Subscribe to Updates
Get the latest creative news from FooBar about art, design and business.
- ತುಮಕೂರು: ಬಸ್ ನಲ್ಲಿ ಎಂಜಲು ಉಗುಳಿದ ಮಹಿಳೆಯನ್ನು ಪ್ರಶ್ನಿಸಿದ ಕಂಡಕ್ಟರ್ ಗೆ ಥಳಿತ!
- ಮೇವಿಗೆ ತಗುಲಿದ ಬೆಂಕಿ: ಜಾನುವಾರುಗಳಿಗೆ ಮೇವಿನ ಕೊರತೆ
- ಪೊಲೀಸರ ಮುಂದೆ ಶರಣಾದ 17 ಮಂದಿ ನಕ್ಸಲಿಯರು: 9 ನಕ್ಸಲಿಯರ ತಲೆಗೆ 24 ಲಕ್ಷ ಬಹುಮಾನ ಘೋಷಿಸಲಾಗಿತ್ತು!
- ಶೇ.40ರಷ್ಟು ಕಮಿಷನ್: ನಾಗಮೋಹನ್ ದಾಸ್ ಆಯೋಗ ರಾಜಕೀಯ ಪ್ರೇರಿತ: ಆರ್.ಅಶೋಕ್ ಟೀಕೆ
- ರೂಪಾಯಿ ಚಿಹ್ನೆ ಬದಲಿಸಿದ ತಮಿಳುನಾಡು ಸರ್ಕಾರ: ಸಚಿವೆ ನಿರ್ಮಲಾ ಕಿಡಿ
- ಕರ್ತವ್ಯದಲ್ಲಿದ್ದ ಅಂಗನವಾಡಿ ಶಿಕ್ಷಕಿ ಮೇಲೆ ಹಲ್ಲೆ: ದೂರು ದಾಖಲು
- ದ್ವಿತೀಯ ಪಿಯುಸಿ ಪರೀಕ್ಷೆ : 984 ವಿದ್ಯಾರ್ಥಿಗಳು ಗೈರು
- ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಹಿರಿಯ ನಾಯಕರೊಂದಿಗೆ ಸಭೆ ನಡೆಸಲು ಆಯೋಗ ಸೂಚನೆ
Author: admin
ಉಳ್ಳಾಲ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರ ಫ್ಲೈಓವರ್ ನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ನಡೆದಿದೆ. ಕುಂಪಲ ನಿವಾಸಿ 50 ವರ್ಷ ವಯಸ್ಸಿನ ಸುಬ್ರಹ್ಮಣ್ಯ ಎಂಬವರು ಮೃತಪಟ್ಟ ದ್ವಿಚಕ್ರ ಸವಾರ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕುಂಪಲ ಕಡೆಗೆ ಅವರು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸುಬ್ರಹ್ಮಣ್ಯ ಅವರು, ರಸ್ತೆಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿದಂತೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂದೆ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. ಇಂದು ನಟ ಶಿವರಾಜ್ ಕುಮಾರ್ ಅವರ ಭಜರಂಗಿ ಸಿನಿಮಾವನ್ನು ನೋಡಲು ಥಿಯೇಟರ್ ಗೆ ಹೋಗ ಬೇಕಿತ್ತು. ಅಷ್ಟರಲ್ಲೇ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಆಸ್ಪತ್ರೆಗಳ ಮೂಲಗಳ ಪ್ರಕಾರ ನಟ ಪುನೀತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ಅಪ್ಪು ವರ್ಕ್ಔಟ್ ಮಾಡುತ್ತಿದ್ದರು. ಆ ವೇಳೆ ಕುಸಿದು ಬಿದ್ದ ಅಪ್ಪು ಅವರನ್ನ ಕೂಡಲೇ ರಮಣಶ್ರೀ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ವಿಕ್ರಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ಹಾವೇರಿ, ಹಾನಗಲ್, ವಿಜಯಪುರದ ಸಿಂದಗಿ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಂದು ಮನೆ ಮನೆ ಪ್ರಚಾರ ಮಾತ್ರವೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿರುವ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ. ಬಿಜೆಪಿಯವರು ಸಿಂದಗಿಯ ಡಂಬಳದಲ್ಲಿ 1 ಓಟಿಗೆ 1 ಸಾವಿರ ರೂಪಾಯಿ ಹಂಚುತ್ತಿರುವ ದೃಶ್ಯ ವೈರಲ್ ಆಗಿದೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಬಿಜೆಪಿಯವರು ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿದ್ದು, ಬಿಜೆಪಿಯಿಂದ 30-40 ಲಕ್ಷ ಹಣ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇನ್ನೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ವಿಡಿಯೋವೊಂದನ್ನು ಹಂಚಿಕೊಂಡು, ಬಿಜೆಪಿ ಕಾರ್ಯಕರ್ತರು ಹಣ ಹಂಚುತ್ತಿರುವ ದೃಶ್ಯವನ್ನು ತೋರಿಸಿದ್ದಾರೆ.
ದಾವಣಗೆರೆ: ಶಿಕ್ಷಕರನ್ನು ನೇಮಕಾತಿ ಮಾಡಿದ್ದು ಮಕ್ಕಳಿಗೆ ಪಾಠ ಮಾಡಲು, ಸಂಸಾರ ನೋಡಿಕೊಳ್ಳಲು ಅಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದು, ಶಿಕ್ಷಕರ ಸಮಸ್ಯೆಗಿಂತ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕು ಎಂದು ಅವರು ಹೇಳಿದರು. ದಾವಣಗೆರೆ ಜಿಲ್ಲೆ ಬೆಳಲಗೆರೆ ಗ್ರಾಮದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಳೆದ 3 ವರ್ಷದಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಿಂತಿತ್ತು. 2 ದಿನದಿಂದ ವರ್ಗಾವಣೆ ಪ್ರಕ್ರಿಯೆ ಮತ್ತೆ ಶುರುವಾಗಿದೆ. ರಾಜ್ಯದ ಎಲ್ಲಾ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಕೆಲ ವೈಯಕ್ತಿಕ ಸಮಸ್ಯೆಯನ್ನು ಸಾಮೂಹಿಕ ಸಮಸ್ಯೆ ಎಂದು ಬಿಂಬಿಸಲಾಗದು. ಶಿಕ್ಷಕ ವೃತ್ತಿಗೆ ಸೇರುವಾಗ ಜಿಲ್ಲಾವಾರು ಆಯ್ಕೆ ಗೊತ್ತಿರಲಿಲ್ಲವೆ? ನಾವು ಶಿಕ್ಷಕರನ್ನು ನೇಮಕ ಮಾಡಿರುವುದು ಪಾಠ ಮಾಡಲಿಕ್ಕೆ. ಸಂಸಾರ ನೋಡಿಕೊಳ್ಳುವುದಕ್ಕಲ್ಲ ಎಂದು ಬಿ.ಸಿ.ನಾಗೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶಿಕ್ಷಕರ ಸಮಸ್ಯೆಗಿಂತ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕು. ನಂತರ ಜಿಲ್ಲಾವಾರು ಶಿಕ್ಷಕರ ಸಮಸ್ಯೆ ಬಗೆಹರಿಸುತ್ತೇವೆ. ಸದ್ಯದಲ್ಲೇ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತೇವೆ ಎಂದು ಅವರು ಹೇಳಿದರು. ಶಿಕ್ಷಕರ ಸಮಸ್ಯೆ ಸಂಬಂಧ…
ಕಲಬುರ್ಗಿ: ತಂಗಿಯನ್ನು ಪ್ರೀತಿಸಿದ್ದಕ್ಕೆ ಆಕೆಯ ಅಣ್ಣ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಹೊರವಲಯದ ಕಾಳನೂರ್ ಡಾಬಾ ಬಳಿಯಲ್ಲಿ ನಡೆದಿದ್ದು, ಪ್ರಾಣ ಸ್ನೇಹಿತರಾಗಿದ್ದ ಇವರ ನಡುವೆ ಪ್ರೀತಿ ವಿಚಾರ ಒಡಕು ಮೂಡಿಸಿತ್ತು ಎನ್ನಲಾಗಿದೆ. 21 ವರ್ಷ ವಯಸ್ಸಿನ ಆಕಾಶ್ ಹತ್ಯೆಗೀಡಾದ ಯುವಕನಾಗಿದ್ದು, ಈತ ಓಂ ನಗರ ಕಾಲನಿಯ ಗ್ಯಾರೇಜ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತನ ಸ್ನೇಹಿತ ಶ್ರೀನಿಧಿ ಎಂಬಾತನ ತಂಗಿಯನ್ನು ಆಕಾಶ್ ಪ್ರೀತಿಸುತ್ತಿದ್ದು, ಈ ಬಗ್ಗೆ ಸಾಕಷ್ಟು ಬುದ್ಧಿ ಹೇಳಿದರೂ, ಆತ ಪ್ರೀತಿಸುವುದನ್ನು ಬಿಡಲಿಲ್ಲ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಶ್ರೀನಿಧಿಯ ತಂಗಿಯ ಜೊತೆಗೆ ಆಕಾಶ್ ನಾಪತ್ತೆಯಾಗಿದ್ದ. ನಮ್ಮ ಮನೆಯಲ್ಲಿಯೇ ಬಂದು ಕೊಂಡು ಇದ್ದು, ನನ್ನ ತಂಗಿಯ ಕೈಯಿಂದಲೇ ರಾಖಿ ಕಟ್ಟಿಸಿಕೊಂಡು ಇದೀಗ ಆಕೆಯ ಜೊತೆಗೆ ಆಕಾಶ ಪರಾರಿಯಾಗಿರುವ ವಿಚಾರದಿಂದ ಶ್ರೀನಿಧಿ ತೀವ್ರವಾಗಿ ಆಕ್ರೋಶಗೊಂಡಿದ್ದ ಎನ್ನಲಾಗಿದೆ. ತಂಗಿಯ ಜೊತೆಗೆ ಪರಾರಿಯಾಗಿದ್ದ ಆಕಾಶ್ ವಾಪಸ್ ಊರಿಗೆ ಬರುತ್ತಿದ್ದಂತೆಯೇ ಶ್ರೀನಿಧಿ, ಆಕಾಶ್ ನ ಹತ್ಯೆಗೆ ಸಂಚು ಹಾಕಿದ್ದಾನೆ. ಹೊರಗೆ ಸುತ್ತಾಡಿ ಬರೋಣ…
ಧಾರವಾಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತನ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಗೋವಾದಿಂದ ಬಂದಿರುವ ಐವರು ಐಟಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಡಿ.ಕೆ.ಶಿವಕುಮಾರ್ ಅವರ ಆಪ್ತ, ಗುತ್ತಿಗೆದಾರ ಯು.ಬಿ.ಶೆಟ್ಟಿ ಮನೆಗೆ ಐಟಿ ದಾಳಿ ನಡೆದಿದ್ದು, ಧಾರವಾಡದ ದಾಸನಕೊಪ್ಪ ಸರ್ಕಲ್ ನಲ್ಲಿ ಯು.ಬಿ.ಶೆಟ್ಟಿ ಮನೆ ಇದೆ. ಇದೇ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಆಪ್ತರಾದ ರಾಬರ್ಟ್ ದದ್ದಾಪುರಿ ಮತ್ತು ಆನಂದ ಜಾಧವ್ಗೆ ಐಟಿ ಅಧಿಕಾರಿಗಳು ಬುಲಾವ್ ನೀಡಿದ್ದಾರೆ. ಕಾಂಗ್ರೆಸ್ ಮುಖಂಡರಿಬ್ಬರೂ ಯು.ಬಿ. ಶೆಟ್ಟಿ ಮನೆಗೆ ಆಗಮಿಸಿದಾಗ ಅವರನ್ನೂ ಅಧಿಕಾರಿಗಳು ಮನೆಯೊಳಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ. ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಬರ್ಟ್ ದದ್ದಾಪುರಿ, ನಮಗೆ ಒಳಗೆ ಹೋಗಲು ಬಿಡಲಿಲ್ಲ. ಬಳಿಕ ಶೆಟ್ಟಿ ಅವರೇ ಫೋನ್ ಮಾಡಿದರು. ಇಬ್ಬರು ಸಾಕ್ಷಿ ಬೇಕು ಅಂತಾ ಕೇಳಿದರು. ಇಬ್ಬರು ಸಾಕ್ಷಿದಾರರನ್ನು ಕೊಟ್ಟಿದ್ದೇವೆ. ಇತ್ತೀಚಿಗೆ ಅವರು ಶಿಕ್ಷಣ ಕ್ಷೇತ್ರಕ್ಕೆ ಬಂದಿದ್ದಾರೆ. ಇತ್ತೀಚಿಗೆ ಗುತ್ತಿಗೆ ಕಾಮಗಾರಿ ಬಿಟ್ಟಿದ್ದಾರೆ. 80 ನೇ ಇಸ್ವಿಯಿಂದಲೂ…
ಜಗಿತ್ತಲ: ಮೂವರು ಸ್ನೇಹಿತೆಯರು ಒಂದೇ ದಿನ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ತೆಲಂಗಾಣದ ಜಗಿತ್ತಲ ಜಿಲ್ಲೆಯಲ್ಲಿ ನಡೆದಿದ್ದು, ಈ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. 19 ವರ್ಷ ವಯಸ್ಸಿನ ಗಂಗಾಜಲ, 19 ವರ್ಷದ ಮಲ್ಲಿಕಾ ಮತ್ತು 16 ವರ್ಷ ವಯಸ್ಸಿನ ವಂದನಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ಮೂವರು ಕೂಡ ಸಂಬಂಧಿಕರಾಗಿದ್ದು, ಸಣ್ಣ ವಯಸ್ಸಿನಿಂದಲೇ ಸ್ನೇಹಿತೆಯರಾಗಿದ್ದರು ಎನ್ನಲಾಗಿದೆ. ಗಂಗಾಜಲ ಮತ್ತು ಮಲ್ಲಿಕಾಗೆ ಕಳೆದ ಆಗಸ್ಟ್ ನಲ್ಲಿ ಮದುವೆಯಾಗಿತ್ತು. ವಂದನಾ ಓದು ಮುಂದುವರಿಸಿದ್ದಳು. ಈ ಪೈಕಿ ಮಲ್ಲಿಕಾ ಅನಾರೋಗ್ಯದಿಂದ ಬಳಲುತ್ತಿದ್ದಳು. ಮತ್ತು 10 ದಿನಗಳ ಹಿಂದೆಯಷ್ಟೇ ಆಕೆ ವೈದ್ಯಕೀಯ ಪರೀಕ್ಷೆ ಬರೆಯಲು ತವರಿಗೆ ಬಂದಿದ್ದಳು. ಗಂಗಾಜಲ ಕೂಡ ವಾರದ ಹಿಂದೆ ತವರಿಗೆ ಬಂದಿದ್ದಳು. ಬುಧವಾರ ಸಂಜೆ ಇವರು ಮೂವರು ಕೂಡ ಶಾಪಿಂಗ್ ಗೆ ಎಂದು ಮನೆಯಲ್ಲಿ ಹೇಳಿ ತೆರಳಿದ್ದರು. ಆದರೆ, ರಾತ್ರಿಯಾದರೂ ಮನೆಗೆ ತಲುಪದ ಕಾರಣ ಕುಟುಂಬಸ್ಥರು ಆತಂಕಕ್ಕೀಡಾದರು. ಮರುದಿನ ಬೆಳಗ್ಗೆ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ತೀವ್ರ ಹುಡುಕಾಟದ ಬಳಿಕ ಧರ್ಮಸಮುದ್ರಂ ಕೆರೆಯಲ್ಲಿ ಇವರ…
ಮಲಪ್ಪುರಂ: 17 ವರ್ಷ ವಯಸ್ಸಿನ ಬಾಲಕಿಯೋರ್ವಳು ಯೂಟ್ಯೂಬ್ ವಿಡಿಯೋ ನೋಡಿ ಸ್ವಯಂ ಹೆರಿಗೆ ಮಾಡಿಕೊಂಡ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿ ಗರ್ಭಿಣಿಯಾಗಲು ಕಾರಣನಾದ 21 ವರ್ಷ ವಯಸ್ಸಿನ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಕ್ಟೋಬರ್ 20ರಂದು ಹುಡುಗಿ ಮಗುವಿಗೆ ಜನ್ಮ ನೀಡಿದ್ದು, ಯೂಟ್ಯೂಬ್ ವಿಡಿಯೋಗಳನ್ನು ನೋಡಿಕೊಂಡು ಸ್ವಯಂ ಹೆರಿಗೆ ಮಾಡಿಸಿಕೊಂಡಿದ್ದಾಳೆ. ಹೆರಿಗೆಗೆ ಹುಡುಗಿ ಹೊರಗಿಯ ಯಾರ ಸಹಾಯವನ್ನು ಕೂಡ ಪಡೆದುಕೊಂಡಿಲ್ಲ ಎಂದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಸದ್ಯ ಮಂಜೇರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಲಾಗಿದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಾಲಕಿ ಗರ್ಭಿಣಿಯಾಗಲು ಕಾರಣನಾಗಿದ್ದ 21 ವರ್ಷ ವಯಸ್ಸಿನ ಯುವಕನನ್ನು ಪೊಲೀಸರು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತ ಬಾಲಕಿಯ ತಾಯಿ ದೃಷ್ಟಿ ಹೀನರಾಗಿದ್ದು, ತಂದೆ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ತಂದೆ ರಾತ್ರಿ ಕರ್ತವ್ಯದಲ್ಲಿರುತ್ತಿದ್ದರು. ಬಾಲಕಿ ತನ್ನ ಮೊಬೈಲ್ ನೊಂದಿಗೆ ಕೋಣೆಯಲ್ಲಿಯೇ…
