Subscribe to Updates
Get the latest creative news from FooBar about art, design and business.
- ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’
- ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ
- ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!
- ಕೊರಟಗೆರೆ: ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ
- ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
- ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ ಚಿರತೆ ಸೆರೆ
- ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
- ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Author: admin
ಕೊರಟಗೆರೆ: ತಾಲ್ಲೂಕಿನ ಮತ್ತೋರ್ವ ಭ್ರಷ್ಟ ಅಧಿಕಾರಿಕಾರಿ ಎಸಿಬಿ ಬಲೆಗೆ ಬಿದ್ದಿದ್ದು, ದಿನದಿಂದ ದಿನಕ್ಕೆ ಕೊರಟಗೆರೆ ಕ್ಷೇತ್ರದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಆಡಳಿತ ವೈಫಲ್ಯವೇ ಕಾರಣ ಎಂದು ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಜೆಟ್ಟಿ ಅಗ್ರಹಾರ ನಾಗರಾಜು, ಜಿಲ್ಲೆಯಾದ್ಯಂತ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಅರಕೆರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಧರ್ ಎಸಿಬಿ ಬಲೆಗೆ ಬಿದ್ದು ಕೆಲವೇ ದಿನಗಳಲ್ಲಿ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿ ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ PDO ಶ್ರೀರಂಗಯ್ಯ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾನೆ. ಸೋಮಶೇಖರ್ ಎಂಬುವ ವ್ಯಕ್ತಿ ತನ್ನ ಕುಟುಂಬದ ಹೆಸರಿನಲ್ಲಿ ಇದ್ದ ಖಾತೆ ಬದಲಾವಣೆ ಮಾಡಿ ಈ ಸ್ವತ್ತು ಮಾಡಿಸಿಕೊಳ್ಳಲು ಪಂಚಾಯಿತಿ ಭೇಟಿ ನೀಡಿ ಅಭಿವೃದ್ಧಿ ಅಧಿಕಾರಿ ಶ್ರೀರಂಗಯ್ಯ ಅವರನ್ನು ಸಂಪರ್ಕಿಸಿದಾಗ 6,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಇದಲ್ಲದೇ 3,500 ಮುಂಗಡವಾಗಿ ಪಡೆದು 2,500 ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಈ ವೇಳೆ …
ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಯಶಸ್ವಿಗಾಗಿ ಸಹಕರಿಸಿದ ತುಮಕೂರು ಜಿಲ್ಲಾಡಳಿತ ಮತ್ತು ತುರುವೇಕೆರೆ ತಾಲೂಕು ಆಡಳಿತ ಸೇರಿದಂತೆ, ಫಲಾನುಭವಿಗಳಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಶಾಸಕ ಮಸಾಲ ಜಯರಾಮ್ ರವರು ಪಟ್ಟಣದಲ್ಲಿ ತಾಲೂಕಿನ ಜನತೆಯ ಪರವಾಗಿ ಕೃತಜ್ಞತೆಗಳನ್ನು ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಹಳ ಅರ್ಥಪೂರ್ಣವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಧಿಕ ಮಳೆಯಾದರೂ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬಂದಿದೆ. 5,331ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಲಾಗಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಹಲವು ರೀತಿಯ ಸಮಸ್ಯೆಗಳ ಕುರಿತು 2,000 ಹೆಚ್ಚು ಅರ್ಜಿಗಳು ನೋಂದಣಿಯಾಗಿವೆ. ಅದರಲ್ಲಿ ವಿಶೇಷವೆಂದರೆ ಮಂಡ್ಯ, ಹಾಸನ ಜಿಲ್ಲೆ ಸೇರಿದಂತೆ ತುಮಕೂರು ಜಿಲ್ಲೆಯ ಹಲವಾರು ತಾಲೂಕುಗಳಿಗೂ ಸಂಬಂಧಪಟ್ಟಂತೆ 200ಕ್ಕೂಹೆಚ್ಚು ಅರ್ಜಿಗಳು ನೀಡಿದ್ದಾರೆ. ತುರ್ತಾಗಿ ಅರ್ಜಿಗಳ ಸಮಸ್ಯೆಯನ್ನು ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ರವರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗನ್ನು ನೀಡಿದರು. ಕಾರ್ಯಕ್ರಮದಲ್ಲಿ…
ಪಾವಗಡ: ರಾಜನಹಳ್ಳಿ ವಾಲ್ಮೀಕಿ ಶ್ರೀಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೀಸಲಾತಿಗಾಗಿ 130 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಅವರನ್ನು ಬೆಂಬಲಿಸಿ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂಗೆ ಮನವಿ ಮಾಡಿದ್ದು, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಸಂಘ-ಸಂಸ್ಥೆಗಳ ಮುಖಂಡರಾದ ಡಿ.ಜೆ .ಎಸ್. ನಾರಾಯಣಪ್ಪ, ಚಲವಾದಿ ಮುಖಂಡ ಕನುಮಪ್ಪ, ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಸಿ. ಕೆ. ತಿಪ್ಪೇಸ್ವಾಮಿ, ತಾಲೂಕು ಸಂಚಾಲಕ…
ಮಹಿಳೆಯೊಬ್ಬಳು ತನ್ನ ಮನೆಯಲ್ಲಿ ಸಾವನ್ನಪ್ಪಿದ ನಂತರ ಆಕೆ ಸಾಕಿದ್ದ 20 ಬೆಕ್ಕುಗಳು ಶವವನ್ನು ತಿಂದು ಹಾಕಿದ ಘಟನೆಯೊಂದು ರಷ್ಯಾದಲ್ಲಿ ನಡೆದಿದೆ. ಹಲವು ದಿನಗಳಿಂದ ನಾಪತ್ತೆಯಾಗಿದ್ದ ತನ್ನ ಸಹೋದ್ಯೋಗಿ ನಾಪತ್ತೆಯಾದ ಬಗ್ಗೆ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರವಾಣಿಯ ಮೂಲಕ ತಿಳಿಸಿದ್ದಾರೆ. ಆ ಬಳಿಕ ತನಿಖೆ ನಡೆಸಿದ ಪೊಲೀಸರು,ಮಹಿಳೆಯ ಮೃತದೇಹವನ್ನು ರಷ್ಯಾದ ನಗರವಾದ ಬಟಾಯ್ಸ್ಕ್‌ನಲ್ಲಿ ಕಂಡುಕೊಂಡಿದ್ದಾರೆ ಎಂದು ಸನ್ ವರದಿ ಮಾಡಿದೆ. ಆಕೆ ಕುಸಿದು ಬಿದ್ದು ಸಾವನ್ನಪ್ಪಿ, ಎರಡು ವಾರಗಳು ಕಳೆದಿವೆ ಎಂದು ನಂಬಲಾಗಿದೆ. ಮಹಿಳೆ ಬೆಕ್ಕನ್ನು ಮಾರಾಟ ಮಾಡುತ್ತಿದ್ದಳು. ಆಕೆ ತನ್ನದೇ ಆದ 20 ಬೆಕ್ಕುಗಳನ್ನು ಹೊಂದಿದ್ದಳು. ಆಕೆಯ ಸಾವಿನ ನಂತರ ಮಹಿಳೆಯ ಬೆಕ್ಕುಗಳನ್ನು ಆರೈಕೆ ಮಾಡಿದ ಪ್ರಾಣಿ ರಕ್ಷಣಾ ತಜ್ಞರು ಹೇಳಿದ ಪ್ರಕಾರ, ಬೆಕ್ಕುಗಳು ಎರಡು ವಾರಗಳ ಕಾಲ ಒಂಟಿಯಾಗಿದ್ದವು. ತಿನ್ನಲು ಏನೂ ಆಹಾರವಿಲ್ಲ. ಈ ವೇಳೆ ಹಸಿವು ತಡೆಯದೇ ಈ ರೀತಿಯ ಮಾಡಿವೆ ಎಂದಿದ್ದಾರೆ. ಕೆಲವು ಆರೋಗ್ಯಕರ ಬೆಕ್ಕುಗಳನ್ನು ಈಗ ಬೇರೆಯವರಿಗೆ ದತ್ತು ನೀಡಲಾಗಿದೆ. ಮೈನೆ ಕೂನ್ ತಳಿಯ ಬೆಕ್ಕುಗಳು ಅಮೆರಿಕದ…
ಸೇನಾ ನೇಮಕಾತಿಗೆ ಕೇಂದ್ರ ರೂಪಿಸಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಕರೆನೀಡಿದ್ದ ಬೆಳಗಾವಿ ಬಂದ್ ಸಂಪೂರ್ಣ ವಿಫಲವಾಗಿದೆ. ಯಾವುದೇ ಸಂಘಟನೆ ಬೆಳಗಾವಿ ಬಂದ್‌ಗೆ ಕರೆ ನೀಡಿರುವುದು ದೃಢಪಟ್ಟಿಲ್ಲ. ಆದರೂ ಇಂದು ಬಂದ್ ಆಚರಿಸಲಾಗುವುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿದಾಡಿದ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಿ ಬಿಗಿಕ್ರಮಗಳನ್ನು ಕೈಗೊಂಡಿದ್ದರು. ಬೆಳಗಾವಿಯಲ್ಲಿ ಜನಜೀವನ ಎಂದಿನಂತಿತ್ತು. ಶಾಲಾ – ಕಾಲೇಜುಗಳು, ಬ್ಯಾಂಕ್‌ಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಸಂಚಾರಿ ವ್ಯವಸ್ಥೆ ಸುಗಮವಾಗಿತ್ತು. ವ್ಯಾಪಾರ, ವಹಿವಾಟು ಮಾಮೂಲಿನಂತಿತ್ತು. ಆದರೆ ಕೆಲವ್ಯಾಪಾರಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿಗಳನ್ನು ಮುಚ್ಚಿದ್ದು ಕಂಡುಬಂತು. ಬೆಳಗಾವಿ ಬಂದ್ ಹಿನ್ನೆಲೆಯಲ್ಲಿ ಕ್ಷಿಪ್ರಕಾರ್ಯ ಪಡೆ, ನಗರ ಪೊಲೀಸರು ಪ್ರಮುಖ ವೃತ್ತಗಳಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಿದ್ದರು. ಬೆಳಗಾವಿಯಲ್ಲೆ ಬಂದ್ ಅಥವಾ ಪ್ರತಿಭಟನೆ ಮಾಡುವ ಬಗ್ಗೆ ಯಾರೂ ಅನುಮತಿ ಪಡೆದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ಹರಿದಾಡುತ್ತಿದೆ. ಅಗತ್ಯ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕೆಎಸ್ ಆರ್ ಪಿ ಹಾಗೂ ಕ್ಷಿಪ್ರಕಾರ್ಯ ಪಡೆಯ ಪಹರೆ ನಡೆದಿದೆ. ಬಸ್ ನಿಲ್ದಾಣ, ರೈಲು…
ಮಂಗಳೂರು ವಿಶ್ವವಿದ್ಯಾಲಯ ಅಧೀನದ ಹಂಪನಕಟ್ಟೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಇನ್ನೂ ತಣ್ಣಗಾಗಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿನಿಯರು ವರ್ಗಾವಣೆ ಪತ್ರ (ಟಿಸಿ) ಪಡೆಯಲು ಮುಂದಾಗಿರುವುದು ಬೆಳಕಿಗೆ ಬಂದಿದೆ. ಮಂಗಳೂರು ವಿ ವಿ ಕಾಲೇಜಿನಲ್ಲಿ ಇತ್ತೀಚೆಗೆ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿ ನಿಯಮಾವಳಿಗಳನ್ನು ಮಾಡಲಾಗಿತ್ತು. ಆ ಬಳಿಕ ಮಂಗಳೂರು ವಿ ವಿ ಕಾಲೇಜಿನಲ್ಲಿ ಹಿಜಾಬ್ ವಿಚಾರದಲ್ಲಿ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆದಿದ್ದವು. ಮಂಗಳೂರು ವಿ ವಿ ಕಾಲೇಜಿನಲ್ಲಿ ೪೪ ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಇವರಲ್ಲಿ ೧೫ ಮಂದಿ ಹಿಜಾಬ್ ತೆಗೆದು ಕಾಲೇಜಿಗೆ ಬರಲು ನಿರಾಕರಿಸಿದ್ದರು.ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ತೆರಳುವುದಿದ್ದರೆ ಅವರಿಗೆ ಟಿಸಿ ನೀಡಲು ವ್ಯವಸ್ಥೆ ಮಾಡಲಾಗುವುದೆಂದು ಮಂಗಳೂರು ವಿವಿ ಕುಲಪತಿ ಸುಬ್ರಹ್ಮಣ್ಯ ಯಡಪಡಿತ್ತಾಯ ತಿಳಿಸಿದ್ದರು. ಮಂಗಳೂರು ವಿವಿಯ ಹಂಪನಕಟ್ಟೆ ಕಾಲೇಜಿನ ಐದು ವಿದ್ಯಾರ್ಥಿನಿಯರು ಟಿಸಿ ಪಡೆದು ಬೇರೆ ಕಾಲೇಜಿಗೆ ಹೋಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಟಿಸಿ ಪಡೆಯಲು ಅಧಿಕೃತವಾಗಿ ಯಾರೂ ಅರ್ಜಿ ಸಲ್ಲಿಕೆ ಮಾಡಿಲ್ಲ: ಈ ಬಗ್ಗೆ…
ಆಸ್ಕರ್ ಪ್ರಶಸ್ತಿ ವಿಜೇತ ಕೆನಡಾದ ನಿರ್ದೇಶಕ ಪಾಲ್ ಹ್ಯಾಗಿಸ್ ಅವರು ದಕ್ಷಿಣ ಇಟಲಿಯಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ. ಕೆನಡಾ ಮೂಲದ ಹ್ಯಾಗಿಸ್(೬೯) ಅವರು ಓಸ್ಟುನಿಯಲ್ಲಿ ಮಂಗಳವಾರ ಪ್ರಾರಂಭವಾಗುವ ಚಲನಚಿತ್ರ್ಯೋತ್ಸವಕ್ಕಾಗಿ ಇಟಲಿಯಲ್ಲಿದ್ದಾರೆ. ಈ ವೇಳೆ ಯುವ ವಿದೇಶಿ ಮಹಿಳೆಯೊಬ್ಬಳು ಎರಡು ದಿನಗಳಿಂದ ನನಗೆ ಹ್ಯಾಗಿಸ್ ಅವರು ಲೈಂಗಿಕ ಕಿರುಕುಳ ಕೊಡುತ್ತಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಆದರೆ ಹ್ಯಾಗಿಸ್ ಅವರ ಮೇಲೆ ದೂರು ಕೊಟ್ಟ ಮಹಿಳೆ ತನ್ನ ರಾಷ್ಟ್ರೀಯತೆ ಮತ್ತು ವಯಸ್ಸನ್ನು ಉಲ್ಲೇಖಿಸಿಲ್ಲ. ಮಹಿಳೆ ದೂರಿನ ಆಧಾರದ ಮೇಲೆ ಇಟಲಿ ಪೊಲೀಸರು ಹ್ಯಾಗಿಸ್ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಹ್ಯಾಗಿಸ್ ಹಿರಿಯ ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ. ಅವರು ೨೦೦೬ ರಲ್ಲಿ ‘ಕ್ರ್ಯಾಶ್’ ಸಿನಿಮಾಗಾಗಿ ಅತ್ಯುತ್ತಮ ಪ್ರಶಸ್ತಿಯಾದ ಆಸ್ಕರ್ ಪ್ರಶಸ್ತಿಯನ್ನು ಗೆದ್ದರು. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಕೇಂದ್ರ ಸರ್ಕಾರ ಜಾರಿ ಮಾಡಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಹಿಂಸಾಚಾರ ಭುಗಿಲೆದಿದ್ದು ಅಗ್ನಿಕುಂಡವಾಗಿರುವ ನಡುವೆ ಬಿಹಾರದಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆಗೆ ೧೭ ಮಂದಿ ಸಾವನ್ನಪ್ಪಿದ್ದಾರೆ. “ಗುಡುಗು ಮತ್ತು ಸಿಡಿಲು ಸಹಿತ ಮಳೆಯಿಂದಾಗಿ ಭಾಗಲ್ಪುರದಲ್ಲಿ ೬, ವೈಶಾಲಿಯಲ್ಲಿ ೩, ಖಗಾರಿಯಾದಲ್ಲಿ ೨, ಕತಿಹಾರ್‌ನಲ್ಲಿ ೧, ಸಹರ್ಸಾದಲ್ಲಿ ೧, ಮಾಧೇಪುರದಲ್ಲಿ ೧, ಬಂಕಾದಲ್ಲಿ ೨ ಮತ್ತು ಮುಂಗಾರಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇದರ ಜೊತೆಗೆ ರಾಜ್ಯದ ಹಲವು ಭಾಗಗಳಲ್ಲಿ ಜಾನುವಾರುಗಳೂ ಕೂಡ ಮೃತಪಟ್ಟಿದ್ದು, ಗುಡುಗು,ಸಿಡಿಲು ಮತ್ತು ಮಳೆಯಿಂದ ಆಗಿರುವ ಹಾನಿಯನ್ನು ಅಂದಾಜು ಮಾಡುವಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಉತ್ತರ, ಮಧ್ಯ ಮತ್ತು ಪೂರ್ವ ಭಾಗದಲ್ಲಿ ಬಿಹಾರ ದೇಶಾದ್ಯಂತ ಭಾರೀ ಮಳೆಯೊಂದಿಗೆ ಗುಡುಗು ಸಹಿತ ಚಂಡಮಾರುತದ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಗುಜರಾತ್ ಪ್ರದೇಶ, ಮಧ್ಯಪ್ರದೇಶ, ವಿದರ್ಭದ ಹಲವು ಭಾಗಗಳು, ಛತ್ತೀಸ್‌ಗಢದ ಕೆಲವು…
ಸಾಕಷ್ಟು ಜನರು ಬಾಳೆ ಹಣ್ಣನ್ನು ಸೇವನೆ ಮಾಡುತ್ತಾರೆ. ಆದರೆ ಅವರಿಗೆ ಬಾಳೆ ಹಣ್ಣಿನ ಪ್ರಯೋಜನಗಳೇನು ಅನ್ನೋದೇ ತಿಳಿದಿರಲ್ಲ. ಬಾಳೆಹಣ್ಣು ಪೌಷ್ಟಿಕಾಂಶಗಳ ಕಣಜವಾಗಿದ್ದು, ಇದರಿಂದ ನಮ್ಮ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಬಾಳೆಹಣ್ಣಿನಲ್ಲಿರುವ ಪೌಷ್ಟಿಕಾಂಶಗಳು ಮತ್ತು ವಿಟಮಿನ್ ಗಳು ದೇಹದ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಿಶ್ಯಕ್ತಿಯಿಂದ ಬಳಲುತ್ತಿದ್ದವರು ಇದನ್ನು ಸೇವಿಸಿದರೆ ಉತ್ತಮ. ನಿಯಮಿತವಾಗಿ ಬಾಳೆಹಣ್ಣಿನ ಸೇವನೆಯಿಂದ ಹೃದಯಾಘಾತವನ್ನು ತಡೆಯಬಹುದು ಎಂದು ಸಂಶೋಧನೆ ತಿಳಿಸಿದೆ. ಇದರಲ್ಲಿರುವ ಪೊಟ್ಯಾಸಿಯಂ ಹೃದಯಬಡಿತ ಸರಿಯಾಗಿರುವಂತೆ ನೋಡಿಕೊಳ್ಳುತ್ತದೆ. ಅಜೀರ್ಣದ ಸಮಸ್ಯೆಯಿಂದ ಮುಕ್ತಿ ನೀಡಿ ಸರಾಗವಾಗಿ ಶೌಚ ಕ್ರಿಯೆ ಮುಗಿಸುವಂತೆ ನೋಡಿಕೊಳ್ಳುತ್ತದೆ. ಕೆಲಸದ ಒತ್ತಡದ ಕಾರಣಕ್ಕೆ ತಲೆನೋವು ಬಂದರೆ ಅದನ್ನು ನಿವಾರಿಸುವ ಗುಣ ಬಾಳೆಹಣ್ಣಿಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಬೆಂಗಳೂರು: ಜೂನ್ 21ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯೋಗ ದಿನಾಚರಣೆಯನ್ನು ಶಾಲೆಗಳಲ್ಲೂ ಆಚರಿಸಲು ಸೂಚಿಸಿದ್ದು, ಹೀಗಾಗಿ ಮಂಗಳವಾರ ಅರ್ಧ ದಿನ ರಾಜ್ಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಿಸುವಂತೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ. ದಿನಾಂಕ 21.06.22ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲೂ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರುಗಳು, ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಯೋಗ ದಿನಾಚರಣೆ ನಡೆಸಲು ಸೂಚಿಸಲಾಗಿದೆ. ಜೂನ್ 21ಕ್ಕೆ ಅರ್ಧದಿನ ಶಾಲೆಗಳಿಗೆ ರಜೆಯನ್ನು ಘೋಷಿಸಿರುವುದರಿಂದ ಆ ದಿನದ ಬದಲು ಜೂನ್ 25ರಂದು ಶನಿವಾರ ಪೂರ್ಣಪ್ರಮಾಣದ ಶಾಲೆಯನ್ನು ನಡೆಸಲು ಶಿಕ್ಷಣ ಇಲಾಖೆ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz