Author: admin

ಪಾವಗಡ:  ವಿಶ್ವದಾದ್ಯಂತ ಸಮಾನತೆಯನ್ನು ಪ್ರತಿಪಾದಿಸಿದ ಬಸವಣ್ಣ ಅವರು ಸರ್ವ ಜನಾಂಗಗಳ ನಾಯಕರಾಗಿದ್ದರು ಎಂದು  ತಹಶೀಲ್ದಾರ್ ಡಿ.ಎನ್. ವರದರಾಜು ತಿಳಿಸಿದರು, ಬುಧವಾರ ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಜಗದ್ಗುರು ಬಸವಣ್ಣನವರ ಜಯಂತಿಯನ್ನು ಸರಳವಾಗಿ ಆಚರಿಸುವುದರ ಜೊತೆಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಪ್ರಪಂಚದಾದ್ಯಂತ ಸಮಾಜದ ಒಳಿತಿಗಾಗಿ ವಚನಗಳ ಮೂಲಕ ಸಮಾನತೆಯನ್ನು ತಿಳಿ ಹೇಳಿದ ಬಸವಣ್ಣನವರು ನಮ್ಮೆಲ್ಲರಿಗೂ ಆದರ್ಶವಾಗಿದ್ದರು. ಜೊತೆಗೆ ತಮ್ಮ ಅನುಯಾಯಿಗಳ ಮೂಲಕವೂ ಸಹ ಮನೆಮನೆಗಳಿಗೆ ತೆರಳಿ ಸಮಾನತೆಯ ಬಗ್ಗೆ ತಿಳಿ ಹೇಳುವ ಕೆಲಸ ಮಾಡಿದ್ದರು ಎಂದರು. ಜಗದ್ಗುರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ವೇಳೆ ಗ್ರೇಡ್ 2 ತಹಸೀಲ್ದಾರ್ ಚಂದ್ರಶೇಖರ್, ಆರ್ಐ ರಾಜಗೋಪಾಲ್, ಗ್ರಾಮ ಆಡಳಿತ ಅಧಿಕಾರಿಗಳಾದ ಈರಣ್ಣ ಗೋರ್ನಾಳ್, ರಾಜೇಶ್, ರವಿಕುಮಾರ್, ಸಿಬ್ಬಂದಿ ಪದ್ಮಾ, ಬಲರಾಂ,ಅಸ್ಲಾಂ, ಲಿಂಗಾಯತ ಸಮಾಜದ ಮುಖಂಡರಾದ ಕಾರ್ತಿಕ್ ರಾಜನ್, ಪ್ರೇಸ್ ನಾಗಭೂಷಣ್, ಶ್ರೇಯಸ್, ಹೆಚ್ ಕೃಷ್ಣಮೂರ್ತಿ, ವಕೀಲರಾದ ಆರ್ ಹನುಮಂತರಾಯ, ಎಂ.ಜಿ.ಮಂಜುನಾಥ್, ರೈತ ಸಂಘದ ಗೋಪಾಲ್ ಸೇರಿದಂತೆ ಕಚೇರಿಯ ಸಿಬ್ಬಂದಿ ಹಾಜರಿದ್ದರು.…

Read More

ತುಮಕೂರು: ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಯೋಜನೆಯಡಿ ಆಟೋ ಚಾಲಕರು ಹಾಗೂ ಇಶ್ರಮ್ ಯೋಜನೆಯಡಿ ವಿವಿಧ ವರ್ಗದ ಕಾರ್ಮಿಕರನ್ನು ನೋಂದಣಿ ಮಾಡುವ ಅಭಿಯಾನವನ್ನು ಮೇ 5ರಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಾಂಕೇತಿಕವಾಗಿ ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ. ಅಭಿಯಾನದಲ್ಲಿ ನೋಂದಾಯಿಸುವವರ ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಇ.ಪಿ.ಎಫ್. ಹಾಗೂ ಇ.ಎಸ್.ಐ ಸೌಲಭ್ಯ ಹೊಂದಿರಬಾರದು. ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತವೆ. ಚಾಲಕರು, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಲಾಯಿಸಲು ಊರ್ಜಿತ ಚಾಲನಾ ಪರವಾನಗಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಅರ್ಹರು ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಊರ್ಜಿತ ಚಾಲನಾ ಪರವಾನಗಿ, ಬ್ಯಾಂಕ್ ಪಾಸ್‌ ಪುಸ್ತಕದೊಂದಿಗೆ ಅಭಿಯಾನದಲ್ಲಿ ಭಾಗವಹಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿ/ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಿ…

Read More

ತುಮಕೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲಸೌಲಭ್ಯ ನೀಡಲು ಜಿಲ್ಲೆಯ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಂದ ಆನ್‌ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ CET/NEET ನಲ್ಲಿ ಆಯ್ಕೆಯಾಗುವ ವೈದ್ಯಕೀಯ (ಎಂ.ಬಿ.ಬಿ.ಎಸ್), ಬಿ.ಡಿ.ಎಸ್., ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಶ್, ಫಾರ್ಮಸಿ, ಕೃಷಿ ವಿಜ್ಞಾನ ಹಾಗೂ ಪಶುವೈದ್ಯಕೀಯ ಹಾಗೂ ಮತ್ತಿತರ ಕೋರ್ಸ್ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಹ ವಿದ್ಯಾರ್ಥಿಗಳು ಮೇ 23ರೊಳಗಾಗಿ ನಿಗಮದ ಅಧಿಕೃತ ವೆಬ್‌ಸೈಟ್ https://kmdconline.karnataka.gov.in  ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಹಾರ್ಡ್ಕಾಪಿ ಹಾಗೂ ವೆಬ್‌ ಸೈಟ್‌ ನಲ್ಲಿ ಅಪ್‌ ಲೋಡ್ ಮಾಡಿದ ಮೂಲ ದಾಖಲೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಮೇ 23ರೊಳಗೆ ಸಲ್ಲಿಸತಕದ್ದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನ ಆಜಾದ್ ಭವನ, ಇಂದಿರಾ ಕಾಲೇಜ್…

Read More

ತುಮಕೂರು:  ಬಸವ ಜಯಂತಿ ಪ್ರಯುಕ್ತ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿತ ದಿನವೆಂದು ಘೋಷಿಸಲ್ಪಟ್ಟಿದೆ ಎಂದು ಪಾಲಿಕೆ ಆರೋಗ್ಯಾಧಿಕಾರಿ ವೀರೇಶ್ ಕಲ್ಮಠ್ ತಿಳಿಸಿದ್ದಾರೆ. ಬಸವ ಜಯಂತಿ ನಿಮಿತ್ತ ಏಪ್ರಿಲ್ 29ರ ಸಂಜೆ 5 ಗಂಟೆಯಿಂದ ಏ.30ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಿತ ಪ್ರದೇಶ ವ್ಯಾಪ್ತಿಯಲ್ಲಿ ಕಸಾಯಿಖಾನೆ ಮುಚ್ಚತಕ್ಕದ್ದು ಹಾಗೂ ಮಾಂಸ ಮಾರಾಟ ಮಾಡುವುದು, ಸಂಗ್ರಹಣೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ನಿಷೇಧಿತ ಅವಧಿಯಲ್ಲಿ ಕಸಾಯಿ ಖಾನೆ ತೆರೆಯುವುದು ಹಾಗೂ ಮಾಂಸ ಮಾರಾಟ ಮಾಡುವುದು ಕಂಡ ಬಂದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಅವರು ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಸರಗೂರು:  ಭೀಮ್ ಜಯಂತಿ ಎಂದೂ ಕರೆಯಲ್ಪಡುವ ಅಂಬೇಡ್ಕರ್ ಜಯಂತಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತದೆ ಎಂದು ಹಾದನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹಾಗೂ ಗ್ರಾಮದ ಯಜಮಾನ ಹಾದನೂರು ಪ್ರಕಾಶ್ ತಿಳಿಸಿದರು. ತಾಲೂಕಿನ ಹಾದನೂರು ಗ್ರಾಮದಲ್ಲಿ ಸೋಮವಾರದಂದು ಅಂಬೇಡ್ಕರ್ ಅವರ 134 ನೇ ಜಯಂತಿ ಅಂಗವಾಗಿ ಗ್ರಾಮದಲ್ಲಿ ಭೀಮೋತ್ಸವ ಹಾಗೂ ಅಂಬೇಡ್ಕರ್ ಹಬ್ಬ ಆಚರಣೆ  ಕಾರ್ಯಕ್ರಮದಲ್ಲಿ  ಸಾಮೂಹಿಕ ವಿವಾಹ ನಡೆಯಿತು ಇದೇ ವೇಳೆ  ಅಂಬೇಡ್ಕರ್ ಬೆಳ್ಳಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿಶೇಷವಾಗಿ ಭಾರತದಾದ್ಯಂತ ದಲಿತ ಸಮುದಾಯಗಳಿಗೆ ಆಳವಾದ ಭಾವನಾತ್ಮಕ ಮತ್ತು ರಾಜಕೀಯ ಮಹತ್ವವನ್ನು ಹೊಂದಿದೆ. ಇದು ಜಾತಿ ಆಧಾರಿತ ಅಸಮಾನತೆಗಳ ವಿರುದ್ಧ ನಡೆಯುತ್ತಿರುವ ಹೋರಾಟದ ಜ್ಞಾಪನೆಯಾಗಿ ಮತ್ತು ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳಿಗೆ ಸ್ಫೂರ್ತಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್‌ ರವರು ಒಬ್ಬ ಆಧ್ಯಾತ್ಮಿಕ ನಾಯಕ. ಇವತ್ತು ಶೋಷಿತರು, ದಲಿತರು ಮುಖ್ಯ ವಾಹಿನಿಗೆ ಬರಲು ಅವರು ಕಾರಣಕರ್ತರು. ಅಂತಹವರ ಸ್ಮರಣೆ ಮಾಡುವುದು, ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ…

