Author: admin

ತುಮಕೂರು: ನಗರದ ಮಹಾಲಕ್ಷ್ಮಿ ಬಡಾವಣೆ ವಾಸಿ ಶಿವಣ್ಣ ಟೈರ್ಸ್ ಮಾಲಿಕರಾದ ಕಾರ್ತಿಕ್ ರವರ ಕಟ್ಟಡ ಕಾರ್ಮಿಕರ ಶೆಡ್ ನಲ್ಲಿ ಕಾಣಿಸಿಕೊಂಡ 43 ಕೊಳಕುಮಂಡಲ (ರಸೆಲ್ಸ್ ವೈಪರ್) ಮರಿಗಳು ಹಾಗೂ 4 ಅಡಿ ಉದ್ದದ ತಾಯಿ ಕೊಳಕುಮಂಡಲ ಹಾವು ಕಾಣಿಸಿಕೊಂಡಿದೆ. ಈ ಹಾವುಗಳು ನವೆಂಬರ್ ಡಿಸೆಂಬರ್ ನಲ್ಲಿ ಮಿಲನಗೊಂಡು ಪೂರ್ವ ಮುಂಗಾರು ಸಮಯದಲ್ಲಿ ಸಂತಾನೋತ್ಪತಿ ಮಾಡುತ್ತವೆ. ಕೊಳಕುಮಂಡಲ ಹಾವುಗಳು (Ovoviviparous) ಅಂದರೆ ತಾಯಿಯ ದೇಹದೊಳಗೆ ಮೊಟ್ಟೆಗಳು ಬೆಳೆದು ಹೊಟ್ಟೆ ಒಳಗಿನಿಂದಲೆ ಜೀವಂತ ಮರಿಗಳು ಹೊರಬಂದಿವೆ. ಈ ವಿಷಯ ತಿಳಿದ ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯ (ವಾರ್ಕೊ) ಉರಗ ರಕ್ಷಕರಾದ ಚಂದನ್, ಮನು ಅಗ್ನಿವಂಶಿ ಮತ್ತು ಕಾರ್ತಿಕ್ ಸಿಂಗ್ ರವರು ಸುರಕ್ಷಿತವಾಗಿ ಹಾವಿನ ಮರಿಗಳನ್ನು ರಕ್ಷಸಿ ಸಮೀಪದ ದೇವರಾಯನ ದುರ್ಗಾ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ತುಮಕೂರು ನಗರ ಹಾಗೂ ಹೊರವಲಯಗಳಲ್ಲಿ ಈ ಪ್ರಕ್ರಿಯೆ ಪ್ರಸ್ತುತ ಪ್ರಾರಂಭವಾಗಿದ್ದು ಸಾರ್ವಜನಿಕರು ಹೆಚ್ಚು ಜಾಗೃತವಾಗಿರಬೇಕು, ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಸಂಜೆ ಕತ್ತಲು ಸಮಯದಲ್ಲಿ ಟಾರ್ಚ್…

