Subscribe to Updates
Get the latest creative news from FooBar about art, design and business.
- ವಾಸ್ತವ ಒಡೆದು ನೋಡಿದಾಗ?
- ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ
- ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
- ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
- ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
- ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
- ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
- ಹುಯಿಲ್ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
Author: admin
ಮಂಗಳೂರು: ನಗರದ ಹೊರವಲಯದ ಕುಡುಪು ಸಮೀಪ ವಲಸೆ ಕಾರ್ಮಿಕ ಯುವಕನೊಬ್ಬನನ್ನು ಸುಮಾರು 30 ಜನರ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಳ್ಳಿ ಗ್ರಾಮದ ಯುವಕ ಅಶ್ರಫ್ ಹತ್ಯೆಗೀಡಾಗಿರುವ ಯುವಕನಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 20 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಷ್ಟು ಆರೋಪಿಗಳ ಬಂಧನ ಸಾಧ್ಯತೆ ಕಂಡು ಬಂದಿದೆ. ಭಾನುವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಹಿನ್ನೆಲೆ ಪೊಲೀಸರು ಅನುಮಾನದ ಮೇರೆಗೆ ಶವಪರೀಕ್ಷೆ ನಡೆಸಿದ್ದರು. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ, ಬೆನ್ನಿನ ಭಾಗಕ್ಕೆ ಬಿದ್ದ ಬಲವಾದ ಏಟು, ಶಾಕ್ ಹಾಗೂ ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರಕದೇ ಇರುವುದು ಮರಣಕ್ಕೆ ಕಾರಣ ಎಂದು ತಿಳಿದು ಬಂದಿತ್ತು. ಪೊಲೀಸರು ತನಿಖೆ ಆರಂಭಿಸಿದಾಗ, ಎ.27ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿಯ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ನಡೆದಿದ್ದು, ಈ ವೇಳೆ ಸಚಿನ್ ಎಂಬ ವ್ಯಕ್ತಿಯೊಂದಿಗೆ ಅಶ್ರಫ್ ಗೆ ವಾಗ್ವಾದ ನಡೆದಿತ್ತು. ಈ ವೇಳೆ…
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮ ಪಂಚಾಯತ್ ನಲ್ಲಿ 12ನೇ ಶತಮಾನದಲ್ಲಿ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಾಮಾಜಿಕ ನ್ಯಾಯದ ಹರಿಕಾರ ಕಾಯಕಯೋಗಿ ವಿಶ್ವಗುರು ಬಸವಣ್ಣನವರ ಜಯಂತಿ ಆಚರಿಸಲಾಯಿತು. ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸತ್ಯವತಿ ಪರಮೇಶ್ವರ ಮೇತ್ರೆ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಗೌರವದ ನಮನಗಳನ್ನು ಸಲ್ಲಿಸಿದರು. ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆತ್ಮಾ ರಾಮ್ ಹಾಗೂ ಗ್ರಾಪಂ ಸದಸ್ಯ ದೇವಿದಾಸ ಮಾಳಗೆ, ಗ್ರಾಪಂ ಸದಸ್ಯ ಕರಬಸಪ್ಪಾ ಸೊರಾಳೆ, ಗ್ರಾಪಂ ಸದಸ್ಯ ದೇವಿದಾಸ ಧೋಳೆ ಹಾಗೂ ಗ್ರಾಮದ ಮುಖಂಡರಾದ ವೈಜೀನಾಥ್ ವಲ್ಲೇಪುರೆ, ಭೀಮಣ್ಣ ಗಂದಿಗೆ, ಶಿವರುದ್ರಪ್ಪಾ ಶೆಟ್ಕರ್, ಸತ್ಯನಾರಾಯಣ ರಾಜಪುತ, ಅಮೃತ ವಲ್ಲೇಪೂರೆ, ಮಾಜಿ ಗ್ರಾಪಂ ಸದಸ್ಯ ಸಂಜುಕುಮಾರ್ ಮುಗಟೆ, ಪತ್ರಕರ್ತ ರವಿ ವಲ್ಲೇಪೂರೆ, ರಮೇಶ್ ಮುಗಟೆ, ಮಾದಪ್ಪ ಪಿಟ್ರೆ, ರವಿ ಚಾಬೋಳೆ, ಎಮ್.ಡಿ.ನಯೂಮ, ಅಲಾವುದ್ದೀನ್, ಜೀವನ್ ಮಾಳೆಗೆ, ಸರ್ವಾಣ ಕೆವಳೆ. ಗ್ರಾಮ ಪಂಚಾಯಿತಿ ಸಿಬ್ಬಂದಿ, ಊರಿನ ಗಣ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ: ಅರವಿಂದ…
ತುಮಕೂರು: ರೈತರು ತಮ್ಮ ರಾಸುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಬೇಕೆಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಹೆಚ್.ಎ.ನಂಜೇಗೌಡ ಮನವಿ ಮಾಡಿದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ತುಮಕೂರು ಹಾಲು ಒಕ್ಕೂಟದ ಸಹಯೋಗದಲ್ಲಿ ತುಮಕೂರು ತಾಲ್ಲೂಕು ಕೆಸರಮಡು ಗ್ರಾಮದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಹಮ್ಮಿಕೊಂಡಿರುವ 7ನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ(ಎನ್.ಎ.ಡಿ.ಸಿ.ಪಿ.)ಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಡಾ.ವೈ.ಜಿ.ಕಾಂತರಾಜು ಮಾತನಾಡಿ, ಕಾಲುಬಾಯಿ ರೋಗದ ನಿರ್ಮೂಲನೆಯ ಮಹತ್ವವನ್ನು ತಿಳಿಸಿದರು. ರೋಗ ನಿರ್ಮೂಲನೆ ಮಾಡಲು ಲಸಿಕೆಯೊಂದೇ ಮಾರ್ಗವಾಗಿದ್ದು, ಎಲ್ಲಾ ರೈತರು ತಮ್ಮ ರಾಸುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ರೋಗ ನಿರ್ಮೂಲನೆ ಮಾಡಲು ಸಹಕರಿಸಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ.ಜಿ.ಮಲ್ಲೇಶಪ್ಪ, ಡಾ.ಎಂ.ಸುರೇಶ್, ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಪ್ಪ, ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ದಿಲೀಪ್, ಕೆಸರುಮಡು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೆ.ಹೆಚ್.ಗಂಗಾಧರ್, ಕಾರ್ಯದರ್ಶಿ ರೇಣುಕಾರಾದ್ಯ, ಹಿರಿಯ ಪಶುವೈದ್ಯಕೀಯ…
ಪಾವಗಡ: ವಿಶ್ವದಾದ್ಯಂತ ಸಮಾನತೆಯನ್ನು ಪ್ರತಿಪಾದಿಸಿದ ಬಸವಣ್ಣ ಅವರು ಸರ್ವ ಜನಾಂಗಗಳ ನಾಯಕರಾಗಿದ್ದರು ಎಂದು ತಹಶೀಲ್ದಾರ್ ಡಿ.ಎನ್. ವರದರಾಜು ತಿಳಿಸಿದರು, ಬುಧವಾರ ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಜಗದ್ಗುರು ಬಸವಣ್ಣನವರ ಜಯಂತಿಯನ್ನು ಸರಳವಾಗಿ ಆಚರಿಸುವುದರ ಜೊತೆಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಪ್ರಪಂಚದಾದ್ಯಂತ ಸಮಾಜದ ಒಳಿತಿಗಾಗಿ ವಚನಗಳ ಮೂಲಕ ಸಮಾನತೆಯನ್ನು ತಿಳಿ ಹೇಳಿದ ಬಸವಣ್ಣನವರು ನಮ್ಮೆಲ್ಲರಿಗೂ ಆದರ್ಶವಾಗಿದ್ದರು. ಜೊತೆಗೆ ತಮ್ಮ ಅನುಯಾಯಿಗಳ ಮೂಲಕವೂ ಸಹ ಮನೆಮನೆಗಳಿಗೆ ತೆರಳಿ ಸಮಾನತೆಯ ಬಗ್ಗೆ ತಿಳಿ ಹೇಳುವ ಕೆಲಸ ಮಾಡಿದ್ದರು ಎಂದರು. ಜಗದ್ಗುರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ವೇಳೆ ಗ್ರೇಡ್ 2 ತಹಸೀಲ್ದಾರ್ ಚಂದ್ರಶೇಖರ್, ಆರ್ಐ ರಾಜಗೋಪಾಲ್, ಗ್ರಾಮ ಆಡಳಿತ ಅಧಿಕಾರಿಗಳಾದ ಈರಣ್ಣ ಗೋರ್ನಾಳ್, ರಾಜೇಶ್, ರವಿಕುಮಾರ್, ಸಿಬ್ಬಂದಿ ಪದ್ಮಾ, ಬಲರಾಂ,ಅಸ್ಲಾಂ, ಲಿಂಗಾಯತ ಸಮಾಜದ ಮುಖಂಡರಾದ ಕಾರ್ತಿಕ್ ರಾಜನ್, ಪ್ರೇಸ್ ನಾಗಭೂಷಣ್, ಶ್ರೇಯಸ್, ಹೆಚ್ ಕೃಷ್ಣಮೂರ್ತಿ, ವಕೀಲರಾದ ಆರ್ ಹನುಮಂತರಾಯ, ಎಂ.ಜಿ.ಮಂಜುನಾಥ್, ರೈತ ಸಂಘದ ಗೋಪಾಲ್ ಸೇರಿದಂತೆ ಕಚೇರಿಯ ಸಿಬ್ಬಂದಿ ಹಾಜರಿದ್ದರು.…
ತುಮಕೂರು: ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಯೋಜನೆಯಡಿ ಆಟೋ ಚಾಲಕರು ಹಾಗೂ ಇಶ್ರಮ್ ಯೋಜನೆಯಡಿ ವಿವಿಧ ವರ್ಗದ ಕಾರ್ಮಿಕರನ್ನು ನೋಂದಣಿ ಮಾಡುವ ಅಭಿಯಾನವನ್ನು ಮೇ 5ರಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಾಂಕೇತಿಕವಾಗಿ ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ. ಅಭಿಯಾನದಲ್ಲಿ ನೋಂದಾಯಿಸುವವರ ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಇ.ಪಿ.ಎಫ್. ಹಾಗೂ ಇ.ಎಸ್.ಐ ಸೌಲಭ್ಯ ಹೊಂದಿರಬಾರದು. ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತವೆ. ಚಾಲಕರು, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಲಾಯಿಸಲು ಊರ್ಜಿತ ಚಾಲನಾ ಪರವಾನಗಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಅರ್ಹರು ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಊರ್ಜಿತ ಚಾಲನಾ ಪರವಾನಗಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಅಭಿಯಾನದಲ್ಲಿ ಭಾಗವಹಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿ/ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಿ…
ತುಮಕೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲಸೌಲಭ್ಯ ನೀಡಲು ಜಿಲ್ಲೆಯ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ CET/NEET ನಲ್ಲಿ ಆಯ್ಕೆಯಾಗುವ ವೈದ್ಯಕೀಯ (ಎಂ.ಬಿ.ಬಿ.ಎಸ್), ಬಿ.ಡಿ.ಎಸ್., ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಶ್, ಫಾರ್ಮಸಿ, ಕೃಷಿ ವಿಜ್ಞಾನ ಹಾಗೂ ಪಶುವೈದ್ಯಕೀಯ ಹಾಗೂ ಮತ್ತಿತರ ಕೋರ್ಸ್ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಹ ವಿದ್ಯಾರ್ಥಿಗಳು ಮೇ 23ರೊಳಗಾಗಿ ನಿಗಮದ ಅಧಿಕೃತ ವೆಬ್‌ಸೈಟ್ https://kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಹಾರ್ಡ್ಕಾಪಿ ಹಾಗೂ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿದ ಮೂಲ ದಾಖಲೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಮೇ 23ರೊಳಗೆ ಸಲ್ಲಿಸತಕದ್ದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನ ಆಜಾದ್ ಭವನ, ಇಂದಿರಾ ಕಾಲೇಜ್…
ತುಮಕೂರು: ಬಸವ ಜಯಂತಿ ಪ್ರಯುಕ್ತ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿತ ದಿನವೆಂದು ಘೋಷಿಸಲ್ಪಟ್ಟಿದೆ ಎಂದು ಪಾಲಿಕೆ ಆರೋಗ್ಯಾಧಿಕಾರಿ ವೀರೇಶ್ ಕಲ್ಮಠ್ ತಿಳಿಸಿದ್ದಾರೆ. ಬಸವ ಜಯಂತಿ ನಿಮಿತ್ತ ಏಪ್ರಿಲ್ 29ರ ಸಂಜೆ 5 ಗಂಟೆಯಿಂದ ಏ.30ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಿತ ಪ್ರದೇಶ ವ್ಯಾಪ್ತಿಯಲ್ಲಿ ಕಸಾಯಿಖಾನೆ ಮುಚ್ಚತಕ್ಕದ್ದು ಹಾಗೂ ಮಾಂಸ ಮಾರಾಟ ಮಾಡುವುದು, ಸಂಗ್ರಹಣೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ನಿಷೇಧಿತ ಅವಧಿಯಲ್ಲಿ ಕಸಾಯಿ ಖಾನೆ ತೆರೆಯುವುದು ಹಾಗೂ ಮಾಂಸ ಮಾರಾಟ ಮಾಡುವುದು ಕಂಡ ಬಂದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಅವರು ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಸರಗೂರು: ಭೀಮ್ ಜಯಂತಿ ಎಂದೂ ಕರೆಯಲ್ಪಡುವ ಅಂಬೇಡ್ಕರ್ ಜಯಂತಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತದೆ ಎಂದು ಹಾದನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹಾಗೂ ಗ್ರಾಮದ ಯಜಮಾನ ಹಾದನೂರು ಪ್ರಕಾಶ್ ತಿಳಿಸಿದರು. ತಾಲೂಕಿನ ಹಾದನೂರು ಗ್ರಾಮದಲ್ಲಿ ಸೋಮವಾರದಂದು ಅಂಬೇಡ್ಕರ್ ಅವರ 134 ನೇ ಜಯಂತಿ ಅಂಗವಾಗಿ ಗ್ರಾಮದಲ್ಲಿ ಭೀಮೋತ್ಸವ ಹಾಗೂ ಅಂಬೇಡ್ಕರ್ ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಸಾಮೂಹಿಕ ವಿವಾಹ ನಡೆಯಿತು ಇದೇ ವೇಳೆ ಅಂಬೇಡ್ಕರ್ ಬೆಳ್ಳಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿಶೇಷವಾಗಿ ಭಾರತದಾದ್ಯಂತ ದಲಿತ ಸಮುದಾಯಗಳಿಗೆ ಆಳವಾದ ಭಾವನಾತ್ಮಕ ಮತ್ತು ರಾಜಕೀಯ ಮಹತ್ವವನ್ನು ಹೊಂದಿದೆ. ಇದು ಜಾತಿ ಆಧಾರಿತ ಅಸಮಾನತೆಗಳ ವಿರುದ್ಧ ನಡೆಯುತ್ತಿರುವ ಹೋರಾಟದ ಜ್ಞಾಪನೆಯಾಗಿ ಮತ್ತು ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳಿಗೆ ಸ್ಫೂರ್ತಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಒಬ್ಬ ಆಧ್ಯಾತ್ಮಿಕ ನಾಯಕ. ಇವತ್ತು ಶೋಷಿತರು, ದಲಿತರು ಮುಖ್ಯ ವಾಹಿನಿಗೆ ಬರಲು ಅವರು ಕಾರಣಕರ್ತರು. ಅಂತಹವರ ಸ್ಮರಣೆ ಮಾಡುವುದು, ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ…
ಸರಗೂರು: ಡಾ.ಬಿ.ಆರ್.ಅಂಬೇಡ್ಕರ್ ದೇಶದ ಬೌದ್ಧಿಕ ಜ್ಞಾನದ ಸಂಕೇತವಾಗಿದ್ದಾರೆ ಎಂದು ಹಾದನೂರು ಗ್ರಾಮದ ಯಜಮಾನ ರಾಜೇಶ್ ಅಭಿಪ್ರಾಯಪಟ್ಟರು. ತಾಲೂಕಿನ ಹಾದನೂರು ಗ್ರಾಮದಲ್ಲಿ ಸೋಮವಾರ ದಂದು ನೂತನ ಜ್ಞಾನ ಸೂರ್ಯ ಯುವಕರ ಬಳಗ ಸಂಘವನ್ನು ಗ್ರಾಮದ ಹಿರಿಯ ಮುಖಂಡರು ಹಾಗೂ ಗ್ರಾಪಂ ಸದಸ್ಯರು ಅಂಬೇಡ್ಕರ್ ಪೋಟೋ ಪುಷ್ಪಾರ್ಚನೆ ಸಲ್ಲಿಸಿ ಸಂಘದ ನಾಮಕರಣ ಮಾಡಿ ಮಾತನಾಡಿದರು. ಅಂಬೇಡ್ಕರ್ ಅವರನ್ನು ಜಗತ್ತೇ ವಿಶ್ವದ ಜ್ಞಾನದ ಚಿಹ್ನೆಯಾಗಿ ಒಪ್ಪಿಕೊಂಡರೂ ಭಾರತ ಮಾತ್ರ ಜಾತಿ ಸಂಕೋಲೆಗಳಿಂದ ಬಂಧಿಸಿ ನೋಡುತ್ತಿರುವುದು ವಿಷಾದದ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು. ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತಾದ ಧ್ವನಿ ಬೆಳಕು ಸಂಯೋಜನೆಯ ಭಾರತ ಭಾಗ್ಯವಿಧಾತ ಚಿತ್ರವು ನಮ್ಮ ದೇಶದ ಬಹು ಆಯಾಮಗಳ ಮೌಲಿಕ ವಿಷಯಗಳನ್ನು ಒಳಗೊಂಡಿದೆ’ ಎಂದು ಅಶಯ ವ್ಯಕ್ತಪಡಿಸಿದರು. ಗ್ರಾಮದ ಹಿರಿಯ ಮುಖಂಡ ಪುಟ್ಟಸ್ವಾಮಿ ಮಾತನಾಡಿ ಅಂಬೇಡ್ಕರ್ ಅವರು ಕೇವಲ ದೀನ ದಲಿತರ ಸ್ವತ್ತಲ್ಲ; ಸಮಗ್ರ ರಾಷ್ಟ್ರಾಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳು ಅಪಾರ’ ಎಂದರು. ಈ ಸಂದರ್ಭದಲ್ಲಿ ಮುಖಂಡರು ಚಿಕ್ಕಸಿದ್ದಯ್ಯ, ಮಹದೇವ್,…
ತುಮಕೂರು: ಮೂವತ್ತು ವರ್ಷಗಳ ಸುದೀರ್ಘ ಕ್ಷೇತ್ರಕಾರ್ಯದ ಫಲವಾಗಿ ಹುಟ್ಟಿಕೊಂಡಿರುವ ‘ದೇವುಗಾನಿಕೆ’ ಕೃತಿಯಲ್ಲಿ ಹೆಣ್ಣು– ಗಂಡು ಇಬ್ಬರನ್ನೂ ಸಮಾನವಾಗಿ ಕಾಣಲಾಗಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ವಿಶ್ರಾಂತ ಕಾರ್ಯದರ್ಶಿ ಡಾ. ಅಗ್ರಹಾರ ಕೃಷ್ಣಮೂರ್ತಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಕುಮಾರವ್ಯಾಸ ಅಧ್ಯಯನ ಪೀಠದ ವತಿಯಿಂದ ಶುಕ್ರವಾರ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ.ಡಿ.ವಿ.ಜಿ. ಕನ್ನಡ ಅಧ್ಯಯನ ಕೇಂದ್ರದ ಸಹಪ್ರಾಧ್ಯಾಪಕ ಡಾ.ಪಿ.ಎಂ.ಗಂಗಾಧರಯ್ಯ ಅವರ ‘ದೇವುಗಾನಿಕೆ’ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೌಖಿಕ ಕಾವ್ಯಗಳು, ಕಥೆಗಳು, ನಮ್ಮ ಚರಿತ್ರೆಯನ್ನು ಇಂದಿಗೂ ಹಿಡಿದಿಟ್ಟುಕೊಂಡಿರುವ ಪರಿಯನ್ನು ದೇವುಗಾನಿಕೆ ಪರಿಚಯಿಸುತ್ತದೆ. ಅಂಚಿಗೆ ಸರಿದ ಅನೇಕ ಸಮುದಾಯಗಳ ಚರಿತ್ರೆಗಳನ್ನು ಹೊರ ತರುವುದರಲ್ಲಿ ಕೃತಿಕಾರರು ಮಾಡಿರುವ ಕಾರ್ಯ ಶ್ಲಾಘನೀಯ ಎಂದರು. ಕರ್ನಾಟಕದಲ್ಲಿ 30–35 ವರ್ಷಗಳ ಹಿಂದೆ ಜಾನಪದದ ಹೆಚ್ಚು ಚಟುವಟಿಕೆಗಳು ನಡೆಯುತ್ತಿದ್ದವು. ಇತ್ತೀಚಿಗೆ ಆಧುನೀಕರಣಗೊಂಡು ಎಲ್ಲವೂ ಮರೆಯಾಗುತ್ತಿದೆ. ಪ್ರಸ್ತುತ ಕೃತಿ ಇವನ್ನು ನೆನಪಿಸಿಕೊಳ್ಳುವಂತೆ ಮಾಡಿದೆ ಎಂದರು. ಈ ಕೃತಿಯಲ್ಲಿ ಸ್ತ್ರೀ ದೇವತೆಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಲಾಗಿದೆ. ಒಟ್ಟು ಏಳು ಮಾತೃ ದೇವತೆಗಳ ಗುಂಪನ್ನು ಪರಿಚಯಿಸಲಾಗಿದೆ. ಸಿದ್ದರಬೆಟ್ಟದ ಅಸ್ಮಿತೆ ಮತ್ತು…