Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಬೆಂಗಳೂರು: 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದ್ದು, ಜೊತೆಗೆ ಲಂಬಾಣಿ ತಾಂಡಾಗಳನ್ನೂ ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದ 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಗುರುತಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಜಮೀನು ವಿಚಾರದಲ್ಲಿ ಬಗರ್ ಹುಕುಂ ಸಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ, ಬರ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ಹಳ್ಳಿಗಳಲ್ಲಿ ಸ್ಮಶಾನ ಇಲ್ಲದಿದ್ದರೇ ಸರ್ಕಾರದ ಅಥವಾ ಖಾಸಗಿ ಜಾಗ ಗುರುತಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು. ಮಣ್ಣು ಸವಕಳಿಯಿಂದ ಹಾನಿಗೊಳಗಾದವರಿಗೂ ಪರಿಹಾರ ನೀಡಬೇಕು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸುವ ಮೂಲಕ, ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಮ್,ಶ್ರೀಕಂಠಯ್ಯನವರು ರಚಿಸಿದ “ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ” ಎನ್ನುವಂತೆ ಅರ್ಥಪೂರ್ಣವಾಗಿ ಕನ್ನಡ ಪ್ರೇಮವನ್ನು ಮೆರೆಯೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಕರೆ ನೀಡಿದ್ದಾರೆ. ನವೆಂಬರ್ ೧ ರಂದು ರಾಜ್ಯೋತ್ಸವವನ್ನು ಪ್ರತಿಯೊಬ್ಬ ಕನ್ನಡಿಗರು ಸಂಭ್ರಮದಿಂದ ಆಚರಿಸುತ್ತಾರೆ. ಅದರೊಂದಿಗೆ ಈ ಬಾರಿ ಪ್ರತಿಯೊಬ್ಬ ಕನ್ನಡಿಗನೂ ನಮ್ಮ ಭಾಷೆ, ಸಂಸ್ಕೃತಿ, ಪರಂಪರೆಯ ಧ್ಯೋತಕವಾದ ಕನ್ನಡದ ಧ್ವಜವನ್ನು ಸ್ವ-ಇಚ್ಛೆಯಿಂದ ಹೆಮ್ಮೆಯಿಂದ ಪ್ರತಿಯೋಬ್ಬರ ಮನೆಯ ಮೇಲೆ ಹಾರಿಸುವ ಮೂಲಕ ಕನ್ನಡದ ಹಬ್ಬವನ್ನು ಆಚರಿಸೋಣ. ನಾಡಿನಾದ್ಯಂತ ಎಲ್ಲೆಡೆಯೂ ಹಳದಿ ಕೆಂಪು ಬಣ್ಣವು ರಾರಾಜಿಸಲಿ, ಸ್ಫೂರ್ತಿಯ ಸೆಲೆ ಎಲ್ಲೆಡೆಯೂ ಪಸರಿಸಲಿ, ಎಲ್ಲರ ಮನ-ಮನೆಯಲ್ಲೂ ಕನ್ನಡತನ ಮೆರೆಯಲಿ ಎಂದು ನಾಡೋಜ ಡಾ. ಮಹೇಶ ಜೋಶಿ ಆಶಯ ವ್ಯಕ್ತಪಡಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ-ಕನ್ನಡಿಗ-ಕರ್ನಾಟಕ…
ನವದೆಹಲಿ: ನವೆಂಬರ್ 9, 2022 ರಿಂದ ಜಾರಿಗೆ ಬರುವಂತೆ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ನೇಮಕ ಮಾಡಿದ್ದಾರೆ. ಹಾಲಿ ಸಿಜೆಐ ಯುಯು ಲಲಿತ್ ಅವರ ನಿವೃತ್ತಿಯ ನಂತರ ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಿರ್ಗಮಿತ ಸಿಜೆಐ ಯುಯು ಲಲಿತ್ ಅವರು ಅಕ್ಟೋಬರ್ 11 ರಂದು ನ್ಯಾಯಮೂರ್ತಿ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಿದ್ದರು. ಸಿಜೆಐ ಆಗಿ, ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 10, 2024 ರಂದು ಎರಡು ವರ್ಷಗಳಿಗೂ ಹೆಚ್ಚು ಅವಧಿಯನ್ನು ಹೊಂದಿರುತ್ತಾರೆ. ಇದು ಇತ್ತೀಚಿನ ದಿನಗಳಲ್ಲಿ ಸಿಜೆಐ ಹುದ್ದೆಗೆ ಸುದೀರ್ಘ ಅವಧಿಗಳಲ್ಲಿ ಒಂದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕೋಡಿ : ಕಾಂಗ್ರೆಸ್, ಜೆಡಿಎಸ್ ತೆಕ್ಕೆಯಲ್ಲಿರುವ 100 ಕ್ಷೇತ್ರಗಳನ್ನು ಪಕ್ಷ ಆಯ್ಕೆ ಮಾಡಿಕೊಂಡಿದ್ದು ಪ್ರತಿ ಕಾರ್ಯಕರ್ತನಿಗೂ ತಲಾ 25 ವೋಟ್ಗಳನ್ನು ಸೆಳೆಯುವ ಜವಾಬ್ದಾರಿ ನೀಡಲಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ನಡೆದ ಸಂಕಲ್ಪ ಸಮಾವೇಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 100 ಕ್ಷೇತ್ರಗಳನ್ನು ಆಯ್ಕೆ ಮಾಡಿ ಅವುಗಳ ಗೆಲುವಿಗೆ ಶ್ರಮಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಐದು ಕ್ಷೇತ್ರಗಳ ಟಾರ್ಗೆಟ್ ಮಾಡಿದ್ದೇವೆ. ಒಬ್ಬೊಬ್ಬ ಕಾರ್ಯಕರ್ತನಿಗೆ 21 ಮತಗಳ ಜವಾಬ್ದಾರಿ ನೀಡಲಾಗಿದೆ. ರಾಜಕಾರಣದಲ್ಲಿ 51 ಪರ್ಸೆಂಟ್ ನೂರಕ್ಕೆ ಸಮಾನ 49 ಪರ್ಸೆಂಟ್ ಶೂನ್ಯಕ್ಕೆ ಸಮಾನ ಎಂದರು. ಬಿಜೆಪಿ ಗೆಲ್ಲಿಸುವ ಜವಾಬ್ದಾರಿ ಸವದಿಯವರಿಗೆ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು , ಯಾವ ಕುದುರೆ ಓಡುತ್ತೋ ಅದಕ್ಕೆ ಜಿದ್ದು ಕಟ್ಟುತ್ತಾರೆ. ಯಮಕನಮರಡಿ, ಚಿಕ್ಕೋಡಿ, ಬೆಳಗಾವಿ ಗ್ರಾಮೀಣ, ಖಾನಾಪುರ ಸೇರಿದಂತೆ ಐದು ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತೇನೆ ಎಂದರು. ಇನ್ನು ಪಂಚಮಸಾಲಿ ಹೋರಾಟದ ಬಗ್ಗೆ ಮುಖ್ಯಮಂತ್ರಿಗಳು ಚಿಂತನೆ ಮಾಡುತ್ತಿದ್ದಾರೆ. ಸಾಮಾಜಿಕ ನ್ಯಾಯ ಕೊಡಬೇಕು ಎನ್ನುವ ಚಿಂತನೆ ಬಗ್ಗೆ…
ಬೆಳಗಾವಿ: ಖಾಸಗಿ ಫೈನಾನ್ಸ್ ವಿರುದ್ಧ 25 ಕೋಟಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಸಂತ್ರಸ್ತರು ಫೈನಾನ್ಸ್ ಮತ್ತು ಆಡಳಿತ ಮಂಡಳಿ ಸದಸ್ಯರ ಮನೆಗಳ ಮುಂದೆ ಪ್ರತಿಭಟನೆ ನಡೆಸಿದ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ನಡೆದಿದೆ. ಘಟಪ್ರಭಾ ಪಟ್ಟಣದಲ್ಲಿರುವ ನವೋದಯ ಫೈನಾನ್ಸ್, ಜಗಜ್ಯೋತಿ ಸೌಹಾರ್ದ ಸಹಕಾರಿ ಸಂಘವು ಸರ್ವಜ್ಞ ಚಿಟ್ ಹೆಸರಿನಲ್ಲಿ ಅಂದಾಜು 25 ಕೋಟಿ ರೂಪಾಯಿ ವಂಚನೆ ಆರೋಪ ಮಾಡಿದ್ದಾರೆ. ಹೀಗಾಗಿ ವಂಚನೆಗೊಳಗಾದವರು ಫೈನಾನ್ಸ್ನ ಆಡಳಿತ ಮಂಡಳಿ ಮತ್ತು ಸದಸ್ಯರ ಮನೆಗಳ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಮನೆಯ ಮುಂದೆ ಬೊಬ್ಬೆಹಾಕಿ, ತಮಟೆ, ಪಾತ್ರೆಗಳನ್ನು ಬಾರಿಸಿ ಪ್ರತಿಭಟನೆ ನಡೆಸಿದ ಜನರು, ನಮ್ಮ ದುಡಿದ ಹಣ ವಾಪಸ್ ಕೊಡಿ ಎಂದು ಘೋಷಣೆ ಕೂಗಿದರು. ಇತ್ತ ಜನರ ಪ್ರತಿಭಟನೆಗೆ ಹೆದರಿದ ಆಡಳಿತ ಮಂಡಳಿ ಅಧ್ಯಕ್ಷ ಅಣ್ಣಪ್ಪ ಸೇರಿ ಸದಸ್ಯರು ಪರಾರಿ ಆಗಿದ್ದಾರೆ. ಗ್ರಾಹಕರು ಠೇವಣಿ ಇಟ್ಟ ಹಣದಲ್ಲಿ ಆಡಳಿತ ಮಂಡಳಿ ಸದಸ್ಯರು ಬೇರೆಡೆ ಆಸ್ತಿ ಖರೀದಿಸಿದ ಆರೋಪವಿದೆ. ನಮ್ಮತುಮಕೂರು.ಕಾಂನ ಕ್ಷಣ…
ಬಾಗಲಕೋಟೆ: ಮುಳುಗುವ ಕಾಂಗ್ರೆಸ್ ಹಡಗಿಗೆ ಮಲ್ಲಿಕಾರ್ಜುನ ಖರ್ಗೆರನ್ನು ನಾವಿಕನನ್ನಾಗಿ ಮಾಡುತ್ತಿದ್ದಾರೆ. ಅವರು ಏನೇ ಪ್ರಯೋಗ ಮಾಡಿದರೂ ಈ ದೇಶದಲ್ಲಿ ಕಾಂಗ್ರೆಸ್ ಉಳಿಯಲು ಸಾಧ್ಯವಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ್ ಖರ್ಗೆ ನಾಯಕತ್ವದಿಂದ ಯಾವುದೇ ಪರಿಣಾಮ ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುವಾಗ ಮಾಡಿದ್ರೆ ಅದಕ್ಕೊಂದು ಅರ್ಥ ಇರುತ್ತಿತ್ತು. ರಾಜ್ಯದಲ್ಲಿ ಖರ್ಗೆಯವರನ್ನ ಮುಖ್ಯಮಂತ್ರಿ ಮಾಡಬೇಕಿತ್ತು ಯಾಕೆ ಮಾಡಲಿಲ್ಲ ಎಂದು ಗೋವಿಂದ ಕಾರಜೋಳ ಪ್ರಶ್ನಿಸಿದರು. ದೀನ, ದಲಿತರನ್ನ ವೋಟ್ ಬ್ಯಾಂಕ್ ಮಾಡಲು ರಾಜಕಾರಣ ಮಾಡುತ್ತಾರೆ. ಅವರನ್ನ ಉದ್ಧಾರ ಮಾಡುವುದಾಗಲಿ, ಗೌರವ ಕೊಡುವುದಾಗಲಿ ಕಾಂಗ್ರೆಸ್ನವರು ಯಾವತ್ತೂ ಮಾಡುವುದಿಲ್ಲ. ಕಾಂಗ್ರೆಸ್ ಮುಳುಗುತ್ತಿದೆ ಎಂದು ಗೊತ್ತಾಗಿದೆ. ಹೀಗಾಗಿ ಇಂತಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಖ್ಯಾತ ಕಿರುತೆರೆ ನಟಿ 26 ವರ್ಷದ ವೈಶಾಲಿ ಠಕ್ಕರ್ ಮಧ್ಯಪ್ರದೇಶದ ಇಂದೋರ್ ನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈಶಾಲಿ ಠಕ್ಕರ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಆಕೆಗೆ ಮಾಜಿ ಪ್ರಿಯಕರ ಕಿರುಕುಳ ನೀಡುತ್ತಿದ್ದು, ಇದರಿಂದ ಒತ್ತಡಕ್ಕೆ ಒಳಗಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವೈಶಾಲಿ ತಮ್ಮ ಹಾಗೂ ತಂದೆಯ ಜೊತೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಈಕೆ ಆತ್ಮಹತ್ಯೆ ಮಾಡಿಕೊಳ್ಳುವಂತ ಪರಿಸ್ಥಿತಿ ಎದುರಿಸುತ್ತಿರುವುದು ಮನೆಯವರ ಗಮನಕ್ಕೆ ಬಂದಿರಲಿಲ್ಲ. 2015ರಲ್ಲಿ ಹೇ ರಿಷ್ತಾ ಕ್ಯಾ ಕೆಹೆತಾ ಹೈ ಧಾರವಾಹಿ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದರು. ಇತ್ತೀಚೆಗೆ ಬಿಗ್ ಬಾಸ್ ಖ್ಯಾತಿಯ ನಿಶಾಂತ್ ಮಲಕಣಿ ಜೊತೆ ರಕ್ಷಾಬಂಧನ್ ನಲ್ಲಿ ಕಾಣಿಸಿಕೊಂಡಿದ್ದರು. ಉಜ್ಜಿಯಿನಿ ಮೂಲದ ಮಹಿದೂರ್ ನಿವಾಸಿ ಆಗಿರುವ ವೈಶಾಲಿ ಠಕ್ಕರ್, ಚಿತ್ರರಂಗದಲ್ಲಿ ಕಾಣಿಸಿಕೊಳ್ಳಲು ಮುಂಬೈಗೆ ತೆರಳಿದ್ದರು. ನಂತರ ಜೈಪುರಕ್ಕೆ ತೆರಳಿ ನಂತರ ಇಂದೋರ್ ನಲ್ಲಿ ಕಳೆದ ಒಂದು ವರ್ಷದಿಂದ ನೆಲೆಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಕಳವಳ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಂತೋಷ್ ಹೆಗಡೆ, ಭ್ರಷ್ಟಾಚಾರ ಮೊದಲಿನಿಂದಲೂ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಸಮಾಜದ ವಿವಿಧ ವಲಯಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಅತಿಯಾದ ದುರಾಸೆಯಿಂದಾಗಿ ಭ್ರಷ್ಟಾಚಾರ ಎಲ್ಲೆಡೆಯೂ ಹೆಚ್ಚುತ್ತಿದೆ. ದುರಾಸೆ ಮೊದಲೂ ಇತ್ತು, ಈಗ ಇನ್ನಷ್ಟು ಜಾಸ್ತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಪುನರ್ ಜಾರಿಗೊಳಿಸಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂತೋಷ್ ಹೆಗಡೆ, ಇದು ಸ್ವಾಗತಾರ್ಹ ಬೆಳವಣಿಗೆ. ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಜಾರಿಗೆ ತಂದಿದ್ದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಸುಪ್ರೀಂ ಕೋರ್ಟ್ ಎಸಿಬಿ ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದೆ. ಹಾಗಾಗಿ ಲೋಕಾಯುಕ್ತಕ್ಕೆ ಬಲ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಲೋಕಾಯುಕ್ತ ಕೇಳುವ ಸಿಬ್ಬಂದಿಗಳನ್ನು ಸರ್ಕಾರ ನೇಮಕ ಮಾಡಬೇಕು. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಾಮರ್ಥ್ಯ ಲೋಕಾಯುಕ್ತಕ್ಕಿದೆ ಎಂದರು. ಭ್ರಷ್ಟಾಚಾರ ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರ.…
ವಿಶೇಷ ವರದಿ: ಅಬಿದ್ ಮಧುಗಿರಿ ಮಧುಗಿರಿ: ಪಟ್ಟಣದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಡಿಪೋ ಪ್ರಾರಂಭಗೊಂಡು ಸುಮಾರು ಎಂಟು ವರ್ಷಗಳು ಕಳೆದರೂ ಸಾರ್ವಜನಿಕರಿಗೆ ಸಮರ್ಪಕವಾದ ಸಾರಿಗೆ ಸೇವೆ ಸಿಗುತ್ತಿಲ್ಲ. ಪಾವಗಡ ತಾಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಿಂದ ಬೆಂಗಳೂರಿಗೆ ನೇರ ಬಸ್ ಸೌಲಭ್ಯವಿದೆ. ಆದರೆ ಮಧುಗಿರಿ ತಾಲ್ಲೂಕಿನ ಐಡಿಹಳ್ಳಿ ಹೋಬಳಿಯ ತಾಡಿ ಗ್ರಾಮದಿಂದ ಮಾತ್ರ ಬೆಂಗಳೂರಿಗೆ ನೇರ ಬಸ್ ಸೌಲಭ್ಯವಿದೆ. ಇನ್ನುಳಿದ ಮಿಡಿಗೇಶಿ ಹೋಬಳಿಯ ಪ್ರಯಾಣಿಕರು ಪಾವಗಡದಿಂದ ಬರುವ ಬಸ್ಸುಗಳಲ್ಲಿ ಸೀಟ್ ಇದ್ದರೆ ಕುಳಿತುಕೊಳ್ಳಬಹುದು ಇಲ್ಲದಿದ್ದರೆ ಸ್ಟಾಂಡಿಂಗ್ ನಲ್ಲೇ ರಾಜಧಾನಿಗೆ ಪ್ರಯಾಣ ಬೆಳೆಸಬೇಕಾಗುತ್ತದೆ. ದೊಡ್ಡೇರಿ ಪುರವರ ಕೊಡಿಗೆನಹಳ್ಳಿ ಹೋಬಳಿಗಳ ಜನತೆ ಮಧುಗಿರಿಗೆ ಬಂದು ಇಲ್ಲಿಂದ ಸಾರಿಗೆ ಬಸ್ಸುಗಳಲ್ಲಿ ಸೀಟು ಸಿಕ್ಕಿದರೆ ಆರಾಮವಾಗಿ ಪ್ರಯಾಣ ಬೆಳೆಸಬಹುದು. ಇಲ್ಲದಿದ್ದರೆ, ಖಾಸಗಿ ಬಸ್ಸುಗಳಲ್ಲಿ ಬೆಂಗಳೂರು ತಲುಪಬೇಕಾಗುತ್ತದೆ. ಕೆ.ಎನ್. ರಾಜಣ್ಣನವರು ಶಾಸಕರಾಗಿದ್ದಾಗ ಸಾರ್ವಜನಿಕರ ಮನವಿಗೆ ಸ್ಪಂದಿಸಿ 4 ಸಿಂಗಲ್ ಬಸ್ ಸೇವೆಯನ್ನು ಲೋಕಾರ್ಪಣೆಗೊಳಿಸಿದ್ದರು. ನಂತರದ ದಿನಗಳಲ್ಲಿ ಈ ಬಸ್ ಸೇವೆ ಸ್ಥಗಿತಗೊಂಡಿದ್ದು, ಕೋರ್ಟ್ ಕಚೇರಿ ಆಸ್ಪತ್ರೆ ಕೆಲಸಗಳಿಗೆ…
ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ 12ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದರು. ಈ ಕಂತಿನಲ್ಲಿ ಸುಮಾರು 8 ಲಕ್ಷ ರೈತರ ಖಾತೆಗಳಿಗೆ 16 ಸಾವಿರ ಕೋಟಿ ರೂಪಾಯಿ ಜಮೆಯಾಗಿದೆ. ಬಳಿಕ, 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳಿಗೆ ಮೋದಿ ಚಾಲನೆ ನೀಡಿದರು. ಒಂದು ದೇಶ ಒಂದು ಗೊಬ್ಬರ ಹೆಸರಿನಲ್ಲಿ ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಓಪಿ, ಭಾರತ್ ಎನ್ ಪಿಕೆ ರಸಗೊಬ್ಬರವನ್ನು ಲೋಕಾರ್ಪಣೆ ಮಾಡಿದರು. ಸಾವಿರಾರು ರೈತರು ಸಮಾರಂಭದ ಸ್ಥಳದಲ್ಲಿ ಉಪಸ್ಥಿತರಿದ್ದರು.\ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz