Author: admin

ಬೀದರ್: ಹೈದರಾಬಾದ್‌ ನಿಂದ ಮಹಾರಾಷ್ಟ್ರದ ಕಡೆಗೆ ಟಾಟಾ ಗೂಡ್ಸ್ ವಾಹನವೊಂದರಲ್ಲಿ 6 ಕೋಟಿ 50ಲಕ್ಷ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿರುವಾಗ ದಾಳಿ ನಡೆಸಿದ ಪೊಲೀಸರು, ಗಾಂಜಾ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೀದರ್‌ ರಾಷ್ಟ್ರೀಯ ಹೆದ್ದಾರಿ–65ರ ರಾಜೇಶ್ವರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಗಾಂಜಾ ಸಾಗಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹುಮನಾಬಾದ ಉಪ ವಿಭಾಗದ ಸಿಪಿಐ ಮಾಡೋಳಪ್ಪ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದೆ. ಟಾಟಾ ಗೂಡ್ಸ್ ವಾಹನದಲ್ಲಿ ಗಾಂಜಾ ಇದ್ದ ಮೂಟೆಗಳನ್ನಿಟ್ಟು ಅದರ ಮೇಲೆ ಮೊಟ್ಟೆಗಳನ್ನು ಇಡಲಾಗಿತ್ತು. ದಾಳಿ ವೇಳೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಟಾಟಾ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಸುಮಾರು 6 ಕೋಟಿ 50 ಲಕ್ಷ ರೂ. ಮೌಲ್ಯದ 650 ಕೆ.ಜಿ. ತೂಕದ ಗಾಂಜಾ ದೊರಕಿದೆ. ಚಾಲಕನನ್ನು ವಿಚಾರಿಸಿದಾಗ ಹೈದರಾಬಾದ್‌ನಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಎಸ್‌ ಪಿ…

Read More

ಬೆಂಗಳೂರು: ಕನ್ನಡದ ಹಿರಿಯ ನಟ ಎಂ.ಎಸ್.ಉಮೇಶ್ ತಮ್ಮ 80ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಕಿದ್ವಾಯಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದಲೂ ಅವರು ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಬೆಳಿಗ್ಗೆ 8:30ರ ಸುಮಾರಿಗೆ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಏಪ್ರಿಲ್ 22, 1945ರಲ್ಲಿ ಮೈಸೂರಿನಲ್ಲಿ ಜನಿಸಿದ್ದ ಉಮೇಶ್ ಅವರು ರಂಗಭೂಮಿ ಮತ್ತು ಚಲನಚಿತ್ರ ಕಲಾವಿದರಾಗಿ 1948ರಿಂದಲೂ ಸಕ್ರಿಯರಾಗಿದ್ದರು. 1960ರಲ್ಲಿ ಬಿ.ಆರ್‌ ಪಂಥುಲು ನಿರ್ದೇಶನದ ಮಕ್ಕಳ ರಾಜ್ಯ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು ಭಾಗ್ಯವಂತರು, ಕಿಲಾಡಿ ಜೋಡಿ, ಕಾಮನಬಿಲ್ಲು, ಗುರು ಶಿಷ್ಯರು, ಭೂಮಿಗೆ ಬಂದ ಭಗವಂತ, ಹಾಲು ಜೇನು, ಶೃತಿ ಸೇರಿದಾಗ, ನನ್ನಾಸೆಯ ಹೂವೆ, ಜಾಕಿ, ಮುಸ್ಸಂಜೆ ಮಾತು, ಡೇರ್ ಡೆವಿಲ್ ಮುಸ್ತಫಾ, ಹಗಲುವೇಷ ಸೇರಿದಂತೆ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇನ್ನೂ, ಗೋಲ್ಮಾಲ್ ರಾಧಾಕೃಷ್ಣ ಚಿತ್ರದಲ್ಲಿ ಉಮೇಶ್ ಅವರು ಮಾಡಿರುವ ಪಾತ್ರ ದೊಡ್ಡ ಹಿಟ್ ಆಗಿತ್ತು. ಆ ಚಿತ್ರದಲ್ಲಿ “ಅಯ್ಯೋ ನನ್ನ ಅಪಾರ್ಥ ಮಾಡ್ಕೊಂಡ್ಬಿಟ್ರಲ್ಲ” ಎನ್ನುವ ಡೈಲಾಗ್ ಇಂದಿಗೂ ಸಿನಿಮಾ ಪ್ರಿಯರು ಮರೆತಿಲ್ಲ. ರಂಗಭೂಮಿ ಮತ್ತು ಚಿತ್ರರಂಗಗಳೆರಡರಲ್ಲೂ…

