Author: admin

ಬೆಳಗಾವಿ: ಅಪೆಕ್ಸ್ ಬ್ಯಾಂಕ್ ನಿಂದ ಶಾಸಕ ರಮೇಶ್ ಜಾರಕಿಹೊಳಿ,  ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಬಂಡೆಪ್ಪ ಕಾಶಂಪುರ ಸಹಿತ ಹಲವರು ಸಾಲ ಪಡೆದಿದ್ದು, ಸಾಲ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,  ರಾಜ್ಯದ ಸುಮಾರು 24 ಜನ ಅಪೆಕ್ಸ್ ಬ್ಯಾಂಕಿನಿಂದ ಸುಮಾರು ಆರು ಸಾವಿರ ಕೋಟಿ ರೂ. ವರೆಗೆ ಸಾಲ ಪಡೆದಿದ್ದಾರೆ. ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹಾಗೂ ಬಂಡೆಪ್ಪ ಕಾಶೆಂಪುರ್ ಸೇರಿದಂತೆ ಅನೇಕರು ಸಾಲ ಪಡೆದಿದ್ದಾರೆ. ಸಾಲ ಪಡೆದವರಿಗೆ ನೋಟಿಸ್ ನೀಡಲಾಗಿದೆ ಎಂದರು. ರಮೇಶ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಸಾಲ ಬಾಕಿ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಾಲ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಲಾಗಿದೆ. ಸಾಲ ಕಟ್ಟದವರ ಆಸ್ತಿ ಜಪ್ತಿ ಹೇಗೆ ಮಾಡಿಕೊಳ್ಳುತ್ತದೆಯೋ ಹಾಗೆಯೇ ಅಪೆಕ್ಸ್ ಬ್ಯಾಂಕ್ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂಧು ಇದೇ ವೇಳೆ…

Read More

ಬೆಂಗಳೂರು: ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿಯೋರ್ವ ಎರಡು ದಿನದ ಬಳಿಕ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿಯಲ್ಲಿ ನಡೆದಿದೆ. 19 ವರ್ಷ ವಯಸ್ಸಿನ ಸೋಮನಾಥ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು,   ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಸೋಮನಾಥ್ 5ನೇ ತಾರೀಕಿನಂದು ಸ್ನೇಹಿತರು ನನ್ನ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅವರಿಗಿಂತ ಮೊದಲು ನಾನೇ ಸಾಯ್ತೀನಿ ಎಂದು ಡೆತ್ ನೋಟ್ ಬರೆದಿಟ್ಟು, ಮನೆಯಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ. ಈ ಬಗ್ಗೆ ಆತನ ಪೋಷಕರು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಇದಾದ ಬಳಿಕ ಮಾರತ ಹಳ್ಳಿ ಬಳಿ ಎಮ್ ಸ್ಯಾಂಡ್ ಅನ್ ಲೋಡ್ ಮಾಡುವ ಲಾರಿಯಲ್ಲಿ ಸೋಮನಾಥ್ ನ ಮೃತದೇಹ ಪತ್ತೆಯಾಗಿತ್ತು. ತಮಿಳುನಾಡಿನಿಂದ ಮರಳು ತುಂಬಿಕೊಂಡು ಬಂದಿದ್ದ ಟಿಪ್ಪರ್ ಲಾರಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಅಪರಿಚಿತ ಶವ ಯಾವುದೆಂದು ತಿಳಿಯಲು ತಮಿಳುನಾಡು ಕ್ವಾರಿ ಮತ್ತು ಕೆ.ಆರ್ .ಪುರಂ ಸ್ಟಾಂಡ್ ನಲ್ಲೆ ಪೊಲೀಸರು ವಿಚಾರಣೆ ಮಾಡಿದ್ದಾರೆ.ಈ  ವೇಳೆ ಹೊಸಕೋಟೆ ನಿವಾಸಿ ಎನ್ನುವುದು ತಿಳಿದು ಬಂದಿದೆ.…

Read More

ರಾಜಸ್ಥಾನ: ಮದುವೆ ಸಮಾರಂಭದಲ್ಲಿ ಕರೆಂಟ್ ಹೋದ ಕಾರಣ ವಧುಗಳಿಬ್ಬರು ಅದಲು-ಬದಲು ಆದ ಘಟನೆ ರಾಜಸ್ಥಾನದ ಉಜ್ಜೈನಿಯಲ್ಲಿ ನಡೆದಿದೆ. ರಾಜಸ್ಥಾನದ ಅಸ್ಲಾನಾ ಗ್ರಾಮದಲ್ಲಿ‌ ಮದುವೆ ಸಮಾರಂಭದಲ್ಲಿ ವಿದ್ಯುತ್ ಕೈಕೊಟ್ಟಿದೆ. ಪೂಜೆ ಪ್ರಾರಂಭಿಸಿ ಸಪ್ತಪದಿ ತುಳಿಯುವ ವೇಳೆ ಎರಡು ಜೋಡಿಗಳಿದ್ದ ಕಾರಣ ವಧುಗಳು ಅದಲು-ಬದಲಾಗಿದ್ದಾರೆ. ನಿಕಿತಾ‌ ಎಂಬ ವಧು ತಮ್ಮ ಭಾವಿ ಪತಿ ಗಣೇಶ್​ ಬದಲಿಗೆ ಭೋಲಾ ಕೈಹಿಡಿದಿದ್ದು, ಗಣೇಶ್​ನೊಂದಿಗೆ ಕರಿಷ್ಮಾ ಕೈಹಿಡಿದು ಕುಳಿತುಕೊಂಡಿದ್ದಾರೆ. ಮದುವೆಯ ಕೆಲ‌ಕಾರ್ಯ ನಡೆದ ಬಳಿಕ ಜೋಡಿ ಅದಲು- ಬದಲು ಆಗಿರುವುದು ತಿಳಿದು ಬಂದಿದೆ. ಬಳಿಕ ತುರಾತುರಿಯಲ್ಲಿ ಜೋಡಿಯನ್ನು‌ ಸರಿಪಡಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಕರಿಶೆಟ್ಟಿಹಳ್ಳಿ ಬಳಿ ತಡರಾತ್ರಿ ನಡೆದಿದೆ. ಇಲ್ಲಿನ ಚೌಕೇನಹಳ್ಳಿ ಗ್ರಾಮದ ನಿವಾಸಿ 40 ವರ್ಷ ವಯಸ್ಸಿನ ಮೂಡ್ಲಯ್ಯ ಹತ್ಯೆಯಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ತಡ ರಾತ್ರಿ ತೋಟದಿಂದ ಮನೆಯ ಕಡೆಗೆ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆನ್ನಲಾಗಿದೆ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆಗೆ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಹತ್ಯೆಯ ಬಳಿಕ ರಸ್ತೆ ಬದಿಯ ಕಾಲುವೆಗೆ ಮೃತದೇಹವನ್ನು  ಎಸೆದು ಹೋಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಗುಬ್ಬಿ ಸಿಪಿಐ ನಧಾಫ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ವ್ಯಕ್ತವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ನಾಯಕನಹಟ್ಟಿ: ಸಂವಿಧಾನ ಹಾಗೂ ಸಂಸ್ಕೃತಿ ಬದಲಾವಣೆಯ ನಡೆಗಳಿಂದ ದೇಶಕ್ಕೆ ಹೆಚ್ಚಿನ ಅಪಾಯವಿದೆ ಎಂದು ಮಾಜಿ ಸಚಿವ ಹೆಚ್. ಆಂಜನೇಯ ಹೇಳಿದರು. ಪಟ್ಟಣದ ತೇರುಬೀದಿಯಲ್ಲಿ ದಲಿತ ಸಂಘರ್ಷ ಸಮಿತಿ ಸೋಮವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಮತ್ತು ಬಾಬು ಜಗಜೀವನ್‍ರಾಂ ಜಯಂತ್ಯುತ್ಸವವನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಎಲ್ಲೆಡೆ ಸಂವಿಧಾನ ಬದಲಾವಣೆ ಮಾಡುತ್ತೇವೆ. ಹೊಸ ಸಂಸ್ಕೃತಿಯನ್ನು ಸೃಷ್ಟಿಸುತ್ತೇವೆ ಎಂಬ ಭ್ರಮೆಯಲ್ಲಿ ಕೆಲವು ರಾಜಕೀಯ ಪಕ್ಷಗಳಿವೆ. ಇದರಿಂದಾಗಿ ದೇಶದಲ್ಲಿ ಆತಂಕದ ವಾತಾವರಣ ಇದೆ ಎಂದರು. ಅಂಬೇಡ್ಕರ್ ಜಯಂತಿ ಇದೀಗ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಮುದಾಯಕ್ಕೆ ಸೇರಿದ 18 ಶಾಸಕರಿದ್ದರು. ಇದೀಗ 6ಕ್ಕೆ ಇಳಿದಿದೆ. ಸಮುದಾಯದ ಶಾಸಕರ ಸಂಖ್ಯೆ ಇಳಿಮುಖಕ್ಕೆ ಒಗ್ಗಟ್ಟಿನ ಕೊರತೆ ಕಾರಣವಾಗಿದೆ ಎಂದು ಅವರು ಇದೇ ವೇಳೆ ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರವಿದ್ದಾಗ ಎಸ್ ಸಿಪಿ, ಟಿಎಎಸ್ ಪಿ ಯೋಜನೆ ಜಾರಿಗೊಳಿಸಿದೆ. ಈಗ ಈ ಹಣ ಅನ್ಯ ಕಾರ್ಯಗಳಿಗೆ ಬಳಕೆಯಾಗುತ್ತಿದೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಲಂಬಾಣಿ, ಭೋವಿ ಸೇರಿ ಇತರೆ ಜಾತಿಗಳು ಮೀಸಲಾತಿಯನ್ನು…

Read More

ಪ್ರಮೋದ್ ಮುತಾಲಿಕ್‌ ರಂಥವರನ್ನ ಮೊದಲು ಒದ್ದು ಒಳಗೆ ಹಾಕಬೇಕು, ಇಂಥವರನ್ನ ಒದ್ದು ಒಳಗೆ ಹಾಕದೇ ಇದ್ದಲ್ಲಿ, ಸಮಾಜದಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಉಳಿಸಲಿಕ್ಕೆ ಕಷ್ಟ ಆಗುತ್ತೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಆಜಾನ್ ವಿರುದ್ಧ ಸುಪ್ರಭಾತ ವಿಚಾರವಾಗಿ ಬಾದಾಮಿಯ ಚಿಕ್ಕಮುಚ್ಚಳಗುಡ್ಡ ಹೆಲಿಪ್ಯಾಡ್‌ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ ಅವರು,  ಸರ್ಕಾರ ಇಂತಹ ವಿಷಯಗಳನ್ನ ಬೆಳೆಯೋದಕ್ಕೆ ಬಿಡಬಾರದು. ಮೌನವಾಗಿ ಒಪ್ಪಿಗೆ ಸೂಚಿಸುವುದನ್ನ ಬಿಡಬೇಕು ಎಂದರು. ಸಮಾಜದಲ್ಲಿ ಸಾಮರಸ್ಯ ಹಾಳು ಮಾಡಿದ್ರೆ ಆಮೇಲೆ ರಿಪೇರಿ ಮಾಡೋಕಾಗುತ್ತಾ? ಇದು  ರಾಮಸೇನೆಯೋ ? ರಾವಣ ಸೇನೆಯೋ? ಇವೆಲ್ಲಾ ಒಂದು ಕಡೆ ಇರಲಿ. ಸುಪ್ರೀಂ ಆದೇಶದಂತೆ ಸರ್ಕಾರ ಒಪ್ಪಿಗೆ ಕೊಡಲಿ. ಆ ಪ್ರಕಾರ ಹನುಮಾನ ಚಾಲೀಸಾ ಇವ್ರು ಓದಲಿ. ಅದಕ್ಕೆ ದೊಡ್ಡ ಪ್ರಚಾರ ಬೇಕಿಲ್ಲ. ನಮಗೆ ಸಂಕಷ್ಟ ಅಂದ್ರೆ ದಿನಾ ನಾವೆಲ್ಲ ಮನೆಯಲ್ಲೆ ಹನುಮಾನ ಚಾಲೀಸಾ ಹೇಳಿಕೊಳ್ಳಲ್ವಾ? ಆರೋಗ್ಯ ಸಮಸ್ಯೆ ಆದ್ರೆ, ಸಮಸ್ಯೆ ಉದ್ಭವ ಆದಾಗ ಮನೆಯಲ್ಲಿ ಹೇಳಿಕೊಳ್ಳುತ್ತೇವೆ. ಅದೇನು ದೊಡ್ಡ ಸಾಧನೆ ಅಲ್ಲ…

Read More

ಆಜಾನ್ ಗೆ ಪ್ರತಿಯಾಗಿ ಹನುಮಾನ್ ಚಾಲೀಸ, ಸುಪ್ರಭಾತ ಅಭಿಯಾನ ನಡೆಸುತ್ತಿರುವ ಸಂಘಟನೆಗಳ ವಿರುದ್ಧ ಕಾಂಗ್ರೆಸ್ ವಿಧಾನ ಪರಿಷತ್ ನಾಯಕ ಬಿ ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ಅಭಿಯಾನ ಪ್ರಾರಂಭ ಮಾಡುತ್ತಿರುವವರು ಅವರನ್ನು ಭಯೋತ್ಪಾದಕರು ಎಂದು ಕರೆಯಬೇಕು ಎಂದು ಹೇಳಿಕೆ ನೀಡಿದ್ದಾರೆ. ಅಭಿಯಾನ ನಡೆಸುತ್ತಿರುವವರನ್ನು ಯುಎಪಿಎ ಕಾಯ್ದೆಯಡಿಯಲ್ಲಿ ಬಂಧಿಸಬೇಕು. ಇವರೆಲ್ಲರೂ ಸಂಘ ಪರಿವಾರದವರ ವಿವಿಧ ಆಕ್ಟೋಪಸ್ ಇದ್ದಂತೆ ಎಂದು ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ. ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದೆ. ಇವರೆಲ್ಲರೂ ಸಂಘ ಪರಿವಾರದವರ ವಿವಿಧ ಆಕ್ಟೋಪಸ್ ಇದ್ದಂತೆ. ಸಮಾಜದಲ್ಲಿ ಶಾಂತಿಯನ್ನು ಕದಡಲು ಪ್ರಯತ್ನ ಮಾಡುತ್ತಿರುವ ಇವರನ್ನೆಲ್ಲ ಯುಎಪಿಎ ಅಡಿಯಲ್ಲಿ ಅರೆಸ್ಟ್  ಮಾಡಬೇಕು ಎಂದು  ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಬೆಂಗಳೂರು: ಮುಳಬಾಗಿಲು ಪಕ್ಷೇತರ ಶಾಸಕ, ಮಾಜಿ ಸಚಿವ ಹೆಚ್..ನಾಗೇಶ್ ಅವರು ಮತ್ತೆ ಕಾಂಗ್ರೆಸ್  ಗೆ ಸೇರ್ಪಡೆಯಾಗಲು ಸಿದ್ಧತೆ ನಡೆಸಿದ್ದಾರೆನ್ನಲಾಗಿದ್ದು,  ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯನವರ ಭೇಟಿ ಬಳಿಕ ಹೇಳಿಕೆ ನೀಡಿದ ಶಾಸಕ ಹೆಚ್.ನಾಗೇಶ್, ವರುಣಾ ಕ್ಷೇತ್ರದ ಕೆಲಸದ ನಿಮಿತ್ತ ಬಂದಿದ್ದೆ. ನಮ್ಮ ಸಂಬಂಧಿಯೊಬ್ಬರ ಕೆಲಸ ಆಗುವುದಿತ್ತು. ಹಾಗಾಗಿ ಅವರ ಮಗನ ಭೇಟಿಗೆ ಬಂದೆ, ಅವರಿಲ್ಲ‌ಹೋಗುತ್ತಿದ್ದೇನೆ. ಪ್ರತಿಪಕ್ಷ ನಾಯಕರಲ್ಲವೇ , ಗೌರವ ಕೊಡಲು ಬಂದಿದ್ದೆ. ನಾನು ಬಿಜೆಪಿ ಜತೆಯೇ ಗುರುತಿಸಿಕೊಂಡಿದ್ದೇನೆ. ಹಾಗಾಗಿ ಮುಂದೆ ಟಿಕೆಟ್ ಕೊಡಬೇಕಲ್ವೇ? ನೊಡೋಣ ಇನ್ನೂ ಚುನಾವಣೆಗೆ ಸಮಯವಿದೆ. ಕ್ಷೇತ್ರದ ಜನ ಏನು ಹೇಳುತ್ತಾರೆ ಅದರಂತೆ ಮಾಡುತ್ತೇನೆ ಎಂದರು. ಸಚಿವ ಸ್ಥಾನದಿಂದ ಕೈಬಿಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಆಗ ಮುಂದೆ ಕೊಡುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಈಗ ಆಸಮಯ ಬಂದಿದೆ ಏನು ಮಾಡುತ್ತಾರೆ ನೋಡೋಣ. ಸಚಿವ ಸ್ಥಾನ ಕೊಟ್ಟರೆ ಯಾರಿಗೆ ಬೇಡ ಹೇಳಿ. ನಾನು ಕಾಂಗ್ರೆಸ್ ಸೇರುವ ಬಗ್ಗೆ ಇನ್ನು ಚರ್ಚಿಸಿಲ್ಲ.…

Read More

ಮಂಗಳೂರು: ಪ್ರತಿ ನಾಗರಿಕನಿಗೆ ತೊಂದರೆಯಾಗದಂತೆ ನೋಡಿಕೊಳ್ಳೋದು ಸರ್ಕಾರದ ಜಬಾವ್ದಾರಿ. ಆದರೆ ದುರಾದೃಷ್ಟವಶಾತ್ ಸರ್ಕಾರ ಮುಂದೆ ಎಷ್ಟೇ ಮೊರೆ ಹೋದರೂ ಇದು ಸಾಧ್ಯವಾಗಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಆಝಾನ್ ವಿರುದ್ಧ ಸುಪ್ರಭಾತ ಅಭಿಯಾನದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,  ಬೆಳಗ್ಗಿನ ಅಜಾನ್ ಜಾತ್ಯತೀತ ರಾಷ್ಟ್ರಕ್ಕೆ ಹೇಳಿ ಮಾಡಿಸಿರೋದು ಅಲ್ಲ. ಅಲ್ಲಾ ಒಬ್ಬನೇ. ದೇವರು ಬೇರೆ ಯಾರೂ ದೇವರಿಲ್ಲ ಅನ್ನೋದನ್ನು ಪ್ರತಿಯೊಬ್ಬ ಹಿಂದೂ ಕೇಳೋಕೆ ಸಾಧ್ಯ ಇಲ್ಲ ಎಂದು ಅವರು ಟೀಕಿಸಿದರು. ಬೆಳಗ್ಗಿನ ಜಾವದ ಅಝಾನ್ ಎಲ್ಲರ ನಿದ್ದೆ ಹಾಳು ಮಾಡುತ್ತದೆ. ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಕೂಡಾ ಇದೆ. ಆದರೆ ಕರ್ನಾಟಕ ಸರ್ಕಾರ ಸುದೀರ್ಘ ನಿದ್ರೆಯಲ್ಲಿದೆ. ಸರ್ಕಾರಕ್ಕೆ ಎಷ್ಟೇ ಒತ್ತಡ ಹಾಕಿದರೂ ಬೆಳಗ್ಗಿನ ಆಝಾನ್ ಧ್ವನಿ ನಿಲ್ಲಿಸುವ ಪ್ರಯತ್ನ ಮಾಡುತ್ತಿಲ್ಲ  ಎಂದು ಆಕ್ರೋಶ ವ್ಯಕ್ತಪಡಿಸಿದರು. ನೀವು ಕಾನೂನು ಮೀರಿದವರನ್ನು ಹಿಡಿಯದಿದ್ದರೆ ನಾವೂ ಕಾನೂನು ಮೀರುತ್ತೇವೆ. ಹಿಡಿಯೋದಿದ್ದರೆ ಎಲ್ಲರನ್ನೂ ಹಿಡಿಯಿರಿ ಎಂಬ…

Read More

ಬೆಂಗಳೂರು: ದಿನ ಬೆಳಗಾದರೆ ಸರ್ಕಾರದ ಅಕ್ರಮ, ಭ್ರಷ್ಟಾಚಾರಗಳು ಬೆಳಕಿಗೆ ಬರುತ್ತಿವೆ. ನಿನ್ನೆ ಪತ್ರಿಕೆಯಲ್ಲಿ ಯಾವ ಸರ್ಕಾರಿ ಹುದ್ದೆಗೆ ಎಷ್ಟೆಷ್ಟು ದರ ನಿಗದಿಯಾಗಿದೆ ಎಂದು ವರದಿಯಾಗಿದೆ. ಇಷ್ಟೊಂದು ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಲು ಆಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಸರ್ಕಾರಕ್ಕೆ ಜನ ಹಾದಿ-ಬೀದಿಯಲ್ಲಿ ಉಗಿಯುತ್ತಿದ್ದು, ಮೊದಲು ಅವರು ತಮ್ಮ ಮುಖವನ್ನು ತೊಳೆದುಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ಅವರು ಹೇಳಿದರು. ಆಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಮಾನ ಮಾಡಿದೆ. ಈಗಾಗಲೇ ಪೊಲೀಸ್ ನವರು ಕೂಡ ನೊಟೀಸ್ ಜಾರಿ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿಗಳ ಜವಾಬ್ದಾರಿ ಎಂದರು. ಉದ್ದೇಶಪೂರ್ವಕವಾಗಿ ಈ ವಿಚಾರವನ್ನು ಕೆದಕಿ, ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಸರ್ಕಾರದ ವೈಫಲ್ಯ. ಇದನ್ನು ನಿಯಂತ್ರಿಸದಿದ್ದರೆ ರಾಜ್ಯದಲ್ಲಿ ಅಶಾಂತಿ, ಕೋಮು ಸಂಘರ್ಷ ಹೆಚ್ಚುತ್ತದೆ. ಮುಖ್ಯಮಂತ್ರಿಗಳು ಹಾಗೂ ಗೃಹ…

Read More