಲಿಯಲ್ಲಿ ನಡೆದ ಇದೊಂದು ಘಟನೆ ದೊಡ್ಡ ದುರಂತವೇ ಸರಿ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೇಂದ್ರ ಸರ್ಕಾರದ ಪ್ರವಾಸೋದ್ಯಮ ನೀತಿಯಲ್ಲಿ ಕಂಬಳವನ್ನು ಸೇರಿಸಲು ಕ್ರಮ ಕೈಗೊಳ್ಳುವ ಕುರಿತು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಭರವಸೆ ನೀಡಿದ್ದಾರೆ. ಈ ಮೂಲಕ ಕರ್ನಾಟಕದ ಕರಾವಳಿಯ ಪ್ರಮುಖ ಜಾನಪದ ಸಂಸ್ಕೃತಿ ಕಂಬಳಕ್ಕೆ ಹೆಚ್ಚಿನ ಸ್ಥಾನಮಾನ ದೊರೆಯುವ ಆಶಾಭಾವನೆ ದೊರೆತಿದೆ. ಕಂಬಳವನ್ನು ಕೇಂದ್ರ ಸರ್ಕಾರದ ಪ್ರವಾಸೋದ್ಯಮ ನೀತಿಯ ಭಾಗವಾಗಿ ಸೇರ್ಪಡೆಗೊಳ್ಳಲು ಒಂದು ಹೆಜ್ಜೆ ಮುಂದಿಡಲಾಗಿದೆ. ಕೇಂದ್ರ ಸರ್ಕಾರದ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಶ್ರೀಪಾದ ನಾಯಕ್ ಈ ಕುರಿತು ಉಳ್ಳಾಲದಲ್ಲಿ ಭರವಸೆ ನೀಡಿದ್ದಾರೆ. ಉಳ್ಳಾಲದಲ್ಲಿ ಕಂಬಳ ಗದ್ದೆಯೊಂದರ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಈ ಮಾಹಿತಿ ನೀಡಿದ್ದಾರೆ. ಕಂಬಳ ತುಳುನಾಡಿನ ಜಾನಪದ ಕ್ರೀಡೆ. ಜೋಡಿ ಕೋಣಗಳನ್ನು ಕೆಸರು ಗದ್ದೆಯಲ್ಲಿ ಸ್ಪರ್ಧೆಗಿಳಿಸುವುದಾಗಿದೆ. ಹೊನಲು ಬೆಳಕಿನ ಸ್ಪರ್ಧೆಯೂ ನೆಯುವುದು. ಕನೆ ಹಲಗೆ, ಎರಡು ಜೋಡಿ ಕೋಣಗಳ ಓಟ ಹೀಗೆ ಹಲವು ವಿಭಾಗಗಳಲ್ಲಿ ಸ್ಪರ್ಧೆಯು ನಡೆಯುತ್ತದೆ. ನವೆಂಬರ್ 26 ಕ್ಕೆ ಆರಂಭವಾಗಲಿರುವ ಕಂಬಳ ಕ್ರೀಡೆಯು ಎಪ್ರಿಲ್ 8 ರ ವರೆಗೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪ್ರತಿ ವರ್ಷ ಭಾರತದಿಂದ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿದ್ದಾರೆ. ಯುಕೆ-ಭಾರತ ಯುವ ವೃತ್ತಿಪರರ ಯೋಜನೆಯನ್ನು ದೃಢೀಕರಿಸಲಾಗಿದೆ. ಜಿ20 ಶೃಂಗಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. 18-30 ವರ್ಷ ವಯಸ್ಸಿನ ಪದವಿ-ಶಿಕ್ಷಿತ ಭಾರತೀಯ ಪ್ರಜೆಗಳಿಗೆ ಯುಕೆಗೆ ಬರಲು ಮತ್ತು ಎರಡು ವರ್ಷಗಳವರೆಗೆ ಕೆಲಸ ಮಾಡಲು 3,000 ವೀಸಾಗಳನ್ನು ನೀಡುತ್ತದೆ ಎಂದು ಯುಕೆ ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. 17ನೇ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಸುನಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಕೆಲವೇ ಗಂಟೆಗಳ ನಂತರ ಡೌನಿಂಗ್ ಸ್ಟ್ರೀಟ್ ರೀಡೌಟ್‌ನಲ್ಲಿ ಈ ಪ್ರಕಟಣೆ ಹೊರಬಿದ್ದಿದೆ. ಸುನಕ್ ಬ್ರಿಟಿಷ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮೊದಲ ಸಭೆಯಾಗಿದೆ. ಈ ಯೋಜನೆಯು ಭಾರತದೊಂದಿಗಿನ ನಮ್ಮ ದ್ವಿಪಕ್ಷೀಯ ಸಂಬಂಧ ಮತ್ತು ಎರಡೂ ದೇಶಗಳ ಆರ್ಥಿಕತೆಯನ್ನು ಬಲಪಡಿಸಲು…
ಚಳಿಗಾಲದಲ್ಲಿ ಎಳ್ಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಅದರಲ್ಲೂ ಕಪ್ಪು ಎಳ್ಳಿಗೆ ಆದ್ಯ. ಚಳಿಗಾಲದಲ್ಲಿ ಎಳ್ಳು ಉಂಡೆ ಸೇವನೆ ಮೂಳೆಗಳನ್ನು ಬಲಪಡಿಸುತ್ತದೆ, ನೋವನ್ನು ಉಂಟು ಮಾಡುವುದಿಲ್ಲ ಎಂದು ಹಿರಿಯರು ಹೇಳುತ್ತಾರೆ. ಕಪ್ಪು ಎಳ್ಳು ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಷಿಯಮ್, ತಾಮ್ರ, ಮ್ಯಾಂಗನೀಸ್ ಮತ್ತು ಫೈಬರ್ ಮೊದಲದ ಅಂಶಗಳನ್ನು ಹೊಂದಿರುತ್ತದೆ. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಚಳಿಗಾಲ ಬಂದ ತಕ್ಷಣ, ಮೂಳೆಗಳಲ್ಲಿ ನೋವು ಉಂಟಾಗುತ್ತದೆ. ಸಂಧಿವಾತದಿಂದ ಬಳಲುತ್ತಿರುವ ಜನರಿಗೆ ಚಳಿಗಾಲವು ತುಂಬಾ ನೋವಿನಿಂದ ಕೂಡಿರುತ್ತೆ. ಕಪ್ಪು ಎಳ್ಳನ್ನು ತಿನ್ನುವುದು ಅಥವಾ ಅದರ ಎಣ್ಣೆಯಿಂದ ಮಸಾಜ್ ಮಾಡುವುದರಿಂದ ಈ ನೋವಿಗೆ ಪರಿಹಾರ ಸಿಗುತ್ತದೆ. ಸಂಧಿವಾತದ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಎಳ್ಳು ಬೀಜಗಳಲ್ಲಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಇದೆ. ತಾಮ್ರ ಮತ್ತು ಕ್ಯಾಲ್ಸಿಯಂ ಒಟ್ಟಿಗೆ ಮೂಳೆಗಳನ್ನು ಬಲಪಡಿಸುತ್ತವೆ. ಕಪ್ಪು ಎಳ್ಳು ಬೆಳೆಯುತ್ತಿರುವ ಮಕ್ಕಳಿಗೆ ತುಂಬಾ ಪ್ರಯೋಜನಕಾರಿ. ಕಪ್ಪು ಎಳ್ಳು ಹೃದಯದ ಆರೋಗ್ಯಕ್ಕೂ ಉತ್ತಮವಂತೆ. ಚಳಿಗಾಲದಲ್ಲಿ ರಕ್ತ ಪರಿಚಲನೆ ಕಡಿಮೆಯಾಗುತ್ತದೆ. ಈ ಕಾರಣದಿಂದಾಗಿ ಹೃದಯದ ಸಮಸ್ಯೆಯ ಸಾಧ್ಯತೆ ಹೆಚ್ಚಾಗುತ್ತದೆ. ಕಪ್ಪು ಎಳ್ಳು ದೇಹವನ್ನು…
ಮಧುಗಿರಿ: ಬಹುಜನ ಸಮಾಜ ಪಾರ್ಟಿ(BSP) ವತಿಯಿಂದ ಮಧುಗಿರಿ ತಾಲೂಕಿನ ರಾಜ ಬೀದಿಗಳಲ್ಲಿ ‘ಸಂವಿಧಾನ ಸಂರಕ್ಷಣಾ ಜನಜಾಗೃತಿ’ ಜಾಥಾ ನಡೆಯಿತು. ಜಾಥಾವನ್ನುದ್ದೇಶಿಸಿ ಮಾತನಾಡಿದ ಬಿಎಸ್ ಪಿ ಮುಖಂಡರು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಕ್ಕೆ ಇಷ್ಟು ವರ್ಷ ಮತ ನೀಡಿ ತೊಂದರೆಗೆ ಅನುಭವಿಸಿದ್ದೀರಿ, ಇನ್ನು ಮುಂದೆ ಬಿಎಸ್ ಪಿ ಪಕ್ಷಕ್ಕೆ ಮತ ನೀಡಿ, ರೈತರಿಗೆ ಸಾಲ ಮನ್ನಾ, ಬಡವರಿಗೆ ಗುಡಿಸಲು ಮುಕ್ತ ಯೋಜನೆ ಮೂಲಕ ಮನೆ ಮಂಜೂರು ಮಾಡುತ್ತೇವೆ. ಬಡವರ ಅಭಿವೃದ್ಧಿಯಾಗಬೇಕಾದರೆ ಕರ್ನಾಟಕದಲ್ಲಿ ಬಿಎಸ್ ಪಿ ಅಧಿಕಾರ ವಹಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ರಾಮ್ ಜಿ. ಗೌತಮ್ , ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಆರ್.ಮುನಿಯಪ್ಪ, ರಾಜ್ಯ ಕಾರ್ಯದರ್ಶಿ ವಾಸು, ನಾಗೇಂದ್ರಪ್ಪ, ಮಂಜುನಾಥ, ರಾಜಸಿಂಹ ಬೆಲ್ಲದ ಮಡುಗು ಶಿವಕುಮಾರ್, ತಾಲೂಕ್ ಅಧ್ಯಕ್ಷರು ಗೋಪಾಲ್ ಚಂದ ಪಾಶ, ನಾಗರಾಜು, ಶಿವು ಸೇರಿದಂತೆ ಹಲವು ಬಿಎಸ್ಪಿ ಮುಖಂಡರು ಜಾಥಾದಲ್ಲಿ ಭಾಗವಹಿಸಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಪಾವಗಡ : ಕೆ.ಎಸ್.ಆರ್. ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಮಾಪುರ ಗೇಟ್ ಬಳಿ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದ ಪವನ್ ಕುಮಾರ್ (26) ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. KA 06, KSRTC ಬಸ್ ಸಂಖ್ಯೆ F1168 ಮತ್ತು ಬೈಕ್ ಸಂಖ್ಯೆ KA64 F3422 ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸರಗೂರು : ತಾಲ್ಲೂಕಿನ ಪಟ್ಟಣದ ಬಸ್ ನಿಲ್ದಾಣ ಎದುರು ಬಳಿ ತಾಲ್ಲೂಕಿನ ಎಲ್ಲಾ ಸ್ವಾಮೀಜಿಗಳ ಸಮ್ಮುಖದಲ್ಲಿ ಹಾಗೂ ಅಪ್ಪಾಜಿ ಕ್ಯಾಂಟಿನ್ ಸಂಸ್ಥಾಪಕ ಹಾಗೂ ಜೆಡಿಎಸ್ ಮುಖಂಡ ಕೆ ಎಂ ಕೃಷ್ಣನಾಯಕ ರವರ ಉಪಸ್ಥಿತಿಯಲ್ಲಿ ನಮ್ಮ ಅಪ್ಪಾಜಿ ಕ್ಯಾಂಟಿನ್ ಉದ್ಘಾಟನೆ ನೆರವೇರಿತು. ಸರಗೂರು ತಾಲ್ಲೂಕಿನ ನಾಗದೇವತೆ ಚಿಕ್ಕದೇವಮ್ಮನ ಸನ್ನಿಧಾನಕ್ಕೆ ಹೋಗಿ ಪೂಜೆ ಸಲ್ಲಿಸಿ ನಂತರ ಪಟ್ಟಣದ ಅಂಬೇಡ್ಕರ್ ಭವನದಿಂದ ವಾದ್ಯ ನಗರಿ ಮತ್ತು ಪೂಜೆ ಕುಣಿತ ವೀರಗಾಸೆ ನೃತ್ಯ ಪ್ರದರ್ಶನ ದೊಂದಿಗೆ ಬಂದ ಮೆರವಣಿಗೆ ಬಸ್ ನಿಲ್ದಾಣ ಬಳಿ ತಲುಪಿತು. ಅಪ್ಪಾಜಿ ಕ್ಯಾಂಟಿನ್ ಉದ್ಘಾಟನೆ ಬಳಿಕ ಪಡಗಲು ವಿರಕ್ತಮಠದ ಶ್ರೀ ಮಹದೇವಸ್ವಾಮಿ ಸ್ವಾಮೀಜಿ ಮಾತನಾಡಿ, ಈ ಕ್ಯಾಂಟಿನ್ ನಿಂದಾಗಿ ಬಡವರು ಹಾಗೂ ಶಾಲಾ ಕಾಲೇಜುಗಳ ಮಕ್ಕಳಿಗೆ ಅನುಕೂಲವಾಗಲಿದೆ. ಎಂ ಕೃಷ್ಣನಾಯಕರವರು ಅಪ್ಪಾಜಿ ಕ್ಯಾಂಟೀನ್ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಯಾಂಟಿನ್ ಸಂಸ್ಥಾಪಕ ಕೆ.ಎಂ.ಕೃಷ್ಣನಾಯಕ ಮಾತನಾಡಿ, ನಾನು ತಾಲ್ಲೂಕಿಗೆ ಬಡವರ ಸೇವೆ ಮಾಡಲು ಬಂದಿದ್ದೇನೆಯೇ ಹೊರತು ರಾಜಕೀಯ ಮಾಡಲು ಅಲ್ಲ.…
