Author: admin

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್‌ನಿಂದಾಗಿ ಬೆಂಗಳೂರಿನಲ್ಲಿ ಒಂದೇ ಒಂದು ಸಾವು ಸಂಭವಿಸಿಲ್ಲ ಮತ್ತು ಕಳೆದ 24 ಗಂಟೆಗಳಲ್ಲಿ ರಾಜ್ಯದ 28 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.  ವಾಣಿಜ್ಯ ಚಟುವಟಿಕೆಗಳು, ಪಬ್‌ಗಳು, ಬಾರ್‌ ಮತ್ತು ಮನರಂಜನಾ ಕೇಂದ್ರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮವನ್ನು ಕೂಡ ಸರ್ಕಾರ ಹಿಂಪಡೆದಿದೆ. ಹೀಗಾಗಿ ಜನರು ಬೇಸಿಗೆ ರಜೆಯನ್ನು ಯಾವುದೇ ಭಯವಿಲ್ಲದೆ ಕಳೆಯಬಹುದಾಗಿದೆ.  ಕೋವಿಡ್ ಮೂರನೇ ಅಲೆ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಕಳೆದ ಶುಕ್ರವಾರ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಅಲ್ಲದೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ 49 ಕೋವಿಡ್ ಪ್ರಕರಣಗಳು ಮಾತ್ರ ವರದಿಯಾಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಶಿವಮೊಗ್ಗ: ಇಲ್ಲಿನ ಕೆಎಸ್‌ ಆರ್‌ ಟಿಸಿ ಬಸ್‌ ನಿಲ್ದಾಣದ ಬಳಿ ಶನಿವಾರ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕುಶನ್‌ ಚಂದು (29) ಕೊಲೆಯಾದವರು. ಕುಶನ್‌ ಚಂದು ಹಾಗೂ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ಪರಶುರಾಮ ಮಧ್ಯೆ ಕೆಲ ವಿಚಾರಗಳಿಗೆ ದ್ವೇಷ ಬೆಳೆದಿತ್ತು. ಇದೇ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ರಂಜಾನ್ ತಿಂಗಳಲ್ಲಿ ಸಂಜೆ ಇಫ್ತಿಯಾರ್ ಸಮಯದಲ್ಲಿ ಎಲ್ಲ ಜನಾಂಗದವರು ಮಸೀದಿಯ ಮುಂದೆ ಅಂಗಡಿ-ಮುಂಗಟ್ಟುಗಳನ್ನು ಇಟ್ಟು  ವ್ಯಾಪಾರ ಮಾಡುತ್ತಾರೆ. ಅವರಿಗೆಲ್ಲರಿಗೂ ಮಸೀದಿಯ ಮುಂದೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ತಾಜುದ್ದೀನ್ ಶರೀಫ್ ಮನವಿ ಮಾಡಿದ್ದಾರೆ. ಈ ಸಂದೇಶ ನೀಡುವುದೆಂದರೆ ಪ್ರವಾದಿ ಮೊಹಮ್ಮದ್ ರವರು ಹೇಳುವುದೇನೆಂದರೆ ದ್ವೇಷದ ಉತ್ತರ ದ್ವೇಷದಿಂದಲ್ಲ ಪ್ರೀತಿಯಿಂದ ನೀಡಬೇಕು ಎಂದು ಹೇಳಿದ್ದಾರೆ.  ನಾವು ಎಲ್ಲ ಜನಾಂಗದವರಿಗೂ ಮಸೀದಿ ಹಾಗೂ ದರ್ಗಾ ಮುಂದೆ ವ್ಯಾಪಾರ ಮಾಡುತ್ತಿದ್ದಾರೆ ಅದೇ ರೀತಿ ವ್ಯಾಪಾರ ಮುಂಗಟ್ಟುಗಳು ನಡೆಸಿಕೊಂಡು ಹೋಗಬೇಕು ಎಂದು ಎಲ್ಲರೂ ಇದಕ್ಕೆ ಸ್ವಾಗತ ಮಾಡಿದ್ದಾರೆ. ಯಾವುದೇ ರೀತಿಯ ಅಡಚಣೆ ಉಂಟು ಮಾಡಬಾರದು ಎಂದು ನಮ್ಮ ಮುಸ್ಲಿಂ ಸಮುದಾಯ ಹಾಗೂ ಮುಸ್ಲಿಂ ಯುವಕರಲ್ಲಿ ಮತ್ತು ಪ್ರೆಸಿಡೆಂಟ್ ಸೆಕ್ರೆಟರಿ ಯವರಲ್ಲಿ ಮನವಿ ಮಾಡಿದ್ದೇವೆ ಎಂದರು.  ಜಾಮಿಯಾ ಮಸೀದಿಯ ಮುಫ್ತಿ ಅಂಸರಿ ಸಾಬ್ ರವರು ಈ ಸಂದೇಶವನ್ನು ನೀಡುತ್ತಾರೆ ಎಂದರು.  ವರದಿ: ಎ.ಎನ್. ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು: ಯುಗಾದಿ ಸಿಹಿ-ಕಹಿಗಳ ಹಬ್ಬ, ಆದರೆ ಬಿಜೆಪಿ ಸರ್ಕಾರ ಜನರಿಗೆ ಬರೀ ಕಹಿಯನ್ನೇ ನೀಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಬಿಜೆಪಿಯನ್ನು ತರಾಟೆಗೆತ್ತಿಕೊಂಡಿದ್ದಾರೆ. ಕೇಂದ್ರ ರಸಗೊಬ್ಬರ ಬೆಲೆಯನ್ನು ಎದ್ವಾತದ್ವಾ ಏರಿಕೆ ಮಾಡಿದೆ. ಬಿಜೆಪಿಯವರು ವೈಫಲ್ಯಗಳನ್ನು ಮುಚ್ಚಿ ಹಾಕಲು ಹಿಜಾಬ್, ಕಾಶ್ಮೀರಿ ಫೈಲ್ಸ್, ಹಲಾಲ್, ಮುಸ್ಲಿಂ ವರ್ತಕರಿಗೆ ವ್ಯಾಪಾರ ನಿರ್ಬಂಧದಂತಹ ವಿಷಯಗಳನ್ನು ಮುಂದಿಟ್ಟುಕೊಂಡು ಸಮಾಜದ ಸಾಮರಸ್ಯ ಹಾಳು ಮಾಡುತ್ತಿದ್ದಾರೆ ಎಂದು  ಹೇಳಿದರು. ನಮ್ಮಲ್ಲೂ ಹಬ್ಬಗಳಲ್ಲಿ ಕುರಿ ಕಡಿದಾಗ ರಕ್ತ ಹೊರ ಹೋಗಲು ಬಿಡಲ್ವ? ಹಲಾಲ್ ಸಾವಿರಾರು ವರ್ಷಗಳಿಂದ ನಡೆದು ಬಂದ ಪದ್ಧತಿ, ಅವರ ಪದ್ಧತಿ ಅವರು ಅನುಸರಿಸಲಿ, ನಮ್ಮ ಪದ್ಧತಿ ನಾವು ಅನುಸರಿಸೋಣ. ಮನುಷ್ಯನ ಬದುಕಿಗೆ, ಜೀವನ ನಿರ್ವಹಣೆಗೆ ಸಂಬಂಧವಿಲ್ಲದ ವಿಷಯಗಳನ್ನು ಎತ್ತಿ ಸಮಾಜದ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಇದರಿಂದ ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗಿ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತದೆ. ಇದನ್ನು ಸದನದಲ್ಲೂ ಪ್ರಸ್ತಾಪ ಮಾಡಿದ್ದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಹುಬ್ಬಳ್ಳಿ: ಮುಂಬರುವ ವಿಧಾನ‌ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಎಲ್ಲ ಮುಖಂಡರೊಂದಿಗೆ ಮಾತುಕತೆ ನಡೆದಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಹಾಗೂ ಜೆಡಿಎಸ್ ಮುಖಂಡ ಎಚ್​.ಡಿ. ಕುಮಾರಸ್ವಾಮಿ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.  ಚುನಾವಣೆ ಘೋಷಣೆಯಾದ ಕೂಡಲೇ ಬಿಜೆಪಿಗೆ ಸೇರ್ಪಡೆ ಆಗುವುದು ನಿರ್ಧಾರವಾಗಲಿದೆ ಎಂದೂ ಅವರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದಾವಣಗೆರೆ: ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ  ಶಾಸಕ ರೇಣುಕಾಚಾರ್ಯ ಹಾಗೂ ಅವರ ಸಹೋದರ ಸೇರಿದಂತೆ   11 ಮಂದಿಯ ವಿರುದ್ಧ ಕೆಟಿಜೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.  ಎಂ.ಪಿ ರೇಣುಕಾಚಾರ್ಯ ಅವರ ಸಹೋದರ ದ್ವಾರಕೇಶ್ವರಯ್ಯ ಸೇರಿದಂತೆ 11 ಮಂದಿಯ ವಿರುದ್ಧ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪದಡಿ, ದಲಿತ ಮುಖಂಡ ಹೆಗ್ಗೆರೆ ರಂಗಪ್ಪ ದಾವಣಗೆರೆಯ ಕೆಟಿಜೆ ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಐಪಿಸಿ ಸೆಕ್ಷನ್ 143, 147, 504, 506 ಮತ್ತು 149 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಂ.ಪಿ ರೇಣುಕಾಚಾರ್ಯ ಅವರ ಸಹೋದರ ದ್ವಾರಕೇಶ್ವರಯ್ಯ ಅವರು, ಬೇಡ ಜಂಗಮ ಎಂದು ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು : ಟೌನ್ ಹಾಲ್ ಸರ್ಕಲ್ ನಲ್ಲಿ ಎಲ್ಲಾ ಸಮುದಾಯದ ಮುಖಂಡರು ಮತ್ತು ಪ್ರಗತಿಪರ ಚಿಂತಕರು ಸೇರಿ ಬೇವು ಬೆಲ್ಲ ಹಾಗೂ ಒಬ್ಬಟ್ಟನ್ನು ತಿಂದು ಪರಸ್ಪರ ಸಾಮರಸ್ಯವನ್ನು ಸಾರಿದರು. ಈ ನಡುವೆ ರಾಜ್ಯದಲ್ಲಿ ಜಾತ್ರೆ ಮುಂಗಟ್ಟುಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಕೆಲವು ಕಿಡಿಗೇಡಿಗಳು ನಿರ್ಬಂಧ ಹೇರಿರುವುದು ಮತ್ತು ಹಲಾಲ್ ಕಟ್, ಜಟ್ಕಾ ಕಟ್ ಹೆಸರಿನಲ್ಲಿ ದ್ವೇಷ ವನ್ನು ಹರಡಿಸುತ್ತ  ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದಕ್ಕೆ ಖಂಡನೆ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸ್ಲಂ ಜನಾಂದೋಲನದ ರಾಜ್ಯ ಅಧ್ಯಕ್ಷರಾದ ನರಸಿಂಹಮೂರ್ತಿ,  ಜನರನ್ನು ಭಾವೋದ್ವೇಗಕ್ಕೆ ಒಳ ಪಡಿಸುವ ಕೆಲಸವನ್ನು ಸರ್ಕಾರಿ ಪ್ರಾಯೋಜಕತ್ವದಲ್ಲಿ  ಮಾಡುತ್ತಿದ್ದಾರೆ.  ಸರ್ಕಾರ ಸಂಘಪರಿವಾರಕ್ಕೆ ಬೆಂಬಲವಾಗಿ ನಿಂತಿದೆ ಎಂದರು. ಡಾ. ಅರುಂಧತಿ ಮಾತನಾಡಿ, ನಮ್ಮ ಸುತ್ತಮುತ್ತ ನಡೆಯುತ್ತಿರುವ ಸಂಗತಿಗಳನ್ನು ನೋಡಿ ನಾಚಿಕೆಯಾಗುತ್ತಿದೆ. ನಮ್ಮ ದೇಶದ ಧರ್ಮ ಆಚರಣೆಗಳನ್ನು ನಮ್ಮ ಮನೆಗಳಲ್ಲಿ ಸೀಮಿತ ಮಾಡಿಕೊಳ್ಳಬೇಕು. ಧರ್ಮಗಳು ಮನುಷ್ಯನಿಗೆ ಬೇಕು ಆಚರಣೆಗಳು ಬೇಕು ನಮ್ಮ ಧರ್ಮದ ಆಚರಣೆಗಳು ನಮ್ಮ ಮನೆಯ ಒಳಗೆ ಇದ್ದರೆ ತುಂಬಾ ಒಳ್ಳೆಯದು…

Read More

ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ 12 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಶನಿವಾರ ತಡರಾತ್ರಿ ಬಂಧಿಸಿದ್ದು, ಸಮುದ್ರದ ಗಡಿ ಉಲಂಘನೆ ಆರೋಪದಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ತಮಿಳುನಾಡು ಮೀನುಗಾರಿಕೆ ಇಲಾಖೆ ಅಧಿಕಾರಿ ಈ ಮಾಹಿತಿ ನೀಡಿದ್ದಾರೆ. ರಾಮನಾಥಪುರಂ ಸಂಸದ ಕೆ.ನವಾಸ್ ಕಣಿ ಅವರು ಈ ವಿಷಯವನ್ನು ವಿದೇಶಾಂಗ ಸಚಿವಾಲಯ ಗಮನಕ್ಕೆ ತಂದು ಲಂಕಾ ದೌರ್ಜನ್ಯ ತಡೆಯಿರಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾರ್ಚ್ 29 ರಿಂದ ಲಂಕಾ ನೌಕಾಪಡೆಯು ಸಮುದ್ರ ಗಡಿ ಉಲ್ಲಂಘನೆಯ ಆರೋಪದ ಮೇಲೆ ಭಾರತೀಯ ಮೀನುಗಾರರನ್ನು ಮೂರನೇ ಬಾರಿಗೆ ಬಂಧಿಸಲಾಗುತ್ತಿದೆ. ಮಂಗಳವಾರ ಮತ್ತು ಗುರುವಾರ ಒಟ್ಟು ಏಳು ಮೀನುಗಾರರನ್ನು ಬಂಧಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು:  ರಾಜ್ಯದಲ್ಲಿ ಹಲಾಲ್ ಕಟ್ ಜಟ್ಕಾ ಕಟ್ ವಿವಾದ ನಡೆಯುತ್ತಿದ್ದರೆ, ಇತ್ತ ಹೊಸ ತೊಡಕಿಗೆ ಜನರು ಗುಡ್ಡೆ ಮಾಂಸ ಖರೀದಿಗೆ ಮುಗಿ ಬಿದ್ದಿದ್ದು, ಹೊಸ ತೊಡಕಿನ ದಿನ ಹಲಾಲ್ ಕಟ್ ವಿವಾದ ಪರಿಣಾಮ ಬೀರಲಿಲ್ಲ.  ನಗರದಲ್ಲಿ ಹಿಂದೂ ಮುಸ್ಲಿಂ ಎನ್ನುವ ಬೇಧವಿಲ್ಲದೆ, ಮಾಂಸ ಖರೀದಿಗೆ ಮುಗಿಬಿದ್ದಿದ್ದರು. ಜಗನ್ನಾಥರ, ಸಿರಾಗೇಟ್ ಸೇರಿದಂತೆ ವಿವಿಧೆಡೆ ದೊರೆಯುವ ಗುಡ್ಡೆ ಮಾಂಸ ಖರೀದಿಗೆ ಗ್ರಾಹಕರು ಹೆಚ್ಚಿನ ಒತ್ತು ನೀಡಿರುವುದು ಕಂಡು ಬಂದಿದೆ.  ನಗರದಲ್ಲಿ 700 ರೂಪಾಯಿಗೆ ಉತ್ತಮ ಗುಣಮಟ್ಟದ ಗುಡ್ಡೆ ಮಾಂಸ ಸಿಗುತ್ತಿದ್ದು, ಗ್ರಾಹಕರು ಧಾರ್ಮಿಕ ಭೇದ ಭಾವಗಳಿಲ್ಲದೇ ಮುಂಜಾನೆಯಿಂದಲೇ ಮಾಂಸ ಖರೀದಿಗೆ ಮುಗಿ ಬಿದ್ದರು.  ಕಳೆದೆರಡು ವರ್ಷಗಳಿಂದ ಕೊವಿಡ್ ನಿಂದಾಗಿ ಹಬ್ಬದ ಸಂಭ್ರಮ ಕಳೆಗುಂದಿತ್ತು. ಈ ಬಾರಿ ಯುಗಾದಿ ಆರಂಭದಲ್ಲಿಯೇ ಜಟ್ಕಾ ಕಟ್ ವಿವಾದ, ವ್ಯಾಪಾರಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಆದರೆ, ಜಟ್ಕಾ ಮತ್ತು ಹಲಾಲ್ ಕಟ್ ವಿವಾದ ಯಾವುದೇ ಪರಿಣಾಮ ಬೀರಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಬೆಂಗಳೂರು: ಫ್ಯಾಕ್ಟರಿಯಲ್ಲಿ ಯಂತ್ರಕ್ಕೆ ಸಿಲುಕಿ ಯುವತಿ ದಾರುಣವಾಗಿ ಸಾನ್ನಪ್ಪಿದ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ನಾಯಂಡಹಳ್ಳಿ ಸಮೀಪವಿರುವ ಝಡ್.ಎಸ್. ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದ್ದು, ಮಾಲಿಕನ ಬೇಜವಾಬ್ದಾರಿಯಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. 28 ವರ್ಷ ವಯಸ್ಸಿನ ಶಾಜಿಯಾ ಎಂಬವರು ಮೃತಪಟ್ಟ ಯುವತಿಯಾಗಿದ್ದು,  ಘಟನೆ ಸಂಬಂಧ ಮಾಲೀಕ ಜೀಶಾಮ್ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More