Subscribe to Updates
Get the latest creative news from FooBar about art, design and business.
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
- ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
- ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
Author: admin
ಬೆಳಗಾವಿ: ಸಾಲಭಾದೆ ತಾಳಲಾರದೆ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಲು ಹೋಗಿ, ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದಿದೆ. ಸಂಜಯ್ ಪಾಟೀಲ್(35) ಮೃತ ದುರ್ದೈವಿ. ಸಾಲಭಾದೆ ತಾಳಲಾರದೆ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾನೆ. ಈ ವೇಳೆ ಟವರ್ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಲಬುರಗಿ: ಸಿಡಿಲು ಬಡಿದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಸೇಡಂ ತಾಲೂಕಿನ ಕಡಚರ್ಲಾ ಗ್ರಾಮದಲ್ಲಿ ನಡೆದಿದೆ. ಪಿಲ್ಲಿಗುಂಟಾ ತಾಂಡಾ ನಿವಾಸಿಗಳಾದ ತುಳಚಾ ರಾಠೋಡ್(40), ಅವೀನ್ ರಾಠೋಡ್(16) ಮೃತ ದುರ್ದೈವಿಗಳು. ತಂದೆ-ಮಗ ಕೂಲಿ ಕೆಲಸಕ್ಕೆ ಹೋಗಿದ್ದಾಗ ಸಿಡಿಲು ಬಡಿದು ಮರಣ ಹೊಂದಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ : ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ಅವರು ಮಂಗಳವಾರ ನವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರ ಅಧಿಕೃತ ನಿವಾಸದ ಆವರಣದಲ್ಲಿ ನಡೆದ ಫ್ಲೆಕ್ಸಿ-ಫ್ಯುಯೆಲ್ ಸ್ಟ್ರಾಂಗ್ ಹೈಬ್ರಿಡ್ ಎಲೆಕ್ಟ್ರಿಕ್ ವೆಹಿಕಲ್ಸ್ (ಎಫ್ಎಫ್ವಿ-ಎಸ್ಎಚ್ಇವಿ) ಮೇಲಿನ ಮೊದಲ ಪ್ರಾಯೋಗಿಕ ಯೋಜನೆಯಾದ ಟೊಯೋಟಾ ಕೊರೊಲ್ಲಾ ಆಲ್ಟಿಸ್ ಹೈಬ್ರಿಡ್ಗೆ ಚಾಲನೆ ನೀಡಿದರು. ಭಾರತದಲ್ಲಿ ಹೈಬ್ರಿಡ್ ವಾಹನಗಳ ಕಾರ್ಯಸಾಧ್ಯತೆಯನ್ನು ನಿರ್ಣಯಿಸುವುದು ಪೈಲಟ್ ಯೋಜನೆಯ ಗುರಿಯಾಗಿದೆ. ಇದು ಮಾಲಿನ್ಯವನ್ನು ಕಡಿಮೆ ಮಾಡಲು ಎಥೆನಾಲ್-ಚಾಲಿತ ಫ್ಲೆಕ್ಸ್ ಇಂಧನ ವಾಹನಗಳಲ್ಲಿ ಚಲಿಸಬಹುದು ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಎಲೆಕ್ಟ್ರಿಕ್-ಹೈಬ್ರಿಡ್ ವಾಹನಗಳಲ್ಲಿ ಎಥೆನಾಲ್ ಬಳಕೆಯನ್ನು ಸಕ್ರಿಯಗೊಳಿಸುತ್ತದೆ. ಈ ವೇಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ಸಚಿವ ಗಡ್ಕರಿ ಅವರು, ಟಿವಿಎಸ್, ಬಜಾಜ್ ಮತ್ತು ಹೀರೋ ಮೋಟೊಕಾರ್ಪ್ ಈಗಾಗಲೇ ಎಥೆನಾಲ್ ವಾಹನಗಳೊಂದಿಗೆ ಸಿದ್ಧವಾಗಿದ್ದು, ನಾವು ಎಲೆಕ್ಟ್ರಿಕ್, ಎಥೆನಾಲ್, ಮೆಥನಾಲ್, ಬಯೋಡೀಸೆಲ್ ಮತ್ತು ಹೈಡ್ರೋಜನ್…
