Subscribe to Updates
Get the latest creative news from FooBar about art, design and business.
- ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ
- ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ
- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!
- ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ
- ಮೇಲನಹಳ್ಳಿ ತ್ಯಾಜ್ಯ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ತಹಶೀಲ್ದಾರ್ ಭೇಟಿ
- ಕರ್ನಾಟಕ ಒಲಂಪಿಕ್ 2025: ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; ಪದಕ ಗೆದ್ದರೆ ಕೋಟಿ ಕೋಟಿ ನಗದು ಸಂಭಾವನೆ
- ಪಾವಗಡ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನ: 17 ಸಾವಿರ ಮಕ್ಕಳಿಗೆ ಲಸಿಕೆ ಗುರಿ
- ಸಂತಪುರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
Author: admin
ತಿಪಟೂರು: ನಗರದ ಗುರುಕುಲ್ ನಂದ್ ಆಶ್ರಮದಲ್ಲಿ ಮೇ 20 ರಂದು ಜಿಲ್ಲಾ ಮಟ್ಟದ ಮೂರನೇ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಹಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಸಮ್ಮೇಳನಾಧ್ಯಕ್ಷೆ ಡಾ.ಲೀಲಾ ಸಂಪಿಗೆ ಅವರನ್ನು ತಿಪಟೂರು ಗ್ರಾಮದೇವತೆ ಕೆಂಪಮ್ಮ ದೇವಾಲಯದಿಂದ, ನಗರದ ಪ್ರಮುಖ ರಸ್ತೆಯಲ್ಲಿ ನಂದಿದ್ವಜ ಮಂಗಳವಾದ್ಯ ಜಾನಪದ ಕಲಾ ತಂಡದೊಂದಿಗೆ ಮೆರವಣಿಗೆ ಮೂಲಕ ಮಹಿಳಾ ಸಾಹಿತ್ಯ ಸಮ್ಮೇಳನ ವೇದಿಕೆಗೆ ತರಲಾಗುವುದು. ಬಳಿಕ ನಾಡಿನ ಹಿರಿಯ ಸಾಹಿತಿ ನಾಡೋಜ ಕಮಲ ಹಂಪನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ಕೇಂದ್ರ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಕಲ್ಪ ಜೋತಿ ಸಣ್ಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿಸುಧಾ ನರಸಿಂಹರಾಜು, ಕಿರುತೆರೆ ನಟಿ ಸುನಿತಾ ರಾವ್ ವೈ .ವಿ., ನಾರಾಯಣಸ್ವಾಮಿ, ಎಂಎಲ್ಸಿ ಎಂ ಚಿದಾನಂದಗೌಡ ಭಾಗವಹಿಸಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಸಾಹಿತ್ಯ ಸಮಾಜಸೇವೆ ಶಿಕ್ಷಣ ಕನ್ನಡ ಸೇವೆ…
ಎರಡು ವರ್ಷದ ನಂತರ ಪೂರ್ಣ ಪ್ರಮಾಣದ ಶಾಲೆ ಪ್ರಾರಂಭವಾಗುತ್ತಿದ್ದು, ಶಿಕ್ಷಣ ಇಲಾಖೆ ವಿನೂತನವಾಗಿ ಕಲಿಕಾ ಚೇತರಿಕೆ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಎಂಪ್ರೆಸ್ ಶಾಲೆಯಲ್ಲಿ ನಡೆದ ಕಲಿಕಾ ಚೇತರಿಕೆ ಮತ್ತು ಶಾಲಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದ ಮಕ್ಕಳು ಸ್ಪರ್ಧಾತ್ಮಕವಾಗಿರುವ ಈ ಕಾಲದಲ್ಲಿ ಮೂಲಭೂತ ಶಿಕ್ಷಣದಿಂದ ವಂಚಿತವಾಗಬಾರದು, ಎರಡು ವರ್ಷದಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ, ಇಂತಹ ಮಕ್ಕಳಿಗೆ ವಿಶೇಷ ಪಠ್ಯ ಕ್ರಮದ ಮೂಲಕ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ಕಲಿಕಾ ಚೇತರಿಕೆ ಉದ್ದೇಶವಾಗಿದೆ ಎಂದರು. ನಮ್ಮ ರಾಜ್ಯದ ಭವಿಷ್ಯಕ್ಕೆ ಅಡಿಪಾಯ ಕಲಿಕಾಚೇತರಿಕೆಯಾಗಿದ್ದು, ಶಿಕ್ಷಣಕ್ಕೆ ಅನುದಾನ ನೀಡಿದರೆ ಸಾಲದು, ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಧ್ಯೇಯ ಹೊಂದಲಾಗಿದೆ, ಶಿಕ್ಷಕರ ನೇಮಕ ಮತ್ತು ಕೊಠಡಿ ನಿರ್ಮಾಣದಿಂದ ಎಲ್ಲವು ಆಗುವುದಿಲ್ಲ, ಜ್ಞಾನದ ಶತಮಾನದಲ್ಲಿ ಶಿಕ್ಷಣಕ್ಕೆ ಒತ್ತು ನೀಡಬೇಕಿರುವುದು ಸರ್ಕಾರದ ಬದ್ಧತೆಯಾಗಬೇಕಿದೆ ಎಂದರು. 21ನೇ ಶತಮಾನದಲ್ಲಿ ಜ್ಞಾನಕ್ಕೆ ಬೆಲೆ ಇದೆ, ಜ್ಞಾನ ಇದ್ದವನೇ ಜಗತ್ತು ಆಳುತ್ತಾರೆ, ಪ್ರಪಂಚದಲ್ಲಿ ಇಂದು ಬೆಂಗಳೂರು…
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೇ 28ರಂದು ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಹಿರಿಯ ನಿರ್ಮಾಪಕ, ಹೋರಾಟಗಾರ ಸಾ.ರಾ.ಗೋವಿಂದು ಅವರು ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಸಾ.ರಾ.ಗೋವಿಂದು ಅಧ್ಯಕ್ಷ ಸ್ಥಾನಕ್ಕೆ ಸ್ರ್ಪಧಿಸಿ ನಾಮಪತ್ರ ಸಲ್ಲಿಸಿದ್ದರೆ, ಅವರ ತಂಡದಲ್ಲಿರುವ ಚಿತ್ರಲೋಕ ವೀರೇಶ್ ನಿರ್ಮಾಪಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಕರಿಸುಬ್ಬು (ವಿ.ಸುಬ್ರಮಣಿ)ನಿರ್ಮಾಪಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ. ವಿತರಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಪಿ.ಎಸ್.ಜ್ಞಾನೇಶ್ವರ ಐತಾಳ್, ಪ್ರದರ್ಶಕರ ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಪಿ.ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಕೆ.ಸಿ.ಎನ್. ಕುಮಾರ್ (ಎಂ.ಎನ್.ಕುಮಾರ್) ವಿತರಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ, ಪ್ರದರ್ಶಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಎಲï.ಸಿ.ಕುಶಾಲ್ ಹಾಗೂ ಗೌರವ ಖಜಾÁಂಚಿ ಸ್ಥಾನಕ್ಕೆ ಬಿ.ಕೆ.ಜಯಸಿಂಹ ಮುಸರಿ ನಾಮಪತ್ರ ಸಲ್ಲಿಸಿದ್ದಾರೆ. ಮೇ 28ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಭಾರತ್ ಜೋಡೋ ಹೆಸರಿನಲ್ಲಿ ಕಾಂಗ್ರೆಸ್ ದೇಶದ ಚುನಾವಣಾ ವ್ಯವಸ್ಥೆಯನ್ನು ಗತಕಾಲಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಗೆದ್ದಾಗ ಇವಿಎಂ ಬಗ್ಗೆ ಮೌನ ವಹಿಸುವ ಕಾಂಗ್ರೆಸ್ ಪಕ್ಷ, ಸೋತಾಗ ಮಾತ್ರ ತನ್ನ ಕಳಪೆ ಪ್ರದರ್ಶನವನ್ನು ಇವಿಎಂ ಯಂತ್ರದ ಮೇಲೆ ಕಟ್ಟುತ್ತಾರೆ. ಮತಯಂತ್ರವನ್ನು ದೂಷಿಸಿ ಪಕ್ಷ ಪುನಶ್ಚೇತನಗೊಳಿಸಲು ಸಾಧ್ಯವೇ ಎಂದು ಬಿಜೆಪಿ ಪ್ರಶ್ನಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಬಿತ್ತಿದ್ದೇ ಬೆಳೆಯುತ್ತದೆ! ಅಧಿಕಾರದ ಅಮಲಿನಲ್ಲಿ, ಕುಟುಂಬವಾದದ ಭದ್ರ ಕೋಟೆಯಲ್ಲಿ ಕುಳಿತ ಕಾಂಗ್ರೆಸ್ ನಾಯಕರು ಜನರಿಂದ ಬಹುದೂರ ಸಾಗಿದ್ದರು. ಕಾಂಗ್ರೆಸ್ ಜನಸಾಮಾನ್ಯರಿಂದ ದೂರವಾಗಿದೆ ಎಂಬ ಸತ್ಯ ಒಪ್ಪಿಕೊಳ್ಳುವ ಸ್ಥಿತಿ ಈಗ ನಿರ್ಮಾಣವಾಗಿದೆ. ಕಾಂಗ್ರೆಸ್ ಹಾಗೂ ಜನಸಾಮಾನ್ಯರ ನಡುವೆ ದೊಡ್ಡ ಕಂದಕವಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವಾಗ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ದೇಶವನ್ನು ಧರ್ಮ, ಜಾತಿ, ಭಾಷೆ ಎಂದು ವಿಭಜಿಸಿತ್ತು. ಅದರ ಪರಿಣಾಮವಾಗಿ ದೇಶದ ಜನತೆ ಅಧಿಕಾರದಿಂದ ಕೆಳಗಿಳಿಸಿದರು, ಈಗ ಅಧಿಕಾರವಿಲ್ಲದ ಹತಾಶೆ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ. ಅದಕ್ಕಾಗಿ ಭಾರತ್ ಜೋಡೋ ಎಂದು ಹೊರಟಿದೆ ಎಂದು ವ್ಯಂಗ್ಯವಾಡಿದೆ. ಎಷ್ಟೊಂದು ನಾಟಕ ಮಾಡುವಿರಿ?:…
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಡೇಂಘಿ, ಮಲೇರಿಯಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡೆಂಗ್ಯು ಡೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ 331 ಡೆಂಘೀ ಪ್ರಕರಣಗಳು ವರದಿಯಾಗಿದ್ದು, ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಡೆಂಗ್ಯು ಡೇ ಆಚರಣೆ ಮಾಡಲಾಗುತ್ತಿದೆ. 98 ಸಾವಿರ ಮನೆಗಳ ಸಮೀಕ್ಷೆ ಮಾಡಲಾಗಿದೆ ಎಂದರು.ಟೊಮೊಟೊ ಜ್ವರ ಸರ್ವೆಲೆನ್ಸಿ ಸಕ್ರಿಯವಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಈ ವರೆಗೆ ಯಾವುದೇ ಪ್ರಕರಣ ಪತ್ತೆಯಾಗಿಲ್ಲ ಎಂದು ಹೇಳಿದರು. ಜೂನ್ ಅಂತ್ಯದ ವೇಳೆಗೆ ಸಮವಸ್ತ್ರ ವಿತರಣೆ: ಬಿಬಿಎಂಪಿ ವ್ಯಾಪ್ತಿಯ 163 ಶಾಲೆಗಳಿದ್ದು, 23 ಸಾವಿರ ವಿದ್ಯಾರ್ಥಿಗಳಿದ್ದಾರೆ. ಜೂನ್ ಅಂತ್ಯದ ವೇಳೆಗೆ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರವನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.ರಸ್ತೆಗುಂಡಿ ಸಮಸ್ಯೆ ನಿವಾರಣೆ: ಬೆಂಗಳೂರಿಗೆ ಮಾರಕವಾಗಿರುವ ರಸ್ತೆಗುಂಡಿ ಸಮಸ್ಯೆ ನಿವಾರಣೆಗೆ ಸಮಾರೋಪದಿಯಲ್ಲಿ ಕಾರ್ಯೋನ್ಮುಖವಾಗಿದ್ದು, ಈಗಾಗಲೆ 9500 ಗುಂಡಿಗಳ ಸಮೀಕ್ಷೆ ಮಾಡಲಾಗಿದೆ. ಮಳೆ ನಿಂತ ಕೂಡಲೇ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಲಿದೆ…
ಉತ್ತರ ಕೊರಿಯಾದಲ್ಲಿ ಕೋವಿಡ್ ಅಬ್ಬರಿಸುತ್ತಿದ್ದು, ಸೋಮವಾರ ಎಂಟು ಹೊಸ ಸಾವುಗಳು ಮತ್ತು 392,920 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಏಪ್ರಿಲ್ ಅಂತ್ಯದಿಂದ ಜ್ವರದ ತ್ವರಿತ ಹರಡುವಿಕೆಯಿಂದ ಒಟ್ಟು 1.2 ದಶಲಕ್ಷಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಪ್ರಸ್ತುತ 564,860 ಜನ ಸಕ್ರಿಯ ಪ್ರಕರಣಗಳಿಗೆ ಸಿಲುಕಿದ್ದಾರೆ. ಭಾನುವಾರ ಸಂಜೆ 6 ರಿಂದ 24 ಗಂಟೆಗಳಲ್ಲಿ ಎಂಟು ಹೊಸ ಸಾವುಗಳು ವರದಿಯಾಗಿವೆ. ಈ ಮೂಲಕ ಸಾವಿನ ಸಂಖ್ಯೆ 50 ದಾಟಿದೆ. ರಾಜಧಾನಿ ಪಯೋಂಗ್ಯಾಂಗ್ ನಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ನಾನಾ ರೀತಿಯ ಕಸರತ್ತು ನಡೆಸಲಾಗುತ್ತಿದೆ. ಔಷಧಿ ವಿತರಣೆಯಲ್ಲಿನ ವಿಳಂಬಕ್ಕಾಗಿ ನಾಯಕ ಕಿಮ್ ಜಾಂಗ್ ಉನ್ ಅಧಿಕಾರಿಗಳನ್ನು ದಂಡಿಸಿದ್ದಾರೆ. ಅಮೆರಿಕಾ ಬೆಂಬಲಿತ ಲಸಿಕೆ ಪಡೆಯದೆ 26 ದಶಲಕ್ಷ ಜನಸಂಖ್ಯೆ ಹೊಂದಿರುವ ಉತ್ತರ ಕೋರಿಯಾ ಹಿಂದಡಿ ಇಟ್ಟಿತ್ತು. ದೇಶದಲ್ಲಿ ಆರೋಗ್ಯ ಸೌಲಭ್ಯಗಳು ದುರ್ಬಲವಾಗಿರುವುದರಿಂದ ಕೋವಿಡ್ ಸಂಕಷ್ಟ ಗಂಭೀರ ಪರಿಣಾಮ ಬೀರುವ ಆತಂಕ ಸೃಷ್ಟಿಯಾಗಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ತುಮಕೂರು: ವಿದ್ಯುತ್ ಖಾಸಗೀಕರಣ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನೂರಾರು ರೈತರು. ಟೌನ್ ಹಾಲ್ ವೃತ್ತದಿಂದ ಬೆಸ್ಕಾಂ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಪಂಪ್ ಸೆಟ್ ಗಳಿಗೆ ನಿರಂತರ ವಿದ್ಯುತ್ ಹರಿಸದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಖಾಸಗೀಕರಣದಿಂದ ವಿದ್ಯುತ್ ಗುತ್ತಿಗೆದಾರರು ಅತಂತ್ರಕ್ಕೆ ಒಳಗಾಗುವ ಭೀತಿ ಸೃಷ್ಟಿಯಾಗಿದೆ. ಅನುಮತಿ ಪಡೆದ ಕರ್ನಾಟಕ ವಿದ್ಯುತ್ ಗುತ್ತಿಗೆದಾರರ ಸಂಘ ಪ್ರತಿಭಟನೆಯಲ್ಲಿ ಭಾಗಿಯಾಗಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: ಫ್ಯಾಟ್ ಸರ್ಜರಿಯ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಅವರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ನಡೆದಿದೆ. ಮಾಹಿತಿಗಳ ಪ್ರಕಾರ, ಶ್ವಾಸಕೋಶದಲ್ಲಿ ನೀರಿನಾಂಶ ಸೇರಿಕೊಂಡು ಅವರು ಸಾವನ್ನಪ್ಪಿದ್ದಾರೆನ್ನಲಾಗುತ್ತಿದೆ. ಇನ್ನೂ ವೈದ್ಯರ ನಿರ್ಲಕ್ಷ್ಯದಿಂದ ಮಗಳು ಸಾವನ್ನಪ್ಪಿರುವುದಾಗಿ ಚೇತನಾ ತಾಯಿ ಆರೋಪಿಸಿದ್ದಾರೆ. ಪೋಷಕರ ಒಪ್ಪಿಗೆ ಇಲ್ಲದೆ ಸರ್ಜರಿ ಮಾಡಿದ್ದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಘಟನೆಯು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲವಾರು ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಚೇತನ ರಾಜ್ ಅಭಿನಯಿಸಿದ್ದಾರೆ. . ‘ಗೀತಾ’, ‘ದೊರೆಸಾನಿ’ ಧಾರಾವಾಹಿ ಹಾಗೂ ಹಲವು ಚಿತ್ರಗಳಲ್ಲಿ ಚೇತನಾ ರಾಜ್ ಅಭಿನಯಿಸಿದ್ದಾರೆ. ವರದಿ: ಮುರುಳಿಧರನ್ ಆರ್ ಹಿರಿಯೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತಿಪಟೂರು: ಎದುರಿನಿಂದ ಬಂದ ಲಾರಿ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಗೂಡ್ಸ್ ಲಾರಿಯೊಂದು ಮಗುಚಿ ಬಿದ್ದ ಘಟನೆ ತಾಲೂಕಿನ ಬೆಣ್ಣೆ ನಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ನಡೆದಿದೆ. ತಾಲೂಕಿನ ಬೆಣ್ಣೆ ನಳ್ಳಿ ಗೇಟ್ ನಿನ್ನೆ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗುವ ಸಾಧ್ಯತೆಗಳಿತ್ತು. ಅಪಘಾತವನ್ನು ತಪ್ಪಿಸುವ ಭರದಲ್ಲಿ ಗೂಡ್ಸ್ ಲಾರಿ ಚಾಲಕ ರಸ್ತೆಯ ಬದಿಗೆ ಲಾರಿಯನ್ನು ತಿರುಗಿಸಿದ್ದು, ಈ ವೇಳೆ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಮಗುಚಿ ಬಿದ್ದಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ವಿದ್ಯುತ್ ಕಂಬ ಮುರಿದು ಗೂಡ್ಸ್ ಲಾರಿ ಮೇಲೆ ಬಿದ್ದಿದ್ದು, ಪರಿಣಾಮವಾಗಿ ಲಾರಿ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಲಾರಿ ಚಾಲಕನಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ವರದಿ: ಮಂಜು ಗುರುಗದಹಳ್ಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗಳಿಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಬಿರುಸಾಗಿದ್ದು, ಬಿಜೆಪಿ ಈಗಾಗಲೇ ಈ ಚುನಾವಣೆಗೆ ಸಂಭಾವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿಕೊಟ್ಟಿದೆ. ಕಾಂಗ್ರೆಸ್‌ನಲ್ಲೂ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆದಿದ್ದು, ರಾಜ್ಯಸಭೆಗೆ ರಾಜ್ಯದಿಂದ ಗಾಂಧಿ ವಂಶದ ಕುಡಿ ಪ್ರಿಯಾಂಕಗಾಂಧಿ ಅವರನ್ನು ಆಯ್ಕೆ ಮಾಡಲು ರಾಜ್ಯ ಕಾಂಗ್ರೆಸ್ ನಾಯಕರು ಹೆಚ್ಚಿನ ಮುತುವರ್ಜಿ ತೋರಿದ್ದಾರೆ. ಪ್ರಿಯಾಂಕ ಗಾಂಧಿ ಅವರನ್ನು ರಾಜ್ಯದಿಂದ ರಾಜ್ಯಸಭೆಗೆ ಕಳುಹಿಸಲು ರಾಜ್ಯ ಕಾಂಗ್ರೆಸ್ ನಾಯಕರು ಉತ್ಸುಕರಾಗಿದ್ದು, ರಾಜ್ಯದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಪ್ರಿಯಾಂಕಗಾಂಧಿ ಅವರ ಮನವೊಲಿಕೆಗೂ ರಾಜ್ಯ ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸಿದ್ದಾರೆ. ಪ್ರಿಯಾಂಕಗಾಂಧಿ ಅವರನ್ನು ರಾಜ್ಯದಿಂದ ರಾಜ್ಯಸಭೆಗೆ ಕಳುಹಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಸಕ್ತಿ ತೋರಿದ್ದು, ರಾಜಸ್ಥಾನದ ಉದಯಪುರದಲ್ಲಿ ನಡೆದ ಕಾಂಗ್ರೆಸ್‌ನ ಚಿಂತನ-ಮಂಥನ ಸಮಾವೇಶದ ಸಂದರ್ಭದಲ್ಲಿ ಪ್ರಿಯಾಂಕ ಗಾಂಧಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಬಗ್ಗೆ ರಾಹುಲ್‌ಗಾಂಧಿ ಅವರ ಜತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ರಾಜ್ಯದ ಕೆಲ ಕಾಂಗ್ರೆಸ್ ನಾಯಕರ ಜತೆ ರಾಹುಲ್‌ಗಾಂಧಿ ಅವರನ್ನು ಭೇಟಿ…