Read More

ತುಮಕೂರು: ಜಿಲ್ಲೆಯ ವಿವಿಧ ಪ್ರದೇಶಗಳ ತೆಂಗಿನ ತೋಟಗಳಲ್ಲಿ ರೋಗೋಸ್ ಬಿಳಿ ನೊಣ ಬಾಧೆಯು ಹೆಚ್ಚಾಗಿ ಕಂಡು ಬರುತ್ತಿದ್ದು, ರೋಗವನ್ನು ಸಮಗ್ರವಾಗಿ ಹತೋಟಿ ಮಾಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ತೋಟಗಾರಿಕೆ ಇಲಾಖೆ ಸಲಹೆ ನೀಡಿದೆ. ರೋಗದಿಂದ ಹಾನಿಯ ಲಕ್ಷಣಗಳು : ಬಿಳಿನೊಣದ ಪ್ರೌಢಕೀಟವು ಇತರೆ ಸಾಮಾನ್ಯ ಬಿಳಿನೊಣ ಗಳಿಗಿಂತ ಮೂರುಪಟ್ಟು ದೊಡ್ಡದಾಗಿರುತ್ತದೆ. ಹೆಣ್ಣು ಬಿಳಿನೊಣವು ಎಲೆಯ ಕೆಳಭಾಗದಲ್ಲಿ ವೃತ್ತಾಕಾರವಾಗಿ ಮೊಟ್ಟೆಯನ್ನು ಇಡುತ್ತದೆ. ಕೀಟವು ಹಳದಿ ಮೈಬಣ್ಣ ಹೊಂದಿದ್ದು, ಬಿಳಿಬಣ್ಣದ ರೆಕ್ಕೆಗಳ ಹಿಂಬದಿಯಲ್ಲಿ ಕಪ್ಪಾದ ಮಚ್ಚೆಗಳಿರುತ್ತದೆ. ಮರಿಗಳು ಹಾಗೂ ಪ್ರೌಢಕೀಟಗಳು ಎಲೆಗಳಿಂದ ರಸ ಹೀರುತ್ತವೆ. ಕೀಟಗಳು ಸಿಹಿಯಾದ ಅಂಟು ದ್ರಾವಣವನ್ನು ವಿಸರ್ಜನೆ ಮಾಡುವುದರಿಂದ ಬೂದುಬಣ್ಣದ ಶಿಲೀಂದ್ರ ಬೆಳೆದು ಎಲೆಗಳು ಕಪ್ಪುಬಣ್ಣಕ್ಕೆ ತಿರುಗುತ್ತವೆ. ಹತೋಟಿ ಕ್ರಮಗಳು : ತೆಂಗಿನ ತೋಟಗಳಲ್ಲಿ ಎಕರೆಗೆ 10ರಂತೆ ಹಳದಿ ಅಂಟಿನ ಬಲೆಗಳನ್ನು ಅಳವಡಿಸುವುದರಿಂದ ಅಥವಾ 5 ಮಿಲಿ ಬೇವಿನಎಣ್ಣೆ ಮತ್ತು 0.5 ಗ್ರಾಂ ಸಾಬೂನು ಪುಡಿಯನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ 15 ದಿನಗಳ ಅಂತರದಲ್ಲಿ ಮೂರು ಬಾರಿ ಸಿಂಪಡಣೆ…

Read More

ತುಮಕೂರು : ಮಧುಗಿರಿ ಪಟ್ಟಣದಲ್ಲಿ ದಿನಾಂಕ: 12-03-2021 ರಂದು ಬೆಳಗ್ಗೆ ಸುಮಾರು 09:15 ಗಂಟೆ ಸಮಯದಲ್ಲಿ ಕೂಲ್ ಹೇರ್ ಸ್ಟೈಲ್ ಕಟಿಂಗ್ ಶಾಪ್ ಎದುರು ಇದೇ ಮಧುಗಿರಿಯ ಗುರುಕಿರಣ್ ಬಿನ್ ಗಂಗಾಧರಪ್ಪ, ಮಧುಗೌಡ ಬಿನ್ ರಂಗಪ್ಪ, ಎಂ.ವಿ. ಧನಂಜಯಾ ಬಿನ್ ವೀರಣ್ಣ ಇವರುಗಳು ಕೂಲ್ ಹೇರ್ ಸ್ಟೈಲ್ ಅಂಗಡಿಯ ಮುಂಭಾಗದ ಸಿಮೆಂಟ್ ಕಟ್ಟೆಯ ಮೇಲೆ ಕುಳಿತಿದ್ದ ಮೃತ ಆರ್. ವೀರಭದ್ರ ಸ್ವಾಮಿಯನ್ನು ಕೊಲೆ ಮಾಡುವ ಉದ್ದೇಶದಿಂದ ಕೆಳಕ್ಕೆ ಎಳೆದುಕೊಂಡು ಆರೋಪಿ–1 ಗುರುಕಿರಣ್ ಡ್ರಾಗರ್ ನಿಂದ, 2ನೇ ಆರೋಪಿ ಮಧುಗೌಡ ಬಟನ್ ಚಾಕುವಿನಿಂದ, 3ನೇ ಆರೋಪಿ ಸ್ಟೀಲ್ ರಾಡಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅದೇ ದಿನ ಆರ್.ವಿ ಸ್ವಾಮಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸದರಿ 3 ಜನ ಆರೋಪಿತರಿಗೆ ಹಾಗೂ ಕೊಲೆಗೆ ಕುಮ್ಮಕ್ಕು ನೀಡಿದ ಚಂದನ್ ಕುಮಾರ್ ಬಿನ್ ರಾಮಪ್ಪ ಇವರುಗಳು ಸಂಚು ರೂಪಿಸಿ ಕೊಲೆ ಮಾಡಿದ್ದು ತನಿಖೆಯಿಂದ ದೃಢಪಟ್ಟ ಮೇರೆಗೆ ಅಂದಿನ ತನಿಖಾಧಿಕಾರಿಯಾದ ಎಂ.ಎಸ್ ಸರ್ದಾರ್ ರವರು…

Read More

ಪಾವಗಡ: ಪಾವಗಡ ತಾಲ್ಲೂಕಿನ ಮುಗದಾಳಬೆಟ್ಟದ ಗೊಲ್ಲರಹಟ್ಟಿಗೆ ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ, ಹಟ್ಟಿಯ ನಿವಾಸಿಗಳ ಸಮಸ್ಯೆಗಳನ್ನು ಪರಿಶೀಲಿಸಿದರು. ಈ ವೇಳೆ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ, ಸ್ಥಳದಲ್ಲೇ ಹಾಜರಿದ್ದ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದರು. ಹೆಣ್ಮಕ್ಕಳು ಸೀರೆಯನ್ನು ಪರದೆಯಾಗಿ ಕಟ್ಟಿಕೊಂಡು ಸ್ನಾನ ಮಾಡುತ್ತಿರುವ ಸ್ಥಿತಿಯು ನಾಗರಿಕ ಸಮಾಜಕ್ಕೆ ತಲೆತಗ್ಗಿಸುವ ಸಂಗತಿಯೆಂದು ಅಭಿಪ್ರಾಯಪಟ್ಟ ಅವರು, ವಿಷಯ ನ್ಯಾಯಾಲಯದಲ್ಲಿದ್ದರೂ, ಜೂನ್ 16ರ ಬಳಿಕ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದರು. ಈವರೆಗೆ ತಾತ್ಕಾಲಿಕ ಪರಿಹಾರವಾಗಿ ಮೊಬೈಲ್ ಶೌಚಾಲಯಗಳನ್ನು ಹಟ್ಟಿಯಲ್ಲಿ ಸ್ಥಾಪಿಸಲು ಇ.ಒ. ಜಾನಕಿರಾಂ ಅವರಿಗೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ, ನಿವೇಶನ ಹಕ್ಕುಪತ್ರಗಳನ್ನು ನೀಡುವ ಬಗ್ಗೆ ತಹಶೀಲ್ದಾರ್ ವರದರಾಜುಗೆ ಸೂಚಿಸಿದ ಡಾ. ನಾಗಲಕ್ಷ್ಮಿ, ಹಟ್ಟಿಯಲ್ಲಿನ ಕರಡಿಗಳ ಹಾವಳಿಯನ್ನು ಗಮನಿಸಿ, ಮಧ್ಯಭಾಗದಲ್ಲಿ ಡೂಮ್ ಲೈಟ್ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು. ವಿಶೇಷ ಅತಿಥಿಯಾಗಿ ಬಂದ ಅಧ್ಯಕ್ಷೆ ಯನ್ನು ಹಟ್ಟಿಯ ಮಹಿಳೆಯರು…

Read More

ತುಮಕೂರು: ಬೆವಿಕಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ಅಟಲ್ ಭೂಜಲ್ ಯೋಜನೆಯಡಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೊಂಡಿರುವುದರಿಂದ ಮೇ 4 ರಿಂದ 31ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹನುಮಂತಪುರ, ಕುವೆಂಪು ನಗರ, ಆದರ್ಶನಗರ, ಅಣ್ಣೇತೋಟ, ಜಗನ್ನಾಥಪುರ, ಶಾರದಾ ದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್, ಅಗ್ನಿಬನ್ನಿರಾಯ ನಗರ, ಭಾಗ್ಯ ನಗರದಲ್ಲಿ ಮೇ 4, 6, 8, 10, 12, 14, 16, 18, 20, 22, 24, 26, 29, 31ರಂದು ಹಾಗೂ ಗೋವಿಂದನಗರ, ಹೌಸಿಂಗ್ ಬೋಡ್, ಗುಬ್ಬಿಗೇಟ್, ಕುಂಟಮ್ಮನತೋಟ, ದಿಬ್ಬೂರು, ಬಿ.ಹೆಚ್.ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ, ಪಿ.ಎನ್.ಆರ್. ಪಾಳ್ಯ, ಕುಪ್ಪೂರು, ಹೊಸಹಳ್ಳಿಯಲ್ಲಿ ಮೇ 5, 7, 9, 11, 13, 15, 17, 19, 21, 23, 25, 28, 30ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ.…

Read More

ತುಮಕೂರು: ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ಮೇ 4ರಂದು ನೀಟ್ (NEET(UG) ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ಮೇ 4ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ ಆಪ್, ಇತರೆ ಸಾಮಾಜಿಕ ಜಾಲತಾಣಗಳ ಮೂಲಕ…

Read More

ತುಮಕೂರು: ತುಮಕೂರು ಗ್ರಾಮಾಂತರ ವ್ಯಾಪ್ತಿಯಲ್ಲಿರುವ ಪಡಿತರ ಚೀಟಿದಾರರು ಕೂಡಲೇ ಕಡ್ಡಾಯವಾಗಿ ಇ–ಕೆವೈಸಿ ಮಾಡಿಸಬೇಕೆಂದು ತಹಶೀಲ್ದಾರ್ ರಾಜೇಶ್ವರಿ ಮನವಿ ಮಾಡಿದ್ದಾರೆ. ತಾಲ್ಲೂಕಿನಲ್ಲಿ ಪಡಿತರ ಚೀಟಿದಾರರು ತಮ್ಮ ಕುಟುಂಬದಲ್ಲಿ ಇ–ಕೆವೈಸಿ ಆಗದೇ ಇರುವ ಸದಸ್ಯರುಗಳನ್ನು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ–ಕೆವೈಸಿ ಮೂಲಕ ಅಪ್‌ ಡೇಟ್ ಮಾಡಿಸಬೇಕು. ಪ್ರತಿ ಸದಸ್ಯರ ಚಾಲ್ತಿಯಲ್ಲಿರುವ ಮೊಬೈಲ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನ್ಯಾಯಬೆಲೆ ಅಂಗಡಿಯವರಿಗೆ ಮಾಹಿತಿ ನೀಡಬೇಕು. E–KYC ಅಪ್‌ ಡೇಟ್ ಮಾಡಿಸದೇ ಇದ್ದಲ್ಲಿ ಅಂತಹ ಫಲಾನುಭವಿಗಳ ಹೆಸರನ್ನು ಪಡಿತರ ಚೀಟಿಯಿಂದ ಕೈಬಿಡಲಾಗುವುದು. ಈಗಾಗಲೇ ತುಮಕೂರು ತಾಲ್ಲೂಕಿನಲ್ಲಿ ಒಟ್ಟು 2,49,934 ಪಡಿತರ ಚೀಟಿಯ ಸದಸ್ಯರುಗಳಿದ್ದು, ಈವರೆವಿಗೆ 244695 ಸದಸ್ಯರುಗಳ ಇ–ಕೆವೈಸಿ ಪೂರ್ಣಗೊಂಡಿರುತ್ತದೆ. ಉಳಿದ 5239 ಸದಸ್ಯರುಗಳ ಇ–ಕೆವೈಸಿ ಬಾಕಿ ಉಳಿದಿರುವುದರಿಂದ ಎಲ್ಲರೂ ನಿಗದಿತ ಅವಧಿಯೊಳಗೆ ಇ–ಕೆವೈಸಿ ಅಪ್‌ ಡೇಟ್ ಮಾಡಿಸತಕ್ಕದ್ದು. ನಿಧನ ಹೊಂದಿರುವ ಕುಟುಂಬದ ಸದಸ್ಯರುಗಳ ಮರಣ ಪ್ರಮಾಣ ಪತ್ರವನ್ನು ಹಾಜರುಪಡಿಸಿ ನ್ಯಾಯಬೆಲೆ ಅಂಗಡಿಯಲ್ಲಿ ಹೆಸರನ್ನು ತೆಗೆಸಬೇಕು. ಕುಟುಂಬದಲ್ಲಿ ಯಾವುದಾದರೂ ಸದಸ್ಯರು ಆಧಾರ್ ಕಾರ್ಡ್ ಸಂಖ್ಯೆ ಪಡಿತರ ಚೀಟಿಗೆ…

Read More

ತುಮಕೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾ ನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಮೇ 4ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ‘ಶ್ರೀ ಭಗೀರಥ ಜಯಂತಿ’ ಕಾರ್ಯಕ್ರಮವನ್ನು ಆಚರಿಸಲಾಗುವುದು. ಶ್ರೀ ಭಗೀರಥ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುವುದು. ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿ, ವಿವಿಧ ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಸಮ್ಮೀರ್, ಕಲಂದರ ಶಾಫಿ, ಆದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್, ರಂಜಿತ್ ಬಂಧಿತ ಆರೋಪಿಗಳಾಗಿದ್ದಾರೆ. ಕಳೆದ ಮೇ 1 ರಂದು ರಾತ್ರಿ 8:30ರ ಸುಮಾರಿಗೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ನಡು ರಸ್ತೆಯಲ್ಲೇ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ನಡೆಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಹಿನ್ನೆಲೆ ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಕಾನೂನು ಸುವ್ಯವಸ್ಥೆ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಅವರು ಸಭೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೂಡ ಭಾಗಿಯಾಗಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————

Read More