ಪಾವಗಡ: ತಾಲ್ಲೂಕಿನ ಯ.ನಾ.ಹೊಸಕೋಟೆ ಹೋಬಳಿಯ ಚಿಕ್ಕಜಾಲೋಡು ಗ್ರಾಮದಲ್ಲಿ ಚರಂಡಿ ನಿರ್ಮಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಮಂಗಳವಾರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಚಿಕ್ಕಜಾಲೋಡು ಗ್ರಾಮದ ಸರಕಾರಿ ಶಾಲೆಯ ಸುತ್ತಮುತ್ತ ಮಳೆ ನೀರು, ಚರಂಡಿ ನೀರು ಸಂಗ್ರಹಗೊಂಡು ಪರಿಸರ ಮಾಲಿನ್ಯವಾಗುತ್ತಿದೆ. ಕ್ರಿಮಿಕೀಟಗಳು ಹೆಚ್ಚಾಗಿದ್ದು, ದುರ್ವಾಸನೆ ಬರುತ್ತಿದೆ. ಶಾಲಾ ಮಕ್ಕಳು, ಸಾರ್ವಜನಿಕರು ಕೊಳಚೆ ನೀರಿನಲ್ಲೇ ಓಡಾಡಬೇಕಾಗಿದೆ. ಈ ನೀರು ಖಾಸಗಿ ಜಮೀನಿನಲ್ಲಿ ಹರಿಯಬೇಕಾಗಿದೆ. ಆದರೆ ಖಾಸಗಿಯವರು ಇದಕ್ಕೆ ಅವಕಾಶ ನೀಡುತ್ತಿಲ್ಲ. ಇದರಿಂದ ರಸ್ತೆ ಮೇಲೆ ನೀರು ಸಂಗ್ರಹಗೊಂಡು ಸಮಸ್ಯೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಮಸ್ಯೆಯ ಬಗ್ಗೆ ದೂರು ನೀಡಿದ್ದೇವೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಚರಂಡಿ ಕಾಮಗಾರಿ ಆರಂಭಿಸುವುದಾಗಿ ಪಿಡಿಒ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಗಿದೆ. ಕಾಮಗಾರಿ ಆರಂಭಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಇದೇ ವೇಳೆ ದೊಡ್ಡಜಾಲೋಡು ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ…
ಕೊರಟಗೆರೆ: ಕೊರಟಗೆರೆ ತಾಲೂಕ್ ಕವರ್ಗಲ್ ಕಂಬದಹಳ್ಳಿ ಕೆರೆ ಕಟ್ಟೆ ಒಡೆದ ಪರಿಣಾಮ ನೀರು ಕೊರಟಗೆರೆ ಜಂಪೇನಹಳ್ಳಿ, ಅಗ್ರಹಾರ ಕೆರೆಗೆ ಹರಿಯುತ್ತಿದ್ದು, ಇದರಿಂದಾಗಿ ಎರಡೂ ಕೆರೆಗೂ ಅಪಾಯವಾಗುವ ಸಾಧ್ಯತೆ ಇದ್ದು, ಸ್ಥಳಕ್ಕೆ ತಹಶೀಲ್ದಾರ್ ನಹೀದಾ ಜಮ್ ಜಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆರೆಯ ಕಟ್ಟೆ ಒಡೆದ ಪರಿಣಾಮ ನೀರು ರಭಸವಾಗಿ ನುಗುತ್ತಿದ್ದು, ರೈತರ ನೂರಾರು ಎಕರೆ ಜಮೀನು ನಷ್ಟವಾಗುವ ಭೀತಿ ಸೃಷ್ಟಿಯಾಗಿದೆ. ಇಂದು ಮಧ್ಯಾಹ್ನ 2 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತಹಶೀಲ್ದಾರ್ ನಹೀದಾ ಜಮ್ ಜಮ್ ಸ್ಥಳಕ್ಕೆ ಭೇಟಿ ನೀಡಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ, ದೊಡ್ಡ ಗಾತ್ರದಲ್ಲಿ ಕುಸಿದು ಬಿದ್ದ ಪರಿಣಾಮ 2 ಗಂಟೆಯಲ್ಲಿ ನೀರು ಖಾಲಿಯಾಗಿತ್ತು. ಘಟನಾ ಸ್ಥಳಕ್ಕೆ ಅಧಿಕಾರಿಗಳ ಸ್ಥಳಕ್ಕೆ ದೌಡಾಯಿಸಿದ್ದರು. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…