Subscribe to Updates
Get the latest creative news from FooBar about art, design and business.
- ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್ ಕ್ಯಾಮೆರಾದಲ್ಲಿ ಹುಲಿ ಪತ್ತೆ!
- ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
- ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ ಶಿವಕುಮಾರ್
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
- ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
- ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
Author: admin
ರಾಮನಗರ: ಜಿಲ್ಲೆ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಮತ್ತು ಮಾಜಿ ಸಚಿವ ಎಚ್.ಎಂ. ರೇವಣ್ಣ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ರೇವಣ್ಣ ಅವರಿಗೇ ಟಿಕೆಟ್ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆಯುವ ಮೂಲಕ ಬಾಲಕೃಷ್ಣ ನೇರ ಯುದ್ಧಕ್ಕೆ ಇಳಿದಿದ್ದಾರೆ. ರಾಜಕೀಯ ಜೀವನದುದ್ದಕ್ಕೂ ರೇವಣ್ಣ ವಿರುದ್ಧವೇ ಬಾಲಕೃಷ್ಣ ಹೋರಾಟ ಮಾಡಿಕೊಂಡು ಬಂದಿದ್ದು, ಕಾಂಗ್ರೆಸ್ ಸೇರ್ಪಡೆ ನಂತರವೂ ಇಬ್ಬರ ನಡುವಿನ ಸಂಬಂಧ ಗಟ್ಟಿ ಆಗಲೇ ಇಲ್ಲ. ಇದರಿಂದಾಗಿ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುವುದನ್ನು ತಡೆಯುವ ಸಲುವಾಗಿಯೇ ಬಾಲಕೃಷ್ಣ ಪತ್ರ ಸಮರ ಸಾರಿದ್ದಾರೆ. ಅಸಲಿಗೆ ಆಗಿದ್ದೇನು?: ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದ್ದ ಬಾಲಕೃಷ್ಣ ಪರಾಭವದ ನಂತರವೂ ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳಲಿಲ್ಲ. ಜೆಡಿಎಸ್ ಶಾಸಕ ಎ.ಮಂಜುನಾಥ್, ಎಚ್.ಎಂ. ರೇವಣ್ಣ ಅವರ ಗರಡಿಯಲ್ಲಿಯೇ ಪಳಗಿದ್ದು, ಕಳೆದ ಚುನಾವಣೆಯಲ್ಲಿ ರೇವಣ್ಣ ಅವರು ಮಂಜುನಾಥ್ ಪರವಾಗಿಯೇ ಕೆಲಸ ಮಾಡಿದ್ದಾರೆ ಎನ್ನುವ ಆರೋಪ ಕಾರ್ಯಕರ್ತರಲ್ಲಿ ಇದೆ. ಆದರೆ, ಬಾಲಕೃಷ್ಣ ಮುಂದಿನ…
ಕೋಲಾರ: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ದೊಡ್ಡ ಬಫೂನ್. ಅವರು ಯಾವಾಗ ಯಾವ ಪಕ್ಷದಲ್ಲಿ ಇರುತ್ತಾರೆ, ಯಾರನ್ನು ಹೊಗಳುತ್ತಾರೆ, ಯಾರನ್ನು ತೆಗಳುತ್ತಾರೆ ಎಂಬುದು ಗೊತ್ತಿಲ್ಲ ಎಂದು ಸಂಸದ ಎಸ್.ಮುನಿಸ್ವಾಮಿ ವ್ಯಂಗ್ಯವಾಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಇಹ್ರಾಹಿಂ ರಾಜಕೀಯವಾಗಿ ಹತಾಶರಾಗಿದ್ದಾರೆ. ಅವರಿಗೆ ರಾಜಕೀಯ ಬದ್ಧತೆ ಇಲ್ಲ ಎಂದು ಟೀಕಿಸಿದರು. ಜಿಲ್ಲೆಯ ಬಹುತೇಕ ಕೆರೆಗಳು ತುಂಬಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಜಿಲ್ಲೆಯ ಜನರ ಆಶಯ ಈಡೇರಿಸಿದೆ. ಇಬ್ರಾಹಿಂ ಅವರು ಜಿಲ್ಲೆಗೆ ಬಂದು ನೀರಿನ ವಿಚಾರದಲ್ಲಿ ಜಲಧಾರೆ ಹರಿಸುವ ಅವಶ್ಯಕತೆಯಿಲ್ಲ. ಇಲ್ಲಿ ಬಂದು ಸುಮ್ಮನೆ ಮುಸ್ಲಿಮರ ಓಲೈಕೆಗೆ ಮಾತನಾಡಿದರೆ ಪ್ರಯೋಜನವಿಲ್ಲ ಎಂದರು. ಮುಸ್ಲಿಂ ಮತದಾರರು ನಮ್ಮ ಜತೆಗೂ ಇದ್ದಾರೆ. ನಾನು ಕೋಲಾರಕ್ಕೆ ಬಂದು ಬೆಂಕಿ ಹಚ್ಚಿಲ್ಲ, ಬದಲಿಗೆ ಬೆಂಕಿಯಂತಿದ್ದ ಕೋಲಾರವನ್ನು ತಣ್ಣಗೆ ಮಾಡಿದ್ದೇವೆ. ಆದರೆ, ಇಬ್ರಾಹಿಂ ಬೆಂಕಿ ಇಡುವುದಕ್ಕೆ ಕೋಲಾರಕ್ಕೆ ಬಂದಿದ್ದಾರೆ ಎಂದು ಗುಡುಗಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ಕೇಂದ್ರ ಸರ್ಕಾರದ ಕ್ರಮ ಶ್ಲಾಘನೀಯ. ದೇಶದ ಜನರ ಬಗೆಗೆ ಕಾಳಜಿ ಹೊಂದಿರುವ ನರೇಂದ್ರ ಮೋದಿಯವರು ಓರ್ವ ಸಂವೇದನಾಶೀಲ ನಾಯಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಪೆಟ್ರೋಲ್‌ಗೆ 8 ರೂ. ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ 6 ರೂ. ಕಡಿತ ಮಾಡಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಸದ್ಯ ಜಾಗತಿಕ ಪರಿಸ್ಥಿತಿ ಸವಾಲಿನಿಂದ ಕೂಡಿದ್ದರೂ, ಈ ಬೆಲೆ ಇಳಿಕೆಗಳು ಜನರಿಗೆ ಬಹುದೊಡ್ಡ ನಿರಾಳತೆ ಒದಗಿಸಲು ಕಾರಣವಾಗಿದೆ. ಪ್ರತಿ ವರ್ಗದ ಮೇಲೆಯೂ ಪ್ರಧಾನಿಗಿರುವ ಕಾಳಜಿ ಅವರೊಬ್ಬ ಸಂವೇದನಾಶೀಲ ನಾಯಕ ಎಂಬುದನ್ನು ತಿಳಿಸುತ್ತದೆ ಎಂದಿದ್ದಾರೆ. ಹಣದುಬ್ಬರ ನಿಯಂತ್ರಿಸಲು ಮತ್ತು ಅಗತ್ಯ ವಸ್ತುಗಳ ದರ ಏರಿಕೆ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ನಿರ್ಧಾರ ಮಾಡಿದೆ. ಉಜ್ವಲ ಯೋಜನೆ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್ ಗೆ 200 ರೂ. ಸಬ್ಸಿಡಿ ನೀಡುವ ಘೋಷಣೆಯೂ ಮಹತ್ವದ ಕ್ರಮ…
ತುಮಕೂರು: ರಾಜ್ಯಾದ್ಯಂತ ಮಳೆಯಿಂದ ನಾನಾ ಸಂಕಷ್ಟಗಳಾಗಿವೆ. ಇದೇ ಸಂದರ್ಭದಲ್ಲಿ ತುಮಕೂರಿನಲ್ಲೂ ಮಳೆ ನಿರಂತರವಾಗಿ ಸುರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ ಜನತೆಗೆ ಧೈರ್ಯ ಹೇಳಬೇಕಾದ ಜಿಲ್ಲಾ ಉಸ್ತುವಾರಿ ಸಚಿವರ ಪತ್ತೆಯೇ ಇಲ್ಲ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ದಿನಗಳಿಂದ ನಿರಂತರ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಎಲ್ಲ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದರೆ, ಇತ್ತ ತುಮಕೂರಿಗೆ ಉಸ್ತುವಾರಿ ಸಚಿವರು ಇದ್ದೂ ಇಲ್ಲದಂತಿದ್ದಾರೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ. ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಈವರೆಗೂ ಜಿಲ್ಲೆಗೆ ಭೇಟಿ ನೀಡಿಲ್ಲ. ಅಧಿಕಾರಿಗಳ ಸಭೆ ನಡೆಸಿ ಮಳೆ ಪರಿಸ್ಥತಿ ನಿರ್ವಹಣೆಗೆ ಸೂಚನೆ ನೀಡಿಲ್ಲ ಎನ್ನುವುದು ಜಿಲ್ಲಾ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ಪ್ರೀತಿಸಿದ ಯುವತಿಯ ಆತ್ಮಹತ್ಯೆಯಿಂದ ನೊಂದ ಪ್ರೇಮಿಯೋರ್ವ ತಾನೂ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆ ಮಾಡಿಕೊಂಡ 6 ತಿಂಗಳ ಬಳಿಕ ಯುವಕನ ಅಸ್ಥಿ ಪಂಜರ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಮಾಗಡಿ ಬಳಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಮೃತನ ಬೈಕ್ ಶುಕ್ರವಾರ ಸಂಜೆ ಕಾಡುಶನೇಶ್ವರ ದೇವಾಲಯದ ಹಿಂಭಾಗದ ಕಾಡಿನ ಬಂಡೆ ಬಳಿ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ತನಿಖೆ ನಡೆಸಿದಾಗ ಅರಮನೆ ಹೊನ್ನಮಾಚನಹಳ್ಳಿಯ ಸಂತೋಷ ಎನ್ನುವುದು ತಿಳಿದು ಬಂದಿತ್ತು. ಸಂತೋಷ ತಾಲ್ಲೂಕಿನ ಕೆಬ್ಬಳಿಯ ಶಾಲಿನಿ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಪೋಷಕರು ವಿವಾಹಕ್ಕೆ ಒಪ್ಪದಿದ್ದಾಗ ನೊಂದ ಶಾಲಿನಿ ಆತ್ಮಹತ್ಯೆಗೆ ಶರಣಾಗಿದ್ದರು. ಯುವತಿಯ ಆತ್ಮಹತ್ಯೆಯ ಸುದ್ದಿ ಕೇಳಿದ ಸಂತೋಷ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು, ಪೋಷಕರು ಚಿಕಿತ್ಸೆ ಕೊಡಿಸಿದ್ದರು. ನವೆಂಬರ್ 28 ರಂದು ಬೆಂಗಳೂರಿನಿಂದ ಬಂದ ಸಂತೋಷ್, ಕಾಡಿನ ಬಂಡೆ ಬಳಿ ವಾಹನ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯೆ ನೀಡುವ ಮೂಲಕ ಇಬ್ಬರ ನಡುವೆ ಟ್ವಿಟರ್ ವಾಗ್ವಾದ ನಡೆದಿತ್ತು. ಇದೀಗ ಭಾಷೆಗಳ ನಡುವೆ ವಿವಾದ ಹುಟ್ಟಿಕೊಳ್ಳುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನೀಡಿರುವ ಹೇಳಿಕೆಯನ್ನು ಸ್ವಾಗತಿಸುವುದಾಗಿ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. “ಹಿಂದಿ ಭಾಷೆಯ ಕುರಿತು ನಾನು ಯಾವುದೇ ಜಗಳ ಅಥವಾ ಯಾವುದೇ ರೀತಿಯ ಚರ್ಚೆ ಹುಟ್ಟುಹಾಕಬೇಕೆಂಬ ಉದ್ದೇಶ ಹೊಂದಿರಲಿಲ್ಲ. ಇದೊಂದು ಅಜೆಂಡಾ ಇಲ್ಲದ ಪ್ರತಿಕ್ರಿಯೆಯಾಗಿತ್ತು. ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಹೇಳಿರುವ ಮಾತುಗಳನ್ನು ಕೇಳಿಸಿಕೊಳ್ಳುವುದು ನಮಗೊಂದು ಗೌರವ ಮತ್ತು ಸೌಭಾಗ್ಯವಾಗಿದೆ” ಎಂದು ಕಿಚ್ಚ ಸುದೀಪ್ ಎನ್ ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ. ತಮ್ಮ ಮಾತೃಭಾಷೆಯನ್ನು ಗೌರವದಿಂದ ಕಾಣುವ ಪ್ರತಿಯೊಬ್ಬರಿಗೂ ಪ್ರಧಾನಿಯವರ ಹೇಳಿಕೆಯಿಂದ ಅತೀವ ಸಂತಸ ತಂದಿದೆ. ಎಲ್ಲಾ ಪ್ರಾದೇಶಿಕ ಭಾಷೆಗಳು ಪೂಜನೀಯ ಎಂಬ ಪ್ರಧಾನಿಯವರ…