ನವದೆಹಲಿ: ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದ್ದು, ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾ. ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣದ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಕೇಂದ್ರ ಸರ್ಕಾರ ವಾದಿಸಿದ್ದು, ಈ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಸಮಿತಿ ರಚಿಸುವ ಮನವಿಗೆ ಒಪ್ಪಿಗೆ ನೀಡಿದ್ದೇವೆ ಎಂದು ಹೇಳಿದೆ. ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣದಲ್ಲಿ ಕಾನೂನು ಎತ್ತಿ ಹಿಡಿಯುವುದೇ ನಮ್ಮ ಉದ್ದೇಶ ಎಂದು ಸಾರಿರುವ ಸುಪ್ರೀಂ ಕೋರ್ಟ್ , ರಾಜಕೀಯ ಚರ್ಚೆಗೆ ಹೋಗದೇ ಮೌಲ್ಯ ಎತ್ತಿ ಹಿಡಿಯಲು ಶ್ರಮಪಡಬೇಕು. ಪ್ರತಿಯೊಬ್ಬ ಭಾರತೀಯನಿಗೂ ಖಾಸಗಿತನದ ರಕ್ಷಣೆ ನೀಡಬೇಕು ಎಂದು ಹೇಳಿದೆ. ನಾವು ಮಾಹಿತಿಯ ಯುಗದಲ್ಲಿ ಬದುಕುತ್ತಿದ್ದೇವೆ. ಕೆಲ ಅರ್ಜಿಗಳು ಕೇಂದ್ರ ಸರ್ಕಾರದ ನಿಷ್ಕ್ರಿಯತೆ ಬಗ್ಗೆ ಪ್ರಸ್ತಾಪಿಸಿವೆ. ಈ ತೀರ್ಪಿನಲ್ಲಿ ನಾವು ಖಾಸಗಿತನದ ಹಕ್ಕಿನ ಬಗ್ಗೆ ಚರ್ಚಿಸಿದ್ದೇವೆ. ಇದು ಅಭಿವ್ಯಕ್ತಿ…
ನವದೆಹಲಿ: ಸಣ್ಣ ಮಕ್ಕಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊಸ ರಸ್ತೆ ಸುರಕ್ಷತಾ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯಮದ ಪ್ರಕಾರ, 4 ವರ್ಷ ವಯಸ್ಸಿನೊಳಗಿನ ಮಕ್ಕಳನ್ನು ಬೈಕ್ ನ(ದ್ವಿಚಕ್ರ ವಾಹನ) ಹಿಂಬದಿಯಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರು ಗಂಟೆಗೆ 40 ಕಿ.ಮೀ. ಮೀರಬಾರದು. 9 ತಿಂಗಳಿನಿಂದ 4 ವರ್ಷದೊಳಗಿನ ಮಕ್ಕಳಿಗೆ ಕ್ರ್ಯಾಶ್ ಹೆಲ್ಮೆಟ್ ತೊಡಿಸಿದ ಬಳಿಕ ಬೈಕ್ ನಲ್ಲಿ ಪ್ರಯಾಣಿಸಬೇಕು ಎಂದು ಹೇಳಲಾಗಿದೆ. ಇನ್ನೂ ಹಿಂಬದಿಯಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುವುದಾದರೆ, ಬೈಕ್ ಸವಾರನನ್ನು ಕೂಡಿಸುವಂತೆ ಸುರಕ್ಷತಾ ಪಟ್ಟಿಯನ್ನು ಒದಗಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.