Subscribe to Updates
Get the latest creative news from FooBar about art, design and business.
- ಶ್ರವಣೂರು: ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮದ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಘಟನೆಗಳು
- ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
- ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
- ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
- ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
- ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
- ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
- ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
Author: admin
ತುಮಕೂರು: ಡಿಸೆಂಬರ್ 1 ವಿಶ್ವ ಏಡ್ಸ್ ದಿನಾಚರಣೆಯ ಪ್ರಯುಕ್ತ ಮಧುಗಿರಿಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ವಿಶ್ವ ಏಡ್ಸ್ ದಿನ — 2025 ಜಾಗೃತಿ ಹಾಗೂ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೆಂಕಟಪ್ಪ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು, ಮಧುಗಿರಿ ಇವರು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸದೃಢ ದೇಶ ನಿರ್ಮಾಣಕ್ಕೆ ಹೊಸ ಹೆಚ್ ಐವಿ ಸೋಂಕಿತರ ಸಂಖ್ಯೆ ಮಾರಕವಾಗುತ್ತಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ.ಮೋಹನ್ ಕುಮಾರ್ ರವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಹೆಚ್ ಐವಿ ಸೋಂಕು ಹರಡುವ ವಿಧಾನ, ಚಿಕಿತ್ಸೆ ಮತ್ತು ಸೊಂಕಿತರಿಗಿರುವ ಸವಲತ್ತುಗಳ ಬಗ್ಗೆ ತಿಳಿಸಿದರು. ಹಾಗೂ ವಿವಾಹ ಪೂರ್ವ ಬ್ರಹ್ಮಚರ್ಯ ಪಾಲನೆ ಮಾಡುವುದರಿಂದ ಸೋಂಕನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಆನಂದ್, ಅಖಿಲ್ ಆಪ್ತ ಸಮಾಲೋಚಕರಾದ ಸುಮಾಮಣಿ, ರಾಧಾಕೃಷ್ಣ, ಧರಣೇಶ್ ಗೌಡ, ಮೋಹನ್, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಶ್ರೀ ರಾಘವೇಂದ್ರ ಪ್ರಥಮ ದರ್ಜೆ ಕಾಲೇಜಿನ…
ಮಧುಗಿರಿ: ಡೈರಿಯಲ್ಲಿ ಹಾಲು ತರಲು ಹೋಗಿ ವಾಪಸ್ ಬರುತ್ತಿದ್ದ ವ್ಯಕ್ತಿ ಮೇಲೆ ಕಾರು ಹರಿದು ವ್ಯಕ್ತಿಯ ಎರಡೂ ಕಾಲುಗಳು ಮುರಿದಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮಿಡಿಗೇಶಿ ಹೋಬಳಿಯ ಹೊಸಕೆರೆ ಗ್ರಾಮವಾಸಿ ನಾಗಭೂಷಣ(45) ಎಂದಿನಂತೆ ಮುಖ್ಯ ರಸ್ತೆ ದಾಟಿ ಡೇರಿಯಲ್ಲಿ ಹಾಲು ತೆಗೆದುಕೊಂಡು ವಾಪಸ್ ಬರುತ್ತಿದ್ದಾಗ ಹಿಂಬದಿಯಿಂದ ಬಂದ ನೆರೆಯ ಆಂಧ್ರ ನೋಂದಣಿಯ ಕಾರು ಪಾದಚಾರಿಯ ಮೇಲೆ ಹರಿದಿದೆ. ಸದ್ಯ ನಾಗಭೂಷಣರನ್ನು ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಡೇರಿಯ ಸಮೀಪ ಕಾಲೇಜು ಸಹ ಇದ್ದು, ಇದೇ ಸ್ಥಳದಲ್ಲಿ ಹಲವಾರು ಬಾರಿ ಅಪಘಾತಗಳು ಸಂಭವಿಸಿವೆ. ರಸ್ತೆಯ ಸುರಕ್ಷತಾ ಕ್ರಮಗಳು ಮತ್ತು ಅಪಘಾತಗಳಾಗದಂತೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಮಧುಗಿರಿ: ಹಿಮದಿಂದಾಗಿ ರಸ್ತೆ ಸರಿಯಾಗಿ ಕಾಣದೆ ಕಾರೊಂದು ಪಲ್ಟಿ ಹೊಡೆದು ಪತಿ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ. ತಾಲೂಕಿನ ಕಸಬಾ ವ್ಯಾಪ್ತಿಯ ಜಡೆಗೊಂಡನಹಳ್ಳಿ ಗ್ರಾಮದ ಮಧುಗಿರಿ ಪಾವಗಡ ರಸ್ತೆಯಲ್ಲಿರುವ ಬ್ರಿಡ್ಜ್ ಸಮೀಪ ಮಂಜು ಮುಸುಕಿದ ರಸ್ತೆಯಲ್ಲಿ ರಸ್ತೆ ಕಾಣದ ಪರಿಣಾಮ ಕಾರು ಪಲ್ಟಿ ಹೊಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಡಕಶಿರಾ ತಾಲೂಕಿನ ಗುಡ್ಡಂಪಲ್ಲಿ ಗ್ರಾಮದ ಕೃಷ್ಣ ರೆಡ್ಡಿ(45) ಹಾಗೂ ಜ್ಯೋತಿ ಲಕ್ಷ್ಮೀ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ನನ್ನ ಅಧಿಕಾರದ ಅವಧಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು, ಸಿಬ್ಬಂದಿವರ್ಗ ಹಾಗೂ ಸಾರ್ವಜನಿಕರ ಸಹಕಾರ ಸ್ಮರಣೀಯ. ಸರಕಾರದಿಂದ ಬಿಡುಗಡೆಯಾದ ಅನುದಾನಗಳನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕಡೆಗೆ ಮುಂದುವರಿಯುತ್ತೇನೆ ಎಂದು ನೂತನ ಪ.ಪಂ. ಅಧ್ಯಕ್ಷೆ ಚೈತ್ರ ಸ್ವಾಮಿ ತಿಳಿಸಿದರು. ಸೋಮವಾರದಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಕೊಠಡಿಗೆ ಪೂಜೆ ಸಲ್ಲಿಸಿ ನಂತರ ಅಧಿಕಾರವನ್ನು ವಹಿಸಿಕೊಂಡರು ಮಾತನಾಡಿದರು. ನನ್ನ ಅಧಿಕಾರದ ಅವಧಿಯಲ್ಲಿ ಸರ್ವ ಸದಸ್ಯರು ಹಾಗೂ ಸಾರ್ವಜನಿಕರು ಹಾಗೂ ಅಧಿಕಾರಿ ವೃಂದವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣವನ್ನು ಮಾದರಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಶಕ್ತಿ ಮೀರಿ ಶ್ರಮಿಸುವುದಾಗಿ ಭರವಸೆ ನೀಡಿದರು. ಪಟ್ಟಣವನ್ನು ಅಭಿವೃದ್ಧಿ ಕಡೆಗೆ ಹೋಗಲು ಮೈಸೂರು ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಸ್.ಸಿ.ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ಹಾಗೂ ತಾಲ್ಲೂಕಿನ ಅಭಿವೃದ್ಧಿಕಾರ ಶಾಸಕ ಅನಿಲ್ ಚಿಕ್ಕಮಾದುರವರ ಜೊತೆಗೂಡಿ ಸರ್ಕಾರದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಸರ್ವತೋಮುಖ ಅಭಿವೃದ್ಧಿಗೆ ಕೈಜೊಡಿಸಿಕೊಂಡು ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಪಂ ಸದಸ್ಯರಾದ ಶ್ರೀನಿವಾಸ, ಚೆಲುವ ಕೃಷ್ಣ,…
ಮಧುಗಿರಿ: ಕನ್ನಡ ರಾಜ್ಯೋತ್ಸವ ನವೆಂಬರ್‌ಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು ವಿಧಾನಸಭಾ ಸಚಿವಾಲಯದ ನಿರ್ದೇಶಕ ಶಶಿಧರ್ ತಿಳಿಸಿದರು. ಪಟ್ಟಣದ ಏಕಾಶಿಲಾ ಬೆಟ್ಟದಲ್ಲಿ ರಕ್ತದಾನಿ ಶಿಕ್ಷಕರ ಬಳಗ, ರೋಟರಿ ಕ್ಲಬ್, ಕನ್ನಡ ಪರ ಸಂಘಟನೆಗಳು, ಸರ್ಕಾರಿ ನೌಕರ ಸಂಘದಿಂದ ಭಾನುವಾರ ಆಯೋಜಿಸಿದ್ದ ರಾಜ್ಯೋತ್ಸವದಲ್ಲಿ ಮಾತನಾಡಿದರು. ಪ್ರತಿಯೊಬ್ಬರೂ ಕನ್ನಡದ ಬಗ್ಗೆ ಗೌರವ ಮತ್ತು ಪ್ರೀತಿ ತೋರಬೇಕು ಎಂದರು. ಏಕಾಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿ ಶೀಘ್ರ ಪ್ರಾರಂಭವಾಗಲಿದೆ. ಕಾಮಗಾರಿ ಪೂರ್ಣಗೊಂಡರೆ ಮಧುಗಿರಿ ಸಾಕಷ್ಟು ಅಭಿವೃದ್ಧಿ ಹೊಂದುತ್ತದೆ ಎಂದರು. ಶಿಕ್ಷಕರ ಬಳಗದ ಶಶಿಕುಮಾರ್ ಮಾತನಾಡಿ, ರಕ್ತದಾನಿ ಶಿಕ್ಷಕರ ಬಳಗದಿಂದ ಕಳೆದ ಒಂಬತ್ತು ವರ್ಷಗಳಿಂದ ನಿರಂತರವಾಗಿ ಏಕಶಿಲಾ ಬೆಟ್ಟದಲ್ಲಿ ರಾಜ್ಯೋತ್ಸವ ನಡೆಸಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದು ವಿಶೇಷವಾಗಿತ್ತು ಎಂದು ತಿಳಿಸಿದರು. ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರಂಗಪ್ಪ, ರೋಟರಿ ಕ್ಲಬ್ ಅಧ್ಯಕ್ಷ ನಟರಾಜು, ಕನ್ನಡ ಸಂಘಟನೆಗಳ ರಾಘವೇಂದ್ರ, ನಂದೀಶ್, ಗೀತಾ ನಾಗರಾಜು, ಲತಾ ಪ್ರದೀಪ್, ಕೀರ್ತಿಶ್ರೀ, ರಕ್ತದಾನಿ ಶಿಕ್ಷಕರ ಬಳಗದ ರಾಮದಾಸ್,…
ಮಧುಗಿರಿ: ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು ಎಂದು ಶಾಸಕ ಕೆ.ಎನ್.ರಾಜಣ್ಣ ಸೂಚಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆ ಬರುವ ಮುನ್ನವೇ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಭೇಟಿ ನೀಡಿ ನಿವಾರಣೆಗೆ ಮುಂದಾಗಬೇಕು ಎಂದರು. ಶಿರಾ–ಬೈರೇನಹಳ್ಳಿ ರಾಷ್ಟ್ರೀಯ ಹೆದ್ದಾರಿ ಸರ್ವೆ ಮುಗಿದಿದೆ. ಕಾಮಗಾರಿ ಕೈಗೊಳ್ಳಬೇಕಿದೆ ಎಂದು ಎಇಇ ಲಕ್ಷ್ಮೀಕಾಂತ್ ಮಾಹಿತಿ ನೀಡಿದಾಗ, ರೈತರಿಗೆ ಅನ್ಯಾಯವಾಗದಂತೆ, ತುರ್ತಾಗಿ ಕ್ರಮವಹಿಸಿ ಎಂದು ಸೂಚನೆ ನೀಡಿದರು. ತಾಲ್ಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ 6 ಹಾಗೂ 90 ಸಹಾಯಕಿಯರ ಹುದ್ದೆ ಖಾಲಿ ಇದೆ. ಶೀಘ್ರ ಹುದ್ದೆ ಭರ್ತಿ ಮಾಡಿ ಎಂದರು. ತಾಲ್ಲೂಕಿನಲ್ಲಿ 6,198 ವಿದ್ಯಾರ್ಥಿ ವೇತನ ಬಂದಿದೆ. ಇನ್ನೂ 7 ಸಾವಿರ ವಿದ್ಯಾರ್ಥಿಗಳು ವೇತನ ಪಡೆಯಲು ಅರ್ಹರಿದ್ದಾರೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಕಳೆದ ವರ್ಷ 7 ಸಾವಿರ ವಿದ್ಯಾರ್ಥಿಗಳು ಅರ್ಹರಿದ್ದರೂ ಏಕೆ ವಿದ್ಯಾರ್ಥಿ ವೇತನ ನೀಡಿಲ್ಲ. ಅಧಿಕಾರಿಗಳು ಏನು ಮಾಡುತ್ತಿದ್ದೀರಾ…
ತುಮಕೂರು: ವಿದ್ಯೋದಯ ಕಾನೂನು ಕಾಲೇಜು ಎನ್ ಎಸ್ ಎಸ್ ಘಟಕದ ವಿಶೇಷ ವಾರ್ಷಿಕ ಶಿಬಿರದಲ್ಲಿ ದುರ್ಗದ ಹಳ್ಳಿ ಗ್ರಾಮದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಆಶಾ ಕೆ.ಎಸ್. ವಕೀಲರು ಹಾಗೂ ಮಾಜಿ ಬಾಲ ನ್ಯಾಯ ಮಂಡಳಿ ಸದಸ್ಯರು ಮತ್ತು ಮಾಜಿ ಸರ್ಕಾರಿ ವಿಶೇಷ ಅಭಿಯೋಜಕರು ಇವರು ಗ್ರಾಮಸ್ಥರಿಗೆ ಹಾಗೂ ಶಿಬಿರಾರ್ಥಿಗಳಿಗೆ ಕಾನೂನು ಅರಿವನ್ನು ವಿವಿಧ ನ್ಯಾಯಾಲಯದ ತೀರ್ಪುಗಳು ಹಾಗೂ ಅಪರಾಧಗಳ ಉದಾಹರಣೆಯೊಂದಿಗೆ ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿವರಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಯಾರಿಗೆ ಉಚಿತವಾಗಿ ಕಾನೂನು ನೆರವು ಸಿಗುತ್ತದೆ ಎಂಬುದನ್ನು ತಿಳಿಸಿದರು ಹಾಗೂ ಈ ಒಂದು ಉಚಿತ ಕಾನೂನು ಸೇವೆಯನ್ನು ಕಾನೂನುಗಳ ಕುರಿತು ಪಡೆಯಲು ಇರಬೇಕಾದ ಮಾನದಂಡಗಳ ಕುರಿತು ಜನಸಾಮಾನ್ಯರಿಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕಾನೂನು ಕಾಲೇಜಿನ ಕಾನೂನು ಸೇವಾ ಕೋಶದ ಸಂಚಾಲಕರಾದ ರಶ್ಮಿ, ಕಾನೂನು ಕಾಲೇಜಿನ ಪ್ರಾಧ್ಯಾಪಕರುಗಳಾದ ಸಹಾಯಕ ರಮೇಶ, ಮಂಜುನಾಥ, ಬಾಲಕೃಷ್ಣ, ಗ್ರಂಥಾಲಯ ಸಿಬ್ಬಂದಿ ಸುರೇಶಯ್ಯ, ದುರ್ಗದಲ್ಲಿ…
ಬೆಂಗಳೂರು: ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತಾಗಿ ಇಂದು ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಹತ್ವದ ಸೂಚನೆಯನ್ನು ಸಿಎಂ ನೀಡಿದರು. ಪ್ರಮುಖ ನಿರ್ಣಯಗಳು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು. ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್‌ಗಳ ಅಗತ್ಯವಿದ್ದು, ಇದಕ್ಕಾಗಿ ಪ್ರತಿ ತಿಂಗಳು ರೂ.466 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18,628 ಮೆ.ಟನ್ ತೊಗರಿ ಬೇಳೆ ಮತ್ತು ತಲಾ 12,419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಆಹಾರ ಕಿಟ್‌ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆ ಗರಿಷ್ಟ ಪ್ರಮಾಣದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು.…
ತಿಪಟೂರು: ವೈದ್ಯಕೀಯ ಪರೀಕ್ಷೆ ನಡೆಸಿ ಎರಡು ವರ್ಷ ಕಳೆದಿದೆ. ಆರು ತಿಂಗಳಿನಿಂದ ಸ್ಯಾನಿಟರಿ ಪ್ಯಾಡ್ ನೀಡಿಲ್ಲ. ಊಟ ಬಡಿಸುವಾಗ ಅಡುಗೆಯವರು ನಮ್ಮನ್ನು ನೀವು ಬಿಕಾರಿಗಳು ಎಂದು ನಿಂದಿಸುತ್ತಾರೆ ಎಂದು ಇಂದಿರಾ ನಗರದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ಹಾಸ್ಟೆಲ್ ನ ವಿದ್ಯಾರ್ಥಿನಿಯರು ನೋವು ತೋಡಿಕೊಂಡಿದ್ದಾರೆ. ಉಪಲೋಕಾಯುಕ್ತ ಬಿ.ವೀರಪ್ಪ ಅವರು ಜಿಲ್ಲೆಯ ವಿವಿಧೆಡೆಗಳಿಗೆ ತೆರಳಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನ ಮಾಡುತ್ತಿದ್ದಾರೆ. ಅಂತೆಯೇ ಶುಕ್ರವಾರ ರಾತ್ರಿ ಅವರು ದಿಢೀರ್ ಆಗಿ ಹಾಸ್ಟೆಲ್ ಗೆ ಭೇಟಿ ನೀಡಿ ವೇಳೆ ವಿದ್ಯಾರ್ಥಿನಿಯರಿಂದ ದೂರಿನ ಸರಮಾಲೆಯೇ ಕೇಳಿ ಬಂತು. ಹಾಸ್ಟೆಲ್ ನ ಅವ್ಯವಸ್ಥೆಯನ್ನು ಕಣ್ಣಾರೆ ಕಂಡ ಉಪಲೋಕಾಯುಕ್ತ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ತರಾಟೆಗೆತ್ತಿಕೊಂಡರು. ಕೊಪ್ಪಳದ ವಸತಿ ಶಾಲೆಯಲ್ಲಿ 9ನೇ ತರಗತಿ ಬಾಲಕಿಗೆ ಹೆರಿಗೆಯಾಗಿದೆ. ವೈದ್ಯಕೀಯ ಪರೀಕ್ಷೆ ನಡೆಸಿದರೂ ಆಕೆ ಗರ್ಭಿಣಿ ಆಗಿರುವುದನ್ನು ಪತ್ತೆ ಹಚ್ಚಲು ಆಗಿಲ್ಲ. ಈ ಹಾಸ್ಟೆಲ್‌ನಲ್ಲಿ ಪರೀಕ್ಷೆಯೇ ನಡೆಸಿಲ್ಲ. ಸ್ಯಾನಿಟರಿ ಪ್ಯಾಡ್ ಬಂದಿಲ್ಲ ಎಂದು ಸರ್ಕಾರಕ್ಕೆ ಎಲ್ಲಿ ಪತ್ರ ಬರೆದಿದ್ದೀರಾ,…
ಸರಗೂರು: ಹುಲಿ ದಾಳಿಯಿಂದಾಗಿ ಪ್ರವಾಸೋದ್ಯಮವನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ಕೊಡದೆ ಹೋದರೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗುವುದು ಹೇಗೆ ಎಂದು ಜೆಡಿಎಸ್ ನ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಪಟ್ಟಣದಲ್ಲಿ ರೋಡ್ ಶೋ ನಡೆಸಿದ ನಂತರ ಹುಲಿ ದಾಳಿಗೆ ಮೃತಪಟ್ಟ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ವೈಫಲ್ಯತೆಯನ್ನು ಇಟ್ಟುಕೊಂಡು ಅಸಂಬದ್ಧವಾಗಿ ನಡೆಕೊಂಡು ಇವತ್ತು ಸಫಾರಿಗಳನ್ನ ಬಂದ್ ಮಾಡೋದ್ರಿಂದ ಸುತ್ತಮುತ್ತಲಿನ ಜನಕ್ಕೆ ಜೀವನೋಪಾಯಕ್ಕೆ ತುಂಬಾ ಕಷ್ಟವಾಗಿದೆ. ಹೌದಪ್ಪ ತಪ್ಪಾಗಿದೆ, ಆ ತಪ್ಪಿಗೆ ಸರಿಯಾದ ರೀತಿ ಕ್ರಮ ಕೈಗೊಳ್ಳಬೇಕು ಅನ್ನೋದು ಇನ್ನೂ ಸರ್ಕಾರದ ಕಡೆಯಿಂದ ಏನು ಚರ್ಚೆಯಾಗಿಲ್ಲ. ಹುಲಿ ದಾಳಿಯಿಂದ ಸತತವಾಗಿ ನಡೆದರೂ ಪುಣ್ಯಾತ್ಮರನ್ನ ನೋಡಲಿಕ್ಕೂ ಕೂಡ ಸಚಿವರು ಇಲ್ಲಿ ಬರಲಿಲ್ಲ, ಮೈಸೂರಿಗೆ ತರಿಸಿಕೊಂಡ್ರು, ಮತ್ತೆ ಯಾವ ಪುರುಷಾರ್ಥಗೋಸ್ಕರ ಇವತ್ತು ಅರಣ್ಯ ಸಚಿವರಾಗಿದ್ದಾರೆ ಎಂದು ಪ್ರಶ್ನಿಸಿದರು. ಈ ಭಾಗದ ರೈತರ ಜೊತೆ ನಾವು ನಿಲ್ಲುತ್ತೇವೆ ಅನ್ನೋದನ್ನ ಈ ಸಂದರ್ಭದಲ್ಲಿ ಹೇಳುತ್ತಿದ್ದಾನೆ, ಮತ್ತೊಮ್ಮೆ …