Author: admin

ಬಗೆ ಬಗೆಯ ಆಹಾರ ಪದ್ಧತಿಯಿಂದ ಭಾರತವು ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ, ಅಂದರೆ ನಮ್ಮ ಭಕ್ಷ್ಯಗಳಲ್ಲಿ ಅನೇಕ ರೀತಿಯ ಮಸಾಲೆಗಳನ್ನು ಬಳಸಲಾಗುತ್ತದೆ. ಈ ಮಸಾಲೆಗಳಲ್ಲಿ ಕೆಂಪು ಮೆಣಸಿನ ಪುಡಿಯ ಹೆಸರೂ ಸೇರಿದೆ. ಮೆಣಸಿನಕಾಯಿಗಿಂತ ಹೆಚ್ಚು, ಈ ಖಾರದ ಪುಡಿಯನ್ನು ಬಣ್ಣಕ್ಕಾಗಿ ಬಳಸಲಾಗುತ್ತದೆ ಮತ್ತು ಸಾಮಾನ್ಯವಾಗಿ ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುತ್ತದೆ. ನಿಮಗೆ ತಿಳಿದಿಲ್ಲದಿರಬಹುದು, ಆದರೆ ಅಡುಗೆಯ ಹೊರತಾಗಿ, ಕೆಂಪು ಮೆಣಸಿನ ಪುಡಿಯು ಅನೇಕ ಅದ್ಭುತ ಪ್ರಯೋಜನಗಳನ್ನು ಹೊಂದಿದೆ. ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಬಳಸಿದರೆ, ಕೆಂಪು ಮೆಣಸಿನ ಪುಡಿಯು ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ ಎಂದು ಸಾಬೀತುಪಡಿಸಬಹುದು. ಹೃದಯಾಘಾತ ತಡೆಗೆ ಪ್ರಯೋಜನಕಾರಿ : ಕೆಂಪು ಮೆಣಸಿನ ಪುಡಿ ಹೃದಯಕ್ಕೆ ತುಂಬಾ ಒಳ್ಳೆಯದು. ಹೃದಯಾಘಾತವಾದ ತಕ್ಷಣ ಸ್ವಲ್ಪ ಕೆಂಪು ಮೆಣಸಿನ ಪುಡಿಯನ್ನು ನೀರಿನ ಜೊತೆ ಕರಗಿಸಿ ಕುಡಿದರೆ, ನಂತರ ಪರಿಸ್ಥಿತಿ ಸುಧಾರಿಸಬಹುದು ಎಂದು ಅನೇಕ ಸಂಶೋಧನೆಗಳಲ್ಲಿ ಹೇಳಲಾಗಿದೆ. ಕೆಂಪು ಮೆಣಸಿನಕಾಯಿಯಲ್ಲಿ ಪೊಟ್ಯಾಸಿಯಮ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ, ಇದು ನಿಮ್ಮ ದೇಹದ ಅಪಧಮನಿಗಳನ್ನು ಸಡಿಲಗೊಳಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು…

Read More

ಮಾನಸಿಕ ಒತ್ತಡಕ್ಕೆ ನಗರದ ಖಾಸಗಿ ಕಾಲೇಜಿನ ಉಪನ್ಯಾಸಕಿಯೊಬ್ಬರು ಅಸುನೀಗಿದ್ದು ನೂರಾರು ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಎಲ್ಲದಕ್ಕಿಂತ ಹೆಚ್ಚಾಗಿ ಪಾಲಕರು ಮರುಗಿದ್ದಾರೆ‌. ಆಕೆ ಬಾಳಿ ಬದುಕಬೇಕಿದ್ದ ಯುವತಿ. ಆದ್ರೆ ಆಕೆಗೆ ಏನಾಯ್ತೋ ಏನೋ? ತನ್ನ ಹುಟ್ಟುಹಬ್ಬದ ದಿನವೇ ತನ್ನ ಜೀವನವನ್ನು ಕೊನೆಗಾಣಿಸಿಕೊಂಡಿದ್ದಾಳೆ ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ(26) ಎಂಬ ಉಪನ್ಯಾಸಕಿ. ಚಂದನಾ ಚಾಮರಾಜನಗರದ ಜೆಎಸ್‌ಎಸ್‌ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೆಎಸ್‌ಎಸ್‌ ಕಾಲೇಜಿನ ಹಾಸ್ಟೆಲ್‌ನಲ್ಲೇ ವಾಸ್ತವ್ಯ ಹೂಡಿದ್ದರು. ಈಕೆ ಎಲ್ಲರ ಜೊತೆಯಲ್ಲೂ ಸಹಾ ಉತ್ತಮ‌ ಭಾಂದವ್ಯ ಹೊಂದಿದ್ರು. ಇವತ್ತು ಆಕೆಯ ಹುಟ್ಟುಹಬ್ಬ ಇತ್ತು. ಹೀಗಾಗಿ ಆಕೆಯ ಸ್ನೇಹಿತರು,ವಿದ್ಯಾರ್ಥಿಗಳು ಶುಭಾಶಯ ಕೋರಿದ್ರು. ಆದ್ರೆ ಇದಾದ ನಂತರ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಜೊತೆ ಕೊಠಡಿಯಲ್ಲಿದ್ದ ಸ್ನೇಹಿತರು ಹೊರಹೋದ ನಂತರ ತನ್ನ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಮಾನಸಿಕ ಒತ್ತಡ ಬಯಲು: ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿರುವ ಚಂದನಾ ” ಯಾಕೆ ಯಾರೂ ನನ್ನ ಅರ್ಥ…

Read More

ಬೆಂಗಳೂರು: ಜೈಲಲ್ಲಿ ಮುದ್ದೆ ಮುರಿದು ಬಂದ್ರೂ ಬುದ್ದಿ ಕಲಿಯದ ಖತರ್ನಾಕ್ ಖದೀಮ ಈಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ. ಯಾಸೀನ್ ಖಾನ್ ಆಲಿಯಾಸ್ ಚೋರ್ ಇಮ್ರಾನ್ ಬಂಧಿತ ಆರೋಪಿ. ಈತ ನಗರದಲ್ಲಿ ನಿರಂತರವಾಗಿ ಕಳ್ಳತನ‌ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಸದ್ಯ ಹಲಸೂರು ಗೇಟ್ ಪೊಲೀಸರು ಈತನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯಿಂದ 6 ಲಕ್ಷದ ಮೌಲ್ಯದ 100 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ ಹಾಗೂ 39 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ. ಮೈಸೂರಿನ ವಾಲ್ಮೀಕಿ ನಗರದ ನಿವಾಸಿಯಾಗಿರುವ ಇಮ್ರಾನ್ ಸುಲಭವಾಗಿ ಹಣ ಸಂಪಾದನೆ ಮಾಡಲು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ. ಈತನ ವಿರುದ್ಧ ಬೆಂಗಳೂರಿನಲ್ಲಿಯೇ 30 ಪ್ರಕರಣ ದಾಖಲಾಗಿವೆ. ರಾಜ್ಯದ ಹಲವು ಕಡೆಗಳಲ್ಲಿ ಇಮ್ರಾನ್ ವಿರುದ್ಧ 60ಕ್ಕಿಂತ ಹೆಚ್ಚು ಕಳ್ಳತನ ಪ್ರಕರಣ ದಾಖಲಾಗಿವೆ. ಹಲವು ಬಾರಿ ಜೈಲಿಗೆ ಹೋಗಿಬಂದಿದ್ದರೂ ಒಂದು ಪ್ರಕರಣದಲ್ಲಿ ಈತನಿಗೆ ಶಿಕ್ಷೆಯಾಗಿರಲಿಲ್ಲ.ಜಾಮೀನಿನ ಮೇಲೆ ಬಿಡುಗಡೆಯಾಗಿ ಮತ್ತೆ ತನ್ನ ಚಾಳಿ ಕೈಚಳಕ ತೋರುತ್ತಿದ್ದ. ಕಳ್ಳತನವನ್ನೇ‌ ಕಾಯಕ ಮಾಡಿಕೊಂಡಿದ್ದ ಯಾಸೀನ್,…

Read More

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಇಂದು ಸಂಪುಟ ವಿಸ್ತರಣೆ ಮಾಡಿದ್ದಾರೆ. ೧೮ ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರಿಸಿದರು. ಬಿಜೆಪಿ ಮತ್ತು ಶಿವಸೇನೆ ಬಣ ಅಧಿಕಾರಕ್ಕೆ ಬಂದು 40 ದಿನಗಳ ನಂತರ ಸಂಪುಟ ವಿಸ್ತರಣೆ ಮಾಡಲಾಗಿದೆ. ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಣ ತಲಾ ೯ ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಭಗವಂತ್ ಕೊಶಿಯಾರಿ ಪ್ರಮಾಣ ವಚನ ಬೋಧಿಸಿದರು. ಶಿವಸೇನೆಯಿಂದ ದಾದಾಜಿ ಭೂಸೆ, ಉದಯ್ ಸಮಂತ್, ಗುಲಾಬ ರಾವ್ ಪಾಟೀಲ್, ಸಂದೀಪನ್ ಭೂಮಾರೆ, ಶಂಭೂರಾಜ್ ದೇಸಾಯಿ, ತಾನಾಜಿ ಸಾವಂತ್, ಅಬ್ದುಲ್ ಸತ್ತಾರ್, ದೀಪಕ್ ವಸಂತ್ ಕೇಸರ್‌ಕರ್ ಹಾಗೂ ಬಿಜೆಪಿಯಿಂದ ಸಂಜಯ್ ರಾಥೊಡ್, ಚಂದ್ರಕಾಂತ್ ಪಾಟೀಲ್ ಸುಧೀರ್ ಮುಂಗುಂತಿವಾರ್, ಗಿರೀಶ್ ಮಹಾಜನ್, ಸುರೇಶ್ ಖಾಂಡೆ, ರಾಧಾಕೃಷ್ಣ ವಿಖೆ ಪಾಟೀಲ್, ಮಂಗಲ್ ಪ್ರಭಾತ್ ಲೋಧಾ, ರವೀಂದ್ರ ಚವ್ಹಾಣ್, ವಿಜಯ್ ಗವಿತ್ ಹಾಗೂ ಅತುಲ್ ಮೊರೇಶ್ವರ್ ಸೇವ್ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಉಪಮುಖ್ಯಮಂತ್ರಿಯಾಗಿರುವ…

Read More

ಆರ್‌ ಎಸ್‌ ಎಸ್ ಸಂವಿಧಾನ ಮತ್ತು ರಾಷ್ಟ್ರಧ್ವಜವನ್ನೇ ವಿರೋಧಿಸುವ ಸಂಘಟನೆ, ಇಂತಹ ಸಂಘಟನೆಯ ಹಿನ್ನೆಲೆ ಹೊಂದಿರುವ ಬಿಜೆಪಿ ಅವರು, ಹರ್ ಘರ್ ತಿರಂಗ ಎಂಬ ನಾಟಕ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿಂದು ನಡೆದ ಕ್ವಿಟ್ ಇಂಡಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ವಿಟ್ ಇಂಡಿಯಾ ಚಳವಳಿ ಸಂದರ್ಭದಲ್ಲಿ ಬ್ರಿಟಿಷರು ಗಾಂಧೀಜಿ ಅವರನ್ನು ದಸ್ತಗಿರಿ ಮಾಡುತ್ತಾರೆ. ಈ ಚಳವಳಿ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಚಳವಳಿ ಎಂದ ಅವರು, ಆರ್‌ ಎಸ್‌ ಎಸ್‌ ನವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಅವರು ಬ್ರಿಟೀಷರ ಗುಲಾಮರಗಿದ್ದವರು ಎಂದು ಟೀಕಿಸಿದರು. ಆರ್‌ ಎಸ್‌ ಎಸ್ 1925ರಲ್ಲೇ ಇತ್ತು. ಜನಸಂಘ ಹೊಂದಿದ್ದು 1979ರಲ್ಲಿ. ಇದೇ ಜನಸಂಘದ ಗೋಲ್‌ ವಾರ್‌ ಕರ್, ರಾಷ್ಟ್ರಧ್ವಜ ವಿರೋಧಿಸಿದ್ದರು. 52ವರ್ಷ ನಾಗಪುರದ ಆರ್‌ಎಸ್‌ಎಸ್ ಕಚೇರಿ ಮೇಲೆ ತ್ರಿವರ್ಣ ಧ್ವಜ ಹಾರಿಸಿರಲಿಲ್ಲ. ಆರ್‌ ಎಸ್‌ ಎಸ್‌ ನವರ ಬುದ್ಧಿ ನಮಗೆ ಗೊತ್ತಿದೆ. ಚಾರ್ತುವರ್ಣ್ಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟವರು…

