Subscribe to Updates
Get the latest creative news from FooBar about art, design and business.
- ವಾಸ್ತವ ಒಡೆದು ನೋಡಿದಾಗ?
- ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ
- ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
- ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
- ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
- ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
- ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
- ಹುಯಿಲ್ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
Author: admin
ಮಂಗಳೂರು: ಮಂಗಳೂರಿನಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ನಡೆಸಲಾಗಿದ್ದು, ಈತ 2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯೂ ಆಗಿದ್ದು, ಈತ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಬೆನ್ನಲ್ಲೇ ಮಂಗಳೂರು ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಸೆಕ್ಷನ್ 163 ಜಾರಿಗೊಳಿಸಲಾಗಿದೆ. ಆದೇಶದಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ‘ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್, ಪ್ರಜ್ವಲ್, ಅನ್ವಿತ್,…
ತುಮಕೂರು: ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಇಂದು ತಮ್ಮ ಹುಟ್ಟುಹಬ್ಬವನ್ನು ಕಾರ್ಮಿಕ ದಿನಾಚರಣೆಯ ಮೂಲಕ ಕಾರ್ಮಿಕರಿಗೆ ಅಗತ್ಯ ಸಾಮಗ್ರಿಗಳನ್ನು ಹಾಗೂ ಅವರ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸುವ ಮೂಲಕ ವಿಭಿನ್ನವಾಗಿ ಆಚರಿಸಿಕೊಂಡರು. ಅಲ್ಲದೆ ಯಾವುದೇ ರೀತಿಯ ಹೂವು ಬೊಕ್ಕೆ ಹಾರ ಸ್ವೀಕರಿಸದೆ ಕೇವಲ ನೋಟ್ ಪುಸ್ತಕಗಳನ್ನು ಅಭಿಮಾನಿಗಳಿಂದ ಸ್ವೀಕರಿಸಿ ಅದನ್ನು ದಾನದ ರೂಪದಲ್ಲಿ ಮಕ್ಕಳಿಗೆ ವಿತರಿಸಿದರು. ಇನ್ನು ಈ ನಡುವೆ ಹುಟ್ಟು ಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯವನ್ನು ತಮ್ಮ ಅಭಿಮಾನಿಗಳ ಒತ್ತಾಯಕ್ಕೆ ಯಾವುದೇ ರೀತಿಯ ಬೆಂಬಲ ನೀಡಲಿಲ್ಲ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಒನ್ ನೇಷನ್, ಒನ್ ಎಲೆಕ್ಷನ್ ಮಹಿಳಾ ಮೀಸಲಾತಿ ಬಿಲ್ ಮತ್ತು ಜಾತಿಗಣತಿ ಇವೆಲ್ಲಾ ಕೇಂದ್ರ ಸರ್ಕಾರದ, ಮೋದಿ ಅವರ ದೂರದೃಷ್ಟಿಯ ಚಿಂತನೆ ಆಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗಾಳಿಯಲ್ಲಿ ಗುಂಡು ಹೊಡೆಯೋದನ್ನ ಬಿಟ್ಟು, ರಾಜ್ಯದ ಅಭಿವೃದ್ಧಿಗೆ ಶ್ರಮಿಸೋದು ಉತ್ತಮ. ಪ್ರಧಾನಿ ಮೋದಿ ಅವರ ಯಾವುದೇ ಕಾರ್ಯಕ್ರಮಗಳು ದೂರದೃಷ್ಟಿಯಿಂದ ತುಂಬಿದೆ ಎಂದು ತಿಳಿಸಿದರು. ಮತ್ತೆ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಜಾತಿ ಗಣತಿ ಮಾಡೋದ್ರಿಂದ ಎಲ್ಲರಿಗೂ ಒಂದು ಸಂದೇಶ ತಲುಪುತ್ತದೆ.ಈ ದೇಶ ಜಾತ್ಯಾತೀತ ರಾಷ್ಟ್ರ, ಸುಮಾರು ವರ್ಷಗಳಿಂದ ಜಾತಿಗಣತಿ ಮಾಡಬೇಕು ಅಂತಿತ್ತು ಹಾಗಾಗಿ ಮಾಡ್ತಿದ್ದೇವೆ ಎಂದರು. ಕಾಂಗ್ರೆಸ್ ನವರು ಇಷ್ಟು ವರ್ಷ ಇದ್ರರಲ್ಲ. ಅವರು ಯಾಕೆ ಜಾತಿಗಣತಿ ಮಾಡಲಿಲ್ಲ.ದೇಶದ ಜ್ವಲಂತ ಸಮಸ್ಯೆಗಳಿಗೆ ಮೋದಿ ಅವರು ಪರಿಹಾರ ಕಂಡುಕೊಂಡಿದ್ದಾರೆ ಎಂದರು. 25 ಕೋಟಿ ಕುಟುಂಬವನ್ನ ಮೇಲೆಕ್ಕೆ ತಂದಿದ್ದಾರೆ. ರಾಜ್ಯ ಸರ್ಕಾರದ ಜಾತಿಗಣತಿಗೆ ಬೆಲೆ ಇಲ್ಲ.ಅದು ಹೊರಟು ಹೊಗಿದೆ. ಜಾತಿಗಣತಿ ಮಾಡೋ ಪವರ್ ಇರೋದು ಕೇಂದ್ರ…
ತುಮಕೂರು: ಬೆಂಗಳೂರಿನ ನಿಮ್ಹಾನ್ಸ್ ಎಪಿಡೀಮಿಯಾಲಜಿ ವಿಭಾಗದ ಜನ ಆರೋಗ್ಯ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅನುಷ್ಟಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರ ಆಯ್ಕೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ತುರುವೇಕೆರೆ, ಚಿಕ್ಕನಾಯಕನಹಳ್ಳಿ, ತಿಪಟೂರು, ಶಿರಾ, ಗುಬ್ಬಿ ಹಾಗೂ ಕುಣಿಗಲ್ ತಾಲ್ಲೂಕುಗಳಿಗೆ ಯುವ ಪರಿವರ್ತಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವವರು ಪದವಿ ಹೊಂದಿದ್ದು, 21 ರಿಂದ 35 ವರ್ಷದೊಳಗಿನವರಾಗಿರಬೇಕು. ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 10ರೊಳಗಾಗಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8549890509/ 9353321355ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಬ್ರಾಹ್ಮಣ ಸಭಾ, ಶ್ರೀ ಶಂಕರ ಸೇವಾ ಸಮಿತಿ ಸಹಯೋಗದಲ್ಲಿ ಮೇ 2ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಶ್ರೀ ಶಂಕರಾಚಾರ್ಯ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಸಮಾಜದ ಗಣ್ಯರು, ವಿವಿಧ ಸಮುದಾಯದ ಮುಖಂಡರು ಭಾಗವಹಿಸಲಿದ್ದು, ಕಾರ್ಯಕ್ರಮ ಕುರಿತು ಜಿಲ್ಲಾ ಬ್ರಾಹ್ಮಣ ಸಭಾ ಸಂಸ್ಥೆಯ ಉಪಾಧ್ಯಕ್ಷ ಹಾಗೂ ಶೃಂಗೇರಿ ಶಂಕರ ತತ್ವ ಪ್ರಸಾರ ಅಭಿಯಾನದ ಎಂ.ಕೆ. ನಾಗರಾಜರಾವ್ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಮುಂಗಾರು ಹಂಗಾಮು ಪ್ರಾರಂಭದ ಮುನ್ನ ಜಮೀನಿನಲ್ಲಿ ಮಾಗಿ ಉಳುಮೆ ಮಾಡುವುದರಿಂದ ಹೊಲದ ಮಣ್ಣಿನ ಸವಕಳಿ ತಡೆದು ಅದರ ಫಲವತ್ತತೆ ಹೆಚ್ಚಳವಾಗಲು ಸಹಕಾರಿಯಾಗಲಿದ್ದು, ರೈತರು ತಪ್ಪದೆ ಮಾಗಿ ಉಳುಮೆ ಮಾಡಬೇಕೆಂದು ಪಾವಗಡ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಅಜಯ್ ಕುಮಾರ್ ಆರ್. ಸಲಹೆ ನೀಡಿದ್ದಾರೆ. ಕೃಷಿ ಭೂಮಿಯಲ್ಲಿ ಅತ್ಯಂತ ಸಹಜವಾಗಿ ನೀರು ಇಂಗಿಸುವ ವಿಧಾನವೇ ಮಾಗಿ ಉಳುಮೆ. ಇಳಿಜಾರಿಗೆ ಅಡ್ಡಲಾಗಿ ಮಾಡುವುದರಿಂದ ಮಣ್ಣಿನ ಸವಕಳಿ ತಡೆದು ಅದರ ಫಲವತ್ತತೆಯನ್ನು ಉಳಿಸಬಹುದು. ಹದವಾಗಿ ಉಳುಮೆ ಮಾಡುವುದರಿಂದ ಹೆಂಟೆಗಳು ಒಡೆಯತ್ತವೆ. ಮಣ್ಣಿನ ಕಣಗಳ ರಚನೆ ಸುಧಾರಿಸುತ್ತದೆ. ಈ ವಿಧಾನದಿಂದ ಮಣ್ಣು ಸಡಿಲವಾಗುವ ಕಾರಣ ಬಿದ್ದ ಮಳೆ ನೀರು ಭೂಮಿಯ ಹೊರ ಪದರದಲ್ಲಿ ಹರಿದು ಹೋಗದೆ ಒಳಗಡೆ ಇಳಿಯುತ್ತದೆ. ಇದರಿಂದ ಜಮೀನು ತೇವಾಂಶದಿAದ ಕೂಡಿರುತ್ತದೆ. ಮಾಗಿ ಉಳುಮೆ ಮಾಡುವುದರಿಂದ ಮಣ್ಣಿನ ಕೆಳ ಪದರದಲ್ಲಿರುವ ರೋಗಾಣುಗಳ ಶೀಲೀಂದ್ರ ಕೀಟಗಳು ಮತ್ತು ಅವುಗಳ ಮೊಟ್ಟೆ, ಕೋಶಗಳು ಬಿಸಿಲಿಗೆ ನಾಶವಾಗುವುದರ ಜೊತೆಗೆ ಪಕ್ಷಿಗಳಿಗೆ ಆಹಾರವಾಗುತ್ತದೆ. ಬೆಳೆಗಳ ತ್ಯಾಜ್ಯ ವಸ್ತುಗಳಾದ ಬೇರು,…
ತುಮಕೂರು: ಬೆಸ್ಕಾಂ ನಗರ ಉಪ ವಿಭಾಗ–1ರ ಗ್ರಾಹಕರು ವಿದ್ಯುತ್ ಸ್ಥಾವರದ ಬಿಲ್ ಮೊತ್ತವನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆ.ಇ.ಆರ್.ಸಿ)ದ ನಿಯಮಾನುಸಾರ ಶಾಶ್ವತ ವಿದ್ಯುತ್ ಸಂಪರ್ಕ ನಿಲುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪಿ. ನಾಗರಾಜು ತಿಳಿಸಿದ್ದಾರೆ. ಸತತವಾಗಿ 2 ತಿಂಗಳು ವಿದ್ಯುತ್ ಬಿಲ್ಲು ಪಾವತಿಸದಿದ್ದಲ್ಲಿ, 3ನೇ ತಿಂಗಳಲ್ಲಿ ಗ್ರಾಹಕರ ವಿದ್ಯುತ್ ಸ್ಥಾವರದ ಮಾಪಕವನ್ನು ಕಳಚಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ನಂತರ ಅದೇ ವಿದ್ಯುತ್ ಸ್ಥಾವರಕ್ಕೆ ಪುನಃ ವಿದ್ಯುತ್ ಸಂಪರ್ಕ ಬೇಕಾದರೆ ಉಚ್ಛ ನ್ಯಾಯಾಲಯದ ಆದೇಶದ ಪ್ರಕಾರ ವಾಸ ಧೃಡೀಕರಣ ಪತ್ರ (Occupancy Certificate)ದೊಂದಿಗೆ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಎಲ್ಲ ಗ್ರಾಹಕರು ತಮ್ಮ ಬಾಕಿ ವಿದ್ಯುತ್ ಬಿಲ್ಲನ್ನು ತಕ್ಷಣವೇ ಪಾವತಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ನಗರ ಪೊಲೀಸ್ ಠಾಣೆ ಆವರಣದಲ್ಲಿ ಮಾಲೀಕರು ಪತ್ತೆಯಾಗದ 7 ದ್ವಿಚಕ್ರ ವಾಹನಗಳನ್ನು ಮೇ 6ರಂದು ಬೆಳಿಗ್ಗೆ 10:30 ಗಂಟೆಗೆ ಸಾರ್ವಜನಿಕವಾಗಿ ಬಹಿರಂಗ ಹರಾಜು ಮಾಡಲಾಗುವುದು. ಹರಾಜನ್ನು ತುಮಕೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಸಮಕ್ಷಮದಲ್ಲಿ ನಡೆಸಲಾಗುತ್ತಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಸಾರ್ವಜನಿಕರಿಗೆ ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವುದು ಅವರನ್ನು ಸ್ವಾವಲಂಬಿಗಳನ್ನಾಗಿಸುವುದು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಮುಖ ಸಂಕಲ್ಪವಾಗಿದೆ ಎಂದು ಪಾವಗಡ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ.ಎಸ್. ಪಾಪಣ್ಣ ತಿಳಿಸಿದರು. ಪಾವಗಡ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಇಲಾಖಾವಾರು ಮಾಹಿತಿ ಪಡೆದ ಅವರು, ಪಾವಗಡ ತಾಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯದವರನ್ನು ಪತ್ತೆ ಹಚ್ಚಿ ಅವರ ಖಾತೆಗೆ 2,000 ರೂ. ಹಣವನ್ನು ತಲುಪಿಸಬೇಕೆಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಖೀಬ್ ಅವರಿಗೆ ಖಡಕ್ ಸೂಚನೆ ನೀಡಿದರು. ಗ್ರಾಮೀಣ ಭಾಗದಲ್ಲಿ ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಯಾಕೆ ಬರುತ್ತಿಲ್ಲ ಎನ್ನುವುದರ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಅವರು ಸೂಚಿಸಿದರು. ಪಾವಗಡ ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲೂ ಸಹ ಅನ್ನಭಾಗ್ಯ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಮಧ್ಯವರ್ತಿಗಳ ಮತ್ತು ಕಮಿಷನ್ ದಂಧೆಗೆ ಕಡಿವಾಣ ಹಾಕುವುದರ ಜೊತೆಗೆ ಸಮಯಕ್ಕೆ ಸರಿಯಾಗಿ ಪಡಿತರ ವಿತರಣೆಗೆ ಸೂಚಿಸಿದರು. ಶಕ್ತಿ ಯೋಜನೆಯ ಪ್ರಗತಿಯನ್ನು…
ಇಂದು ನವದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ ೮೯೪ನೇ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣನವರು ತಮ್ಮ ಇಲಾಖೆಯ ಮೂಲಕ ಆಯೋಜಿಸಿ, ಅತ್ಯಂತ ಯಶಸ್ವಿಯಾಗಿ ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಬಸವ ಜಯಂತಿಯನ್ನು ಆಯೋಜಿಸುವಲ್ಲಿ ಸಫಲರಾಗಿದ್ದಾರೆ. ಕಾರ್ಯಕ್ರಮಕ್ಕೆ ಕೇಂದ್ರದ ಸಚಿವರುಗಳನ್ನು, ರಾಜ್ಯದ ಸಂಸದರುಗಳನ್ನು, ಮಠಾಧೀಶರುಗಳನ್ನು ಮತ್ತು ಬಸವಾಭಿಮಾನಿಗಳನ್ನು, ದೆಹಲಿ ಕನ್ನಡಿಗರನ್ನು ವಿ.ಸೋಮಣ್ಣನವರು ಆಹ್ವಾನಿಸಿದ್ದರು. ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು, ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ್, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಮತ್ತು ನೂತನ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಸಚಿವ ಪ್ರಹ್ಹಾದ್ ಜೋಶಿ, ಕಾರ್ಮಿಕ ಮತ್ತು ಉದ್ಯೋಗ ಖಾತೆಯ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ, ರೈಲ್ವೆ ರಾಜ್ಯ ಖಾತೆಯ ಸಚಿವ ರವನೀತ ಸಿಂಗ್, ಜಲಶಕ್ತಿ ರಾಜ್ಯ ಖಾತೆಯ ಸಚಿವ ರಾಜಬೂಷಣ್ ಚೌಧರಿ, ಸಂಸದರಾದ ಪಿ.ಸಿ.ಗದ್ದಿಗೌಡರ, ತೇಜಸ್ವಿ ಸೂರ್ಯ, ಮಾಜಿ ಸಂಸದರಾದ ಡಾ. ಉಮೇಶ್ ಜಾದವ್, ಅಣ್ಣಾ ಸಾಹೆಬ್ ಜೊಲ್ಲೆ,…