Read More

ತುಮಕೂರು: ಶ್ರೀ ಕ್ಷೇತ್ರ ಮಿಂಚುಕಲ್ಲು ಬೆಟ್ಟ, ವೈಕುಂಠಗಿರಿ ಬೆಳಧರ ಅಂಚೆ, ತುಮಕೂರು ತಾಲ್ಲೂಕು, ತುಮಕೂರು ಜಿಲ್ಲೆ, ವೈಕುಂಠಗಿರಿಯಲ್ಲಿ ಶತ–ಶತಮಾನಗಳಿಂದ ನೆಲೆಸಿರುವ ಶ್ರೀ ಸ್ವಾಮಿಗಳು ಡಿ.3 ನೇ ಬುಧವಾರ ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸ ರ ದಕ್ಷಿಣಾಯನ ಹಿಮಂತ ಋತು ಮಾರ್ಗಶಿರ ಮಾಸ ಶುಕ್ಲ ಪಕ್ಷ ತ್ರಯೋದಶಿ ಬೆಳಗ್ಗೆ 8 ರಿಂದ 12 ಗಂಟೆಯೊಳಗೆ ಸಲ್ಲುವ ಶುಭ ಮುಹೂರ್ತದಲ್ಲಿ ಶ್ರೀ ವೆಂಕಟರಮಣಸ್ವಾಮಿ ವೈಕುಂಠ ಪಾದುಕೆಗೆ ಮತ್ತು ಶ್ರೀ ವೀರಾಜಂನೇಯ ಸ್ವಾಮಿಗೆ ಹೋಮ, ಹರಿಸೇವೆ ಮತ್ತು ಮಹಾ ಕುಂಭಾಭಿಷೇಕ ಮಹೋತ್ಸವವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಗೃಹಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ಕೆ.ನಾಗಣ್ಣ, ಸಂಸ್ಥಾಪಕ ಪೀಠಾಧ್ಯಕ್ಷರು ಪಾಲನಹಳ್ಳಿ ಮಠದ ಡಾ.ಶ್ರೀ ಶ್ರೀ ಸಿದ್ದರಾಜು ಸ್ವಾಮೀಜಿ, ತುಮಕೂರು ಜಿಪಂ ಸಿಇಒ ಜಿ.ಪ್ರಭು, ತುಮಕೂರು ತಹಶೀಲ್ದಾರ್ ರಾಜೇಶ್ವರಿ, ಕವಿಗಳು, ಸಂಶೋಧಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಡಾ.ವಡ್ಡಗೆರೆ ನಾಗರಾಜಯ್ಯ ಬೆಂಗಳೂರು, ಪರವಾನಗಿ ಭೂಮಾಪಕರ ಸಂಘದ ರಾಜ್ಯಾಧ್ಯಕ್ಷರಾದ ತಿರುಮಲೇಗೌಡ, ಸೇರಿದಂತೆ ಇತರೆ ಗಣ್ಯರುಗಳು ಭಾಗವಹಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುಮಕೂರು: ಹನುಮಜಯಂತಿ ಪ್ರಯುಕ್ತ ಅಗ್ನಿ ಬನ್ನಿರಾಯನಗರದಲ್ಲಿರುವ ಗಾರ್ಡನ್ ರಸ್ತೆ, ಶ್ರೀ ರಾಮ ಸೇವಾ ಸಮಿತಿ ವತಿಯಿಂದ ಡಿ.2ರಂದು ಬೆಳಗ್ಗೆ 6 ಗಂಟೆಗೆ ಶ್ರೀ ರಾಮ ದೇವಸ್ಥಾನದಲ್ಲಿ ಶ್ರೀ ರಾಮ ದೇವರಿಗೆ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಹೂವಿನ ಅಲಂಕಾರದೊಂದಿಗೆ ವಿವಿಧ ರೀತಿಯ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಮಾಡಲಾಗುವುದು. ಸಂಜೆ 6:30ಕ್ಕೆ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡದವರಿಂದ ಪ್ರೊ.ಚಂದ್ರಶೇಖರ ಪಾಟೀಲರವರ ಗೋಕರ್ಣದ ಗೌಡಶಾಲೆ ಎಂಬ ನಾಟಕ ಪ್ರದರ್ಶನ ನಡೆಯಲಿದ್ದು 6:30 ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕುಣಿಗಲ್: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಕಸಾಯ ಖಾನೆಗೆ ಸಾಗಿಸುತ್ತಿದ್ದ 15 ಜಾನುವಾರುಗಳನ್ನು ಕುಣಿಗಲ್ ಪೊಲೀಸರು ರಕ್ಷಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಅಂಚೆಪಾಳ್ಯ ಸಮೀಪ ನಡೆದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕು ನುಗ್ಗೆಹಳ್ಳಿ ಗ್ರಾಮದ ಎಂ.ಹೆಚ್.ಪ್ರದೀಪ್ (40) ಬಂಧಿತ ಆರೋಪಿ. ಕುಣಿಗಲ್ ಪೊಲೀಸರು ಹಾಸನ ಜಿಲ್ಲೆ ಚನ್ನರಾಯಪಟ್ಟಣ ಕಡೆಯಿಂದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಬೆಂಗಳೂರು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ತಕ್ಷಣ ಎಚ್ಚೆತ್ತ ಪೊಲೀಸರು ರಾಷ್ಟ್ರೀಯ ಹೆದ್ದಾರಿ 75 ಅಂಚೇಪಾಳ್ಯ ಹಂಪ್ಸ್ ಬಳಿ ವಾಹನ ತಡೆದಾಗ ವಾಹನ ನಿಲ್ಲಿಸಿ ಪರಾರಿಯಾಗಲು ಚಾಲಕ ಪ್ರದೀಪ್‌ ಯತ್ನಿಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದು, ಪರಿಶೀಲಿಸಿದಾಗ ವಾಹನದಲ್ಲಿ ಒಟ್ಟು 15 ಜಾನುವಾರುಗಳು (5 ಕೋಣಗಳು, 2 ಎಮ್ಮೆ ಕರುಗಳು, 6 ಸೀಮೆ ಹಸುವಿನ ಗಂಡು ಕರುಗಳು ಮತ್ತು 2 ಹೆಣ್ಣು ಕರುಗಳು) ಪತ್ತೆಯಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ…

Read More

ತಿಪಟೂರು: ನಗರದ ಗುರುಕುಲ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿಂದೂ ಸಮಾಜೋತ್ಸವ ಸಮಿತಿಯಿಂದ ಮನೆ ಮನೆ ಸಂಪರ್ಕ ಅಭಿಯಾನ ನಡೆಯಿತು. ಗುರುಕುಲಾನಂದಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಯಾವುದೇ ಜಾತಿ, ಧರ್ಮ, ಬೇಧವಿಲ್ಲದೆ ವಿಚಾರಗಳ ಆಧಾರದಲ್ಲಿ ರಾಷ್ಟ್ರಸೇವೆಯೇ ಪರಮ ಗುರಿಯೊಂದಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು. ಸಂಘ ಶತಮಾನೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ನೂರು ವರ್ಷಗಳಲ್ಲಿ ಹಲವು ಸಮಸ್ಯೆ, ಸಂಕಷ್ಟಗಳನ್ನು ಎದುರಿಸಿ ನಿಂತಿದೆ. ಲಕ್ಷಾಂತರ ಸೇವೆ ಮಾಡಿ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದು ಬೃಹದಾಕಾರವಾಗಿ ಬೆಳೆದಿದೆ ಎಂದು ಹೇಳಿದರು. ಮನೆ ಮನೆಗೆ ಭೇಟಿ ನೀಡಿ ಪಂಚ ಪರಿವರ್ತನೆ ವಿಷಯಗಳ ಮೂಲಕ ರಾಷ್ಟ್ರ ಜನರನ್ನು ಜಾಗೃತಗೊಳಿಸುವ ಮನೆ ಮನೆ ಮಹಾ ಸಂಪರ್ಕ ಅಭಿಯಾನವನ್ನು ಡಿಸೆಂಬರ್ 7 ರಿಂದ 18ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಜಿಲ್ಲಾ ಕಾರ್ಯವಾಹ ರವೀಂದ್ರ ತಗ್ಗಿನಮನೆ, ಸಂಸ್ಕಾರ ಭಾರತಿಯ ಶ್ರೀಧರ್ ಲಕ್ಕವಳ್ಳಿ, ರಾಜೀವ ಲೋಚನ್‌, ಪ್ರಭಾ ವಿಶ್ವನಾಥ್‌, ಗ್ರಾಮಾಂತರ ಸಮಿತಿ ಅಧ್ಯಕ್ಷ ಕೊಪ್ಪ ಹೇಮಂತ್‌ಕುಮಾರ್‌,…

Read More

ತುಮಕೂರು: ಡಾ.ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ ಮತ್ತು ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಡಾ.ಜಯರಾಮ್ ಸ್ಮರಣಾರ್ಥ ರಾಜ್ಯಮಟ್ಟದ ಹೊನಲು ಬೆಳಕಿನ ‘ಪುನೀತ್ ರಾಜ್ ಕಪ್‌’ ಕ್ರಿಕೆಟ್‌ ಪಂದ್ಯಾವಳಿ ನಗರದಲ್ಲಿ ಡಿಸೆಂಬರ್ 25ರಿಂದ 28ರ ವರೆಗೆ ನಡೆಯಲಿದೆ. ನಗರದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕ್ರಿಕೆಟ್ ಪಂದ್ಯಾವಳಿಯ ಪೋಸ್ಟರ್‌ ಅನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್ ಬಿಡುಗಡೆ ಮಾಡಿದರು. ವರನಟ ಡಾ.ರಾಜ್ ಕುಮಾರ್ ಕುಟುಂಬದ ಪುನೀತ್ ರಾಜ್‌ ಕುಮಾರ್ ಹೆಸರಿನಲ್ಲಿ ಪಂದ್ಯಾವಳಿ ನಡೆಯುತ್ತಿರುವುದು ಸಂತಸದ ವಿಚಾರ ಎಂದರು. ವಿಜಯ ಸೇನೆ ಅಧ್ಯಕ್ಷ ಎಚ್.ಎನ್.ದೀಪಕ್ ಮಾತನಾಡಿ, ಪ್ರತಿ ವರ್ಷವೂ ಯಾವುದಾದರೂ ಒಂದು ಕಾರ್ಯಕ್ರಮ ಆಯೋಜನೆ ಮಾಡಿಕೊಂಡು ಬರುತ್ತಿದ್ದೇವೆ. ಅದರಲ್ಲಿ ಕ್ರಿಕೆಟ್‌ ಗೆ ಒತ್ತು ಕೊಡುತ್ತಿದ್ದೇವೆ ಎಂದು ಹೇಳಿದರು. ಕಾಂಗ್ರೆಸ್‌ ಮುಖಂಡ ಕೃಷ್ಣಮೂರ್ತಿ ಮಾತನಾಡಿ, ಈ ಬಾರಿಯ ಪಂದ್ಯಾವಳಿಗೆ 14 ತಂಡಗಳು ಬರುತ್ತಿವೆ. ಮೊದಲ ಬಹುಮಾನ 5 ಲಕ್ಷ, ಎರಡನೇ ಬಹುಮಾನ 2.50 ಲಕ್ಷ, ಮೂರು, ನಾಲ್ಕನೇ ಬಹುಮಾನವಾಗಿ ತಲಾ 50 ಸಾವಿರ ನೀಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡರು.…

Read More

ತುಮಕೂರು: ಡಿಸೆಂಬರ್‌ ನಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಲೇಖಕ ಕರೀಗೌಡ ಬೀಚನಹಳ್ಳಿ ಆಯ್ಕೆ ಆಗಿದ್ದಾರೆ. ನಗರದ ಗಾಜಿನ ಮನೆಯಲ್ಲಿ ಡಿ.29 ಹಾಗೂ 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕಳೆದ ಮೂರು ವರ್ಷಗಳಿಂದ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ಸಂಘಟಿಸುತ್ತಾ ಬರಲಾಗಿದೆ. ಈ ಸಲ ಡಿಸೆಂಬರ್‌ ನಲ್ಲಿ ಹಮ್ಮಿಕೊಳ್ಳಲಾಗಿದೆ. ಅಧ್ಯಕ್ಷರ ಪರಿಚಯ: ಕರೀಗೌಡ ಬೀಚನಹಳ್ಳಿ ಅವರು ಅಧ್ಯಾಪಕ ವೃತ್ತಿಯ ಜತೆಗೆ ಸಾಹಿತ್ಯ ಕೃಷಿಯಲ್ಲೂ ತೊಡಗಿಸಿಕೊಂಡವರು. ಕರಿಮಣ್ಣಿನ ಗೊಂಬೆಗಳು’, ‘ಸಂಜೀವಿನಿ ಮರ’, ‘ಕಥನ ಕಲೆಯ ನೆಲೆಗಳು’, ‘ಸಂಧಾನ’, ‘ಜಾತ್ರೆಗಳು’, ‘ತೇಜಸ್ವಿ ಕಥೆಗಳ ಅಧ್ಯಯನ ಪ್ರಮುಖ ಕೃತಿಗಳು. ಅವರ ಕಥೆ ಹಾಗೂ ಕವನಗಳು ಪದವಿ ತರಗತಿಗಳಿಗೆ ಪಠ್ಯವಾಗಿವೆ. ಸಾಕಷ್ಟು ಕಥೆಗಳು ಇತರ ಭಾಷೆಗಳಿಗೆ ಅನುವಾದಗೊಂಡಿವೆ. ಪ್ರಶಸ್ತಿಗಳು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಶ್ರೀಕೃಷ್ಣ ಆಲನಹಳ್ಳಿ ಕಥಾ ಸ್ಪರ್ಧೆ ಬಹುಮಾನಕ್ಕೆ ಪಾತ್ರರಾಗಿದ್ದಾರೆ. ಹಿನ್ನಲೆ: 1951 ಸೆಪ್ಟೆಂಬರ್ 10ರಂದು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬೀಚನಹಳ್ಳಿಯಲ್ಲಿ ಜನನ,…

Read More

ಕುಣಿಗಲ್‌: ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಗ್ರಾಮವೊಂದರ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿ ಗರ್ಭಿಣಿಯಾಗಲು ಕಾರಣವಾದ ಆರೋಪದ ಮೇಲೆ 44 ವರ್ಷದ ಮಲ್ಲೇಶ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್‌ ನಲ್ಲಿ ಪೋಷಕರು ಬಾಲಕಿಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗ 7 ತಿಂಗಳ ಗರ್ಭಿಣಿಯಾಗಿರುವುದು ತಿಳಿದಿದೆ. ನವೆಂಬರ್ 18ರಂದು ಮಗು ಜನಿಸಿದೆ. ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು. ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು:  ಕನ್ನಡ ನಾಡು ನುಡಿ ಭಾಷೆಯ ಮೇಲಿರುವ ಆಟೋ ಚಾಲಕರ ಭಾಷಾಭಿಮಾನವನ್ನು ನಾವೆಲ್ಲರೂ ಗೌರವಿಸಬೇಕು. ಕನ್ನಡ ಭಾಷೆಯನ್ನು ನವೆಂಬರ್ ತಿಂಗಳಿಗೆ ಮಾತ್ರ ಸೀಮಿತಗೊಳಿಸದೆ ವರ್ಷ ಪೂರ್ತಿ ನಡೆಸಿ ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಪಪಂ ಅಧ್ಯಕ್ಷೆ ಚೈತ್ರಾ ಸ್ವಾಮಿ ತಿಳಿಸಿದರು. ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಚಾಮುಂಡೇಶ್ವರಿ ಆಟೋ ಚಾಲಕರು ಹಾಗೂ ಮಾಲಿಕರ ಸಂಘದ ವತಿಯಿಂದ ಶನಿವಾರದಂದು 70 ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ಭಾಷೆಗೆ ಸಾವಿರಾರು ವರ್ಷ ಗಳ ಇತಿಹಾಸವಿದ್ದು, ಇತ್ತೀಚಿನ ವರ್ಷಗಳಲ್ಲಿ ಬೇರೆ ರಾಜ್ಯಗಳ ಅನ್ಯಭಾಷೆಕಾರ ವಲಸೆಯಿಂದ ಕನ್ನಡ ಭಾಷೆಗೆ ತೊಡಕ್ಕಾಗುತ್ತಿದೆ, ಕನ್ನಡದ ಹಿರಿಮೆ–ಗರಿಮೆ ಸಾರುವ ಕೆಲಸ ಪ್ರತಿಯೊಬ್ಬ ಕನ್ನಡಿಗರ ಗುರಿಯಾಗಬೇಕು. ಕನ್ನಡದ ಅಭಿಮಾನವನ್ನು ಒಂದು ದಿನಕ್ಕೆ ಸಿಮಿತವಾಗಿರದೆ ಪ್ರತಿದಿನವೂ ಕನ್ನಡದ ಅಭಿಮಾನ, ಆಚರಣೆಯಾಗಬೇಕು. ಕನ್ನಡಪರ ಕಾರ್ಯಕ್ರಮಗಳನ್ನು ನಿರಂತರ ಹಮ್ಮಿಕೊಂಡು ಕನ್ನಡ ರಾಜ್ಯೋತ್ಸವ ನಿತ್ಯೋತ್ಸವ ವಾಗಬೇಕು. ನಾಡು ನುಡಿ ಪರಂಪರೆ ಬಿಂಬಿಸು ಕಾರ್ಯವಾಗಬೇಕು ಎಂದರು. ಪಪಂ ಸದಸ್ಯ ಹಾಗೂ ನಾಯಕ ಸಮಾಜದ ಉಪಾಧ್ಯಕ್ಷ…

Read More