Author: admin

ಮಂಡ್ಯ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮಧ್ಯಾಹ್ನದ ಬಿಸಿಯೂಟ ತಯಾರಕರ ಕೆಲಸವನ್ನು ಖಾಯಂಗೊಳಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಬಿಸಿಯೂಟ ತಯಾರಕರ ಸೇವೆಯನ್ನು ಮಾನವೀಯ ನೆಲೆಗಟ್ಟಿನಲ್ಲಿ ಪರಿಗಣಿಸಿ 60 ವರ್ಷ ತುಂಬಿದ ಬಿಸಿಯೂಟ ತಯಾರಕ ಮಹಿಳೆಯರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಬಾರದು ಎಂದು ಮಂಡ್ಯ ಜಿಲ್ಲಾ ಮಧ್ಯಾಹ್ನದ ಬಿಸಿಯೂಟ ತಯಾರಕರ ಸಂಘದ ಜಿಲ್ಲಾಧ್ಯಕ್ಷೆ ಮಹದೇವಮ್ಮ ಆಗ್ರಹಿಸಿದರು. ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ತಾಲ್ಲೂಕಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಬಿಸಿಯೂಟ ತಯಾರಕರ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಕೇವಲ ದಿನಕ್ಕೆ 10 ರೂ.  ಗೌರವಧನ ಪಡೆದುಕೊಂಡು ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಬಿಸಿಯೂಟ ತಯಾರಕ ಮಹಿಳೆಯರು ಬಡಕುಟುಂಬಕ್ಕೆ ಸೇರಿರುವ ನಿರ್ಗತಿಕ, ವಿಶೇಷಚೇತನ ಹಾಗೂ ವಿಧವಾ ಮಹಿಳೆಯರಾಗಿದ್ದಾರೆ.  ಕಳೆದ 19 ವರ್ಷಗಳಿಂದ ಬಿಸಿಯೂಟ ತಯಾರಿಕಾ ಕೆಲಸವನ್ನು ಮಾಡುತ್ತಿರುವ ಮಹಿಳೆಯರಿಗೆ ರಾಜ್ಯ ಸರ್ಕಾರವು ಕೇವಲ 2,600ರೂ, 2,700ರೂ ಗೌರವ ಧನವನ್ನು ಮಾತ್ರ ನೀಡುತ್ತಿದೆ. ಸಿಐಟಿಯು ನೇತೃತ್ವದಲ್ಲಿ ಬಿಸಿಯೂಟ ತಯಾರಕರು ನಡೆಸಿದ…

Read More

ಬೆಂಗಳೂರು: ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಐಪಿಎಸ್ ಹುದ್ದೆಗೇರಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯಗೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿದೆ. ಕುರುಬ ಜಾತಿಗೆ ಸೇರಿದ‌ ಕೆಂಪಯ್ಯ ಕಾಡು ಕುರುಬ ಜಾತಿಯೆಂದು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಕೆಲಸ‌ ಪಡೆದಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಪರಿಶಿಷ್ಟ ಪಂಗಡ ಕೋಟಾದಡಿ ಐಪಿಎಸ್ ಹುದ್ದೆಗೆ ಏರಿರುವ ಆರೋಪವಿತ್ತು. ನಂತರ ಕೆಂಪಯ್ಯ ಕೇಸ್ ವಿಚಾರಣೆಗೆ ಬಂದಿರಲಿಲ್ಲ. ಇದೀಗ ಫೈಲ್ ಪತ್ತೆಯಾದ ಬಳಿಕ ಮತ್ತೆ ವಿಚಾರಣೆ ಆರಂಭಿಸಲು ಡಿಸಿಆರ್‌ ಬಿ ಮುಂದಾಗಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಮಧುಗಿರಿ:  ಪಟ್ಟಣದ 23ನೇ ವಾರ್ಡ್‍ನಲ್ಲಿ ಅಖಿಲ ಕರ್ನಾಟಕ ಡಾ.ಬಾಬುಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ಸಂಘದ ವತಿಯಿಂದ ಬಾಬುಜಗಜೀವನರಾಮ್ ಮತ್ತು ಡಾಅಂಬೇಡ್ಕರ್ ರವರ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಪುರಸಭಾ ಸದಸ್ಯ ಲಾಲಪೇಟೆ ಮಂಜುನಾಥ್, ಸಂಘದ ಅಧ್ಯಕ್ಷ ಶ್ರೀಹರಿಗಣೇಶ್, ಪದಾಧಿಕಾರಿಗಳಾದ ಗುರುರಾಜ್, ಮಹೇಶ್, ರಾಜೇಶ್, ಸಿದ್ದಣ್ಣ, ಮಹದೇವ್, ಪ್ರಕಾಶ್, ಗಂಗಾಧರಪ್ಪ, ಗಂಗರಾಮಯ್ಯ, ಮಲ್ಲೇಶಪ್ಪ, ಹನುಮಂತರಾಯಪ್ಪ, ನಾಗರಾಜು ಹಾಗೂ ಇತರರು ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಪಾವಗಡ: ಜಾತ್ಯಾತೀತ ಜನತಾದಳ ಪಕ್ಷ ಅಧಿಕಾರಕ್ಕೆ ಬಂದರೆ, ಕರ್ನಾಟಕದಲ್ಲಿ ನದಿಗಳನ್ನು ಜೋಡಣೆ ಮಾಡಿ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಬಳಸಿಕೊಂಡು ಕರ್ನಾಟಕ ಸಮಗ್ರ ನೀರಾವರಿ ಹಾಗೂ ಕುಡಿಯುವ ನೀರಿಗೆ ರೂಪಿಸುವ ಯೋಜನೆಯೇ  ಜನತಾ ಜಲಧಾರೆ ಎಂದು  ಮಾಜಿ ಶಾಸಕ ಕೆ. ಎಮ್. ತಿಮ್ಮರಾಯಪ್ಪ ಹೇಳಿದರು. ತಾಲೂಕಿನ ರಾಜವಂತಿ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಜನತಾ ಜಲಧಾರೆ ರಥಯಾತ್ರೆಗೆ  ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲಾ ಜೆ.ಡಿ.ಎಸ್. ಘಟಕದ ಅಧ್ಯಕ್ಷ  ಆರ್. ಸಿ .ನೆನಪು ರವರು ಮಾತನಾಡಿ,  ನಮ್ಮ ಪಕ್ಷದ ಜನತಾ ಜಲಧಾರೆ  ರಥಯಾತ್ರೆಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದೆ.  2023ರ ವಿಧಾನಸಭಾ ಚುನಾವಣೆಯಲ್ಲಿ ಪಾವಗಡ ತಾಲೂಕಿನ ಮಾಜಿ ಶಾಸಕ ಕೆ .ಎಮ್. ತಿಮ್ಮರಾಯಪ್ಪ ರನ್ನು ಅತೀ ಹೆಚ್ಚು ಮತಗಳ ಅಂತರದಿಂದ  ಗೆಲ್ಲಿಸುವಂತೆ ಕರೆ ನೀಡಿದರು ರಾಜ್ಯ ಜೆಡಿಎಸ್  ಹಿರಿಯ ಉಪಾಧ್ಯಕ್ಷರಾದ ತಿಮ್ಮ ರೆಡ್ಡಿ ಮಾತನಾಡಿ, ಜಾತ್ಯಾತೀತ ಜನತಾದಳದ ದೂರದೃಷ್ಟಿಯ ಯೋಜನೆ ಇದಾಗಿದ್ದು, 2023 ಕ್ಕೆ ಜನತಾ ಸರ್ಕಾರ ಅಸ್ತಿತ್ವಕ್ಕೆ ಬಂದರೆ,  ಕರ್ನಾಟಕ ರಾಜ್ಯ…

Read More

ಹಿರಿಯೂರು : ಭಾರತೀಯ ದಲಿತ ಸಂಘರ್ಷ ಸಮಿತಿ ವತಿಯಿಂದ  ಚಿತ್ರದುರ್ಗ ಜಿಲ್ಲೆಯ  ಹಿರಿಯೂರು ತಾಲ್ಲೂಕಿನ  ಸಮಿತಿಯ ವತಿಯಿಂದ ಆಡುವಳ್ಳಿ ಗ್ರಾಮ  ಶಾಖೆ ಉದ್ಘಾಟನೆ ಮಾಡಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಚಿತ್ರದುರ್ಗ ಜಿಲ್ಲೆಯ ನಿರ್ಮಿತಿ ಕೇಂದ್ರದ ಮೂಡಲಗಿರಿಯಪ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಜೆಡಿಎಸ್  ಪಕ್ಷದ  ಅಧ್ಯಕ್ಷರಾದ ಮಸ್ಕಲ್ ಹನುಮಂತರಾಯಪ್ಪ , BDSS  ರಾಜ್ಯ ಕಾರ್ಯಾಧ್ಯಕ್ಷರಾದ ತಿಮ್ಮರಾಜು ಕೆ ., ರಾಜ್ಯ ಉಪಾಧ್ಯಕ್ಷರಾದ ಚಂದ್ರಪ್ಪ  ಗಾಟ್ ,  ರಾಜ್ಯ ನಿರ್ದೇಶಕರಾದ ವೆಂಕಟೇಶ, ರಾಜ್ಯ ಮುಖಂಡರಾದ ರಾಜಣ್ಣ ಕೆ.ಎಂ. ಕೊಟಿಗೆ ,  ಜಿಲ್ಲಾ ಕಾರ್ಯಾಧ್ಯಕ್ಷರಾದ ಮಹಾಂತೇಶ್,  ಗಾಂಧಿನಗರ ತಾಲ್ಲೂಕು ಅಧ್ಯಕ್ಷರಾದ ರಮೇಶ್ ಸೂರಗೊಂಡನಹಳ್ಳಿ ,  ಗುತ್ತಿಗೆದಾರರಾದ ಬಾಲರಾಜು, ಚಳಮಡು ಪರುಶುರಾಮ್ , ಬಿ ಡಿ ಎಸ್ ಎಸ್ ಜಿಲ್ಲಾ ಕಾರ್ಯದರ್ಶಿ  ಉಮೇಶ್ , ಗ್ರಾಮ  ಪಂಚಾಯ್ತಿ ಸದಸ್ಯರಾದ  ರಂಗಸ್ವಾಮಿ ಹುಲುಗಲಕುಂಟೆ,  ಗ್ರಾಮ  ಸದಸ್ಯರು ಲಿಂಗರಾಜು ಗೂಡ್ಸ್ ಆಟೊ, ತಾಲ್ಲೂಕು ಅಧ್ಯಕ್ಷರು, ವೆಲಾಣ್ಣ ,  ತಾಲ್ಲೂಕು ಉಪಧ್ಯಕ್ಷರಾದ ಚಿದಾನಂದ, ಉಡುವಳ್ಳಿ  ಗ್ರಾಮ…

Read More

ಗುಬ್ಬಿ: ಗುಬ್ಬಿ ತಾಲೂಕಿನಲ್ಲಿ ಜಾತಿ ದೌರ್ಜನ್ಯಕ್ಕೊಳಗಾಗಿ ಇಬ್ಬರು ಯುವಕರು ಹತ್ಯೆಗೀಡಾದ ಘಟನೆಗೆ ಸಂಬಂಧಿಸಿದಂತೆ ಬಹುಜನ ಸಮಾಜ ಪಕ್ಷದ ತುಮಕೂರು ಜಿಲ್ಲಾ ಸಮಿತಿಯ ನಿಯೋಗ ಶನಿವಾರ ಗುಬ್ಬಿ ತಾಲೂಕಿಗೆ ಭೇಟಿ ನೀಡಿತು. ನಿಯೋಗದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಎಂ. ಗುರುಮೂರ್ತಿ, ರಾಜ್ಯ ಕಾರ್ಯದರ್ಶಿ ಸೂಲಯ್ಯ ,  ಜಿಲ್ಲಾಧ್ಯಕ್ಷ ರಾಜಸಿಂಹ,  ಜಿಲ್ಲಾ ಪ್ರಧಾನ ಕಾರ್ಯದರ್ಶಿ  ರಂಗಧಾಮಯ ಇದ್ದರು. ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಪೆದ್ದನಹಳ್ಳಿ ಗ್ರಾಮದಲ್ಲಿ ಜಾತಿ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ.ಗಿರೀಶ್ ಅವರ ಅಂತ್ಯ ಸಂಸ್ಕಾರಕ್ಕೆ ಅವರ ತೋಟಕ್ಕೆ ಮತ್ತು ಮನೆಗೆ ಭೇಟಿ ಕೊಟ್ಟು ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಅವರಿಗೆ ಧೈರ್ಯ ತುಂಬಲಾಯಿತು. ಘಟನೆ ಬಗ್ಗೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತನಾಡಿ, ಯಾವುದೇ ಒತ್ತಡಕ್ಕೆ ಮಣಿಯದೆ ಆರೋಪಿಗಳ ದಸ್ತಗಿರಿಗೆ ಒತ್ತಾಯಿಸಲಾಯಿತು. ಸಂತ್ರಸ್ತರಿಗೆ ಪೊಲೀಸ್ ರಕ್ಷಣೆ ಒದಗಿಸಲು ಸೂಚಿಸಲಾಯಿತು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮತ್ತು ಗುಬ್ಬಿ ತಾಲೂಕು ಸಮಾಜ ಕಲ್ಯಾಣ ಅಧಕಾರಿಗಳ ಜೊತೆ ಮಾತನಾಡಿ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವಿಳಂಬ ಮಾಡದೇ…

Read More

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿನ ಬದಲು ಮಹನೀಯರ ಹೆಸರನ್ನು ಇಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಶಿವಮೊಗ್ಗದಲ್ಲಿ ನೂತನವಾಗಿ ವಿಮಾನ ನಿಲ್ದಾಣವಾಗುತ್ತಿದೆ.ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಹೀಗಾಗಿ ಅಂತವರ ಹೆಸರನ್ನಿಡುವುದು ಸೂಕ್ತ ಎಂದು ಬಿಎಸ್​ವೈ ಪತ್ರದಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ವಿಮಾನನಿಲ್ದಾಣ ನಿರ್ಮಾಣ 2006ರಲ್ಲೇ ಆರಂಭಗೊಂಡಿತ್ತು. ಆದರೆ ಕಾಮಗಾರಿ ವಿಳಂಬವಾಯ್ತು. ಬೆಂಗಳೂರಿನ ನಂತರ ಅತಿಹೆಚ್ಚು ಉದ್ದದ ರನ್ ವೇ ಹೊಂದಿರುವ ಏರ್‌ಪೋರ್ಟ್ ಶಿವಮೊಗ್ಗ ವಿಮಾನ ನಿಲ್ದಾಣವಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣದ ಸೌಲಭ್ಯ ಹೊಂದಿರಲಿದೆ ಎಂದು ಬಿಎಸ್​ವೈ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಾಸನ: ಸಾಲದ ಹಣವನ್ನು ವಾಪಸ್‌ ಕೊಡುವಂತೆ ಕೇಳಿದಾಗ ಬಲವಂತವಾಗಿ ಮದ್ಯ ಕುಡಿಸಿ , ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹೊಳೆನರಸೀಪುರ ತಾಲೂಕು ಪರಸನಹಳ್ಳಿಯಲ್ಲಿ ಎಂಬಲ್ಲಿ ನಡೆದಿದೆ. ಪರಸನಹಳ್ಳಿ ಗ್ರಾಮದ ನಂಜೇಗೌಡ ಎಂಬವರು ತಮ್ಮ ಪಕ್ಕದ ಬಂಡಿಹಳ್ಳಿ ಗ್ರಾಮದ ಶಿವಶಂಕರ ಅವರಿಗೆ ಮನೆ ಕಟ್ಟಲು 1.43 ಲಕ್ಷ ರೂ. ಸಾಲ ಕೊಟ್ಟಿದ್ದರು. ಇವರು ಕೊಟ್ಟ ಸಾಲವನ್ನು ವಾಪಸ್ ಕೊಡುವಂತೆ ಶಿವಶಂಕರ ಅವರ ಮನೆಯ ಹತ್ತಿರ ಹೋಗಿ ಕೇಳಿದ್ದರು. ಆದರೆ ಶಿವಶಂಕರ ಅವರ ತಾಯಿ ಭಾಗ್ಯಮ್ಮ ಮತ್ತು ಅವರ ಹೆಂಡತಿ ರೇಣುಕಾ ಎಂಬವರು ಹಣ ಕೊಡುತ್ತೇವೆ ಎಂದು ಉಪಾಯದಿಂದ ನಂಜೇಗೌಡ ಅವರನ್ನು ಮನೆ ಒಳಗೆ ಕರೆದು ಬಾಗಿಲು ಹಾಕಿಕೊಂಡು ಮದ್ಯ ಕುಡಿಸಿ ದೊಣ್ಣೆಯಿಂದ ಹೊಡೆದಿದ್ದಾರೆ. ನಂಜೇಗೌಡರವರು ಮನೆಗೆ ವಾಪಸ್‌ ಬರದೆ ಇದ್ದಾಗ ಅವರ ಮಗ ಗಂಗಾಧರ ಮತ್ತು ಕಲ್ಲೇನಹಳ್ಳಿ ಸುನಿಲ್‌ ಎಂಬುವರು ಶಿವಶಂಕರ ಅವರ ಮನೆಯ ಹತ್ತಿರ ನೋಡಿದಾಗ ನಂಜೇಗೌಡರು ರಕ್ತಸ್ರಾವದಿಂದ ಬಿದ್ದು ಒದ್ದಾಡುತ್ತಿದ್ದರು. ಮಗ ಗಂಗಾಧರನ ಬಳಿ ಆರೋಪಿಗಳು ಹಲ್ಲೆ ನಡೆಸಿದ ವಿಷಯ…

Read More

ನವದೆಹಲಿ: ಓಲಾದ ಎಲೆಕ್ಟ್ರಿಕ್‌  ದ್ವಿಚಕ್ರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು,ಓಲಾ ಕಂಪನಿಯು ತನ್ನ 1,441 ವಾಹನಗಳನ್ನು ಭಾನುವಾರ ಹಿಂಪಡೆದಿದೆ. ‘ಮುನ್ನೆಚ್ಚರಿಕಾ ಕ್ರಮವಾಗಿ ನಾವು ನಿರ್ದಿಷ್ಟ ಬ್ಯಾಚ್‌ನ ವಾಹನಗಳನ್ನು ಪರಿಶೀಲಿಸುತ್ತೇವೆ. ಆದ್ದರಿಂದ 1,441 ವಾಹನಗಳನ್ನು ಸ್ವಯಂಪ್ರೇರಿತವಾಗಿ ಹಿಂಪಡೆಯುತ್ತಿದ್ದೇವೆ’ ಎಂದು ಓಲಾ ಕಂಪೆನಿ ತಿಳಿಸಿದೆ. ಹಿಂಪಡೆದ ಸ್ಕೂಟರ್‌ಗಳನ್ನು ಎಂಜಿನಿಯರ್‌ಗಳು ಪರಿಶೀಲಿಸುತ್ತಾರೆ. ಬ್ಯಾಟರಿ ವ್ಯವಸ್ಥೆಗಳು, ಥರ್ಮಲ್ ಸಿಸ್ಟಮ್‌ಗಳು ಮತ್ತು ಸುರಕ್ಷತಾ ವ್ಯವಸ್ಥೆಗಳಲ್ಲಿನ ಸಮಸ್ಯೆಯನ್ನು ಪತ್ತೆ ಮಾಡಲಿದ್ದಾರೆ’ ಎಂದು ಸಂಸ್ಥೆ ತಿಳಿಸಿದೆ. ಬ್ಯಾಟರಿ ವ್ಯವಸ್ಥೆಗಳು ಯುರೋಪಿನ ‘ಇಸಿಇ-136’ ಮಾನದಂಡಗಳಿಗೆ ಅನುಗುಣವಾಗಿವೆ. ಜತೆಗೆ, ಭಾರತದ ಇತ್ತೀಚಿನ ಪ್ರಸ್ತಾವಿತ ‘ಎಐಎಸ್-156’ಗೆ ಅನುಗುಣವಾಗಿ ಪರೀಕ್ಷಿಸಲ್ಪಟ್ಟಿದೆ’ ಎಂದು ಓಲಾ ಹೇಳಿದೆ. ಅಗ್ನಿ ಅವಘಡಗಳನ್ನು ಪರಿಶೀಲಿಸಲು ಸರ್ಕಾರ  ಸಮಿತಿಯನ್ನು ರಚಿಸಿದೆ. ಕಂಪನಿಗಳು ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೆ ದಂಡ ವಿಧಿಸುವುದಾಗಿಯೂ ಸರ್ಕಾರ ಎಚ್ಚರಿಕೆಯನ್ನು ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೋವಿಡ್ ಹೊಸ ರೂಪಾಂತರ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಪಾಯಕಾರಿ ಪರಿಸ್ಥಿತಿಯನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎಚ್ಚೆತ್ತುಕೊಂಡಿದ್ದು, ಏಪ್ರಿಲ್ 27ಕ್ಕೆಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರ ನಿರ್ಧರಿಸಿದೆ. ಕೋವಿಡ್ 1 ಮತ್ತು 2ನೇ ಅಲೆಯ ಪರಿಣಾಮ ಜನಜೀವನ, ಆರ್ಥಿಕ ವ್ಯವಸ್ಥೆ ಕುಸಿದು ಹೋಗಿ ಜನರು ಸಂಕಷ್ಟ ಎದುರಿಸಿದ್ದಾರೆ. ಲಾಕ್‍ಡೌನ್ ಸೇರಿದಂತೆ ನಾನಾ ರೀತಿಯ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿತ್ತು. ಕೋರೊನಾ ಮೂರನೆ ಅಲೆಯಿಂದ  ಹೆಚ್ಚಿನ ಹಾನಿಯಾಗಲಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‍ನ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಿವೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿಯ ಪ್ರಕಾರ ರಾಜ್ಯದಲ್ಲಿ ಈಗಾಗಲೇ ಕೋವಿಡ್ ರೂಪಾಂತರದ ಸೋಂಕುಗಳು ಕಾಣಿಸಿಕೊಂಡಿವೆ. ಹೀಗಾಗಿ ನಾಲ್ಕನೇ ಅಲೆ ಎದುರಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯ ಸರ್ಕಾರಗಳ ಜೊತೆ ಏ.27ರಂದು ವರ್ಚುವಲ್ ಮಾದರಿಯಲ್ಲಿ ಸಭೆ ನಡೆಸಲಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೋವಿಡ್ ಜಾಗೃತಿಗೆ…

Read More