Read More

ಸರಗೂರು:  ಡಾ.ಬಿ.ಆರ್‌.ಅಂಬೇಡ್ಕರ್‌ ದೇಶದ ಬೌದ್ಧಿಕ ಜ್ಞಾನದ ಸಂಕೇತವಾಗಿದ್ದಾರೆ ಎಂದು ಹಾದನೂರು ಗ್ರಾಮದ  ಯಜಮಾನ ರಾಜೇಶ್ ಅಭಿಪ್ರಾಯಪಟ್ಟರು. ತಾಲೂಕಿನ ಹಾದನೂರು ಗ್ರಾಮದಲ್ಲಿ ಸೋಮವಾರ ದಂದು ನೂತನ ಜ್ಞಾನ ಸೂರ್ಯ ಯುವಕರ ಬಳಗ ಸಂಘವನ್ನು ಗ್ರಾಮದ ಹಿರಿಯ ಮುಖಂಡರು ಹಾಗೂ ಗ್ರಾಪಂ ಸದಸ್ಯರು ಅಂಬೇಡ್ಕರ್ ಪೋಟೋ ಪುಷ್ಪಾರ್ಚನೆ ಸಲ್ಲಿಸಿ ಸಂಘದ ನಾಮಕರಣ ಮಾಡಿ ಮಾತನಾಡಿದರು. ಅಂಬೇಡ್ಕರ್‌ ಅವರನ್ನು ಜಗತ್ತೇ ವಿಶ್ವದ ಜ್ಞಾನದ ಚಿಹ್ನೆಯಾಗಿ ಒಪ್ಪಿಕೊಂಡರೂ ಭಾರತ ಮಾತ್ರ ಜಾತಿ ಸಂಕೋಲೆಗಳಿಂದ ಬಂಧಿಸಿ ನೋಡುತ್ತಿರುವುದು ವಿಷಾದದ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು. ಅಂಬೇಡ್ಕರ್‌ ಅವರ ಜೀವನ ಮತ್ತು ಸಾಧನೆ ಕುರಿತಾದ ಧ್ವನಿ ಬೆಳಕು ಸಂಯೋಜನೆಯ ಭಾರತ ಭಾಗ್ಯವಿಧಾತ ಚಿತ್ರವು ನಮ್ಮ ದೇಶದ ಬಹು ಆಯಾಮಗಳ ಮೌಲಿಕ ವಿಷಯಗಳನ್ನು ಒಳಗೊಂಡಿದೆ’ ಎಂದು ಅಶಯ ವ್ಯಕ್ತಪಡಿಸಿದರು. ಗ್ರಾಮದ ಹಿರಿಯ ಮುಖಂಡ ಪುಟ್ಟಸ್ವಾಮಿ ಮಾತನಾಡಿ ಅಂಬೇಡ್ಕರ್‌ ಅವರು ಕೇವಲ ದೀನ ದಲಿತರ ಸ್ವತ್ತಲ್ಲ; ಸಮಗ್ರ ರಾಷ್ಟ್ರಾಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳು ಅಪಾರ’ ಎಂದರು. ಈ ಸಂದರ್ಭದಲ್ಲಿ  ಮುಖಂಡರು ಚಿಕ್ಕಸಿದ್ದಯ್ಯ, ಮಹದೇವ್,…

Read More

ತುಮಕೂರು: ಮೂವತ್ತು ವರ್ಷಗಳ ಸುದೀರ್ಘ ಕ್ಷೇತ್ರಕಾರ್ಯದ ಫಲವಾಗಿ ಹುಟ್ಟಿಕೊಂಡಿರುವ ‘ದೇವುಗಾನಿಕೆ’ ಕೃತಿಯಲ್ಲಿ ಹೆಣ್ಣು– ಗಂಡು ಇಬ್ಬರನ್ನೂ ಸಮಾನವಾಗಿ ಕಾಣಲಾಗಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ವಿಶ್ರಾಂತ ಕಾರ್ಯದರ್ಶಿ ಡಾ. ಅಗ್ರಹಾರ ಕೃಷ್ಣಮೂರ್ತಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಕುಮಾರವ್ಯಾಸ ಅಧ್ಯಯನ ಪೀಠದ ವತಿಯಿಂದ ಶುಕ್ರವಾರ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ.ಡಿ.ವಿ.ಜಿ. ಕನ್ನಡ ಅಧ್ಯಯನ ಕೇಂದ್ರದ ಸಹಪ್ರಾಧ್ಯಾಪಕ ಡಾ.ಪಿ.ಎಂ.ಗಂಗಾಧರಯ್ಯ ಅವರ ‘ದೇವುಗಾನಿಕೆ’ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೌಖಿಕ ಕಾವ್ಯಗಳು, ಕಥೆಗಳು, ನಮ್ಮ ಚರಿತ್ರೆಯನ್ನು ಇಂದಿಗೂ ಹಿಡಿದಿಟ್ಟುಕೊಂಡಿರುವ ಪರಿಯನ್ನು ದೇವುಗಾನಿಕೆ ಪರಿಚಯಿಸುತ್ತದೆ. ಅಂಚಿಗೆ ಸರಿದ ಅನೇಕ ಸಮುದಾಯಗಳ ಚರಿತ್ರೆಗಳನ್ನು ಹೊರ ತರುವುದರಲ್ಲಿ ಕೃತಿಕಾರರು ಮಾಡಿರುವ ಕಾರ್ಯ ಶ್ಲಾಘನೀಯ ಎಂದರು. ಕರ್ನಾಟಕದಲ್ಲಿ 30–35 ವರ್ಷಗಳ ಹಿಂದೆ ಜಾನಪದದ ಹೆಚ್ಚು ಚಟುವಟಿಕೆಗಳು ನಡೆಯುತ್ತಿದ್ದವು. ಇತ್ತೀಚಿಗೆ ಆಧುನೀಕರಣಗೊಂಡು ಎಲ್ಲವೂ ಮರೆಯಾಗುತ್ತಿದೆ. ಪ್ರಸ್ತುತ ಕೃತಿ ಇವನ್ನು ನೆನಪಿಸಿಕೊಳ್ಳುವಂತೆ ಮಾಡಿದೆ ಎಂದರು. ಈ ಕೃತಿಯಲ್ಲಿ ಸ್ತ್ರೀ ದೇವತೆಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಲಾಗಿದೆ. ಒಟ್ಟು ಏಳು ಮಾತೃ ದೇವತೆಗಳ ಗುಂಪನ್ನು ಪರಿಚಯಿಸಲಾಗಿದೆ. ಸಿದ್ದರಬೆಟ್ಟದ ಅಸ್ಮಿತೆ ಮತ್ತು…

Read More

ತುಮಕೂರು:  ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ಚಟುವಟಿಕೆ ಹಾಗೂ ಪರೀಕ್ಷಾ  ಕೊಠಡಿಯ ಸಮೀಪ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ತುಮಕೂರು ನಗರದಲ್ಲಿ ವಿಶ್ವ ಹಿಂದೂ ಪರಿಷತ್  ಹಾಗೂ ಬಜರಂಗದಳದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ನಗರದ ಟೌನ್ ಹಾಲ್ ವೃತ್ತದಿಂದ ಹೊರಟ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ವರೆಗೂ ಮೆರವಣಿಗೆ ನಡೆಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜ್ಯೋತಿ ಗಣೇಶ್,  ಸಿಇಟಿ ಪರೀಕ್ಷಾ ಬರೆಯಲು ಹೋಗಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿರುವುದು ಹಿಂದೂ ಸಂಪ್ರದಾಯಕ್ಕೆ ಮಾಡಿದ ಅಪಮಾನವಾಗಿದೆ. ಇದನ್ನು ಎಲ್ಲಾ ಹಿಂದೂಗಳು ತೀವ್ರವಾಗಿ ಖಂಡಿಸಬೇಕಿದೆ ಎಂದು ಕರೆ ನೀಡಿದರಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇನ್ನೊಂದೆಡೆ ಭಯೋತ್ಪಾದಕರು ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ತಕ್ಷಣ ಕೇಂದ್ರ ಸರ್ಕಾರ ಭಯೋತ್ಪಾದಕರ ಚಟುವಟಿಕೆಯನ್ನು ಮಟ್ಟ ಹಾಕಬೇಕೆಂದು ಮನವಿ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ತುಮಕೂರು:  ಕೈಮಗ್ಗ ಮತ್ತು ಜವಳಿ ಇಲಾಖೆಯು ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಕೈಮಗ್ಗ ನೇಯುವ ಚಟುವಟಿಕೆಗಳಿಗಾಗಿ ರಾಷ್ಟಿçÃಕೃತ ಬ್ಯಾಂಕುಗಳಿಂದ 50,000 ರೂ.ಗಳಿಂದ 2ಲಕ್ಷ ರೂ.ಗಳವರೆಗೆ ಆರ್ಥಿಕ ಸಾಲ ಸೌಲಭ್ಯ ನೀಡಲಾಗುವುದು. ಆಸಕ್ತ ಕೈಮಗ್ಗ ನೇಕಾರರು ನಿಗಧಿತ ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, 5ನೇ ಮುಖ್ಯರಸ್ತೆ, ಸಿದ್ದಗಂಗಾ ಬಡಾವಣೆ, ತುಮಕೂರು ಇವರ ಕಚೇರಿ ಅಥವಾ ದೂರವಾಣಿ ಸಂಖ್ಯೆ: 0816-2275370 ಅಥವಾ 9980208292ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ವಿದ್ಯುತ್ ಸ್ಪರ್ಶಿಸಿ ಗೆ 9 ವರ್ಷದ ಬಾಲಕ‌ ಬಲಿಯಾಗಿರುವ ಘಟನೆ ತುಮಕೂರು‌ ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸೋಮನಹಳ್ಳಿಯಲ್ಲಿ ನಡೆದಿದೆ. ಮಹೇಶ್ ಎಂಬುವರ ಪುತ್ರ ಕುಶಾಲ್ (9) ಮೃತ ಬಾಲಕನಾಗಿದ್ದಾನೆ. ಹಳೆಯ ತಂತಿಗಳನ್ನ ಬದಲಾಯಿಸದೆ ಇರುವುದೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಸ್ಕಾಂ ಅಧಿಕಾರಿಗಳ‌ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಮಗನನ್ನು‌ ಕಳೆದುಕೊಂಡ ತಂದೆ ತಾಯಿಗಳ‌ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕನಾಯಕನಹಳ್ಳಿ ‌ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ  ಶಾಸಕ  ಸುರೇಶ್ ಬಾಬು  ಭೇಟಿ ನೀಡಿ ಸಾಂತ್ವನ ಹೇಳಿದರು.  ಸ್ಥಳದಲ್ಲೇ  ಬೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ  ಸಮಸ್ಯೆ ಬಗ್ಗೆ ತಿಳಿಸುವಂತೆ ಸೂಚನೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More