Author: admin

ತಿಪಟೂರು: ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೋಕಿನ ಪೆದ್ದನಹಳ್ಳಿ ದಲಿತ ಯುವಕರ ಕಗ್ಗೋಲೆ  ಪ್ರಕರಣವನ್ನ ದಾರಿತಪ್ಪಿಸುವ ಹುನ್ನಾರ ನಡೆಯುತ್ತಿದ್ದು ಪ್ರಕರಣದ ಪ್ರಮುಖ ಆರೋಪಿಗಳನ್ನ ಬಂಧಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) (ದಾದಾ ಸಾಹೇಬ್ ಎನ್ ಮೂರ್ತಿ ಸ್ಥಾಪಿತ)  ತಿಪಟೂರು ತಾಲ್ಲೋಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರಸಲ್ಲಿಸಲಾಯಿತು ಪ್ರತಿಭಟನಾ ನಿರತರನ್ನ ಉದ್ದೇಶಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಾದಾ ಸಾಹೇಬ್ ಎನ್. ಮೂರ್ತಿ ಸ್ಥಾಪಿತ )ಅಧ್ಯಕ್ಷ ಗೌಡನಕಟ್ಟೆ ಅಶೋಕ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ  ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಸರ್ಕಾರ ಪರಿಶಿಷ್ಠ ಜಾತಿ ವರ್ಗಗಳಿ ಸೂಕ್ತ ರಕ್ಷಣೆ ನೀಡದೆ ಮೌನ ವಹಿಸಿರುವುದು ಖಂಡನೀಯವಾಗಿದೆ ಎಂದರು. ಸರ್ಕಾರದ ನಿರ್ಲಕ್ಷ್ಯ ದೋರಣೆಗೆ ಸಾಕ್ಷಿ ಎಂಬತೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೋಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಸಮುದಾಯಕ್ಕೆ ಸೇರಿದ ಯುವಕರನ್ನ ಕಳ್ಳತನದ ಆರೋಪಹೊರಿಸಿ  ಹಳೇ ಜಾತಿ ವೈಷ್ಯಮ್ಯದ ಹಿನ್ನೆಲೆ…

Read More

ಚಿತ್ರದುರ್ಗ: ಜಿಲ್ಲೆಯ  ಚಿತ್ರದುರ್ಗ ತಾಲ್ಲೂಕಿನ ಭರಮ ಸಾಗರ ಹೋಬಳಿಯ ಕೊಳಾಳು ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯಾಗಿರುವ ಸಂತೋಷ್ ಹೆಚ್.ಎಸ್. ರವರು ಖಾತೆ ಬದಲಾವಣೆಗಾಗಿ ರೂ 4,500ರೂ., ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಭರಮಸಾಗರದ ನಾಡಕಛೇರಿಯಲ್ಲೆ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಎಸಿಬಿ  ಅಧಿಕಾರಿಗಳು ದಾಳಿ ಮಾಡಿ ಆರೋಪಿ  ಗ್ರಾಮ ಲೆಕ್ಕಾಧಿಕಾರಿ ಸಂತೋಷ್ ಹೆಚ್.ಎಸ್. ರವರನ್ನು ಬಂಧಿಸಿದ್ದಾರೆ. ಆರೋಪಿ  ಸಂತೋಷ್ ಹಳವುದರ ಗ್ರಾಮದ ರೈತ ವೀರೇಶ್ ಬಳಿ ರೂಪಾಯಿ 4,500 ಲಂಚ ಸ್ವೀಕರಿಸುವಾಗ ಎ ಸಿ ಬಿ ಅಧಿಕಾರಿಗಳು ಬಂಧಿಸಿದ್ದಾರೆ .  ಖಾತೆ ಬದಲಾವಣೆ ಮಾಢಿಕೊಡುವಂತೆ ಸಾಕಷ್ಟುಸಲ ರೈತ ಓಡಾಡಿದ್ದರೂ ಗ್ರಾಮ ಲೆಕ್ಕಾಧಿಕಾರಿಯಾಗಿರುವ ಸಂತೋಷ್ ಹೆಚ್.ಎಸ್. ರವರು ಸ್ಪಂದಿಸದೇ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಹೀಗಾಗಿ ರೈತ ಎಸಿಬಿ ಮೊರೆ ಹೋಗಿದ್ದರು. ದಾವಣಗೆರೆ ಎಸಿಬಿ ಅಧಿಕಾರಿಗಳಾದ ಡಿ ವೈ ಎಸ್ ಪಿ ಮಂಜುನಾಥ್ ಆರ್. ,ಇನ್ಸ್ ಪೆಕ್ಟರ್ ಗಳಾದ ಉಮೇಶ್ ಕುಮಾರ್, ಪ್ರಭು ಸೂರಿನ್ ಅವರು ದಾಳಿಯ ನೇತೃತ್ವ ವಹಿಸಿದ್ದರು . ಇನ್ನೂ  ಚಿತ್ರದುರ್ಗ ತಾಲ್ಲೂಕು ಕಛೇರಿಯಲ್ಲಿ…

