Subscribe to Updates
Get the latest creative news from FooBar about art, design and business.
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
Author: admin
ಬೆಂಗಳೂರು : ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಪೌರ ಕಾರ್ಮಿಕರ ಜೊತೆ ಉಪಹಾರ ಸೇವಿಸಿ ನಂತರ ಮಾತನಾಡಿದ ಸಿಎಂ, ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ನೇಮಕ ಮಾಡಲಾಗುತ್ತದೆ. ನಂತರ ಇನ್ನುಳಿದ ಕಾರ್ಮಿಕ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಹೇಳಿದರು. ಮುಖ್ಯಮಂತ್ರಿಯಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ, ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ, ಶೀಘ್ರ ಪೌರ ಕಾರ್ಮಿಕರ ಖಾಯಂ ಬಗ್ಗೆ ಕ್ರಮ ಕೈಗೊಳ್ಳಲಿದ್ದೇನೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಕಳೆದೆರಡು ದಿನದಿಂದ ಭಾರೀ ಚರ್ಚೆಯಾಗುತ್ತಿರುವ ಪೇ ಸಿಎಂನ್ನು ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ಪೇ ಸಿಎಂ ಪೇ- ಟು ಚೀಫ್ ಮಿನಿಸ್ಟರ್ ರಿಲೀಫ್ ಫಂಡ್ ಎಂಬ ಡಿಜಿಟಲ್ ಆಯಪ್ ಅಭಿವೃದ್ಧಿಪಡಿಸಿ ಈ ಮೂಲಕ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ. ಈ ಮೂಲಕ ಸರ್ಕಾರದ ವಿರುದ್ಧದ ಅಭಿಯಾನವನ್ನು ರಾಜ್ಯ ಸರ್ಕಾರ ಪಾಸಿಟಿವ್ ಆಗಿ ತೆಗೆದುಕೊಳ್ಳಲಿದೆ ಎನ್ನಲಾಗಿದೆ. ಈ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು , ಸಂಘ ಸಂಸ್ಥೆಗಳು ನೆರವು ನೀಡಲು ಸಹಾಯವಾಗುವಂತೆ ಮಾಡಬಹುದು ಎಂದು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತೀದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಆ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಈಗಾಗಲೇ ಎರಡು ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಿದೆ. (Vidya First Grade College & Sacred Heart First Grade College). ಪ್ರಸ್ತುತ ತುಮಕೂರು ಜಿಲ್ಲೆಯ ನಗರ ಮತ್ತು ಪ್ರತಿ ತಾಲ್ಲೂಕು ಕೇಂದ್ರಗಳಲ್ಲೂ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು (ಅಧ್ಯಯನ ಕೇಂದ್ರಗಳನ್ನು) ತಾಲ್ಲೂಕಿನ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿಯ ಅಧಿಕೃತ ವೆಬ್‍ಸೈಟ್ www.ksoumysuru.ac.inನಲ್ಲಿ ಅನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಭರ್ತಿ ಮಾಡಿದ ಅರ್ಜಿಯನ್ನು ಡೀನ್ (ಅಧ್ಯಯನ ಕೇಂದ್ರ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತಗಂಗೋತ್ರಿ, ಮೈಸೂರು-06 ಇಲ್ಲಿಗೆ ಸಲ್ಲಿಸುವುದು. ಮುಂದುವರೆದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ. ಮುಕ್ತ ವಿವಿಗೆ ಪ್ರವೇಶಾತಿ ಪೆಡೆಯುವ ವಿದ್ಯಾರ್ಥಿಗಳು ಪ್ರವೇಶಾತಿ ಅರ್ಜಿಗಳನ್ನು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಸುವರ್ಣಮುಖಿ ನದಿಗೆ ನಿರ್ಮಿಸಿದ ಸೇತುವೆ ಕಳೆದ ರಾತ್ರಿ ಕುಸಿದಿದೆ. ಪರಿಣಾಮವಾಗಿ ಮ್ಯಾದನಹೊಳೆ – ಸಮುದ್ರದಹಳ್ಳಿ ನಡುವಿನ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಸುವರ್ಣಮುಖಿ ನದಿಗೆ 1979-80ರಲ್ಲಿ ಈ ಸೇತುವೆ ನಿರ್ಮಿಸಲಾಗಿತ್ತು. 60 ಮೀಟರ್ ಉದ್ದದ ಸೇತುವೆ ಕುಸಿದ ಪರಿಣಾಮ ಕೋಡಿಹಳ್ಳಿ, ಇಕ್ಕನೂರು ಕುರುಬರಹಳ್ಳಿ ಭಾಗದ ಜನರು ಸಮುದ್ರದಹಳ್ಳಿ ಸಂಪರ್ಕಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆರನಕಟ್ಟೆ ಪ್ರೌಢಶಾಲೆ ಮತ್ತು ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯವಾಗದೇ ಮನೆಯಲ್ಲಿಯೇ ಉಳಿದುಕೊಳ್ಳುವಂತಾಗಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಸುವರ್ಣಮುಖಿ ನದಿ ಮೈದುಂಬಿ ಹರಿದಿತ್ತು. ಸೇತುವೆ ಮುಳುಗುವಷ್ಟು ನೀರು ಹರಿದಿದ್ದು, ಕೆಲ ದಿನಗಳ ಹಿಂದೆಯಷ್ಟೇ ಪ್ರವಾಹ ಇಳಿದಿತ್ತು. ನದಿಯಲ್ಲಿ ಈಗ ಅಲ್ಪ ಪ್ರಮಾಣದ ನೀರು ಹರಿಯುತ್ತಿದೆ. ನೀರಿನ ರಭಸಕ್ಕೆ ಶಿಥಿಲಗೊಂಡಿದ್ದ ಸೇತುವೆ ಕುಸಿದು ಬಿದ್ದಿದೆ ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಿರಿಯೂರು ತಾಲ್ಲೂಕಿನ ತಾಲ್ಲೂಕು ತಹಶೀಲ್ದಾರ್ ಪ್ರಶಾಂತ್ ಕೆ. ಪಾಟೀಲ, ಸ್ಥಳಕ್ಕೆ ಭೇಟಿ ನೀಡಿ…
ಬೆಳಗಾವಿ: ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಬೆಂಗಳೂರಿನಲ್ಲಿ ಇಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ ಅವರನ್ನು ಬೇಟಿಯಾಗಿ ಭಿಮ್ಸ್ ಆಸ್ಪತ್ರೆಯ ಆವರಣದಲ್ಲಿ ನರ್ಸಿಂಗ್ ಶಾಲೆ, ವಸತಿಗೃಹ ಹಾಗೂ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲೆಯ ಅನೇಕ ಕಡೆಗಳಿಂದ ಮತ್ತ ಹೊರ ರಾಜ್ಯಗಳಾದ ಗೋವಾ ಮತ್ತು ಮಹರಾಷ್ಟ್ರಗಳಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳು ಬರುವುದರಿಂದ ಹಾಗೂ ಜನಸಂಖ್ಯೆಯು ಹೆಚ್ಚಾಗಿರುವುದರಿಂದ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭೀಮ್ಸ್ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಹಾಗೂ ಬಿಮ್ಸ ಆವರಣದಲ್ಲಿ ನರ್ಸಿಂಗ್ ಶಾಲೆ, ವಸತಿಗೃಹಗಳ ನಿರ್ಮಾಣಕ್ಕೆ ಅಗತ್ಯ ಅನುದಾನವನ್ನು ಮಂಜುರು ಮಾಡುವಂತೆ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾನ್ಯ ಸಚಿವರು ಶಾಸಕರ ಮನವಿಗೆ ಸಕಾರಾತ್ಮಕ ಸ್ಪಂದನೆಯನ್ನು ವ್ಯಕ್ತಪಡಿಸಿದ್ದು, ತ್ವರಿತವಾಗಿ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ…
ಬೆಂಗಳೂರು : ರಾಜ್ಯದಲ್ಲಿ ಲಂಚ ತಿಂದರೆ ಅಪರಾಧ ಅಲ್ಲ. ಲಂಚ ತಿಂದಿದ್ದನ್ನು ಹೇಳಿದರೆ ಅಪರಾಧ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಕಾರ್ಯಕರ್ತರ ಬಂಧನ ಖಂಡಿಸಿ ಟ್ವೀಟ್ ಮಾಡಿದ್ದಾರೆ. ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ. ಎಷ್ಟು ಜನರನ್ನ ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲುಕಟ್ಟಿಸ್ತಿರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನ ಬಂಡೆದಿದ್ದಾರೆ, ಎಚ್ಚರ ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ನನ್ನ ಮತ್ತು ಡಿ.ಕೆ.ಶಿವಕುಮಾರ್ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ. ಅದರ ಬಗ್ಗೆ ಸಿಎಂ ಬೊಮ್ಮಾಯಿ ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ. ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರವಾಗಿದೆ ಎಂದು ಹೇಳಿದರು. ರಾಜಕೀಯ ವ್ಯವಸ್ಥೆಯಲ್ಲಿ ಆರೋಪ-ಪ್ರತ್ಯಾರೋಪ ಸಹಜ. ಇದನ್ನು ಕೀಳುಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತೆ. ಮುಖ್ಯಮಂತ್ರಿಗಳೇ ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿದ್ರಿ. ಯಾರೋ ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ ಎಂದು ಟ್ವಿಟರ್ನಲ್ಲಿ ಸಿಎಂ ವಿರುದ್ಧ ಸಿದ್ದರಾಮಯ್ಯ ಕಿಡಿ ಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪಕ್ಷದ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷರಾಗುವ ಯಾರೇ ಆಗಲಿ ಅವರು ಭಾರತದ ನಂಬಿಕೆ ವ್ಯವಸ್ಥೆ ಮತ್ತು ದೃಷ್ಟಿಕೋನವನ್ನು ಪ್ರತಿನಿಧಿಸುತ್ತಾರೆ ಎಂಬುದನ್ನು ನೆನಪಿನಲ್ಲಿಡಬೇಕು. ಕಾಂಗ್ರೆಸ್ ಅಧ್ಯಕ್ಷರು ಕೇವಲ ಸಾಂಸ್ಥಿಕ ಹುದ್ದೆಯಲ್ಲ, ಇದು ಸೈದ್ಧಾಂತಿಕ ಹುದ್ದೆ ಮತ್ತು ನಂಬಿಕೆಯ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಗಾಂಧಿಯೇತರ ಕಾಂಗ್ರೆಸ್ ಅಧ್ಯಕ್ಷರಿಗೆ 25 ವರ್ಷಗಳ ನಂತ್ರ ಸ್ಥಾನ ತೆರವುಗೊಳಿಸಿದರು. ಅವಿಶ್ವಾಸಿಗಳಿಗೆ, ಸೀತಾರಾಮ್ ಕೇಸರಿ ಅವರು ಗಾಂಧಿಯೇತರ ಕೊನೆಯ ಅಧ್ಯಕ್ಷರಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ನಿವೇಶನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ವೇಳೆ ಮಹಿಳೆ ಸಹಿತ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ತಾಲೂಕಿನ ಮಿಡಿಗೇಶಿ ಗ್ರಾಮದಲ್ಲಿ ನಡೆದಿದೆ. ರಾಮಾಂಜನೇಯ. (48) ಶಿಲ್ವಾ (36) ಹತ್ಯೆಗೀಡಾದವರಾಗಿದ್ದು, ಶ್ರೀಧರ್ ಗುಪ್ತ ಮತ್ತು ಸಹಚರರು ಕೃತ್ಯ ನಡೆಸಿದ ಆರೋಪಿಗಳಾಗಿದ್ದಾರೆ. ದೇವಸ್ಥಾನದ ಜಾಗಕ್ಕೆ ಸಂಬಂಧಿಸಿದ ತಕರಾರು ಹತ್ಯೆಯಲ್ಲಿ ಅಂತ್ಯಗೊಂಡಿದೆ ಎಂದು ಹೇಳಲಾಗಿದೆ. ಗಣಪತಿ ದೇವಸ್ಥಾನದ ಜಾಗದ ವಿಚಾರವಾಗಿ ಆರೋಪಿ ಶ್ರೀಧರ್ ಗುಪ್ತ ಹಾಗೂ ಹತ್ಯೆಗೀಡಾದ ರಾಮಾಂಜನೇಯ ಹಾಗೂ ಶಿಲ್ಪಾ ನಡುವೆ ನ್ಯಾಯಾಲಯದಲ್ಲಿ ಪ್ರಕರಣ ಇತ್ತು. ಈ ಪ್ರಕರಣದಲ್ಲಿ ರಾಮಾಂಜನೇಯ ಹಾಗೂ ಶಿಲ್ಪಾ ಅವರ ಪರವಾಗಿ ತೀರ್ಪು ಬಂದಿತ್ತು. ಇದೇ ದ್ವೇಷದಲ್ಲಿ ಹತ್ಯೆ ನಡೆದಿದೆ ಎನ್ನಲಾಗಿದೆ. ರಾಮಾಂಜನೇಯ, ಶಿಲ್ಪಾ, ಮತ್ತು ಮಲ್ಲಿಕಾರ್ಜುನ ಎಂಬವರು ರಸ್ತೆಯಲ್ಲಿ ಮಾತನಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಶ್ರೀಧರ್ ಗುಪ್ತ ಮತ್ತು ಸಹಚರರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಪರಿಣಾಮವಾಗಿ ಮೂವರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ರಾಮಾಂಜನೇಯ, ಶಿಲ್ಪಾ ಮೃತಪಟ್ಟರೆ, ಮಲ್ಲಿಕಾರ್ಜುನ ಅವರು ಗಂಭೀರ…
ಇಂದು ಬೆಂಗಳೂರು, ಮಂಗಳೂರು ಸೇರಿದಂತೆ ದೇಶದಾದ್ಯಂತ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಕಚೇರಿ ಮನೆ ಮೇಳೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಾಳಿ ನಡೆಸಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, PFI, SDPI ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೆ. ಸಂಘಟನೆಗಳನ್ನ ಬ್ಯಾನ್ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನ ಬಂಧಿಸಿದ ಪೊಲೀಸರಿಗೆ ಅಭಿನಂದನೆ. ಧರ್ಮ ನೋಡಿ ಪೊಲೀಸರು ಕಾರ್ಯಚರಣೆ ಮಾಡಲ್ಲ ಎಂದು ಶಿವಮೊಗ್ಗ ಪೊಲೀಸರಿಗೆ ಗೃಹಸಚಿವ ಅರಗ ಜ್ಞಾನೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ. ಮಾಹಿತಿ ಆಧಾರದ ಮೇಲೆ ಎನ್ ಐಎ ದಾಳಿ ಮಾಡಿದೆ. ಅದನ್ನ ತಡೆಯುತ್ತಾರೆ ಎಂದರೇ ಏನರ್ಥ..? ಇಂಥ ದುಷ್ಟ ಶಕ್ತಿಗಳಿಗೆ ಬೆಂಬಲ ಕೊಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಎನ್ ಐಎ ದಾಳಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಪಿಎಫ್ ಐ ಏನೇನು ಕೃತ್ಯ ಮಾಡುತ್ತಿದೆ ಎಂಬುದು ಗೊತ್ತಿದೆ. ಕಾಂಗ್ರೆಸ್ ಇಂತಹ…
ಬೆಂಗಳೂರು : ನಗರದ ವಿವಿಧೆಡೆ ಕಾಂಗ್ರೆಸ್ ಪೇಸಿಎಂ ಹೆಸರಿನ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಪೋಸ್ಟರ್ ಅಂಟಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಗಗನ್ ಯಾದವ್ ಮತ್ತು ಬಿ.ಆರ್.ನಾಯ್ಡು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಬಂಧಿತರು ಕೆಪಿಸಿಸಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದ್ದು, ಬೆಂಗಳೂರಿನ ಹಲವೆಡೆ ಪೋಸ್ಟರ್ ಅಂಟಿಸಿರೋದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy