Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಚಾಮುಂಡಿ ಬೆಟ್ಟದಲ್ಲಿ ಇಂದು ಚಾಮುಂಡೇಶ್ವರಿ ದೇವಿಯ ದಿವ್ಯ ರಥೋತ್ಸವ ಸಂಭ‍್ರಮದಿಂದ ನಡೆದಿದ್ದು ಆಶ್ವಯುಜ ಶುಕ್ಲ ಪೂರ್ಣಮಿ ಉತ್ತರ ಭಾದ್ರ ನಕ್ಷತ್ರ ಬೆಳಗ್ಗೆ 7.50 ರಿಂದ 8.10 ರ ಒಳಗೆ ಸಲ್ಲುವ ಶುಭ ಮಹೂರ್ತದಲ್ಲಿ ರಥಾರೋಹಣ ಮಂಟಪೋತ್ಸವ ನಡೆಯಿತು. ಸಾವಿರಾರು ಭಕ್ತರು ಪಾಲ್ಗೊಂಡು ದೇವಿ ದರ್ಶನ ಪಡೆದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಎಸ್.ಎ.ರಾಮದಾಸ್ ಇತರರು ಭಾಗವಹಿಸಿದ್ದರು. ಇನ್ನು ಧಾರ್ಮಿಕ ದತ್ತಿ ಇಲಾಖೆ ಹಾಗೂ ಚಾಮುಂಡೇಶ್ವರಿ ದೇವಸ್ಥಾನದ ವತಿಯಿಂದ ಈ ಸಾಲಿನಲ್ಲಿ ಅ. 8 ರಿಂದ 14 ರವರೆಗೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಮಹಾ ರಥೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಭಾಗವಾಗಿ ಶನಿವಾರ ದೇವಿಯ ದೇವಾ ಲಯದಲ್ಲಿ ಬೆಳಗ್ಗೆಯಿಂದಲೇ ಆಶ್ವಯುಜ ಶುಕ್ಲ ಚತುರ್ದಶಿ ಪೂರ್ವಭಾದ್ರ ನಕ್ಷತ್ರ, ಕಳಶಾರೋಹಣದ, ಗಜಾರೋಹಣ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮ ನಡೆದಿದ್ದವು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮರೆಯಲಾಗಿದೆ. ಮೈಸೂರಿನ ಮುನೇಶ್ವರ ನಗರದ ನಿವಾಸಿ ಮದನ್ ಕುಮಾರ್(೨೫) ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿತ್ತು. ಅವರ ಕುಟುಂಬದವರ ಒಪ್ಪಿಗೆ ಮೇರೆಗೆ ಪಡೆದ ಹೃದಯ, ಶ್ವಾಸಕೋಶಗಳು, ೨ ಮೂತ್ರಪಿಂಡಗಳು, ಯಕೃತ್ತು ಮತ್ತು ಕಾರ್ನಿಯಾಗಳಿಂದ 9 ಮಂದಿಯ ಜೀವವನ್ನು ಆಸ್ಪತ್ರೆಯ ವೈದ್ಯರು ಉಳಿಸಿದ್ದಾರೆ. ಅ.5 ರಂದು ಸಿದ್ದಾರ್ಥ ಬಡಾವಣೆಯಲ್ಲಿ ರಸ್ತೆ ಅಪಘಾತದಿಂದ ಗಾಯಗೊಂಡು ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದ ಮದನ್ ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಅಪೋಲೊ ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಮದನ್ ಕುಮಾರ್‌ನನ್ನು ಎರಡು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಮೆದುಳು ನಿಷ್ಕ್ರಿಯವಾಗಿರುವುದನ್ನು ಗಮನಿಸಿದ ಆಸ್ಪತ್ರೆ ವೈದ್ಯರು, ಬ್ರೈನ್ ಡೆಡ್ ಎಂದು ಘೋಷಿಸಿದ್ದರು. ಅಂಗಾಂಗದ ದಾನದ ಬಗ್ಗೆ ಮದನ್ ಪತ್ನಿಗೆ ಮಾಹಿತಿ ನೀಡಿ ಅವರ ಒಪ್ಪಿಗೆ ನೀಡಿದ ಬಳಿಕ ಒಂಬತ್ತು ರೋಗಿಗಳಿಗೆ ಅಂಗಾಂಗವನ್ನು ರವಾನಿಸಿ ಅಳವಡಿಸಲಾಗಿದೆ. ನಮ್ಮತುಮಕೂರು.ಕಾಂನ…
ತುಮಕೂರು : ನಗರದಲ್ಲಿ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಯಾರು ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಚುನಾವಣೆ ನಂತರವೇ ಸಿಎಂ ಯಾರೆಂದು ನಿರ್ಧರಿಸಲಾಗುತ್ತದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಭಾರತ್ ಜೋಡೋ ಪಾದಯಾತ್ರೆ ನಡೆಯುತ್ತಿದ್ದು, ಈ ವೇಳೆ ಮುಂದಿನ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ವಿಚಾರದ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಸದ್ಯಕ್ಕೆ ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಎದುರೇ ಹೇಳಿದರು. ಈ ಮೂಲಕ ಮುಂದಿನ ಮುಖ್ಯಮಂತ್ರಿ ಯಾರೆಂಬ ವಿವಾದಕ್ಕೆ ತೆರೆಬಿದ್ದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ನಗರದಲ್ಲಿ ಅರಣ್ಯ ಇಲಾಖೆ ವತಿಯಿಂದ 68ನೇ ರಾಷ್ಟ್ರೀಯ ವನ್ಯಜೀವಿ ಸಪ್ತಾಹ ನಿಮಿತವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಚವ್ಹಾಣ್ ಅವರು ಸೈಕಲಿಂಗ್ ಸ್ಪರ್ಧೆಗೆ ಚಾಲನೆ ನೀಡಿದರು. ಬೆಳಗಾವಿ ಅರಣ್ಯ ವೃತ್ತದಿಂದ ರಾಣಿ ಚೆನ್ನಮ್ಮ ವನ್ಯಜೀವಿ ಬುತರಾಮನಹಟ್ಟಿ ಉದ್ಯಾನದದಿಂದ 14 ಕಿಲೋ ಮೀಟರ್ ಸೈಕಲ್ ಮೂಲಕ ಸಂಚಾರಿಸಿ ವನ್ಯಜೀವಿ ಸಂರಕ್ಷಣೆ ಮತ್ತು ವನ್ಯಜೀವಿಯ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ 12 ವರ್ಷದ ಮಕ್ಕಳಿಂದ 60 ವರ್ಷದ ವೃದ್ಧರದವರೆಗೂ ಸೈಕ್ಲಿಂಗ್ ನಲ್ಲಿ ಭಾಗವಹಿಸಿದ್ದರು. ಸುಮಾರು 65 ಜನ ಈ ಸ್ಪರ್ಧೆಯಲ್ಲಿದ್ದರು. ಆರ್ ಎಫ್ ಓ ಶ್ರೀನಾಥ್ ಕಡೋಲ್ಕರ , ಪ್ರಕಾಶ್ ಸುನಿವಾಗಲೇಕರ್, ಸಂಜು ದೇಶಪಾಂಡೆ, ಇನಾಮ್ದಾರ್ ರಾಜು ನಾಯಕ್ ಇತರರು ಸ್ಪರ್ಧೆಯಲ್ಲಿ ಭಾಗವಹಿಸಿ ವನ್ಯಜೀವಿ ಸಂರಕ್ಷಣೆ ಮತ್ತು ವನ್ಯಜೀವಿಯ ಜನಜಾಗೃತಿ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ್ ಕಲ್ಲೋಳ್ಕರ್, ಸಹಾಯಕ ಸಂರಕ್ಷಣಾಧಿಕಾರಿ ಬೆಳಗಾವಿ ಉಪ ವಿಭಾಗ ಎಂ.ಬಿ.…
ವಿಜಯಪುರ: ಯಡಿಯೂರಪ್ಪ ರಾಜ್ಯಪ್ರವಾಸ ಮಾಡಿ 180 ಸೀಟು ಗೆದ್ದುಕೊಡುವುದಾದರೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಲೇವಡಿ ಮಾಡುವುದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮುಂದುವರಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಯಡಿಯೂರಪ್ಪ ರಾಜ್ಯಪ್ರವಾಸ ಮಾಡಿ 180 ಸೀಟು ಗೆದ್ದುಕೊಡುವುದಾದರೆ ಮಾಡಲಿ, ತನಗೇನೂ ಅಭ್ಯಂತರವಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಭಾರತ ಜೋಡೋ ಯಾತ್ರೆ ಬಗ್ಗೆ ಕೇಳಿದಾಗ ಯತ್ನಾಳ್, ಪ್ರಧಾನ ಮಂತ್ರಿ ಮೋದಿಯವರು ಭ್ರಷ್ಟರನ್ನು ಬೀದಿಗೆ ತರುತ್ತೇನೆ ಅಂತ ಹೇಳಿದ್ದರು, ಅದರ ಫಲಶೃತಿಯಾಗಿಯೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮೊದಲಾದವರೆಲ್ಲ ರೋಡಿಗೆ ಬಂದಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕೈಲಾಸ ಎಂಬ ಪ್ರತ್ಯೇಕ ನಾಡನ್ನು ನಿರ್ಮಿಸಿ ತನ್ನದೇ ಆದ ರಾಷ್ಟ್ರಧ್ವಜ, ಕರೆನ್ಸಿ, ಪಾಸ್ ಪೋರ್ಟ್ ವ್ಯವಸ್ಥೆ ಇತ್ಯಾದಿಗಳನ್ನು ರೂಪಿಸಿದ ಬಿಡದಿ ಸ್ವಾಮಿ ನಿತ್ಯಾನಂದ ಈಗ ಜಗತ್ತಿನ ಎಲ್ಲ ಗರ್ಭಿಣಿಯರಿಗೆ ಬರುವಂತೆ ಸಲಹೆ ನೀಡಿದ್ದಾನೆ. ವೀಡಿಯೋ ಕ್ಲಿಪ್‌ನ ಆರಂಭದಲ್ಲಿ, ಕೈಲಾಸದಲ್ಲಿ ಶೀಘ್ರದಲ್ಲೇ ಶಾಶ್ವತ ಕಾಸ್ಮಿಕ್ ವಿಮಾನ ನಿಲ್ದಾಣ ಮತ್ತು ಇಡೀ ವಿಶ್ವಕ್ಕೆ ಮೀಸಲಾದ ಹೆರಿಗೆ ಆಸ್ಪತ್ರೆಯನ್ನು ನಿರ್ಮಿಸಲಾಗುವುದು ಎಂದು ಹೇಳಿದ್ದಾನೆ. ಇಲ್ಲಿ ಹುಟ್ಟುವ ಪ್ರತಿ ಮಗುವಿಗೆ ಪ್ರೌಢ ಅಲೌಕಿಕ ಪ್ರಕಾಶಮಾನವಾದ ಶಕ್ತಿಯ ಡಿಎನ್‌ಎ ಅಳವಡಿಸಲಾಗಿದೆ. ಇದರ ಜೊತೆಗೆ, ಬ್ರಹ್ಮನಿಗೆ ಆನುವಂಶಿಕ ಸಂಕೇತವನ್ನು ನೀಡಲಾಗುತ್ತದೆ ಅಂತ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಪಠ್ಯ ಬೋಧನೆಯಿಂದ ಭಗತ್ ಸಿಂಗ್ ಕುರಿತಾದ ಪಠ್ಯಕ್ಕೂ ಕೈಬಿಡಲಾಗಿದೆ. ಸದ್ಯ ಭಗತ್ ಸಿಂಗ್ ಪಾಠವನ್ನೂ ಪಠ್ಯ ಭೋದನೆಯಿಂದ ಕೈಬಿಟ್ಟಿರುವುದು ವಿರೊಧಕ್ಕೆ ಕಾರಣವಾಗುತ್ತಿದೆ. ಶಿಕ್ಷಣ ಇಲಾಖೆ ಭಗತ್ ಸಿಂಗ್ ಪಾಠವನ್ನ ಭೋದನೆಯಿಂದ ಕೈಬಿಟ್ಟಿರೊದಕ್ಕೆ ಲೇಖಕರು ಹಾಗೂ ವಿದ್ಯಾರ್ಥಿಗಳ ಸಂಘಟನೆಗಳು ವಿರೋಧ ಹೊರ ಹಾಕುತ್ತಿವೆ. ಪಠ್ಯ ಪರಿಷ್ಕರಣೆ ವೇಳೆಯೇ ಭಗತ್ ಸಿಂಗ್ ಪಾಠ ಕೈಬಿಟ್ಟು ವಿರೋಧಕ್ಕೆ ಶಿಕ್ಷಣ ಇಲಾಖೆ ಗುರಿಯಾಗಿತ್ತು. ವ್ಯಾಪಕ ವಿರೋಧದ ಬಳಿಕ ಪಾಠ ಕೈಬಿಟ್ಟಿಲ್ಲ ಅಂತಾ ನಾಟಕವಾಡಿತ್ತು. ಆದ್ರೆ ಈಗ ಲೇಖಕರು ವಿರೋಧ ಮಾಡಿದ್ದಾರೆ. ಅನ್ನೋ ಕಾರಣ ಮುಂದಿಟ್ಟು ಎಸ್ಎಸ್ಎಲ್ ಸಿ ಕನ್ನಡ ಪಠ್ಯ ಪುಸ್ತಕದಲ್ಲಿ ಮುದ್ರಣವಾಗೀರೊ ಭಗತ್ ಸಿಂಗ್ ಪಾಠವನ್ನ ಭೋದನೆಯಿಂದ ಕೈಬಿಟ್ಟಿದೆ. ಮಕ್ಕಳಿಗೆ ಭಗತ್ ಸಿಂಗ್ ಪಾಠ ಮಾಡದಂತೆ ಸುತ್ತೋಲೆ ಹೊರಡಿಸಿದೆ. ಶಿಕ್ಷಣ ಇಲಾಖೆಯ ಈ ನಡೆಗೆ ವ್ಯಾಪಕ ವಿರೋಧ ಕೇಳಿ ಬರುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ದಿಢೀರ್ ಭೇಟಿ ನೀಡಿ ಆಸ್ಪತ್ರೆಯೆ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿದರು. ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿದ ನ್ಯಾ.ಬಿ.ವೀರಪ್ಪ ಅವರು, ರೋಗಿಗಳು ಸಿಬ್ಬಂದಿಗಳ ಜೊತೆ ಚರ್ಚೆ ನಡೆಸಿದರು. ಆಸ್ಪತ್ರೆಯಲ್ಲಿನ ಸೌಲಭ್ಯ, ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದರು. ಈ ನಡುವೆ ಬಹುತೇಕ ವೈದ್ಯರು ರಜೆ ಹಾಕಿದ್ದ ಹಿನ್ನೆಲೆ ನ್ಯಾ.ಬಿ.ವೀರಪ್ಪ ಗರಂ ಆದರು. ಚರ್ಮ ವಿಭಾಗದಲ್ಲಿ 6 ವೈದ್ಯರ ಪೈಕಿ 5 ವೈದ್ಯರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ತರಾಟೆ ತೆಗೆದುಕೊಂಡ ನ್ಯಾ.ಬಿ.ವೀರಪ್ಪ, ಮೇಜರ್ ಆದ್ರೆ ಒಬ್ಬರು ಹೇಗೆ ಕೆಲಸ ಮಾಡುತ್ತೀರಿ ಎಂದು ವೈದ್ಯೆಗೆ ಪ್ರಶ್ನಿಸಿದರು. ಜಡ್ಜ್ ಪ್ರಶ್ನೆಗೆ ವೈದ್ಯೆ ಉತ್ತರ ನೀಡಲು ತಡಬಡಾಯಿಸಿದ ಘಟನೆ ನಡೆಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ರಾಜ್ಯದಲ್ಲಿ 7ನೇ ದಿನಕ್ಕೆ ಕಾಲಿಟ್ಟಿದೆ. ತುಮಕೂರಿನ ತುರುವೆಕೆರೆಯ ಮಾಯಸಂದ್ರದಿಂದ ಇಂದು ಭಾರತ್ ಜೋಡೋ ಪಾದಯಾತ್ರೆ ಪ್ರಾರಂಭವಾಗಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ರಾಜ್ಯದ ನಾಯಕರು ಕಾರ್ಯಕರ್ತರು ಹೆಜ್ಜೆ ಹಾಕಿದ್ದಾರೆ. ರಾಹುಲ್ ಗಾಂಧಿ ಜೊತೆ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್, ಕೆಸಿ ವೇಣುಗೋಪಾಲ್, ಶ್ರೀನಿವಾಸ್, ರಾಜಣ್ಣ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸೇರಿದಂತೆ ಹಲವರು ಹೆಜ್ಜೆ ಹಾಕುತ್ತಿದ್ದಾರೆ.ಪಾದಯಾತ್ರೆ ನಡುವೆ ಗಣೇಶ ದೇವಸ್ಥಾನದ ಅರ್ಚಕರು ರಾಹುಲ್ ಗಾಂಧಿಗೆ ತಿಲಕವಿಟ್ಟು ಆಶಿರ್ವಾದ ಮಾಡಿದರು. ಭಾರತ್ ಜೋಡೋ ಯಾತ್ರೆಯಲ್ಲಿ ಟಿಕೇಟ್ ಆಕಾಂಕ್ಷಿಗಳು, ಅಸಮಾಧಾನಿತ ನಾಯಕರು ಕೂಡ ಭಾಗಿಯಾಗಿದ್ದಾರೆ. ಪಾದಯಾತ್ರೆಯಲ್ಲಿ ಅಸಮಾಧಾನಿತ ನಾಯಕರು ಸಹ ಭಾಗಿಯಾಗಿದ್ದಾರೆ. ಎಸ್.ಆರ್.ಪಾಟೀಲ್ ನಿನ್ನೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇಂದು ಎಂ.ಆರ್.ಸೀತಾರಾಮ್ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಪಕ್ಷ ತೊರೆಯುವ ಬಗ್ಗೆ ಚರ್ಚಿಸಿದ್ದ ಸೀತಾರಾಮ್, S.R.ಪಾಟೀಲ್ ಪಾದಯಾತ್ರೆಯಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಯಶವಂತಪುರ ವೃತ್ತದಿಂದ ಮಲ್ಲೇಶ್ವರಂನ ಮಾರಮ್ಮನ ಗುಡಿ ಸರ್ಕಲ್ ವರೆಗೆ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಭರದಿಂದ ಸಾಗಿದ್ದು, ನ.1ರೊಳಗೆ ಮುಗಿಸಲು ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ ಎನ್ ಅಶ್ವತ್ ನಾರಾಯಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರ ಬೆಳಿಗ್ಗೆ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ‘ನಗರದ ಅತ್ಯಂತ ವಾಹನದ ದಟ್ಟಣೆಯ ರಸ್ತೆಗಳಲ್ಲಿ ಇದೂ ಒಂದಾಗಿದ್ದು, ಮಾರಮ್ಮ ಸರ್ಕಲ್ ನಿಂದ ಯಶವಂತಪುರ ವೃತ್ತದವರೆಗೆ ಈಗಾಗಲೇ ಒಂದು ಬದಿಯ ವೈಟ್ ಟಾಪಿಂಗ್ ಕಾಮಗಾರಿ ಮುಗಿದು, ಸಾರ್ವಜನಿಕರು ಉಪಯೋಗಿಸುತ್ತಿದ್ದಾರೆ. ಈಗ ಇನ್ನೊಂದು ಬದಿಯಿಂದ ಈ ಕಾಮಗಾರಿ ನಡೆಸಲಾಗುತ್ತಿದೆ’ ಎಂದರು. ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ 36, 37 ಮತ್ತು 41ರಲ್ಲಿ ಕುಡಿಯುವ ನೀರು ಪೂರೈಕೆಗೆ ಹೊಸದಾಗಿ 700 ಮಿಲಿ ಮೀಟರ್ ವ್ಯಾಪ್ತಿಯ ಕೊಳವೆಗಳನ್ನು ಹೊಸದಾಗಿ ಹಾಕಲಾಗುತ್ತಿದೆ. ಹಾಗೆಯೇ, ಬಿಇಎಲ್ ಗೆ ಸಂಪರ್ಕ ಕಲ್ಪಿಸುವ 300 ಮಿಲಿ ಮೀಟರ್ ವ್ಯಾಪ್ತಿಯ ಕೊಳವೆಗಳನ್ನು ಹಾಕಲಾಗುತ್ತಿದೆ. ಈ ಕಾಮಗಾರಿಗಳು ಕೂಡ ಕ್ಷಿಪ್ರಗತಿಯಲ್ಲಿ ಮುಗಿಯಲಿವೆ ಎಂದು ಅವರು ತಿಳಿಸಿದರು. ಕಾಮಗಾರಿ…