ಬೆಂಗಳೂರು : ಇಂದು ಮಳೆ ಪೀಡಿತ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಇಂದು ವಿಜಯನಗರ ಜಿಲ್ಲೆಯ ಕಮಲಾಪುರದ ಹೋಟೆಲ್ ನಿಂದ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ. ಬೆಳಗಾವಿ, ಧಾರವಾಡ, ದಾವಣಗೆರೆ, ವಿಜಯಪುರ, ಗದಗ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಬೀದರ್, ಕೊಪ್ಪಳ ಮತ್ತು ಮೈಸೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ಮಳೆಯಿಂದಾಗಿ ಉಂಟಾಗಿರುವ ನಷ್ಟದ ಬಗ್ಗೆ ಮಾಹಿತಿ ಸಂಗ್ರಹಿಸಿ, ಪರಿಸ್ಥಿತಿ ನಿಭಾಯಿಸುವ ಸಂಬಂಧ ಸಲಹೆ ಸೂಚನೆ ನೀಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರುಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ. ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಕುಟುಂಬಗಳಿಗೆ 1000 ರೂ. ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ಪಾವತಿಸಿ, ನೊಂದಾಯಿಸಬಹುದು. ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1137 ಸಿವಿಲ್ ಕಾನಸ್ಟೇಬಲ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅಕ್ಟೋಬರ್ 20 ರಿಂದ ನವೆಂಬರ್ 21 ರವರೆಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ನಲ್ಲಿ ಅಧಿಕೃತ ಬ್ಯಾಂಕ್ ಶಾಲೆಗಳಲ್ಲಿ ಶುಲ್ಕ ಪಾವತಿ ಮಾಡಲು ನವೆಂಬರ್ 23 ಕೊನೆಯ ದಿನಾಂಕವಾಗಿದೆ. ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು. ಹುದ್ದೆಗಳ ಸಂಖ್ಯೆ : ಒಟ್ಟು 1137 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕ 21/11/2022 ಹೊಂದಿರಬೇಕು. ವಯೋಮಾನ : ದಿನಾಂಕ 21 ನವೆಂಬರ್, 2022ಕ್ಕೆ ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ಪ.ಪಂ/ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ, ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು…
ಕೊಪ್ಪಳ: ಬಿಜೆಪಿ ಸಂಕಲ್ಪ ಯಾತ್ರೆಯಲ್ಲೂ ಸಹ ಕಳ್ಳರು ತಮ್ಮ ಕರಾಮತ್ತು ತೋರಿಸಿದ್ದಾರೆ. ಜಿಲ್ಲೆಯ ಕುಷ್ಟಗಿಯಲ್ಲಿ ಆಯೋಜಿಸಿದ್ದ ಜನಸಂಕಲ್ಪಯಾತ್ರೆಯಲ್ಲಿ ಹಣ, ಮೊಬೈಲ್ ಕಳ್ಳತನವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ನೂರಾರು ಪೊಲೀಸರು ಇದ್ದರೂ ಸಹ ನಾಲ್ವರು ಪತ್ರಕರ್ತರು ಸೇರಿ 26 ಜನರ ಹಣ, ಮೊಬೈಲ್ ಕಳ್ಳತನವಾಗಿದ್ದು, ಈ ಬಗ್ಗೆ 26 ಜನರು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಭೆಯಲ್ಲಿ ಬಹಳಷ್ಟು ಜನಸಂಖ್ಯೆ ಸೇರಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು, ಸಮಾವೇಶಕ್ಕೆ ಆಗಮಿಸಿದ್ದವರ ಹಣ, ಮೊಬೈಲ್ ಕಳ್ಳತನ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೈಲಹೊಂಗಲ: ಕೃಷಿ ಚುಟುವಟಿಕೆಗೆ ಮಾಡಿದ ಸಾಲ ಮಾಡಿ ಅದನ್ನು ತೀರಿಸಲಾಗದೆ ಬೆಳಗಾವಿಯ ವಿನಾಯಕ ನಗರದಲ್ಲಿ ತನ್ನ ಬಾಡಿಗೆ ಮನೆಯಲ್ಲಿ ನಿನ್ನೆ ತನ್ನ ಒಂದು ವರ್ಷದ ಮಗುವಿಗೆ ಕಟ್ಟಿದ್ದ ಜೋಳಿಗೆಗೆ ನೇಣು ಹಾಕಿಕೊಂಡು ರೈತನೋರ್ವ ದಾರುಣ ಸಾವು ಕಂಡಿದ್ದಾನೆ. ಸಮೀಪದ ಹೊಸೂರ ಗ್ರಾಮದ ಯುವ ರೈತ ರಾಜಶೇಖರ ಫಕೀರಪ್ಪ ಬೋಳೆತ್ತಿನ (34) ಮೃತ ದುರ್ದೈವಿ. ಗ್ರಾಮದಲ್ಲಿ ತನ್ನ ತಂದೆಯ ಹೆಸರಿನಲ್ಲಿದ್ದ ಜಮಿನಿನಲ್ಲಿ ಕೃಷಿ ಮಾಡಿ ಅತಿವೃಷ್ಟಿ ಹಾಗೂ ಕೊರೊನಾ ಹಾವಳಿ ಮತ್ತು ಈ ವರ್ಷದ ವಿಪರೀತ ಮಳೆಯಿಂದ ಜಮೀನಿನಲ್ಲಿ ಬೆಳೆದಿದ್ದ ಸೋಯಾಬಿನ್ ಬೆಳೆಯು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಕಂಗಾಲಾಗಿದ್ದಾರೆ. ತಂದೆಯ ಹೆಸರಿನಲ್ಲಿ ಕೈಗಡ, ಬ್ಯಾಂಕ್ ಮತ್ತು ಇದ್ದ ಜಮೀನಿನಲ್ಲಿ ಕೆಲ ಭಾಗ ಬೇರೆಯವರಿಗೆ ಗಿರವಿ ಇಟ್ಟು ಲಕ್ಷಾಂತರ ರೂಪಾಯಿ ಮಾಡಿದ ಸಾಲಬಾಧೆಗಳಿಂದ ಹೆದರಿ ತನ್ನ ಮಗನ ಪ್ರಥಮ ಹುಟ್ಟುಹಬ್ಬ ಆಚರಿಸಿ ಮರುದಿನವೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಬೆಂಗಳೂರಿನಲ್ಲಿ ಡಿನೋಟಿಫಿಕೇಶನ್ ಅಕ್ರಮ ಆರೋಪ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಸಿದ್ದಾಪುರ ಮತ್ತು ಭೂಪಸಂದ್ರದಲ್ಲಿ ಸಿದ್ದಾಪುರ-200 ಕೋಟಿ ಅಕ್ರಮ ಮತ್ತು ಭೂಪಸಂದ್ರದಲ್ಲಿ 350 ಕೋಟಿ ಅಕ್ರಮದ ಆರೋಪ ಕೇಳಿ ಬಂದಿತ್ತು. ಈಗ ಡಿನೋಟಿಫಿಕೇಶನ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳ ಸಮೇತ ಬಿಜೆಪಿ ನಾಯಕ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸತೀಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಕಡೆಗಣಿಸುವ ಮೂಲಕ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ 3ನೇ ರೈಲ್ವೆ ಗೇಟ್ ಫ್ಲೈ ಓವರ್ ಉದ್ಘಾಟನೆ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬಹಿಷ್ಕರಿಸಿದರು. ರೈಲ್ವೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರನ್ನೂ ಕಡೆಗಣಿಸುವ ಮೂಲಕ ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಾನು ಕಾರ್ಯಕ್ರಮಕ್ಕೆ ಹಾಜರಾಗದೆ ನನ್ನ ಪ್ರತಿಭಟನೆಯನ್ನು ದಾಖಲಿಸುತ್ತಿದ್ದೇನೆ. ಈ ಕುರಿತು ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದು ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕೋರಲಾಗುವುದು ಎಂದು ಚನ್ನರಾಜ ಹಟ್ಟಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy