Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ರಾಯಚೂರು : ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧ ವಿಚಾರವಾಗಿ ಸಚಿವ ಆರ್. ಆಶೋಕ್ ಮಾತನಾಡಿ ಕನ್ನಡ ಭವನ ಮಾಡೇ ಮಾಡುತ್ತೇವೆ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಸಚಿವ ಆರ್. ಆಶೋಕ್ ಮಾತನಾಡಿ, ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧವಿದೆ ಆದರೂ ಮಹಾರಾಷ್ಟ್ರದಲ್ಲಿ ಕನ್ನಡ ಭವನ ಮಾಡೇ ಮಾಡುತ್ತೇವೆ ಎಂದಿದ್ದಾರೆ. ನಮ್ಮ ರಾಜ್ಯದಲ್ಲಿ ಶಿವಾಜಿ ಮೂರ್ತಿಗಲು ಇವೆ. ಉತ್ತರ ಭಾರತದವರಿಗೂ ನಾನು ಇಲ್ಲಿ ಜಾಗ ಕೊಟ್ಟಿದ್ದೇವೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಣ ಮಾಡುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಾಸನ: ಕೆಎಸ್ಆರ್ ಟಿಸಿ ಬಸ್, ಟ್ಯಾಂಕರ್, ಟಿಟಿ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ 9 ಜನ ಸಾವನ್ನಪ್ಪಿದ ಘಟನೆ ತಡರಾತ್ರಿಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹಳ್ಳಿಕೆರೆ ಗ್ರಾಮದ ಬಳಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮಕ್ಕಳು ಸೇರಿದಂತೆ 9 ಜನ ಸಾವನ್ನಪ್ಪಿದ್ದಾರೆ. ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಿಟಿ ವಾಹನ ಟ್ಯಾಂಕರ್ ಓವರ್ ಟೇಕ್ ಮಾಡುವಾಗ ಎದುರಿನಿಂದ ಬಂದ ಕೆಎಸ್ಆರ್.ಟಿ.ಸಿ. ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ: ತಾಲ್ಲೂಕಿನಲ್ಲಿ ಸುಮಾರು 12 ವರ್ಷಗಳಿಂದ ಕರ್ನಾಟಕದ ರಕ್ಷಣಾ ವೇದಿಕೆ (ಟಿ.ಎ.ನಾರಾಯಣ ಗೌಡರ ಬಣ) ಕನ್ನಡ ಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ಕನ್ನಡ ಪರ ಹೋರಾಟಗಳಲ್ಲಿ ತೊಡಗಿದ್ದ ಕೆ.ಎನ್.ನಟರಾಜು ತಾಲ್ಲೂಕು ಅಧ್ಯಕ್ಷನಾಗಿ ಕನ್ನಡ ನಾಡಿನ ನೆಲ,ಜಲ,ಭಾಷೆ, ವಿಚಾರವಾಗಿ ಸತತ ಹೋರಾಟಗಳನ್ನು ನಡೆಸಿಕೊಂಡು ತಾಲ್ಲೂಕಿನಲ್ಲಿ ನೂರಾರು ಹೋರಾಟಗಳನ್ನು ಮಾಡಿ ನೊಂದವರ ಪರ ಧ್ವನಿಯಾಗಿ ಕನ್ನಡ ಪರ ಸಂಘಟನೆಗಳ ಹೋರಾಟಗಳಲ್ಲಿ ಮುಂಚೂಣಿ ನಾಯಕರಾಗಿ ತಾಲ್ಲೂಕಿನಲ್ಲಿ ಹೊರಹೊಮ್ಮಿದ್ದಾರೆ. ಆದರೆ, ಕೆಲವು ದಿನಗಳ ಹಿಂದೆ ರಾಜಕೀಯ ಪ್ರೇರಿತವಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಕೆ ಎನ್ ನಟರಾಜು ರವರನ್ನು ಯಾವುದೋ ದುರುದ್ದೇಶಕ್ಕೆ ಅಧ್ಯಕ್ಷ ಸ್ಥಾನದಿಂದ ವಜಾಗೋಳಿಸಿರುವುದು ತಾಲ್ಲೂಕಿನ ಕರವೇ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶಕ್ಕೆ ತುಮಕೂರು ಜಿಲ್ಲಾಧ್ಯಕ್ಷ ಮಂಜುನಾಥ್ ಗೌಡ ಕಾರಣರಾಗಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕಲಿಂ ವುಲ್ಲ, ಸುಮಾರು 12 ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಮತ್ತು ಕನ್ನಡಪರ ಕಾರ್ಯಕ್ರಮಗಳಲ್ಲಿ ನಿರಂತರವಾದ ಸೇವೆ ಸಲ್ಲಿಸಿಕೊಂಡು ಬಂದಿರುವ ಕರವೇ ಅಧ್ಯಕ್ಷ ಕೆ.ನಟರಾಜ್ ರವರನ್ನು…
ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸುವುದಕ್ಕೆ ಅನುಮತಿ ನೀಡಲು ವಾರಣಾಸಿ ಜಿಲ್ಲಾ ಕೋರ್ಟ್ ನಿರಾಕರಿಸಿದೆ. ಶಿವಲಿಂಗದ ವೈಜ್ಞಾನಿಕ ಅಧ್ಯಯನ ನಡೆಸಲು ಅನುಮತಿ ನೀಡುವಂತೆ ಕೋರಿ ಹಿಂದೂಗಳು ಸಲ್ಲಿಸಿದ್ಧ ಅರ್ಜಿಯನ್ನ ವಾರಣಾಸಿ ಜಿಲ್ಲಾಕೋರ್ಟ್ ನ್ಯಾಯಾಧೀಶ ಅಜಯ್ ಕೃಷ್ಣ ವಜಾಗೊಳಿಸಿದ್ದಾರೆ. ಈ ಮೂಲಕ ಜ್ಞಾನ್ವಾಪಿ ಮಸೀದಿ ಸಂಕೀರ್ಣದಲ್ಲಿ ‘ಶಿವಲಿಂಗ’ದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ತನಿಖೆ ನಡೆಸಬೇಕೆಂಬ ಹಿಂದೂ ಪಕ್ಷದ ಬೇಡಿಕೆ ತಿರಸ್ಕೃತವಾಗಿದೆ. ಕಾರ್ಬನ್ ಡೇಟಿಂಗ್ ನಡೆಸಿದರೇ ಸಾಕ್ಷಿಗೆ ಹಾನಿಯಾಗಬಹುದು. ಜಾಗವನ್ನ ಸೀಲ್ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ ಎಂದು ಸುಪ್ರೀಂ ಆದೇಶ ಉಲ್ಲೇಖಿಸಿ ಈ ಮಹತ್ವದ ತೀರ್ಪನ್ನ ಕೋರ್ಟ್ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಕರಾವಳಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ. ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ 5 ದಿನ ಮಳೆಯಾಗಲಿದೆ. ತಗ್ಗು ಪ್ರದೇಶದ ಜನ ಎಚ್ಚರದಿಂದಿರಲು ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಉತ್ತರಕನ್ನಡ, ದಕ್ಷಿಣಕನ್ನಡ, ಬಾಗಲಕೋಟೆ, ಧಾರವಾಡ ಗದಗ ಹಾವೇರಿ ಬಳ್ಳಾರಿ ಸೇರಿ 17ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮಳೆರಾಯ ಅಬ್ಬರಿಸಲಿದ್ದು, ಜಿಲ್ಲಾಧಿಕಾರಿಗಳಿಗೆ ಮುಂಜಾಗ್ರತೆ ವಹಿಸಲು ಸೂಚನೆ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಅವರು ಪ್ರಮಾಣವಚನ ಸ್ವೀಕರಿಸಿದರು. ಇಂದು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಗೊಂಡಿರುವ ಪ್ರಸನ್ನ ಬಾಲಚಂದ್ರ ವರಳೆ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಧಾರವಾಡ: ಬ್ಯಾಂಕ್ನ ಎಟಿಎಂನಿಂದ ಹಣ ಬಾರದೇ ಅಕೌಂಟನಿಂದ ಕಟ್ ಆಗಿದ್ದ 500 ರೂಪಾಯಿ ಹಿಂದುರಿಗಿಸದ ಬ್ಯಾಂಕ್ಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಗ್ರಾಹಕನಿಗೆ 1,02,700 ರೂ.ಗಳ ಪರಿಹಾರ ನೀಡಬೇಕೆಂದು ಆದೇಶ ಹೊರಡಿಸಿದೆ. ಇಂಡಿಯನ್ ಓವರಸೀಸ್ ಬ್ಯಾಂಕಿನ ಶಾಖೆಯ ಗ್ರಾಹಕರಾದ ವಕೀಲ ಸಿದ್ದೇಶ ಹೆಬ್ಬಳ್ಳಿ ನವೆಂಬರ್ 28, 2020 ರಂದು ತಮ್ಮ ಎಟಿಎಂ ಕಾರ್ಡನಿಂದ 500 ರೂ. ಹಣ ತಗೆಯಲು ಪ್ರಯತ್ನಿಸಿದಾಗ ತನ್ನ ಉಳಿತಾಯ ಖಾತೆಯಿಂದ ಡೆಬಿಟ್ ಆದರೂ ತನಗೆ ಆ ಹಣ ಬಾರದ ಕಾರಣ ಮತ್ತೊಮ್ಮೆ ಪಕ್ಕದ ಎಟಿಎಂ ಮಶೀನಿನಿಂದ ಕಾರ್ಡಹಾಕಿ 500 ರೂ.ಪಡೆದಿದ್ದರು. ಇಂಡಿಯನ್ ಓವರಸೀಸ್ ಬ್ಯಾಂಕಿನ ಎಟಿಎಂ ಕಾರ್ಡ್‍ನಿಂದ ಮೊದಲನೇ ಸಲ ತೆಗೆದ 500 ರೂ. ತನಗೆ ಬಂದಿಲ್ಲವಾದರೂ ತನ್ನ ಖಾತೆಯಿಂದ ಡೆಬಿಟ್ ಆಗಿರುವ ಕುರಿತು ಡಿಸೆಂಬರ್ 02, 2020 ರಂದು ತಮ್ಮ ಖಾತೆಯಿರುವ ಇಂಡಿಯನ್ ಓವರಸೀಸ್ ಬ್ಯಾಂಕಿನ ಶಾಖಾ ವ್ಯವಸ್ತಾಪಕರಿಗೆ ದೂರು ಕೊಟ್ಟಿದ್ದರು. ಆದರೆ, ಸಿದ್ದೇಶ ಹೆಬ್ಬಳ್ಳಿ ಅವರು ನೀಡಿದ ದೂರು ಕುರಿತು ಶಾಖಾ ವ್ಯವಸ್ಥಾಪಕರು ಯಾವುದೇ…
ಹುಬ್ಬಳ್ಳಿ: ಕಳೆದೆರಡೂ ವರ್ಷಗಳಿಂದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೋರಾಟ ನಡೆಯುತ್ತಿದೆ. ಇನ್ನೊಂದೆಡೆ ಆ ಸಮುದಾಯವನ್ನ 2ಎ ಮೀಸಲಾತಿಗೆ ನೀಡಬಾರದು ಎಂಬ ಒತ್ತಡವೂ ಸರ್ಕಾರದ ಮೇಲಿದೆ. ಇದೀಗ ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟಕ್ಕೆ ಸೆಡ್ಡು ಹೊಡೆದಿರುವ ಹಲವು ಸ್ವಾಮೀಜಿಗಳು ಚಿಂತನ ಮಂಥನ ನಡೆಸಲು ಮುಂದಾಗಿದ್ದಾರೆ. ಹುಬ್ಬಳ್ಳಿ ನಗರದ ಅಕ್ಕನ ಬಳಗದಲ್ಲಿ ನಡೆಯುವ ರಾಜ್ಯ ಮಟ್ಟದ ಹೋರಾಟ ಜಾಗೃತಿ ಕಾರ್ಯಕ್ರಮದಲ್ಲಿ ಹತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗಿಯಾಗಲಿದ್ದು, ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟ, ಹಡಪದ, ಗಂಗಾಮತ, ವಿಶ್ವಕರ್ಮ, ಮಡಿವಾಳ, ಚಿತ್ರಗಾರ, ಎಸ್.ಎಸ್.ಕೆ, ಮರಾಠ, ಗಾಣಿಗ, ಸಮಾಜ, ರಜಕ, ಉಪ್ಪಾರ, ಸೂರ್ಯವಂಶ ಸಮಾಜದ ಮುಖಂಡರು ಕೂಡ ಭಾಗಿಯಾಗಲಿದ್ದಾರೆ. ಪಂಚಮಸಾಲಿ ಸಮುದಾಯವು 2 ಎ ಮೀಸಲಾತಿ ಸಿಗದೆ ಹೋದರೆ ನವೆಂಬರ್ ಮೊದಲನೆಯ ವಾರದಲ್ಲಿ ವಿಧಾನಸಭೆ ಮುತ್ತಿಗೆ ಹಾಕಲಾಗುತ್ತದೆ, ವಿಧಾನಸಭೆ ಚುನಾವಣೆಯಲ್ಲಿ ಸರ್ಕಾರಕ್ಕೆ ಸಮುದಾಯದ ಶಕ್ತಿ ತೋರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ನಡುವೆ ಯಾವುದೇ ಕಾರಣಕ್ಕೂ ಪಂಚಮಸಾಲಿ ಸಮುದಾಯಕ್ಕೆ…
ಭುವನೇಶ್ವರ್: ಹನಿಟ್ರ್ಯಾಪ್ ಮಾಡಿ ಕೋಟಿಗಟ್ಟಲೆ ಹಣ ಮಾಡಿರುವ ಆರೋಪದ ಮೇಲೆ ಅರ್ಚನಾ ನಾಗ್ ಎಂಬಾಕೆಯನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. 18 ಶಾಸಕರು ಸೇರಿದಂತೆ 25 ಪ್ರಭಾವಿಗಳನ್ನು ತನ್ನ ಹನಿಟ್ರ್ಯಾಪ್ ಬಲೆಗೆ ಕಡೆವಿರುವುದಾಗಿ ತಿಳಿದುಬಂದಿದೆ. ಈ ವಿಚಾರ ಇದೀಗ ಒಡಿಶಾ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಉಂಟು ಮಾಡಿದೆ. ಹನಿಟ್ರ್ಯಾಪ್ಗೆ ಒಳಗಾದ ಶಾಸಕರಲ್ಲಿ ಬಹುತೇಕರು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದ ಸದಸ್ಯರಾಗಿದ್ದಾರೆ. ಪೊಲೀಸರು ಈ ಪ್ರಕರಣವನ್ನು ಗುಟ್ಟಾಗಿ ನಿಭಾಯಿಸಿದ ಬಗ್ಗೆ ಈ ಹಿಂದೆ ಅನೇಕ ಪ್ರಶ್ನೆಗಳು ಎದ್ದಿದ್ದವು. ಅರ್ಚನಾಳನ್ನು ಬಂಧಿಸಿ ಒಂದು ವಾರ ಕಳೆದರೂ ಆಕೆಯ ವಿಚಾರಣೆಯನ್ನು ಯಾಕೆ ನಡೆಸಲಿಲ್ಲ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಅರ್ಚನಾ ಮತ್ತು ಆಕೆಯ ಪತಿ ಜಗಬಂಧು ಚಂದ್ ಅವರು ಅನೇಕ ರಾಜಕಾರಣಿಗಳು ಮತ್ತು ಪ್ರಭಾವಿ ವ್ಯಕ್ತಿಗಳೊಂದಿಗೆ ಇರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಕೆಲವು ರಾಜಕಾರಣಿಗಳು ಅರ್ಚನಾ ಪರಿಚಯವನ್ನು ಒಪ್ಪಿಕೊಂಡರೆ, ಇನ್ನು ಕೆಲವರು ಆಕೆಯೊಂದಿಗಿನ ಸಂಬಂಧವನ್ನು ನಿರಾಕರಿಸಿದ್ದಾರೆ. ಅಲ್ಲದೆ, ಪೊಲೀಸರು ಸಹ ಎಲ್ಲಾ…
ಪಣಜಿ: ನಿರಂತರವಾಗಿ ಸುರಿದ ಭಾರೀ ಮಳೆಗೆ ದಕ್ಷಿಣ ಗೋವಾದ ಪ್ರಸಿದ್ಧ ದೂಧ್ ಸಾಗರ್ ಜಲಪಾತದಲ್ಲಿ ಕೇಬಲ್ ಸೇತುವೆ ಕುಸಿದು ಬಿದ್ದಿದ್ದು, 40ಕ್ಕೂ ಹೆಚ್ಚು ಪ್ರವಾಸಿಗರನ್ನ ರಕ್ಷಿಸಲಾಗಿದೆ. ಶುಕ್ರವಾರ ಸಂಜೆ ಘಟನೆ ಈ ನಡೆದಿದ್ದು, ಗೋವಾ – ಕರ್ನಾಟಕ ಗಡಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಪಾತದ ನೀರಿನ ಮಟ್ಟ ಏರಿಕೆಯಾಗಿದೆ. ಪರಿಣಾಮ ಸೇತುವೆ ಕುಸಿದಿದ್ದು, 40ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಅಪಾಯದಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಕೂಡಲೇ ದೃಷ್ಟಿ ಲೈಫ್ ಸೇವರ್ಸ್ ಸಹಾಯದಿಂದ ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ದೃಷ್ಟಿ ಲೈಫ್ ಸೇವರ್ಸ್‌ನ ಪಿಆರ್ಒ ಮಾಹಿತಿ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy