Author: admin

ಪಾವಗಡ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಮಹತ್ವದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಶಾಲೆಗಳಲ್ಲಿ ಅಣುಕು ಮತದಾನ (Mock Election) ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ ಎಂದು ವಿ.ಎಸ್. ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಶಂಕರ್ ತಿಳಿಸಿದರು. ಪಟ್ಟಣದ ವಿ.ಎಸ್. ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಅಣುಕು ಮತದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಾಲಾ ಹಂತದಲ್ಲೇ ಚುನಾವಣಾ ಪ್ರಕ್ರಿಯೆಯನ್ನು ಅನುಭವಿಸುವ ಅವಕಾಶ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಅವರು ವಿವರಿಸಿದರು. ಈ ಕಾರ್ಯಕ್ರಮದಲ್ಲಿ ನೈಜ ಚುನಾವಣೆಯ ಮಾದರಿಯಲ್ಲೇ ಎಲ್ಲಾ ಹಂತಗಳನ್ನು ಅತ್ಯಂತ ಶಿಸ್ತುಬದ್ಧವಾಗಿ ಅನುಸರಿಸಲಾಯಿತು. ಆಸಕ್ತ ವಿದ್ಯಾರ್ಥಿಗಳು ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿ, ಬಳಿಕ ತಮ್ಮ ಗುರಿ ಹಾಗೂ ಉದ್ದೇಶಗಳನ್ನು ಸಹಪಾಠಿಗಳಿಗೆ ತಿಳಿಸುತ್ತಾ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ಚುನಾವಣೆಯ ದಿನದಂದು ಶಾಲೆಯಲ್ಲಿ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯನ್ನು ತೋರಿಸಿ ಬ್ಯಾಲೆಟ್…

Read More

ನಂಜನಗೂಡು: ಎಲ್ಲ ದಾನಗಳಿಗಿಂತ ಅನ್ನದಾನ, ನೀರಿನ ದಾನ ಹಾಗೂ ವಸ್ತ್ರ ದಾನಗಳು ಅತ್ಯಂತ ದೊಡ್ಡ ದಾನಗಳಾಗಿವೆ ಎಂದು ಹೆಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರ ಧರ್ಮಪತ್ನಿ ಸೌಮ್ಯ ಅನಿಲ್ ಚಿಕ್ಕಮಾದು ತಿಳಿಸಿದರು. ನಂಜನಗೂಡು ತಾಲೂಕಿನ ಹಳ್ಳಿದಿಡ್ಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ಮಕ್ಕಳ ಮಂತ್ರಿಮಂಡಲದ ಪ್ರಮಾಣವಚನ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ದಾನಿಗಳಿಂದ ಸಮವಸ್ತ್ರ ಸೇರಿದಂತೆ ವಿವಿಧ ಸಹಾಯ ಪಡೆದು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು. ವಿದ್ಯಾರ್ಥಿಗಳು ಮೊಬೈಲ್ ಮತ್ತು ಟಿವಿಗಳಿಂದ ದೂರವಿದ್ದಾಗ ಮಾತ್ರ ದಾನ ನೀಡಿದವರಿಗೂ ತೃಪ್ತಿ ಸಿಗುತ್ತದೆ. ಶಾಲೆಯಲ್ಲಿ ಶಿಕ್ಷಕರು ಹೇಳುವ ಪಾಠವನ್ನು ಗಮನವಿಟ್ಟು ಕೇಳಬೇಕು ಹಾಗೂ ಪೋಷಕರು ಸಹ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು. ಮಕ್ಕಳೇ ಈ ದೇಶದ ನಿಜವಾದ ಪ್ರಜೆಗಳು. ನಾನಾಗಲಿ…

Read More

ಮಧುಗಿರಿ: ತಾಲ್ಲೂಕು ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಯಾವುದೇ ಮುನ್ಸೂಚನೆ ಅಥವಾ ಕಾರಣ ನೀಡದೆ ಏಕಾಏಕಿ ವಜಾಗೊಳಿಸಿರುವುದಕ್ಕೆ ವಕೀಲ ಹಾಗೂ ಮುಖಂಡ ಬಾಣದ ರಂಗಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾಲೂಕು ಅಧ್ಯಕ್ಷ ಗೋಪಾಲಯ್ಯ ಅವರ ಈ ಕ್ರಮ ಕಾನೂನು ಬಾಹಿರವಾಗಿದ್ದು, ಅವರನ್ನೇ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಹಾಸಭಾದ ರಾಜ್ಯಾಧ್ಯಕ್ಷ ಹಾಗೂ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಗೆ ಮನವಿ ಮಾಡಿದ್ದಾರೆ. ಪಟ್ಟಣದ ಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಾಣದ ರಂಗಯ್ಯ, “ವಿದ್ಯಾವಂತರ ಕೂಟ ಕಟ್ಟಿಕೊಂಡು, ತಾಲ್ಲೂಕಿನ ಮಾದಿಗ ಜನಾಂಗದ ಅಭಿವೃದ್ಧಿಗಾಗಿ ನಾವೆಲ್ಲಾ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇವೆ. ಆದರೆ, ಬೇರೆ ಕಡೆಯಿಂದ ಬಂದಿರುವ ಅಧ್ಯಕ್ಷ ಗೋಪಾಲಯ್ಯ ಮತ್ತು ಅವರ ಬೆಂಬಲಿಗರು ಸಮಾಜವನ್ನು ಒಡೆದು ಹೋಳು ಮಾಡುತ್ತಿದ್ದಾರೆ” ಎಂದು ಗಂಭೀರವಾಗಿ ಆರೋಪಿಸಿದರು. ಬೈಲಾ ಉಲ್ಲಂಘನೆ ಮತ್ತು ಮ್ಯಾಚ್ ಫಿಕ್ಸಿಂಗ್ ಆರೋಪ “ವಾಸ್ತವವಾಗಿ ಸಭೆಯಲ್ಲಿ ಶೇ. 75 ರಷ್ಟು ಸದಸ್ಯರು ನನ್ನ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಸೂಚಿಸಿದ್ದರು. ಆದರೆ ಬೈಲಾ ಉಲ್ಲಂಘಿಸಿ ಗೋಪಾಲಯ್ಯ ಅವರನ್ನು…

Read More

ಕೊರಟಗೆರೆ: ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನೂತನ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಪಟ್ಟಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಂದ್ರ ಅವರು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ ಎಂದು ಕೊರಟಗೆರೆ ಬಿಜೆಪಿ ಮುಖಂಡ ಬಿ.ಹೆಚ್. ಅನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ವಿವಿಧ ಮೋರ್ಚಾಗಳಾದ ಯುವ ಮೋರ್ಚಾ, ಮಹಿಳಾ ಮೋರ್ಚಾ, ಓಬಿಸಿ ಮೋರ್ಚಾ, ರೈತ ಮೋರ್ಚಾ, ಎಸ್ಸಿ ಮೋರ್ಚಾ, ಎಸ್ಟಿ ಮೋರ್ಚಾ ಮತ್ತು ಅಲ್ಪಸಂಖ್ಯಾತರ ಮೋರ್ಚಾ ಜಿಲ್ಲಾಧ್ಯಕ್ಷ ಸ್ಥಾನಗಳು ಸೇರಿದಂತೆ ಜಿಲ್ಲಾ ವಕ್ತಾರರು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಹಾಗೂ ಪ್ರಕೋಷ್ಟಗಳ ಜಿಲ್ಲಾ ಸಂಯೋಜಕ ಸ್ಥಾನಗಳಿಗೆ ಇತ್ತೀಚೆಗೆ ಆಯ್ಕೆ ಪ್ರಕ್ರಿಯೆ ನಡೆದಿತ್ತು. ವಿಧಾನಪರಿಷತ್ ಶಾಸಕ ಚಿದಾನಂದ ಎಂ. ಗೌಡ ಅವರ ನೇತೃತ್ವದಲ್ಲಿ ಕೊರಟಗೆರೆ, ಮಧುಗಿರಿ, ಶಿರಾ ಮತ್ತು ಪಾವಗಡ ತಾಲೂಕುಗಳ ವಿವಿಧ ಮೋರ್ಚಾಗಳ ಆಯ್ಕೆ ಪ್ರಕ್ರಿಯೆಯು ಜೂನ್ 26ರಂದು ನಡೆದಿತ್ತು. ಆದರೆ, ಈ ಆಯ್ಕೆ ವಿಚಾರದಲ್ಲಿ ಗೊಂದಲ ಹಾಗೂ ಭಿನ್ನಾಭಿಪ್ರಾಯಗಳು ಉಂಟಾದ ಕಾರಣ, ಪಟ್ಟಿಗೆ ತಾತ್ಕಾಲಿಕವಾಗಿ ತಡೆ ನೀಡಬೇಕು ಎಂದು ಮಧುಗಿರಿಯ ಮತ್ತೊಂದು ಬಿಜೆಪಿ ನಿಯೋಗವು…