Read More

ಪಾವಗಡ: ಪಟ್ಟಣದಲ್ಲಿ ಇಂದು ಹೆಲ್ಪ್ ಸೊಸೈಟಿ ಮತ್ತು ವಿವೇಕಾನಂದ ವಿದ್ಯಾ ಸಂಸ್ಥೆ ಹಾಗೂ ಪಾವಗಡ ತಾಲೂಕಿನ ಶಾಲಾ ವಿದ್ಯಾರ್ಥಿಗಳು ನಾಗರಿಕರು ದೇಶಪ್ರೇಮಿಗಳೊಂದಿಗೆ ಪಾವಗಡ ಪಟ್ಟಣದ ಪ್ರಮುಖ ಬೀದಿಗಳಲ್ಲಿ 1,750 ಅಡಿಗಳ ಉದ್ದದ ಮಹಾ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಲಾಯಿತು. ಮೆರವಣಿಗೆಯಲ್ಲಿ ಪಟ್ಟಣದ ವಿವಿಧ ಶಾಲಾ ಕಾಲೇಜುಗಳ 2,000ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಮುಖಂಡರುಗಳಾದ ಡಾಕ್ಟರ್ ಜಿ. ವೆಂಕಟರಾಮಯ್ಯ, ಮಾನಂ ವೆಂಕಟಸ್ವಾಮಿ, ಮಾಜಿ ಶಾಸಕ ತಿಮ್ಮರಾಯಪ್ಪ, ಸೊಗಡು ವೆಂಕಟೇಶ್, ಹೆಲ್ಪ್  ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಸಿ ಪಿ ಐ ಶ್ರೀಕಾಂತ್ ರೆಡ್ಡಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಟ್ಟ ನರಸಿಂಹ, ಮುಂತಾದವರು ಉಪಸ್ಥಿತರಿದ್ದರು. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಪಿಎಸ್‌’ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳು ಪ್ರಮುಖ 8 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲು ಮುಂದಾಗಿ 6 ಕೋಟಿ ಹಣ ಸಂಗ್ರಹದ ಜಾಡು ಪತ್ತೆ ಹಚ್ಚಲು ಹೊರಟಿರುವುದು ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ಕಿಂಗ್ ಪಿನ್ ಆರ್.ಡಿ.ಪಾಟೀಲ್‌ಗೆ ಹಣ ನೀಡಿ ಒಪ್ಪಂದ ಮಾಡಿಕೊಂಡಿದ್ದ ಆರೋಪದಡಿ ಶರಣ ಬಸವೇಶ್ವರ ಆರ್ಟ್ಸ್, ಸೈನ್ಸ್, ಕಾಮರ್ಸ್ ಕಾಲೇಜು ಹಾಗೂ ಎಂ.ಎಸ್ ಇರಾನಿ ಕಾಲೇಜಿನಲ್ಲಿ ಪರೀಕ್ಷೆ ಎದುರಿಸಿದ್ದ ಅಭ್ಯರ್ಥಿಗಳಾದ ಕಲ್ಲಪ್ಪ, ಸಿದ್ದುಗೌಡ, ಈರಪ್ಪ, ಸೋಮನಾಥ, ರವಿರಾಜ, ಶ್ರೀಶೈಲ, ಭಗವಂತ್ ರಾಯ್ ನನ್ನು ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಆರೋಪಿಗಳ ಪೈಕಿ ಸಿದ್ಧುಗೌಡ – ಆರ್.ಡಿ ಪಾಟೀಲ್ ಸಂಬಂಧಿ ಹಾಗೂ ಹೆಲ್ತ್ ಡಿಪಾರ್ಟ್‌ಮೆಂಟ್‌ನಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಕಲ್ಲಪ್ಪ- ಪೊಲೀಸ್ ಕಾನ್ಸ್‌ ಟೇಬಲ್, ಸೋಮನಾಥ- ವ್ಯವಸಾಯ ಮಾಡಿಕೊಂಡಿದ್ದ. ಇನ್ನು ವಿಜಯ್ ಕುಮಾರ್ – ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ರವಿರಾಜ- ಮೊದಲ ರ್‍ಯಾಂಕ್ ಪಡೆದಿರುವ ಆರೋಪಿಯಾಗಿದ್ದಾನೆ. ಶ್ರೀಶೈಲ-…

Read More

ಕಾಮನ್‌ ವೆಲ್ತ್ ಕ್ರೀಡಾಕೂಟದಲ್ಲಿ ಪದಕ ವಿಜೇತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಪೂಜಾ ಸಿಹಾಗ್ ಮತ್ತು ಪೂಜಾ ಗೆಹ್ಲೋಟ್ ಅವರನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ರಾಷ್ಟ್ರ ರಾಜಧಾನಿ ವಿಮಾನ ನಿಲ್ದಾಣದ ಹೊರಗೆ ಬೃಹತ್ ಜನಸಮೂಹ ಜಮಾಯಿಸಿ ಪದಕ ವಿಜೇತರನ್ನು ಸ್ವಾಗತಿಸಿ ಗೆಲುವಿಗೆ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕುಸ್ತಿಪಟು ಸಾಕ್ಷಿ ಮಲಿಕ್, ರಾಷ್ಟ್ರದ ಬೆಂಬಲ ಮತ್ತು ಪ್ರೀತಿಗೆ ಧನ್ಯವಾದ ಅರ್ಪಿಸಿದ್ದಾರೆ. “ಒಲಿಂಪಿಕ್ಸ್ ನಲ್ಲಿ ಮೊದಲ ಪದಕವಾಗಿರುವುದರಿಂದ ಸಂತೋಷವಾಗಿದೆ. ಬೆಂಬಲ ಮತ್ತು ಪ್ರೀತಿ ನೀಡಿದ ಭಾರತಕ್ಕೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದಿದ್ದಾರೆ. ಕಂಚಿನ ಪದಕ ವಿಜೇತೆ ಪೂಜಾ ಸಿಹಾಗ್ , ಪದಕದ ಶ್ರೇಯವನ್ನು ತರಬೇತುದಾರರಿಗೆ ಅರ್ಪಿಸುವುದಾಗಿ ಹೇಳಿದ ಅವರು ಪದಕದೊಂದಿಗೆ ಮರಳಿ ಮನೆಗೆ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ. ಕಂಚಿನ ಪದಕ ವಿಜೇತೆ ಪೂಜಾ ಗೆಹ್ಲೋಟ್ ಅವರು ತಮ್ಮ ಸಂತೋಷದ ಭಾವನೆ ವ್ಯಕ್ತಪಡಿಸಿ ದೇಶದ ಜನರಿಗೆ ಧನ್ಯವಾದ ಹೇಳಿದ್ದು ದೇಶಕ್ಕಾಗಿ ಪದಕ ಗೆಲ್ಲುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.…

Read More

ತಿಪಟೂರು: ತಾಲ್ಲೂಕಿನ ಕರಡಿ ಕೆರೆಯು ಕಳೆದ 15 ವರ್ಷಗಳಲ್ಲಿ 3 ನೇ ಬಾರಿ ಕೋಡಿ ಹರಿಯುತ್ತಿದ್ದು, ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ನಂತರ ಮಾತನಾಡಿದ ಅವರು, ತುಂಬಿದ ಕೆರೆ ಕಟ್ಟೆಗಳಿಗೆ, ನದಿಗಳಿಗೆ ಕೃತಜ್ಞತಾ ಅರ್ಪಣಾ ಮನೋಭಾವದಿಂದ ಪೂಜೆ ಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿದರೆ, ಮುಂದಿನ ದಿನಗಳಲ್ಲಿಯೂ ಕೆರೆಗಳು ನೀರಿನಿಂದ ತುಂಬಿರಲಿ ಎನ್ನುವ ಭಕ್ತಿ ಸಮರ್ಪಿಸಿದಂತಾಗುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಕರಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕೆ. ಆರ್.ದೇವರಾಜು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ವಸಂತಕುಮಾರಿ, ಉಪಾಧ್ಯಕ್ಷ ಮುನಿರಾಜು, ಸದಸ್ಯರಾದ ರವೀಶ್, ಕುಮಾರಯ್ಯ , ಕವಿತ, ಕಮಲಮ್ಮ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕವಿತ ಹಾಗೂ ಪಂಚಾಯ್ತಿ ಸಿಬ್ಬಂದಿ ಸೇರಿದಂತೆ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಗುಬ್ಬಿ : ಭಾರತ ದೇಶದ ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿಯ ಪ್ರತಿಕವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಣೆ ಮಾಡಲಾಗುತ್ತದೆ. ಕೈಮಗ್ಗವು ದೇಶದ ಮಹಿಳೆಯರಿಗೆ ಪ್ರಮುಖ ಜೀವನೋಪಾಯದ ಮೂಲವಾಗಿದೆ. ಇದು ದೇಶದ ಕೈಮಗ್ಗ ನೇಕಾರರನ್ನು ಗೌರವಿಸುವ ದಿನವೂ ಹೌದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ತುಮಕೂರು ಹಾಗೂ ರೇಷ್ಮೆ ಕೈಮಗ್ಗ ನೇಕಾರರ ಸಹಕಾರ ಸಂಘ ನಿಯಮಿತ ಕಲ್ಲೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ಕೈಮಗ್ಗ ಸಪ್ತಾಹ ಆಚರಣೆ ಉದ್ಘಾಟನೆ ಮಾಡಿ ನಂತರ ಮಾತನಾಡಿದ ಅವರು, 2015 ರಿಂದ ನಾವು ನೇಕಾರರ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ನಮ್ಮ ನೇಕಾರರನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಆಚರಣೆ ಮಾಡುತ್ತಾ ಬಂದಿದೆ. ಸರ್ಕಾರ ಕೈಮಗ್ಗದ ನಾಯಕರರಿಗೆ ಪ್ರತಿ ವರ್ಷ ಎರಡು ಸಾವಿರ ಸಹಾಯಧನ ವನ್ನು…

Read More