Read More

ಬೆಂಗಳೂರು:  ಶಾಲಾ ಬಸ್ ವೊಂದು ಬಾಲಕಿಯ ಮೇಲೆ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿಯಲ್ಲಿ ನಡೆದಿದೆ. ಹಾರೋಹಳ್ಳಿ ನಿವಾಸಿ 16 ವರ್ಷ ವಯಸ್ಸಿನ ಕೀರ್ತನಾ ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಸ್ನೇಹಿತರ ಜತೆ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಖಾಸಗಿ ಶಾಲಾ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಬಿದ್ದ ಬಾಲಕಿಯ ಮೇಲೆಯೇ ಬಸ್  ಹರಿದಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ. ಡೆಲ್ಲಿ ಪಬ್ಲಿಕ್ ಶಾಲೆ ಬಸ್ ಬಾಲಕಿಯ ಮೇಲೆ ಹರಿದ ಬಸ್ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಬೆಂಗಳೂರು: ನಿರಂತರ ಆದಾಯ ಹೆಚ್ಚಳ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಇಡಿ ಅಧಿಕಾರಿಗಳು ಗುರುವಾರ ದೆಹಲಿ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಬೆಂಗಳೂರು ನಿವಾಸ ಸೇರಿದಂತೆ ದೆಹಲಿ, ಮುಂಬೈ ಸೇರಿ ಹಲವು ನಗರಗಳಲ್ಲಿ ಆಸ್ತಿ ಸಂಪಾದನೆ, ಹಲವು ವರ್ಷಗಳಿಂದ ನಿರಂತರ ಆದಾಯ ಹೆಚ್ಚಳ ಆರೋಪದ ಮೇಲೆ ಈ ಹಿಂದೆ ಇಡಿ ದಾಳಿ ಆಗಿತ್ತು. ದಾಖಲೆ ಸಂಗ್ರಹದ ಸಮಯದಲ್ಲಿ ಡಿಕೆಶಿಯನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಜಾಮೀನು ಪಡೆದು ಜೈಲಿನಿಂದ ಡಿಕೆಶಿ ಹೊರ ಬಂದಿದ್ದರು. ಈ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಸಿರಾ: ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಕುರುಬ ಸಮುದಾಯಕ್ಕೆ ಪ್ರಗತಿಯನ್ನು ಕಾಣದಿರುವುದು ವಿಷಾದ ಸಂಗತಿ ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ರಾಷ್ಟ್ರಧ್ಯಕ್ಷ ರಾಮಚಂದ್ರಪ್ಪ ತಿಳಿಸಿದರು. ಇದೇ ತಿಂಗಳು 28 ರಂದು ತುಮಕೂರು ಸಿರಾ ಗೇಟ್ ಬಳಿಯಿರುವ ಕಾಳಿದಾಸ ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾ ಕುರುಬ ಜಾಗೃತಿ ಸಮಾವೇಶವನ್ನು ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು. ಕುರುಬ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಮಾತನಾಡಿ, ಮುಂಬರುವ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಹಿಂದುಳಿದ ಸಮುದಾಯದ ಮೀಸಲಾತಿಯನ್ನು ತೆಗೆಯುವಂತಹುನ್ನಾರ ನಡೆಯುತ್ತಿದೆ.  ಇದರ ವಿರುದ್ಧ ಬೃಹತ್ ಹೋರಾಟವನ್ನು ನಡೆಸುತ್ತೇವೆ.. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಶ್ವರಪ್ಪ ಸೇರಿದಂತೆ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ಚಂದ್ರೇಗೌಡ ಮುಖಂಡ ಜಕ್ಕನಹಳ್ಳಿ ಲಿಂಗರಾಜ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ ನಾರಾಯಣ ಹುಳಿಯಾರು ಸಿದ್ದರಾಮಯ್ಯ ತರಕಾರಿ ಗಂಗಾಧರ್ ಕುರುಬ ಸಮಾಜದ ಹಲವಾರು ಮುಖಂಡರು ಭಾಗವಹಿಸಿದ್ದರು. ವರದಿ: ಆನಂದ,  ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ…

Read More

ಬಾಗಲಕೋಟೆ: ನಾನೇನಾದ್ರೂ ತಪ್ಪು ಮಾಡಿದ್ದರೆ ಚೌಡೇಶ್ವರಿ ದೇವಿ ನನಗೆ ಶಿಕ್ಷೆ ಕೊಡಲಿ, ನಾನು ಯಾವುದೇ ತಪ್ಪು ಮಾಡಿಲ್ಲ ಅಂದರೆ ಶಿಕ್ಷೆಯಿಂದ ಮುಕ್ತಿ ನೀಡಲಿ ಇದುವೇ ನನ್ನ ಪ್ರಾರ್ಥನೆ ಎಂದು  ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, 15 ದಿನದಲ್ಲಿ ಇದಕ್ಕೊಂದು ರೂಪ ಬರುತ್ತದೆ ಎಂದುಕೊಂಡಿದ್ದೇನೆ. ಸಂಪುಟಕ್ಕೆ ಸೇರಿಸಿಕೊಳ್ಳುವುದು, ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಕೇಂದ್ರದ ಬಿಜೆಪಿ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದರು. ಕಾಂಗ್ರೆಸ್ ಪಕ್ಷದಲ್ಲಿ ವಿಧಾನಪರಿಷತ್ ಟಿಕೆಟ್ ಗಾಗಿ ಬಡಿದಾಡಿದರು. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಗುಂಪುಗಳಿವೆ ಎಂದು ಈಶ್ವರಪ್ಪ ಟೀಕಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಚಾಮರಾಜನಗರ: ಪಠ್ಯ ಪುಸ್ತಕ ವಿಚಾರವನ್ನು ರಾಜಕೀಯಗೊಳಿಸಲು ಹಾಗೂ ಹಿಂದೂ ಧರ್ಮವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ ಎಂದು ಸಚಿವ  ಬಿ.ಸಿ.ನಾಗೇಶ್ ಆರೋಪಿಸಿದರು. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಪರವಾಗಿ ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಬುಧವಾರ ಮತ ಯಾಚಿಸಿದ ಅವರು, ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ,  ಎಲ್ಲ ಸಮಯದಲ್ಲೂ ಯಾವುದೇ ಪರಿಷ್ಕರಣೆಯಾದಾಗ ಗೊಂದಲಗಳಿರುತ್ತವೆ. ವೈಚಾರಿಕವಾಗಿ ವಸ್ತುನಿಷ್ಠವಾಗಿ ವಾದ ಮಾಡಲು ಹತಾಶರಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ನವರು ಹಿಜಾಬ್ ಅನ್ನು ರಾಜಕೀಯ ಅಸ್ತ್ರವಾಗಿ ಬಳಸಲು ಪ್ರಯತ್ನಿಸಿ ವಿಫಲರಾದರು. ಕೋವಿಡ್ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸಿದಾಗ ಈ ರೀತಿಯ ಮಾತುಗಳನ್ನಾಡಿ ವಿಫಲರಾದರು. ಉತ್ತರ ಪ್ರದೇಶ ಚುನಾವಣೆ ಬಳಿಕ ಕಾಂಗ್ರೆಸ್ ದೇಶದಲ್ಲಿ ಎಲ್ಲೂ ಇಲ್ಲದಾಗಿಬಿಡುತ್ತದೆಯೋ ಎಂಬ ಭಯ ಶುರುವಾಗಿ ಸರ್ಕಾರದ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಬಳ್ಳಾರಿ: ಬಿಜೆಪಿ ಪಕ್ಷದ ದೊಡ್ಡ ಶಕ್ತಿಯಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಿಂದ ಸೈಡ್ ಲೈನ್ ಮಾಡುವ ಮಾತೇ ಇಲ್ಲ ಎಂದು ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಎಸ್‌ಯಡಿಯೂರಪ್ಪನವರು ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅವರು ಪಕ್ಷದ ದೊಡ್ಡ ಶಕ್ತಿ. ಅವರ ಶಕ್ತಿ ಕುಗ್ಗಿಸುವ ಕೆಲಸ ಪಕ್ಷದಲ್ಲಿ ಎಂದೂ ನಡೆಯುವುದಿಲ್ಲ ಎಂದರು. ವಿಧಾನಸಭೆ ಚುನಾವಣೆ ಹತ್ತಿರ ಇರುವ ಕಾರಣ ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಎಂಎಲ್ ಸಿ ಟಿಕೆಟ್ ಕೊಟ್ಟಿಲ್ಲ. ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ಬದ್ದವಾದ ಪಕ್ಷ. ವಿಜಯೇಂದ್ರ ಅವರನ್ನು ಗುರುತಿಸುವ ಕೆಲಸ ಪಕ್ಷ ಮಾಡಲಿದೆ ಎಂದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರರಿಗೆ ಅವಕಾಶ ಕಲ್ಪಿಸಬೇಕೆಂದು ಪಕ್ಷದ ಚಿಂತನೆಯಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಕೊಪ್ಪಳ: ದತ್ತಪೀಠದ ಹೆಸರಲ್ಲಿ ಸಂಸದ, ಶಾಸಕರಾಗಿ ಅಧಿಕಾರಕ್ಕೆ ಬಂದವರು ಈಗೇನು ಮಾಡುತ್ತಿದ್ದಾರೆ ? ಅಲ್ಲಿ ಮುಸ್ಮಾನರು ನಮಾಜು ಮಾಡ್ತಾರೆ, ಮಾಂಸದ ಊಟ ಮಾಡ್ತಾರೆಂದರೇ ಏನರ್ಥ ? ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,  ದತ್ತಪೀಠದಲ್ಲಿ ಮುಸ್ಮಾನರು ನಮಾಜು ಮಾಡ್ತಾರೆ, ಮಾಂಸದ ಊಟ ಮಾಡ್ತಾರೆ ಎಂದರೆ ಏನರ್ಥ ? ಪೀಠದ 200 ಮೀಟರ್ ವ್ಯಾಪ್ತಿಯಲ್ಲಿ ನಮಾಜು ಮಾಡಬಾರದು, ಮಾಂಸದ ಊಟ ಮಾಡಬಾರದು ಎನ್ನುವ ನಿಯಮ ಇದ್ದರೂ ಪೊಲೀಸ್ ಇಲಾಖೆ ಏನು ಮಾಡುತ್ತಿದೆ. ದತ್ತ ಪೀಠದಿಂದಲೇ ಶೋಭಾ ಕರಂದ್ಲಾಜೆ, ಸಿ.ಟಿ.ರವಿ ಗೆದ್ದಿದ್ದಾರೆ. ಈಗ ಅವರೇನು ಮಾಡ್ತಿದ್ದಾರೆ ಎಂದು ಮುತಾಲಿಕ್ ಪ್ರಶ್ನೆ ಮಾಡಿದರು. ಅಲ್ಲಿ ಧಾರ್ಮಿಕ ದತ್ತಿ ಇಲಾಖೆಯು ಪೀಠದ ಅಧಿಕಾರಿಯನ್ನು ಕಿತ್ತೊಗೆಯಬೇಕು. ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು. ನಮ್ಮಂತ ಹೋರಾಟಗಾರರಿಗೆ, ಹಿಂದುತ್ವವಾದಿಗಳಿಗೆ ರಾಜಕೀಯ ಬಾಗಿಲು ಮುಚ್ಚಿದೆ. ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ. ಬಿಜೆಪಿಗೆ ಯಾವುದೇ ಹಿಂದೂತ್ವ ಇಲ್ಲ. ಯೋಗಿ ಆದಿತ್ಯನಾಥ ತರ ರಾಜ್ಯದಲ್ಲಿ…

Read More

ಕೊಪ್ಪಳ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಬದ್ಧವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಬಗ್ಗೆ ಮಾತನಾಡಿದ ಅವರು, ಮಂದಿರ ನಿರ್ಮಿಸುವ ಭರವಸೆಯನ್ನು ಬಿಜೆಪಿ ಈಡೇರಿಸಿದೆ ಎಂದು ಹೇಳಿದರು. ಕಾನೂನು ಎಲ್ಲಾ ನಾಗರಿಕರಿಗೆ ಸಮಾನವಾಗಿರಬೇಕು ಎಂಬ ಕಾರಣಕ್ಕಾಗಿ ಏಕರೂಪ ನಾಗರಿಕ ಸಂಹಿತೆಯನ್ನು ತರಲು ಬಿಜೆಪಿ ಬದ್ಧವಾಗಿದೆ ಎಂದು ಅವರು ಇದೇ ವೇಳೆ ಅವರು ಹೇಳಿದರು. ಪ್ರಸ್ತುತ ಯಾವುದೇ ಕೋಮು ಅಥವಾ ಧಾರ್ಮಿಕ ಪೂರ್ವಾಗ್ರಹವಿಲ್ಲದೆ ಅಪರಾಧ ಕೃತ್ಯಗಳಿಗೆ ಸಮಾನವಾಗಿ ಶಿಕ್ಷೆಯನ್ನು ನೀಡಲಾಗುತ್ತದೆ. ಅಂತೆಯೇ, ನಾಗರಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಪರಾಧಿಗಳನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಸಚಿವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More