Read More

ಕುಣಿಗಲ್: ತಾಲ್ಲೂಕಿನಲ್ಲಿ ಐದು ಸಾವಿರಕ್ಕೂ ಅಧಿಕ ಬಾಂಗ್ಲಾ ದೇಶದ ವಲಸೆಗಾರರು ಇದ್ದಾರೆ. ಅವರು ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್, ದೇಶದ ಉಳಿವಿಗಾಗಿ ವಲಸೆಗಾರರನ್ನು ಮತದಾರರ ಪರಿಷ್ಕರಣೆಯಿಂದ ಕೈ ಬಿಟ್ಟು, ದೇಶದ ಮೂಲ ವಾಸಿಗಳನ್ನು ಉಳಿಸಬೇಕೆಂದು ಅವರು ಒತ್ತಾಯಿಸಿದರು. ಅವರು ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ನಿಂದ ಎಸ್ ಇಆರ್ ದುರ್ಬಳಕೆ: ಎಸ್ ಇಆರ್ ಅನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಎಲ್ಒಗಳನ್ನು ರಾಜಕೀಯ ಮುಖಂಡರು ತಮ್ಮ ಕೈಗೊಂಬೆಯಾಗಿ ಮಾಡಿಕೊಂಡಿದ್ದಾರೆ. ಎಸ್ ಇಆರ್ ನಲ್ಲಿ ತೊಡಗಿರುವ ಅಧಿಕಾರಿಗಳಿಗೆ ದಮ್ಮಿ ಹಾಕುವ ಮೂಲಕ ರಾಜ್ಯ ವ್ಯಾಪಿ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ತಾಲ್ಲೂಕು ಸೇರಿದಂತೆ ರಾಜ್ಯದಲ್ಲಿ ಎಸ್ ಇಆರ್ ಪ್ರಾಮಾಣಿಕವಾಗಿ ನಡೆಯುತ್ತಿಲ್ಲ. ಚುನಾವಣಾ ಆಯೋಗ ಇಡೀ ದೇಶದಲ್ಲಿ ವಿಶೇಷ ಕಾರ್ಯಕ್ರಮವಾಗಿ ಎಸ್ಇಆರ್ ಅನ್ನು ರೂಪಿಸಿದೆ. ಇದು ನಿಜವಾದ ಭಾರತೀಯರಿಗೆ ಬಹಳ ಅವಶ್ಯಕತೆ ಇದೆ. ಕೇವಲ ರಾಜಕೀಯ ಅಧಿಕಾರ…

Read More

ಕುಣಿಗಲ್: ಗುರು ವ್ಯಕ್ತಿಯನ್ನು ರೂಪಿಸಿದರೆ, ಪತ್ರಿಕಾ ಮಾಧ್ಯಮ ಇಡೀ ಸಮಾಜವನ್ನು ರೂಪಿಸುತ್ತದೆ, ಜನ ಸಾಮಾನ್ಯರ ಸಮಸ್ಯೆ ಅರಿತು ಸಮಾಜವನ್ನು ತಿದ್ದುವಂತಹ ಕೆಲಸ ಪತ್ರಿಕೆಗಳು ಮಾಡುತ್ತಿವೆ ಹೀಗಾಗಿ ಪತ್ರಿಕಾ ಮೌಲ್ಯಗಳು ಇಂದಿನ ಮಕ್ಕಳಿಗೆ ಮಹತ್ವದಾಗಿದೆ, ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಮತಾಮಣಿ ತಿಳಿಸಿದರು. ಪಟ್ಟಣದ ಕನ್ನಡ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪತ್ರಿಕಾ ದಿನಾಚರಣೆ ಕೇವಲ ದಿನಾಚರಣೆಯಲ್ಲ ಸತ್ಯ, ಸ್ವಾತಂತ್ರ್ಯ ಸಾಮಾಜಿಕ, ಒಳ್ಳೆಯ ಸಂಕಲ್ಪದ ದಿನಾಚರಣೆಯಾಗಿದೆ, ಪತ್ರಿಕೆ ಸಮಾಜವನ್ನು ರೂಪಿಸುವಂತಹ ಗುರುತರವಾದ ಜವಾಬ್ದಾರಿ ಹೊಂದಿದೆ, ಸಮಾಜದಲ್ಲಿ ಶಿಕ್ಷಣ ಹಾಗೂ ಪತ್ರಿಕಾ ರಂಗ ಎರಡು ಕಣ್ಣುಗಳು ಇದ್ದ ಹಾಗೆ, ಸಮಾಜವನ್ನು ಬದಲಾಯಿಸುವಂತಹ ದೊಡ್ಡ ಶಕ್ತಿ ಲೇಖನಿ ಹೊಂದಿದೆ ಎಂದು ಹೇಳಿದರು. ವೃತ್ತ ನಿರೀಕ್ಷಕ ಮಾದ್ಯಾ ನಾಯಕ್ ಮಾತನಾಡಿ, ರಾಷ್ಟ್ರದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ಮಾಧ್ಯಮವನ್ನು ನಾಲ್ಕನೇ ಅಂಗವೆಂದು ಕರೆಯಲ್ಪಡುತ್ತಿದೆ, ಪತ್ರಿಕೆಗಳು ಸ್ವಾತಂತ್ರ್ಯ ಪೂರ್ವದಲ್ಲಿ ದೇಶದ…

Read More

ತಿಪಟೂರು: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಮ್ಮಿಯಾಗಿದ್ದು, ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿರುವುದರಿಂದ ಪೋಷಕರು ಹಾಗೂ ಶಿಕ್ಷಕರು ಎಚ್ಚರ ವಹಿಸಬೇಕಾಗಿದೆ. ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲಿದೆ ಎಂದು ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ತಿಳಿಸಿದರು. ಅವರು ತಾಲೂಕಿನ ಕೋಟೇನಾಯಕನಹಳ್ಳಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ, ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ, ನಿಧನರಾದ ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ರವರಿಗೆ ಶ್ರದ್ಧಾಂಜಲಿ ಮತ್ತು ಮೃತರ ಸ್ಮರಣಾರ್ಥ ಉಚಿತ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿ ವಿತರಣೆಯ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು. ಬಿ.ಟಿ.ಕುಮಾರ್ ನೇತೃತ್ವದಲ್ಲಿ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಈಗಾಗಲೇ ನೂರಾರು ಆರೋಗ್ಯ ಶಿಬಿರ, ಸಾವಿರಾರು ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೋಟ್ ಬುಕ್ ವಿತರಣೆ, ಕ್ರೀಡೆ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರ ಸೇರಿದಂತೆ ಹಿಂದುಳಿದ ಪ್ರದೇಶಗಳನ್ನು ಗುರುತಿಸಿ ಸಾಮಾಜಿಕಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಮೂಲಕ ತಾಲೂಕಿನಲ್ಲಿ ಯಶಸ್ವಿ ಪಯಣ ಮುಂದುವರೆಸಿದೆ…

Read More

ಮಿಡಿಗೇಶಿ: ಪಾದಚಾರಿಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಆತ ಅಸುನೀಗಿರುವ ಘಟನೆ ಪಾವಗಡ ರಾಜ್ಯ ಹೆದ್ದಾರಿ ಕೆಶಿಪ್ ರಸ್ತೆಯ ಮಿಡಿಗೇಶಿ ಗ್ರಾ.ಪಂ. ವ್ಯಾಪ್ತಿಗೆ ಬರುವ ನಲ್ಲೀಕಾಮನಹಳ್ಳಿ ಬಸ್ ನಿಲ್ದಾಣದ ಬಳಿ ನಡೆದಿದೆ. ಆಂಧ್ರ ರಾಜ್ಯದ ಸತ್ಯಸಾಯಿ ಜಿಲ್ಲೆಯ ಮಡಕಶಿರಾ ತಾಲ್ಲೂಕಿನ ಬುಳಸಂದ್ರ ಗ್ರಾಮದ ಪ್ರಭಾಕರ್ (40) ವ್ಯಕ್ತಿಯೇ ಸಾವನ್ನಪ್ಪಿರುವ ದುರ್ದೈವಿ. ಈತ ನಲ್ಲೀಕಾಮನಹಳ್ಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ತೀವ್ರ ಪೆಟ್ಟಾದ ಪ್ರಭಾಕರ್ ಅವರನ್ನು ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿ ಚಿಕಿತ್ಸೆ ಫಲಿಸದೆ ಸದರಿ ವ್ಯಕ್ತಿ ಮೃತಪಟ್ಟಿರುತ್ತಾರೆ. ಸ್ಥಳಕ್ಕೆ ಸಿಪಿಐ ಹನುಮಂತರಾಯಪ್ಪ, ಪಿಎಸ್‌ ಐ ರವೀಂದ್ರ ಅವರುಗಳು ಭೇಟಿ ನೀಡಿ ಪರಿಶೀಲಿಸಿದರು. ಮೃತನ ಪತ್ನಿ ನಾಗಮಣಿ ಎಂಬುವರು ನೀಡಿದ ದೂರಿನ ಮೇರೆಗೆ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ತುಮಕೂರು: ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ನಡೆದಿರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್) ಪ್ರಕ್ರಿಯೆಯಲ್ಲಿ ಮನೆಮನೆಗೆ ಹೋಗಿ ಮಾಹಿತಿ ಪಡೆಯಬೇಕಾದ ಬಿಎಲ್‌ ಒಗಳು, ಚುನಾವಣಾಆಯೋಗದ ಸೂಚನೆ ಉಲ್ಲಂಘಿಸಿ ಕಲ್ಯಾಣ ಮಂಟಪ, ಮಸೀದಿಗಳಲ್ಲಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಹಿರಿಯಉಪಾಧ್ಯಕ್ಷ ಟಿ.ಆರ್.ಸದಾಶಿವಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಎಲ್‌ ಒಗಳು ಯಾರದೋ ಒತ್ತಡಕ್ಕೆ ಮಣಿದು ಮಸೀದಿ, ಕಲ್ಯಾಣ ಮಂಟಪ, ಸಮುದಾಯಭವನಗಳಲ್ಲಿ ಎಸ್‌ ಐಆರ್ ಪ್ರಕ್ರಿಯೆ ನಡೆಸುತ್ತಿರುವುದನ್ನು ಬಿಜೆಪಿ ವಿರೋಧಿಸುತ್ತದೆ. ಈ ರೀತಿ ಸಾಮೂಹಿಕವಾಗಿ ಮಾಹಿತಿ ಸಂಗ್ರಹಿಸುವುದರಿಂದ ತಪ್ಪು ಮಾಹಿತಿ ಸಂಗ್ರಹವಾಗಬಹುದು ಅಥವಾ ಬಿಎಲ್‌ ಒಗಳನ್ನು ಪ್ರಭಾವಿಗಳು ತಪ್ಪುದಾರಿಗೆಳೆಯುವ ಅನುಮಾನಗಳಿವೆ. ಇದರಿಂದ ಎಸ್‌ಐಆರ್ ಆಶಯಗಳಿಗೆ ಧಕ್ಕೆಯಾಗುತ್ತದೆ ಎಂದು ಹೇಳಿದ್ದಾರೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಹೆಚ್ಚೆತ್ತುಕೊಂಡು ಇಂತಹ ಕಾರ್ಯಗಳಿಗೆ ಕಡಿವಾಣ ಹಾಕಬೇಕು. ಬಿಎಲ್‌ ಒಗಳು ಕಡ್ಡಾಯವಾಗಿ ಮನೆ ಮನೆಗೆ ಹೋಗಿಯೇ ಕುಟುಂಬದವರಿಂದ ನೇರವಾಗಿ ಮಾಹಿತಿ ಸಂಗ್ರಹಿಸಬೇಕು ಎಂದು ಕಠಿಣ ಸೂಚನೆ ನೀಡಬೇಕು ಎಂದು ಟಿ.ಆರ್.ಸದಾಶಿವಯ್ಯ ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತಿಪಟೂರು: ಕರ್ನಾಟಕದಲ್ಲಿ ಜೂನ್ 30ರಿಂದ ಆರಂಭವಾಗಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ ಐಆರ್) ಪ್ರಕ್ರಿಯೆ ಕುರಿತು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರಲ್ಲಿರುವ ಗೊಂದಲ ಮತ್ತು ಆತಂಕಗಳನ್ನು ನಿವಾರಿಸಲು ಚುನಾವಣಾ ಆಯೋಗವು ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಹೆಲ್ಪ್‌ ಲೈನ್ ಕೇಂದ್ರಗಳನ್ನು ಆರಂಭಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಜನ ಸ್ಪಂದನ ಟ್ರಸ್ಟ್ ಅಧ್ಯಕ್ಷರಾದ ಸಿ. ಬಿ. ಶಶಿಧರ್ (ಟೂಡಾ) ಒತ್ತಾಯಿಸಿದ್ದಾರೆ. ಈ ಹಿಂದೆ ಬೇರೆ ರಾಜ್ಯಗಳಲ್ಲಿ ಎಸ್‌ ಐಆರ್ ಪ್ರಕ್ರಿಯೆ ನಡೆದಾಗ ತಾಂತ್ರಿಕ ಕಾರಣಗಳಿಂದಾಗಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಟ್ಟುಹೋಗಿರುವ ವರದಿಗಳು ಬಂದಿವೆ. ಈ ಕಹಿ ಅನುಭವ ಕರ್ನಾಟಕದಲ್ಲಿ ಮರುಕಳಿಸಬಾರದು. ಯಾವುದೇ ಒಬ್ಬ ಅರ್ಹ ಮತದಾರನೂ ಮತದಾನದ ಹಕ್ಕಿನಿಂದ ವಂಚಿತನಾಗದಂತೆ ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರ ತಕ್ಷಣವೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. “ಸಾರ್ವಜನಿಕರಿಗೆ ಎಸ್‌ ಐಆರ್ ಪ್ರಕ್ರಿಯೆಗೆ ಬೇಕಾಗುವ ವಾಸಸ್ಥಳ ದೃಢೀಕರಣ ಪತ್ರ ಸೇರಿದಂತೆ ಅಗತ್ಯವಿರುವ ಹಲವು…

Read More