Subscribe to Updates
Get the latest creative news from FooBar about art, design and business.
- ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್
- ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ
- ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ
- ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ
- ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
- ಬೀದರ್: ಆನ್ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ
- 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ
- ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
Author: admin
ಮಧುಗಿರಿ: ಶ್ರೀ ಜಗದ್ಗುರು ರೇಣುಕಾಚಾರ್ಯರ, ಶ್ರೀಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಹಾಗೂ ಕಾಶಿ ವಿಶ್ವನಾಥ ಸ್ವಾಮಿ ಸಮುದಾಯ ಭವನದ ಭೂಮಿ ಪೂಜೆ ಕಾರ್ಯ ಮತ್ತು ಜನಜಾಗೃತಿ ಧರ್ಮ ಕಾರ್ಯಕ್ರಮವು ಕನಪ ನಾಯಕನಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. ಗಂಗೆ ಪೂಜೆ, ಗಣಪತಿ ಪೂಜೆ, ವಾಚನ ನಾಂದಿ ಪೂಜೆ, ಪಂಚಕಲಸ ಪೂಜೆ ಹಾಗೂ ದೇವರಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನೆರವೇರಿತು. ಶ್ರೀ ಕಾಶಿ ವಿಶ್ವನಾಥ ಸ್ವಾಮಿ ದೇವರಿಗೆ ರುದ್ರಾಭಿಷೇಕ ಪೂಜೆ, ನವಗ್ರಹ ಶಾಂತಿ ಪೂಜೆ, ಉಮಾ ಮಹೇಶ್ವರಿ ಪ್ರಧಾನ ಕಲಶ ಪೂಜೆ, ಶ್ರೀ ವಿಶ್ವನಾಥ ಸ್ವಾಮಿಗೆ ತುಂಬಾ ಅಭಿಷೇಕ ಬಿಲ್ವಾರ್ಚನೆ ಹಾಗೂ ರಾಜ ಪ್ರಚಾರ ಪೂಜೆ ಮಂಗಳಾರತಿ ತೀರ್ಥ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಮತ್ತು ಶ್ರೀ ರಂಭಾಪುರಿ ಖಾಸ ಶಾಖ ಮಠ ಶ್ರೀ ಕ್ಷೇತ್ರ ಸಿದ್ದರಬೆಟ್ಟ ಇವರ ದಿವ್ಯ ಸಾನಿಧ್ಯದಲ್ಲಿ ನೆರವೇರಿಸಲಾಯಿತು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಶಾಸಕ ಅನಿಲ ಬೆನಕೆ ಬೆಳಗಾವಿಯ ಎಲ್ಲ ಸಾರ್ವಜನಿಕ ಶ್ರೀ ಗಣೇಶ ಉತ್ಸವ ಮಂಟಪಗಳಲ್ಲಿ ವೀರ ಸಾವರ್ಕರ್ ಭಾವಚಿತ್ರ, ಬ್ಯಾನರ್ ಅಳವಡಿಸಲು ವಿನಂತಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮುಂಬರುವ ಗಣೇಶೋತ್ಸವವನ್ನು ಬೆಳಗಾವಿಯ ಎಲ್ಲ ಜನತೆ ವಿಜ್ರಂಭನೆಯಿಂದ ಆಚರಿಸಬೇಕು ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಎಲ್ಲ ಮಂಟಪಗಳಲ್ಲಿ ವೀರ ಸಾವರ್ಕರ್ ಬ್ಯಾನರ್/ಭಾವಚಿತ್ರ ಅಳವಡಿಸುವಂತೆ ವಿನಂತಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಈಗ ರಾಜ್ಯದಲ್ಲಿ ಮತ್ತೊಂದು ಭಾರೀ ಪರೀಕ್ಷಾ ಅಕ್ರಮ ಬಯಲಾಗಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆದಿದ್ದ ಪರೀಕ್ಷೆ ಪತ್ರಿಕೆ ಲೀಕ್ ಆಗಿದೆ. ಗದಗದ ಮುನ್ಸಿಪಲ್ ಕಾಲೇಜ್ ನಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಪರೀಕ್ಷೆ ನಡೆದಿತ್ತು. ಆದ್ರೆ ಗದಗದಲ್ಲಿಯೇ ಈ ಪರೀಕ್ಷಾ ಪತ್ರಿಕೆ ಲೀಕ್ ಆಗಿದೆ. ತಂದೆ-ಮಗನ ಸೇರಿಕೊಂಡು ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಮುನಿಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮತ್ತು ಅವರ ಮಗ ಸಮೀತ ಕುಮಾರ್ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗಿದೆ. ಮಗ ಸಮೀತಕುಮಾರ್ ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಕೊಟ್ಟು ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದಾನೆ. ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಮೊಬೈಲ್ ಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ತಂದೆ-ಮಗನನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಸೈಬರ್…
ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೊಡಗು ಭೇಟಿ ನೀಡಿದ ಸಂದರ್ಶನದಲ್ಲಿ ಬಿಜೆಪಿ ಕಾರ್ಯಕರ್ತರು ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದನ್ನು ಖಂಡಿಸಿ ಶನಿವಾರ ನಗರದ ಚನ್ನಮ್ಮ ವೃತ್ತದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಯುವ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯನವರು ಕೊಡಗು ನೆರೆ ಸಂತ್ರಸ್ತರ ಸಮಸ್ಯೆ ಆಲಿಸಲು, ಹಾನಿ ಪ್ರದೇಶವನ್ನು ಪರಿಶೀಲನೆ ನಡೆಸಲು ಹೋದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ವಿಪಕ್ಷ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದು ತಮ್ಮ ಕೀಳುಮಟ್ಟವನ್ನು ಪ್ರದರ್ಶಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊಡಗಿನ ಪೊನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡಿದ್ದರೆ ರಾಜ್ಯದಲ್ಲಿ ಇಂಥ ಘಟನೆ ನಡೆಯುತ್ತಿರಲಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರ ಹಾಕಿದರು. ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಮಾತನಾಡಿ, ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಕೊಡಗು ಜಿಲ್ಲೆಗೆ ಸಂತ್ರಸ್ತರ ನೋವು ಆಲಿಸಲು ಹೋಗಿದ್ದರು. ಆಗ ಮೊಟ್ಟೆ ಎಸೆದು ಅವಮಾನ ಮಾಡಿದ್ದಾರೆ. ಅವರ ಮೇಲೆ…
ತುರುವೇಕೆರೆ: ತಾಲೂಕು ಕಸಬಾ ಹೋಬಳಿಗೆ ಸೇರಿದ ಹುಲಿಕೆರೆ ಗ್ರಾಮದ ವಾಸಿಯಾದ ಗಂಗಣ್ಣ ಕೆಂಪದೇವಮ್ಮ ರವರ ಪುತ್ರಿ ಹಾಗೂ ಕೊಟ್ಟಿಗೆಹಳ್ಳಿ ಗ್ರಾಮದ ವಾಸಿಯಾದ ತಿಮ್ಮಯ್ಯ ಸಾವಿತ್ರಮ್ಮ ದಂಪತಿಗಳ ಮಗ ಇಬ್ಬರು ಯುವ ಜೋಡಿಗಳು ಪರಸ್ಪರ ಸುಮಾರು 4 ವರ್ಷಗಳ ಹಿಂದೆ ಪರಿಚಯವಾಗಿ ಪರಿಚಯ ಸ್ನೇಹಕ್ಕೆ ತಿರುಗಿ ಸ್ನೇಹದಿಂದ ಪ್ರೀತಿಯವರೆಗೂ ಹೋಗಿ ಮದುವೆಯಾಗುವ ಲೆಕ್ಕಾಚಾರಕ್ಕೆ ಬಂದಿದ್ದರು. ಹುಡುಗ ಮತ್ತು ಹುಡುಗಿ ಇಬ್ಬರೂ ಒಂದೇ ಕೋಮಿಗೆ ಸೇರಿದವರಾಗಿದ್ದು, ಹುಡುಗ ತುರುವೇಕೆರೆ ಪಟ್ಟಣದ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಹುಡುಗಿಯು ಅದೇ ಮಾರ್ಗವಾಗಿ ಕಾಲೇಜಿಗೆ ಹೋಗುವಾಗ ಪ್ರೇಮಾಂಕರವಾಗಿತ್ತು. ಇವರಿಬ್ಬರ ಮದುವೆಗೆ ಎರಡು ಕುಟುಂಬದ ಸದಸ್ಯರು ಒಪ್ಪಿಗೆ ಸೂಚಿಸಿರಲಿಲ್ಲ. ಈ ವಿಚಾರವಾಗಿ ಹುಡುಗಿಯ ಮನೆಯವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಈ ಸಂಬಂಧ ಠಾಣೆಯಲ್ಲಿ ಎರಡು ಕಡೆಯ ಸಂಬಂಧಿಕರು ಹಾಗೂ ಹಿತೈಷಿಗಳು ಆಗಮಿಸಿ ಮಾತುಕತೆ ನಡೆಸಿದ್ದಾರೆ. ಹುಲಿಕೆರೆ ಗ್ರಾಮದ ವಾಸಿಯಾದ ದಲಿತ ಮುಖಂಡರಾದ ಟಿ.ಎಚ್. ಗುರುದತ್ ಅವರು ಎರಡು ಕಡೆಯ ಮನೆಯವರಿಗೆ ಸರಿಯಾದ ತಿಳುವಳಿಕೆಯನ್ನು ನೀಡಿ ಯುವ ಜೋಡಿಗಳು…
ಧಾರವಾಡ: ಕೊಲೆ ಆರೋಪದಡಿ ಬಂಧಿತನಾಗಿರುವ ಪಾತಕಿಗೆ ಪ್ರೇಯಸಿ ಜತೆ ಕಾಲ ಕಳೆಯಲು ಪೊಲೀಸರೇ ಅವಕಾಶ ಮಾಡಿಕೊಟ್ಟ ಪ್ರಸಂಗ ನಡೆದಿದೆ. ಹುಬ್ಬಳ್ಳಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಹಾಜರು ಪಡಿಸಲು ಬಳ್ಳಾರಿ ಜೈಲಿನಿಂದ ಪಾತಕಿ ಬಚ್ಚಾಖಾನ್ ನನ್ನು ಕರೆತರಲಾಗಿತ್ತು. ನಿಗದಿಯಂತೆ ಆತನನ್ನು ಖಾಸಗಿ ಹೊಟೇಲ್ ಗೆ ಪೊಲೀಸರೇ ಕರೆದುಕೊಂಡು ಹೋಗಿದ್ದಾರೆ. ಆಗ ಅಲ್ಲಿನ ಕೊಠಡಿಯೊಂದರಲ್ಲಿ ಆತನ ಪ್ರೇಯಸಿ ಕಾಯುತ್ತಿದ್ದಳು. ಬಚ್ಚಾಖಾನ್ ಆಕೆಯೊಂದಿಗೆ ಏಕಾಂತದಲ್ಲಿದ್ದಾಗ, ಆತನನ್ನು ಕರೆತಂದ ಬಳ್ಳಾರಿ ಪೊಲೀಸರೇ ಕೊಠಡಿ ಹೊರಗೆ ಕಾವಲು ಕಾದಿದ್ದರು ಎನ್ನಲಾಗಿದೆ. ವಿಷಯ ತಿಳಿದ ಹುಬ್ಬಳ್ಳಿ – ಧಾರವಾಡ ಪೊಲೀಸ್ ಆಯುಕ್ತ ಲಾಬುರಾಮ್ ಅವರು ತಮ್ಮ ತಂಡದೊಂದಿಗೆ ಹೋಟೆಲ್ ಮೇಲೆ ದಾಳಿ ಮಾಡಿ ಬಚ್ಚಾಖಾನ್ ನನ್ನು ಬಂಧಿಸಿ ವಿದ್ಯಾಗಿರಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಪಾವಗಡ: ಕಾರು ಹಾಗೂ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರ ಸ್ಥಿತಿ ಗಂಭೀರವಾದ ಘಟನೆ ಪಾವಗಡ ಪಟ್ಟಣದ ಟೋಲ್ ಗೇಟ್ ಬಳಿಯ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಇಂದು ಸಂಜೆ 5 ಗಂಟೆಗೆ ನಡೆದಿದೆ. ಹರೀಶ್ ಮತ್ತು ಭಾಷಾ ಎಂಬವರು ಗಾಯಗೊಂಡ ಬೈಕ್ ಸವಾರರಾಗಿದ್ದು, ಬಳ್ಳಾರಿ ರಸ್ತೆಯಿಂದ ಬರುತ್ತಿರುವಂತಹ ಕಾರು ಹಾಗೂ ಎದುರಿನಿಮದ ಬರುತ್ತಿದ್ದ ಬೈಕ್ ನಡುವೆ ಅಪಘಾತವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಮತ್ತು ಹಿಂದೂಪುರಕ್ಕೆ ಕರೆದೊಯ್ಯಲಾಗಿದೆ. ಅಪಘಾತವಾದ ಸಮಯದಲ್ಲಿ ಸ್ಥಳೀಯ ಆಟೋ ಚಾಲಕರು ಹಾಗೂ ಆರ್.ಕೆ.ಆಂಬುಲೆನ್ಸ್ ನವರ ಸಹಾಯದಿಂದ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ಅವರನ್ನು ಸೇರಿಸಲಾಯಿತು ಘಟನಾ ಸ್ಥಳಕ್ಕೆ ಪಾವಗಡ ಸರ್ಕಲ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಸಮುದಾಯಭವನಗಳ ಅಭಿವೃದ್ಧಿಯನ್ನು ಆದ್ಯತೆ ಮೇರೆಗೆ ಕೈಗೊಳ್ಳಲಾಗುತ್ತಿದ್ದು ಅನುದಾನದ ಸಮರ್ಪಕ ವಿನಿಯೋಗದ ಮೂಲಕ ಸಮುದಾಯಭವನಗಳು ಸಮಾಜದ ಜನರ ಸತ್ಕಾರ್ಯಗಳಿಗೆ ಬಳಕೆಯಾಗಬೇಕು ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ತಾಲೂಕಿನ ಮಾಸ್ತಮರ್ಡಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಸಮುದಾಯ ಭವನ ಕಟ್ಟಡ ನಿರ್ಮಾಣದ ಸಲುವಾಗಿ 3 ಲಕ್ಷ ರೂ.ಗಳ ಪೈಕಿ ಈಗಾಗಲೇ ಮೊದಲನೇ ಹಂತದ ಚೆಕ್ ನ್ನು ನೀಡಲಾಗಿದ್ದು, ಇಂದು ಕೊನೆಯ ಹಂತದ ಚೆಕ್ ನ್ನು ದೇವಸ್ಥಾನದ ಕಮಿಟಿಯವರಿಗೆ ಹಸ್ತಾಂತರಿಸಿ ಅವರು ಮಾತನಾಡಿದರು. ಈ ಸಮಯದಲ್ಲಿ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮುಖಂಡರಾದ ಗಂಗಣ್ಣ ಕಲ್ಲೂರ, ಪ್ರಕಾಶ ಪಾಟೀಲ, ಅಶೋಕ ತೋರ್ಲೆ, ದೇವಸ್ಥಾನದ ಕಮಿಟಿಯ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹಿರಿಯೂರು: ವೃತ್ತಿ ಖಾಯಂ ಮಾಡುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹಿರಿಯೂರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಅಂಗನವಾಡಿ ಫೆಡರೇಶನ್ ಎಐಟಿಯುಸಿಯ ತಾಲ್ಲೂಕು ಅಧ್ಯಕ್ಷರಾದ ಬಿ ಪಿ ನಿರ್ಮಲಾ ಹಾಗೂ ಗೌರವ ಅಧ್ಯಕ್ಷರಾದ ಎಸ್ ಪಿ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೇವಾಭತ್ಯೆ , ಸೇವೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ರಂಜಿತ್ ಲಾಡ್ಜ್ ಬಳಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಾಂಧಿ ಸರ್ಕಲ್ ನಿಂದ ಸಾಗಿ ಹಿರಿಯೂರು ತಾಲ್ಲೂಕು ಕಛೇರಿ ಬಳಿ ಸಮಾಪ್ತಿಗೊಂಡಿತು. ಮೆರವಣಿಗೆಯ ಉದ್ದಕ್ಕೂ ಸರ್ಕಾರವ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಪ್ರತಿಭಟನೆಯ ಬಳಿಕ ನಮ್ಮ ತುಮಕೂರು ಜೊತೆಗೆ ಮುಖಂಡರಾದ ಕ್ರಿಷ್ಟಿ ಜೌನಿತ ಶಿಭ, ತಾಲ್ಲೂಕು ಅಧ್ಯಕ್ಷರಾದ ಬಿ ಪಿ ನಿರ್ಮಲ,ಎಸ್ ಸಿ ಕುಮಾರ್ ಮಾತನಾಡಿ, 46 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೆಲಸದ…
ಸಮಾಜದಲ್ಲಿ ನಮ್ಮ ನಡೆ-ನುಡಿಗಳನ್ನು ರೂಪಿಸುವಲ್ಲಿ ಮಾಧ್ಯಮದ ಪಾತ್ರ ಬಹುಮುಖ್ಯವಾದುದು ಆದ್ದರಿಂದ ಮಾಧ್ಯಮವು ಪ್ರಜಾಪ್ರಭುತ್ವದ ಕಾವಲು ನಾಯಿಯಂತೆ, ಸಂವಿಧಾನದ ನಾಲ್ಕನೇಯ ಅಂಗವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಮೂಡಲಗಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಬಿ.ಸಿ. ಹೆಬ್ಬಾಳ ತಿಳಿಸಿದರು.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ವತಿಯಿಂದ ಹಮ್ಮಿಕೊಂಡ ಸಮಾಜ ಮತ್ತು ಮಾಧ್ಯಮ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿದ ಅವರು ಮಾಧ್ಯಮಗಳಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸಮಾಜದ ಜನತೆಯನ್ನು,ರಾಷ್ಟ್ರವನ್ನು ಮುನ್ನಡೆಸುವ ಅಂಶಗಳನ್ನು ಒಳಗೊಂಡಿರಬೇಕು ಎಂದು ಹೇಳಿದರು.ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ.ಆರ್.ಬಿ.ಕೊಕಟನೂರ ವಹಿಸಿ ಮಾತನಾಡಿ, ಸಕಾಲಕ್ಕೆ ಸರಿಯಾದ ಸುದ್ದಿಯನ್ನು ಸಮಗ್ರವಾಗಿ ಜನರಿಗೆ ಒದಗಿಸುವುದು ಮಾಧ್ಯಮಗಳ ಜವಾಬ್ದಾರಿಯಾಗಿದೆ. ಪತ್ರಿಕಾ ಧರ್ಮವನ್ನು ಪಾಲಿಸಿ ನೀವು ಬಾವಿ ಪತ್ರಕರ್ತರಾಗಿ ಸಮಾಜಕ್ಕೆ ನಿಮ್ಮದೇ ಆದ ಕೊಡುಗೆಯನ್ನು ನೀಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಗೆಜೆಟೆಡ್ ಮ್ಯಾನೇಜರ್ ಅರುಣ ಸಕಟ, ಸುಪಿರಿಡೆಂಟ್ ರಾಜು ಹುದ್ದಾರ, ಉಪನ್ಯಾಸಕರಾದ ಗಿರೀಶ ಚವ್ಹಾಣ, ಸಂಜೀವ ಹಾದಿಮನಿ, ವಿಜಯಕುಮಾರ…