Subscribe to Updates
Get the latest creative news from FooBar about art, design and business.
- ಎನ್ ಎಂಎಂಎಸ್ ಆ್ಯಪ್ ಅಪ್ ಡೇಟ್ ಕಿರಿಕಿರಿ: ಬೀದರ್ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
- ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
- ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
- ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
- ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
- ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
- ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
- ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
Author: admin
ಬೆಂಗಳೂರಿನ ನಗರದ ಮಲ್ಲಿಗೇನಹಳ್ಳಿ ಸಮೀಪದ ತುಂಗಾ ಮೇಲ್ದಂಡೆ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಕಟ್ಟಿಕೊಂಡಿರುವ ಮನೆಗಳನ್ನು ನೀರಾವರಿ ಇಲಾಖೆಯವರು ಪೊಲೀಸರ ನೆರವಿನೊಂದಿಗೆ ತೆರವುಗೊಳಿಸಿದರು. ಈ ವೇಳೆ ಪ್ರತಿಭಟನಾನಿರತ ನಿವಾಸಿಗಳು ಪ್ರತಿಭಟನೆ ನಡೆಸಿದರು ಕೆಲವರು ತುಂಗಾ ಮೇಲ್ದಂಡೆ ಮೇಲಿಂದ ಹಾರಲೂ ಸಹ ಪ್ರಯತ್ನ ಪಟ್ಟರು. ಆದರೆ ಅಧಿಕಾರಿಗಳು ಮಾತ್ರ ಕೆಲ ಮನೆಗಳನ್ನ ಒಡೆದು ಇನ್ನುಳಿದವರಿಗೆ ವಾರ್ನಿಂಗ್ ಮಾಡಿ ತೆರಳಿದರು. ಮಲ್ಲಿಗೇನಹಳ್ಳಿ ಸಮೀಪದ ಅಂಬೇಡ್ಕರ್ ಕಾಲೋನಿಯಲ್ಲಿ ನೀರಾವರಿ ಇಲಾಖೆಯ ತುಂಗಾ ಮೇಲ್ದಂಡೆ ಯೋಜನೆಯ ಬಫರ್ ಜೋನ್ ನಲ್ಲಿ ಸುಮಾರು 5 ಎಕರೆ 3 ಗುಂಟೆ ಜಾಗ ಒತ್ತುವರಿ ಆಗಿದ್ದೆ. ಹೈಕೋರ್ಟ್ ಇತ್ತೀಚೆಗೆ ಆದೇಶ ನೀಡಿ ನೀರಾವರಿ ಇಲಾಖೆಯ ಜಮೀನಿನ ಒತ್ತುವರಿ ತೆರವು ಮಾಡಬೇಕೆಂದು ಆದೇಶ ನೀಡಿತ್ತು. ಈ ಹಿನ್ನಲೆ ಸೋಮವಾರ ಮನೆ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಕಾರ್ಯಪ್ರವೃತ್ತರಾದರು. ನೀರಾವರಿ ಇಲಾಖೆಗೆ ಸೇರಿದ 5 ಎಕರೆ 3 ಗುಂಟೆ ಜಾಗದಲ್ಲಿ ಸುಮಾರು 200 ಮನೆಗಳನ್ನು ಹಕ್ಕಿಪಿಕ್ಕಿ, ಎಸ್ ಸಿ ಹಾಗೂ ಎಸ್ ಟಿ ಸಮುದಾಯದ ಜನಾಂಗದವರು…
ಮುಂಬೈ: ದೀಪಾವಳಿ ಹಬ್ಬಕ್ಕೂ ಮುನ್ನ ಖಾದ್ಯ ತೈಲ ಬೆಲೆಯಲ್ಲೂ ಹೆಚ್ಚಳವಾಗಿದ್ದು, ಮಾರುಕಟ್ಟೆ ಮೂಲಗಳ ಪ್ರಕಾರ ಕಳೆದ ವಾರದಲ್ಲಿ ತಾಳೆ ಎಣ್ಣೆ ಬೆಲೆ 10 ರಿಂದ 12 ರೂಪಾಯಿ, ಸೋಯಾಬಿನ್ ಆಯಿಲ್ ಬೆಲೆ 14 ರಿಂದ 16 ರೂಪಾಯಿ ಹಾಗೂ ಸೂರ್ಯಕಾಂತಿ ಎಣ್ಣೆ ಬೆಲೆ ಪ್ರತಿ ಲೀಟರ್ ಗೆ 18 ರಿಂದ 20 ರೂಪಾಯಿ ಚಿಲ್ಲರೆ ಮಾರಾಟದಲ್ಲಿ ಏರಿಕೆಯಾಗಿದೆ. ಕೆಲ ರಾಷ್ಟ್ರಗಳು ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವ ಘೋಷಣೆ ಮಾಡಿದ ಬಳಿಕ ಇದು ಕಚ್ಚಾ ತೈಲದ ಬೆಲೆ ಮೇಲೆ ಪರಿಣಾಮ ಬೀರಿದೆ. ಭಾರತವು ಶೇಕಡಾ 70ರಷ್ಟು ತೈಲವನ್ನು ಅಮದು ಮಾಡಿಕೊಳ್ಳುತ್ತಿದ್ದು, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವಾಗಿರುವುದು ಸಹ ಬೆಲೆ ಏರಿಕೆಗೆ ಮತ್ತೊಂದು ಪ್ರಮುಖ ಕಾರಣವಾಗಿದೆ. ಅಲ್ಲದೆ ರಷ್ಯಾ – ಉಕ್ರೇನ್ ಯುದ್ಧವೂ ಸೂರ್ಯಕಾಂತಿ ಎಣ್ಣೆಯ ಪೂರೈಕೆಗೆ ಅಡ್ಡಿಯಾಗಿದ್ದು, ಬೆಲೆಯೂ ಹೆಚ್ಚಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆಗಿರುವ ಈ ಬೆಲೆ ಏರಿಕೆ, ಜನಸಾಮಾನ್ಯರಿಗೆ ಸಂಕಷ್ಟವನ್ನು ತಂದೊಡ್ಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಸಂಜು ಭಂಢಾರಿ ಸೇರಿದಂತೆ 20 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಗೋಕಾಕ್ ನಗರದ ಜೆಎಂಎಫ್ ಸಿ ಎರಡನೇ ನ್ಯಾಯಾಲಯದ ನ್ಯಾಯಾಧೀಶ ಜಿ.ರಾಜೀವ್ ಅವರು ಈ ಆದೇಶ ನೀಡಿದ್ದಾರೆ. ಪರೀಕ್ಷಾರ್ಥಿಗಳು ಸೇರಿ ಅಕ್ರಮಕ್ಕೆ ಸಹಕರಿಸಿದ್ದ 20 ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು. ಗೋಕಾಕ್ ಜೆಎಸ್ ಎಸ್ ಪರೀಕ್ಷಾ ಕೇಂದ್ರದಲ್ಲಿ ಆಗಸ್ಟ್ 7 ರಂದು ಪರೀಕ್ಷೆ ವೇಳೆ ಅಕ್ರಮ ನಡೆದಿತ್ತು. ಸಿದ್ದಪ್ಪ ಮದಿಹಳ್ಳಿ ಎಂಬಾತ ಸ್ಮಾರ್ಟ್ ವಾಚ್ ಬಳಸಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ. ಸಿಸಿಟಿವಿ ಆಧರಿಸಿ ಪ್ರಕರಣ ಬೆಳಕಿಗೆ ಬಂದಿದ್ದು, ಆ. 10ರಂದು ಸಿದ್ದಪ್ಪ ಮದಿಹಳ್ಳಿಯನ್ನು ಬಂಧಿಸಿಲಾಗಿತ್ತು. ನಂತರ ಹಂತ ಹಂತವಾಗಿ 20 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ತಾಲ್ಲೂಕಿನ ಕೋರ ಹೋಬಳಿ ಬ್ರಹ್ಮಸಂದ್ರ ಕೆರೆ ಸುಮಾರು 22 ವರ್ಷಗಳ ನಂತರ ಕೋಡಿ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಶಾಸಕರಾದ ಪಿ.ಆರ್.ಸುಧಾಕರ್ ಲಾಲ್ ಅವರು ಕೆರೆಗೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಕಾಟೇನಹಳ್ಳಿ, ಹರಿಯಪ್ಪನಹಳ್ಳಿ, ಮಾಸ್ತಿಪಾಳ್ಯ, ಬ್ರಹ್ಮಸಂದ್ರ ಹಾಗೂ ಅಕ್ಕ ಪಕ್ಕದ ಗ್ರಾಮದ ನೂರಾರು ಜನರು ಮತ್ತು ಕೋರಾ ಹೋಬಳಿ ಜೆಡಿ ಎಸ್ ಮುಖಂಡರು ಹಾಗೂ ಮಹಿಳೆಯರು ಭಾಗವಹಿಸಿದ್ದರು. ಮುಖಂಡರಾದ ಶೇಖರಯ್ಯ, ಚಿದಾನಂದ, ರಾಜೇಗೌಡ, ದೀಪು, ಪ್ರಶಾಂತ ಕೆಸ್ತೂರು, ವಿರೂಪಾಕ್ಷಯ್ಯ, ಬಸವರಾಜು, ರುದ್ರೇಶ, ಪಾಲಯ್ಯ, ಸಿದ್ದರಾಜು ಚಿಕ್ಕೋನಹಳ್ಳಿ ಮೊದಲಾದವರು ಭಾಗವಹಿಸಿದ್ದರು. ವರದಿ: ದಾಸಾಲುಕುಂಟೆ ಸಿದ್ದರಾಜು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹಿರಿಯೂರು: ತಾಲ್ಲೂಕು ಪಂಚಾಯತಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮದಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭೂಮಿ ಪೂಜೆ ನೆರವೇರಿಸಿದರು. ಹಿರಿಯೂರು ತಾಲೂಕಿಗೆ ಸುಸಜ್ಜಿತವಾದ ನೂತನ ತಾಲೂಕು ಪಂಚಾಯಿತಿ ಕಟ್ಟಡವನ್ನು ಆದಿವಾಲ ಗ್ರಾಮದ ಮುರುಗನ್ ದೇವಸ್ಥಾನದ ಹತ್ತಿರ 3,52,00,000 ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಪೂರ್ಣಿಮಾ ಶ್ರೀನಿವಾಸ್, ನಿರ್ಮಾಣ ಹಂತದಲ್ಲಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಕುರಿತು ಪ್ರಸ್ತಾಪಿಸಿ, 25 ಕೋಟಿ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಸದ್ಯದಲ್ಲಿಯೇ ಕಾಮಗಾರಿ ಪೂರ್ಣಗೊಳ್ಳಲಿದೆ. ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದರು. ಹಿರಿಯೂರು ತಾಲ್ಲೂಕಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಪೋ ವ್ಯವಸ್ಥೆ ಬಗ್ಗೆಯೂ ಈಗಾಗಲೇ ಸಂಬಂಧ ಪಟ್ಟ ಸಚಿವರ ಬಳಿ ಹಾಗೂ ಸರ್ಕಾರದಲ್ಲಿ ಈಗಾಗಲೇ ಚರ್ಚಿಸಿದ್ದೇನೆ ಎಂದು ತಿಳಿಸಿದ ಅವರು, ಕಳೆದ ನಾಲ್ಕುವರೆ ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರವರ್ಗ 01ರ…
ಮಧುಗಿರಿ: ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗುತ್ತಿದ್ದು, ಪಟ್ಟಣದಾದ್ಯಂತ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರಿಂದ ದ್ವಿಚಕ್ರ ವಾಹನ ಸವಾರರಿಗೆ ಭಾರೀ ಅನಾನುಕೂಲವಾಗುತ್ತಿದೆ. ಸಂತೆ ಮೈದಾನದಲ್ಲಿ ನೀರು ನಿಲ್ಲುವುದರಿಂದ ಮಹಿಳೆಯರು ವ್ಯಾಪಾರದ ವೇಳೆ ಜಾರಿ ಬಿದ್ದಿರುವುದು, ಬೀದಿದೀಪ ನಿರ್ವಹಣೆ ನಿರ್ಲಕ್ಷ್ಯ, ರಾಜೀವ್ ಗಾಂಧಿ ಕ್ರೀಡಾಂಗಣ ಕೆಸರುಗದ್ದೆಯಾಗಿರುವುದರಿಂದ ವಾಯುವಿಹಾರಿಗಳಿಗೆ ಮತ್ತು ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿದೆ ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ದೂರಿದೆ. ಈ ಸಂಬಂಧ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಅಕ್ಟೋಬರ್–21ರಂದು ”ಮಧುಗಿರಿ ಬಂದ್” ಕರೆ ನೀಡಲಾಗುತ್ತಿದೆಂದು ಸೋಮವಾರ ಪಟ್ಟಣದಲ್ಲಿ ಪದಾಧಿಕಾರಿಗಳು ದ್ವಿಚಕ್ರವಾಹನದಲ್ಲಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಕಳೆದ ಹದಿನೈದು ದಿನಗಳಿಂದ ದಸರಾ ರಜೆ ಇದ್ದ ಹಿನ್ನೆಲೆಯಿಂದಾಗಿ ಶಾಲಾ ಕಾಲೇಜುಗಳು ರಜೆ ಇದ್ದವು, ಸೋಮವಾರದಿಂದ ಶಾಲಾ ಕಾಲೇಜುಗಳು ಪುನರಾರಂಭಗೊಂಡಿದ್ದು ಮಕ್ಕಳನ್ನು ಪೋಷಕರು ಶಾಲೆಗೆ ಬಿಡಲು ದ್ವಿಚಕ್ರ ವಾಹನಗಳು ಮತ್ತು ಆಟೋಗಳ ಮೂಲಕ ಬರುತ್ತಾರೆ. ಆದರೆ ಮಧುಗಿರಿ ಪಟ್ಟಣದಾದ್ಯಂತ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರಿಂದ…
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಹೊಸದಾಗಿ 4 ಸಾವಿರ ಬಸ್ ಗಳನ್ನು ಖರೀದಿಸಲು ಮುಂದಾಗಿದೆ. ಇದೇ ವೇಳೆ ನಷ್ಟವನ್ನು ತಪ್ಪಿಸಲು ನಾಲ್ಕೂ ನಿಗಮಗಳನ್ನು ವಿಲೀನಗೊಳಿಸಲು ಸಜ್ಜಾಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಶಕಗಳಿಂದ ಸಾರಿಗೆ ಸಂಸ್ಥೆ ಅನುಭವಿಸುತ್ತಿರುವ ನಷ್ಟವನ್ನು ತಪ್ಪಿಸಲು ನಾಲ್ಕೂ ಸಾರಿಗೆ ನಿಗಮಗಳನ್ನು ವಿಲೀನಗೊಳಿಸಲು ಶ್ರೀನಿವಾಸಮೂರ್ತಿ ಸಮಿತಿ ಶಿಫಾರಸು ಮಾಡಿದೆ ಎಂದು ಹೇಳಿದರು. ನಾಲ್ಕು ನಿಗಮಗಳು ಅಸ್ತಿತ್ವದಲ್ಲಿರುವುದರಿಂದ ಆಡಳಿತಾತ್ಮಕ ಹೊರೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ನಿಗಮಗಳನ್ನು ವಿಲೀನಗೊಳಿಸಿ ಒಂದೇ ನಿಗಮ ಅಸ್ತಿತ್ವದಲ್ಲಿರುವಂತೆ ಮಾಡಿದರೆ ಸಾರಿಗೆ ಸಂಸ್ಥೆ ಅನುಭವಿಸುತ್ತಿರುವ ನಷ್ಟ ತಪ್ಪುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾಲ್ಕು ನಿಗಮಗಳಿರುವುದರಿಂದ ಎಲ್ಲ ನಿಗಮಗಳು ತಮ್ಮ ತಮ್ಮ ಮಟ್ಟದಲ್ಲೇ ನಿರ್ಧಾರ ಕೈಗೊಳ್ಳುತ್ತವೆ. ಹೀಗಾಗಿ ಬಹುತೇಕ ಸಂದರ್ಭಗಳಲ್ಲಿ ಬಸ್ಸುಗಳು ಕಡಿಮೆ ಪ್ರಯಾಣಿಕರೊಂದಿಗೆ ಸಂಚರಿಸುವಂತಾಗಿ ನಷ್ಟದ ಪ್ರಮಾಣ ಹೆಚ್ಚುತ್ತದೆ. ನಿಗಮಗಳು ವಿಲೀನವಾದಾಗ ಅಗತ್ಯಕ್ಕನುಗುಣವಾಗಿ ಬಸ್ ಸಂಚಾರಕ್ಕೆ ಅವಕಾಶ ನೀಡಬಹುದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಳಗಾವಿ: ಇಲ್ಲಿನ 3ನೇ ರೈಲ್ವೆ ಗೇಟ್ ಗೆ ನಿರ್ಮಿಸಿದ ಮೇಲ್ಸೇತುವೆಯಲ್ಲಿ ಗುಂಡಿಗಳು ಬಿದ್ದ ಪರಿಣಾಮ, ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ಮೇಲ್ಸೇತುವೆಯನ್ನು ಆರು ದಿನಗಳ ಹಿಂದಷ್ಟೇ ಜನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದೇ ಅಕ್ಟೋಬರ್ 12ರಂದು ಮೇಲ್ಸೇತುವೆಯನ್ನು ಉದ್ಘಾಟಿಸಲಾಗಿತ್ತು. ಆದರೆ, ಸೇತುವೆಯ ಮಧ್ಯದಲ್ಲಿ ಗುಂಡಿಗಳು ಬಿದ್ದಿವೆ. 35.46 ಕೋಟಿ ವೆಚ್ಚದ ಸೇತುವೆ ನಿರ್ಮಾಣಕ್ಕೆ ಮೂರು ವರ್ಷ ತೆಗೆದುಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜನ ಹಾಗೂ ವಾಹನ ಸಂಚಾರ ನಿಲ್ಲಿಸಲಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಅಭಯ ಪಾಟೀಲ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿದ್ದಾರೆ. ರೈಲ್ವೆ ಇಲಾಖೆ ಅಧಿಕಾರಿಗಳೂ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಗುತ್ತಿಗೆದಾರರ ಬಾಕಿಯನ್ನು ತಡೆಹಿಡಿಯಬೇಕು ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಾಕೋಲೆಟ್, ಕ್ಯಾಂಡಿ ತಿನ್ನಲು ಅಮ್ಮ ಬಿಡುತಿಲ್ಲ ಎಂದು ಮೂರು ವರ್ಷದ ಕಂದ ಅಮ್ಮನ ವಿರುದ್ಧ ಪೊಲೀಸರಿಗೆ ದೂರು ನೀಡಿದ ಮನಕುಲುಕುವ ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಂದೆಯ ಜೊತೆ ಪೊಲೀಸ್ ಠಾಣೆಗೆ ಆಗಮಿಸಿದ 3 ವರ್ಷದ ಮಗು, ಅಮ್ಮ ನನಗೆ ಚಾಕೋಲೆಟ್, ಕ್ಯಾಂಡಿ ತಿನ್ನಲು ಬಿಡುವುದಿಲ್ಲ. ನನ್ನ ಬಳಿ ಇರುವ ಚಾಕೋಲೇಟ್ ಮತ್ತು ಕ್ಯಾಂಡಿ ಕದಿಯುವ ಅಮ್ಮನನ್ನು ಜೈಲಿಗೆ ಹಾಕಿ ಎಂದು ದೂರು ಕೊಟ್ಟಿದ್ದಾನೆ. ಮಧ್ಯಪ್ರದೇಶದ ಭುರಾನ್ ಪುರ್ ಜಿಲ್ಲೆಯ ಡೆಧಾತಲೈ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಾಕೋಲೇಟ್ ಕೇಳಿದರೆ ಅಮ್ಮ ಹೊಡೆಯತ್ತಾರೆ. ಈ ಬಗ್ಗೆಯೂ ಗಮನಹರಿಸಿ ಎಂದು ಮಗು ದೂರು ಕೊಟ್ಟಿದ್ದನ್ನು ಮಹಿಳಾ ಪೊಲೀಸ್ ದೂರು ಸ್ವೀಕರಿಸಿದ್ದಾರೆ. ಮಗು ಸ್ನಾನ ಮಾಡುವಾಗ ಚಾಕೋಲೆಟ್ ನೀಡಲು ನಿರಾಕರಿಸಿದ್ದಾರೆ. ಈ ವೇಳೆ ಸ್ನಾನ ಮುಗಿಸಿ ಬಂದಾಗ ಮಗ ಚಾಕೋಲೇಟ್ ಕೇಳಿದಾಗ ಅಮ್ಮ ಮೆಲ್ಲಗೆ ಹೊಡೆದಿದ್ದಾಳೆ. ಇದರಿಂದ ಅಳಲು ಆರಂಭಿಸಿದ್ದು, ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುವಂತೆ ಪಟ್ಟು ಹಿಡಿದಿದ್ದರಿಂದ ಕರೆದುಕೊಂಡು ಬಂದೆ…
ಬೆಂಗಳೂರು: 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದ್ದು, ಜೊತೆಗೆ ಲಂಬಾಣಿ ತಾಂಡಾಗಳನ್ನೂ ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದ 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಗುರುತಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಜಮೀನು ವಿಚಾರದಲ್ಲಿ ಬಗರ್ ಹುಕುಂ ಸಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ, ಬರ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ಹಳ್ಳಿಗಳಲ್ಲಿ ಸ್ಮಶಾನ ಇಲ್ಲದಿದ್ದರೇ ಸರ್ಕಾರದ ಅಥವಾ ಖಾಸಗಿ ಜಾಗ ಗುರುತಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು. ಮಣ್ಣು ಸವಕಳಿಯಿಂದ ಹಾನಿಗೊಳಗಾದವರಿಗೂ ಪರಿಹಾರ ನೀಡಬೇಕು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy