Subscribe to Updates
Get the latest creative news from FooBar about art, design and business.
- ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
- ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ವಿವಿಧ ಸಂಘಟನೆಗಳಿಂದ ಮನವಿ
- ಎನ್ ಎಂಎಂಎಸ್ ಆ್ಯಪ್ ಅಪ್ ಡೇಟ್ ಕಿರಿಕಿರಿ: ಬೀದರ್ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
- ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
- ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
- ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
- ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
- ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
Author: admin
ಬೆಂಗಳೂರು ಮಹಾನಗರವನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜನರಿಂದ ಸೆಸ್ (ತೆರಿಗೆ) ರೂಪದಲ್ಲಿ ಹಣ ಸಂಗ್ರಹಿಸಿತು. ಆದರೆ ನಗರದಲ್ಲಿ ಭಿಕ್ಷುಕರ ಪುನರ್ವಸತಿ ಏನೂ ಸುಧಾರಿಸಿಲ್ಲ. ಬೆಂಗಳೂರನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಜನರಿಂದ ತೆರಿಗೆ ರೂಪದಲ್ಲಿ ಹಣ ಸಂಗ್ರಹಿಸಲಾಗುತ್ತಿದೆ. ಇದರಿಂದ ನಗರದಲ್ಲಿರುವ ಭಿಕ್ಷುಕರಿಗೆ ಪುನರ್ವಸತಿ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಆದರೆ ಈಗಲೂ ನಗರದಲ್ಲಿ ಎಲ್ಲೆಂದರಲ್ಲಿ ಭಿಕ್ಷುಕರು ಕಂಡು ಬರುತ್ತಿದ್ದಾರೆ. ಹಾಗಾದರೆ ಜನರಿಂದ ಸಂಗ್ರಹಿಸಿದ ತೆರಿಗೆ ಹಣ ಎಲ್ಲಿ ಹೋಯಿತು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ. ಇತ್ತೀಚೆಗೆ ವಿಧಾನ ಪರಿಷತ್ ನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಭಿಕ್ಷಾಟನಾ ನಿರ್ಮೂಲನಾ ತೆರಿಗೆ ರೂಪದಲ್ಲಿ ರಾಜ್ಯದ 10 ಮುನಿಸಿಪಲ್ ನಿಗಮಗಳಿಂದ ಒಟ್ಟು ರೂ. 437 ಕೋಟಿ ಸಂಗ್ರಹಿವಾಗಿರುವುದಾಗಿ ತಿಳಿಸಿದರು. ಈ ಪೈಕಿ ಬೆಂಗಳೂರು ಮಹಾನಗರ ಸಿಂಹಪಾಲು ಅನ್ನು ಹೊಂದಿದೆ. ಅಂದರೆ ಬೆಂಗಳೂರಿಗರಿಂದಲೇ ಬರೋಬ್ಬರಿ ರೂ.309 ಕೋಟಿ ಭಿಕ್ಷಾಟನಾ ನಿರ್ಮೂಲನಾ…
ನಟ ಧನಂಜಯ್ ಬೆಂಬಲಕ್ಕೆ ನೀನಾಸಂ ಸತೀಶ್ ನಿಂತಿದ್ದಾರೆ. ‘ಹೆಡ್ ಬುಷ್’ ಚಿತ್ರದಲ್ಲಿ ವೀರಗಾಸೆ ಕಲೆಗೆ ಅಪಮಾನ ಮಾಡಲಾಗಿದೆ ಎಂಬ ವಿಚಾರ ವಿವಾದಕ್ಕೀಡಾದ ಬೆನ್ನಲ್ಲೆ ಸಾಕಷ್ಟು ಮಂದಿ ನಟ-ನಟಿಯರು ಡಾಲಿ ಬೆಂಬಲಿಕ್ಕೆ ನಿಂತಿದ್ದಾರೆ. ಇದೀಗ ನಿನಾಸಂ ಸತೀಶ್ ಬೆಂಬಲ ನೀಡಿದ್ದಾರೆ. ಧನಂಜಯ್ ನನ್ನ ಗೆಳೆಯ, ಅವನ ಎಲ್ಲ ವಿಚಾರಗಳ ಜೊತೆ ಮತ್ತು ಮಾನವೀಯತೆ ಜೊತೆ ನಾನಿದ್ಡೇನೆ ಎಂದು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. ನನ್ನಂತೆ ಊರು ಬಿಟ್ಟು ಬ್ಯಾಗು ಹಿಡಿದು ಬಂದವನು, ಸುಮ್ಮನೆ ಸಣ್ಣ ಕಾರಣ ಹಿಡಿದು ಅವನನ್ನು ತೇಜೊವಧೆ ಮಾಡುವ ಗೆಳೆಯರೆ, ನೀವು ನಮ್ಮ ಏಳಿಗೆಯನ್ನು ಬಯಸಿದವರೇ. ವೈಷಮ್ಯ ಬಿಡಿ’ ಎಂದು ಬರೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನಟಿ ಪಾರ್ವತಿ ಇನ್ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದ್ದು ಅಭಿಮಾನಿಗಳೆಲ್ಲ ಶುಭಾಶಯ ತಿಳಿಸುತ್ತಿದ್ದಾರೆ. ಹೌದು. ಬಹುಭಾಷಾ ನಟಿ ಪಾರ್ವತಿ ಅವರು ಅಮ್ಮನಾಗುತ್ತಿದ್ದಾರಾ ಎಂದು ನೆಟ್ಟಿಗರು ಅಚ್ಚರಿಪಟ್ಟಿದ್ದಾರೆ. ಜತೆಗೆ ಶುಭಾಶಯವನ್ನೂ ಕೋರುತ್ತಿದ್ದಾರೆ. ಮಲೆಯಾಳಂ ಮೂಲದ ನಟಿ ಈಗ ತಾವು ತಾಯಿಯಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ. ಗರ್ಭಿಣಿಯ ಸಿಂಬಲ್ ಹಾಕಿ ವಂಡರ್ ಬಿಗಿನ್ಸ್ ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ ಪಾರ್ವತಿ. ಫೋಟೋದಲ್ಲಿ ಪ್ರೆಗ್ನೆನ್ಸಿ ಟೆಸ್ಟಿಂಗ್ ಕಿಟ್, ಟಿಶ್ಯೂ ಇಟ್ಟಿದ್ದಾರೆ. ಇದಕ್ಕೆ ಸಾಕಷ್ಟು ನಟ-ನಟಿಯರೂ ವಿಶ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಕಮೆಂಟ್ ಮಾಡಲಾರಂಭಿಸಿದ್ದಾರೆ. ಅಮ್ಮನಾಗುತ್ತಿರುವುದಕ್ಕೆ ಶುಭಾಶಯಗಳು ಎಂದು ಹಾರೈಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಐತಿಹಾಸಿಕ ಕಥಾಹಂದರ ಹೊಂದಿರುವ, ಖ್ಯಾತ ನಿರ್ದೇಶಕ ಮಣಿರತ್ನಂ ಅವರ ‘ಪೊನ್ನಿಯನ್ ಸೆಲ್ವನ್ -1’ ಚಿತ್ರ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಹೌದು. ವಿಶ್ವದೆಲ್ಲೆಡೆ ಉತ್ತಮ ಪ್ರಶಂಸೆ ಪಡೆದ ಚಿತ್ರವು ಇದೀಗ ಡಿಜಿಟಲ್ ವೇದಿಕೆಯಲ್ಲಿ ಲಭ್ಯವಾಗುತ್ತಿದೆ. ಅಮೆಜಾನ್ ಪ್ರೈಮ್ ವೇದಿಕೆಯಲ್ಲಿಯೂ ಚಿತ್ರ ರಿಲೀಸ್ ಆಗುತ್ತಿದೆ. ‘ಪೊನ್ನಿಯನ್ ಸೆಲ್ವನ್ -1’ ಚಿತ್ರ ನಿರೀಕ್ಷೆಯಂತೆಯೇ ಭರ್ಜರಿ ಯಶಸ್ಸು ಗಳಿಸಿದೆ. ಬಿಡುಗಡೆಯಾಗಿ ಒಂದು ತಿಂಗಳ ಅವಧಿಯಲ್ಲಿ ಚಿತ್ರ ವಿಶ್ವದಾದ್ಯಂತ 500 ಕೋಟಿ ರೂ ಕಲೆಕ್ಷನ್ ಮಾಡಿದೆ. ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿ ಐಶ್ವರ್ಯ ರೈ ಬಚ್ಚನ್, ವಿಕ್ರಮ್, ಕಾರ್ತಿ, ತ್ರಿಶಾ, ಜಯಂ ರವಿ ಮತ್ತು ಪ್ರಕಾಶ್ ರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಇನ್ಸ್ ಪೆಕ್ಟರ್ ನಂದೀಶ್ ಹೃದಯಾಘಾತದಿಂದ ಸಾವನ್ನಪ್ಪಿದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಪ್ರಕರಣ ತನಿಖೆ ಆಗಬೇಕು. ಅದು ಒಂದು ಬಾರ್ ವಿಚಾರಕ್ಕೆ ಅಮಾನತು ಮಾಡುವಷ್ಟೇ ನಡೆದಿಲ್ಲ. ಇದರ ಹಿಂದೆ ಇನ್ನೂ ಬೇರೇನೋ ಇದ್ದಂತಿದೆ ಎಂದು ಅನುಮಾನ ವ್ಯಕ್ತಪಡಿಸಿದರು. ಈ ಕುರಿತು ಮಾತನಾಡಿದ ಅವರು, ನಾನು ಮೊದಲೇ ಹೇಳಿದ್ದೆ. ಒಂದು ಪೋಸ್ಟಿಂಗ್ ಗೆ 70 ಲಕ್ಷ ರೂಪಾಯಿಯಿಂದ 2 ಕೋಟಿ ತನಕ ಹಣದ ವಿಚಾರ ಇದೆ. ಇದು ಬಿಜೆಪಿಯ ಸಂಸ್ಕೃತಿ. ಇದು ಗಂಭೀರವಾದ ವಿಚಾರವಾಗಿದೆ. ನಂದೀಶ್ ಅಮಾನತಿನ ಹಿಂದೆ ಅಷ್ಟೇ ಇದ್ದಂತೆ ಇಲ್ಲ, ಅದಕ್ಕಿಂತ ಹೆಚ್ಚಿನದು ಬೇರೆನೋ ಇದೆ. ಹೀಗಾಗಿ ಅವರ ಸಾವಿನ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್ ಒಂದು ದಿಕ್ಕು, ಸಿದ್ದರಾಮಯ್ಯ ಇನ್ನೊಂದು ದಿಕ್ಕು ಎಂದು ಟೀಕಿಸಿದ್ಧ ಬಿಜೆಪಿ ನಾಯಕರಿಗೆ ಎಂಎಲ್’ಸಿ ಬಿ.ಕೆ. ಹರಿಪ್ರಸಾದ್ ತಿರುಗೇಟು ನೀಡಿದರು. ಈ ಕುರಿತು ಮಾತನಾಡಿರುವ ಬಿ.ಕೆ ಹರಿಪ್ರಸಾದ್, ಹೌದು, ಕಾಂಗ್ರೆಸ್’ನಲ್ಲಿ ಎರಡು ದಿಕ್ಕು…
ಇಂದು ನಟ ಪುನೀತ್ ರಾಜ್ ಕುಮಾರ್ ಅವರ ಪ್ರಥಮ ಪುಣ್ಯಸ್ಮರಣೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಬಳಿ ಇರುವ ನಟ ಅಪ್ಪು ಸಮಾಧಿಗೆ ದೊಡ್ಮನೆ ಕುಟುಂಬ ಪೂಜೆ ಸಲ್ಲಿಕೆ ಮಾಡಿತು. ನಟ ಪುನೀತ್ ರಾಜ್ ಕುಮಾರ್ ಅವರಿಗೆ ಇಷ್ಟವಾದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಕೆ ಮಾಡಿದರು. ಮೊದಲು ಡಾ. ರಾಜ್ ಕುಮಾರ್ ಪಾರ್ವತಮ್ಮ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಅಪ್ಪು ಸಮಾಧಿಗೆ ಹಿರಿಯ ನಟ ರಾಘವೇಂಧ್ರ ರಾಜ್ ಕುಮಾರ್ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ನಟ ಪುನೀತ್ರ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಪೂರ್ಣಿಮಾ ಲಕ್ಷ್ಮೀ, ವಿನಯ್ ರಾಜ್ ಕುಮಾರ್ ಚಿನ್ನೇ ಗೌಡ , ಗೋವಿಂದರಾಜ್ ಅವರು ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಕೆ ವೇಳೆ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಣ್ಣೀರಿಟ್ಟರು. ಇನ್ನು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳ ದಂಡು ಸಮಾಧಿ ಬಳಿಗೆ ಆಗಮಿಸಿ ದರ್ಶನ ಪಡೆಯುತ್ತಿದ್ದು ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳಿಂದ ರಕ್ತದಾನ ಶಿಬಿರ…
ಹಾವೇರಿ : ನವೆಂಬರ್ 20 ರ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವ ಸಂಬಂಧ ನವೆಂಬರ್ 2ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಇದರ ನಂತರ ನವೆಂಬರ್ 15 ರಿಂದ 20 ದಿನದೊಳಗೆ ರಾಜ್ಯದಲ್ಲಿ ಸಭೆ ಮಾಡಿ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ಯಾವುದಾದರೂ ಶಾಲೆಯವರು ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯದ ಪ್ರಕಾರ ಮಕ್ಕಳಿಗೆ ಶಿಕ್ಷಣ ನೀಡಲು ಮುಂದೆ ಬಂದರೆ ಅವರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಲಾಲ ಗ್ರಾಮದ ಗ್ರಾಮಸ್ಥರು ಮತ್ತು ಅಭಿಮಾನಿಗಳು ಕರ್ನಾಟಕ ರತ್ನ,ರಾಜರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಅತ್ಯಂತ ಭಕ್ತಿಪೂರ್ವಕವಾಗಿ ಆಚರಿಸಿದರು. ಅತಿ ಚಿಕ್ಕ ವಯಸ್ಸಿನಲ್ಲಿಯೇ ಬಹುದೊಡ್ಡ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಸಾಧನೆಗೈದ ಮಹನೀಯ, ಕರ್ನಾಟಕ ರತ್ನ, ಪುನೀತ್ ರಾಜಕುಮಾರ್ ಅವರ ಸಾವಿನಿಂದ ಇಡಿ ವಿಶ್ವವೇ ಕಂಬನಿಯನ್ನು ಮಿಡಿದಿತ್ತು. ಪ್ರತಿ ಹಳ್ಳಿಯಲ್ಲಿಯೂ ಸಹ ದೇವರಂತೆಯೇ ಪುನೀತ್ ರಾಜಕುಮಾರ್ ರವರನ್ನು ಅವರ ಅಭಿಮಾನಿಗಳು ಆರಾಧಿಸುತ್ತಿದ್ದರು. ಸಮಾಜಮುಖಿ ಕಾರ್ಯಗಳಲ್ಲಿ ಅಪ್ಪು ನಡೆದು ಬಂದಂತೆ ರಾಜ್ಯದ ಸಾವಿರಾರು ಸಂಘಟನೆಗಳು ಸಾವಿರಾರು ಸಂಘ ಸಂಸ್ಥೆಗಳು ಪುನೀತ್ ರಾಜಕುಮಾರ್ ರವರ ಹೆಸರಿನಲ್ಲಿ ಕಳೆದ ಒಂದು ವರ್ಷಗಳಿಂದ ಸಾವಿರಾರು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದರು. ಇಂದಿಗೆ ರಾಜರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರು ಅವರ ಅಪಾರ ಅಭಿಮಾನಿಗಳನ್ನು ಅಗಲಿ ಒಂದು ವರ್ಷ ಕಳೆಯಿತು. ಆದಕಾರಣ ನೇಗಲಾಲ ಗ್ರಾಮದ ಅಭಿಮಾನಿಗಳು ಮತ್ತು ಗ್ರಾಮಸ್ಥರು…
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ದೀಪಾವಳಿ ಉಡುಗೋರೆಯಾಗಿ ಆಯ್ದ ಪತ್ರಕರ್ತರಿಗೆ ಸಿಹಿ ತಿಂಡಿ ಜೊತೆಗೆ ಹಣವನ್ನು ಇಟ್ಟು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್,ಮುಖ್ಯಮಂತ್ರಿ ಕಚೇರಿ ನೀಡಿದ 2.5 ಲಕ್ಷ ರೂ. ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಮುಖ್ಯಮಂತ್ರಿ ಉತ್ತರಿಸಬೇಕು ಎಂದು ಒತ್ತಾಯಿಸಿದೆ. ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು.. ಸರ್ಕಾರದ್ದೇ…ಬಿಜೆಪಿ ಪಕ್ಷದ್ದೇ..ಮುಖ್ಯಮಂತ್ರಿಗಳದ್ದೇ..40% ಕಮಿಷನ್ ಆ ಹಣದ ಮೂಲವೇ.. ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ.. ಸಿಎಂ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ.. ಎಂದು ಟ್ವೀಟ್ ಮೂಲಕ ಕರ್ನಾಟಕ ಕಾಂಗ್ರೆಸ್ ಆಗ್ರಹಿಸಿದೆ. ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ…
ಬೆಂಗಳೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಆದರೂ, ಇಂದಿಗೂ ನಮ್ಮ ನಡುವೆ ಅವರು ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಇಂದಿಗೂ ಸಾಧ್ಯವಾಗುತ್ತಿಲ್ಲ. ತಮ್ಮ ಸರಳತೆ ಮತ್ತು ಮಾನವೀಯ ಗುಣಗಳಿಂದಲೇ ಕೋಟ್ಯಾಂತರ ಅಭಿಮಾನಿಗಳ ಮನದಲ್ಲಿ ಅಪ್ಪು ಮನೆ ಮಾಡಿದ್ದಾರೆ. ಜೊತೆಗಿರದ ಜೀವ ಎಂದಿಗೂ ಜೀವಂತ ಎನ್ನುವಂತೆ ಪ್ರತಿ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಅಭಿಮಾನಿಗಳು ರಾಜನನ್ನು ನೆನೆಯುತ್ತಿದ್ದಾರೆ. ಇಂದು ಕಂಠೀರವ ಸ್ಟುಡಿಯೋ ಬಳಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ರ ನೇತೃತ್ವದಲ್ಲಿ ಬಂದೋಬಸ್ತ್ ನೀಡಲಾಗಿದ್ದು. ನಿನ್ನೆ ರಾತ್ರಿಯಿಂದಲು ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಂಠೀರವ ಸ್ಟುಡಿಯೋ ಮುಂಭಾಗದಿಂದಲು ಸಹ ಪೊಲೀಸರು ಸರ್ಪಗಾವಲಿನಲ್ಲಿದ್ದು, ಬ್ಯಾರಿಕೇಡ್ಗಳನ್ನು ಅಳವಡಿಸಿರುವ ಮುಖಾಂತರವಾಗಿ ಜನರು ಬರುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇಂದು ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದು, ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವನ್ನು ಪೊಲೀಸರು ವಹಿಸಿದ್ದಾರೆ. ಇನ್ನು ಪುನೀತ್ ರನ್ನು ನೋಡಲು ಬರುವ ಅಭಿಮಾನಿಗಳಿಗೆ…