Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಬೆಂಗಳೂರಿನಲ್ಲಿ ಇಂದು ರಸ್ತೆಗುಂಡಿಯಿಂದಾಗಿ ಅಪಘಾತ ಸಂಭವಿಸಿ ಮಹಿಳೆ ಗಂಭೀರ ಗಾಯಗೊಂಡ ಹಿನ್ನೆಲೆ ರಸ್ತೆಗುಂಡಿಗಳನ್ನು ಮುಚ್ಚದ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಬೆಂಗಳೂರಲ್ಲೆ ಅಷ್ಟೆ ಅಲ್ಲ ರಸ್ತೆಗುಂಡಿಗಳು ಇಡೀ ರಾಜ್ಯದಲ್ಲಿಇವೆ. ಸಿಎಂ ಕಾನ್ಫರೆನ್ಸ್ ಮಾಡ್ತಾರೆ. ಎಷ್ಟೇ ಸಭೆ ಮಾಡಿದ್ರೂ ಗುಂಡಿ ಮುಚ್ಚಲ್ಲ. ಜನ ಜೀವನ ಕಾಪಾಡಲು ಸರ್ಕಾರ ಮುಂದಾಗಿಲ್ಲ. ಮಳೆಹಾನಿ ತಡೆಗೆ ಸರ್ಕಾರ ತಯಾರಿ ಮಾಡಿಕೊಂಡಿಲ್ಲ. ನಮ್ಮಲ್ಲಿ ಗುಂಡಿ ಮುಚ್ಚುವ ಕೆಲಸ ಮಾತ್ರ ಆಗಿಲ್ಲ ಎಂದು ಕಿಡಿಕಾರಿದರು. ವಾಹನ ಸವಾರಿಂದ ಪೊಲೀಸರು ದಂಡ ವಸೂಲಿ ಮಾಡ್ತಿದ್ದಾರೆ. ರಾಜ್ಯದ ಎಲ್ಲಾ ಕಡೆ ರಸ್ತೆ ಗುಂಡಿ ಸಮಸ್ಯೆಯೇ ಇದೆ. ಆದರೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ನಿನ್ನೆ ಅರಸೀಕೆರೆಯಲ್ಲಿ 9 ಮಂದಿ ಅಪಘಾತದಿಂದ ಸಾವನ್ನಪ್ಪಿದ್ದಾರೆ. ಹೈವೇಗಳಲ್ಲಿ ಪೊಲೀಸರು ಜನರಿಂದ ವಸೂಲಿಗೆ ನಿಂತಿರುತ್ತಾರೆ. ಹಣ ವಸೂಲಿಗೆ ಈ ಸರ್ಕಾರವೂ ನಿಂತುಬಿಟ್ಟಿದೆ. ಹಣ ವಸೂಲಿ ಮಾಡಿ ಹಂಚಿಕೊಳ್ಳುತ್ತಾರೆ . ರಾತ್ರಿ ವೇಳೆ ಕುಡಿಯೋದಕ್ಕೆ ಅವಕಾಶ ಕೊಡೋದು ನೀವೇ. …
ಕೊರಟಗೆರೆ: ಕೆರೆಯ ನೀರು ನುಗ್ಗಿದ ಪರಿಣಾಮ ರೈತರು ನೂರಾರು ಎಕರೆ ಜಮೀನಿನಲ್ಲಿ ಬೆಳೆದ ಬೆಳೆಗಳು ನಾಶವಾಗುವ ಭೀತಿ ಸೃಷ್ಟಿಯಾಗಿದ್ದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ರೈತರು ತೀವ್ರ ಆತಂಕದಲ್ಲಿದ್ದಾರೆ. ಕಾಲುವೆ ಮುಚ್ಚಿ ಹೋದ ಪರಿಣಾಮ ಕೊರಟಗೆರೆ ತಾಲೂಕಿನ ದೊಡ್ಡಸಾಗ್ಗೆರೆ ಕೆರೆಯ ತೂಬಿನಿಂದ ಹಾದು ಹೋಗುವ ನೀರು ಸಮರ್ಪಕವಾಗಿ ಹಾದು ಹೋಗುತ್ತಿಲ್ಲ. ಹೀಗಾಗಿ ರಭಸವಾಗಿ ಬರುತ್ತಿರುವ ನೀರು ಅಡಿಕೆ ತೋಟ ಹಾಗೂ ರೈತರ ಬೆಳೆಗೆ ನುಗ್ಗಿ ಬೆಳೆ ನಾಶವಾಗುತ್ತಿದ್ದು, ಬೆಳೆದು ನಿಂತ ಅಡಿಕೆ ತೋಟ ಕೊಚ್ಚಿ ಹೋಗಿ ನಾಶವಾಗುವ ಭೀತಿ ಸೃಷ್ಟಿಯಾಗಿದೆ. ದೊಡ್ಡ ಸಾಗ್ಗೆರೆ ಹಾಗೂ ಗಜಮುದ್ದನ ಹಳ್ಳಿ ಮಧ್ಯಭಾಗದಲ್ಲಿ ಬರುವಂತಹ ದೊಡ್ಡಸಾಗ್ಗೆರೆ ಕೆರೆಯ ನೀರು ಸುತ್ತಮುತ್ತಲಿನ 4-5 ಹಳ್ಳಿಗಳ ಜನರ ಮನೆಗಳಿಗೆ ನುಗ್ಗುವ ಆತಂಕ ಸೃಷ್ಟಿಯಾಗಿದೆ. ಕಳೆದ 15-20 ವರ್ಷಗಳ ಭೀಕರ ಬರಗಾಲದ ಸಂದರ್ಭದಲ್ಲಿ ಇಲ್ಲಿನ ರೈತರು ಕಾಲುವೆ ಒತ್ತುವರಿ ಮಾಡಿಕೊಂಡಿರುವ ಕಾರಣ ಈ ಸಮಸ್ಯೆ ಸೃಷ್ಟಿಯಾಗಿದೆ. ಜೊತೆಗೆ ಹೊಸದಾಗಿ ನಿರ್ಮಾಣವಾಗಿರುವ ರಸ್ತೆಗೆ ಸೇತುವೆ ನಿರ್ಮಾಣ ಮಾಡದ ಕಾರಣ ನೀರು ಸರಾಗವಾಗಿ…
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದ್ದು ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೆ ಸಚಿವಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಗೊತ್ತು ಎಂದರು. ಈ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಕೇಂದ್ರ ನಾಯಕರು ಮತ್ತು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರಕ್ಕೆ ನಾನು ಬದ್ಧ. ಸಚಿವ ಸ್ಥಾನ ಕೊಟ್ಟರೆ ತೆಗೆದುಕೊಳ್ಳುತ್ತೇನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಶಶಿ ತರೂರು ವಿರುದ್ದ ನೇರ ಹಣಾಹಣಿ ಏರ್ಪಟ್ಟಿದೆ. 20 ವರ್ಷಗಳ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಗಾಂಧಿಯೇತರ ಅಧ್ಯಕ್ಷನನ್ನು ಹೊಂದಲು ಸಜ್ಜಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಮತದಾನ ನಡೆಯಲಿದ್ದು, ಅಕ್ಟೋಬರ್ 19ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ದೇಶಾದ್ಯಂತ ಸುಮಾರು 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಕರ್ನಾಟಕದವರೇ ಆದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸರಿಸುಮಾರು 9,000 ಕ್ಕೂ ಅಧಿಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳು ಮತ ಚಲಾವಣೆ ಮಾಡುವ ಅರ್ಹತೆ ಪಡೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಮ್ಮ ಪಕ್ಷದ ನಾಯಕರಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಬಿಜೆಪಿ ಪಕ್ಷದ ಹೇಳಿಕೆಯಾಗಿಲ್ಲ. ಯತ್ನಾಳ್ ಅಲ್ಪಸಂಖ್ಯಾತ ಮೀಸಲಾತಿ ಬಗ್ಗೆ ಹೇಳಿದ್ದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದರು. ಈಗಾಗಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುವ ಸಂಬಂಧ ನೋಟಿಸ್ ನೀಡಲಾಗಿತ್ತು. ಅವರಿಂದ ಉತ್ತರವನ್ನು ಪಡೆಯಲಾಗಿದೆ. ಅವರ ಸ್ವಭಾವವೇ ಹಾಗೆ ಆಗಿದ್ದು, ಅದಕ್ಕೆ ಏನೂ ಮಾಡೋದಕ್ಕೆ ಆಗೋದಿಲ್ಲ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಗುಬ್ಬಿ: ತಾಲೂಕಿನ ಕಡಬ ಹೋಬಳಿ ಕಲ್ಲೂರು ಗ್ರಾಮದ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ನಟರಾಜು ಹಾಗೂ ಹನುಮಂತು ನೀರುಪಾಲಾಗಿದ್ದರು. ಈ ಪೈಕಿ ಓರ್ವರ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳ ಭಾನುವಾರ ಪೂರ್ತಿ ಕೆರೆಯ ನೀರಿನಲ್ಲಿ ಹುಡುಕಿತ್ತು. ಆದರೆ ಇಂದು ಬೆಳಗ್ಗೆ 9 ಗಂಟೆಯ ವೇಳೆಗೆ ಬಿಳಿ ನಂದಿಯ ಬಳಿ ನಟರಾಜ್ ಅವರ ಶವ ಪತ್ತೆಯಾಗಿದೆ. ಆದರೆ ಹನುಮಂತು ಅವರ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಹನುಮಂತ ಅವರ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅಗ್ನಿಶಾಮಕ ದಳ ಪೊಲೀಸ್ ಇಲಾಖೆ ನಿರಂತರ ಪ್ರಯತ್ನದಲ್ಲಿದೆ. ವರದಿ: ಮಂಜುನಾಥ್ ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುರುವೇಕೆರೆ: ತಾಲೂಕಿನ ಸುತ್ತಮುತ್ತ ಗ್ರಾಮದಲ್ಲಿ ಕೊಬ್ಬರಿ ಕಳ್ಳತನ ಹೆಚ್ಚಾಗಿದ್ದು, ರಾತ್ರಿ ಆಗೋದನ್ನೇ ಕಾಯುವ ಕಳ್ಳರು, ವ್ಯವಸ್ಥಿತವಾಗಿ ಕಳ್ಳತನ ನಡೆಸುತ್ತಿದ್ದು, ಕಳ್ಳತನಕ್ಕೂ ಮೊದಲು ಸಿಸಿ ಕ್ಯಾಮರಾಗಳ ಕೇಬಲ್ ಕಟ್ ಮಾಡಿ, ಸಾಕ್ಷಿ ನಾಶ ನಡೆಸುತ್ತಿದ್ದಾರೆ. ಕಳ್ಳರ ಹಾವಳಿಯಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಇನ್ನು ಇದೇ ತಿಂಗಳ 13ನೇ ತಾರೀಕಿನಂದು ತಾಲೂಕಿನ ಗೋಣಿ ತುಮಕೂರು ಗ್ರಾಮದ ವಾಸಿಯಾದ ರವೀಂದ್ರ ಕುಮಾರ್ ಅವರ ಮನೆಯಲ್ಲಿ ರಾತ್ರಿ 2 ಗಂಟೆಯ ಸುಮಾರಿಗೆ 1.68 ಲಕ್ಷ ರೂಪಾಯಿ ಬೆಲೆ ಬಾಳುವ 48 ಚೀಲ ಕೊಬ್ಬರಿಯನ್ನು ಕಳವು ಮಾಡಲಾಗಿದೆ. ಕಳ್ಳತನಕ್ಕೂ ಮೊದಲು ಸಿಸಿ ಟಿವಿಯ ಕೇಬಲ್ ಕಟ್ ಮಾಡಿರೋದೇ ಅಲ್ಲದೇ ಸಿಸಿ ಕ್ಯಾಮರಾದ ಕಣ್ಣಿಗೆ ಸೆಗಣಿ ಮೆತ್ತಿ, ಮನೆಗೆ ಹೊರಗಿನಿಂದ ಚಿಲಕ ಹಾಕಿ ಮನೆಯಿಂದ ಯಾರೂ ಹೊರಗೆ ಬಾರದಂತೆ ಕಳ್ಳರು ಕೈಚಳಕ ತೋರಿಸಿದ್ದಾರೆ. ಕಳ್ಳತನಕ್ಕೂ ಮೊದಲು ಅಶೋಕ್ ಲೈಲ್ಯಾಂಡ್ ಎಂಬ ಗೂಡ್ಸ್ ವಾಹನ ಮನೆಯ ಪಕ್ಕದ ರಸ್ತೆ ಬದಿಯಲ್ಲಿ ಸುಮಾರು ಹೊತ್ತಿನವರೆಗೆ ನಿಂತಿತ್ತು. ಇದೇ ವಾಹನ ರಸ್ತೆಯಲ್ಲಿ ಚಲಿಸುತ್ತಿರುವ ದೃಶ್ಯ ಸಿಸಿ…
ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಅವರಿಂದು 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇವರು ಲೆಜೆಂಡರಿ ಸ್ಪಿನ್ನರ್. ದಶಕಗಳ ಕಾಲ ಟೀಮ್ ಇಂಡಿಯಾವನ್ನು ಆಳಿದ್ದ ಕುಂಬ್ಳೆ, 1999ರ ಫೆ.7ರಂದು ಪಾಕ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಮಾಡಿದ 10 ವಿಕೆಟ್ ಗಳ ದಾಖಲೆಯನ್ನು ಯಾರಾದರೂ ಮರೆಯಲು ಸಾಧ್ಯವೇ? ಇವರು ಲೆಗ್ ಸ್ಪಿನ್‌ಗೆ ವೇಗ & ಬೌನ್ಸ್ ಸೇರಿಸಿ ಬ್ಯಾಟ್ಸ್‌ಮನ್‌ಗಳನ್ನು ಒತ್ತಡಕ್ಕೆ ಸಿಲುಕಿಸುತ್ತಿದ್ದರು. ಹೀಗಾಗಿ ಸ್ಪಿನ್ ಮಾಂತ್ರಿಕನಿಗೆ ‘ಜಂಬೋ’ ಎನ್ನುವ ಅಡ್ಡಹೆಸರೂ ಇದೆ. 1970ರ ಅಕ್ಟೋಬರ್ 17ರಂದು ಅನಿಲ್ ಕೃಷ್ಣಸ್ವಾಮಿ ಕುಂಬ್ಳೆ ಬೆಂಗಳೂರಿನಲ್ಲಿ ಜನಿಸಿದ್ದರು. ಇವರ ತಂದೆ ಕೃಷ್ಣಸ್ವಾಮಿ ಹಾಗೂ ತಾಯಿ ಸರೋಜ. ಪೋಷಕರು ಮೂಲತಃ ಕಾಸರಗೋಡು ಮೂಲದವರು. ಕುಂಬ್ಳೆ ಲೆಗ್ ಸ್ಪಿನ್ನರ್, ಇವರು ತಮ್ಮದೇ ಆದ ಬೌಲಿಂಗ್ ಶೈಲಿಗೆ ಹೆಸರುವಾಸಿಯಾಗಿದ್ದರು. ಚೇತನಾ ಅವರನ್ನು ಕುಂಬ್ಳೆ ವಿವಾಹವಾಗಿದ್ದು, ದಂಪತಿಗೆ ಪುತ್ರ ಮಯಾಸ್, ಪುತ್ರಿ ಸ್ವಸ್ತಿ ಹಾಗೂ ಆರುಣಿಯನ್ನು ದತ್ತು ಪುತ್ರಿಯನ್ನಾಗಿ ಪಡೆದಿದ್ದಾರೆ. ಜುಂಬೋ ಜೆಟ್ ಎಂದೇ ಹೆಸರಾಗಿದ್ದ ಅನಿಲ್ ಕುಂಬ್ಳೆ ಕ್ರಿಕೆಟ್ ಲೋಕದ ಅದ್ಭುತ…
ಹೆಚ್.ಡಿ.ಕೋಟೆ: ಧಾರಾಕಾರ ಮಳೆಯಿಂದಾಗಿ ಹೆಚ್.ಡಿ.ಕೋಟೆ ತಾಲ್ಲೂಕಿನ ಮಲಾರ ಕಾಲೋನಿಗೆ ಸಂಪರ್ಕಕಲ್ಪಿಸುವ ರಸ್ತೆ ಜಲಾವೃತವಾಗಿದೆ. ಕಾಲುವೆಗೆ ತಡೆಗೋಡೆ ಇಲ್ಲದೆ ಇರುವುದರಿಂದ ಕಾಲುವೆಯ ನೀರು ರಸ್ತೆಗೆ ನುಗ್ಗಿ ಜನ ಜಾನುವಾರಗಳಿಗೆ ಸಂಕಷ್ಟ ಸೃಷ್ಟಿಯಾಗಿದೆ. ರಸ್ತೆಯಲ್ಲಿ ನೀರು ಹರಿಯುತ್ತಿರೋದ್ರಿಂದಾಗಿ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಗಿದೆ. ಶಾಸಕರು ಹಾಗೂ ಅಧಿಕಾರಿಗಳು ಇತ್ತ ಗಮನ ಹರಿಸುವಂತೆ ಇಲ್ಲಿನ ನಾಗರಿಕರು ಒತ್ತಾಯಿಸಿದ್ದಾರೆ. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿನ್ನೆಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಯ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಡಿಯಲ್ಲಿ ಇದುವರೆಗೂ ಪಿಂಚಣಿ ಕಾಣದ ಒಂದೇ ಗ್ರಾಮದ 25 ಜನ ವೃದ್ಧರಿಗೆ ಸ್ಥಳದಲ್ಲಿಯೇ ಪಿಂಚಣಿ ಮಂಜೂರಾತಿ ಪತ್ರವನ್ನು ತಹಶೀಲ್ದಾರ್ ನಹಿದಾ ಜಮ್ ಜಮ್ ನೀಡಿದರು. ಬಳಿಕ ಮಾತನಾಡಿದ ಅವರು, ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಈ ಬಾರಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿನ್ನೆಪಾಳ್ಯ ಗ್ರಾಮದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ನಮ್ಮ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ನಿಮ್ಮ ಈ ಗ್ರಾಮದಲ್ಲಿ ಇರುತ್ತಾರೆ. ಸ್ಥಳೀಯ ಸಾರ್ವಜನಿಕರ ಕುಂದು ಕೊರತೆಗಳ ಸಮಸ್ಯೆಗಳನ್ನು ಬಗೆಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ. ಇದರಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟಂತೆ ಸುಮಾರು 47 ಅರ್ಜಿಗಳು ನಮ್ಮ ಬಳಿ ಸಾರ್ವಜನಿಕರು ಕೊಟ್ಟಿದ್ದಾರೆ. ಕೂಡಲೇ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇನೆ. ಜತೆಗೆ ಇದೇ ಗ್ರಾಮದ 25 ವೃದ್ಧರಿಗೆ ಪಿಂಚಣಿ ಪ್ರಮಾಣ ಪತ್ರವನ್ನು…