Author: admin

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥರವರನ್ನು ಯಾರೋ ಏನೋ ಹೇಳುತ್ತಾರೆ ಎಂದು ಗಡಿಪಾರು ಮಾಡಲು ಆಗುವುದಿಲ್ಲ. ಅಷ್ಟಕ್ಕೂ ಅವರು ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಇಂದಿಲ್ಲಿ ಪ್ರಶ್ನಿಸಿದರು.ನಗರದಲ್ಲಿ ಜಿ.ಪಂ. ಕೆಡಿಪಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಪಾರು ಮಾಡಬೇಕೆಂದರೆ ಅದಕ್ಕೆ ಆದಂತಹ ನಿಯಮಾವಳಿಗಳಿವೆ. ಈ ರೀತಿ ಮಾತನಾಡುವವರಿಗೆ ಆ ನಿಯಮಾವಳಿಗಳ ಬಗ್ಗೆ ಗೊತ್ತಿಲ್ಲ ಎಂದರು.ರೋಹಿತ್ ಚಕ್ರತೀರ್ಥ ಗಡಿಪಾರು ಆಗುವಂತಹ ಅಪರಾಧ ಏನು ಮಾಡಿದ್ದಾರೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳುತ್ತಾರೆ ಎಂದು ಅದನ್ನೆಲ್ಲ ನಾವು ಕೇಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.ಬಸವಣ್ಣನ ಪಠ್ಯ ತಿರುಚಲಾಗಿದೆ ಎಂದು ಸ್ವಾಮೀಜಿಯವರು ಸಿಟ್ಟಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಶಿಕ್ಷಣ ಸಚಿವರು ಆ ಬಗ್ಗೆ ಉತ್ತರ ಕೊಟ್ಟಿದ್ದಾರೆ. ಅಲ್ಲದೆ ಸ್ವಾಮೀಜಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು. ಈ ಘಟನೆ 2017ಲ್ಲಿ ಆಗಿರುವಂತಹದ್ದು. ಈಗಾಗಲೇ ಆ ಬಗ್ಗೆ ಕಾಂಗ್ರೆಸ್ ಸರ್ಕಾರದ…

Read More

ಸುಮಾರು 38 ಸಾವಿರ ಜನಸಂಖ್ಯೆಗೆ ಅನುಗುಣವಾಗಿ ವಾರ್ಡ್‌ಗಳ ಮರುವಿಂಗಡಣೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2011ಸಾಲಿನ ಜನಗಣತಿ ಪ್ರಕಾರ 243ವಾರ್ಡ್ ನಿಗದಿ ಮಾಡಲಾಗಿದ್ದು, ಪ್ರತಿ ವಾರ್ಡ್ ನಲ್ಲಿ ೩೮ ಸಾವಿರ ಆಸುಪಾಸಿನಲ್ಲಿ ಜನಸಂಖ್ಯೆ ಇರಲಿದೆ ಎಂದು ಹೇಳಿದರು. ಕರಡು ಪ್ರತಿಯನ್ನು ಪ್ರಕಟಿಸಿ ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ಹೇಳಿದರು. ನಗರದಲ್ಲಿ ಮಳೆ ಕುರಿತು ಪ್ರತಿಕ್ರಿಯಿಸಿದ ಅವರು, ಮೇ ತಿಂಗಳಿನಲ್ಲಿ ಒಂದು ವಾರ ಸತತ ಮಳೆ ಸುರಿದಿದೆ. ನಾಲ್ಕೈದು ದಿನದಿಂದ ಭರದಿಂದ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಾಗುತ್ತಿದೆ. ಇದೇ ತಿಂಗಳ ೬ನೇ ನೇ ತಾರೀಖಿನ ಒಳಗೆ ರಸ್ತೆ ಗುಂಡಿ ಮುಕ್ತ ಮಾಡಲಾಗುವುದು ಎಂದು ಹೇಳಿದರು. ನಗರದಲ್ಲಿರುವ ಗುಂಡಿಗಳ ಸರಾಸರಿ ಅಳತೆ ಎರಡು ಅಡಿ ವಿಸ್ತೀರ್ಣವಿದೆ ಎಂದ ಅವರು, ಪ್ರತಿ ವಾರ್ಡ್ ಗೆ ೩೦ ಲಕ್ಷ ರಸ್ತೆ ಗುಂಡಿ ಮುಚ್ಚಲು ಮೀಸಲಿಡಲಾಗಿದೆ.ಹೀಗಾಗಿ, ಶೀಘ್ರದಲ್ಲೇ ರಸ್ತೆ ಗುಂಡಿ…

Read More

ಆದಾಯ ತೆರಿಗೆ ವಂಚಕರಿಗೆ ಐಟಿ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ೫೦ಕ್ಕೂ ಹೆಚ್ಚು ಕಡೆಗಳಲ್ಲಿ ಹಠಾತ್ ಲಗ್ಗೆ ಹಾಕಿರುವ ಐಟಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಜಾಲಾಡಿದ್ದಾರೆ. ಬೆಂಗಳೂರು ಸೇರಿದಂತೆ, ರಾಜ್ಯಾದ್ಯಂತ ೫೦ಕ್ಕೂ ಕಡೆಗಳಲ್ಲಿ ಇಂದು ಮುಂಜಾನೆಯಿಂದಲೇ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಅಪಾರ ಪ್ರಮಾಣದ ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡು ಪರಿಶೀಲನೆ ನಡೆಸಿದ್ದಾರೆ. ಆದಾಯ ತೆರಿಗೆ ಇಲಾಖೆಯ 600 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆಗಳಲ್ಲಿ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಆಸ್ತಿ ಪಾಸ್ತಿಗಳು ಮನೆಯಲ್ಲಿನ ಐಷಾರಾಮಿ ವಸ್ತುಗಳು ಚಿನ್ನ ಬೆಳ್ಳಿ ಆಭರಣಗಳ ಮಾಹಿತಿ ಕಲೆಹಾಕಿದ್ದಾರೆ. ಹಲವು ದಿನಗಳ ಪೂರ್ವ ಸಿದ್ದತೆಯೊಂದಿಗೆ ಸರ್ಚ್ ವಾರೆಂಟ್ ತಂದು ಉದ್ಯಮಿಗಳು,ಬಿಲ್ಡರ್ ಗಳು, ಆದಾಯ ತೆರಿಗೆ ವಂಚನೆಯ ಇತರರ ಮನೆ ಹಾಗೂ ಕಚೇರಿಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ ಮಾಡದಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದ್ದು,…

Read More

ದೇಶದಾದ್ಯಂತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆಯಾಗಿದೆ. ೧೯ ಕೆಜಿ ವಾಣಿಜ್ಯ ಎಲ್‌ಪಿಜಿ ಪ್ರತಿ ಸಿಲಿಂಡರ್‌ಗೆ ೧೩೫ ರೂ.ಗಳಷ್ಟು ಕಡಿಮೆಯಾಗಿದೆ.ಹಣದುಬ್ಬರಕ್ಕೆ ಕಡಿವಾಣ ಹಾಕಲು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ದರ ಕಡಿತಗೊಳಿಸಲಾಗಿದೆ. ಹೊಸ ದರ ಇಂದಿನಿಂದ ದೇಶಾದ್ಯಂತ ಅನ್ವಯವಾಗಲಿದೆ. ಆದರೆ ಗೃಹಬಳಕೆಯೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತೀಚೆಗೆ ಪೆಟ್ರೋಲ್, ಡಿಸೇಲ್‌ದರ ಇಳಿಕೆಯಾದ ಬೆನ್ನಲೇ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆಯಾಗಿರುವುದು ಹೊಟೇಲ್ ಉದ್ದಿಮೆದಾರರಿಗೆ ತುಸು ನೆಮ್ಮದಿ ತಂದಿದೆ. ಗ್ರಾಹಕರು ತುಸು ನಿರಾಳರಾಗಿದ್ದಾರೆ.ಈ ಹಿಂದೆ ನಿಗದಿ ಮಾಡಿರುವ ಬೆಲೆಗೆ ಗೃಹಬಳಕೆ ಸಿಲಿಂಡರ್‌ದೊರೆಯಲಿದೆ. ಅದರಂತೆ ಬೆಂಗಳೂರಿನಲ್ಲಿ ಗೃಹಬಳಕೆಯ ೧೪.೨ ಕೆ.ಜಿ. ತೂಕದ ಸಿಲಿಂಡರ್ ದರ ೧,೦೦೬ ರಷ್ಟಿದೆ. ಕಳೆದ ತಿಂಗಳು ಮೇ ೧ರಂದು ೧೯ ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ೧೦೨.೫೦ ರೂ ಏರಿಕೆಯಾಗಿತ್ತು. ಇದಕ್ಕೂ ಮುನ್ನ ಏಪ್ರಿಲ್ ೧ ರಂದು ಎಲ್‌ಪಿಜಿ ಸಿಲಿಂಡರ್‌ಗೆ ೨೫೦ ರೂ. ಮಾರ್ಚ್೧ ರಂದು ೧೦೫ ರೂ.ಗಳಷ್ಟು ಹೆಚ್ಚಿಸಲಾಗಿತ್ತು.ಕಳೆದ ತಿಂಗಳಷ್ಟೇ, ಏರುತ್ತಿರುವ ಹಣದುಬ್ಬರದ ಮಧ್ಯೆ ಪೆಟ್ರೋಲ್…

Read More

ಗುಬ್ಬಿ: ನಿಟ್ಟೂರು ಗ್ರಾಮದಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ, ರಾಷ್ಟ್ರೀಯ ಹೆದ್ದಾರಿ 206ರ ನಿಟ್ಟೂರು ಗ್ರಾಮದಲ್ಲಿ ರೈತರು, ದಲಿತ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಸ್ಥಳೀಯ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಳೆದ ನಾಲ್ಕು ತಿಂಗಳ ಹಿಂದೆ ಕೆಳ ಸೇತುವೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಆದರೆ ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿಲ್ಲ. ನಿಟ್ಟೂರು ಬಸ್ ನಿಲ್ದಾಣದಲ್ಲಿ ಮೇಲ್ಸೆತುವೆ ನಿರ್ಮಾಣದಿಂದ ಸಾರ್ವಜನಿಕ ರಿಗೆ ಬಹಳ ತೊಂದರೆಯಾಗಿಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಶಾಸಕ, ಸಂಸದರ ಮಾತಿಗೂ ಬೆಲೆಕೊಡುತ್ತಿಲ್ಲ ಎಂದು ಪ್ರತಿಭಟನಾಕಾರರು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂರಾರು ಸಂಖ್ಯೆಯಲ್ಲಿ ಸೇರಿದ ಜನರು, ಈ ಸ್ಥಳದಲ್ಲಿ ಅಂಡರ್ ಪಾಸ್ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಈಗ ಆರಂಭವಾಗಿರುವ ಕಾಮಕಾರಿಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನಾಸ್ಥಳದಲ್ಲಿ ನೂರಾರು ಸಾರ್ವಜನಿಕರು ಜಮಾಯಿಸಿದ್ದು, ಮೇಲ್ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದ್ದು, ಸಾರ್ವಜನಿಕರು ನಗರಕ್ಕೆ ಆಗಮಿಸಬೇಕಾದರೆ 2 ಕಿ.ಮೀ. ಹೆಚ್ಚುವರಿ ಪ್ರಯಾಣ ಮಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ…

Read More

ತಿಪಟೂರು: ಆರ್ ಎಸ್ ಎಸ್ ತತ್ವ ಸಿದ್ಧಾಂತವನ್ನು ತುಂಬಿ ವಿದ್ಯಾರ್ಥಿಗಳ ಮನಸ್ಸನ್ನು ಕಲುಶಿತಗೊಳಿಸುವ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ ಈ ಕೂಡಲೇ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ರನ್ನು ವಜಾ ಮಾಡಬೇಕು ಎಂದು ಸಾಹಿತಿ ಗಂಗಾಧರಯ್ಯ ಒತ್ತಾಯಿಸಿದರು. ನಗರದಲ್ಲಿ ಮಾತನಾಡಿದ ಅವರು,  ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಇತಿಹಾಸವನ್ನು ತಿರುಚುವ ಪ್ರಯತ್ನ ನಡೆದಿದೆ. ಸರ್ಕಾರ ಮನಬಂದಂತೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದೆ ಎಂಧು  ಅವರು ಆಕ್ರೋಶ ವ್ಯಕ್ತಪಡಿಸಿದರು. ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಸಬೇಕು. ಇಲ್ಲವೇ ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜೀನಾಮೆ ನೀಡಬೇಕು ಇಡೀ ರಾಜ್ಯವೇ ಹೊತ್ತಿ ಉರಿಯುತ್ತಿದ್ದರೂ ಶಿಕ್ಷಣ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ ಎಂದು ಹೇಳಿದರು. ಶಿಕ್ಷಣ ಸಚಿವರೇ ನಿಮಗೆ ಧೈರ್ಯವಿದ್ದರೆ ಬಸವಣ್ಣ, ಅಂಬೇಡ್ಕರ್, ಕುವೆಂಪು ನನಗೆ ಇಷ್ಟ ಇಲ್ಲ ಎಂದು ಹೇಳಿ, ಚುನಾವಣೆ ಎದುರಿಸಿ ಗೆದ್ದು ಬನ್ನಿ. ಚುನಾವಣಾ ಸಮಯದಲ್ಲಿ ಅವರೆಲ್ಲ ಬೇಕು. ಆದರೆ ಪಠ್ಯಪುಸ್ತಕದಲ್ಲಿ ಏಕೆ ಬೇಡ  ಎಂದು ಅವರು ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಹೊನ್ನವಳ್ಳಿ ಕೆ.ಎಸ್.…

Read More

ತುಮಕೂರು:  ಡಿ.ಕೆ.ಶಿವಕುಮಾರ್ ಸಿಎಂ ಆದ್ರೆ, ತುಮಕೂರಿಗೆ ನಾನೇ ಸಿಎಂ ಎಂದಿದ್ದ ಕುಣಿಗಲ್ ಶಾಸಕ ಡಾ.ರಂಗನಾಥ್ ಇದೀಗ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ತುಮಕೂರಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಕುಣಿಗಲ್ ತಾಲೂಕಿನ ಅಭಿವೃದ್ಧಿ ಉದ್ದೇಶದಿಂದ ನಾನು ಹಾಗೇ ಹೇಳಿದ್ದೇನೆ. ಕಾಂಗ್ರೆಸ್ ಸರ್ಕಾರ ಬಂದರೇ ಅಭಿವೃದ್ಧಿ ಆಗಲಿದೆ ಎಂದು ಹೇಳಿದ್ದೇನೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಸಿಎಂ ರೇಸ್ ನಲ್ಲಿ ಇದ್ದಾರೆ. ನಾನು ಮಾತಿನ ಭರದಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದೆ ಎಂದು ಸ್ಪಷ್ಟನೆ ನೀಡಿದರು. ಕಾಂಗ್ರೆಸ್ ನಿಂದ ಯಾರೂ ಮುಖ್ಯಮಂತ್ರಿ ಆದರೂ ಕುಣಿಗಲ್ ನಲ್ಲಿ ಅಭಿವೃದ್ಧಿ ದೃಷ್ಟಿಯಿಂದ ನಾನೇ ಸಿಎಂ ಎಂದಿದ್ದೇನೆ. ಮುಖ್ಯಮಂತ್ರಿ ಯಾರಾಬೇಕು ಅನ್ನೋದು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಅವರು ಹೇಳಿದರು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಹಿನ್ನೆಲೆ ಅಖಿಲ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ) ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ಕಾರ್ಯಕರ್ತರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮನೆಗೆ ದಿಢೀರ್‌ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಲ್ಲದೆ,ಖಾಕಿ ಚಡ್ಡಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ. ಈಗಾಗಲೇ 15 ಜನರರು ಮತ್ತು 2 ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ರೀತಿಯ ಗುಂಡಾ ವರ್ತನೆ ನಮ್ಮಲ್ಲಿ ನಡೆಯಲ್ಲ. ಬೆಂಗಳೂರಿಂದ ಐವರು, ದಾವಣಗೆರೆಯಿಂದ ಮೂವರು, ಹಾಸನದಿಂದ ಒಬ್ಬರು, ತುಮಕೂರಿನಿಂದ ಒಬ್ಬರು‌ ಎಸ್​ಎಸ್​ಯುಐ ಮುಖಂಡರು ಪ್ರೀ ಪ್ಲಾನ್ ಮಾಡಿಕೊಂಡು ಬಂದಿದ್ದಾರೆ. ಅವರಿಗೆಲ್ಲ ಈಗ ಪೊಲೀಸರು ಕಾನೂನಿನ ಪಾಠ ಮಾಡ್ತಾರೆ. ಇದು ಕಾಂಗ್ರೆಸ್ ಮುಖಂಡರ ಕೈವಾಡ. ದಾವಣಗೆರೆಯ ಎನ್​​ಎಸ್​ಯುಐ ಉಪಾಧ್ಯಕ್ಷ ಫೈಲ್ವಾನ್ ಅಲಿ ರೆಹಮಾನ್ ಎಂಬಾತ ಬಂದಿದ್ದಾನೆ. ಮೊದಲೇ ಸಂಚು ರೂಪಿಸಿಕೊಂಡು ಬಂದಿದ್ದಾರೆ ಎಂದು ಗೃಹ ಸಚಿವರು ಎಚ್ಚರಿಸಿದರು.ಘಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಗೃಹ ಸಚಿವ…

Read More

ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ.ರೂಪಾ ಮೌದ್ಗಿಲ್‌ ಅವರ ವಿರುದ್ಧ ಬುಧವಾರ ಮತ್ತೊಂದು ದೂರನ್ನು ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ನೀಡಿದ್ದು, ಅದರಲ್ಲಿ ರೂಪಾ ತಾವು ನಡೆಸಿರುವ ಅಕ್ರಮಕ್ಕೆ ಕಡತಗಳನ್ನು ಸರಿಪಡಿಸುವ, ನಾಶಪಡಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಆರೋಪಿಸಿದ್ದಾರೆ. ರೂಪಾ ಅವರು ಒಂದು ಹೊಸ ಇನೋವಾ ಕ್ರಿಸ್ಟಾಕಾರನ್ನು ಅವರ ಉಪಯೋಗಕ್ಕೆ, ಇನ್ನೊಂದು ಇನ್ನೋವಾ, ನಿಸಾನ್‌ ಸನ್ನಿ ಮತ್ತು ಒಂದು ದ್ವಿಚಕ್ರ ವಾಹನವನ್ನು ಮನೆಯ ಬಳಕೆಗೆ ಉಪಯೋಗಿಸಿ ನಿಗಮಕ್ಕೆ ಹೊರೆ ಮಾಡಿದ್ದಾರೆ. ಅಕ್ರಮ ನಡೆಸಿದ್ದಾರೆ ಎಂದು ನಾನು ಆರೋಪ ಮಾಡಿದ ಬಳಿಕ ಕಡತಗಳನ್ನು ತರಿಸಿಕೊಂಡು ಕೆಲವನ್ನು ತಿದ್ದಿ ಸರಿಪಡಿಸುವ, ಮತ್ತೆ ಕೆಲವನ್ನು ನಾಶಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ಮೂರು ಕಾರಿಗೆ ಡೀಸೆಲ್‌ ಬಿಲ್‌ ಮಾಡಿಸಿಕೊಳ್ಳಲು ಅನುಕೂಲವಾಗಲಿ ಎಂದು 2 ವರ್ಷದಿಂದ ಕೆಲಸ ಮಾಡುತ್ತಿದ್ದ ಹಳೆಯ ಅಕೌಂಟೆಂಟ್‌ ಸುಭೇಶ್‌ ಅವರಿಗೆ ಕಿರುಕುಳ ನೀಡಿ ಓಡಿಸಿ ಶೋ ರೂಂನಲ್ಲಿ ಕ್ಯಾಶಿಯರ್‌ ಆಗಿದ್ದ…

Read More

ಸರಗೂರು: ಅಮಾಯಕ ಹಾಡಿ ಜನರ ಮೇಲೆ ಅರಣ್ಯ ಇಲಾಖೆ ಹಾಕಿರುವ ಸುಳ್ಳು ಮೊಕದ್ದಮೆಯನ್ನು ಖಂಡಿಸಿ, ತಾಲೂಕಿನ ಶಾಸಕ ಅನಿಲ್ ಚಿಕ್ಕಮಾದು ಹಾಡಿ ಜನರೊಂದಿಗೆ ಅರಣ್ಯ ಇಲಾಖೆ ಕಚೇರಿಯಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮೊಳೆಯೂರು ವನ್ಯ ಜೀವಿ ವಲಯದ ಅರಣ್ಯಾಧಿಕಾರಿ ಪುಟ್ಟರಾಜು, ಹಾಡಿಯ 16 ಮಂದಿ ಮೇಲೆ ದೂರು ದಾಖಲಿಸಿ, ಇಬ್ಬರನ್ನು ಬಂಧಿಸಿದ್ದಾರೆ. ಹಾಡಿ ಜನತೆ ಜಿಂಕೆಯನ್ನು ಕೊಂದು ತಿಂದಿದ್ದಾರೆ ಎನ್ನುವುದು ಅರಣ್ಯ ಇಲಾಖೆ ದೂರು. ಆದರೆ ಹಾಡಿ ಜನತೆ ಜಿಂಕೆಯನ್ನು ಕೊಂದು ತಿಂದಿಲ್ಲ. ಕೆಬ್ಬೇಪುರ ಹಾಡಿ ಅರಣ್ಯದಂಚಿನಲ್ಲಿದ್ದು, ಜಿಂಕೆಯೊಂದು ಹಾಡಿಗೆ ಬಂದಿದೆ. ಹಾಡಿಯಲ್ಲಿದ್ದ ನಾಯಿಗಳು, ಜಿಂಕೆ ಮೇಲೆ ದಾಳಿ ನಡೆಸಿ ಕೊಂದು ತಿಂದಿವೆ. ಆದರೆ ಈ ಬಗ್ಗೆ ಸರಿಯಾಗಿ ವಿಚಾರಣೆ ನಡೆಸದ ಅರಣ್ಯಾಧಿಕಾರಿ ಪುಟ್ಟರಾಜು, ಹಾಡಿಯ 16 ಮಂದಿ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ, ಮೂವರನ್ನು ಬಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮೇ 26 ರಂದು ಘಟನೆ ನಡೆದಿದೆ. ದೂರು ದಾಖಲಾದ ಅಂದಿನಿಂದ ಹಾಡಿ ಜನತೆ…

Read More