Author: admin

ವಿಧಾನಸಭೆಯಿಂದ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ವೇಳಾ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಆಕಾಂಕ್ಷಿಗಳ ಲಾಬಿ ಬಿರುಸುಗೊಂಡಿದ್ದು, ಕಾಂಗ್ರೆಸ್‍ನ ಪ್ರಭಾವಿ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆರಿಸಿ ಕಳುಹಿಸುವ ತೆರೆಮರೆ ಕಸರತುಗಳು ಜೋರಾಗಿವೆ. ರಾಜ್ಯಸಭೆ ಸದಸ್ಯರಾದ ಬಿಜೆಪಿಯ ಕೆ.ಸಿ.ರಾಮಮೂರ್ತಿ, ನಿರ್ಮಿಲಾ ಸೀತಾರಾಮನ್, ಕಾಂಗ್ರೆಸ್‍ನ ಕೇಂದ್ರದ ಮಾಜಿ ಸಚಿವ ಜೈರಾಮ್ ರಮೇಶ್, ನಿಧನರಾದ ಆಸ್ಕರ್ ಫರ್ನಾಡಿಸ್ ಸೇರಿದಂತೆ ನಾಲ್ವರ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್ ಮರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಆರಿಸಿ ಕಳುಹಿಸಲು ತಯಾರಿ ನಡೆಸಿದ್ದಾರೆ. ಗಾಂಧಿ ಕುಟುಂಬದೊಂದಿಗೆ ಅಪಾರ ನಿಷ್ಠೆ ಹೊಂದಿರುವ ಡಿ.ಕೆ.ಶಿವಕುಮಾರ್ ಪಕ್ಷದ ಅಧ್ಯಕ್ಷರಾದಾಗ ಪ್ರಿಯಾಂಕ ಗಾಂಧಿ ದೂರವಾಣಿ ಕರೆ ಮಾಡಿ ಶುಭಾಷಯ ಹೇಳಿದ್ದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸಂಸದರಾಗಿದ್ದ ಪ್ರಿಯಾಂಕ ಗಾಂಧಿ ಅವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಚುನಾವಣೆಯಲ್ಲಿ ಗೆಲವಿಗಾಗಿ ಬಾರೀ…

Read More

ಚಲನಚಿತ್ರಗಳ ಚಿತ್ರೀಕರಣದಲ್ಲಿ ಬಳಸುತ್ತಿದ್ದ ಬಣ್ಣ ಬಣ್ಣದ ಕಾರಿನಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿ ಕಳೆದ 2 ವರ್ಷಗಳಿಂದ ನಿಂತಿದ್ದ ಕಾರಿನ ಬಳಿ ದುರ್ವಾಸನೆ ಗ್ರಹಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲಿಸಿದಾಗ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ. ಈ ಹಿಂದೆ ಕಾರನ್ನು ಕೆಲ ಚಲನಚಿತ್ರಗಳ ಚಿತ್ರೀಕರಣದಲ್ಲಿ ಬಳಸುತ್ತಿದ್ದರು, ಕಾರು ಮಾಲೀಕರು ಮನೆ ಬದಲಾಯಿಸಿದ್ದಾರೆ. ಆಗಿನಿಂದ ಮನೆ ಬಳಿಯೇ ಕಾರು ನಿಂತಿತ್ತು ಎಂದು ತಿಳಿದು ಬಂದಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಬೆಂಗಳೂರು: ಸುಂಕದಕಟ್ಟೆಯಲ್ಲಿ ಹಾಡಹಗಲೇ ಯುವತಿಯ ಮೇಲೆ ಆಸಿಡ್​ ದಾಳಿ ನಡೆಸಿದ ಪ್ರಕರಣದಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರಿಂದ ಬಂಧನವಾಗಿರುವ ಆರೋಪಿ ನಾಗೇಶ್​ ವಿಚಾರಣೆ ವೇಳೆ ಪೊಲೀಸರ ಮುಂದೆ ಕೇಲವು ಸ್ಫೋಟಕ ಮಾಹಿತಿಯನ್ನು ಬಾಯ್ಬಿಟ್ಟಿದ್ದಾನೆ. ಆರೋಪಿಯನ್ನು ಬಂಧಿಸಿದ ನಂತರ ಆಸಿಡ್ ಹಾಕಿದ್ದು ಯಾಕೆ ಎಂದು ಪೊಲೀಸರು ಪ್ರಶ್ನೆ ಮಾಡಿದ್ದಾರೆ.ಇದಕ್ಕೆ ಉತ್ತರಿಸಿದ ನಾಗೇಶ್,ನಾನು ಆಸಿಡ್ ಹಾಕುವುದಕ್ಕೆ ಯುವತಿಯೇ ಕಾರಣ ಎಂದಿದ್ದಾನೆ “ನಾನು ಆಸಿಡ್ ನ್ನು ಯುವತಿಯ ಮುಖಕ್ಕೆ ಹಾಕಬೇಕು ಅಂದುಕೊಂಡಿರಲಿಲ್ಲ. ಘಟನೆ ಹಿಂದಿನ ದಿನ ಯುವತಿಯ ಹತ್ತಿರ ಬಾಯಿ ಮಾತಿಗೆ ಆಸಿಡ್ ಹಾಕ್ತೀನಿ ಎಂದು ಹೇಳಿದ್ದೆ. ಆದರೆ, ಯುವತಿಯು ಅದನ್ನು ಆಕೆಯ ತಂದೆಗೆ ಹೇಳಿದಳು. ಬಳಿಕ ಸಂತ್ರಸ್ತೆಯ ತಂದೆಯು ನನ್ನ ಅಣ್ಣನಿಗೆ ಹೇಳಿದರು. ನನ್ನ ಅಣ್ಣ ನನಗೆ ಚೆನ್ನಾಗಿ ಬೈದಿದ್ದ. ಇದರಿಂದ ಆಸಿಡ್ ಹಾಕಿಯೇ ಬಿಡೋಣ ಎಂದು ತಿರ್ಮಾನಿಸಿಬಿಟ್ಟೆ” ಎಂದು ಆಸಿಡ್ ನಾಗ  ಪೋಲಿಸರಿಗೆ ಹೇಳಿಕೆಯನ್ನು ನೀಡಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಗುಬ್ಬಿ : ತಾಲೂಕು ಕಚೇರಿ ಮುಂಭಾಗದಲ್ಲಿರುವ ಹೋಟೆಲ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಬೆಂಕಿಗಾಹುತಿಯಾಗಿದ ಘಟನೆ ಕಳೆದ ರಾತ್ರಿ ಹನ್ನೆರಡು ಮೂವತ್ತರ ಸಮಯದಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡ ಪರಿಣಾಮ ದಿನಸಿ ಪದಾರ್ಥಗಳು, ಫರ್ನಿಚರ್ಸ್ ಗಳು , ಎರಡು ಫ್ರಿಡ್ಜ್ ,ಒಂದು ಡಿಯೋ ಬೈಕ್ ನಗದು ಹಣ ನಾಲ್ಕು ಸಾವಿರ ರೂಗಳು ಸೇರಿದಂತೆ ಸುಮಾರು 6 ರಿಂದ 7 ಲಕ್ಷದವರೆಗೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ಬೆಸ್ಕಾಂ ಕಚೇರಿಗೆ ಕರೆ ಮಾಡಿ ಮಾಹಿತಿ ನೀಡಿ ಒಂದು ಗಂಟೆಯಾದರೂ ಯಾವುದೇ ಬೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಬಾರದೇ ನಿರ್ಲಕ್ಷ್ಯ ವಹಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಗ್ರಾಮಲೆಕ್ಕಿಗ ಮಾದೇವಿ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಮೇಲಾಧಿಕಾರಿ ಗಳಿಗೆ ವರದಿ ನೀಡುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಮೋಹನ್ ಕುಮಾರ್ ಹೋಟೆಲ್ ಮಾಲಿಕರ ಸಂಘದ ಸದಸ್ಯರಾದ ಈರಣ್ಣ ಸೇರಿದಂತೆ…

Read More

ಗುಬ್ಬಿ: ಯಾವುದೇ ಒಂದು ದೇವಸ್ಥಾನ ಸಮುದಾಯ ಭವನಗಳನ್ನು ಕಟ್ಟಬೇಕಾದರೆ ತಾಲ್ಲೂಕಿನ ಬಹುತೇಕ ದೇವಾಲಯಗಳಿಗೆ ನಮ್ಮ ಅನುದಾನದಲ್ಲಿ ಸಹಕಾರ ಕೊಟ್ಟಿದ್ದೇನೆ ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದರು. ಗುಬ್ಬಿ ತಾಲ್ಲೂಕಿನ ತ್ಯಾಗಟೂರು ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶ್ರೀ ಕರಿಯಮ್ಮ ದೇವಿಯ ನೂತನ ವಿಮಾನ ಗೋಪೂರ ಕಳಸ ಸ್ಥಾಪನೆಯ ಧಾರ್ಮಿಕ‌ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಬಹುತೇಕ ಕಡೆಗಳಲ್ಲಿ ದೇವಾಲಯ ನಿರ್ಮಾಣ ಮಾಡಲು ಧನ ಸಹಾಯ ಮಾಡಿದ್ದೇನೆ. ಗ್ರಾಮಗಳಲ್ಲಿ ಶಾಂತಿ ನೆಮ್ಮದಿ ಇರಬೇಕಾದರೆ ದೇವಾಲಯಗಳು ಅತ್ಯವಶ್ಯಕ ಗ್ರಾಮೀಣ ಭಾಗದಲ್ಲಿ ಸಾಕಷ್ವು ದೇವಾಲಯಗಳು ಜೀರ್ಣೋದ್ಧಾರವಾಗುತ್ತಿರುವುದು ಸಂತೋಷದ ವಿಷಯ ಇತ್ತೀಚಿಗೆ ಸರ್ಕಾರ ಬದಲಾವಣೆ ಮಾಡಿದೆ. ಊರಿನಲ್ಲಿ ಇರುವ ದೇವಾಲಯಗಳನ್ಮು ಜನರೇ ಸೇರಿಕೊಂಡು ದೇವಾಲಯಗಳನ್ನು  ಮಾಡಬೇಕು ಸರ್ಕಾರದ ಹಣವನ್ನು ವೆಚ್ಚ ಮಾಡದೇ ಅದೇ ಗ್ರಾಮಗಳಿಗೆ ಬೇಕಾಗುವ ಮೂಲಭೂತ ಸೌಕರ್ಯಗಳನ್ನು ಮಾಡಬೇಕು ಜತೆಗೆ ಶಾಲಾ ಮಕ್ಕಳ ವಿಧ್ಯಾಭ್ಯಾಸ ಕೊಡಿ , ರಸ್ತೆ , ಚರಂಡಿಗಳನ್ನು ಮಾಡಿಕೊಡಿ ಶಾಶ್ವತವಾಗಿ ಸರ್ಕಾರದ ಯೋಜನೆಗಳನ್ನು ಮಾಡಿ ಎಂದು ಸರ್ಕಾರ ಆದೇಶ ಮಾಡಿದೆ ಎಂದರು. ಇದೇ…

Read More

ತಮಿಳುನಾಡಿನಲ್ಲಿ ಬಂಧಿಸಲಾಗಿದ್ದ ಕಿರಾತಕ ಆ್ಯಸಿಡ್ ನಾಗೇಶ್ ನ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ, ಪೊಲೀಸರು ಆರೋಪಿಗೆ ಗುಂಡು ಹೊಡೆದಿದ್ದಾರೆ. ತಮಿಳುನಾಡಿನಲ್ಲಿ ಆರೋಪಿಯನ್ನು ಬಂಧಿಸಿ ಬೆಂಗಳೂರಿಗೆ ಕರೆ ತರುತ್ತಿದ್ದ ವೇಳೆ ನಾಗೇಶ್ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಕೆಂಗೇರಿ ಮೇಲ್ಸೇತುವೆ ಬಳಿ ಮೂತ್ರ ವಿಸರ್ಜನೆಯ ನೆಪ ಹೇಳಿದ ನಾಗೇಶ್, ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ, ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ನಾಗೇಶ್ ನ ಬಲಗಾಲಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಳೆದ 16 ದಿನಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ನಾಗೇಶ್, ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿಯ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಸಿಬ್ಬಂದಿಯಿಂದ ದಲಿತ ಪರಿಶಿಷ್ಟ ಪಂಗಡದ ( ನಾಯಕ ) ಮಹಿಳೆಯ ಮೇಲೆ ಹಲ್ಲೆ  ಮಾಡಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ನಡೆದಾಡುವ ದೇವತೆ ಶ್ರೀ ಮಾತೆ ಕಮಲಮ್ಮನವರು ಸ್ಥಾಪಿತ ಶ್ರೀ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನ ದ ಸಿಬ್ಬಂದಿಯಾದ ಅಶ್ವಥ್ ನಾರಾಯಣ ಎಂಬ ವ್ಯಕ್ತಿ  ಸರೋಜಮ್ಮ ಎಂಬ ದಲಿತ ( ನಾಯಕ ) ಮಹಿಳೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಪಕ್ಕದಲ್ಲಿ ಮಹಿಳೆ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಮಹಿಳೆ ತನ್ನ ಪರಿಚಯಸ್ಥರನ್ನು ಶ್ರೀ ಮಹಾಲಕ್ಷ್ಮಿಯ ದರ್ಶನ ಮಾಡಲು ಕರೆದುಕೊಂಡು ಹೋದ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಗೆ ಕರೆದುಕೊಂಡು ಹೋಗಿ ಅಪರಾಧಿಯಂತೆ ಬಾಯಿಗೆ ಬಂದಂತೆ ಬೈದು, ಭಾರತೀಯ ಸಂಸ್ಕೃತಿಯ ವಿಶಿಷ್ಟ ಪವಿತ್ರಸ್ಥಾನವನ್ನು ಹೊಂದಿರುವ ಮಾಂಗಲ್ಯವನ್ನು ಕಿತ್ತುಹಾಕಿ ಮಹಿಳೆಯ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನ…

Read More

ಕಳೆದ ತಿಂಗಳು ಯುವತಿ ಮೇಲೆ ಆಸಿಡ್ ಎರಚಿ ವಿಕೃತಿ ಮೆರೆದು ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್, ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಾಧ್ಯಮಗಳಲ್ಲಿ ಈತ ಮೊದ ಮೊದಲು ಸೌಮ್ಯ ಸ್ವಭಾವದವನು ಎಂಬ ಅಭಿಪ್ರಾಯಗಳು ಕೇಳಿ ಬಂದಿತ್ತಾದರೂ, ಆ ಬಳಿಕ ಈತನ ಅಸಲಿತನ ಬಯಲಾಗಿದೆ. ನಾಗೇಶ್ ನನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈತ ಬೆಂಗಳೂರಿಗೆ ಬರುವ ಮೊದಲೇ ತಮಿಳುನಾಡಿನಲ್ಲಿ ತನ್ನ ನೆರೆಹೊರೆಯ ಮಹಿಳೆಯರು ಸೇರಿದಂತೆ  ಹಲವು ಮಹಿಳೆಯರಿಗೆ ಕಿರುಕುಳ ನೀಡಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಕೊಡಿಯಾಲಂ ಮೂಲದ ನಾಗೇಶ್ ತನ್ನ ನೆರೆಯ ಮಹಿಳೆಗೆ ಕಿರುಕುಳ ನೀಡಿದ್ದು, ಅಲ್ಲಿನ ಪೊಲೀಸರಿಗೆ ತಿಳಿಸಲಾಗಿತ್ತು. ಆದರೆ, ಮಹಿಳೆ ದೂರು ನೀಡದ ಕಾರಣ ಆತನನ್ನು ಕರೆಸಿ ಎಚ್ಚರಿಕೆ ಕೊಟ್ಟು ಕಳುಹಿಸಿದ್ದರು ಎಂದು ತಿಳಿದುಬಂದಿದೆ. ಈ ಮಧ್ಯೆ ನಾಗೇಶ್ ಬಂಧಿಸಲು ರಚಿಸಲಾದ 10ಪೊಲೀಸ್ ತಂಡಗಳು ಪ್ರಮುಖ ಯಾತ್ರಾ ಕೇಂದ್ರಗಳ ಎಲ್ಲಾ ಹೋಟೆಲ್‌ ಗಳಲ್ಲಿ ಶೋಧ ನಡೆಸಿದ್ದರು. ಅಲ್ಲದೇ ಆತನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪರಿಶೀಲಿಸುವ ಕೆಲವನ್ನೂ ನಡೆಸಿದ್ದರು.…

Read More

ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್‌ನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೋಲಿಸರು ಹುಡುಕಾಟ ನಡೆಸುತ್ತಿದ್ದ ವೇಳೆ ಆರೋಪಿಯು ತಮಿಳುನಾಡಿನ ತಿರುವಣ್ಣಾಮಲೈ ನಲ್ಲಿ ಸ್ವಾಮೀಜಿಯಂತೆ ವೇಷ ಧರಿಸಿ ತಲೆ ಮರೆಸಿಕೊಂಡಿದ್ದನು. ಏಪ್ರಿಲ್ 28 ರಂದು ದಾಳಿ ನಡೆಸಿ ಪರಾರಿಯಾಗಿದ್ದ. ಆಸಿಡ್ ದಾಳಿ ನಡೆದು 16 ದಿನ ಕಳೆದರೂ ಆರೋಪಿ ನಾಗೇಶ್ ಸುಳಿವು ಸಿಗದೆ ಪೊಲೀಸರಿಗೆ ತಲೆನೋವಾಗಿತ್ತು. ಪ್ರೀತಿ ನಿರಾಕರಿಸಿದ ಹೆಗ್ಗನಹಳ್ಳಿ ಕ್ರಾಸ್‌ ನಿವಾಸಿ 25 ವರ್ಷದ ಯುವತಿ ಮೇಲೆ ಹಾಡಹಗಲೇ ಆಸಿಡ್ ದಾಳಿ ನಡೆಸಲಾಗಿತ್ತು. ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ ಬಳಿ ಭಗ್ನಪ್ರೇಮಿ ನಾಗೇಶ್​ ಆಸಿಡ್​ ಹಾಕಿ ಪರಾರಿಯಾಗಿದ್ದ. ನೋವಲ್ಲಿ ನರಳಾಡುತ್ತಿದ್ದ ಆಕೆಯನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಯುವತಿಯು ಸೆಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: ಆಟೋ ಮತ್ತು ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಾಘತದಲ್ಲಿ ಬಾಲಕಿಯೋರ್ವಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಹೊಸಹಳ್ಳಿ ಬಳಿ ನಡೆದಿದೆ. ಮೃತ ಬಾಲಕಿ ಯನ್ನು 12 ವರ್ಷದ ಪ್ರತಿಭಾ ಎಂದು ಗುರುತಿಸಲಾಗಿದೆ. ಕೊರಟಗೆರೆಯಿಂದ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್, ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದು ಅಪಾಘತದ ತ್ರೀವತೆಗೆ ಬಾಲಕಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನಾ ಸ್ಧಳಕ್ಕೆ ಆಗಮಿಸಿದ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು  ಪ್ರಕರಣ ದಾಖಲಿಸಿದ್ದು ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More