ಬೆಳಗಾವಿ: ಮುಖ್ಯಮಂತ್ರಿ ಆದ್ರೆ ಜನರಿಗೆ ಉಚಿತ ಎಲ್ಲಾ ವಸ್ತುಗಳನ್ನು ಕೊಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ದಶಕಗಳಿಂದಲೂ ಮೋಸಗಾರಿಕೆ ಮಾಡಿಕೊಂಡೇ ಆಡಳಿತ ಮಾಡಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿಎಂ ಆದ್ರೆ ಸಾಲಮನ್ನಾ ಮಾಡುತ್ತೇನೆ, 10 ಕೆಜಿ ಅಕ್ಕಿ ನೀಡ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಜನರಿಗೆ ನಿಮ್ಮ ಉಚಿತ ವಸ್ತುಗಳು ಬೇಕಾಗಿಲ್ಲ, ಮೊದಲು ಸ್ವಾಭಿಮಾನದಿಂದ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಪ್ರತಿಕ್ರಿಯಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಬಿಜೆಪಿಯಲ್ಲಿ ಬಣ ರಾಜಕೀಯ ಇಲ್ಲವೇ ಇಲ್ಲ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ. ಕೆಲ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಗಳಿರುತ್ತವೆ. ಹಾಗಂತೆ ಬಣ ರಾಜಕೀಯ ಎಂದು ಭಾವಿಸಿಕೊಳ್ಳುವುದು ತಪ್ಪು ಎಂದರು. ಇದೇ ಮೋಸಗಾರಿಕೆ ಮಾಡಿಕೊಂಡು ದೇಶದಲ್ಲಿ ಕಾಂಗ್ರೆಸ್ ಆಡಳಿತ ಮಾಡಿದೆ. 2023ರ ಚುನಾವಣೆಯಲ್ಲಿ ರಾಜ್ಯದಲ್ಲಿ, 2024ರಲ್ಲಿ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಜನರಿಗೆ ಬೇಕಾದ ಎಲ್ಲಾ ಅಗತ್ಯತೆಗಳನ್ನು ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.…
ಧಾರವಾಡ: ನಿಶ್ಚಿತಾರ್ಥ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾದ ಘಟನೆ ಧಾರವಾಡ ಜಿಲ್ಲೆಯ ಬಾಡ ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ. ಅಪಘಾತದಲ್ಲಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ 6 ಜನರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಗಾಯಗೊಂಡಿದ್ದ ಬಾಲಕಿ ಮನುಶ್ರೀ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಚಾಲಕನ ಅಜಾಕರೋಕತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಬೆನಕಟ್ಟಿ ಗ್ರಾಮದ ಅನನ್ಯಾ (14), ಹರೀಶ್ (13), ಶಿಲ್ಪಾ (34), ನೀಲವ್ವ (60), ಮಧುಶ್ರೀ (20) ಮಹೇಶ್ವರಯ್ಯ (11), ಶಂಭುಲಿಂಗಯ್ಯ (35) ಹಾಗೂ ಮನುಶ್ರೀ (16) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಮೈಸೂರು: ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ತಯಾರಿಯ ಅಧ್ಯಕ್ಷರಾಗಿರುವುದು ದುರಂತ. ನಾವೆಲ್ಲ ಸೇರಿ ಶಿಕ್ಷಣ ಹಾಳು ಮಾಡುತ್ತಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ. ಧರ್ಮದ ಆಧಾರಿತ ಪಠ್ಯ ಯಾವುದೇ ಕಾರಣಕ್ಕೂ ಬೇಡ. ಯಜ್ಞ ಕುಂಡ ಯಾವ ಕಡೆ ಇರಬೇಕು ಎಂದು ಪಠ್ಯ ಬೋಧನೆ ಮಾಡುವುದು ಯಾರಿಗೆ ಬೇಕು? ನಾರಾಯಣ ಗುರು ಸಾಮಾಜಿಕ ಕ್ರಾಂತಿಯ ಹರಿಕಾರ. ಅವರ ಪಠ್ಯ ತೆಗೆಯುವುದು ತಪ್ಪು ಎಂದರು. ಹೆಡ್ಗೆವಾರ್ ಯಾರು ಎನ್ನುವುದೇ ನಮಗೆ ಗೊತ್ತಿಲ್ಲ. ಬಾಯಿಗೆ ಬಂದಂಗೆ ಯಾರು ಯಾರ್ಯಾರೋ ಪಾಠ ಸೇರಿಸಿದರೆ ಹೇಗೆ? ಹೆಡ್ಗೆವಾರ್ ಗೂ ಟಿಪ್ಪುಗೆ ಹೋಲಿಕೆ ಮಾಡುತ್ತೀರಾ ನೀವು? ಇದು ಸರಿನಾ? ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಡಿದ ವೀರ ಚರಿತೆ ಗೊತ್ತಿಲ್ವಾ? ಹೆಡ್ಗೆವಾರ್ ಏನೂ ಮಾಡಿದರು ಎಂಬುದು ಎಲ್ಲರಿಗೂ ಗೊತ್ತಿದೆ. ಬ್ರಿಟಿಷರ ಮುಂದೆ ಮಂಡಿಯೂರಿದ್ದು ಯಾರು ವಿಶ್ವನಾಥ್ ಎಂದು ಪ್ರಶ್ನಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಬಾಗಲಕೋಟ: ಜಿಲ್ಲೆಯ ಜಮಖಂಡಿ ನಗರದ ಬಸ್ ನಿಲ್ದಾಣ ಮಳೆಯ ಪರಿಣಾಮ ನದಿಯಂತಾದ ಘಟನೆ ನಡೆದಿದ್ದು, ರಸ್ತೆಯಲ್ಲೇ ನೀರು ಹರಿದು ವಾಹನ ಸವಾರರು, ಸಾರ್ವಜನಿಕರು ಪರದಾಡುವಂತಾಗಿದೆ. ದಿವಂಗತ ಶಾಸಕ ಸಿದ್ದು ನ್ಯಾಮಗೌಡ ಅವರ ಕಾಲದಲ್ಲಿ ನಿರ್ಮಾಣವಾದ ಜಮಖಂಡಿ ಬಸ್ ನಿಲ್ದಾಣದಲ್ಲಿ ಪ್ರತೀ ವರ್ಷ ನೀರು ರಸ್ತೆಯಲ್ಲೇ ಹರಿಯುವುದು ಮತ್ತು ರಸ್ತೆಯಲ್ಲಿ ನೀರು ನಿಂತು ಈಜುಕೊಳದಂತೆ ಮಾರ್ಪಡುವುದು ಸರ್ವೇ ಸಾಮಾನ್ಯ ಎಂಬಂತಾಗಿದೆ. ಸತತವಾಗಿ ಮಳೆ ಸುರಿದರೆ ಸಾಕು, ಈ ರಸ್ತೆ ನದಿಯಂತಾಗಿ ಬಿಡುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರವೇ ಇಲ್ಲವೇ ಎನ್ನುವ ಪ್ರಶ್ನೆಗಳು ಕೂಡ ಇದೀಗ ಕೇಳಿ ಬಂದಿದೆ. ಬಸ್ ನಿಲ್ದಾಣದೊಳಗೆ ಇಂತಹದ್ದೊಂದು ಸಮಸ್ಯೆ ಇದ್ದರೂ ಬಸ್ ನಿಲ್ದಾಣ ನಿರ್ವಹಣೆ ಮಾಡುವವರು ಈ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ. ಇದಕ್ಕೆ ಯಾರು ಜವಾಬ್ದಾರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ವರದಿ: ಬಂದೇನವಾಜ ನದಾಪ , ಜಮಖಂಡಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…