Subscribe to Updates
Get the latest creative news from FooBar about art, design and business.
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
- ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
- ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
- ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
- ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್ ಕ್ಯಾಮೆರಾದಲ್ಲಿ ಹುಲಿ ಪತ್ತೆ!
- ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
- ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ ಶಿವಕುಮಾರ್
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
Author: admin
ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಸಚಿವ ಮುರುಗೇಶ್ ನಿರಾಣಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಿಗಧಿಯಾಗಿರುಂತೆ ನವೆಂಬರ್ 2ರಿಂದ 4ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿಯಲ್ಲಿರುವ ಅನೇಕ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಅಂದಾಜು 5 ಲಕ್ಷ ಕೋಟಿ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು. ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದೇವೆ ಇದೊಂದು ಯಶಸ್ವಿ ಪ್ರವಾಸ ಎಂದರು. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇಲ್ಲಿನ ಆಹ್ಲಾದಕರ ವಾತಾವರಣ, ಉದ್ಯಮಿಗಳ…
ಚಿಕ್ಕೋಡಿ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು,ಕಾರಿನಲ್ಲಿ ಸಂಚರಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ನಡೆದಿದೆ. ಶುಕ್ರವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಮದುವೆಗೆ ಹೊರಟ್ಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ನಿಪ್ಪಾಣಿ ನಗರದವರು ಎಂದು ಗರುತಿಸಲಾಗಿದೆ. ಅದಗೊಂಡ ಪಾಟೀಲ್ ಮತ್ತು ಛಾಯಾ ಪಾಟೀಲ್ ದಂಪತಿ, ಇವರ ಮಗ ಮಹೇಶ್ ಪಾಟೀಲ್, ಅದಗೊಂಡ ಪಾಟೀಲ್ರ ತಾಯಿ ಚಾಪ್ಪಾತಾಯಿ ಮೃತ ದುರ್ದೈವಿಗಳು. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಟ್ಟರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಹಾಸನ: ಜಿಲ್ಲೆಯ ಬೇಲೂರಿನಲ್ಲಿ ಕಿಡಿಗೇಡಿಗಳು ಕಾಡಾನೆಯನ್ನು ಗುಂಡಿಕ್ಕಿ ಕೊಂದಿರುವ ಘಟನೆ ವರದಿಯಾಗಿದೆ. ಸಯ್ಯದ್ ಸತ್ತರ್ ಎಂಬುವವರ ತೋಟದಲ್ಲಿ ಸುಮಾರು 15 ವರ್ಷದ ಗಂಡಾನೆಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ ಘಟನೆ ಸಂಬಂಧ ಆನೆಯ ಮರಣೋತ್ತರ ಪರೀಕ್ಷೆಗೆ ಭದ್ರ ಟೈಗರ್ನಿಂದ ವಿಶೇಷ ವೈದ್ಯರ ತಂಡ ಆಗಮಿಸುತ್ತಿದೆ. ಅರೇಹಳ್ಳಿ, ಮಲಸಾವರ ಸುತ್ತಮುತ್ತ 30 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ಇತ್ತೀಚಿಗೆ ಅರೇಹಳ್ಳಿ ಭಾಗದಲ್ಲಿ ಕಾಡಾನೆ ದಾಳಿಗೆ ನಾಲ್ವರು ಕಾರ್ಮಿಕರು ಬಲಿಯಾಗಿದ್ದರು. ಗುಂಡು ಹಾರಿಸಿದ್ದರಿಂದಾಗಿ ಆನೆ ಮೃತಪಟ್ಟಿದೆ ಎಂದು ಮೇಲ್ನೋಟದಿಂದ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ತನಿಖೆಯಿಂದ ತಿಳಿದು ಬರಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಹಿರಿಯೂರು: ಮಹಾಶಿವಶರಣ ಹರಳಯ್ಯ ಗುರುಪೀಠದ ವತಿಯಿಂದ ಚಿತ್ರದುರ್ಗದ ಮುರುಘಾಮಠದ ಆವರಣದಲ್ಲಿ ಮೇ 31 ಮಂಗಳವಾರ ಬೆಳಿಗ್ಗೆ 10:30 ಕ್ಕೆ ಮಹಾ ಶಿವಶರಣ ಹರಳಯ್ಯಜಯಂತಿ , ಬಸವೇಶ್ವರ ಜಯಂತಿ , ಬುದ್ಧಜಯಂತಿ , ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ , ಹಾಗೂ ಬಾಬು ಜಗಜೀವನ ರಾಂ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ಹರಳಯ್ಯ ಗುರುಪೀಠದ ಶ್ರೀ ಬಸವ ಹರಳಯ್ಯ ಸ್ವಾಮೀಜಿ ತಿಳಿಸಿದ್ದಾರೆ . ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ ಶ್ರೀಗಳು ತೊ೦ಟದಾರ್ಯ ಸ್ವಾಮೀಜಿ , ಮೈಸೂರಿನ ಆರ್ಗಾನಿಕ್ ನ ಸಂಸ್ಥಾಪಕ ನಾಗರಾಜ್ ರವರಿಗೆ ಶಿವಶರಣ ಹರಳಯ್ಯ ಯುವ ಪ್ರಶಸ್ತಿ , ಬಸವ ಟಿವಿಯ ಸಂಸ್ಥಾಪಕ ಕೃಷ್ಣಪ್ಪನವರಿಗೆ ಮಹಾ ಶಿವಶರಣ ಶೀಲವಂತ ಪ್ರಶಸ್ತಿ ಹಾಗೂ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಮಹಾ ಶಿವಶರಣ ಶೀಲವಂತ ಯುವ ಪ್ರಶಸ್ತಿ ನೀಡಲಾಗುವುದು ಎಂದರು. ನಾಯಕರು ಮಾತನಾಡಿ , ಈ ಬಾರಿ ಮೊದಲಿನ ಪ್ರಶಸ್ತಿ ಜೊತೆಗೆ ಮೂರು ಹೊಸ ಪ್ರಶಸ್ತಿಗಳನ್ನು ನೀಡಲಾಗುತ್ತದೆ . ಬ್ರಹ್ಮ ಕಾರ್ಯಕ್ರಮಕ್ಕೆ ಜಿ ವಾಹಿನಿ ಮುಖ್ಯಸ್ಥ…
ಬಾಗಲಕೋಟೆ: ಕ್ಷೌರಿಕನೋರ್ವ ಗ್ರಾಹಕನನ್ನು ಕತ್ತರಿಯಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಘಟನೆ ಆಸಂಗಿಯಲ್ಲಿ ನಡೆದಿದ್ದು, 22 ವರ್ಷ ವಯಸ್ಸಿನ ಸಾಗರ್ ಅವಟಿ ಎಂಬಾತ ಮೃತಪಟ್ಟ ಗ್ರಾಹಕ ಎಂದು ಗುರುತಿಸಲಾಗಿದೆ. ಬಾಗಲಕೋಟೆ ಜಿಲ್ಲೆ ರಬಕವಿ -ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಜ್ವಲ್ ಜೆಂಟ್ಸ್ ಪಾರ್ಲರ್ ಮಾಲೀಕ ಸದಾಶಿವ ನಾವಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ತಲೆಗೆ ಬಣ್ಣ ಹಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದದ ನಂತರ ಹತ್ಯೆ ನಡೆದಿದೆ ಎನ್ನಲಾಗಿದೆ. ಸದಾಶಿವ ನಾವಿ ಗ್ರಾಹಕ ಸಾಗರ್ ನನ್ನು ಕತ್ತರಿಯಿಂದ ಇರಿದಿದ್ದು, ಈ ವೇಳೆ ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಎಂದು ತಿಳಿದು ಬಂದಿದೆ. ಆರೋಪಿ ಸದಾಶಿವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಕೊಪ್ಪಳ: ಹೊಟೇಲ್ ಸಿಬ್ಬಂದಿ ಊಟ ಇಲ್ಲ ಎಂದಿದ್ದಕ್ಕೆ ಸಿಟ್ಟಿಗೆದ್ದ ಅಪರಿಚಿತರು ಹೊಟೇಲ್ ಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಘಟನೆ ತಾಲೂಕಿನ ಆನೆಗೊಂದಿಯಲ್ಲಿ ನಡೆದಿದೆ. ರಾತ್ರಿ ಹನ್ನೊಂದುವರೆ ಗಂಟೆಯ ಬಳಿಕ ಊಟ ಇಲ್ಲ ಎಂದು ಹೇಳಿದ್ದಕ್ಕೆ ಕೋಪಗೊಂಡ ಯುವಕರು ಅಡುಗೆ ಸಿಬ್ಬಂದಿಗೆ ಗೊತ್ತಾಗದಂತೆ ಕೋಣೆಯ ಹೊರಗಿನಿಂದ ಚಿಲಕ ಹಾಕಿ ಕೂಡಿಹಾಕಿದ್ದು, ಹೋಟೆಲ್ ನೊಳಗಿದ್ದ ನೀರಿನ ಸಂಪರ್ಕ ಕಡಿತಗೊಳಿಸಿ ಬೆಂಕಿ ಹಚ್ಚಿದ್ದಾರೆ. ಅಡುಗೆ ಕೋಣೆಯಲ್ಲಿ ಬಂಧಿಗಳಾಗಿದ್ದ ಸಿಬ್ಬಂದಿ ಫೋನ್ ಮೂಲಕ ಗ್ರಾಮಸ್ಥರನ್ನು ಸ್ಥಳಕ್ಕೆ ಕರೆಸಿಕೊಂಡು ಬಂಧನದಿಂದ ಹೊರಬಂದಿದ್ದಾರೆ. ಬೆಂಕಿ ನಂದಿಸುವ ಹೊತ್ತಿಗಾಗಲೇ ಹೊಟೇಲ್ ನ ಸಂಪೂರ್ಣ ಭಾಗ ಸುಟ್ಟು ಕರಕಲಾಗಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ವಿಜಯಪುರ: ಬಿಜೆಪಿಗೆ ಕಾಂಗ್ರೆಸ್ ನ ಇಬ್ಬರು ಪ್ರಭಾವಿ ನಾಯಕರು ಬರುವುದಕ್ಕೆ ನಾಟಕ ಮಾಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಗೆ ಬರಲು ಬಹಳ ಮಂದಿ ಕಾಯುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಇಬ್ಬರು ಬಿಜೆಪಿಗೆ ಬರಲು ನಾಟಕ ಮಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಲೂಟಿ ಮಾಡಿ ಬಿಜೆಪಿಗೆ ಬರುತ್ತಿದ್ದಾರೆ. ಇಂತಹ ಕಳ್ಳರು ಬಿಜೆಪಿಗೆ ಬರಬೇಕು ಅಂತಾ ಕಾಯುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಹಮಾಲಿ ಮಾಡೋದಕ್ಕೆ ಇದ್ದಾರಾ ಎಂದವರು ಪ್ರಶ್ನಿಸಿದರು. ಮೇಲಿನವರು ಇಂಥವರನ್ನೆಲ್ಲ ತೆಗೆದುಕೊಳ್ಳಬಾರದು. ಮೇಲಿನವರು ತೆಗೆದುಕೊಂಡರೆ ಕಾರ್ಯಕರ್ತರು ಮಾಡುತ್ತೇವಾ? ಕಳ್ಳರಿಗೆ ತೆಗೆದುಕೊಂಡರೆ ಸಿದ್ದಾಂತ ಎಲ್ಲಿ ಉಳಿಯುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಬಿಜೆಪಿಗೆ ಸೇರಲು ಒಪ್ಪದಿದ್ದಾಗ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರ್ಕಾರಿ ಸಂಸ್ಥೆಗಳಿಂದ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದಿದ್ದಾರೆ. ಸಚಿವರೊಬ್ಬರು ಶೇ. 40 ಕಮಿಷನ್ ಕೇಳಿದ್ದಕ್ಕೆ ಕಾಂಟ್ರ್ಯಾಕ್ಟರ್ ಆತ್ಮಹತ್ಯೆ ಮಾಡಿಕೊಂಡರು. ರಾಜ್ಯ ಸರ್ಕಾರವು 40 ಪರ್ಸೆಂಟ್ ಕಮಿಷನ್ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘ ಸಾರ್ವಜನಿಕವಾಗಿ ಹೇಳಿದೆ. ಃಎP ಪ್ರಾಯೋಜಿತ PSI ಹಗರಣ ಭೇದಿಸಿದ್ದರಿಂದ ಪೊಲೀಸ್ ನೇಮಕಾತಿ ಸ್ಥಗಿತಗೊಂಡಿದೆ. ಆದರೂ ಯಾರ ಮೇಲೂ ದಾಳಿ ನಡೆದಿಲ್ಲ, ಚಾರ್ಜ್ ಶೀಟ್ ಹಾಕಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಮೈಸೂರು: ರಾಜ್ಯಾದ್ಯಂತ ಯುವ ಕಾರ್ಯಕರ್ತರು ನನ್ನನ್ನ ಪ್ರೀತಿ ಮಾಡ್ತಾರೆ. ನನಗೆ ಟಿಕೆಟ್ ಸಿಗದಿದ್ದಕ್ಕೆ ಕೆಲವರು ಬೇಸರವಾಗಿದ್ದಾರೆ. ನಾನು ಕೂಡಾ ರಾಜಕಾರಣಕ್ಕೆ ಈಗ ಅಂಬೆಗಾಲಿಡುತಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷ ಉತ್ತಮ ಜವಾಬ್ದಾರಿ ನೀಡಲಿದೆ. ಪರಿಷತ್ ಟಿಕೆಟ್ ಸಿಗದಿದ್ದಕ್ಕೆ ಇಲ್ಲಿಗೆ ಎಲ್ಲಾ ಮುಗಿದುಹೋಗಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನನ್ನ ಹಾಗೆ ಕೆಲಸ ಮಾಡಿದ ಸಾವಿರಾರು ಕಾರ್ಯಕರ್ತರಿದ್ದಾರೆ. ಸ್ವಂತ ದುಡ್ಡು ಖರ್ಚು ಮಾಡಿ ಪಕ್ಷದ ಕೆಲಸ ಮಾಡುತ್ತಿರುವ ಕಾರ್ಯಕರ್ತರಿದ್ದಾರೆ. ಪರಿಷತ್ ಚುನಾವಣೆಗೆ ಸುಮಾರು 20 ಜನರು ಹೆಸರು ಶಿಫಾರಸ್ಸು ಮಾಡಲಾಗಿತ್ತು. ಆದರೆ ಆಯ್ಕೆ ಆಗಬೇಕಿರೋದು ಕೇವಲ ನಾಲ್ಕು ಜನ. ಅದನ್ನ ಹೈಕಮಾಂಡ್ ಈಗಾಗಲೇ ತೀರ್ಮಾನ ಮಾಡಿದೆ ಎಂದರು. ಬಿ.ಎಲ್.ಸಂತೋಷ್ ರಿಂದ ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದೆ ಎಂಬ ವದಂತಿ ಬಗ್ಗೆ ಮಾತನಾಡಿದ ಅವರು, ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ .ಅಭ್ಯರ್ಥಿ ಆಯ್ಕೆ ಮಾಡೋದು ಕೋರ್ ಕಮಿಟಿ ಹಾಗೂ ಕೇಂದ್ರ ನಾಯಕರು. ಇದರಲ್ಲಿ ಯಾರೋ ಒಬ್ಬರ…
ಸರಗೂರು: ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಗಾ ವಹಿಸುವ ಜೊತೆಗೆ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಬಗ್ಗೆ ತೀರ್ಮಾನಿಸಲಾಯಿತು. ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಅಪರಾಧ ತಡೆ ಮುನ್ನೆಚ್ಚರಿಕೆ ಕ್ರಮವಾಗಿ ಸರಗೂರು ಪೊಲೀಸರು ವರ್ತಕರು, ಆಭರಣ ಅಂಗಡಿ ಮಾಲೀಕರೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಬಗ್ಗೆ ಒಮ್ಮತದ ಅಭಿಪ್ರಾಯದೊಂದಿಗೆ ಕ್ರಮವಹಿಸಲಾಯಿತು. ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವೃತ್ತ ನಿರೀಕ್ಷಕ ಎನ್.ಆನಂದ್, ಅಪರಾಧ ಕೃತ್ಯಗಳನ್ನು ತಡೆಗಟ್ಟುವಲ್ಲಿ ಇಲಾಖೆ ಶ್ರಮವಹಿಸಿದೆ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಯಾರೇ ಭಾಗಿಯಾಗಿದ್ದರು ಅಂತಹವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ. ಆದ್ದರಿಂದ ಅಪರಾಧ ಕೃತ್ಯಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಲು ಸಹಕಾರಿಯಾಗುವಂತೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದರೆ ಹೆಚ್ಚಿನ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ವರ್ತಕರು, ಆಭರಣ ಅಂಗಡಿ ಮಾಲೀಕರು ಸಹಕಾರ ನೀಡಬೇಕು ಎಂದರು. ಸಮಾಜದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣವಾಗಬೇಕಂದರೆ ಅಲ್ಲಿ ಕಾನೂನು ಸುವ್ಯವಸ್ಥೆ…